ಶಿರೂರಿನ ಭೂಕುಸಿತದಲ್ಲಿ ಕಾಣೆಯಾದ ಲಾರಿ ನೀರಿನ ಅಡಿಯಲ್ಲಿ ಪತ್ತೆ; ಮಾಹಿತಿ ನೀಡಿದ ಸಚಿವ

ಸುದ್ದಿಗಳು News

Posted by vidyamaana on 2024-07-24 18:06:21 | Last Updated by Vidyamaana on 2024-07-24 18:06:21

Share: | | | | |


ಶಿರೂರಿನ ಭೂಕುಸಿತದಲ್ಲಿ ಕಾಣೆಯಾದ ಲಾರಿ ನೀರಿನ ಅಡಿಯಲ್ಲಿ ಪತ್ತೆ; ಮಾಹಿತಿ ನೀಡಿದ ಸಚಿವ

ಕಾರವಾರ: ಉತ್ತರ ಕನ್ನಡದ ಶಿರೂರಿನ ಭೂಕುಸಿತದಲ್ಲಿ ನಾಪತ್ತೆಯಾಗಿದ್ದ ಕೋಝಿಕ್ಕೋಡ್ ಮೂಲದ ಅರ್ಜುನ್ ಅವರ ಲಾರಿ ಎಂದು ನಂಬಲಾದ ಟ್ರಕ್ ನದಿಯ ಆಳದಲ್ಲಿ ಇರುವ ಸುಳಿವು ಲಭ್ಯವಾಗಿದೆ. ಕರ್ನಾಟಕದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಇದನ್ನು ಖಚಿತಪಡಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ಸಚಿವರು ಮಾಹಿತಿ ನೀಡಿದ್ದಾರೆ.

ನದಿಯ ಕೆಳಭಾಗದಲ್ಲಿ ಟ್ರಕ್ ಪತ್ತೆಯಾಗಿದೆ ಎಂದು ತಿಳಿದು ಬಂದಿದ್ದು ಅದಕ್ಕಾಗಿ ಶೋಧ ನಡೆಯುತ್ತಿದೆ.

ಶಿರೂರಿನಲ್ಲಿ ನಡೆಯುತ್ತಿರುವ ರಕ್ಷಣಾ ಕಾರ್ಯಾಚರಣೆಯ ಒಂಬತ್ತನೇ ದಿನದಂದು, ಲಾರಿಯ ಬಗ್ಗೆ ನಿರ್ಣಾಯಕ ಮಾಹಿತಿಯನ್ನು ಪಡೆಯಲಾಗಿದೆ. ಇಂದು ಬೆಳಗ್ಗೆ ಬೂಮ್ ಲೆಂಗ್ತ್ ಕ್ರೇನ್ ಬಂದಿದ್ದು, ತಪಾಸಣೆ ಪುನರಾರಂಭವಾಗಿದೆ. ಈ ಯಂತ್ರವು 60 ಅಡಿ ಆಳದವರೆಗೆ ಹುಡುಕಬಲ್ಲ ಸಾಮರ್ಥ್ಯ ಹೊಂದಿದೆ. ಪೊಲೀಸ್ ವಾಹನದೊಂದಿಗೆ ವಾಹನವನ್ನು ಸ್ಥಳಕ್ಕೆ ತರಲಾಗಿದೆ.

ಈ ಕುರಿತು ಕೃಷ್ಣ ಬೈರೇಗೌಡ Xನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ತಮ್ಮ X ಖಾತೆಯಲ್ಲಿ ಈ ರೀತಿ ಬರೆದುಕೊಂಡಿದ್ದಾರೆ.ಜುಲೈ 16 ರಂದು ಬೆಳಿಗ್ಗೆ ಕೋಝಿಕ್ಕೋಡ್‌ನ ಕಂಡ್ಯಕ್ಕಲ್ ಮೂಲದ ಅರ್ಜುನ್ (30) ಕರ್ನಾಟಕ-ಗೋವಾ ಗಡಿಯಲ್ಲಿ ಹಾದು ಹೋಗುವ ಪನ್ವೇಲ್-ಕನ್ಯಾಕುಮಾರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಕ್ಕೀಡಾಗಿದ್ದರು. ಭೂಕುಸಿತದಲ್ಲಿ ಟೀ ಅಂಗಡಿ ಮಾಲೀಕ ಸೇರಿದಂತೆ 10 ಜನರು ಸಾವನ್ನಪ್ಪಿದ ಸ್ಥಳದಲ್ಲಿ ಲಾರಿಯ ಜಿಪಿಎಸ್ ಸ್ಥಳವನ್ನು ಕೊನೆಯದಾಗಿ ಪತ್ತೆ ಹಚ್ಚಲಾಯಿತು.

 Share: | | | | |


ಮುರುಘಾ ಶ್ರೀ ಮತ್ತೆ ಜೈಲಿಗೆ: ಜಾಮೀನು ರದ್ದುಗೊಳಿಸಿ ಸುಪ್ರೀಂಕೋರ್ಟ್ ಆದೇಶ

Posted by Vidyamaana on 2024-04-23 21:54:22 |

Share: | | | | |


ಮುರುಘಾ ಶ್ರೀ ಮತ್ತೆ ಜೈಲಿಗೆ: ಜಾಮೀನು ರದ್ದುಗೊಳಿಸಿ ಸುಪ್ರೀಂಕೋರ್ಟ್ ಆದೇಶ

ಚಿತ್ರದುರ್ಗ, ಏ.23: ಫೋಕ್ಸೋ (POCSO) ಪ್ರಕರಣ ಸಂಬಂಧ ವಿಚಾರಣೆ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಸ್ವಾಮೀಜಿ(Murugha Mutt Swamiji) ಅವರ ಜಾಮೀನು ರದ್ದುಗೊಳಿಸಿ, ನಾಲ್ಕು ತಿಂಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಸುಪ್ರೀಂಕೋರ್ಟ್ ಆದೇಶಿಸಿದೆ. ಒಂದು ವಾರದಲ್ಲಿ ನ್ಯಾಯಾಂಗ ಬಂಧನಕ್ಕೆ ತೆರಳುವಂತೆ ಸೂಚನೆ ಕೂಡ ನೀಡಿದೆ. ಜೊತೆಗೆ ವಿಶೇಷ ಕೋರ್ಟ್​ನಲ್ಲಿ ಸಂತ್ರಸ್ತ ಮಕ್ಕಳ ವಿಚಾರಣೆಗೆ ಸುಪ್ರೀಂ ಆದೇಶಿಸಿದೆ. ಇನ್ನು 4 ತಿಂಗಳಲ್ಲಿ ತನಿಖೆ ಪೂರ್ಣಗೊಳ್ಳದಿದ್ದರೆ ಬಂಧನದ ಅವಧಿಯನ್ನು ಇನ್ನೆರಡು ತಿಂಗಳ ಕಾಲ ವಿಸ್ತರಣೆ ಮಾಡಬಹುದು.


ಡಾ. ಶ್ರೀ ಶಿವಮೂರ್ತಿ ಮುರುಘಾ ಶರಣರು ಎಸ್​ಜೆಎಂ ವಿದ್ಯಾಪೀಠದಲ್ಲಿನ ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಪ್ರಕರಣ ಸಂಬಂಧ ಮುರುಘಾ ಮಠದ ಪೀಠಾಧ್ಯಕ್ಷ ಮುರುಘಾ ಶ್ರೀಯನ್ನು ಬಂಧಿಸಲಾಗಿತ್ತು. ಬಳಿಕ ಹೈಕೋರ್ಟ್ ಮುರುಘಾ ಶ್ರೀಗೆ ಷರತ್ತು ಬದ್ಧ ಜಾಮೀನು ನೀಡಿತ್ತು. ಹಾಗೇ ಜಾಮೀನಿನ ಮೇಲೆ ಹೊರ ಬಂದ ಅವರು, ಮುರುಘಾ ಶ್ರೀ ಮಠ ಹಾಗೂ ಎಸ್​ಜೆಎಂ ವಿದ್ಯಾಪೀಠದ ಆಡಳಿತ ನೋಡಿಕೊಳ್ಳುತ್ತಿದ್ದರು.

ಕುಂದಾಪುರ: ಚುನಾವಣಾ ಕಣದಿಂದ ಹಿಂದೆ ಸರಿದ ಬಿಜೆಪಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ

Posted by Vidyamaana on 2023-04-03 16:08:29 |

Share: | | | | |


ಕುಂದಾಪುರ: ಚುನಾವಣಾ ಕಣದಿಂದ ಹಿಂದೆ ಸರಿದ ಬಿಜೆಪಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ

ಕುಂದಾಪುರ:ಏ 3 ರಂದು ಸಂಜೆ ಹಠಾತ್ ಬೆಳವಣಿಗೆಯೊಂದರಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಸತತ ಐದು ಬಾರಿ ಗೆದ್ದು ಅಜೇಯರಾಗುಳಿದಿರುವ ಬಿಜೆಪಿಯ ಹಾಲಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸದಿರಲು ಸ್ವಇಚ್ಛೆಯಿಂದ ನಿರ್ಧರಿಸಿರುವುದಾಗಿ ಪತ್ರಿಕಾ ಹೇಳಿಕೆಯೊಂದರ ಮೂಲಕ ಘೋಷಿಸಿದ್ದಾರೆ.

ಹಾಲಾಡಿ ಅವರ ಈ ನಿರ್ಧಾರ ಅವರ ಲಕ್ಷಾಂತರ ಮಂದಿ ಅಭಿಮಾನಿ ಗಳಿಗೆ ಬರಸಿಡಿಲಿನಂತೆ ಅಪ್ಪಳಿಸಿದೆ. ನಿನ್ನೆ ಸಂಜೆಯವರೆಗೂ ಕುಂದಾಪುರದಲ್ಲಿ ಸತತ ಆರನೇ ಬಾರಿಗೆ ಸ್ಪರ್ಧಿಸಲು ಎಲ್ಲಾ ಸಿದ್ಧತೆ ನಡೆಸಿದ್ದ ಹಾಲಾಡಿ ಅವರು  ಇಂದು ನಡೆದ ರಾಜಕೀಯ ಬೆಳವಣಿಗೆಯಲ್ಲಿ ಈ ಬಾರಿ ಸ್ಪರ್ಧಿಸದಿರುವ ತಮ್ಮ ನಿರ್ಧಾರವನ್ನು ಸಂಜೆ 7 ಗಂಟೆ ಸುಮಾರಿಗೆ ಪತ್ರಿಕಾ ಹೇಳಿಕೆ ಬಿಡುಗಡೆಗೊಳಿಸುವ ಮೂಲಕ ಬಹಿರಂಗಪಡಿಸಿದರು

ಬಿಜೆಪಿ ಟಿಕೆಟ್ ಹೆಸರಲ್ಲಿ ಮತ್ತೊಂದು ಡೀಲ್ ಪ್ರಕರಣ ಬೆಳಕಿಗೆ

Posted by Vidyamaana on 2023-09-16 05:24:21 |

Share: | | | | |


ಬಿಜೆಪಿ ಟಿಕೆಟ್ ಹೆಸರಲ್ಲಿ  ಮತ್ತೊಂದು ಡೀಲ್ ಪ್ರಕರಣ ಬೆಳಕಿಗೆ

ಬೆಂಗಳೂರು: ಬಿಜೆಪಿ ಟಿಕೆಟ್ ಕೊಡಿಸುತ್ತೇವೆಂದು ಮತ್ತೊಂದು ವಂಚನೆ ಪ್ರಕರಣ ಕೊಪ್ಪಳ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.‌ ಉದ್ಯಮಿ ಗೋವಿಂದ ಪೂಜಾರಿ ರೀತಿಯಲ್ಲೇ ಕೊಪ್ಪಳ ಜಿಲ್ಲೆಯ ಬಿಜೆಪಿ ಮುಖಂಡನಿಂದ 21 ಲಕ್ಷ ಪಡೆದು ಟೋಪಿ ಹಾಕಲಾಗಿದೆ. 


ವಿಧಾನಸಭೆ ಚುನಾವಣೆಯಲ್ಲಿ ಕೊಪ್ಪಳ ಜಿಲ್ಲೆಯ ಕನಕಗಿರಿ ಎಸ್ಸಿ ಮೀಸಲು ಕ್ಷೇತ್ರದ ಟಿಕೆಟ್ ಕೊಡಿಸುತ್ತೇವೆಂದು ಬಿಜೆಪಿ ಮುಖಂಡ ಜಿ‌.ತಿಮ್ಮಾರೆಡ್ಡಿ ಗಿಲ್ಲೆಸೂಗುರ್ ಅವರನ್ನು ನಂಬಿಸಿ ಹಣ ಪಡೆದಿದ್ದಾರೆ. ತಿಮ್ಮಾರೆಡ್ಡಿ ಅವರು ತಮ್ಮ ಪತ್ನಿ ಗಾಯತ್ರಿಗೆ ಟಿಕೆಟ್ ಕೊಡಿಸುವಲ್ಲಿ ಭಾರಿ ಪ್ರಯತ್ನ ಮಾಡಿದ್ದರು. ಬಿಜೆಪಿ ಟಿಕೆಟಿಗಾಗಿ ಭಾರೀ ಪೈಪೋಟಿ ನಡೆಸಿದ್ದ ತಿಮ್ಮಾರೆಡ್ಡಿಯನ್ನು ಚೈತ್ರಾ ಕುಂದಾಪುರ ತಂಡದ ಮಾದರಿಯಲ್ಲೇ ಮೂವರ ತಂಡ ಸಂಪರ್ಕಿಸಿ ಮೋಸ ಮಾಡಿದೆ. ಅಮಿತ್ ಷಾ ಹೆಸರಲ್ಲಿ ವಂಚನೆ


ಪ್ರೇಮಿಗಳ ಬೆಡ್ ರೂಂ ವಿಡಿಯೋ ರೆಕಾರ್ಡ್ ಮಾಡಿ ಬ್ಲ್ಯಾಕ್ ಮೇಲ್ - ಮಂಗಳೂರು ಶೆಟ್ಟಿ ಲಂಚ್ ಹೋಂ ನ ಪಾರ್ಟ್ನರ್ಸ್ ಬಂಧನ..!!


ತಾವು ಗೃಹ ಸಚಿವ ಅಮಿತ್ ಷಾ ಆಪ್ತರೆಂದು ಹೇಳಿಕೊಂಡು ದೆಹಲಿ ಮೂಲದ ವಿಶಾಲ್ ನಾಗ್ ಮತ್ತು ಬೆಂಗಳೂರಿನ ಜೀತು, ಗೌರವ್ ಎಂಬವರು ತಿಮ್ಮಾರೆಡ್ಡಿಯನ್ನು ಸಂಪರ್ಕಿಸಿದ್ದರು.‌ 19 ಲಕ್ಷ ನಗದು ಮತ್ತು ಎರಡು ಲಕ್ಷ ರೂ. ಖಾತೆಗೆ ಹಾಕಿಸಿಕೊಂಡಿದ್ದರು. ಚೈತ್ರಾಳ ಡೀಲ್ ಪುರಾಣ ಹೊರಬರುತ್ತಲೇ ತಿಮ್ಮಾರೆಡ್ಡಿ ಅವರು ಮೂವರು ವಂಚಕರ ವಿರುದ್ಧ ಬೆಂಗಳೂರಿನ ಅಶೋಕ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಅಮಿತ್ ಷಾ ಸೂಚನೆಯಂತೆ, ರಾಜ್ಯದಲ್ಲಿ ಸಮೀಕ್ಷೆ ಮಾಡ್ತಿದ್ದೇವೆ. ಅದರಲ್ಲಿ ನಿಮ್ಮ ಹೆಸರು ಮುಂಚೂಣಿಗೆ ತರುತ್ತೇವೆ ಎಂದು ಹೇಳಿಕೊಂಡಿದ್ದ ತಂಡದ ವಿಶಾಲ್ ನಾಗ್ ಎಂಬಾತ ತಾನು ಕೇಂದ್ರ ಬಿಜೆಪಿ ಚುನಾವಣೆ ಸಮೀಕ್ಷೆ ತಂಡದಲ್ಲಿ ಮುಖ್ಯಸ್ಥನೆಂದು ಪರಿಚಯಿಸಿಕೊಂಡಿದ್ದ. ಹೀಗಾಗಿ ಆತನನ್ನ ನಂಬಿ ವಿಶಾಲ್ ನಾಗ್ ಅವರ ಬ್ಯಾಂಕ್ ಖಾತೆಗ 2 ಲಕ್ಷ ರೂ., 19 ಲಕ್ಷ ನಗದನ್ನು ನೇರವಾಗಿ ನೀಡಿದ್ದೆ. ಇವರು, ನನ್ನ ರೀತಿ ಬಹಳ ಜನರಿಗೆ ಮೋಸ ಮಾಡಿದ್ದಾರೆ ಎಂದು ತಿಮ್ಮಾರೆಡ್ಡಿ ತಿಳಿಸಿದ್ದಾರೆ. 


ಹೀಗಾಗಿ ಬಿಜೆಪಿ ಟಿಕೆಟ್ ಗಾಗಿ ರಾಜ್ಯದಲ್ಲಿ‌ ಹಲವಾರು ಮಂದಿ ಆಕಾಂಕ್ಷಿಗಳು ಕೋಟ್ಯಂತರ ರೂಪಾಯಿ ಹಣ ಕಳೆದುಕೊಂಡಿದ್ದಾರೆ ಎನ್ನಲಾಗುತ್ತಿದೆ. ಚೈತ್ರಾ ಕುಂದಾಪುರ ಮತ್ತು ತಂಡ ಬೈಂದೂರು ಕ್ಷೇತ್ರದ ಟಿಕೆಟ್ ಕೊಡಿಸುತ್ತೇವೆಂದು ಐದು ಕೋಟಿ ಡೀಲ್ ಮಾಡಿರೋದು ಬೆಳಕಿಗೆ ಬರುತ್ತಲೇ ಮತ್ತೊಂದು ವಂಚನೆ ಪುರಾಣ ಹೊರಬಂದಿದೆ.

ನಮ್ಮವರು ಇರಬಹುದು ಮೆಲ್ಲನೆ ಅಗೆಯಿರಿ: ಯುವಕನ ಮನಮಿಡಿಯುವ ಮನವಿಗೆ ಹಿಟಾಚಿ ಚಾಲಕ ಭಾವುಕ

Posted by Vidyamaana on 2024-08-07 06:59:20 |

Share: | | | | |


ನಮ್ಮವರು ಇರಬಹುದು ಮೆಲ್ಲನೆ ಅಗೆಯಿರಿ: ಯುವಕನ ಮನಮಿಡಿಯುವ ಮನವಿಗೆ ಹಿಟಾಚಿ ಚಾಲಕ ಭಾವುಕ

ವಯನಾಡ್: ಭೂಕುಸಿತದಿಂದಾಗಿ ಮಣ್ಣಿನಡಿ ಸಿಲುಕಿದ ದೇಹಗಳನ್ನು ಹೊರತೆಗೆಯುವ ಕಾರ್ಯದಲ್ಲಿ ತೊಡಗಿರುವವರ ತಂಡ ಅಲ್ಲಿನ ಮನಕಲಕುವ ಅನುಭವಗಳನ್ನು ತೆರೆದಿಟ್ಟಿದ್ದಾರೆ. ಮಣ್ಣಿನಡಿ ಏನಿದೆ ಎಂದು ತಿಳಿಯದ ಕಾರಣ ಹಿಟಾಚಿ ಸೇರಿದಂತೆ ಇತರ ಯಂತ್ರಗಳನ್ನು ಎಚ್ಚರಿಕೆಯಿಂದ ನಡೆಸಬೇಕಾದ ಅನಿವಾರ್ಯತೆ ಎದುರಾಗಿದೆ.

ಕಮಲ ಬಿಟ್ಟು ಡಿವಿಎಸ್ ಕೈ ಹಿಡಿಯೋದು ಫಿಕ್ಸ್

Posted by Vidyamaana on 2024-03-19 16:51:09 |

Share: | | | | |


ಕಮಲ ಬಿಟ್ಟು ಡಿವಿಎಸ್ ಕೈ ಹಿಡಿಯೋದು ಫಿಕ್ಸ್

ಬೆಂಗಳೂರು, ಮಾ.19: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆ ಅಸಮಾಧಾನಗೊಂಡಿರುವ ಡಿವಿ ಸದಾನಂದಗೌಡ(DV S

non

ananda Gowda) ಅವರು ಕಾಂಗ್ರೆಸ್ (Congress) ಸೇರುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಕಾಂಗ್ರೆಸ್ ಸಂಪರ್ಕದಲ್ಲಿರುವುದನ್ನು ಗೌಡ್ರು ಹೇಳಿದ್ದಾರೆ. ಇಂದು ಒಕ್ಕಲಿಗರ ಸಂಘದೊಂದಿಗೆ ಸಭೆ ನಡೆಸಿದ ಸದಾನಂದಗೌಡ, ಸುದೀರ್ಘ ಚರ್ಚೆ ನಡೆಸಿದ್ದಾರೆ. ಅಲ್ಲದೆ, ಸದಾನಂದ ಗೌಡ ಅವರ ನಿರ್ಧಾರಕ್ಕೆ ನಮ್ಮ ಬೆಂಬಲ ಇದೆ ಎಂದು ಸಂಘದ ಅಧ್ಯಕ್ಷರು ಘೋಷಿಸಿದ್ದಾರೆ.

ನಾಳೆ ಸುದ್ದಿಗೋಷ್ಠಿ ನಡೆಸಿ ಎಲ್ಲಾ ವಿಚಾರಗಳನ್ನು ಹೇಳುತ್ತೇನೆ ಎಂದು ಹೇಳಿದ ಸದಾನಂದಗೌಡ, ಒಕ್ಕಲಿಗರ ಸಂಘದ ಅಧ್ಯಕ್ಷರು, ನಿರ್ದೇಶಕರ ಜತೆ ಸಭೆ ನಡೆಸಿದ್ದೇನೆ. ಒಂದಷ್ಟು ವಿಚಾರಗಳನ್ನು ಸಭೆಯಲ್ಲಿ ಪ್ರಸ್ತಾಪ ಮಾಡಲಾಗಿದೆ. ಈಗ ಯಾವುದನ್ನೂ ನಾನು ಹೇಳುವುದಿಲ್ಲ. ಎಲ್ಲವನ್ನೂ ನಾಳೆ ಹೇಳುತ್ತೇನೆ ಎಂದರು.ಸದಾನಂದಗೌಡ ನಿರ್ಧಾರಕ್ಕೆ ಒಕ್ಕಲಿಗರ ಸಂಘದ ಬೆಂಬಲ

ಸಭೆ ಬಳಿಕ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಹನುಮಂತಯ್ಯ, ಸದಾನಂದಗೌಡರು ಏನೇ ನಿರ್ಧಾರ ತೆಗೆದುಕೊಂಡರೂ ನಮ್ಮ ಬೆಂಬಲವಿದೆ. ನಾಳೆ ಅವರೇ ಸುದ್ದಿಗೋಷ್ಠಿ ಮಾಡಿ ಎಲ್ಲಾ ಹೇಳುತ್ತಾರೆ ಎಂದರು.ಒಕ್ಕಲಿಗ ಸಮುದಾಯಕ್ಕೆ ಮೂರು ಪಕ್ಷಗಳಲ್ಲೂ ಅನ್ಯಾಯ ಆಗಿದೆ. ಬಿಜೆಪಿಯಲ್ಲಿ ಲಿಂಗಾಯತ ಸಮುದಾಯಕ್ಕೆ 8 ಟಿಕೆಟ್ ಕೊಡಲಾಗಿದೆ. ಒಕ್ಕಲಿಗ ಸಮುದಾಯದ ಇಬ್ಬರಿಗೆ ಮಾತ್ರ ಟಿಕೆಟ್ ಕೊಡಲಾಗಿದೆ. ಒಕ್ಕಲಿಗ ಸಮುದಾಯಕ್ಕೂ ಎಂಟು ಕಡೆ ಟಿಕೆಟ್ ಕೊಡಬೇಕು. ಬಿಜೆಪಿಯಲ್ಲಿ ಸಿ.ಟಿ.ರವಿ, ಪ್ರತಾಪ್ ​ಸಿಂಹಗೆ ಟಿಕೆಟ್ ಕೊಟ್ಟಿಲ್ಲ. ನಮ್ಮ ಸಮುದಾಯಕ್ಕೆ ಅನ್ಯಾಯವಾದರೆ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

BREAKING : ಲೋಕಮಾನ್ಯ ತಿಲಕ್ ವಿಶೇಷ ರೈಲಿನ ಎಸಿ ಬೋಗಿಯಲ್ಲಿ ಅಗ್ನಿ ಅವಘಡ

Posted by Vidyamaana on 2024-03-27 08:24:14 |

Share: | | | | |


BREAKING : ಲೋಕಮಾನ್ಯ ತಿಲಕ್ ವಿಶೇಷ ರೈಲಿನ ಎಸಿ ಬೋಗಿಯಲ್ಲಿ ಅಗ್ನಿ ಅವಘಡ

ಪಾಟ್ನಾ : ಲೋಕಮಾನ್ಯ ತಿಲಕ್ ವಿಶೇಷ 01410 ರೈಲಿನ ಎಸಿ ಬೋಗಿಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ.ಲೋಕಮಾನ್ಯ ತಿಲಕ್ ವಿಶೇಷ ರೈಲಿನ ಎಸಿ ಬೋಗಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಹೋಳಿ ಹಬ್ಬದ ಕಾರಣದಿಂದಾಗಿ, ರೈಲಿನಲ್ಲಿ ಪ್ರಯಾಣಿಕರ ಸಂಖ್ಯೆ ತುಂಬಾ ಕಡಿಮೆ ಇತ್ತು, ಇದರಿಂದಾಗಿ ಇಲ್ಲಿಯವರೆಗೆ ಯಾವುದೇ ಸಾವುನೋವುಗಳು ವರದಿಯಾಗಿಲ್ಲ.ಏತನ್ಮಧ್ಯೆ, ರೈಲ್ವೆ ಸಹಾಯವಾಣಿ ಸಂಖ್ಯೆಯನ್ನು ಸಹ ಬಿಡುಗಡೆ ಮಾಡಿದೆ, ಅದರ ಬಗ್ಗೆ ಮಾಹಿತಿಯನ್ನು ಪಡೆಯಬಹುದು. ದಾನಾಪುರ ಸಹಾಯವಾಣಿ ಸಂಖ್ಯೆ 06115232401, ಅರಾ ಸಹಾಯವಾಣಿ ಸಂಖ್ಯೆ 9341505981 ಮತ್ತು ಬಕ್ಸಾರ್ ಸಹಾಯವಾಣಿ ಸಂಖ್ಯೆ 9341505972.


ಮಾಹಿತಿಯ ಪ್ರಕಾರ, ಘಟನೆಯ ನಂತರ ಅರಾ ರೈಲ್ವೆ ನಿಲ್ದಾಣದಿಂದ ಅನೇಕ ರೈಲುಗಳ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಈ ಅನುಕ್ರಮದಲ್ಲಿ ಅನೇಕ ರೈಲುಗಳನ್ನು ಬೇರೆಡೆಗೆ ತಿರುಗಿಸಲಾಗಿದೆ, ಇದರಿಂದಾಗಿ ಪ್ರಯಾಣಿಕರಿಗೆ ಸಮಸ್ಯೆ ಎದುರಾಗಿದೆ.

Recent News


Leave a Comment: