ಪೊಲೀಸರಿಂದ ಎಸ್ಕೆಪ್ ಆಗಲು ಹೋಗಿ ನೀರುಪಾಲಾದ ಇಬ್ಬರ ರಕ್ಷಣೆ : ಐವರು ನಾಪತ್ತೆ

ಸುದ್ದಿಗಳು News

Posted by vidyamaana on 2024-07-03 10:25:40 |

Share: | | | | |


ಪೊಲೀಸರಿಂದ ಎಸ್ಕೆಪ್ ಆಗಲು ಹೋಗಿ ನೀರುಪಾಲಾದ ಇಬ್ಬರ ರಕ್ಷಣೆ : ಐವರು ನಾಪತ್ತೆ

ವಿಜಯಪುರ: ಇಸ್ಪೀಟ್ ಆಡುವಾಗ ಪೊಲೀಸರು ದಾಳಿ ನಡೆಸಿದ್ದು, ಈ ವೇಳೆ ಎಸ್ಕೇಪ್ ಆಗಲು ಹೋಗಿ ತೆಪ್ಪ ಮಗುಚಿದ ಘಟನೆ ನಿನ್ನೆ ಬಳೂತಿ ಗ್ರಾಮದ ವ್ಯಾಪ್ತಿಯಲ್ಲಿ ನಡೆದಿದೆ. ಅಲ್ಲಿನ ಆಲಮಟ್ಟಿ ಜಲಾಶಯದ ಕೊಲ್ಹಾರ ಬಳಿಯ ಕೃಷ್ಣಾ ನದಿ ಹಿನ್ನೀರು ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದೆ.

ಎಂಟು ಜನ ತೆಪ್ಪದಲ್ಲಿ ಕೃಷ್ಣಾ ನದಿಯ ಮೂಲಕ ಎಸ್ಕೇಪ್ ಆಗುವ ವೇಳೆ ದುರಂತ ನಡೆದಿದೆ. ಇನ್ನು, ಮೀನುಗಾರರು ಹಾಗೂ ಸ್ಥಳೀಯರ ನೆರವಿನೊಂದಿಗೆ ಇಬ್ಬರ ರಕ್ಷಣೆ ಮಾಡಲಾಗಿದ್ದು ಇಬ್ಬರ ಇಬ್ಬರ ಮೃತದೇಹ ಸಿಕ್ಕಿದೆ.

ಪುಂಡಲೀಕ ಯಂಕಂಚಿ (35), ಮಹಮ್ಮದ್ ತೈಹದ್ ಚೌಧರಿ(45) ಸಾವನ್ನಪ್ಪಿದ್ದಾರೆ. ಸಚಿನ್ ಕಟಬರ್, ಫಾರೂಕ್ ಅಮದ ರಕ್ಷಣೆ ಮಾಡಲಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಎಂಟು ಜನ ಕೊಲ್ಹಾರ ಪಟ್ಟಣದವರಾಗಿದ್ದು, ನೀರುಪಾಲಾದವರು ದಶರಥ( 58),ಮೈಬೂಬ್ ವಾಲಿಕಾರ (35), ರಫೀಕ್ ಬಾಂಬೆ ,(40), ರಫೀಕ ಜಾಲಗಾರರಿಗಾಗಿ(48) ಹುಡುಕಾಟ ನಡೆಯುತ್ತಿದೆ.

 Share: | | | | |


ಸೌಜನ್ಯ ಅತ್ಯಾಚಾರ - ಕೊಲೆ ಪ್ರಕರಣ

Posted by Vidyamaana on 2023-08-04 05:55:04 |

Share: | | | | |


ಸೌಜನ್ಯ ಅತ್ಯಾಚಾರ - ಕೊಲೆ ಪ್ರಕರಣ

ಬೆಳ್ತಂಗಡಿ: ಹನ್ನೊಂದು ವರ್ಷಗಳ ಹಿಂದೆ ಧರ್ಮಸ್ಥಳ ಸಮೀಪದ ನಿವಾಸಿ ಪಾಂಗಳದ ಸೌಜನ್ಯ ಎಂಬ ವಿದ್ಯಾರ್ಥಿನಿಯ ಹತ್ಯೆ ಮಾಡಿದ ನೈಜ ಆರೋಪಿಯನ್ನು ಪತ್ತೆ ಹಚ್ಚಿ ಶಿಕ್ಷಿಸುವ ಕುರಿತಂತೆ ಹಕ್ಕೊತ್ತಾಯ ಮತ್ತು ಪ್ರಕರಣ ಮುಂದಿಟ್ಟು ಧರ್ಮಸ್ಥಳ ಕ್ಷೇತ್ರದ ಮೇಲೆ ಹಾಗೂ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಮೇಲೆ ವೃಥಾರೋಪಗಳಿಂದ ನೊಂದಿರುವ ಆಕ್ರೋಶಿತ ಬಂಧುಗಳು, ನಾಡಿನ ಲಕ್ಷಾಂತರ ಭಕ್ತರು ಸೇರಿ ಅಖಿಲ ಕರ್ನಾಟಕ ಶ್ರೀ ಮಂಜುನಾಥ ಸ್ವಾಮಿ ಭಕ್ತವೃಂದ ವತಿಯಿಂದ ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಮುಂಭಾಗ ಇದೀಗ ಬೃಹತ್ ಸಮಾವೇಶ ಆರಂಭಗೊಂಡಿದೆ.

ಪ್ರಕರಣ ಸಂಬಂಧಿಸಿದಂತೆ ಶ್ರೀ ಕ್ಷೇತ್ರ ಧರ್ಮಸ್ಥಳದ ಅವಹೇಳನ ವಿಚಾರ ಪ್ರತಿಭಟನಾ ಸಮಾವೇಶಕ್ಕೆ ರಾಜ್ಯದ ವಿವಿಧ ಭಾಗದ ಭಕ್ತರು ಆಗಮಿಸಿ ಮಳೆಯ ಮಧ್ಯೆಯೇ ಡಾ.ಡಿ.ವೀರೇಂದ್ರ ಹೆಗ್ಗಡೆ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಜೈಕಾರ ಕೂಗುತ್ತ ಸೌಜನ್ಯಳಿಗೆ ನ್ಯಾಯ ಒದಗಿಸಬೇಕೆಂದು ಹೋರಾಟ ಮುಂದುವರೆದಿದೆ‌.


ಪ್ರತಿಭಟನಾ ಸಮಾವೇಶದ ಬಳಿಕ ಉಜಿರೆ ದೇವಸ್ಥಾನದಿಂದ ಉಜಿರೆ ಎಸ್.ಡಿ.ಎಂ. ಕಾಲೇಜಿನವರೆಗೆ ಭಕ್ತರು ಪ್ರತಿಭಟನಾ ಜಾಥಾ ನಡೆಸಲಿರುವರು. ಬಳಿಕ ಜಿಲ್ಲಾಧಿಕಾರಿ ಮೂಲಕ ಸಿಎಂ ಸಿದ್ಧರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗುವುದು.ಎಸ್.ಕೆ.ಡಿ.ಆರ್.ಡಿ.ಪಿ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎಲ್.ಎಚ್.ಮಂಜಯನಾಥ್ ಮಾತನಾಡಿ, ಇದು ಧಮನಿತರ ಸಮಾವೇಶ, ದಶಕದಿಂದ ನೋವನ್ನು ಅನುಭವಿಸುತ್ತಿರುವವರ ಕಾರ್ಯಕ್ರಮ. ನಮ್ಮ ಸಹನೆಯ ಕಟ್ಟೆ ಮೀರಿ ಒಡೆದಿದ್ದೇವೆ. ಹಂದಿ ಹೊಡೆಯುವ ಎಂಬ ಹುನ್ನಾರವನ್ನು ಜನ ಪ್ರಶ್ನಿಸುವ ಕಾಲ ಬಂದಿದೆ. ನಮ್ಮ ಹೋರಾಟ ನಿಲ್ಲದು, ನಾವು ನಿಮ್ಮೊಂದಿಗೆ ಇದ್ದೇವೆ ಎಂಬ ಘೋಷಣೆಯೊಂದಿಗೆ ಬೃಹತ್ ಹಕ್ಕೊತ್ತಾಯಕ್ಕೆ ಚಾಲನೆ ನೀಡಿದರು.

ಸಮಾವೇಶದಲ್ಲಿ ವಿಧಾನ ಪರಿಷತ್ ಸದಸ್ಯರಾದ ಕೆ.ಪ್ರತಾಪಸಿಂಹ ನಾಯಕ್, ಕೆ.ಹರೀಶ್ ಕುಮಾರ್, ಉಜಿರೆ ಜನಾರ್ದನ ಸ್ವಾಮಿ ದೇವಸ್ಥಾನದ ಆನುವಂಶೀಯ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ, ಮಾಜಿ ಸಚಿವ ಅಭಯಚಂದ್ರ ಜೈನ್, ಜನಜಾಗೃತಿ ವೇದಿಕೆ ರಾಜ್ಯಾಧ್ಯಕ್ಷ ರಾಜಣ್ಣ ಕೊರವಿ, ತಾಲೂಕು ಅಧ್ಯಕ್ಷ ಖಾಸಿಂ ಮಲ್ಲಿಗೆ ಮನೆ, ಮಾಜಿ ಅಧ್ಯಕ್ಷೆ ಶಾರದಾ ರೈ, ತಿಗಳ ಸಮಾಜ ರಾಜ್ಯಾಧ್ಯಕ್ಷ ಜಯರಾಜ್ ಹೊಸಕೋಟೆ, ಸುಂದರ ಗೌಡ ಇಚ್ಚಿಲ, ಎಸ್.ಕೆ.ಡಿ.ಆರ್.ಡಿ.ಪಿ. ಸಿಒಒ ಅನಿಲ್ ಕುಮಾರ್, ಜನಜಾಗೃತಿ ವೇದಿಕೆ ಸ್ಥಾಪಕಾಧ್ಯಕ್ಷ ವಸಂತ ಸಾಲ್ಯಾನ್, ಕಾಂಗ್ರೆಸ್‌ ಹಿರಿಯ ಮುಖಂಡ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಸಹಿತ ಪ್ರಮುಖರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾಣಿಯೂರಿನ ಎಲುವೆಯಲ್ಲಿ ರಿಕ್ಷಾ ಚಾಲಕ ನೇಣಿಕೆ ಶರಣು

Posted by Vidyamaana on 2023-12-28 14:29:54 |

Share: | | | | |


ಕಾಣಿಯೂರಿನ ಎಲುವೆಯಲ್ಲಿ ರಿಕ್ಷಾ ಚಾಲಕ ನೇಣಿಕೆ ಶರಣು

ಕಾಣಿಯೂರು: ಕಾಣಿಯೂರಿನ ಎಲುವೆ ಎಂಬಲ್ಲಿ ರಿಕ್ಷಾ ಚಾಲಕರೋರ್ವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕಾಣಿಯೂರಿನ ಬೆದ್ರಾಜೆ ನಿವಾಸಿ ವಸಂತ (42) ಎಂಬವರ ರಿಕ್ಷಾ ಕಾಣಿಯೂರು ರಸ್ತೆಯ ಎಲುವೆ ಎಂಬಲ್ಲಿ ನಿಲ್ಲಿಸಿತ್ತು. ಅಲ್ಲೇ ಸಮೀಪದ ಕಾಡಿನಲ್ಲಿ ವಸಂತ ಮರಕ್ಕೆ ನೈಲಾನ್ ಹಗ್ಗದಿಂದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಾಸಕರ ಇಂದಿನ ಕಾರ್ಯಕ್ರಮ ಆ 13

Posted by Vidyamaana on 2023-08-13 00:43:48 |

Share: | | | | |


ಶಾಸಕರ ಇಂದಿನ ಕಾರ್ಯಕ್ರಮ ಆ 13

ಪುತ್ತೂರು ಶಾಸಕ ಅಶೋಕ್ ಕುಮಾರ್ ಅವರು ಆಗಸ್ಟ್ 13 ರಂದು

ಬೆಳ್ಳಗ್ಗೆ  10:00 ಆಟಿಡೊಂಜಿ ದಿನ ಕರ್ನಾಟಕ ರಾಜ್ಯ ದೇವಾಡಿಗರ ಸಂಘ,ಮಣ್ಣ ಗುಡ್ಡ ಮಂಗಳೂರು 

ಬೆಳ್ಳಗ್ಗೆ  11

ಆಟಿದ ಕೂಟ ಬಂಟರ ಭವನ  ಸುರತ್ಕಲ್ 

ಮದ್ಯಾಹ್ನ  1:00 ಆಟಿದ ಕೂಟ  ಬಂಟರ ಭವನ  ಪುತ್ತೂರು 

ಮದ್ಯಾಹ್ನ  2:00 ವಿಟ್ಲ ವಲಯ ಬಂಟರ ಸಂಘದ ಆಟಿದ ಕೂಟ ಪುಣಚ ಬೈಲು ಗುತ್ತು 


ಮದ್ಯಾಹ್ನ 2:30 ಕೆಸರು ಗದ್ದೆ ವಿಟ್ಲ 


ಮದ್ಯಾಹ್ನ  3:30 ಕೆಸರು ಗದ್ದೆ  ಬಿಳಿಯೂರು 


ಮದ್ಯಾಹ್ನ  4:00 ಕೆಸರು ಗದ್ದೆ  ಪುಳಿತ್ತಡಿ ಉಪ್ಪಿನಂಗಡಿ 


ಸಂಜೆ 5:30 ಕೆಸರು ಗದ್ದೆ ಕೈಕಾರ

ಕಾರ್ಯಕ್ರಮದ ಲ್ಲಿ ಭಾಗವಹಿಸಲಿದ್ದಾರೆ

ಪ್ರಜ್ವಲ್​ ರೇವಣ್ಣ ಅಶ್ಲೀಲ ವಿಡಿಯೋ ಕೇಸ್: ಎಚ್​ಡಿಕೆ , ದೇವೇಗೌಡ ಹೇಳಿದ್ದೇನು ಗೊತ್ತಾ?

Posted by Vidyamaana on 2024-04-28 14:01:13 |

Share: | | | | |


ಪ್ರಜ್ವಲ್​ ರೇವಣ್ಣ ಅಶ್ಲೀಲ ವಿಡಿಯೋ ಕೇಸ್: ಎಚ್​ಡಿಕೆ , ದೇವೇಗೌಡ ಹೇಳಿದ್ದೇನು ಗೊತ್ತಾ?

ಬೆಂಗಳೂರು, (ಏಪ್ರಿಲ್ 28): ಸಂಸದ ಪ್ರಜ್ವಲ್ ರೇವಣ್ಣ (Prajwal Revanna ) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ವೈರಲ್ ಪ್ರಕರಣ(Prajwal Revanna Scandal Case) ತೀವ್ರ ಸ್ವರೂಪ ಪಡೆದುಕೊಂಡಿದ್ದು, ಈ ಪ್ರಕರಣದ ತನಿಖೆಯನ್ನು ಎಸ್​ಐಟಿಗೆ ವಹಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ, ಇನ್ನು ಈ ಬಗ್ಗೆ ಪ್ರಜ್ವಲ್ ರೇವಣ್ಣ ಅವರ ಚಿಕ್ಕಪ್ಪ, ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ (HD Kumaraswamy) ಅವರು ಮೊದಲ ಬಾರಿಗೆ ಮಾಧ್ಯಮಗಳ ಜೊತೆ ಮಾತನಾಡಿದ್ದು, ಉಪ್ಪು ತಿಂದವನು ನೀರು ಕುಡಿಯಲೇಬೇಕು ಎಂದು ಖಡಕ್ ಆಗಿ ಹೇಳಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ನಾನಾಗಲಿ ದೇವೇಗೌಡರಾಗಲಿ ಎಂದೂ ಸಹ ಹೆಣ್ಣು ಮಕ್ಕಳ ವಿಚಾರದಲ್ಲಿ ಅತ್ಯಂತ ಗೌರವಯುತವಾಗಿ ನಡೆದುಕೊಂಡಿದ್ದೇವೆ. ಯಾರಾದರೂ ಕಷ್ಟ ಹೇಳಿಕೊಂಡು ಬಂದರೆ ಅವರ ಕಷ್ಟ ಪರಿಹರಿಸಿ ಕಳುಹಿಸಿದ್ದೇವೆ. ನಾವಂತೂ ಮಹಿಳೆಯರಿಗೆ ಅತ್ಯಂತ ಹೆಚ್ಚಿನ ಗೌರವ ನೀಡಿದ್ದೇವೆ ಎಂದು ಹೇಳಿದರು.

ಟಿಕೆಟ್ ಕೈತಪ್ಪಿದ್ದಕ್ಕೆ ಎಂಡಿಎಂಕೆ ಸಂಸದ ಆತ್ಮಹತ್ಯೆಗೆ ಯತ್ನ ಪ್ರಕರಣ ; ಹೃದಯಘಾತದಿಂದ ಆಸ್ಪತ್ರೆಯಲ್ಲಿ ನಿಧನ

Posted by Vidyamaana on 2024-03-28 13:50:10 |

Share: | | | | |


ಟಿಕೆಟ್ ಕೈತಪ್ಪಿದ್ದಕ್ಕೆ ಎಂಡಿಎಂಕೆ ಸಂಸದ ಆತ್ಮಹತ್ಯೆಗೆ ಯತ್ನ ಪ್ರಕರಣ ; ಹೃದಯಘಾತದಿಂದ ಆಸ್ಪತ್ರೆಯಲ್ಲಿ ನಿಧನ

ತಮಿಳುನಾಡು, ಮಾ 29: ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಸ್ಥಿತಿಯಲ್ಲಿದ್ದ ಮರುಮಲರ್ಚಿ ದ್ರಾವಿಡ ಮುನ್ನೇತ್ರ ಕಳಗಂ (ಎಂಡಿಎಂಕೆ) ಸಂಸದ ಗಣೇಶಮೂರ್ತಿ ಗುರುವಾರ ಮುಂಜಾನೆ ಹೃದಯಾಘಾತದಿಂದ ನಿಧನರಾಗಿದ್ದಾರೆ. 

ಗಣೇಶ್ ಮೂರ್ತಿ ಅವರು ಎಂಡಿಎಂಕೆ ಪಕ್ಷದ ಹಿರಿಯ ನಾಯಕರಲ್ಲಿ ಒಬ್ಬರಾಗಿದ್ದರು. 2019ರ ಲೋಕಸಭೆ ಚುನಾವಣೆಯಲ್ಲಿ ಈರೋಡೆ ಕ್ಷೇತ್ರದಲ್ಲಿ ಡಿಎಂಕೆ ಮೈತ್ರಿಕೂಟದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸಂಸದರಾಗಿದ್ದರು.2024ರ ಚುನಾವಣೆಯಲ್ಲಿ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದರು ಆದರೆ ಪಕ್ಷ ಯಾವುದೇ ಇತರ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳದ ಹಿನ್ನೆಲೆಯಲ್ಲಿ ಸ್ವತಂತ್ರವಾಗಿ ಸ್ಪರ್ಧೆಗೆ ಇಳಿದಿದೆ ಇದರಿಂದ ಗಣೇಶ್ ಅವರು ಟಿಕೆಟ್ ವಂಚಿತರಾಗಿದ್ದರು ಇದರಿಂದ ಹತಾಶೆಗೊಳಗಾದ ಅವರು ಮಾರ್ಚ್ 24 ರಂದು ಆತ್ಮಹತ್ಯೆಗೆ ಯತ್ನಿಸಿದ್ದರು ಗಂಭೀರ ಸ್ಥಿತಿಯಲ್ಲಿದ್ದ ಅವರು ಇಂದು ಮುಂಜಾನೆ ಹಠಾತ್ ಹೃದಯಾಘಾತಗೊಂಡು ನಿಧನಹೊಂದಿದ್ದಾರೆ ಎಂದು ಆಸ್ಪತ್ರೆ ಮೂಲಗಳು ಮಾಹಿತಿ ನೀಡಿವೆ.

ಪ್ರವಾಸದ ವೇಳೆ ವಿದ್ಯಾರ್ಥಿಯೊಂದಿಗೆ ಶಿಕ್ಷಕಿ ಅಸಭ್ಯ ವರ್ತನೆ; ಕಿಸ್‌ ಕೊಟ್ಟ ಫೋಟೋ ವೈರಲ್

Posted by Vidyamaana on 2023-12-27 14:43:49 |

Share: | | | | |


ಪ್ರವಾಸದ ವೇಳೆ ವಿದ್ಯಾರ್ಥಿಯೊಂದಿಗೆ ಶಿಕ್ಷಕಿ ಅಸಭ್ಯ ವರ್ತನೆ; ಕಿಸ್‌ ಕೊಟ್ಟ ಫೋಟೋ ವೈರಲ್

ಚಿಕ್ಕಬಳ್ಳಾಪುರ: ಶೈಕ್ಷಣಿಕ ಅಧ್ಯಯನ ಪ್ರವಾಸಕ್ಕೆ ತೆರಳಿದ್ದ ವೇಳೆ ಸರ್ಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕಿಯೊಬ್ಬರು ತನ್ನ ಮಗ ವಯಸ್ಸಿನ ಅಪ್ರಾಪ್ತ ಬಾಲಕನೊಂದಿಗೆ ಅಸಭ್ಯವಾಗಿ ವರ್ತಿಸಿರುವುದಲ್ಲದೇ ಆತನೊಂದಿಗೆ ರೊಮ್ಯಾಟಿಕ್ ಆಗಿ ವರ್ತಿಸಿ ವಿಡಿಯೋ ಹಾಗೂ ಚಿತ್ರಗಳನ್ನು ತನ್ನ ಮೊಬೈಲ್‌ನಲ್ಲಿ ಸೆರೆ ಹಿಡಿದಿರುವ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮುರಗಮಲ್ಲ ಸರ್ಕಾರಿ ಪ್ರೌಢ ಶಾಲೆಯಲ್ಲಿ ನಡೆದಿದೆ.


ಇತ್ತೀಚೆಗೆ ಶಾಲೆಯಿಂದ ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ವೇಳೆ ಶಾಲಾ ಬಾಲಕನೊಂದಿಗೆ ಮುಖ್ಯ ಶಿಕ್ಷಕಿ ಈ ರೀತಿ ವರ್ತಿಸಿದ್ದು, ಇದೀಗ ಆ ಪೋಟೋಗಳು ಸೋರಿಕೆ ಆಗಿ ವಿದ್ಯಾರ್ಥಿ ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ.ಶಾಲೆಯ ಮುಖ್ಯ ಶಿಕ್ಷಕಿ  ಈ ರೀತಿ ತಾನೊಬ್ಬ ಗುರು ಎಂಬುದನ್ನು ಮರೆತು ಶಾಲೆಯ ವಿದ್ಯಾರ್ಥಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ . ಈ ವೇಳೆ ಬಾಲಕನೊಂದಿಗೆ ವಿವಿಧ ಭಂಗಿಗಳಲ್ಲಿ ಪೋಟೋ ತೆಗೆಸಿಕೊಂಡಿರುವ ಶಿಕ್ಷಕಿ, ವಿದ್ಯಾರ್ಥಿ ಕೂಡ ಶಿಕ್ಷಕಿಯರನ್ನು ಮುದ್ದಾಡಿದ್ದು, ಶಿಕ್ಷಕಿ ಕೂಡ ಬಾಲಕನಿಗೆ ಕಿಸ್ ಕೊಟ್ಟಿರುವ ಫೋಟೋಗಳು ಈಗ ಎಲ್ಲೆಡೆ ವೈರಲ್ ಆಗಿದೆ.ಶಿಕ್ಷಕಿಯ ವರ್ತನೆ ಬಗ್ಗೆ ಪೋಷಕರು ಕಿಡಿಕಾರಿದ್ದಾರೆ.


ಅಲ್ಲದೇ ಬುಧವಾರ ಬೆಳಗ್ಗೆ ಈ ವಿಷಯ ತಿಳಿಯುತ್ತಿದ್ದಂತೆ ವಿದ್ಯಾರ್ಥಿ ಪೋಷಕರು ಕೂಡ ಶಾಲೆ ಬಳಿ ತೆರಳಿ ಶಿಕ್ಷಕಿ ವಿರುದ್ದ ಆಕ್ರೋಶಕ್ಕೆ ವ್ಯಕ್ತಪಡಿಸಿದ್ದಾರೆ. ಇನ್ನೂ ಘಟನೆಯ ಬಗ್ಗೆ ಶಾಲೆ ಪೋಷಕರು ಕ್ಷೇತ್ರ ಶಿಕ್ಷಣಾಧಿಕಾರಿ ಗಮನಕ್ಕೆ ತಂದಿದ್ದಾರೆ.



Leave a Comment: