ಪುತ್ತೂರು: ಲಾರಿ - ಸ್ಕೂಟರ್ ನಡುವೆ ಭೀಕರ ಅಪಘಾತ :ಮಿತ್ತೂರು ನಿವಾಸಿ ಶಿವರಾಮ ನಾಯ್ಕ ಮೃತ್ಯು

ಸುದ್ದಿಗಳು News

Posted by vidyamaana on 2024-07-24 08:25:31 | Last Updated by Vidyamaana on 2024-07-24 08:25:31

Share: | | | | |


ಪುತ್ತೂರು: ಲಾರಿ - ಸ್ಕೂಟರ್ ನಡುವೆ ಭೀಕರ ಅಪಘಾತ :ಮಿತ್ತೂರು ನಿವಾಸಿ ಶಿವರಾಮ ನಾಯ್ಕ ಮೃತ್ಯು

ಪುತ್ತೂರು: ನೆಹರುನಗರ ಮಂಜಲ್ಪಡ್ಪು ಬಳಿಯ ಮಂಗಲ ಸ್ಟೋರ್ಸ್ ಮುಂಭಾಗ ಜು.23 ರಂದು  ಲಾರಿ ಮತ್ತು ತ್ರಿವೀಲ್ಡರ್ ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಮಿತ್ತೂರು ಏಮಾಜೆಯ ವಿಕಲಚೇತನ ಶಿವರಾಮ ನಾಯ್ಕ (50ವ) ಎಂಬವರು ಮೃತಪಟ್ಟ ಬಗ್ಗೆ ವರದಿಯಾಗಿದೆ

ಮಂಗಳೂರು ಕಡೆ ಹೋಗುತ್ತಿದ್ದ ಲಾರಿ ವೊಂದು ವಿಕಲಚೇತನ ಶಿವರಾಮ ಅವರು ಚಲಾಯಿಸುತ್ತಿದ್ದ ತ್ರಿವೀಲ್ಡ‌ರ್ ಸ್ಕೂಟರ್ ಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ತೀವ್ರ ಗಾಯಗೊಂಡ ಸವಾರ ಮೃತ ಪಟ್ಟಿದ್ದಾರೆಂದು ತಿಳಿದು ಬಂದಿದೆ.

 Share: | | | | |


ಧರ್ಮಸ್ಥಳ ಕ್ಷೇತ್ರ ಡಾ|ಹೆಗ್ಗಡೆಯವರ ಕುಟುಂಬದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡದಂತೆ ತಿಮರೋಡಿಗೆ ಹೈಕೋರ್ಟ್ ಆದೇಶ

Posted by Vidyamaana on 2023-09-01 01:45:46 |

Share: | | | | |


ಧರ್ಮಸ್ಥಳ ಕ್ಷೇತ್ರ  ಡಾ|ಹೆಗ್ಗಡೆಯವರ ಕುಟುಂಬದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡದಂತೆ ತಿಮರೋಡಿಗೆ ಹೈಕೋರ್ಟ್ ಆದೇಶ

ಬೆಂಗಳೂರು: ಧರ್ಮಸ್ಥಳದ ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ  ಸಂಬಂಧಿಸಿದಂತೆ ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುತ್ತಿದ್ದಾರೆ ಎನ್ನಲಾಗುತ್ತಿರುವ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಕೋರ್ಟು ಆದೇಶ ಉಲ್ಲಂಘಿಸದಂತೆ ಎಚ್ಚರಿಕೆ ನೀಡಿದೆ.


ಇನ್ನು ಮುಂದಕ್ಕೂ ಇದಕ್ಕೆ ತಪ್ಪಿದಲ್ಲಿ ಡಿ.ಜಿ. ಮತ್ತು ಐ.ಜಿ., ಸರಕಾರದ ಮುಖ್ಯ ಕಾರ್ಯದರ್ಶಿ, ದಕ್ಷಿಣ ಕನ್ನಡ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಸೇರಿದಂತೆ ಪೋಲಿಸ್ ಉನ್ನತ ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳಲು ನ್ಯಾಯಾಲಯ ಆದೇಶ ಹೊರಡಿಸಿದೆ. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಹೆಗ್ಗಡೆ ಕುಟುಂಬಸ್ಥರ ಪರವಾಗಿ ಖ್ಯಾತ ಹಿರಿಯ ನ್ಯಾಯವಾದಿಗಳಾದ ಉದಯ ಹೊಳ್ಳ ಹಾಗೂ ರಾಜಶೇಖರ್ ಹಿಲ್ಯಾರು ವಾದಿಸಿದ್ದರು. ಕಳೆದ ವಾರವೇ ಹೆಗ್ಗಡೆ ಕುಟುಂಬ ಕೋರ್ಟ್ ಮೆಟ್ಟಲು ಹತ್ತಿತ್ತು. ಇದೀಗ ಮಹೇಶ್ ಶೆಟ್ಟಿಯವರನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡದಂತೆ ಆದೇಶ ನೀಡಿದೆ.

ಉಳ್ಳಾಲ ಖಾಝಿಯಾಗಿ ಇಂಡಿಯನ್ ಗ್ರಾಂಡ್ ಮುಫಿ ಎ.ಪಿ. ಉಸ್ತಾದ್ ನೇಮಕ

Posted by Vidyamaana on 2024-07-21 17:41:24 |

Share: | | | | |


ಉಳ್ಳಾಲ ಖಾಝಿಯಾಗಿ ಇಂಡಿಯನ್ ಗ್ರಾಂಡ್ ಮುಫಿ ಎ.ಪಿ. ಉಸ್ತಾದ್ ನೇಮಕ

ಉಳ್ಳಾಲ: ಉಳ್ಳಾಲ ಖಾಝಿಯಾಗಿ ಇಂಡಿಯನ್ ಗ್ರ್ಯಾಂಡ್ ಮುಪ್ತಿ ಸುಲ್ತಾನುಲ್ ಉಲಮಾ ಕಾಂತಪುರಂ ಎ.ಪಿ. ಅಬೂಬಕ್ಕರ್ ಮುಸ್ಲಿಯಾರ್ ಅವರನ್ನು ಆಯ್ಕೆ ಮಾಡಲಾಗಿದೆ.ಖಾಝಿ ಆಯ್ಕೆಗೆ ಸಂಬಂಧಿಸಿ ಉಳ್ಳಾಲ ದರ್ಗಾ ವಠಾರದ ಮದನಿ ಹಾಲಿನಲ್ಲಿ ರವಿವಾರ ಮಧ್ಯಾಹ್ನ ನಡೆದ ಮಹಾಸಭೆ ಯಲ್ಲಿ ಎ.ಪಿ.ಉಸ್ತಾದ್ ಅವರನ್ನು ಖಾಝಿಯಾಗಿ ನೇಮಕ ಮಾಡಲು ಸರ್ವಾನುಮತದಿಂದ ತೀರ್ಮಾನಿಸಲಾಗಿದೆ.

ಬೆಂಗಳೂರು ಕಂಬಳ ಕರೆ ವೀಕ್ಷಿಸಿದ ಸಚಿವ ದಿನೇಶ್‌ ಗುಂಡೂರಾವ್

Posted by Vidyamaana on 2023-11-03 17:29:34 |

Share: | | | | |


ಬೆಂಗಳೂರು ಕಂಬಳ ಕರೆ ವೀಕ್ಷಿಸಿದ ಸಚಿವ ದಿನೇಶ್‌ ಗುಂಡೂರಾವ್

ಬೆಂಗಳೂರು : ಅರಮನೆ ಮೈದಾನದಲ್ಲಿ ನ.24,25,26 ರಂದು ನಡೆಯಲಿರುವ ಬೆಂಗಳೂರು ಕಂಬಳದ ಕರೆ ನಿರ್ಮಾಣ ಕಾಮಗಾರಿಯನ್ನು ದ ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ವೀಕ್ಷಣೆ ಮಾಡಿದರು.


ಶುಕ್ರವಾರ ಮಧ್ಯಾಹ್ನ ಅರಮನೆ ಮೈದಾನಕ್ಕೆ ಭೇಟಿ ನೀಡಿದ ಅವರು ಕರೆ ವೀಕ್ಷಣೆ ಮಾಡಿ ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷರು, ಪುತ್ತೂರು ಶಾಸಕರಾದ ಅಶೋಕ್ ರೈ ಜೊತೆ ಚರ್ಚೆ ನಡೆಸಿದರು.


ಕಂಬಳ ವೀಕ್ಷಣೆಗೆ ಲಕ್ಷಾಂತರ ಮಂದಿ ಅಭಿಮಾನಿಗಳು ಆಗಮಿಸುವ ನಿರೀಕ್ಷೆ ಇದ್ದು, ಅಲ್ಲಿ ನಡೆಯುತ್ತಿರುವ ಇತರೆ ಕಾಮಗಾರಿಗಳನ್ನು ಸಚಿವರು ಪರಿಶೀಲನೆ ಮಾಡಿದರು.


ಈ ಸಂದರ್ಭದಲ್ಲಿ ಮಾಜಿ ಕಾರ್ಪೋರೇಟರ್ ಉಮೇಶ್ ಶೆಟ್ಟಿ, ಪ್ರಮುಖರಾದ ಗುಣರಂಜನ್ ಶೆಟ್ಟಿ, ಮುರಳೀಧರ್ ರೈ ಮಠಂತಬೆಟ್ಟು ಸೇರಿದಂತೆ ಕಂಬಳ ಸಮಿತಿ ಪ್ರಮುಖರು ಉಪಸ್ಥಿತರಿದ್ದರು.

ಮುಡಾ ಹಗರಣಕ್ಕೆ ಬಿಗ್ ಟ್ವಿಸ್ಟ್ : ವೈಟ್ನರ್ ಹಚ್ಚಿದ ಪತ್ರ ದ ಬಗ್ಗೆ ವಿಡಿಯೋ ಮೂಲಕ CM ಸಿದ್ದರಾಮಯ್ಯ ಸ್ಪಷ್ಟನೆ

Posted by Vidyamaana on 2024-08-27 09:39:35 |

Share: | | | | |


ಮುಡಾ ಹಗರಣಕ್ಕೆ ಬಿಗ್ ಟ್ವಿಸ್ಟ್ : ವೈಟ್ನರ್ ಹಚ್ಚಿದ ಪತ್ರ ದ ಬಗ್ಗೆ ವಿಡಿಯೋ ಮೂಲಕ CM ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ವೈಟ್ನರ್ ಹಚ್ಚಿದ ಪತ್ರದ ಬಗ್ಗೆ ವಿಡಿಯೋ ಮೂಲಕ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. 

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಮುಡಾ ಅಕ್ರಮವಾಗಿ ಸ್ವಾದೀನಪಡಿಸಿಕೊಂಡ ನಮ್ಮ ಕುಟುಂಬದ ಜಮೀನಿಗೆ ಬದಲಿ ಭೂಮಿ ನೀಡುವಂತೆ ನನ್ನ ಪತ್ನಿ ಸಲ್ಲಿಸಿದ್ದ ಅರ್ಜಿಯಲ್ಲಿ ನಾಲ್ಕೈದು ಪದಗಳಿಗೆ ವೈಟ್ನರ್‌ ಹೆಚ್ಚಿದನ್ನೇ ಮಹಾನ್‌ ಅಪಾರಾಧವೆಂಬಂತೆ ಗಂಟಲು ಹರಿದುಕೊಂಡ ಬಿಜೆಪಿ - ಜೆಡಿಎಸ್‌ ನಾಯಕರೇ, ವೈಟ್ನರ್‌ ಹಿಂದಿರುವ ಅಕ್ಷರಗಳೇನು ಎಂಬುದು ಈ ವೀಡಿಯೋದಲ್ಲಿ ಸ್ಪಷ್ಟವಾಗಿ ಕಾಣುತ್ತಿದೆ, ನಿಮ್ಮ ದ್ವೇಷದ ಕನ್ನಡಕ ಕಳಚಿಟ್ಟು ಸರಿಯಾಗಿ ಕಣ್ಣುಬಿಟ್ಟು ನೋಡಿ ಎಂದು ಹೇಳಿದ್ದಾರೆ

ಬ್ರೇಕ್ ತಪ್ಪಿತೇ ಬದುಕು.. ನೇಣಿಗೆ ಕೊರಳೊಡ್ಡಿದ ದಂಪತಿ

Posted by Vidyamaana on 2023-07-01 16:00:10 |

Share: | | | | |


ಬ್ರೇಕ್ ತಪ್ಪಿತೇ ಬದುಕು.. ನೇಣಿಗೆ ಕೊರಳೊಡ್ಡಿದ ದಂಪತಿ

ಪುತ್ತೂರು : ಗಂಡ-ಹೆಂಡತಿ ಇಬ್ಬರು ಆತ್ಮಹತ್ಯೆಗೆ ಯತ್ನಿಸಿ ಪತಿ ಸಾವನ್ನಪ್ಪಿ, ಪತ್ನಿ ಗಂಭೀರವಾಗಿ ಗಾಯಗೊಂಡ ಘಟನೆ ಮಾಣಿ ಸಮೀಪದ ಕೊಡಾಜೆಯಲ್ಲಿ ನಡೆದಿದೆ.

ಮೃತರನ್ನು ಕೊಡಾಜೆ ನಿವಾಸಿ ಪ್ರತಾಪ್ (33) ಎಂದು ಗುರುತಿಸಲಾಗಿದೆಪ್ರತಾಪ್ ರವರು ಖಾಸಗಿ ಬಸ್ ಚಾಲಕರಾಗಿ ಕಾರ್ಯ ನಿರ್ವಹಿಸುತ್ತಿದ್ದು, ಇಂದು ಪತಿ, ಪತ್ನಿ ಇಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದು, ಘಟನೆಯಲ್ಲಿ ಪ್ರತಾಪ್ ರವರು ಸಾವನ್ನಪ್ಪಿ, ಪತ್ನಿ ಗಂಭೀರ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.

ಅರುಣ್ ಪುತ್ತಿಲ ಭೇಟಿ ರವರು ಪುತ್ತೂರು ಆಸ್ಪತ್ರೆಯಿಂದ ಪ್ರತಾಪ್ ರವರ ಪತ್ನಿಯನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲು ಸಹಕರಿಸಿದರು.

BREAKING : ಬಿಜೆಪಿಯ ಅಭ್ಯರ್ಥಿಗಳ 5ನೆ ಪಟ್ಟಿ ಬಿಡುಗಡೆ : ಅನಂತ್ ಕುಮಾರ್ ಹೆಗಡೆ ಬದಲು ಕಾಗೇರಿಗೆ ಮಣೆ ಹಾಕಿದ ಹೈಕಮಾಂಡ್

Posted by Vidyamaana on 2024-03-24 21:28:06 |

Share: | | | | |


BREAKING : ಬಿಜೆಪಿಯ ಅಭ್ಯರ್ಥಿಗಳ 5ನೆ ಪಟ್ಟಿ ಬಿಡುಗಡೆ : ಅನಂತ್ ಕುಮಾರ್ ಹೆಗಡೆ ಬದಲು ಕಾಗೇರಿಗೆ ಮಣೆ ಹಾಕಿದ ಹೈಕಮಾಂಡ್

ಬೆಂಗಳೂರು : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಇದೀಗ ಬಿಜೆಪಿ 5ನೇ ಪಟ್ಟಿ ಬಿಡುಗಡೆ ಮಾಡಿದ್ದು ರಾಜ್ಯದ ನಾಲ್ಕು ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ.ಕಾಂಗ್ರೆಸ್ ಸರ್ಕಾರದ ವಿರುದ್ಧ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರವಾಗಿ ಹಾಗೂ ವಿವಾದಾತ್ಮಕ ಹೇಳಿಕೆ ನೀಡಿದ್ದ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಅನಂತ್ ಕುಮಾರ್ ಹೆಗಡೆ ಬದಲು ಇದೀಗ ಹೈಕಮಾಂಡ್ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಟಿಕೆಟ್ ನೀಡಿದೆ.ಅಲ್ಲದೆ ಇದೇ ವೇಳೆ ಇತ್ತೀಚಿಗೆ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರಿದ ಜಗದೀಶ್ ಶೆಟ್ಟರಿಗೆ ಹಾವೇರಿ ಲೋಕಸಭಾ ಕ್ಷೇತ್ರದ ಬದಲು ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಟಿಕೆಟ್ ನೀಡಲಾಗಿದೆ. ಅಲ್ಲದೆ ಹೈಕಮಾಂಡ್ ವಿಶ್ವಾಸ ಗಳಿಸುವಲ್ಲಿ ಯಶಸ್ವಿಯಾಗಿರುವ ಬಿಜೆಪಿಯ ಮಾಜಿ ಸಚಿವ ಸುಧಾಕರ್ ಅವರಿಗೆ ಕೂಡ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಟಿಕೆಟ್ ಸಿಕ್ಕಿದೆ.ಬಿಜೆಪಿ 5ನೇ ಪಟ್ಟೆ ಬಿಡುಗಡೆಯಾಗಿದ್ದು, ಕರ್ನಾಟಕದ ನಾಲ್ಕು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದ್ದು, ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ


1)ಉತ್ತರ ಕನ್ನಡ ಲೋಕಸಭಾ ಕ್ಷೇತ್ರ - ವಿಶ್ವೇಶ್ವರ ಹೆಗಡೆ ಕಾಗೇರಿ

2)ಚಿಕ್ಕಬಳ್ಳಾಪುರ ಕ್ಷೇತ್ರ -ಡಾ. ಕೆ ಸುಧಾಕರ್

3) ಬೆಳಗಾವಿ ಲೋಕಸಭಾ ಕ್ಷೇತ್ರ- ಜಗದೀಶ್ ಶೆಟ್ಟರ್

4). ರಾಯಚೂರು ಲೋಕಸಭಾ ಕ್ಷೇತ್ರ-ರಾಜಾಅಮರೇಶ್ವರ ನಾಯಕಗೆ ಬಿಜೆಪಿ ಟಿಕೇಟ್ ನೀಡಿದೆ.

Recent News


Leave a Comment: