ಪ್ರಿಯತಮೆಯನ್ನೇ ಕತ್ತು ಹಿಸುಕಿ ಕೊಲೆ ಮಾಡಿದ ಯುವಕ

ಸುದ್ದಿಗಳು News

Posted by vidyamaana on 2024-07-24 16:19:59 |

Share: | | | | |


ಪ್ರಿಯತಮೆಯನ್ನೇ ಕತ್ತು ಹಿಸುಕಿ ಕೊಲೆ ಮಾಡಿದ ಯುವಕ

ಶಿವಮೊಗ್ಗ, ಜುಲೈ.24: ಕಳೆದ ಎರಡೂವರೆ ವರ್ಷದಿಂದ ಪ್ರೀತಿಸುತ್ತಿದ್ದ (Love) ಯುವಕ ತನ್ನ ಪ್ರಿಯತಮೆಯನ್ನೇ ಕತ್ತುಹಿಸುಕಿ ಕೊಲೆ (Murder) ಮಾಡಿರುವ ಭೀಕರ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರದ ತಾಲೂಕಿನ ಹೆದ್ದಾರಿಪುರ ಗ್ರಾಮದಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಮೂಲದ ಸೌಮ್ಯ ಕೊಲೆಯಾದವಳು. ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಆರೋಪಿ ಸೃಜನ್​ನನ್ನು ಪೊಲೀಸರು ಬಂಧಿಸಿದ್ದಾರೆ.

ಕೊಲೆಯಾದ ಸೌಮ್ಯ ಮದುವೆಯಾಗುವಂತೆ ಸೃಜನ್​ನನ್ನು ಪೀಡಿಸುತ್ತಿದ್ದಳು. ಯುವತಿಯಿಂದ ಒತ್ತಡ ಹೆಚ್ಚಾದ ಹಿನ್ನೆಲೆ ಕೋಪಗೊಂಡ ಸೃಜನ್ ಪ್ರಿಯತಮೆಯ ಕೊಲೆ ಮಾಡಿದ್ದಾನೆ ಎನ್ನಲಾಗುತ್ತಿದೆ. ಇನ್ನು ಸೃಜನ್ ಕೊಲೆ ಮಾಡಿ ಮೃತದೇಹವನ್ನು ಶಿವಮೊಗ್ಗದ ಮುಂಬಾಳು ಗ್ರಾಮದ ಬಳಿ ಹೂತಿಟ್ಟಿದ್ದ. ಯುವತಿಯ ಪೋಷಕರು ನಾಪತ್ತೆ ಪ್ರಕರಣ ದಾಖಲಿಸಿದ್ದು ವಿಚಾರ ಬೆಳಕಿಗೆ ಬಂದಿದೆ.


ತೀರ್ಥಹಳ್ಳಿಯಲ್ಲಿ ಫೈನಾನ್ಸ್ ವೊಂದರಲ್ಲಿ ಕೆಲಸ ಮಾಡ್ತಿದ್ದ ಸೃಜನ್​ ಕೊಪ್ಪಗೆ ಹಣ ವಸೂಲಿಗೆ ಹೋಗುತ್ತಿದ್ದ. ಈ ವೇಳೆ ನರ್ಸಿಂಗ್ ವ್ಯಾಸಂಗ ಮಾಡ್ತಿದ್ದ ಸೌಮ್ಯಾಳ ಪರಿಚಯವಾಗಿತು. ಇಬ್ಬರ ನಡುವಿನ ಪರಿಚಯ ಪ್ರೀತಿಗೆ ತಿರುಗಿತ್ತು. ಇಬ್ಬರದ್ದು ಬೇರೆ ಬೇರೆ ಸಮುದಾಯವಾಗಿದ್ದರಿಂದ ಸೃಜನ್ ಮನೆಯಲ್ಲಿ ಮದುವೆಗೆ ನಿರಾಕರಿಸಿದ್ದರು. ಇದೇ ವೇಳೆ ಯುವತಿ ಸೌಮ್ಯ ತೀರ್ಥಹಳ್ಳಿಗೆ ಹೋಗುತ್ತೇನೆ ಎಂದು ಮನೆಯಲ್ಲಿ ಹೇಳಿ ಜುಲೈ 2 ರಂದು‌ ಕೊಪ್ಪದಿಂದ ತೀರ್ಥಹಳ್ಳಿಗೆ ಬಂದಿದ್ದಳು.

ಬಳಿಕ ತನ್ನ ಪ್ರಿಯತಮನನ್ನು ಭೇಟಿ ಮಾಡಿ ಮನೆಗೆ ‌ಕರೆದುಕೊಂಡು‌ ಹೋಗುವಂತೆ ‌ಒತ್ತಡ ಹಾಕಿದ್ದಾಳೆ.


ನಮ್ಮ ಮನೆಗೆ ಈಗ ಬರಬೇಡ, ನಿಮ್ಮ ಮನೆಗೆ ವಾಪಸ್ ಹೋಗು ಎಂದು ಸೃಜನ್ ಮನವೊಲಿಸಲು ಪ್ರಯತ್ನಿಸಿದ್ದಾನೆ. ತೀರ್ಥಹಳ್ಳಿಯಿಂದ ಹೆದ್ದಾರಿಪುರಕ್ಕೆ ಕರೆದುಕೊಂಡು ಬಂದು ಸಮಾಧಾನದ ಮಾತುಗಳನ್ನಾಡಿದ್ದಾನೆ. ಇದರಿಂದ ಅನುಮಾನಗೊಂಡ ಸೌಮ್ಯ ನನ್ನನ್ನು ದೂರ ಮಾಡುತ್ತಿದ್ದಾನೆ. ಮೋಸ ಮಾಡುತ್ತಿದ್ದಾನೆ ಎಂದು ಭಾವಿಸಿ ವಾದ ಮಾಡಿದ್ದಾಳೆ. ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಜಗಳವಾಗಿದ್ದು ಕೋಪಗೊಂಡ ಸೃಜನ್ ಸೌಮ್ಯ ಮೇಲೆ ಹಲ್ಲೆ ಮಾಡಿದ್ದಾನೆ. ಕತ್ತು ಹಿಸುಕಿ ಹಲ್ಲೆ ಮಾಡಿದ ಪರಿಣಾಮ ಯುವತಿ ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾಳೆ.ಇದರಿಂದ ಗಾಬರಿಗೊಂಡ ಆರೋಪಿ ಸೃಜನ್ ಮುಂಬಾಳು ಬಳಿ ಶವವನ್ನು ಹೂತಿಟ್ಟಿದ್ದಾನೆ. ಮತ್ತೊಂದೆಡೆ ಮಗಳು ಮನೆಗೆ ಬರದಿದ್ದಕ್ಕೆ ಟೆನ್ಷನ್ ಆಗ ಪೋಷಕರು ತಮ್ಮ ಮಗಳು ನಾಪತ್ತೆಯಾಗಿದ್ದಾಳೆ ಎಂದು ಕೊಪ್ಪ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಯುವಕನನ್ನು ಹುಡುಕಿಕೊಂಡು ಸಾಗರಕ್ಕೆ ‌ಬಂದಿದ್ದು ಯುವತಿಯನ್ನು ಕೊಂದು ಹೂತಿಟ್ಟ ರಹಸ್ಯವನ್ನು ಸೃಜನ್ ಪೊಲೀಸರ ಎದುರು ಬಿಚ್ಚಿಟ್ಟಿದ್ದಾನೆ. ಇಂದು ಎಸಿ ಸಮ್ಮುಖದಲ್ಲಿ ಯುವತಿಯ ಶವ ಹೊರಗೆ ತೆಗೆಯಲು ಸಿದ್ದತೆ ನಡೆಯುತ್ತಿದೆ. ಸ್ಥಳದಲ್ಲಿ ಪೊಲೀಸರು ಮೊಕ್ಕಂ ಹೂಡಿದ್ದಾರೆ.

 Share: | | | | |


ಪುತ್ತೂರು ತೆಂಕಿಲ ಬೈಪಾಸ್‌ ರಸ್ತೆಯಲ್ಲಿ ಬಿದ್ದ ಮರ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಸಂಚಾರ ಸ್ಥಗಿತ

Posted by Vidyamaana on 2024-07-13 09:24:32 |

Share: | | | | |


ಪುತ್ತೂರು ತೆಂಕಿಲ ಬೈಪಾಸ್‌ ರಸ್ತೆಯಲ್ಲಿ ಬಿದ್ದ ಮರ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಸಂಚಾರ ಸ್ಥಗಿತ

ಪುತ್ತೂರು: ತೆಂಕಿಲ ಬೈಪಾಸ್ ರಸ್ತೆಯಲ್ಲಿ ಬೃಹತ್ ಗಾತ್ರದ ಮರವೊಂದು ಬಿದ್ದ ಘಟನೆ ಜು.13 ರ ಬೆಳಗ್ಗೆ ನಡೆದಿದೆ. ಘಟನೆಯಿಂದ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಸಂಚಾರ ಸ್ಥಗಿತಗೊಂಡಿದೆ.

ನಕಲಿ ಇನ್‌ಸ್ಟಾಗ್ರಾಂ ಖಾತೆ ಸೃಷ್ಟಿಸಿ ವಿದ್ಯಾರ್ಥಿನಿಯರಿಗೆ ಬೆದರಿಕೆ : ಇಬ್ಬರು ವಿದ್ಯಾರ್ಥಿಗಳ ಬಂಧನ

Posted by Vidyamaana on 2023-08-12 11:14:48 |

Share: | | | | |


ನಕಲಿ ಇನ್‌ಸ್ಟಾಗ್ರಾಂ ಖಾತೆ ಸೃಷ್ಟಿಸಿ ವಿದ್ಯಾರ್ಥಿನಿಯರಿಗೆ ಬೆದರಿಕೆ : ಇಬ್ಬರು ವಿದ್ಯಾರ್ಥಿಗಳ ಬಂಧನ

ಹುಬ್ಬಳ್ಳಿ: ಖಾಸಗಿ ಕಾಲೇಜುವೊಂದರ ವಿದ್ಯಾರ್ಥಿನಿಯ ಹೆಸರಲ್ಲಿ ನಕಲಿ ಇನ್‌ಸ್ಟಾಗ್ರಾಂ ಖಾತೆ ಸೃಷ್ಟಿಸಿ ವಿದ್ಯಾರ್ಥಿನಿಯರಿಗೆ ಹಾಗೂ ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣ ತಿರುವು ಪಡೆದಿದ್ದು, ಮೂಲ ಆರೋಪಿಗಳಿಬ್ಬರನ್ನು ಸೈಬರ್ ಕ್ರೈಂ ಪೊಲೀಸರು ಏಳು ದಿನದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.


ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಪೊಲೀಸರು ಶಂಕಿತ ಆರೋಪಿ ಹಾಗೂ ಖಾಸಗಿ ಕಾಲೇಜಿನ ಹಳೇ ವಿದ್ಯಾರ್ಥಿ ರಜನಿಕಾಂತ್ ತಳವಾರ ಎಂಬಾತನನ್ನು ಸಂಶಯದ ಮೇಲೆ ಬಂಧಿಸಿ ಏಳು ದಿನ ವಿಚಾರಣೆಗೆ ಒಳಪಡಿಸಿದ್ದರು. ಅಷ್ಟೇ ಅಲ್ಲದೆ ಈ ಪ್ರಕರಣದ ಹಿಂದೆ ಇನ್ನೂ ಕೆಲವರು ಇದ್ದಾರೆ ಎಂಬ ಸಂಶಯದ ಮೇರೆಗೆ ತನಿಖೆ ಮುಂದುವರಿಸಿದ್ದರು.


ಜಾಲತಾಣದ ಅಧಿಕೃತ ಮಾಹಿತಿಯ ಹಿಂದೆ ಬಿದ್ದಾಗ ರಜನಿಕಾಂತ್ ಆರೋಪಿ ಅಲ್ಲ ಎಂಬುದು ಪೊಲೀಸರಿಗೆ ಸ್ಪಷ್ಟವಾಗಿದೆ. ಶಂಕಿತ ಆರೋಪಿಯಾಗಿದ್ದ ರಜನಿಕಾಂತ್‌ನ ಇನ್‌ಸ್ಟಾಗ್ರಾಂ ಖಾತೆ, ಇ-ಮೇಲ್ ಐಡಿ ಹಾಗೂ ಸಾಮಾಜಿಕ ಜಾಲತಾಣದ ವಿವವರಗಳನ್ನು ಪೊಲೀಸರು ಸಂಗ್ರಹಿಸಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದರು. ಆದರೆ ಈ ವರದಿ ಬರುವವರೆಗೂ ಉಳಿದ ಆರೋಪಿಗಳನ್ನು ಪತ್ತೆ ಮಾಡುವುದು ಪೊಲೀಸರಿಗೆ ಕಷ್ಟವಾಗಿತ್ತು. ಪ್ರಕರಣ ಗಂಭೀರವಾಗಿದ್ದರಿಂದ ಸೈಬರ್ ಠಾಣಾ ಪೊಲೀಸರು ಹ್ಯಾಕ್ ಮಾಡಲಾದ ವಿದ್ಯಾರ್ಥಿನಿಯರ ಇನ್‌ಸ್ಟಾಗ್ರಾಂ ಖಾತೆ ವಿವರ ಸಂಗ್ರಹಿಸಿ ಫೇಸ್‌ಬುಕ್ ಸಂಸ್ಥೆಗೆ ಮಾಹಿತಿ ನೀಡಲು ಪತ್ರ ಬರೆದಿದ್ದರು.


ಅಲ್ಲಿಂದ ದೊರೆತ ಅಧಿಕೃತ ಮಾಹಿತಿಯೇ ಆರೋಪಿಗಳ ಪತ್ತೆಗೆ ಸಹಕಾರಿಯಾಗಿದೆ. ಬಂಧನಕ್ಕೆ ಒಳಗಾದ ವಿದ್ಯಾರ್ಥಿ ವಿದ್ಯಾರ್ಥಿನಿಯರು ಓದುತ್ತಿರುವ ಕಾಲೇಜಿನಲ್ಲಿಯೇ ಅಧ್ಯಯನ ಮಾಡುತ್ತಿದ್ದು, ಒಬ್ಬ ವಿದ್ಯಾರ್ಥಿನಿ ಇನ್ನೊಬ್ಬ ವಿದ್ಯಾರ್ಥಿಯ ಜೊತೆ ಸಲುಗೆಯಿಂದ ಇದ್ದಳು. ಅದನ್ನು ಸಹಿಸದ ಆರೋಪಿ ತಮ್ಮ ಊರಿನ ಮತ್ತೊಂದು ಕಾಲೇಜಿನಲ್ಲಿ ಓದುತ್ತಿದ್ದ ಸ್ನೇಹಿತನ ಸಹಾಯ ಪಡೆದು, ಆ ವಿದ್ಯಾರ್ಥಿನಿಯ ಇನ್‌ಸ್ಟಾಗ್ರಾಂ ಖಾತೆ ಹ್ಯಾಕ್ ಮಾಡಿಸಿದ್ದಾನೆ. ತನ್ನ ಹೆಸರು ಎಲ್ಲಿಯೂ ಬರಬಾರದು ಎಂದು ದಿಕ್ಕು ತಪ್ಪಿಸಲು ಪೊಲೀಸ್ ಬಗ್ಗೆ ಅವಹೇಳನ ಪದ ಬಳಸಿ ಪೋಸ್ಟ್ ಮಾಡಿದ್ದ. ಎಲ್ಲಾ ವಿಚಾರ ತಿಳಿದ ಬೆನ್ನಲ್ಲೇ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಮಂಗಳೂರು: ವಿದ್ಯಾರ್ಥಿಗಳಿಗೆ ನೈಟ್ ಪಾರ್ಟಿ ಆಯೋಜನೆ, ಪಬ್ ಮಾಲೀಕರ ವಿರುದ್ಧ ಪೊಲೀಸ್ ಪ್ರಕರಣ

Posted by Vidyamaana on 2024-07-27 02:11:24 |

Share: | | | | |


ಮಂಗಳೂರು: ವಿದ್ಯಾರ್ಥಿಗಳಿಗೆ ನೈಟ್ ಪಾರ್ಟಿ ಆಯೋಜನೆ, ಪಬ್ ಮಾಲೀಕರ ವಿರುದ್ಧ ಪೊಲೀಸ್ ಪ್ರಕರಣ

ಮಂಗಳೂರು : ವಿದ್ಯಾರ್ಥಿಗಳಿಗೆ ನೈಟ್ ಪಾರ್ಟಿ ಆಯೋಜನೆ ಮಾಡಿದ ಆರೋಪದ ಮೇರೆಗೆ ಮಂಗಳೂರಿನ ಪಬ್ ವಿರುದ್ಧ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಮಂಗಳೂರು ನಗರದ ದೇರೆಬೈಲ್‌ ಕೊಂಚಾಡಿಯಲ್ಲಿರುವ ಬಾರ್‌ ಮತ್ತು ಪಬ್ ಒಂದರಲ್ಲಿ ಸ್ಟೂಡೆಂಟ್ಸ್‌ ವೆಡ್ನೆಸ್ ಡೇ ನೈಟ್‌ ಎಂಬ ಕಾರ್ಯಕ್ರಮವನ್ನು ಆಯೋಜಿಸಿ ವಿದ್ಯಾರ್ಥಿಗಳನ್ನು ಮುಕ್ತವಾಗಿ ಆಹ್ವಾನಿಸಿದ್ದಾರೆ.

ಸಂಜೆ 7ಗಂಟೆಯಿಂದ ಮಧ್ಯರಾತ್ರಿ ವರೆಗೆ ಈ ಕಾರ್ಯಕ್ರಮವನ್ನು ಆಯೋಜಿಸಲು ಸಮಯ ನಿಗದಿಪಡಿಸಲಾಗಿತ್ತು. 

ಕಾರ್ಯಕ್ರಮದಲ್ಲಿ ಆಹಾರ, ಮದ್ಯ, ಮ್ಯೂಸಿಕ್‌, ಮನೋರಂಜನಾ ಕಾರ್ಯಕ್ರಮಗಳಿರುವುದಾಗಿ ಪ್ರಚಾರ ಮಾಡಲಾಗಿತ್ತು. ಇಷ್ಟು ಮಾತ್ರವಲ್ಲದೆ ವಿದ್ಯಾರ್ಥಿಗಳು ಸ್ಕೂಲ್‌ ಐಡಿ (ಗುರುತು ಕಾರ್ಡ್‌) ತೋರಿಸಿದರೆ ಬಿಲ್‌ನಲ್ಲಿ ಶೇ.15ರಷ್ಟು ಕಡಿತದ ಆಫರ್‌ ನೀಡಲಾಗಿತ್ತು. ಈ ಇವೆಂಟ್‌ಗೆ ವಿದ್ಯಾರ್ಥಿನಿಯರು (ಹುಡುಗಿಯರು) ಬಂದರೆ ಅವರಿಗೆ ಫ್ರೀ ಶೂಟರ್ಸ್ (ಸ್ಪೆಷಲ್‌ ಆಫರ್‌) ನೀಡುವ ಭರವಸೆಯನ್ನು ನೀಡಲಾಗಿತ್ತು.

ಇದೀಗ ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆಯೇ ಎಚ್ಚೆತ್ತುಕೊಂಡಿರುವ ಮಂಗಳೂರು ಪೊಲೀಸರು ಕಾರ್ಯಕ್ರಮ ಆಯೋಜನೆ ಮಾಡಿದ್ದ ಪಬ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಅಬಕಾರಿ ಇಲಾಖೆ ಅಧಿಕಾರಿಗಳ ಮತ್ತು ಮಂಗಳೂರು ಪೊಲೀಸ್ ಅಧಿಕಾರಿಗಳು ಇದೀಗ ಪಬ್ ವಿರುದ್ಧ ಕ್ರಮಕ್ಕೆ ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರು ಮಾಹಿತಿ ನೀಡಿದ್ದು, ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಪ್ರಸಾರವಾದ ಮಂಗಳೂರಿನ ದೇರೆಬೈಲ್‌ನಲ್ಲಿರುವ ಹೋಟೆಲ್ ಲಾಲ್‌ಬಾಗ್ ಇನ್ (ಲಿಕ್ಕರ್ ಲಾಂಜ್ ಬಾರ್) ಪಬ್‌ನ ಪ್ರಚಾರದ ಪೋಸ್ಟರ್ ಆಧಾರದ ಮೇಲೆ ದೂರು ದಾಖಲಿಸಿಕೊಳ್ಳಲಾಗಿದೆ.

ಸೆ.14 : ನಮ್ಮ ಎಂಪಿ ಪುತ್ತೂರ್ ಗ್ ಬರ್ಪೆರ್ – ಒಲ್ಪ ತಿಕ್ಕುವೆರ್?

Posted by Vidyamaana on 2023-09-13 09:38:17 |

Share: | | | | |


ಸೆ.14 : ನಮ್ಮ ಎಂಪಿ  ಪುತ್ತೂರ್ ಗ್ ಬರ್ಪೆರ್ – ಒಲ್ಪ ತಿಕ್ಕುವೆರ್?

ಪುತ್ತೂರು:ದ.ಕ.ಸಂಸದ ನಳಿನ್ ಕುಮಾರ್ ಕಟೀಲ್‌ ಅವರು ಸೆ.14ರಂದು ಪುತ್ತೂರಿಗೆ ಆಗಮಿಸಲಿದ್ದು, ಬಿಜೆಪಿ ಕಚೇರಿಯಲ್ಲಿ ಸಾರ್ವಜನಿಕ ಅಹವಾಲು ಸ್ವೀಕಾರ ಮಾಡಲಿದ್ದಾರೆ. ಬಳಿಕ ಕೇಂದ್ರದ ವಿವಿಧ ಕಾಮಗಾರಿಗಳ ವೀಕ್ಷಣೆ ಮಾಡಲಿದ್ದಾರೆ.


ಬೆಳಿಗ್ಗೆ ಗಂಟೆ 10ರಿಂದ ಮಧ್ಯಾಹ್ನದ ತನಕ ಅವರು ಸಾರ್ವಜನಿಕ ಅಹವಾಲು ಸ್ವೀಕಾರ ಮಾಡಲಿದ್ದು, ಬಳಿಕ ಕೇಂದ್ರ ಸರಕಾರದಿಂದ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ವೀಕ್ಷಣೆ ನಡೆಸಲಿದ್ದಾರೆ ಎಂದು ಬಿಜೆಪಿ ಕಚೇರಿ ಪ್ರಕಟಣೆ ತಿಳಿಸಿದೆ.

ಪುತ್ತೂರು :ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Posted by Vidyamaana on 2024-08-15 21:39:19 |

Share: | | | | |


ಪುತ್ತೂರು :ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆ

ಪುತ್ತೂರು: ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ 78ನೇ ಸ್ವಾತಂತ್ರೋತ್ಸವವನ್ನು ಆಚರಿಸಲಾಯಿತು

ಮಗನಿಂದ ತಾಯಿ ಕೊಲೆ ಕೇಸ್‌ಗೆ ಬಿಗ್‌ಟ್ವಿಸ್ಟ್‌: ಪೊಲೀಸ್‌ ತನಿಖೆ ವೇಳೆ ಸ್ಪೋಟಕ ಮಾಹಿತಿ ಬಹಿರಂಗ

Posted by Vidyamaana on 2024-02-06 12:24:15 |

Share: | | | | |


ಮಗನಿಂದ ತಾಯಿ ಕೊಲೆ ಕೇಸ್‌ಗೆ ಬಿಗ್‌ಟ್ವಿಸ್ಟ್‌: ಪೊಲೀಸ್‌ ತನಿಖೆ ವೇಳೆ ಸ್ಪೋಟಕ ಮಾಹಿತಿ ಬಹಿರಂಗ

ಬೆಂಗಳೂರು :ಕೆ.ಆರ್.ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಕೊಲೆ ಮಗ ಮಾಡಿದಲ್ಲ ಬದಲಿಗೆ ಅಪ್ಪನ ಕೊಲೆಯನ್ನು ತನ್ನ ಮೇಲೆ ಹಾಕಿಕೊಂಡು ಮಗನೇ ಪೊಲೀಸರಿಗೆ ತಾನೇ ಕೊಲೆ ಮಾಡಿದ್ದ ಎನ್ನಲಾಗಿದೆ.ಈ ನಡುವೆ ಫಿಂಗರ್ ಪ್ರಿಂಟ್ ಪತ್ತೆಯಾದ ಹಿನ್ನೆಲೆ ತನಿಖೆ ನಡೆಸಿದ್ದ ಪೊಲೀಸರು ಕೊಲೆಯಲ್ಲಿ ತಂದೆ ಕೊಲೆ ಮಾಡಿದ್ದ ಎನ್ನಲಾಗಿದೆ.ಮಹಿಳೆ ಕೊಲೆಗೆ ಅಕ್ರಮ ಸಂಬಂಧವೇ ಪ್ರಮುಖ ಕಾರಣ ಎನ್ನಲಾಗಿದೆ. ಈ ನಡುವೆ ನೇತ್ರಾಳಿಗೆ ಅಕ್ರಮ ಸಂಬಂಧದ ಜೊತೆಗೆ ಕುಡಿತದ ಚಟ ಇತ್ತು. ಕೆಲವೊಮ್ಮೆ ಎರಡು ಮೂರು ದಿನಗಳ ಕಾಲ ಮನೆಗೆ ಬರ್ತಾ ಇರಲಿಲ್ಲ. ಹೀಗಾಗಿ ಮಗನ ಜೊತೆ ಸೇರಿ ಕೊಲೆ ಮಾಡಲು ನಿರ್ಧಾರ ಮಾಡಿದೆ ಎಂದು ಆರೋಪಿ ಪೊಲೀಸರ ಮುಂದೆ ಹೇಳಿದ್ದಾನೆ ಎನ್ನಲಾಗಿದೆ. ಅಪ್ರಾಪ್ತರು ಜೈಲಿಗೆ ಹೋದರೆ ಶಿಕ್ಷೆ ಕಡಿಮೆ ಇರುತ್ತೆ, ಜೊತೆಗೆ ಅವರೇ ವಿದ್ಯಾಭ್ಯಾಸ ಕೊಡಿಸ್ತಾರೆ ಎಂದು ಅಪ್ಪನನ್ನು ಮಗ ಓಲೈಸಿದ್ದ ಎನ್ನಲಾಗಿದ್ದು, ಈ ಹಿನ್ನಲೆಯಲ್ಲಿ ಮಗ ಪೊಲೀಸರ ಮುಂದೆ ಹೇಳಿದ್ದ ಎನ್ನಲಾಗಿದೆ.

Recent News


Leave a Comment: