ಪುತ್ತೂರು :ಭೀಕರ ಅಪಘಾತ - 10 ಕ್ಕೂ ಹೆಚ್ಚು ವಾಹನಗಳು ಪುಡಿ ಪುಡಿ

ಸುದ್ದಿಗಳು News

Posted by vidyamaana on 2024-05-27 18:41:30 |

Share: | | | | |


ಪುತ್ತೂರು :ಭೀಕರ ಅಪಘಾತ - 10 ಕ್ಕೂ  ಹೆಚ್ಚು ವಾಹನಗಳು ಪುಡಿ ಪುಡಿ

ಪುತ್ತೂರು : ಪುತ್ತೂರಿನ ಹೊರ ವಲಯದ ಸಂಟ್ಯಾರಿನಲ್ಲಿ ಭೀಕರ ಅಪಘಾತ ನಡೆದು 10ಕ್ಕೂ ಹೆಚ್ಚು ವಾಹನಗಳು ಪುಡಿ ಪುಡಿಯಾದ ಘಟನೆ ಮೇ.27ರಂದು ಸಂಜೆ ನಡೆದಿದೆ. 

ಪಾಣಾಜೆ - ಸಂಟ್ಯಾರ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಸಂಟ್ಯಾರ್ ಜಂಕ್ಷನ್ ನಲ್ಲಿ ನಿಲ್ಲಿಸಿದ್ದ ಹತ್ತಕ್ಕೂ ಹೆಚ್ಚು ಬೈಕ್ ಗಳು ಪುಡಿ ಪುಡಿಯಾಗಿ ಚೆಲ್ಲಪಿಲ್ಲಿಯಾಗಿದೆ. 


ಪಾಣಾಜೆ ಕಡೆಯಿಂದ ಅತೀ ವೇಗದಲ್ಲಿ ಬರುತಿದ್ದ ಕಾರೊಂದು  ಈ ಹತ್ತಕ್ಕೂ ಹೆಚ್ಚು ದ್ವಿಚಕ್ರ ವಾಹನಗಳಿಗೆ ಡಿಕ್ಕಿಯಾಗಿದೆ. ಸಂಟ್ಯಾರ್ ಜಂಕ್ಷನ್ ನಲ್ಲಿ   ವಾಹನ ನಿಲ್ಲಿಸಿ ಬಸ್ ನಲ್ಲಿ ಉದ್ಯೋಗಕ್ಕೆ ತೆರಳುವವರ 10 ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಪುಡಿ ಪುಡಿಯಾಗಿ ಚೆಲ್ಲಪಿಲ್ಲಿಯಾಗಿದೆ.

 Share: | | | | |


ಫೆ.27: ಉಡುಪಿಗೆ ಭೇಟಿ ನೀಡಲಿರುವ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ

Posted by Vidyamaana on 2023-02-26 16:07:56 |

Share: | | | | |


ಫೆ.27: ಉಡುಪಿಗೆ ಭೇಟಿ ನೀಡಲಿರುವ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ

ಉಡುಪಿ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಫೆ.27ರ ಬೆಳಗ್ಗೆ 9:30ಕ್ಕೆ ಉಡುಪಿ ಜಿಲ್ಲಾ ಬಿಜೆಪಿ ಕಚೇರಿಗೆ ಆಗಮಿಸಲಿದ್ದು, ಉಡುಪಿಯ 5 ವಿಧಾನಸಭಾ ಕ್ಷೇತ್ರದಾದ್ಯಂತ ಸಂಚರಿಸಲಿರುವ 5 ಪ್ರಗತಿ ರಥಗಳಿಗೆ ಚಾಲನೆ ನೀಡಲಿದ್ದಾರೆ.

ಅಪರಾಹ್ನ 3:00 ಗಂಟೆಗೆ ಕಾರ್ಕಳದಲ್ಲಿ ನಡೆಯುವ ಬೃಹತ್ ಬೈಕ್ ಜಾಥಾದಲ್ಲಿ ಭಾಗವಹಿಸಿ, ಸಂಜೆ 4:00 ಗಂಟೆಗೆ ಅಜೆಕಾರಿನಲ್ಲಿ ನಡೆಯುವ ಉಡುಪಿ ಜಿಲ್ಲಾ ಮಟ್ಟದ ಯುವ ಮೋರ್ಚಾ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.

ಸಚಿವ ವಿ.ಸುನೀಲ್ ಕುಮಾರ್, ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ, ಯುವ ಮೋರ್ಚಾ ರಾಜ್ಯಾಧ್ಯಕ್ಷ ಡಾ.ಸಂದೀಪ್ ಕೆ.ಸಿ. ಸಹಿತ ರಾಜ್ಯ ಮತ್ತು ಜಿಲ್ಲಾ ನಾಯಕರು ಇದರಲ್ಲಿ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ವೋಟಿಂಗ್ ಮುಗಿಸಿದ ಮತದಾರ ನಿರಾಳ

Posted by Vidyamaana on 2023-05-12 06:22:32 |

Share: | | | | |


ವೋಟಿಂಗ್ ಮುಗಿಸಿದ ಮತದಾರ ನಿರಾಳ

ಬೆಂಗಳೂರು: ಮತ ಚಲಾವಣೆ ಮುಗಿಯುತ್ತಿದ್ದಂತೆ ಅಭ್ಯರ್ಥಿಗಳು ಒಂದು ಹಂತದ ನಿಟ್ಟುಸಿರು ಬಿಟ್ಟಿರಬಹುದು. ಆದರೆ, ವಾಸ್ತವವಾಗಿ ಈಗಿನಿಂದಲೇ ಅವರ ಹೃದಯಬಡಿತ ಹೆಚ್ಚಾಗಿದೆ. ಮತ ಎಣಿಕೆ ನಡೆಯುವ ಶನಿವಾರದವರೆಗೂ ಅವರ ತಲೆಯಲ್ಲಿ ಸೋಲು- ಗೆಲುವಿನ ಲೆಕ್ಕಾಚಾರದ ಅಂಶಗಳೇ ಓಡುತ್ತಿರುತ್ತವೆ.ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಬುಧವಾರ ಮತದಾನ ಅಂತ್ಯಗೊಳ್ಳುತ್ತಿದ್ದಂತೆ ಈಗ ಬೂತ್‌ಮಟ್ಟದಲ್ಲಿ ನಡೆದಿರುವ ಶೇಕಡವಾರು ಮತ ಚಲಾವಣೆಯ ಲೆಕ್ಕವಿಟ್ಟುಕೊಂಡು ತಾಳೆ ಹಾಕುವ ಕೆಲಸದಲ್ಲಿ ಮಗ್ನರಾಗಿದ್ದಾರೆ. ಇಡೀ ದಿನ ಕ್ಷೇತ್ರದ ಮತಗಟ್ಟೆಗಳಲ್ಲಿ ಕಾಣಿಸಿಕೊಂಡ ಮತದಾರರನ್ನೇ ನೋಡಿ ಲೆಕ್ಕ ಹಾಕುವ ಕೆಲಸವೂ ನಡೆದಿದೆ.ತಮ್ಮ ಪಕ್ಷದ ಮತದಾರರೆಂದು ಗುರುತಿಸಿಕೊಂಡಿರುವ ರಾಜಕೀಯ ಪಕ್ಷಗಳಿಗೆ ಶೇ.60 ರಿಂದ 70 ರಷ್ಟು ಲೆಕ್ಕ ಸಿಗುವುದೇ ಇಲ್ಲಿಂದ. ಇನ್ನುಳಿದ ಲೆಕ್ಕವನ್ನು ಚಲಾವಣೆಯಾದ ಮತಗಳ ಆಧಾರದ ಮೇಲೆ ಹಾಕುತ್ತಾರೆ.

ಹೀಗಾಗಿ ಬೂತ್‌ಮಟ್ಟದಲ್ಲಿ ಬೆಳಿಗ್ಗೆಯಿಂದ ಸಂಜೆಯವರೆಗೂ ಮತದಾರರ ಪಟ್ಟಿ ಹಿಡಿದು ಕುಳಿತಿದ್ದ ಪಕ್ಷದ ಕಾರ್ಯಕರ್ತರು ಕೊಡುವ ಲೆಕ್ಕದ ಮೇಲೆ ಅ ರ್ಥಿಗಳು ಸೋಲು-ಗೆಲುವಿನ ಲೆಕ್ಕ ಹಾಕುತ್ತಾರೆ. ಜತೆಗೆ ತಟಸ್ಥ ಮತದಾರರೆಂದು ಗುರುತಿಸಿಕೊಂಡಿರು ರ ಸ್ಪಂದನೆ ಯಾವ ಪಕ್ಷ, ಯಾವ ಅಭ್ಯರ್ಥಿ ಪರವಾಗಿತ್ತೆಂಬುದನ್ನು ಅವರದೇ ಆದ ಮೂಲಗಳು ಕೊಡುವ ವರದಿಗಳ ಆಧಾರದ ಮೇಲೆ ಅಭ್ಯರ್ಥಿಗಳು ಲೆಕ್ಕಾಚಾರ ಮಾಡುತ್ತಾರೆ. ಈ ರೀತಿ ನಾನಾ ಲೆಕ್ಕಾಚಾರಗಳು ಗುರುವಾರ, ಶುಕ್ರವಾರದವರೆಗೂ ನಡೆಯುತ್ತಲೇ ಇರುತ್ತವೆ.ಭರ್ಜರಿ ಬೆಟ್ಟಿಂಗ್‌ ಶುರು

ಒಂದೆಡೆ ಮತದಾನ ಅಂತ್ಯಗೊಳ್ಳುತ್ತಿದ್ದಂತೆ ಗೆಲ್ಲುವ ಪಕ್ಷ ಯಾವುದು? ಸಿಎಂ ಯಾರಾಗುತ್ತಾರೆ? ಹಾಗೂ ಯಾವ ಅಭ್ಯರ್ಥಿ ಗೆಲ್ಲುತ್ತಾರೆ ಎಂಬುದರ ಮೇಲೆ ಬೆಟ್ಟಿಂಗ್‌ ಕಟ್ಟುವುದು ಶುರುವಾಗಿದೆ. ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಈ ಮೂರು ಪಕ್ಷಗಳಲ್ಲಿ ಯಾವ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂಬುದರ ಮೇಲೂ ಬೆಟ್ಟಿಂಗ್‌ ನಡೆದಿದೆ. ಬಸವರಾಜ ಬೊಮ್ಮಾಯಿ ಅವರೇ ಸಿಎಂ ಆಗಿ ಮುಂದುವರಿಯಬಹುದು, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌, ಎಚ್‌.ಡಿ.ಕುಮಾರಸ್ವಾಮಿ ಈ ಮೂವರಲ್ಲಿ ಯಾರು ಸಿಎಂ ಆಗುತ್ತಾರೆ ಎಂಬುದರ ಮೇಲೆ ಭರ್ಜರಿ ಬೆಟ್ಟಿಂಗ್‌ ನಡೆದಿದೆ.ಚಿನ್ನಾಭರಣ, ಬೈಕ್‌, ಕಾರು, ಟ್ರ್ಯಾಕ್ಟರ್‌, ಹೊಲ, ಗದ್ದೆ, ಕುರಿ, ಕೋಳಿ ಜತೆಗೆ ಇಂತಿಷ್ಟು ಹಣವೆಂದು ಬೆಟ್ಟಿಂಗ್‌ ಮಾಡಲಾಗುತ್ತಿದೆ. ಮತಗಟ್ಟೆ ಸಮೀಕ್ಷೆಯಲ್ಲಿ ಬಹುತೇಕ ಸಮೀಕ್ಷೆಗಳು ಅತಂತ್ರ ಫ‌ಲಿತಾಂಶವೆಂದು ಹೇಳುತ್ತಿದ್ದರೂ ಕಾಂಗ್ರೆಸ್‌ ಪಕ್ಷ ಅತ್ಯಧಿಕ ಸ್ಥಾನಗಳಿಸಿ ಅಧಿಕಾರಕ್ಕೆ ಬರುತ್ತದೆ ಎಂಬುದು ಕಾಂಗ್ರೆಸ್‌ ಪರ ಬೆಟ್ಟಿಂಗ್‌ ಕಟ್ಟುತ್ತಿರುವವರ ವಾದ.


ಬಿ.ಸಿ.ರೋಡ್-ಬಂಟ್ವಾಳ ಹಿಂದು ಸಂಘಟನೆಗಳ ಕಾರ್ಯಕರ್ತರ ಮಾರಾಮಾರಿ.! ಚೂರಿ ಇರಿತ..ಮೂವರು ಆಸ್ಪತ್ರೆಗೆ ದಾಖಲು

Posted by Vidyamaana on 2024-08-05 09:41:49 |

Share: | | | | |


ಬಿ.ಸಿ.ರೋಡ್-ಬಂಟ್ವಾಳ ಹಿಂದು ಸಂಘಟನೆಗಳ ಕಾರ್ಯಕರ್ತರ ಮಾರಾಮಾರಿ.! ಚೂರಿ ಇರಿತ..ಮೂವರು ಆಸ್ಪತ್ರೆಗೆ ದಾಖಲು

ಬಂಟ್ವಾಳ : ಹಿಂದೂ ಸಂಘಟನೆಯ ಕಾರ್ಯಕರ್ತರ ನಡುವೆ ವೈಯಕ್ತಿಕ ವಿಚಾರವಾಗಿ ನಡೆದ ಹೊಡೆದಾಟ ಚೂರಿ ಇರಿತದ ಮೂಲಕ ಕೊನೆಗೊಂಡಿದೆ.

ಬಿಸಿರೋಡಿನ ಹಿಂದೂ ಸಂಘಟನೆಯ ಯುವಕರ ತಂಡ ಹಾಗೂ ಬಂಟ್ವಾಳ ಹಿಂದೂ‌ ಸಂಘಟನೆಯ ಯುವಕರ ತಂಡದ ನಡುವೆ ನಡೆದ ಗಲಾಟೆ ಚೂರಿ ಇರಿತದಲ್ಲಿ ಅಂತ್ಯಗೊಂಡಿದೆನ್ನಲಾಗಿದೆ.

ಕಾರು ಡಿಕ್ಕಿ: ಯುಕೆಜಿ ವಿದ್ಯಾರ್ಥಿ ಮಹಮ್ಮದ್ ಆದಿಲ್ ಮೃತ್ಯು

Posted by Vidyamaana on 2023-09-23 20:22:34 |

Share: | | | | |


ಕಾರು ಡಿಕ್ಕಿ: ಯುಕೆಜಿ ವಿದ್ಯಾರ್ಥಿ ಮಹಮ್ಮದ್ ಆದಿಲ್ ಮೃತ್ಯು

ಪುತ್ತೂರು: ಮಧ್ಯಾಹ್ನ ಕೆಯ್ಯೂರಿನಲ್ಲಿ ನಡೆದ ಕಾರು ಅಪಘಾತದಲ್ಲಿ ಕೆಯ್ಯೂರು ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಯುಕೆಜಿ ವಿದ್ಯಾರ್ಥಿ,ನುಸ್ರತುಲ್ ಇಸ್ಲಾಂ ಮದ್ರಸದ 1ನೇ ತರಗತಿ ವಿದ್ಯಾರ್ಥಿ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಮೃತನನ್ನು 5 ವರ್ಷ ಪ್ರಾಯದ ಮುಹಮ್ಮದ್ ಆದಿಲ್ ಎಂದು ಗುರುತಿಸಲಾಗಿದೆ‌. ಕೆಯ್ಯೂರು ನಿವಾಸಿ ಹಾರೀಸ್ ದಾರಿಮಿ ಅವರ ಪುತ್ರ.

ಪುತ್ತೂರು ಕಡೆ ಬರುತ್ತಿದ್ದ ಈಕೋ ಕಾರು ಬಾಲಕನಿಗೆ ಢಿಕ್ಕಿ ಹೊಡೆದಿದ್ದು, ಬಾಲಕ ಗಂಭೀರ ಗಾಯಗೊಂಡಿದ್ದ. ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸಂಜೆ ವೇಳೆ ಮೃತಪಟ್ಟ ಬಗ್ಗೆ ವರದಿಯಾಗಿದೆ.

ಜಾತ್ರೋತ್ಸವದಲ್ಲಿ ಸುಡು ಮದ್ದು ಪ್ರದರ್ಶನ, ರಥೋತ್ಸವ ಸಮಯ ಮೀರದಂತೆ ನಡೆಸುವಂತೆ ಮಹಾಲಿಂಗೇಶ್ವರ ಭಕ್ತಾದಿಗಳಿಂದ ಸಹಾಯಕ ಆಯುಕ್ತರಿಗೆ ಮನವಿ

Posted by Vidyamaana on 2024-04-13 13:24:48 |

Share: | | | | |


ಜಾತ್ರೋತ್ಸವದಲ್ಲಿ ಸುಡು ಮದ್ದು ಪ್ರದರ್ಶನ, ರಥೋತ್ಸವ ಸಮಯ ಮೀರದಂತೆ ನಡೆಸುವಂತೆ ಮಹಾಲಿಂಗೇಶ್ವರ ಭಕ್ತಾದಿಗಳಿಂದ ಸಹಾಯಕ ಆಯುಕ್ತರಿಗೆ ಮನವಿ

ಪುತ್ತೂರು: ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ ಸಂಧರ್ಭದಲ್ಲಿ ಅಂಗಡಿ, ಸಂತೆ ಇತ್ಯಾದಿಗಳನ್ನು ವ್ಯವಸ್ಥಿತವಾಗಿ ಆಯೋಜಿಸುವುದು, ಸುಡುಮದ್ದು ಪ್ರದರ್ಶನ ಮತ್ತು ರಥೋತ್ಸವವನ್ನು ನಿಶ್ಚಿತ ಸಮಯದಲ್ಲಿ ನಡೆಸುವಂತೆ ಶ್ರೀ ಮಹಾಲಿಂಗೇಶ್ವರ ದೇವರ ಭಕ್ತಾದಿಗಳು ಏ.೧೨ರಂದು ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಿದರು.

ರಥೋತ್ಸವದ ದಿನ ಶ್ರೀ ದೇವರು ರಥಾರೋಹಣದ ವೀಕ್ಷಣೆಗೆ ಭಕ್ತಾದಿಗಳಿಗೆ ಅನುಕೂಲವಾಗುವಂತೆ ರಥಬೀದಿಯಿಂದ ಕನಿಷ್ಠ ೭೫-೮೦ಮೀಟರ್ ದೂರದಲ್ಲಿ ವ್ಯಾಪಾರ ಮಳಿಗೆಗಳನ್ನು ಅಳವಡಿಸುವುದು. ಸುಡುಮದ್ದು ಪ್ರದರ್ಶನವನ್ನು ಸಾಕಷ್ಟು ದೂರದ ಸುರಕ್ಷಿತ ಪ್ರದೇಶದಲ್ಲಿ ವ್ಯವಸ್ಥೆಗೊಳಿಸುವುದು, ರಥೋತ್ಸವವನ್ನು ಮುಹೂರ್ತ ಸಮಯ ಮೀರದಂತೆ ಹಾಗೂ ವಿಳಂಭವಾಗದಂತೆ ಸಮಯ ನಿಗದಿಪಡಿಸುವುದು.

ಭೀಕರ ರಸ್ತೆ ಅಪಘಾತ ; ಚಿಕಿತ್ಸೆ ಫಲಕಾರಿಯಾಗದೆ ಬೈಕ್ ಸವಾರ ಮುಕ್ವೆ ನಿವಾಸಿ ಸಫ್ವಾನ್ ನಿಧನ

Posted by Vidyamaana on 2024-02-22 06:28:44 |

Share: | | | | |


ಭೀಕರ ರಸ್ತೆ ಅಪಘಾತ ; ಚಿಕಿತ್ಸೆ ಫಲಕಾರಿಯಾಗದೆ ಬೈಕ್ ಸವಾರ ಮುಕ್ವೆ ನಿವಾಸಿ ಸಫ್ವಾನ್ ನಿಧನ

ಪುತ್ತೂರು : ಸಂಪ್ಯ ಕಲ್ಲಾರ್ಪೆ ಸಮೀಪ  ಬುಧವಾರ ಸಂಜೆ ಟಿಪ್ಪರ್ ಹಾಗೂ ಬೈಕ್  ಮಧ್ಯೆ ಢಿಕ್ಕಿ ಸಂಭವಿಸಿ ಗಂಭೀರ ಗಾಯಗೊಂಡಿದ್ದ ಮುಕ್ವೆ ನಿವಾಸಿ  ಸಫ್ವಾನ್  ಅವರು ಚಿಕಿತ್ಸೆ ಫಲಕಾರಿಯಾಗದೆ ಫೆ 22 ರಂದು ಬೆಳಗ್ಗೆ ನಿಧಾನರಾದರು.

ಟಿಪ್ಪರ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮುಕ್ವೆ ನಿವಾಸಿ ಅಬ್ದುಲ್ಲಾ ರವರ ಮಗ ಸಫ್ವಾನ್ ಗಂಭೀರ ಗಾಯಗೊಂಡಿದ್ದರು ಕೊಡಲೇ ಅವರನ್ನು ಪುತ್ತೂರು ಖಾಸಗಿ ಆಸ್ಪತ್ರೆ ಗೆ ಕರೆ ತಂದು ಹೆಚ್ಚಿನ ಚಿಕಿತ್ಸೆಗೆ  ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ  ಸಾವನ್ನಪ್ಪಿದ್ದಾರೆ.

 ಸಂಪ್ಯ  ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Recent News


Leave a Comment: