ಶಾಲಾ ಆವರಣದಲ್ಲಿ ಸಾರ್ವಜನಿಕ ಕೃಷ್ಣಾಷ್ಠಮಿ, ಗಣೇಶೋತ್ಸವ, ಹಬ್ಬಗಳ ಆಚರಣೆಗೆ ನಿರ್ಬಂಧ : ಬಿಜೆಪಿ ಆಡಳಿತಾವಧಿಯಲ್ಲೇ ಆದೇಶ

ಸುದ್ದಿಗಳು News

Posted by vidyamaana on 2024-07-24 17:19:41 |

Share: | | | | |


ಶಾಲಾ ಆವರಣದಲ್ಲಿ ಸಾರ್ವಜನಿಕ ಕೃಷ್ಣಾಷ್ಠಮಿ, ಗಣೇಶೋತ್ಸವ, ಹಬ್ಬಗಳ ಆಚರಣೆಗೆ ನಿರ್ಬಂಧ : ಬಿಜೆಪಿ ಆಡಳಿತಾವಧಿಯಲ್ಲೇ ಆದೇಶ

ರಾಜ್ಯದ ಸರಕಾರಿ ಶಾಲೆ ಮತ್ತು ಕಾಲೇಜು ಕ್ಯಾಂಪಸ್‌ ಗಳಲ್ಲಿ ಧಾರ್ಮಿಕ ಆಚರಣೆ ಸೇರಿದಂತೆ ಶೈಕ್ಷಣಿಕೇತರ ಚಟುವಟಿಕೆ ನಡೆಸದಂತೆ ರಾಜ್ಯ ಸರಕಾರ ಆದೇಶ ಹೊರಡಿಸಿದ್ದು, ಇದು ಭಾರೀ ಸಂಚಲನವನ್ನೇ ಹುಟ್ಟುಹಾಕಿದೆ. ಇದರಿಂದ ಸಾರ್ವಜನಿಕ ಕೃಷ್ಣಾಷ್ಟಮಿ, ಗಣೇಶೋತ್ಸವ, ಶಾರದೋತ್ಸವ ಆಚರಣೆಯ ಸಂಘಟಕರು ಗೊಂದಲದಲ್ಲಿದ್ದಾರೆ.

ಬೆಂಗಳೂರು ಶಾಲಾ ಶಿಕ್ಷಣ ಇಲಾಖೆ ಆಯುಕ್ತರ ಕಚೇರಿಯಿಂದ 2013ರ ಫೆ.7 ರಂದು ಮತ್ತು 2023ರ ಡಿ.1ರಂದು ರಾಜ್ಯದ ಎಲ್ಲ ಡಿಡಿಪಿಐ ಕಚೇರಿಗಳಿಗೆ ಖಾಸಗಿ ಕಾರ್ಯಕ್ರಮಗಳಿಗೆ ಶಾಲಾ ಕಟ್ಟಡ ಅಥವಾ ಶಾಲಾ ಮೈದಾನ ಅನುಮತಿ ನೀಡಬಾರದೆಂದು ಸುತ್ತೋಲೆ ಬಂದಿತ್ತು. ಈ ಆಧಾರದಲ್ಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಡಿಡಿಪಿಐ ವೆಂಕಟೇಶ್ ಪಟಗಾರ ಅವರು ಜು.16ರಂದು ಜ್ಞಾಪನಾ ಪತ್ರವನ್ನು ಎಲ್ಲ ಬಿಇಒಗಳಿಗೆ ರವಾನಿಸಿದ್ದಾರೆ.

ಜ್ಞಾಪನಾ ಪತ್ರದಲ್ಲಿ ಏನಿದೆ?

ಸರಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳಲ್ಲಿ, ಶಾಲಾ ಮೈದಾನ ಅಥವಾ ಆವರಣವನ್ನು ಶೈಕ್ಷಣಿಕೇತರ ಚಟುವಟಿಕೆ ಅಥವಾ ಉದ್ದೇಶಕ್ಕೆ ಬಳಸಬಾರದು ಮತ್ತು ಅನುಮತಿಯನ್ನು ನೀಡಬಾರದೆಂದು ಸೂಚಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಸಂಬಂಧಿತ ಶಾಲಾ ಮುಖ್ಯಸ್ಥರೇ ಹೊಣೆಯಾಗುತ್ತಾರೆ ಎಂದು ಜ್ಞಾಪನಾ ಪತ್ರದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.

ಬಿಜೆಪಿಯಿಂದ ಹೋರಾಟ :

ರಾಜ್ಯಾದ್ಯಂತ ಹಲವು ದಶಕಗಳಿಂದ ಶಾಲೆಯ ಕ್ಯಾಂಪಸ್, ಶಾಲಾ ಕಟ್ಟಡದಲ್ಲಿ ಕೃಷ್ಣಾಷ್ಟಮಿ, ಗಣೇಶೋತ್ಸವ, ಶಾರದೋತ್ಸವ ಆಚರಿಸಿಕೊಂಡು ಬರಲಾಗುತ್ತಿದೆ. ಆದರೆ ಈಗ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರ ರಾಜಕೀಯ ಮಾಡಲು ಹೊರಟಿದ್ದು, ಶಾಲಾ ವಠಾರದಲ್ಲಿ ಧಾರ್ಮಿಕ ಆಚರಣೆ ನಡೆಸದಂತೆ ಆದೇಶ ಹೊರಡಿಸಿದೆ. ಇದು ಖಂಡನೀಯವಾಗಿದ್ದು, ಈ ಹಿಂದೆ ನಿಗದಿತ ಸ್ಥಳದಲ್ಲೇ ಕಾರ್ಯಕ್ರಮ ಆಯೋಜಿಸುತ್ತೇವೆ. ಇದನ್ನು ತಡೆಯಲು ಬಂದರೆ ಸುಮ್ಮನಿರಲ್ಲ ಎಂದು ಬಿಜೆಪಿ ತಾಕೀತು ಮಾಡಿದೆ. ಇದೇ ರೀತಿ ಜಿಲ್ಲಾದ್ಯಂತ ಹೋರಾಟ ನಡೆಯುತ್ತಿದೆ.

ಬಿಜೆಪಿ ಸರಕಾರದಲ್ಲೇ ಆದೇಶ :

2013ರಲ್ಲಿ ರಾಜ್ಯದಲ್ಲಿ ಬಿಜೆಪಿ ಸರಕಾರ ಆಡಳಿತದಲ್ಲಿದ್ದು, ಜಗದೀಶ್ ಶೆಟ್ಟರ್ ಮುಖ್ಯಮಂತ್ರಿಯಾಗಿದ್ದ ಸಂದರ್ಭ ಶಿಕ್ಷಣೇತರ ಚಟುವಟಿಕೆ ನಡೆಸದಂತೆ ಆದೇಶ ಹೊರಡಿಸಿತ್ತು ಆದೇ ಆದೇಶದಡಿ ನಿಯಮದಂತೆ ದಕ್ಷಿಣ ಕನ್ನಡ ಶಿಕ್ಷಣಾಧಿಕಾರಿಯವರು ಬಿಇಒ ಮೂಲಕ ಜ್ಞಾಪನಾ ಪತ್ರ ಹೊರಡಿಸಿದ್ದಾರೆ. ಆದರೆ ಅಧಿಕಾರದಲ್ಲಿದ್ದಾಗ ಆದೇಶ ಹೊರಡಿಸಿದ್ದ ಬಿಜೆಪಿಯವರೇ ಈಗ ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಇದರಿಂದ ಈ ವಿವಾದವೂ ಜಿಲ್ಲೆಯಲ್ಲಿ ದಿನ ಹೋದಂತೆ ರಾಜಕೀಯ ಬಣ್ಣ ಪಡೆದು ಕಾವೇರತೊಡಗಿದೆ.

 Share: | | | | |


ಕೇಂದ್ರ ಸಚಿವೆ ಸ್ಮೃತಿ ಇರಾನಿ ಅಮೇಥಿ ಲೋಕಸಭಾ ಕ್ಷೇತ್ರದಿಂದ ಹೀನಾಯ ಸೋಲು

Posted by Vidyamaana on 2024-06-04 21:05:34 |

Share: | | | | |


ಕೇಂದ್ರ ಸಚಿವೆ ಸ್ಮೃತಿ ಇರಾನಿ ಅಮೇಥಿ ಲೋಕಸಭಾ ಕ್ಷೇತ್ರದಿಂದ ಹೀನಾಯ ಸೋಲು

ಲಕ್ನೋ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಉತ್ತರಪ್ರದೇಶದಲ್ಲಿ ಬಿಜೆಪಿಗೆ ದೊಡ್ಡ ಆಘಾತ ಉಂಟಾಗಿದೆ. ಕಳೆದ ಎರಡು ಸರ್ಕಾರಗಳಲ್ಲಿ ಬಿಜೆಪಿಯಲ್ಲಿ ಶಾಶ್ವತ ಸ್ಥಾನ ಪಡೆದಿರುವ ಪಕ್ಷದ ದೊಡ್ಡ ನಾಯಕಿ ಮತ್ತು ಕೇಂದ್ರ ಸಚಿವೆ ಸ್ಮೃತಿ ಇರಾನಿ ಅಮೇಥಿ ಲೋಕಸಭಾ ಕ್ಷೇತ್ರದಿಂದ ಸೋಲನುಭವಿಸಿದ್ದಾರೆ.

ತಿಂಗಳಿಗೆ 8,500ರೂ ಪಡೆಯಲು ಪೋಸ್ಟ್ ಆಫೀಸ್ ಮುಂದೆ ಸಾಲುಗಟ್ಟಿ ಮಹಿಳೆಯರು

Posted by Vidyamaana on 2024-05-29 16:19:09 |

Share: | | | | |


ತಿಂಗಳಿಗೆ 8,500ರೂ ಪಡೆಯಲು ಪೋಸ್ಟ್ ಆಫೀಸ್ ಮುಂದೆ ಸಾಲುಗಟ್ಟಿ ಮಹಿಳೆಯರು

ಬೆಂಗಳೂರು : ಅಧಿಕಾರಕ್ಕೆ ಬಂದರೆ ರಕ್ಷಣಾ ಸೇವೆಗಳ ನೇಮಕಾತಿಯ ಅಗ್ನಿಪಥ್ ಯೋಜನೆಯನ್ನು ರದ್ದುಗೊಳಿಸಿ, ಪ್ರತಿ ತಿಂಗಳು ಪ್ರತಿ ಮಹಿಳೆಯ ಖಾತೆಗೆ 8,500 ರೂ.ಗಳನ್ನು ಜಮಾ ಮಾಡಲಾಗುವುದು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸೋಮವಾರ ಹೇಳಿದ್ದಾರೆ. ಬಿಹಾರದಲ್ಲಿ ಮಹಾಘಟಬಂಧನ್ ಅಭ್ಯರ್ಥಿಗಳ ಪರವಾಗಿ ಬ್ಯಾಕ್ ಟು ಬ್ಯಾಕ್ ಚುನಾವಣಾ ರ್ಯಾಲಿಗಳನ್ನುದ್ದೇಶಿಸಿ ಮಾತನಾಡಿದ ಅವರು, ದೇಶಾದ್ಯಂತ ಇಂಡಿಯಾ ಮೈತ್ರಿ ಕೂಟದ ಪರವಾಗಿ ಸ್ಪಷ್ಟ ಅಲೆ ಇರುವುದರಿಂದ ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಲು ಸಾಧ್ಯವಾಗುವುದಿಲ್ಲ ಎಂದು ಪ್ರತಿಪಾದಿಸಿದರು.

ಬೆಂಗಳೂರು ಕೋಟ್ಯಧಿಪತಿ ಉದ್ಯಮಿಗೆ ಹನಿಟ್ರ್ಯಾಪ್‌ ಮಾಡಿ ಬ್ಲ್ಯಾಕ್‌ಮೇಲ್

Posted by Vidyamaana on 2023-12-17 08:56:34 |

Share: | | | | |


ಬೆಂಗಳೂರು ಕೋಟ್ಯಧಿಪತಿ ಉದ್ಯಮಿಗೆ ಹನಿಟ್ರ್ಯಾಪ್‌ ಮಾಡಿ ಬ್ಲ್ಯಾಕ್‌ಮೇಲ್

ಬೆಂಗಳೂರು: ಉದ್ಯಮಿಯೊಬ್ಬನನ್ನು ಹನಿಟ್ರ್ಯಾಪ್‌ಗೆ ಬೀಳಿಸಿ ಹಣಕ್ಕೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಗಂಡ-ಹೆಂಡತಿ ಮತ್ತು ಗ್ಯಾಂಗ್ ಪೊಲೀಸರ ಬಲೆಗೆ ಬಿದ್ದಿದೆ.


ಖಲೀಮ್ ಮತ್ತು ಸಭಾ ದಂಪತಿ ಸೇರಿಕೊಂಡು ಉದ್ಯಮಿಗೆ ಗಾಳ ಹಾಕಿ ಹನಿಟ್ರ‍್ಯಾಪ್ ಮಾಡಿದ್ದರು. ಎರಡು ತಿಂಗಳ ಹಿಂದೆ ಅತಾವುಲ್ಲಾ ಎಂಬವರನ್ನು ಖಲೀಮ್ ಪರಿಚಯ ಮಾಡಿಕೊಂಡಿದ್ದ. ಈ ವೇಳೆ ಮೊಬೈಲ್ ನಂಬರ್ ಪಡೆದುಕೊಂಡಿದ್ದ. ಕೆಲ ದಿನಗಳ ಬಳಿಕ ಅತಾವುಲ್ಲಾಗೆ ಕರೆ ಮಾಡಿ ಸಭಾಳನ್ನ ಪರಿಚಯಿಸಿದ್ದ.


ಖಲೀಮ್ ಮತ್ತು ಸಭಾ ದಂಪತಿ ಸೇರಿಕೊಂಡು ಉದ್ಯಮಿಗೆ ಗಾಳ ಹಾಕಿ ಹನಿಟ್ರ‍್ಯಾಪ್ ಮಾಡಿದ್ದರು. ಎರಡು ತಿಂಗಳ ಹಿಂದೆ ಅತಾವುಲ್ಲಾ ಎಂಬವರನ್ನು ಖಲೀಮ್ ಪರಿಚಯ ಮಾಡಿಕೊಂಡಿದ್ದ. ಈ ವೇಳೆ ಮೊಬೈಲ್ ನಂಬರ್ ಪಡೆದುಕೊಂಡಿದ್ದ. ಕೆಲ ದಿನಗಳ ಬಳಿಕ ಅತಾವುಲ್ಲಾಗೆ ಕರೆ ಮಾಡಿ ಸಭಾಳನ್ನ ಪರಿಚಯಿಸಿದ್ದ.


ಈಕೆ ವಿಧವೆ ಜೊತೆಯಲ್ಲಿರು ಅಂತಾ ಪರಿಚಯಿಸಿದ್ದ. ಈ ವೇಳೆ ಅತಾವುಲ್ಲಾನನ್ನು ಹನಿಟ್ರ್ಯಾಪ್ ಮಾಡಿದ್ದಾರೆ. ಕಳೆದ ನವೆಂಬರ್ 14 ರಂದು ಅತಾವುಲ್ಲಾಗೆ ಫೋನ್ ಮಾಡಿದ್ದ ಸಭಾ,‌ ‘ಆರ್.ಆರ್. ನಗರದ ಬಳಿ ಬಾ.. ಬರುವಾಗ ರೂಂ ಬುಕ್ ಮಾಡಲು ಆಧಾರ್ ತರುವಂತೆ’ ಹೇಳಿದ್ದಳು. ಪ್ಲ್ಯಾನ್‌ನಂತೆ ಇತ್ತ ಸಭಾ ಹಾಗು ಅತಾವುಲ್ಲಾ ಜೊತೆಯಲ್ಲಿದ್ದಾಗ ಗಂಡನ ಹನಿಟ್ರ‍್ಯಾಪ್ ಗ್ಯಾಂಗ್ ಎಂಟ್ರಿ ಕೊಟ್ಟಿತ್ತು.


ಒಬೇದ್ ಖಾನ್ ಎಂಬಾತ ಇಬ್ಬರನ್ನ ತಡೆದು ಸೀನ್ ಕ್ರಿಯೇಟ್ ಮಾಡಿದ್ದಾನೆ. ಖಲೀಮ್, ರಕೀಬ್, ಅತೀಕ್‌ನನ್ನ ಸ್ಥಳಕ್ಕೆ ಕರೆಸಿ ಧಮ್ಕಿ ಹಾಕಿದ್ದ. ನಿಮ್ಮ ವಿಚಾರ ಮನೆಯವರಿಗೆ ತಿಳಿಸುವುದಾಗಿ ಹೆದರಿಸಿ ಜೇಬಲ್ಲಿದ್ದ 4,000 ರೂ. ಹಣವನ್ನು ಗ್ಯಾಂಗ್ ಕಸಿದಿತ್ತು. ಅಲ್ಲದೆ 6 ಲಕ್ಷ ರೂ. ಹಣ ತರುವಂತೆ ಧಮ್ಕಿ ಹಾಕಿತ್ತು.


ಈ ವೇಳೆ ಅತೀವುಲ್ಲಾ ಅಲ್ಲೇ ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಈ ವೇಳೆ ಹೋಟೆಲ್‌ಗೆ ದಾಳಿ ಮಾಡಿದ ಸಿಸಿಬಿ ಪೊಲೀಸರು, ರೆಡ್ ಹ್ಯಾಂಡ್ ಆಗಿ ಹನಿಟ್ರ್ಯಾಪ್ ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ.


ಆರೋಪಿಗಳು ಸರಣಿ ಹನಿ ಟ್ರ್ಯಾಪಿಂಗ್ ಮತ್ತು ಸುಲಿಗೆ ಪ್ರಕರಣಗಳಲ್ಲಿ ಭಾಗಿಯಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಆರ್‌ಆರ್ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಕಲಾಪದಲ್ಲಿ ಎಡವಟ್ಟು ಮಾಡಿದ ಪ್ರದೀಪ್ ಈಶ್ವರ್

Posted by Vidyamaana on 2023-07-06 13:46:07 |

Share: | | | | |


ಕಲಾಪದಲ್ಲಿ ಎಡವಟ್ಟು ಮಾಡಿದ ಪ್ರದೀಪ್ ಈಶ್ವರ್

ಬೆಂಗಳೂರು : ಮಂಡ್ಯ ಜಿಲ್ಲೆ ನಾಗಮಂಗಲ ಡಿಪೋ ಎದುರು ಸಾರಿಗೆ ಬಸ್ ಚಾಲಕ ಜಗದೀಶ್ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಸದನದ ಬಾವಿಗಿಳಿದು ಧರಣಿ ನಡೆಸಿದರು. ಈ ವೇಳೆ ಮಾತನಾಡಿದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಎಡವಟ್ಟು ಮಾಡಿಕೊಂಡದ್ದು ಗಮನ ಸೆಳೆಯಿತು.ಒಂದು ಸಾವಿಗೆ ಇವರು ಇಷ್ಟೆಲ್ಲಾ ಹೋರಾಟ ಮಾಡುತ್ತಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಸಾವಿರಾರು ಜನ ಪ್ರಾಣ ಕಳೆದುಕೊಂಡರು, ಅವರಿಗೂ ನ್ಯಾಯ ಕೊಡಿಸಲು ಹೋರಾಟ ಮಾಡಬೇಕಲ್ಲ ಎಂದರು. ಈ ವೇಳೆ ಸ್ಪೀಕರ್ ಯು.ಟಿ.ಖಾದರ್ , ಎ ..ಪ್ರದೀಪ್..ಸಾವು ಆಗಲಿಲ್ಲ ಮಾರಾಯ .ಕುತ್ಕೋ ನೀನು ಎಂದರುಸ್ಪೀಕರ್ ಯು.ಟಿ.ಖಾದರ್ ಅವರ ಮನವಿಯ ಬಳಿಕ ಪ್ರತಿಪಕ್ಷಗಳ ಶಾಸಕರು ಧರಣಿ ಕೈಬಿಟ್ಟು ತಮ್ಮ ತಮ್ಮ ಸ್ಥಾನಗಳಲ್ಲಿ ಕುಳಿತುಕೊಂಡರು. ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿ ಸಾರಿಗೆ ಬಸ್ ಚಾಲಕ ಜಗದೀಶ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಿ ಜೆಡಿಎಸ್ ಶಾಸಕರು ಸಚಿವ ಚೆಲುವರಾಯ ಸ್ವಾಮಿ ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಮದ್ಯಪ್ರಿಯರಿಗೆ ಗುಡ್ ನ್ಯೂಸ್: ಆಗಸ್ಟ್ 15ರಿಂದ ದೇಶಾದ್ಯಂತ ಹುಲಿ ರಮ್ ಲಭ್ಯ!

Posted by Vidyamaana on 2024-08-13 05:39:06 |

Share: | | | | |


ಮದ್ಯಪ್ರಿಯರಿಗೆ ಗುಡ್ ನ್ಯೂಸ್: ಆಗಸ್ಟ್ 15ರಿಂದ ದೇಶಾದ್ಯಂತ ಹುಲಿ ರಮ್ ಲಭ್ಯ!

ಬೆಂಗಳೂರು : ಹುಲಿ ಅನ್ನೋ ಮದ್ಯ ಇದೀಗ ಕರ್ನಾಟಕ ಮಾತ್ರವಲ್ಲ, ದೇಶ ವಿದೇಶಗಳಲ್ಲೂ ಸಂಚಲನ ಸೃಷ್ಟಿಸಲು ಸಜ್ಜಾಗಿದೆ. ಭಾರತದಲ್ಲಿ ಅದರಲ್ಲೂ ಕರ್ನಾಟಕದಲ್ಲಿ ತಯಾರಾದ ಇಂಡಿಯಾದ ಮೊದಲ ಜಾಗರಿ ರಮ್ ಇದಾಗಿದೆ.ದೇಹದ ತೂಕ ಕಡಿಮೆ ಮಾಡಲು ಈ ಕೋಕಂ ಜ್ಯೂಸ್ ಕುಡಿಯಿರಿ!

ಅಲೋಕ್ ಕುಮಾರ್ ಸೇರಿ ನಾಲ್ವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ

Posted by Vidyamaana on 2023-06-08 03:01:05 |

Share: | | | | |


ಅಲೋಕ್ ಕುಮಾರ್ ಸೇರಿ ನಾಲ್ವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ


ಬೆಂಗಳೂರು, ಜೂ.7: ರಾಜ್ಯ ಸರಕಾರವು ಅಲೋಕ್ ಕುಮಾರ್ ಸೇರಿ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಬುಧವಾರ ಆದೇಶ ಹೊರಡಿಸಿದೆ.

ಕಾನೂನು ಮತ್ತು ಸುವ್ಯವಸ್ಥೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿದ್ದ ಅಲೋಕ್ ಕುಮಾರ್ ಅವರನ್ನು ಸಂಚಾರ ಮತ್ತು ರಸ್ತೆ ಸುರಕ್ಷತೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರನ್ನಾಗಿ ವರ್ಗಾಯಿಸಲಾಗಿದೆ. 

ಆಡಳಿತ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿದ್ದ ಉಮೇಶ್ ಕುಮಾರ್ ಅವರನ್ನು ಅಪರಾಧಗಳು ಮತ್ತು ತಾಂತ್ರಿಕ ಸೇವೆಗಳ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರನ್ನಾಗಿ ವರ್ಗಾಯಿಸಲಾಗಿದೆ.

ಅಪರಾಧಗಳು ಮತ್ತು ತಾಂತ್ರಿಕ ಸೇವೆಗಳ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿದ್ದ ಆರ್. ಹಿತೇಂದ್ರ ಅವರನ್ನು ಕಾನೂನು ಮತ್ತು ಸುವ್ಯವಸ್ಥೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರನ್ನಾಗಿ ನಿಯೋಜಿಸಲಾಗಿದೆ. 

ಪೊಲೀಸ್ ಕಂಪ್ಯೂಟರ್ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿದ್ದ ಸೌಮೇಂದು ಮುಖರ್ಜಿ ಅವರನ್ನು ಆಡಳಿತ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರನ್ನಾಗಿ ವರ್ಗಾಯಿಸಲಾಗಿದೆ. ಇವರುಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಆದೇಶದಲ್ಲಿ ತಿಳಿಸಲಾಗಿದೆ.

Recent News


Leave a Comment: