ಸಿಎಂ ಸಿದ್ದರಾಮಯ್ಯರನ್ನು‌ ಭೇಟಿಯಾದ ಶಾಸಕ ಆಶೋಕ್ ರೈ

ಸುದ್ದಿಗಳು News

Posted by vidyamaana on 2024-07-03 19:44:44 |

Share: | | | | |


ಸಿಎಂ ಸಿದ್ದರಾಮಯ್ಯರನ್ನು‌ ಭೇಟಿಯಾದ ಶಾಸಕ ಆಶೋಕ್ ರೈ

ಪುತ್ತೂರು: ಪುತ್ತೂರು ಶಾಸಕರಾದ ಅಶೋಕ್ ರೈ ಯವರು ಬುಧವಾರದಂದು ಬೆಂಗಳೂರಿನಲ್ಲಿ ಸಿ ಎಂ‌ನಿವಾಸದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪುತ್ತೂರಿಗೆ‌ಮೆಡಿಕಲ್ ಕಾಲೇಜು ಮತ್ತು ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡುವಂತೆ ಮನವಿ ಮಾಡಿದರು.

   ಸಿದ್ದರಾಮಯ್ಯ ಅವರೊಂದಿಗೆ ಮಾತುಕತೆ ನಡೆಸಿದ ಶಾಸಕರು ಪುತ್ತೂರಿಗೆ ಮೆಡಿಕಲ್ ಕಾಲೇಜು ಬೇಡಿಕೆಯನ್ನು ನೆನಪಿಸಿದರು. ಬಜೆಟ್ ನಲ್ಲಿ ಈ ಬಾರಿ ಅನುಮೋದನೆಯಾಗಬೇಕು ಮತ್ತು ತನ್ನ ಕ್ಷೇತ್ರದ ಜನರ ಬಹುಕಾಲದ ಬೇಡಿಕೆಯಾದ ಮೆಡಿಕಲ್ ಕಾಲೇಜನ್ನು ಮಂಜೂರು ಮಾಡುವಂತೆ ಮನವಿ ಮಾಡಿದರು. ಕಳೆದ ಬಜೆಟ್ ನಲ್ಲಿ ಅನುಮೋದನೆಯಾಗಬಹುದು ಎಂಬ ನಿರೀಕ್ಷೆ ಇತ್ತು ಆದರೆ ಗ್ಯಾರಂಟಿ ಯೋಜನೆಗೆ ಬಜೆಟ್ ನಲ್ಲಿ ಹೆಚ್ಚು ಅನುದಾನ ಇರಿಸಿದ ಕಾರಣ ನಾನು ಹೆಚ್ಚು ಒತ್ತಡ ಹಾಕಿರಲಿಲ್ಲ. ಮೆಡಿಕಲ್ ಕಾಲೇಜು ಆಗಬೇಕು‌ಎಂಬುದು‌ ನನ್ನ ಮತ್ತು ನನ್ನ ಕ್ಷೇತ್ರದ ಜನರ ಕನಸಾಗಿದೆ ಅದನ್ನು ನನಸು‌ಮಾಡಿಕೊಡಬೇಕು ಎಂದು ಸಿ ಎಂ ಅವರಲ್ಲಿ ಶಾಸಕರು ವಿನಂತಿಸಿದರು.

ಕಾಲೇಜು‌ನಿರ್ಮಾಣಕ್ಕೆ ಈಗಾಗಲೇ ಜಾಗ ಗುರುತಿಸಲಾಗಿದೆ ಎಂದೂ ಶಾಸಕರು ಸಿಎಂ ಅವರಲ್ಲಿ ತಿಳಿಸಿದರು.

ಹೆಚ್ಚು‌ಅನುದಾನ ಕೊಡಿ

ನನ್ನ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ದಿ ಕೆಲಸಗಳು ಆಗಬೇಕಿದೆ. ರಸ್ತೆ, ಸರಕಾರಿ ಕಟ್ಟಡಗಳು, ಶಾಲಾ ,ಕಾಲೇಜು ಕಟ್ಟಡಗಳು, ತಡೆಗೋಡೆ ,ಬೃಹತ್ ಅಣೆಕಟ್ಟುಗಳು ಸೇರಿದಂತೆ ಕ್ಷೇತ್ರದ ಜನರಿಂದ ದಿನದಿಂದ ದಿನಕ್ಕೆ ಕಾಮಗಾರಿಯ ಬೇಡಿಕೆಗಳು ಬರುತ್ತಿದ್ದು ಈಗ ಬರುತ್ತಿರುವ ಅನುದಾನವನ್ನು ಹೆಚ್ಚು ಪ್ರಮಾಣದಲ್ಲಿ ಹಂಚಿಕೆ ಮಾಡಲು ಸಾಧ್ಯವಾಗುತ್ತಿಲ್ಲ. ಅನೇಕ ವರ್ಷಗಳಿಂದ ಇರುವ ಕೆಲವೊಂದು ಕಾಮಗಾರಿ ಬೇಡಿಕೆಗಳಿಗೆ ಅನುದಾನವನ್ನು‌ನೀಡಬೇಕಿದೆ ಈ ಕಾರಣಕ್ಕೆ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡುವಂತೆ ಶಾಸಕರು‌ಮನವಿ ಸಲ್ಲಿಸಿದರು.

 Share: | | | | |


ಸಂಕಷ್ಟಕ್ಕೆ ಸಿಲುಕಿದ ಶಬರಿಮಲೆ ಭಕ್ತರಿಗೆ ಆಶ್ರಯ: ಕೋಮು ಸೌಹಾರ್ದತೆಗೆ ಸಾಕ್ಷಿಯಾದ ಕೊಡಗಿನ ಮಸೀದಿ

Posted by Vidyamaana on 2024-01-06 07:29:29 |

Share: | | | | |


ಸಂಕಷ್ಟಕ್ಕೆ ಸಿಲುಕಿದ ಶಬರಿಮಲೆ ಭಕ್ತರಿಗೆ ಆಶ್ರಯ: ಕೋಮು ಸೌಹಾರ್ದತೆಗೆ ಸಾಕ್ಷಿಯಾದ ಕೊಡಗಿನ ಮಸೀದಿ

 ಮಡಿಕೇರಿ: ಪ್ರಸ್ತುತ ರಾಜಕೀಯ ಮತ್ತು ಕೋಮು ಸಂಘರ್ಷದ ಪರಿಸ್ಥಿತಿಯಲ್ಲಿ ಕೊಡಗಿನ ಮಸೀದಿಯೊಂದು ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ.ತಿತಿಮತಿಯಲ್ಲಿರುವ ಜಾಮಾ ಮಸೀದಿಯು ಸಂಕಷ್ಟಕ್ಕೆ ಸಿಲುಕಿದ ಶಬರಿಮಲೆಯ ಭಕ್ತರಿಗೆ ಆಶ್ರಯ ಮತ್ತು ಸೌಲಭ್ಯ ಕಲ್ಪಿಸುವ ಮೂಲಕ ಸಹೋದರತ್ವ ಮತ್ತು ಸಾಮರಸ್ಯದ ಕಥೆಯನ್ನು ಬೆಳಗಾವಿಯಿಂದ ಕೊಡಗು ಮಾರ್ಗವಾಗಿ ಬೈಕ್ನಲ್ಲಿ ಕೇರಳದ ಶಬರಿಮಲೆ ದೇವಸ್ಥಾನಕ್ಕೆ ತೆರಳುತ್ತಿದ್ದ ಐವರು ಭಕ್ತರು ಗುರುವಾರ ರಾತ್ರಿ ಹವಾಮಾನ ವೈಪರೀತ್ಯ ಹಾಗೂ ಬೆಳಕು ಕಡಿಮೆಯಾದ ಕಾರಣ ಪ್ರಯಾಣ ಮುಂದುವರಿಸಲು ಸಾಧ್ಯವಾಗದೆ ತಿತಿಮತಿಯಲ್ಲಿ ಸ್ಥಗಿತಗೊಳಿಸಿದ್ದಾರೆ.


ಕಮಲೇಶ್ ಗೌರಿ, ಭೀಮಪ್ಪ ಸನದಿ, ಶಿವಾನಂದ್ ಎನ್, ಗಂಗಾಧರ್ ಬಿ ಮತ್ತು ಎಸ್ ಸಿದ್ದರೋಡ್ ಜಮ್ಮಾ ಮಸೀದಿ ಬಳಿ ಹೋಗಿ ನೆರವು ಕೇಳಿದ್ದರೂ ಮುಂದೆ ಹೇಗೆ ಹೋಗಬೇಕು ಎಂಬುದು ಗೊತ್ತಾಗಿಲ್ಲ. ನಂತರ ಮಸೀದಿ ಆಡಳಿತ ಮಂಡಳಿಯವರು ಶಬರಿಮಲೆ ಭಕ್ತರ ನೆರವಿಗೆ ಬಂದಿದ್ದು, ರಾತ್ರಿ ಮಸೀದಿಯಲ್ಲಿ ತಂಗಲು ಅನುಮತಿ ನೀಡಿದ್ದಾರೆ. ಅಲ್ಲದೇ ಭಕ್ತರಿಗೆ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ಮಸೀದಿ ಅಧ್ಯಕ್ಷ ಉಸ್ಮಾನ್ ಹಾಗೂ ಕೆ.ಕತೀಬ್ ಒದಗಿಸಿದ್ದಾರೆ.ಶುಕ್ರವಾರ ಬೆಳಗ್ಗೆ 6 ಗಂಟೆಗೆ ಐವರು ಭಕ್ತರು ಆಡಳಿತ ಮಂಡಳಿಗೆ ಕೃತಜ್ಞತೆ ಸಲ್ಲಿಸಿದರು. ಈ ಮಸೀದಿ ಸೌಹಾರ್ದತೆಯ ಸಂಕೇತವಾಗಿದೆ. ಜಾತಿ, ಧರ್ಮದ ಭೇದವಿಲ್ಲದೆ ಭಕ್ತರಿಗೆ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ಒದಗಿಸಲು ನಾವು ಸದಾ ಸಿದ್ಧರಿದ್ದೇವೆ ಎಂದು ಉಸ್ಮಾನ್ ಹೇಳಿದರು.

ಕಾರ್ಕಳ: ಶಾಲಾ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗೆ ಹೊಡೆದ ಆರೋಪ; ಪ್ರಾಂಶುಪಾಲರ ವಿರುದ್ಧ ಪ್ರಕರಣ ದಾಖಲು

Posted by Vidyamaana on 2023-09-07 11:46:29 |

Share: | | | | |


ಕಾರ್ಕಳ: ಶಾಲಾ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗೆ ಹೊಡೆದ ಆರೋಪ; ಪ್ರಾಂಶುಪಾಲರ ವಿರುದ್ಧ ಪ್ರಕರಣ ದಾಖಲು

ಕಾರ್ಕಳ: ಶಾಲಾ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗೆ ಪ್ರಾಂಶುಪಾಲರು ಹೊಡೆದಿದ್ದಾರೆ ಎಂದು ಪ್ರಿನ್ಸ್ ಪಾಲ್ ವಿರುದ್ಧ ಪ್ರಕರಣ ದಾಖಲಾಗಿರುವ ಘಟನೆ ಕಾರ್ಕಳದಲ್ಲಿ ನಡೆದಿದೆ.


ಮೈಸೂರು ಮೂಲದ ವೆರೋನಿಕಾ ಎಂಬವರ ಮಕ್ಕಳಾದ ಆಯಂಟೋನಿ ಜೀವನ್ ಹಾಗೂ ಮರಿಯನ್ ಕೆವಿನ್ ಎಂಬವರು ಈದು ಗ್ರಾಮದ ಬೊಟ್ಟು ಗುರುಕುಲ ಸೆಂಟ್ರಲ್ ಸ್ಕೂಲ್‌ನಲ್ಲಿ ಓದುತ್ತಿದ್ದಾರೆ. ಇವರಿಬ್ಬರು ಶಾಲಾ ಹಾಸ್ಟೆಲ್ ನಲ್ಲಿ ಉಳಿದುಕೊಂಡಿದ್ದರು.ಸೆ.2ರಂದು ಶಾಲಾ ಪ್ರಾಂಶುಪಾಲ ರೋಹಿತ್, ಹಾಸ್ಟೆಲ್‌ನ ಕೊಠಡಿಯಲ್ಲಿ ಬೆಡ್ ಮೇಲೆ ಗಲಾಟೆ ಮಾಡಿದ ಕಾರಣಕ್ಕಾಗಿ 7ನೇ ತರಗತಿಯ ವಿದ್ಯಾರ್ಥಿ ಮರಿಯನ್ ಕೆವಿನ್‌ಗೆ ಬೆತ್ತದಿಂದ ಹೊಡೆದು ಹಲ್ಲೆ ಮಾಡಿರುವುದಾಗಿ ದೂರಲಾಗಿದೆ.ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಸಹಿತ ಬಿಜೆಪಿ ನಿಯೋಗ ಭೇಟಿ

Posted by Vidyamaana on 2024-03-19 21:24:11 |

Share: | | | | |


ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಸಹಿತ ಬಿಜೆಪಿ ನಿಯೋಗ ಭೇಟಿ

ಪುತ್ತೂರು : ಬಿಜೆಪಿ ಜಿಲ್ಲಾ ಸಾಮಾಜಿಕ ಜಾಲತಾಣ ಪ್ರಕೋಷ್ಟ ಸದಸ್ಯರಾದ ಜಯಾನಂದ ಬಂಗೇರ ರವರ ಮನೆ ಅಂಗಳಕ್ಕೆ ಶಾಸಕರ ಬೆಂಬಲಿಗರು ಅಕ್ರಮವಾಗಿ ಪ್ರವೇಶಿಸಿ, ಮನೆಯವರಿಗೆ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಯಾನಂದ ಬಂಗೇರ ರವರ ನಿವಾಸಕ್ಕೆ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ರವರು ಭೇಟಿ ನೀಡಿದ್ದು, ಧೈರ್ಯ ತುಂಬಿದರು.

ಬಿಜೆಪಿ ಪ್ರಮುಖರಾದ ಆರ್.ಸಿ. ನಾರಾಯಣ್, ಗೋಪಾಲಕೃಷ್ಣ ಹೇರಳೆ, ನಿತೇಶ್ ಶಾಂತಿವನ,ವಿದ್ಯಾ ಆರ್. ಗೌರಿ, ಸಹಜ್ ರೈ ಬಳಜ್ಜ, ಯುವರಾಜ್ ಪೆರಿಯತ್ತೋಡಿ ಸಹಿತ ಹಲವರು ಉಪಸ್ಥಿತರಿದ್ದರು

ನಮ್ಮಲ್ಲಿ ಚುನಾವಣೇ ಮುಗ್ದಿದೆ ಆದ್ರೆ ನೀತಿ ಸಂಹಿತೆ ಇನ್ನೂ ಜಾರಿಯಲ್ಲಿದೆ

Posted by Vidyamaana on 2024-05-01 17:00:31 |

Share: | | | | |


ನಮ್ಮಲ್ಲಿ ಚುನಾವಣೇ ಮುಗ್ದಿದೆ ಆದ್ರೆ ನೀತಿ ಸಂಹಿತೆ ಇನ್ನೂ ಜಾರಿಯಲ್ಲಿದೆ

ಪುತ್ತೂರು: ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣೆಯ ಪ್ರಕ್ರಿಯೆ ಮುಕ್ತಾಯಗೊಂಡಿದ್ದರೂ ಕೆಲವೊಂದು ಕಾರ್ಯಕ್ರಮಗಳಲ್ಲಿ ನೀತಿ ಸಂಹಿತೆ ಸಡಿಲಗೊಳಿಸಲಾಗಿದೆ. ರಾಜಕೀಯ ಚಟುವಟಿಕೆ ನಡೆಸಲು ಕಡ್ಡಾಯವಾಗಿ ಅನುಮತಿ ಪಡೆದುಕೊಳ್ಳಬೇಕಾಗಿದೆ ಎಂದು ಸಹಾಯಕ ಚುನಾವಣಾಧಿಕಾರಿಗಳಾದ ಪುತ್ತೂರು ಉಪವಿಭಾಗದ ಸಹಾಯಕ ಕಮೀಷನರ್ ಜುಬಿನ್ ಮೊಹಾಪಾತ್ರ ತಿಳಿಸಿದ್ದಾರೆ.

ಅವರು ಮಂಗಳವಾರ ಪುತ್ತೂರು ತಾಲೂಕು ಆಡಳಿತ ಸೌಧದಲ್ಲಿದ ಸಹಾಯಕ ಕಮೀಷನರ್ ಕೋರ್ಟು ಸಭಾಂಗಣದಲ್ಲಿ ಮಧ್ಯಮಗಳಿಗೆ ಮಾಹಿತಿ ನೀಡಿದರು. 

ಪುತ್ತೂರು ಉಪವಿಭಾಗದಲ್ಲಿ ಯಾವುದೇ ಸಮಸ್ಯೆಗಳಿಲ್ಲದೆ ಶಿಸ್ತುಬದ್ಧವಾಗಿ ಚುನಾವಣೆ ನಡೆದಿದೆ. ದೇಶದಲ್ಲಿ ಮತ್ತು ರಾಜ್ಯದಲ್ಲಿ ಚುನಾವಣೆ ನಡೆಯುತ್ತಿರುವ ಹಿನ್ನಲೆಯಲ್ಲಿ ಜು.೬ರ ತನಕ ನೀತಿ ಸಂಹಿತೆ ಎಲ್ಲೆಡೆ ಜಾರಿಯಲ್ಲಿರುತ್ತದೆ.

ಅಜ್ಜ-ಅಜ್ಜಿಯ ಕೊಲೆ ಪ್ರಕರಣ

Posted by Vidyamaana on 2023-07-25 15:13:39 |

Share: | | | | |


ಅಜ್ಜ-ಅಜ್ಜಿಯ ಕೊಲೆ ಪ್ರಕರಣ

ಮಂಗಳೂರು: ಕೇರಳದ ತ್ರಿಶೂರ್ ನಲ್ಲಿ ತನ್ನ ಅಜ್ಜ- ಅಜ್ಜಿಯ ಕೊಲೆ ಮಾಡಿದ್ದ ಆರೋಪಿಯೊಬ್ಬನನ್ನು ಪೊಲೀಸರು ಮಂಗಳೂರಿನಲ್ಲಿ ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ತ್ರಿಶೂರ್ ಜಿಲ್ಲೆಯ ವೈಲತ್ತೂರು ನಿವಾಸಿ ಅಹಮ್ಮದ್ ಅಕ್ಕಲ್ (27 ವರ್ಷ) ಎಂದು ಗುರುತಿಸಲಾಗಿದೆ. ಆರೋಪಿ ಕೇರಳದ ತ್ರಿಶೂರ್ ಜಿಲ್ಲೆಯ ವಡೆಕ್ಕೆಕಾಡ್ ಎಂಬಲ್ಲಿ ಜುಲೈ 23 ರಂದು ರಾತ್ರಿ ತನ್ನ ಅಜ್ಜ ಮತ್ತು ಅಜ್ಜಿಯನ್ನು ಕೊಲೆ ಮಾಡಿ ಅವರ ಚಿನ್ನಾಭರಣಗಳನ್ನು ದೋಚಿ ಮಂಗಳೂರಿಗೆ ಬಂದಿದ್ದ. ಸೋಮವಾರ ಮಂಗಳೂರಿನ ಕಾರ್ ಸ್ಟ್ರೀಟ್ ಪರಿಸರದಲ್ಲಿ ಅನುಮಾನಸ್ಪದ ಚಿನ್ನಾಭರಣಗಳನ್ನು ಮಾರಾಟ ಮಾಡಲು ಯತ್ನಿಸಿದಾಗ ಪೊಲೀಸರಿಗೆ ಸೆರೆಯಾಗಿದ್ದಾನೆ.

ಆತನ ಬಳಿಯಿದ್ದ ಮುತ್ತಿನ ಎರಡು ಎಳೆಯ ಬಂಗಾರದ ಸರ-1, ಸಣ್ಣ ಪದಕವಿರುವ ಚೈನ್ ಹಾಗೂ ಕಿವಿಯೊಲೆ-3, ಉಂಗುರ-5 , ಕೈಬಳೆ-2 , ಮತ್ತು ಪಾಸ್ ಪೋರ್ಟ್ ಹಾಗೂ ಇತರೆ ದಾಖಲಾತಿಗಳನ್ನು ವಶಕ್ಕೆ ಪಡೆಯಲಾಗಿದೆ

ಕ್ರಿಕೆಟ್ ಆಡುತ್ತಲೇ ಹೃದಯಾಘಾತ… ಆಸ್ಪತ್ರೆ ದಾರಿಯಲ್ಲೇ ಕೊನೆಯುಸಿರು

Posted by Vidyamaana on 2024-01-10 14:39:27 |

Share: | | | | |


ಕ್ರಿಕೆಟ್ ಆಡುತ್ತಲೇ ಹೃದಯಾಘಾತ… ಆಸ್ಪತ್ರೆ ದಾರಿಯಲ್ಲೇ ಕೊನೆಯುಸಿರು

ನೋಯ್ಡಾ: ದೇಶದಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದು ಎಲ್ಲರ ಆತಂಕಕ್ಕೆ ಕಾರಣವಾಗಿದೆ. ಪ್ರತಿದಿನ ಹೃದಯಾಘಾತದಿಂದ ಯುವಕರು ಸಾವನ್ನಪ್ಪುತ್ತಿರುವ ವರದಿಗಳು ಬರುತ್ತಿವೆ. ಇದೀಗ ನೋಯ್ಡಾದಿಂದ ಅಂತಹುದೇ ಪ್ರಕರಣವೊಂದು ಬಂದಿದ್ದು, ಕ್ರಿಕೆಟ್ ಮ್ಯಾಚ್ ಆಡುತ್ತಿದ್ದ ವ್ಯಕ್ತಿಯೊಬ್ಬ ರನ್ ತೆಗೆದುಕೊಳ್ಳುವಾಗ ಹಠಾತ್ ಹೃದಯಾಘಾತಕ್ಕೆ ಒಳಗಾಗಿ ಕುಸಿದು ಬಿದ್ದಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ನೋಡಲು ಕ್ಲಿಕ್ ಮಾಡಿ

ಈ ವೇಳೆ ಅಲ್ಲಿದ್ದ ಇತರ ಆಟಗಾರರು ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ದರು ಆದರೆ ಅಷ್ಟರಲ್ಲಿ ವ್ಯಕ್ತಿ ಮೃತಪಟ್ಟಿದ್ದರು ಎನ್ನಲಾಗಿದೆ.ಈ ಘಟನೆಯು ಥಾನಾ ಎಕ್ಸ್‌ಪ್ರೆಸ್‌ವೇ ಪ್ರದೇಶದ ಸೆಕ್ಟರ್ -135 ರಲ್ಲಿ ನಡೆದಿದ್ದು, ಇಲ್ಲಿನ ಕ್ರೀಡಾಂಗಣದಲ್ಲಿ ಶನಿವಾರ ಕೆಲವು ಮಂದಿ ಕ್ರಿಕೆಟ್ ಆಡುತ್ತಿದ್ದರು. ಈ ವೇಳೆ ಉತ್ತರಾಖಂಡ ಮೂಲದ 36 ವರ್ಷದ ವಿಕಾಸ್ ನೇಗಿ ಬ್ಯಾಟಿಂಗ್‌ಗೆ ಬಂದಿದ್ದರು. ಆಟದ ವೇಳೆ ವಿಕಾಸ್ ರನ್ ತೆಗೆದುಕೊಳ್ಳಲು ಓದಿದ್ದಾರೆ ಆದರೆ ಇದರ ನಡುವೆ ಹೃದಯಾಘಾತಕ್ಕೆ ಒಳಗಾಗಿ ಪಿಚ್ ನಲ್ಲೇ ಕುಸಿದು ಬಿದ್ದಿದ್ದಾರೆ. ಈ ವೇಳೆ ಅಲ್ಲಿದ್ದ ಇತರ ಆಟಗಾರರು ವಿಕಾಸ್ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಆದರೆ ಅಷ್ಟೊತ್ತಿಗಾಗಲೇ ತಡವಾಗಿತ್ತು. ವಿಕಾಸ್ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು.ಘಟನೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇದರಲ್ಲಿ ವಿಕಾಸ್ ರನ್ ತೆಗೆದುಕೊಳ್ಳಲು ಓಡಿ ನಂತರ ಪಿಚ್ ಮೇಲೆ ಬೀಳುವುದು ಕಂಡುಬಂದಿದೆ.



Leave a Comment: