ಮಂಗಳೂರು- ಸುಬ್ರಹ್ಮಣ್ಯ ಮಧ್ಯೆ ಪ್ಯಾಸೆಂಜರ್ ರೈಲು ಆರಂಭಿಸಲು ಸಂಸತ್ತಿನಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಒತ್ತಾಯ

ಸುದ್ದಿಗಳು News

Posted by vidyamaana on 2024-07-24 16:52:02 |

Share: | | | | |


ಮಂಗಳೂರು- ಸುಬ್ರಹ್ಮಣ್ಯ ಮಧ್ಯೆ ಪ್ಯಾಸೆಂಜರ್ ರೈಲು ಆರಂಭಿಸಲು ಸಂಸತ್ತಿನಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಒತ್ತಾಯ

ವದೆಹಲಿ : ಮಂಗಳೂರು- ಸುಬ್ರಹ್ಮಣ್ಯ ಮಧ್ಯೆ ಪ್ಯಾಸೆಂಜರ್ ರೈಲು ಆರಂಭಿಸಲು ಸಂಸತ್ತಿನಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಒತ್ತಾಯಿಸಿದರು.


ಈ ಹಿಂದೆ ಮಂಗಳೂರು- ಸುಬ್ರಹ್ಮಣ್ಯ ನಡುವೆ ಮೀಟರ್ ಗೇಜ್ ಹಳಿ ಇದ್ದಾಗ ಪ್ಯಾಸೆಂಜರ್ ರೈಲು ಓಡಾಟ ಇತ್ತು. ಬ್ರಾಡ್ ಗೇಜ್ ಹಳಿ ಮಾಡುವ ಸಲುವಾಗಿ 2005ರಲ್ಲಿ ಈ ರೈಲಿನ ಸಂಚಾರವನ್ನು ನಿಲ್ಲಿಸಲಾಗಿತ್ತು. ಆನಂತರ, ಬ್ರಾಡ್ ಗೇಜ್ ಹಳಿಯಾಗಿ ಪರಿವರ್ತನೆ ಮಾಡಲಾಗಿದೆ. ಅಂದು ಓಡುತ್ತಿದ್ದ ಪ್ಯಾಸೆಂಜರ್ ರೈಲು ಮಂಗಳೂರಿನಿಂದ ಕಬಕ- ಪುತ್ತೂರು ನಡುವೆ ಓಡಾಟ ನಡೆಸುತ್ತಿದ್ದು, ಅದನ್ನು ಸುಬ್ರಹ್ಮಣ್ಯದವರೆಗೆ ವಿಸ್ತರಣೆ ಮಾಡಬೇಕು.

ಮಂಗಳೂರು – ಸುಬ್ರಹ್ಮಣ್ಯ ಮಧ್ಯೆ ರೈಲು ಓಡಾಟವಾದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆ, ಕಾಲೇಜಿಗೆ ಹೋಗುವವರಿಗೆ ಉಪಯೋಗವಾಗಲಿದೆ. ಗ್ರಾಮಾಂತರ ಪ್ರದೇಶವಾದ ಸುಳ್ಯದಿಂದ ಮಂಗಳೂರಿಗೆ ಪ್ರತಿದಿನ ಓಡಾಟ ಮಾಡುವವರಿದ್ದಾರೆ. ಅವರಿಗೂ ಉಪಯುಕ್ತ ಆಗಲಿದೆ. ಇದು ಸೌತ್ ವೆಸ್ಟರ್ನ್ ರೈಲ್ವೇ ವಿಭಾಗದಲ್ಲಿದ್ದು, ನಮ್ಮ ಜಿಲ್ಲೆಯ ಒಳಗೆ ಸಂಚರಿಸುವ ಏಕೈಕ ಪ್ಯಾಸೆಂಜರ್ ರೈಲಾಗಿದೆ.


ಜನಸಾಮಾನ್ಯರ ಹಿತದೃಷ್ಟಿಯಿಂದ ಈ ರೈಲನ್ನು ಸುಬ್ರಹ್ಮಣ್ಯದವರೆಗೂ ವಿಸ್ತರಣೆ ಮಾಡಬೇಕು ಎಂದು ರೈಲ್ವೇ ಸಚಿವರನ್ನು ಮನವಿ ಮಾಡಿದ್ದಾರೆ. ಇದಕ್ಕುತ್ತರಿಸಿದ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್, ಸೇನೆಯಿಂದ ನಿವೃತ್ತಿ ಪಡೆದು ಸಂಸದರಾಗಿರುವ ಕ್ಯಾಪ್ಟನ್ ಬ್ರಿಜೇಶ್ ಚೌಟ ಬಗ್ಗೆ ಗೌರವ ಹೊಂದಿದ್ದು, ರೈಲ್ವೇ ವಿಚಾರಗಳ ಬಗ್ಗೆ ಯಾವುದೇ ಮನವಿಯಿದ್ದರೂ ನನ್ನ ಕಚೇರಿಗೆ ಬಂದು ವೈಯಕ್ತಿಕವಾಗಿ ಚರ್ಚಿಸಬಹುದು. ಪರಿಹರಿಸಲು ಮುಕ್ತನಿದ್ದೇನೆ ಎಂದು ಹೇಳಿದರು.

 Share: | | | | |


ವಿಶ್ವಕಪ್ ಫೈನಲ್:ಸ್ಮಿತ್ ಎಲ್ಬಿಡಬ್ಲ್ಯೂ ಔಟ್ ಆಗಿ ಮರಳಿದ್ದು ಚರ್ಚೆಗೆ ಗುರಿ

Posted by Vidyamaana on 2023-11-19 20:09:24 |

Share: | | | | |


ವಿಶ್ವಕಪ್ ಫೈನಲ್:ಸ್ಮಿತ್ ಎಲ್ಬಿಡಬ್ಲ್ಯೂ ಔಟ್ ಆಗಿ ಮರಳಿದ್ದು ಚರ್ಚೆಗೆ ಗುರಿ

ಅಹಮದಾಬಾದ್ : ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ರೋಚಕವಾಗಿ ಸಾಗುತ್ತಿರುವ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ತಂಡ ನೀಡಿದ 241 ರನ್ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯ ಆರಂಭದಲ್ಲಿ ಅಬ್ಬರಿಸಿದರೂ 3 ವಿಕೆಟ್ ಕಳೆದುಕೊಂಡಿದೆ.7 ರನ್ ಗಳಿಸಿದ್ದ ಡೇವಿಡ್ ವಾರ್ನರ್ ಅವರು ಶಮಿ ಎಸೆದ ಚೆಂಡನ್ನು ಕೊಹ್ಲಿ ಕೈಗಿತ್ತು ನಿರ್ಗಮಿಸಿದರು. 15 ರನ್ ಗಳಿಸಿದ್ದ ಮಿಚೆಲ್ ಮಾರ್ಷ್ ಬುಮ್ರಾ ಎಸೆದ ಚೆಂಡನ್ನು ರಾಹುಲ್ ಕೈಗಿತ್ತು ನಿರ್ಗಮಿಸಿದರು. ಬಳಿಕ ಸ್ಮಿತ್‌ ಎಲ್ಬಿಡಬ್ಲ್ಯೂ ಮೂಲಕ ಔಟಾಗಿದ್ದು ವಿಶ್ವಕಪ್ ಫೈನಲ್ ನಂತಹ ಮಹತ್ವದ ಪಂದ್ಯದಲ್ಲಿ ತೀವ್ರ ಚರ್ಚೆಗೆ ಗುರಿಯಾಗಿದೆ.


ಬುಮ್ರಾ ಎಸೆದ  ಆಫ್-ಕಟ್ಟಿಂಗ್ ನಿಧಾನಗತಿಯ ಚೆಂಡು  ಲೆಗ್ ಸೈಡ್ ಆಡಲು ಬಯಸದ ಸ್ಮಿತ್ ಅವರ ಪ್ಯಾಡ್ ಗೆ ತಾಗಿತು. ಅಂಪಾಯರ್ ಔಟ್ ನೀಡಿದರು. ಆಸಕ್ತಿದಾಯಕರಾಗಿ ಸ್ಮಿತ್ ಅದನ್ನು ಪರಿಶೀಲಿಸಲಿಲ್ಲ. ಇನ್ನೊಂದು ಬದಿಯಲ್ಲಿದ್ದ ಹೆಡ್ ಜತೆ ಮಾತನಾಡಿ ಹೊರನಡೆದರು. ಬಾಲ್ ಎತ್ತರವು ನಿಜವಾಗಿಯೂ ಒಂದು ಪ್ರಶ್ನೆಯಾಗಿತ್ತು. ಆದರೆ ರಿಪ್ಲೇ ಇಂಪ್ಯಾಕ್ಟ್ ನಲ್ಲಿ ಔಟ್ ಆಫ್ ಸ್ಟಂಪ್ ಎಂದು ಕಂಡು ಬಂದಿತು.ಅನುಭವಿ ಆಟಗಾರ ಸ್ಮಿತ್ ಅದನ್ನು ಏಕೆ ಸರಿಯಾಗಿ ಏಕೆ ಪರಿಶೀಲಿಸಲಿಲ್ಲ? ಎಂದು ಹಲವರು ಪ್ರಶ್ನಿಸಿದ್ದಾರೆ.ಆಸ್ಟ್ರೇಲಿಯ 22 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 122 ರನ್ ಗಳಿಸಿದೆ.

ಅತ್ತಿಬೆಲೆ ಪಟಾಕಿ ಗೋಡೌನ್ ಗೆ ಬೆಂಕಿ : ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆ

Posted by Vidyamaana on 2023-10-08 08:29:34 |

Share: | | | | |


ಅತ್ತಿಬೆಲೆ ಪಟಾಕಿ ಗೋಡೌನ್ ಗೆ ಬೆಂಕಿ : ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆ

 ಬೆಂಗಳೂರಿನ ಆನೇಕಲ್ ತಾಲೂಕಿನ ಅತಿ ತಲೆಯಲ್ಲಿ ನಿನ್ನೆ ನಡೆದ ಪಟಾಕಿ ಗೌಡೌನ್ ಅಗ್ನಿ ದುರಂತಕ್ಕೆ ಸಂಬಂಧಿಸಿದಂತೆ ಸಾವಿನ ಸಂಖ್ಯೆ 14ಕ್ಕೆ ಏರಿಕೆಯಾಗಿದೆ ನಿನ್ನೆ ತಡ ರಾತ್ರಿ ನಡೆದ ಕಾರ್ಯಾಚರಣೆ ವೇಳೆ ಇನ್ನೊಂದು ಮತ ದೇಹ ಪತ್ತೆಯಾಗಿದೆ ಎಂದು ಹೇಳಲಾಗುತ್ತಿದೆ.ಅಲ್ಲದೆ ಇದೆ ವೇಳೆ ಬಾಲಾಜಿ ಪಟಾಕಿ ಅಂಗಡಿ ಮಾಲೀಕ ವಿರುದ್ಧ ಕಕೇಸ್ ದಾಖಲಾಗಿದ್ದು, ಅಂಗಡಿ ಮಾಲೀಕ ರಾಮಸ್ವಾಮಿರೆಡ್ಡಿ ಹಾಗೂ ಜಾಗದ ಮಾಲೀಕ ಅನಿಲ ವಿರುದ್ಧ ಅತ್ತಿಬೆಲೆ ಠಾಣೆಯಲ್ಲಿ ಐಪಿಸಿ ಸೆಕ್ಷನ್ 337, 338, 304ರ ಅಡಿ FIR ದಾಖಲಾಗಿದೆ.ಪಟಾಕಿ ಗೋಡೌನ ಅಗ್ನಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ತಡರಾತ್ರಿ ಕಾರ್ಯಚರಣೆ ಮಾಡುತ್ತಿದ್ದ ವೇಳೆ ಇನ್ನೊಂದು ಮೃತದೇಹ ಪತ್ತೆಯಾಗಿದೆ.

ಅಸಿಡಿಟಿಯ ಎದೆ ಉರಿಯನ್ನು ಮತ್ತು ಎದೆ ನೋವಿನ ಉರಿಯನ್ನು ಐಡೆಂಟಿಫೈ ಮಾಡೋದು ತುಂಬಾ ಸುಲಭ: ಡಾ. ಜೆ ಸಿ ಅಡಿಗ

ಪಟಾಕಿ ಗೌಡೌನ್ ಅಗ್ನಿ ದುರಂತದಲ್ಲಿ ಮೃತದೇಹಗಳು ಸುಟ್ಟು ಕರಕಲಾಗಿವೆ. ಪಟಾಕಿ ಗೋಡೌನಲ್ಲಿ ದುರಂತದಲ್ಲಿ 14ಜನರ ಸಜೀವ ದಹನ ಕೇಸ್ ಬಗ್ಗೆ ಅಧಿಕಾರಿಗಳಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿಯನ್ನು ಪಡೆಯಲಿದ್ದಾರೆ. ದುರಂತದ ಕುರಿತು ಸಮಗ್ರ ಮಾಹಿತಿ ಸಂಗ್ರಹಿಸಿ ಸಿಎಂ ಸಿದ್ದರಾಮಯ್ಯ ಪರಿಶೀಲನೆ ನಡೆಸಲಿದ್ದಾರೆ ಎಂದ್ ತಿಳಿದುಬಂದಿದೆ.

ವಿಟ್ಲ: ಬಸ್‌ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ದ್ವಿಚಕ್ರ ವಾಹನ ಸವಾರ ಮೃತ್ಯು

Posted by Vidyamaana on 2024-08-21 19:54:00 |

Share: | | | | |


ವಿಟ್ಲ: ಬಸ್‌ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ದ್ವಿಚಕ್ರ ವಾಹನ ಸವಾರ ಮೃತ್ಯು

ವಿಟ್ಲ: ದ್ವಿಚಕ್ರ ವಾಹನ ಹಾಗೂ ಖಾಸಗಿ ಬಸ್‌ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಆಗಸ್ಟ್ 12 ಮಂಗಳವಾರ ವಿಟ್ಲ-ಸಾಲೆತ್ತೂರು-ಮುಡಿಪು ರಸ್ತೆಯ ಕಟ್ಟತ್ತಿಲ ಎಂಬಲ್ಲಿ ನಡೆದಿದ್ದು, ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ದಕ್ಷಿಣ ಕನ್ನಡದಲ್ಲಿ ಮಳೆಗೆ ಮತ್ತೊಂದು ಬಲಿ: ವಿದ್ಯುತ್‌ ಪ್ರವಹಿಸಿ ಯುವತಿ ದುರ್ಮರಣ

Posted by Vidyamaana on 2024-06-27 22:16:16 |

Share: | | | | |


ದಕ್ಷಿಣ ಕನ್ನಡದಲ್ಲಿ ಮಳೆಗೆ ಮತ್ತೊಂದು ಬಲಿ: ವಿದ್ಯುತ್‌ ಪ್ರವಹಿಸಿ ಯುವತಿ ದುರ್ಮರಣ

ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ಮಳೆಯಿಂದಾಗಿ ಮತ್ತೊಂದು ಬಲಿಯಾಗಿದೆ. ಕಂಬವನ್ನು ಮುಟ್ಟಿದ ಪರಿಣಾಮ, ವಿದ್ಯುತ್ ಪ್ರವಹಿಸಿ ಯುವತಿಯೊಬ್ಬಳು ದುರ್ಮರಣ ಹೊಂದಿರೋದಾಗಿ ತಿಳಿದು ಬಂದಿದೆ. ಬೆಳ್ತಂಗಡಿ ತಾಲೂಕಿನ ಶಿಬಾಜೆಯಲ್ಲಿ ಮಳೆಗೆ ಬರ್ಗುಲಾ ನಿವಾಸಿ ಪ್ರತೀಕ್ಷಾ ಶೆಟ್ಟಿ(20) ಸಾವನ್ನಪ್ಪಿದ್ದಾರೆ.

ಕಲಾಪದಲ್ಲಿ ಎಡವಟ್ಟು ಮಾಡಿದ ಪ್ರದೀಪ್ ಈಶ್ವರ್

Posted by Vidyamaana on 2023-07-06 13:46:07 |

Share: | | | | |


ಕಲಾಪದಲ್ಲಿ ಎಡವಟ್ಟು ಮಾಡಿದ ಪ್ರದೀಪ್ ಈಶ್ವರ್

ಬೆಂಗಳೂರು : ಮಂಡ್ಯ ಜಿಲ್ಲೆ ನಾಗಮಂಗಲ ಡಿಪೋ ಎದುರು ಸಾರಿಗೆ ಬಸ್ ಚಾಲಕ ಜಗದೀಶ್ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಸದನದ ಬಾವಿಗಿಳಿದು ಧರಣಿ ನಡೆಸಿದರು. ಈ ವೇಳೆ ಮಾತನಾಡಿದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಎಡವಟ್ಟು ಮಾಡಿಕೊಂಡದ್ದು ಗಮನ ಸೆಳೆಯಿತು.ಒಂದು ಸಾವಿಗೆ ಇವರು ಇಷ್ಟೆಲ್ಲಾ ಹೋರಾಟ ಮಾಡುತ್ತಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಸಾವಿರಾರು ಜನ ಪ್ರಾಣ ಕಳೆದುಕೊಂಡರು, ಅವರಿಗೂ ನ್ಯಾಯ ಕೊಡಿಸಲು ಹೋರಾಟ ಮಾಡಬೇಕಲ್ಲ ಎಂದರು. ಈ ವೇಳೆ ಸ್ಪೀಕರ್ ಯು.ಟಿ.ಖಾದರ್ , ಎ ..ಪ್ರದೀಪ್..ಸಾವು ಆಗಲಿಲ್ಲ ಮಾರಾಯ .ಕುತ್ಕೋ ನೀನು ಎಂದರುಸ್ಪೀಕರ್ ಯು.ಟಿ.ಖಾದರ್ ಅವರ ಮನವಿಯ ಬಳಿಕ ಪ್ರತಿಪಕ್ಷಗಳ ಶಾಸಕರು ಧರಣಿ ಕೈಬಿಟ್ಟು ತಮ್ಮ ತಮ್ಮ ಸ್ಥಾನಗಳಲ್ಲಿ ಕುಳಿತುಕೊಂಡರು. ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿ ಸಾರಿಗೆ ಬಸ್ ಚಾಲಕ ಜಗದೀಶ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಿ ಜೆಡಿಎಸ್ ಶಾಸಕರು ಸಚಿವ ಚೆಲುವರಾಯ ಸ್ವಾಮಿ ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಪುತ್ತೂರು ಕ್ಷೇತ್ರದಲ್ಲಿ ಶೇ.80.08 ಮತದಾನ

Posted by Vidyamaana on 2023-05-11 01:51:32 |

Share: | | | | |


ಪುತ್ತೂರು ಕ್ಷೇತ್ರದಲ್ಲಿ ಶೇ.80.08 ಮತದಾನ

ಪುತ್ತೂರು:ಕುತೂಹಲ ಕೆರಳಿಸಿರುವ ಕರ್ನಾಟಕ ವಿಧಾನ ಸಭಾ ಚುನಾವಣೆ ಮೇ10ರ೦ದು ಶಾಂತಿಯುತವಾಗಿ ಮುಕ್ತಾಯಗೊ೦ಡಿದೆ.ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆ ತನಕ ಮತದಾನ ನಡೆದಿದೆ.ಕೆಲವೊ೦ದು ಕೇಂದ್ರಗಳಲ್ಲಿ ಅವಧಿ ಮುಗಿದ ಬಳಿಕವೂ ಮತದಾನ ನಡೆದಿದ್ದು ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಶೇ80.08 ಮತ ಚಲಾವಣೆಯಾಗಿದೆ.ಮತಚಲಾಯಿಸಲು ಹಕ್ಕು ಪಡೆದಿದ್ದ 2,12,753 ಮತದಾರರಲ್ಲಿ 1,70,366 ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ. 1,04,918 ಪುರುಷ ಮತದಾರರ ಪೈಕಿ 84,087 ಮತ್ತು1,07,832 ಮಹಿಳಾ ಮತದಾರರ ಪೈಕಿ 86,278 ಮಂದಿ ಮತ ಚಲಾಯಿಸಿದ್ದಾರೆ. ಇವಿಎಂನಲ್ಲಿನ ತಾಂತ್ರಿಕ ದೋಷದಿಂದಾಗಿ ಕೆಲವೊಂದು ಮತಗಟ್ಟೆಗಳಲ್ಲಿ ಮತದಾನ ಪ್ರಕ್ರಿಯೆ ಸ್ಥಗಿತಗೊಂಡು ವಿಳಂಬ ಹೊರತುಪಡಿಸಿದರೆ ಮತದಾನ ಸುಸೂತ್ರವಾಗಿ ನಡೆದಿದೆ.ಕ್ಷೇತ್ರದ ಕೆಲವು ಬೂತ್‌ಗಳಲ್ಲಿ ಮತದಾನ ಅವಧಿ ಮುಕ್ತಾಯದ ವೇಳೆಯೂ ಜನ ಸರತಿ ಸಾಲಲ್ಲಿ ನಿಂತಿದ್ದರಿಂದ ರಾತ್ರಿ 7.30ರ ತನಕವೂ ಮತದಾನ ಪ್ರಕ್ರಿಯೆ ನಡೆದಿದೆ.

ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಶೇ.78.53 ಮತ ಚಲಾವಣೆಯಾಗಿದೆ.ಒಟು 2,06,029 ಮತದಾರರ ಪೈಕಿ 1,61,788 ಮತದಾರರು ಮತ ಚಲಾಯಿಸಿದ್ದಾರೆ.ಬಂಟ್ವಾಳ ವಿಧಾನಸಭಾ ಚುನಾವಣೆಯಲ್ಲಿ 2,28,377 ಮತದಾರರ ಪೈಕಿ 1,83,326 ಮತದಾರರು ಮತ ಚಲಾಯಿಸುವ ಮೂಲಕ ಶೇ.80.27 ಮತದಾನವಾಗಿದೆ.

Recent News


Leave a Comment: