2ನೇ ರಾಜ್ಯಭಾಷೆಯಾಗಿ ತುಳು ಘೋಷಣೆಗೆ ಯತ್ನ

ಸುದ್ದಿಗಳು News

Posted by vidyamaana on 2024-07-23 07:07:38 |

Share: | | | | |


2ನೇ ರಾಜ್ಯಭಾಷೆಯಾಗಿ ತುಳು ಘೋಷಣೆಗೆ ಯತ್ನ

ಪುತ್ತೂರು: ರಾಜ್ಯದಲ್ಲಿ ತುಳು ಭಾಷೆಯನ್ನು ೨ನೇ ಅಧಿಕೃತ ರಾಜ್ಯಭಾಷೆಯಾಗಿ ಘೋಷಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡಲಾಗುತ್ತಿದೆ. ಶೀಘ್ರದಲ್ಲೇ ಈ ಪ್ರಯತ್ನ ಕೈಗೂಡುವ ವಿಶ್ವಾಸವಿದೆ ಎಂದು ಶಾಸಕ ಅಶೋಕ್ ರೈ ಹೇಳಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಘಟಕದ ನೇತೃತ್ವದಲ್ಲಿ, ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕ ಮತ್ತು ರೋಟರಿ ಕ್ಲಬ್ ಪುತ್ತೂರು ಯುವ ಇವರ ಸಹಯೋಗದಲ್ಲಿ ಪುತ್ತೂರಿನ ರೋಟರಿ ಮನೀಷಾ ಸಭಾಂಗಣದಲ್ಲಿ ಶನಿವಾರ ನಡೆದ ಪತ್ರಿಕಾ ದಿನಾಚರಣೆ - ಉಪನ್ಯಾಸ- ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪಶ್ಚಿಮ ಬಂಗಾಳ ಸೇರಿದ ಅನೇಕ ರಾಜ್ಯಗಳಲ್ಲಿ ೨ನೇ ರಾಜ್ಯಭಾಷೆ ಘೋಷಣೆ ಸಂದರ್ಭ ಯಾವೆಲ್ಲ ಮಾನದಂಡ ಅನುಸರಿಸಲಾಗಿದೆ ಎಂಬುದರ ಅಧ್ಯಯನ ನಡೆಸಿ ವರದಿ ತಯಾರಿಸಲಾಗಿದೆ. ಇದನ್ನು ಸರಕಾರ ಪರಿಶೀಲಿಸಿ ಶೀಘ್ರದಲ್ಲೇ ತುಳು ಭಾಷೆಯನ್ನು ೨ನೇ ಅಧಿಕೃತ ರಾಜ್ಯಭಾಷೆಯನ್ನಾಗಿ ಘೋಷಣೆ ಮಾಡುವ ಸಂಬAಧ ಸಂಪುಟದಲ್ಲಿ ಚರ್ಚಿಸಿ ನಿರ್ಣಯ ಕೈಗೊಂಡ ಮೇಲೆ ಗೆಜೆಟ್ ನೋಟಿಫೀಕೇಶನ್ ಹೊರಡಿಸಲಾಗುವುದು. ಅದೇ ರೀತಿ ತುಳು ಭಾಷೆಯನ್ನು ಸಂವಿಧಾನದ ೮ನೇ ಪರಿಚ್ಛೇದದಲ್ಲಿ ಸೇರಿಸುವ ವಿಚಾರದಲ್ಲೂ ಕೇಂದ್ರದ ಮೇಲೆ ರಾಜ್ಯದಿಂದ ಒತ್ತಡ ತರುವ ಕೆಲಸ ಮಾಡಲಾಗುತ್ತದೆ. ಪುತ್ತೂರಿನಲ್ಲಿ ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಸರಕಾರದ ಮೇಲೆ ಒತ್ತಡ ಹೇರುತ್ತಿದ್ದೇನೆ. ಮುಂದಿನ ಬಜೆಟ್‌ನಲ್ಲಿ ಘೋಷಣೆಯ ಆಶಾವಾದ ಇದೆ ಎಂದವರು ಹೇಳಿದರು.

ಸೋಷಿಯಲ್ ಮೀಡಿಯಾದ ಅಬ್ಬರದ ನಡುವೆಯೇ ಜನ ಪತ್ರಿಕೆ ಓದುವುದು ಕಡಿಮೆ ಮಾಡಿಲ್ಲ. ಪತ್ರಿಕಾ ರಂಗದಲ್ಲಿ ಪ್ರಾಮಾಣಿಕತೆ ಬೇಕು. ಅದಿರುವ ಕಾರಣವೇ ದಕ್ಷಿಣಕನ್ನಡದ ಪತ್ರಕರ್ತರು ಎಲ್ಲಿ ಹೋದರೂ ಛಾಪು ಮೂಡಿಸುತ್ತಾರೆ ಎಂದು ಹೇಳಿದರು.

ಮಾಜಿ ಶಾಸಕ ಸಂಜೀವ ಮಠಂದೂರು ಮಾತನಾಡಿ, ದೇಶದಲ್ಲಿ ತುರ್ತು ಪರಿಸ್ಥಿತಿಯ ಸಂದರ್ಭ ಅಭಿವ್ಯಕ್ತಿ ಸ್ವಾತಂತ್ರö್ಯ ಮತ್ತು ಪತ್ರಿಕಾ ಸ್ವಾತಂತ್ರö್ಯ ದಮನ ಮಾಡಲಾಗಿತ್ತು. ಆಗ ಧೀಮಂತ ಪತ್ರಿಕೆಗಳು ಭೂಗತರಾಗಿದ್ದುಕೊಂಡೇ ಪತ್ರಿಕೆ ನಡೆಸಿ ಜನಜಾಗೃತಿ ಮೂಡಿಸಿದ್ದರು. ದೇಶ ಕಟ್ಟುವಲ್ಲಿ ಪತ್ರಿಕೆಗಳ ಪಾತ್ರ ಬಹಳಷ್ಟು ದೊಡ್ಡದು. ಸೋಷಿಯಲ್ ಮೀಡಿಯಾದಿಂದ ಉಪಯೋಗವಿದೆಯಾದರೂ ಅಷ್ಟೇ ಕೆಟ್ಟದೂ ಇದೆ ಎಂದರು.


ಪುತ್ತೂರು ಸಹಾಯಕ ಆಯುಕ್ತರಾದ ಜುಬಿನ್ ಮೊಹಾಪಾತ್ರ ಉಪನ್ಯಾಸ ನೀಡಿದರು. ಮಾಧ್ಯಮ ವರದಿ ಇವತ್ತು ಪ್ರತಿಯೊಬ್ಬರ ಕೈಗೂ ಬಂದಿದೆ. ಜಗತ್ತಿನಲ್ಲಿ ಜೀವರಕ್ಷಕ ಔಷಧಿ ಮೊದಲ ಸ್ಥಾನದಲ್ಲಿದ್ದರೆ, ೨ನೇ ಸ್ಥಾನದಲ್ಲಿ ಮುದ್ರಣ ಮಾಧ್ಯಮಗಳಿವೆ. ಇಷ್ಟಾದರೂ ಮಾಧ್ಯಮಗಳು ಕೆಲವೊಂದು ಅಪವಾದಗಳನ್ನು ಕೂಡ ಎದುರಿಸುತ್ತಿವೆ. ಆರೋಪಿಯೊಬ್ಬನನ್ನು ನ್ಯಾಯಾಲಯ ವಿಚಾರಣೆ ನಡೆಸುವ ಮೊದಲೇ ಮಾಧ್ಯಮಗಳು ವಿಚಾರಣೆ ನಡೆಸಿ ತಪ್ಪಿತಸ್ಥನೆಂದು ಘೋಷಿಸುವುದು ಆತಂಕಕಾರಿ ಬೆಳವಣಿಗೆ. ಅದೇ ರೀತಿ ಪೀತ ಪತ್ರಿಕೋದ್ಯಮದ ಬಗ್ಗೆಯೂ ಜಾಗೃತಿ ಅಗತ್ಯ ಎಂದರು. ಪ್ರತಿಯೊಬ್ಬ ಪತ್ರಕರ್ತರಿಗೂ ವೃತ್ತಿಪರತೆ ಮತ್ತು ನೈತಿಕತೆ ಅಗತ್ಯವಾಗಿ ಬೇಕು ಎಂದವರು ನುಡಿದರು. ಮಾಹಿತಿ ಎಂಬುದು ನೀರಿನ ಥರ. ಕಡಿಮೆಯಾದರೂ ಕಷ್ಟ, ಜಾಸ್ತಿಯಾದರೂ ಕಷ್ಟ. ಇದನ್ನು ಪತ್ರಕರ್ತರು ಅರ್ಥಮಾಡಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು.


ಇದೇ ಸಂದರ್ಭದಲ್ಲಿ ಶೇಟ್ ಎಲೆಕ್ಟ್ರಾನಿಕ್ಸ್ ಸಂಸ್ಥೆ ಕೊಡುಗೆಯಾಗಿ ನೀಡಿದ ಸಿಸಿ ಕ್ಯಾಮೆರಾವನ್ನು ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರು ಪತ್ರಕರ್ತರಿಗೆ ಹಸ್ತಾಂತರ ಮಾಡಿದರು.


ಪತ್ರಿಕಾ ವಿತರಕರಾದ ವಿಶ್ವನಾಥ್ ಪುತ್ತೂರು ಅವರನ್ನು ಶಾಸಕರು ಪತ್ರಕರ್ತರ ಸಂಘದ ಪರವಾಗಿ ಸನ್ಮಾನಿಸಿದರು. ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಉತ್ತಮ ಸಾಧನೆ ಮಾಡಿದ ಪತ್ರಕರ್ತರ ಸಂಘದ ಸದಸ್ಯರ ಮಕ್ಕಳಾದ ಹಷೇಂದ್ರ ಪ್ರಸಾದ್, ಮಹೇಶ್ ಪ್ರಸಾದ್, ದೀಪ್ತಿ ಭಟ್, ಎ.ಯು. ಅವನೀಶ್ ಕುಮಾರ್, ಸಮ್ಯಕ್, ಸಿಹಾ ಶಮ್ರಾ, ಪುಣ್ಯಶ್ರೀ ಪಿ. ಅವರನ್ನು ಸಂಘದ ಪರವಾಗಿ ಮಾಜಿ ಶಾಸಕ ಸಂಜೀವ ಮಠಂದೂರು ಸನ್ಮಾನಿಸಿದರು. 

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಘಟಕದ ಅಧ್ಯಕ್ಷರಾದ ಸಿದ್ಧಿಕ್ ನೀರಾಜೆ, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷರಾದ ಪುತ್ತೂರು ಉಮೇಶ್ ನಾಯಕ್,ಮಾಜಿ ಶಾಸಕಿ ಶಕುಂತಲಾ ಟಿ ಶೆಟ್ಟಿ,ರೋಟರಿ ಕ್ಲಬ್ ಪುತ್ತೂರು ಯುವ ಅಧ್ಯಕ್ಷೆ ಅಶ್ವನಿಕೃಷ್ಣ, ಎಸೋಸಿಯೇಶನ್ ಆಫ್ ಸಿವಿಲ್ ಎಂಜಿನಿರ‍್ಸ್ (ಎಸಿಸಿಇ-ಐ) ಪುತ್ತೂರು ಸೆಂಟರ್ ಅಧ್ಯಕ್ಷರಾದ ಪ್ರಮೋದ್ ಕುಮಾರ್ ಕೆ.ಕೆ.ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶ್ರೀನಿವಾಸ ನಾಯಕ್ ಇಂದಾಜೆ, ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಸುಧಾಕರ ಸುವರ್ಣ, ಕಾರ್ಯಕಾರಿ ಸಮಿತಿ ಸದಸ್ಯ ಮೇಘಾ ಪಾಲೆತ್ತಾಡಿ ಮತ್ತು ರೋಟರಿ ಯುವ ಸಂಸ್ಥೆಯ ಕಾರ್ಯದರ್ಶಿ ವಚನಾ ಜಯರಾಂ,ಪ್ರಧಾನ ಕಾರ್ಯದರ್ಶಿ ಶಶಿಧರ ರೈ ಕುತ್ಯಾಳ, ಕೋಶಾಧಿಕಾರಿ ಸಂಶುದ್ದೀನ್ ಸಂಪ್ಯ,ಕಾರ್ಯಕಾರಿ ಸಮಿತಿ ಸದಸ್ಯರಾದ ಐ. ಬಿ. ಸಂದೀಪ್,ಕುಮಾರ್,ಪ್ರಸಾದ್ ಬಲ್ನಾಡ್, ಸಂಘದ ಕಾರ್ಯದರ್ಶಿ ಅಜಿತ್ ಕುಮಾರ್, ಸದಸ್ಯರಾದ ಅನಿಶ್ ಕುಮಾರ್ ಮರೀಲ್,ಶರತ್, ರಾಜೇಶ್ ಪಟ್ಟೆ, ಪಾರೂಕ್ ಶೇಕ್ , ಮತ್ತಿತ್ತರರು ಉಪಸ್ಥಿತರಿದ್ದರು.

 Share: | | | | |


123 ಸ್ಥಾನ ಬರದಿದ್ದರೆ ಪಕ್ಷ ವಿಸರ್ಜಿಸುತ್ತೇವೆ ಎಂದಿದ್ದ ಕುಮಾರಸ್ವಾಮಿ

Posted by Vidyamaana on 2023-07-14 16:02:32 |

Share: | | | | |


123 ಸ್ಥಾನ ಬರದಿದ್ದರೆ ಪಕ್ಷ ವಿಸರ್ಜಿಸುತ್ತೇವೆ ಎಂದಿದ್ದ ಕುಮಾರಸ್ವಾಮಿ

ಬೆಂಗಳೂರು: ಕರ್ನಾಟಕ ವಿಧಾನಮಂಡಲ ಮುಂಗಾರು ಜಂಟಿ ಅಧಿವೇಶನ ಮುಂದುವರಿದಿದೆ. ವಿಧಾನ ಪರಿಷತ್​​ನಲ್ಲಿ ರಾಜ್ಯಪಾಲರ ಭಾಷಣದ ಬಳಿಕ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದರು.  


5 ಚುನಾವಣೆಗಳ ಪೈಕಿ 2 ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ ಎಂದ ಸಿದ್ದರಾಮಯ್ಯ ಕಾಂಗ್ರೆಸ್​​ ಚುನಾವಣೆ ವೇಳೆ 5 ಗ್ಯಾರಂಟಿ ಘೋಷಣೆ ಮಾಡಿದ್ದೆವು. ಜನ ನಮ್ಮ ಪಕ್ಷವನ್ನು ನಂಬುತ್ತಾರೆ ನಿಮ್ಮನ್ನು ನಂಬಲ್ಲ. ಜೆಡಿಎಸ್​ ಕೂಡ ಪಂಚರತ್ನ ಘೋಷಣೆ ಮಾಡಿತ್ತು. ಹೆಚ್ ​ಡಿ ಕುಮಾರಸ್ವಾಮಿ 123 ಸ್ಥಾನ ಬರದಿದ್ದರೆ ಪಕ್ಷ ವಿಸರ್ಜಿಸುತ್ತೇವೆ ಎಂದಿದ್ದರು ಎಂದು ಸಿದ್ದರಾಮಯ್ಯ ಹೇಳಿದರು.

 ಜೆಡಿಎಸ್ (JDS)​​ ಶೇಕಡಾವಾರು ಮತ ಶೇ.19ರಿಂದ ಶೇ.13ಕ್ಕೆ ಕುಸಿದಿದೆ. 2005ರವರೆಗೆ ನಾನು ಜೆಡಿಎಸ್​ನಲ್ಲೇ ಇದ್ದೆ. ನಾನು ಜೆಡಿಎಸ್​ ಬಿಡಲಿಲ್ಲ, ನನ್ನನ್ನು ಪಕ್ಷದಿಂದ ಉಚ್ಚಾಟಿಸಿದರು. ಪಕ್ಷ ವಿರೋಧಿ ಚಟುವಟಿಕೆ ಆರೋಪದಡಿ ನನ್ನನ್ನು ಉಚ್ಚಾಟಿಸಿದರು. ಕಾಂಗ್ರೆಸ್​​ ಪಕ್ಷದಿಂದ 2 ಬಾರಿ ಸಿಎಂ ಆಗುವ ಅವಕಾಶ ಸಿಕ್ಕಿದೆ. ಕಾಂಗ್ರೆಸ್​ಗೆ ನಾನು ಚಿರಋಣಿ ಆಗಿರುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

VIDEO 4 ಅಡಿ ಜಾಗದಲ್ಲಿ ಮೂರು ಅಂತಸ್ತಿನ ಕಟ್ಟಡ; ಇಂಜಿನಿಯರ್ ಎಲ್ಲಿದ್ದೀಯಪ್ಪಾ ಎಂದ ನೆಟ್ಟಿಗರು

Posted by Vidyamaana on 2023-11-05 16:41:27 |

Share: | | | | |


VIDEO  4 ಅಡಿ ಜಾಗದಲ್ಲಿ ಮೂರು ಅಂತಸ್ತಿನ ಕಟ್ಟಡ; ಇಂಜಿನಿಯರ್ ಎಲ್ಲಿದ್ದೀಯಪ್ಪಾ ಎಂದ ನೆಟ್ಟಿಗರು

ನವದೆಹಲಿ: ಸ್ವಂತ ಮನೆ ಕಟ್ಟುವುದು ಎಲ್ಲರ ಕನಸು. ಆದರೆ ಹಲವರಿಗೆ ಕನಸಾಗಿಯೇ ಉಳಿದಿದೆ. ಯಾಕೆಂದರೆ.. ಜಾಗ ದುಬಾರಿ, ಇಂತಹ ಪರಿಸ್ಥಿತಿಯಲ್ಲಿ ಕೆಲವರು ಚಿಕ್ಕ ಜಾಗದಲ್ಲಿಯೂ ಅದ್ಭುತವಾದ ಮನೆ ಕಟ್ಟುತ್ತಾರೆ. ಇಷ್ಟು ಚಿಕ್ಕ ಪ್ರದೇಶದಲ್ಲಿ ಮನೆ ನಿರ್ಮಾಣ ಎಷ್ಟು ಚೆನ್ನಾಗಿ ನಡೆದಿದೆ ಎಂದು ಯೋಚಿಸಿದರೆ ನೋಡುಗರಿಗೂ ಆಶ್ಚರ್ಯವಾಗುತ್ತದೆಯೇ?ಇಂತಹ ಎರಡು ಮನೆಗಳು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿವೆ.

VIDEO 4 ಅಡಿ ಜಾಗದಲ್ಲಿ ಮೂರು ಅಂತಸ್ತಿನ ಕಟ್ಟಡ; ಇಂಜಿನಿಯರ್ ಎಲ್ಲಿದ್ದೀಯಪ್ಪಾ ಎಂದ ನೆಟ್ಟಿಗರು

ಮೊದಲ ಮನೆ ನಿರ್ಮಾಣವಾಗಿದ್ದು, ಕೇವಲ 4 ಅಡಿ ಜಾಗದಲ್ಲಿ ಮೂರು ಅಂತಸ್ತಿನ ಕಟ್ಟಡ. ಎರಡನೇ ಮನೆ ಎರಡು ಅಂತಸ್ತಿನದ್ದಾಗಿದ್ದು, ಎರಡು ಅಡಿ ಜಾಗದಲ್ಲಿ. ಈ ಕಟ್ಟಡದಲ್ಲಿ ಅಂಗಡಿಗಳನ್ನು ನಿರ್ಮಿಸಲಾಗಿದೆ. ಈ ಕಟ್ಟಡಗಳ ವಿಡಿಯೋ ವೈರಲ್​​ ಆಗಿದೆ. ಆದರೆ ಈ ಕಟ್ಟಡ ಎಲ್ಲವೆ ಎನ್ನುವ ಮಾಹಿತಿ ಮಾತ್ರ ಖಚಿತವಾದ ಮಾಹಿತಿಲ್ಲ.ವೈರಲ್ ಆಗಿರುವ ವಿಡಿಯೋದಲ್ಲಿ ವ್ಯಕ್ತಿಯೊಬ್ಬ ಈ ವಿಶಿಷ್ಟ ಮನೆಯನ್ನು ತೋರಿಸಿ ಹೇಳುತ್ತಾನೆ. ನಾಲ್ಕು ಅಡಿ ಜಾಗದಲ್ಲಿ ಮೂರಂತಸ್ತಿನ ಮನೆ ಕಟ್ಟಿದ್ದಾರೆ. ಇಷ್ಟು ಚಿಕ್ಕ ಜಾಗದಲ್ಲಿ ನಿರ್ಮಿಸಿರುವ ಮನೆಯ ಮೇಲಕ್ಕೆ ಹೋಗಲು ಮೆಟ್ಟಿಲುಗಳೂ ಇವೆ. ಹೊರಗಿನಿಂದ ಬಾಗಿಲೂ ಇದೆ. ಇದೇ ರೀತಿಯ ಇನ್ನೊಂದು ಮನೆಯೂ ಈ ವಿಡಿಯೋದಲ್ಲಿ ಕಾಣಿಸುತ್ತಿದೆ. ಇದು ಅನೇಕ ಜನರನ್ನು ಆಶ್ಚರ್ಯಗೊಳಿಸುತ್ತದೆ. 2 ಅಡಿ ಅಗಲದ ಕಟ್ಟಡದಲ್ಲಿ ಹಲವು ಅಂಗಡಿಗಳೂ ಇವೆ. ಅದರ ಮೇಲೆ ಎರಡು ಅಂತಸ್ತಿನ ಮನೆಯನ್ನೂ ನಿರ್ಮಿಸಲಾಗಿದೆ.


ಈ ಎರಡು ಮನೆಗಳನ್ನು ನೋಡಿ ನೆಟ್ಟಿಗರು ಹಾಗೂ ಸ್ಥಳೀಯರು ಶಾಕ್ ಆಗಿದ್ದಾರೆ. ಅಂತಹ ಕಟ್ಟಡವನ್ನು ನಿರ್ಮಿಸಿದವರು ಯಾರು? ಇಂಜಿನಿಯರ್ ಎಲ್ಲಿದ್ಯಪ್ಪಾ ಎಂದು ಕಾಮೆಂಟ್​​ ಮಾಡುತ್ತಿದ್ದಾರೆ.

ಸುಬ್ರಹ್ಮಣ್ಯ : ಕಾರಿನಿಂದ ಚಿನ್ನ ಕಳವು ಪ್ರಕರಣ : ಆರೋಪಿ ಹೊನ್ನವಳ್ಳಿ ಮೂಲದ ಪ್ರಭಾಕರ್ ಪೊಲೀಸ್ ವಶಕ್ಕೆ

Posted by Vidyamaana on 2023-10-11 15:14:04 |

Share: | | | | |


ಸುಬ್ರಹ್ಮಣ್ಯ : ಕಾರಿನಿಂದ ಚಿನ್ನ ಕಳವು ಪ್ರಕರಣ : ಆರೋಪಿ ಹೊನ್ನವಳ್ಳಿ ಮೂಲದ ಪ್ರಭಾಕರ್ ಪೊಲೀಸ್ ವಶಕ್ಕೆ

ಸುಬ್ರಹ್ಮಣ್ಯ : ಪಾರ್ಕಿಂಗ್ ಸ್ಥಳದಲ್ಲಿದ್ದ ಕಾರಿನ ಗಾಜು ಒಡೆದು ಚಿನ್ನ ಕಳವು ಮಾಡಿದ್ದ ಖದೀಮನನ್ನು ಪೊಲೀಸರು ಬಂಧಿಸಿದ್ದಾರೆಂದು ವರದಿಯಾಗಿದೆ.


ಹೊನ್ನವಳ್ಳಿ ಮೂಲದ ಪ್ರಭಾಕರ್ (35) ಬಂಧಿತ ಆರೋಪಿ.


ಈತ ಸುಬ್ರಹ್ಮಣ್ಯ ಪಾರ್ಕಿಂಗ್ ಸ್ಥಳದಲ್ಲಿ ಕಾರಿನ ಗಾಜು ಒಡೆದು ಚಿನ್ನವನ್ನು ಕದ್ದಿದ್ದು, ಈತನನ್ನು ಸುಬ್ರಹ್ಮಣ್ಯ ರೈಲು ನಿಲ್ದಾಣ ಬಳಿ ಬಂಧಿಸಿ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.


ಈತನ ಖತರ್ನಾಕ್ ಖದೀಮನಾಗಿದ್ದು, 15 ದಿನದ ಹಿಂದೆ ಧರ್ಮಸ್ಥಳದಲ್ಲಿ 40 ಗ್ರಾಂ ಚಿನ್ನವನ್ನು ಇದೇ ಮಾದರಿಯಲ್ಲಿ ಕದ್ದಿದ್ದು, ಈ ಬಗ್ಗೆ ಸುಬ್ರಹ್ಮಣ್ಯ ಪೊಲೀಸರ ಮುಂದೆ ಒಪ್ಪಿಕೊಂಡಿರುತ್ತಾನೆ.


ಕಾರ್ಯಾಚರಣೆಯಲ್ಲಿ ಠಾಣಾಧಿಕಾರಿ ಕಾರ್ತಿಕ ಅವರ ನೇತೃತ್ವದಲ್ಲಿ ಮುರಳಿಧರ್ (ತನಿಖೆ ) ಹಾಗೂ ಎರಡು ತಂಡ ರಚಿಸಲಾಗಿತ್ತು. ಸಿಬ್ಬಂದಿಗಳಾದ ಕರುಣಾಕರ, ಮಹೇಶ್, ಕುಮಾರ್, ಆನಂದ್, ವಿಠ್ಠಲ್ ಬಸವರಾಜ್, ರೋಹಿತ್, ಕೃಷ್ಣ ಭಾಗಿಯಾಗಿದ್ದರು.

ಉಡುಪಿಯಲ್ಲಿ ನಾಲ್ವರು ಮುಸ್ಲಿಮರನ್ನು ಕೊಂದು ವಿಶ್ವ ದಾಖಲೆ: ವಿಕೃತಿ ಮೆರೆದ ಹಿಂದೂ ಮಂತ್ರ ಪೇಜ್ ವಿರುದ್ಧ ಪ್ರಕರಣ ದಾಖಲು

Posted by Vidyamaana on 2023-11-17 12:41:26 |

Share: | | | | |


ಉಡುಪಿಯಲ್ಲಿ ನಾಲ್ವರು ಮುಸ್ಲಿಮರನ್ನು ಕೊಂದು ವಿಶ್ವ ದಾಖಲೆ: ವಿಕೃತಿ ಮೆರೆದ ಹಿಂದೂ ಮಂತ್ರ ಪೇಜ್ ವಿರುದ್ಧ ಪ್ರಕರಣ ದಾಖಲು

ಉಡುಪಿ: ನೇಜಾರಿನ ಒಂದೇ ಕುಟುಂಬದ ನಾಲ್ವರ ಹತ್ಯೆಗೆ  ಇನ್ಸ್ಟಾಗ್ರಾಮ್ ಪೇಜ್ ನಲ್ಲಿ ಸಂಭ್ರಮಿಸಿ ಸಂದೇಶ ಹರಿಬಿಟ್ಟಿದ್ದು, ಹಿಂದೂ ಮಂತ್ರ ಎಂಬ ಹೆಸರಿನ ಖಾತೆ ವಿರುದ್ಧ ಉಡುಪಿಯ ಸೆನ್ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


‘ಹಿಂದು ಮಂತ್ರ’ ಎಂಬ ಪೇಜ್‌ನಲ್ಲಿ ಕೊಲೆ ಆರೋಪಿಯನ್ನು ಸಾಧಕನಂತೆ ಬಿಂಬಿಸಿರುವುದು ಕಂಡುಬಂದಿದೆ.


ಉಡುಪಿಯಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಕಗ್ಗೊಲೆ ಪ್ರಕರಣ ಸಂಬಂಧ ಕಿಡಿಗೇಡಿಗಳು ಹತ್ಯೆಯನ್ನು ಸಂಭ್ರಮಿಸಿ ಹಿಂದೂ ಮಂತ್ರ ಹೆಸರಿನ ಇನ್ ಸ್ಟಾಗ್ರಾಮ್ ಪೇಜ್ ನಲ್ಲಿ ಪೋಸ್ಟ್ ಮಾಡಲಾಗಿತ್ತು. ಈ ಪೋಸ್ಟ್ ನಲ್ಲಿ, 15 ನಿಮಿಷದಲ್ಲಿ ನಾಲ್ಕು ಮುಸ್ಲಿಮರನ್ನು ಕೊಂದು ವಿಶ್ವ ದಾಖಲೆ ನಿರ್ಮಿಸಿದ್ದಾನೆ ಎಂದು ಶೀರ್ಷಿಕೆ ಬರೆಯಲಾಗಿದೆ. ಅಲ್ಲದೆ, ಹತ್ಯೆಯ ಆರೋಪಿ ಪ್ರವೀಣ್ ಅರುಣ್ ಚೌಗುಲೆ ತಲೆಗೆ ಕಿರೀಟದ ಎಮೋಜಿ ತೊಡಿಸಲಾಗಿದೆ. ಇದರೊಂದಿಗೆ, ಉಡುಪಿಯ ಹುಡುಗಿಯರ ವಿಚಾರದಲ್ಲಿ ಯಾರು ಕೂಡ ಬರಲಿಲ್ಲ. ಹೀಗಾಗಿ ನಾವು ಕೂಡ ಈ ವಿಚಾರಕ್ಕೆ ಬರುವುದಿಲ್ಲ ಎಂದು ಬರೆಯಲಾಗಿದೆ

ಹುಚ್ಚ ಅವನು ಎತ್ತಿಕೊಂಡು ಹೊರಗೆ ಹಾಕ್ರೀ... ಶಾಸಕ ವೇದವ್ಯಾಸ್ ಕಾಮತ್ ಬಗ್ಗೆ ಕಾಂಗ್ರೆಸ್ ಸದಸ್ಯರ ಆಕ್ರೋಶ

Posted by Vidyamaana on 2024-02-21 13:12:27 |

Share: | | | | |


ಹುಚ್ಚ ಅವನು  ಎತ್ತಿಕೊಂಡು ಹೊರಗೆ ಹಾಕ್ರೀ... ಶಾಸಕ ವೇದವ್ಯಾಸ್ ಕಾಮತ್ ಬಗ್ಗೆ ಕಾಂಗ್ರೆಸ್ ಸದಸ್ಯರ ಆಕ್ರೋಶ

ಬೆಂಗಳೂರು, ಫೆ.20: ವಿಧಾನಸಭೆ ಅಧಿವೇಶನದಲ್ಲಿ ಕೇಂದ್ರ ಸರಕಾರ ಅನುದಾನ ತಾರತಮ್ಯ ಮಾಡ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿವರಣೆ ಕೊಡುತ್ತಿದ್ದಾಗ, ಎದ್ದು ನಿಂತು ವಿರೋಧಿಸಿದ್ದಕ್ಕೆ ಮಂಗಳೂರಿನ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಅವರನ್ನು ಕಾಂಗ್ರೆಸ್ ಶಾಸಕರು ಹುಚ್ಚ ಎಂದು ರೇಗಿಸಿದ ಘಟನೆ ನಡೆದಿದೆ.


ಫುಡ್ ಕಾರ್ಪೊರೇಶನ್ ಕಡೆಯಿಂದ ನಾವು ಅಕ್ಕಿ ಕೇಳಿದ್ದೆವು. ಅದರ ಮ್ಯಾನೇಜರ್ ಓಕೆಯೆಂದು ಹೇಳಿದ್ದೂ ಆಗಿತ್ತು. ಆದರೆ ಕೇಂದ್ರ ಸರಕಾರದವರು ರಾಜಕೀಯ ಕಾರಣಕ್ಕೆ ರಾಜ್ಯಕ್ಕೆ ಅಕ್ಕಿ ಕೊಡಲಿಲ್ಲ ಎಂದು ಸಿದ್ದರಾಮಯ್ಯ ಹೇಳಿದಾಗ, ವಿರೋಧಿಸಿದ ವಿಪಕ್ಷ ನಾಯಕ ಅಶೋಕ್, ನೀವು ಗ್ಯಾರಂಟಿ ಘೋಷಣೆ ಮಾಡಿದಾಗ ಕೇಂದ್ರವನ್ನು ಕೇಳಿದ್ರಾ.. ಆನಂತರ ಕೇಂದ್ರ ಅಕ್ಕಿ ಕೊಡಲಿಲ್ಲ ಎಂದರೆ ಹೇಗೆ. ಅಕ್ಕಿಯನ್ನು ಮ್ಯಾನೇಜರ್ ಕೊಡೋದಾ ಎಂದು ಛೇಡಿಸಿದರು.


ಪ್ರತಿಕ್ರಿಯಿಸಿದ ಸ್ಪೀಕರ್ ಯುಟಿ ಖಾದರ್, ಆಹಾರ ಭದ್ರತಾ ನಿಗಮ ಅನ್ನೋದು ಸ್ವತಂತ್ರ ಸಂಸ್ಥೆ ಎಂದು ಹೇಳಲು ಹೊರಟಾಗ ಎದ್ದು ನಿಂತ ವೇದವ್ಯಾಸ ಕಾಮತ್, ಸ್ವತಂತ್ರ ಸಂಸ್ಥೆಯಲ್ಲ. ಕೇಂದ್ರಕ್ಕೆ ಅಧಿಕಾರ ಇದೆಯೆಂದು ಹೇಳಲು ಹೊರಟರು. ಕಾಂಗ್ರೆಸ್ ಶಾಸಕರು ಅದಕ್ಕೆ ವಿರೋಧಿಸಿ ಗದ್ದಲ ಎಬ್ಬಿಸಿದ್ದಾರೆ. ಏಯ್ ಹುಚ್ಚಾ ಅವನು. ಹೊರಗೆ ಹಾಕಿ ಎಂದು ಕೂಗಿದ್ದಾರೆ. ಇದರಿಂದ ಕುಪಿತರಾದ ವೇದವ್ಯಾಸ್ ಅವರನ್ನು ಖಾದರ್ ಕುಳಿತುಕೊಳ್ಳುವಂತೆ ಮನವಿ ಮಾಡಿದ್ದಾರೆ. ಹುಚ್ಚ ನೀವು ಎಂದು ವೇದವ್ಯಾಸ್ ಹೇಳಿದ್ದಕ್ಕೆ ಖಾದರ್ ಗರಂ ಆಗಿದ್ದು ನೀವೊಮ್ಮೆ ಕೂತ್ಕೊಳ್ಳಿ ಮಾರ್ರೆ, ಸರಿಯಾಗಿ ತಿಳಿದುಕೊಳ್ಳದೆ ಮಾತಾಡಬೇಡಿ ಎಂದಿದ್ದಾರೆ.


ಇದನ್ನು ಕೇಳಿದ ಆಡಳಿತ ಪಕ್ಷದ ಸದಸ್ಯರು, ವೇದವ್ಯಾಸ ಗುರಿಯಾಗಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಭಾಧ್ಯಕ್ಷ ಪೀಠಕ್ಕೆ ಗೌರವ ಕೊಡಬೇಕಲ್ಲ. ಹುಚ್ಚ ಅಂತಾನೆ, ಅವನನ್ನು ಎತ್ತಿ ಹೊರಗೆ ಹಾಕ್ರೀ ಎಂದು ಗದ್ದಲ ಎಬ್ಬಿಸಿದ್ದಾರೆ. ಮುಖ್ಯಮಂತ್ರಿ ಮಾತಾಡೋವಾಗ ನಡುವೆ ಬಾಯಿ ಹಾಕ್ತಾನೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಹುಚ್ಚ ಅವನು ಎಂದು ಹೇಳಿದ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.

ಈ ಹೋರಾಟ ಯಾವುದೆ ವ್ಯಕ್ತಿಯ ವಿರುದ್ಧ ಅಲ್ಲ : ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿಕೆ

Posted by Vidyamaana on 2024-08-03 22:03:59 |

Share: | | | | |


ಈ ಹೋರಾಟ ಯಾವುದೆ ವ್ಯಕ್ತಿಯ ವಿರುದ್ಧ ಅಲ್ಲ : ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿಕೆ

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನಿಂದ ಮೈಸೂರಿಗೆ ಬಿಜೆಪಿ ಹಾಗೂ ಜೆಡಿಎಸ್ ಪಾದಯಾತ್ರೆ ಹಮ್ಮಿಕೊಂಡಿದ್ದು, ಸಿಎಂ ಸಿದ್ದರಾಮಯ್ಯ ಪದತ್ಯಾಗಕ್ಕೆ ಆಗ್ರಹಿಸಿ ಮೈಸೂರು ಚಲೋ ಪಾದಯಾತ್ರೆ ಹಮ್ಮಿಕೊಂಡಿವೆ. ಇನ್ನು ಈ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಮಾತನಾಡಿದ್ದು ಈ ಒಂದು ಹೋರಾಟ ಯಾವುದೇ ವ್ಯಕ್ತಿಯ ವಿರುದ್ಧ ಅಲ್ಲ ಎಂದು ತಿಳಿಸಿದರು.ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮುಡಾ ಸೈಟ್ ಹಗರಣ ಖಂಡಿಸಿ ಮೈಸೂರಿಗೆ ಪಾದಯಾತ್ರೆ ವಿಚಾರವಾಗಿ ಬಿಜೆಪಿ ರಾಜ್ಯಧ್ಯಕ್ಷ ಬಿವೈ ವಿಜಯೇಂದ್ರ ಚಾಮುಂಡಿ ಬೆಟ್ಟಕ್ಕೆ ತೆರಳುವ ಮುನ್ನ ಹೇಳಿಕೆ ನೀಡಿದ್ದು,ಚಾಮುಂಡಿ ಸಲ್ಲಿಸಿ ಪಾದಯಾತ್ರೆಯಲ್ಲಿ ಭಾಗಿಯಾಗುತ್ತೇನೆ. ಕಾಂಗ್ರೆಸ್ ಹಗರಣಗಳ ವಿರುದ್ಧ ಹೋರಾಟ ಯಶಸ್ವಿಯಾಗಬೇಕು. ನಮ್ಮ ಕಾರ್ಯಕರ್ತರು ಪಾದಯಾತ್ರೆಗೆ ಎಲ್ಲಾ ವ್ಯವಸ್ಥೆ ಮಾಡಿದ್ದಾರೆ.



Leave a Comment: