ಬಂಟ್ವಾಳ : ವಗ್ಗ ಬಳಿ ಅಂಬುಲೆನ್ಸ್ ನಿಯಂತ್ರಣ ತಪ್ಪಿ ಪಲ್ಟಿ

ಸುದ್ದಿಗಳು News

Posted by vidyamaana on 2023-08-18 08:29:00 |

Share: | | | | |


ಬಂಟ್ವಾಳ : ವಗ್ಗ ಬಳಿ ಅಂಬುಲೆನ್ಸ್  ನಿಯಂತ್ರಣ ತಪ್ಪಿ ಪಲ್ಟಿ

ಬೆಳ್ತಂಗಡಿ: ರೋಗಿಯೊಬ್ಬರನ್ನು  ಕೊಂಡುಹೋಗುತ್ತಿರುವ ವೇಳೆ ಟುಫಾನ್ ಅಂಬುಲೆನ್ಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಚಾಲಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ವಗ್ಗ ಬಳಿ ಆಗಸ್ಟ್ 18 ರಂದು ನಡೆದಿದೆ.



ಬೆಳ್ತಂಗಡಿಯಿಂದ ಮಂಗಳೂರಿಗೆ ರೋಗಿಯೊಬ್ಬರನ್ನು ಕೊಂಡೊಯ್ಯುತ್ತಿರುವ ವೇಳೆ ಬಂಟ್ವಾಳದ ವಗ್ಗ ಬಳಿ ಅಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ವೇಳೆ ಚಾಲಕ ಮಡಂತ್ಯಾರ್ ಮಾಲಾಡಿ ನಿವಾಸಿ ಶಬೀರ್ ಎಂಬವರು ಗಂಭೀರ ಗಾಯಗೊಂಡಿದ್ದು ತಕ್ಷಣ ಅವರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ಕೊಂಡು ಹೋದರೂ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೇ  ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

 Share: | | | | |


ರೀಲ್ಸ್‌ಗಾಗಿ ರಸ್ತೆಯಲ್ಲಿ ಶಾಲಾ ಬಾಲಕಿಯರ ಸ್ಟಂಟ್, ಮುಂದೇನಾಯ್ತು ನೋಡಿ!

Posted by Vidyamaana on 2024-06-25 17:16:35 |

Share: | | | | |


ರೀಲ್ಸ್‌ಗಾಗಿ ರಸ್ತೆಯಲ್ಲಿ ಶಾಲಾ ಬಾಲಕಿಯರ ಸ್ಟಂಟ್, ಮುಂದೇನಾಯ್ತು ನೋಡಿ!

ರೀಲ್ಸ್ ಇಲ್ಲದೆ ದಿನವೇ ಮುಂದೆ ಸಾಗದ ಪರಿಸ್ಥಿತಿ ಎದುರಾಗಿದೆ. ರೀಲ್ಸ್‌ಗಾಗಿ ಜನರು ಅಪಾಯಕಾರಿ ಸ್ಟಂಟ್ ಮಾಡಿ ಗಮನಸೆಳೆಯುವ ಪ್ರಯತ್ನ ಮಾಡುತ್ತಾರೆ. ಆದರೆ ಈ ರೀತಿಯ ಸ್ಟಂಟ್ ದುರಂತದಲ್ಲಿ ಅಂತ್ಯವಾಗಿದೆ. ಶಾಲಾ ಬಾಲಕಿಯರಿಬ್ಬರು ರೀಲ್ಸ್‌ಗಾಗಿ ಸ್ಟಂಟ್ ಮಾಡಿದ್ದಾರೆ. ಒರ್ವ ಬಾಲಕಿಯ ಭುಜದ ಮೇಲೆ ಹತ್ತಿ ಬ್ಯಾಕ್ ಫ್ಲಿಪ್ ಪ್ರಯತ್ನಿಸಿದ್ದಾಳೆ. ಆದರೆ ಲ್ಯಾಂಡಿಂಗ್ ವೇಳೆ ಸಮಸ್ಯೆಯಾಗಿದೆ. ಪರಿಣಾಮ ಬಾಲಕಿ ಇದೀಗ ಎದ್ದು ನಿಲ್ಲದ ಪರಿಸ್ಥಿತಿಯಲ್ಲಿದ್ದಾಳೆ.ಶಾಲಾ ಸಮವಸ್ತ್ರದಲ್ಲಿರುವ ಇಬ್ಬರು ಬಾಲಕಿಯರು ಹೆದ್ದಾರಿಯಲ್ಲಿ ಸ್ಟಂಟ್ ಮಾಡಲು ಮುಂದಾಗಿದ್ದಾರೆ. ಬಾಲಕಿಯರ ಸ್ಟಂಟ್ ಮತ್ತಷ್ಟು  ವೈರಲ್ ಆಗಲಿದೆ ಎಂದು ಸಾಹಸ ಪ್ರದರ್ಶನ ಮಾಡಿದ್ದಾರೆ. ರಸ್ತೆಯಲ್ಲಿ ಬಾಲಕಿ ಮತ್ತೊಬ್ಬ ಬಾಲಕಿಯ ಭುಜದ ಮೇಲೆ ಹತ್ತಿ ಬ್ಯಾಕ್ ಫ್ಲಿಪ್ ಮಾಡಿದ್ದಾಳೆ. ಎತ್ತರದಿಂದ ಬ್ಯಾಕ್ ಫ್ಲಿಪ್ ಪ್ರಯತ್ನಿಸಿದ ಬಾಲಕಿ ನೆಲಕ್ಕೆ ಲ್ಯಾಂಡಿಂಗ್ ಆಗವಾಗ ಕಾಲು ಜಾರಿದೆ. ಪರಿಣಾಮ ದೊಪ್ಪನೆ ಬಿದ್ದಿದ್ದಾಳೆ.

ಪುಣಚಾದಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ

Posted by Vidyamaana on 2023-05-01 12:26:40 |

Share: | | | | |


ಪುಣಚಾದಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ

ಪುತ್ತೂರು: ಸತ್ಯ,‌ನ್ಯಾಯಕ್ಕೆ ಎಂದೆಂದೂ ಸಾವಿಲ್ಲ, ಯಾರೇ ಆಗಲಿ ಅನ್ಯಾಯ ಮಾಡಿದರೆ ಅದರ ಶಾಪ ತಟ್ಟಿಯೇ ತಟ್ಟುತ್ತದೆ ಎಂಬುದಕ್ಕೆ ಪುತ್ತೂರಿನ ಬಿಜೆಪಿಯೇ ಸಾಕ್ಷಿಯಾಗಿದೆ, ಪುತ್ತೂರು ಬಿಜೆಪಿಗೆ ಬಡವನ ಶಾಪ ತಟ್ಟಿದೆ ಎಂದು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಹೇಳಿದರು.

ಪುಣಚಾದಲ್ಲಿ ನಡೆದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದರು. 

ಗೋರಕ್ಷಣೆ ಹೆಸರಿನಲ್ಲಿ ಅಮಾಯಕರ ಮೇಲೆ ನಡೆದ ಹಲ್ಲೆ, ಅವಮಾನ ಅದು ಶಾಪವಾಗಿ ತಟ್ಟಿದೆ. ಸಾಕಲು ಕೊಂಡೊಯ್ಯುವ ದನವನ್ನು ತಡೆದು ಹಲ್ಲೆ ನಡೆಸಿ ಅವರ ಕುಟುಂಬದ ಕಣ್ಣೀರು ಸುರಿಸಿದ್ದ ಬಿಜೆಪಿ ಇಂದು ಅದರ ಪರಿಣಾಮವನ್ನು ಅನುಭವಿಸುತ್ತಿದೆ. ಹಿಂದುತ್ವ ಹೆಸರಿನಲ್ಲಿ ಅದೆಷ್ಟು‌ಮಂದಿಗೆ ಇವರು ಹಲ್ಲೆ ನಡೆಸಿದ್ದಾರೆ ಎಂಬುದನ್ನು ಮೆಲುಕು ಹಾಕಲಿ ಎಂದು ಹೇಳಿದ ಅವರು ಮುಂದಿನ ದಿನಗಳಲ್ಲಿ ಪುತ್ತೂರು ಬಿಜೆಪಿ ಮುಕ್ತವಾಗಲಿದೆ ಎಂದು ಹೇಳಿದರು.

ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಆಶಾ ಕಾರ್ಯಕರ್ತೆಯರಿಗೆ ವೇತನ ಹೆಚ್ಚಿಸಿ ಕಾಂಗ್ರೆಸ್  ಪ್ರಣಾಳಿಕೆಯನ್ನು ಬಿಡುಗಡೆ‌ಮಾಡಿದೆ. ಪಕ್ಷವನ್ನು ಬೆಂಬಲಿಸುವಂತೆ ಕರೆ ನೀಡಿದರು. ವೇದಿಕೆಯಲ್ಲಿ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

ನೈತಿಕ ಪೊಲೀಸ್ ಗಿರಿ ಕಡಿವಾಣ ಹಾಕಿ: ಕಮಿಷನರ್ ಎಸ್ಪಿಗೆ ಸಿ ಎಂ ಖಡಕ್ ಆದೇಶ

Posted by Vidyamaana on 2023-08-02 10:11:10 |

Share: | | | | |


ನೈತಿಕ ಪೊಲೀಸ್ ಗಿರಿ ಕಡಿವಾಣ ಹಾಕಿ: ಕಮಿಷನರ್ ಎಸ್ಪಿಗೆ ಸಿ ಎಂ ಖಡಕ್ ಆದೇಶ

ಪುತ್ತೂರು: ದ ಕ ಜಿಲ್ಲೆಯಲ್ಲಿ ನೈತಿಕ ಪೊಲೀಸ್ ಗಿರಿಗೆ ಕಡಿವಾಣ ಹಾಕಬೇಕು, ಪೊಲೀಸ್ ಗಿರಿ ಮಾಡುವ ದುಷ್ಕರ್ಮಿಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು,ಇದರಲ್ಲಿ ಯಾವುದೇ ಮುಲಾಜು ಮಾಡುವುದು ಬೇಡ .ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಎಲ್ಲೂ ನೈತಿಕ ಪೊಲೀಸ್ ಗಿರಿ ನಡೆಯಬಾರದು ಎಂದು ಸಿ ಎಂ ಸಿದ್ದರಾಮಯ್ಯ ಮಂಗಳೂರು ಕಮಿಷನರ್ ಮತ್ತು ಎಸ್ಪಿಯವರಿಗೆ ಖಡಕ್ ಆದೇಶ ವನ್ನು ನೀಡಿದ್ದಾರೆ.

ದ ಕ ಜಿಲ್ಲೆಯಲ್ಲಿ ಪದೇ ಪದೇ ಕಿರಾತಕರು ಹಲ್ಲೆ ನಡೆಸುವ ಘಟನೆಗಳು ನಡೆಯುತ್ತಿದೆ ಇದಕ್ಕೆ ಯಾಕೆ ನೀವು ಕಡಿವಾಣ ಹಾಕಿಲ್ಲ ಎಂದು ಏರು‌ಧ್ವನಿಯಲೇ ಇಬ್ಬರನ್ನೂ ಪ್ರಶ್ನಿಸಿದ ಸಿ ಎಂ ಮುಂದೆ ಎಲ್ಲೂ ಇಂತದ್ದಕ್ಕೆ ಅವಕಾಶ ನೀಡಲೇ ಬಾರದು ಎಂದು ಜಿಪಂ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಸೂಚನೆ ನೀಡಿದ್ದಾರೆ

BREAKING : ರಾಮನಗರದ ವಂಡರ್ ಲಾ ಅಮ್ಯೂಸ್ ಮೆಂಟ್ ಪಾರ್ಕ್ ಗೆ ಬಾಂಬ್ ಬೆದರಿಕೆ ಸಂದೇಶ

Posted by Vidyamaana on 2024-08-23 17:03:40 |

Share: | | | | |


BREAKING : ರಾಮನಗರದ ವಂಡರ್ ಲಾ ಅಮ್ಯೂಸ್ ಮೆಂಟ್  ಪಾರ್ಕ್ ಗೆ ಬಾಂಬ್ ಬೆದರಿಕೆ ಸಂದೇಶ

ರಾಮನಗರ : ರಾಮನಗರ ಜಿಲ್ಲೆಯ ಬಿಡದಿ ಬಳಿ ಇರುವ ವಂಡರ್ ಲಾ ಅಮ್ಯೂಸ್ ಮೆಂಟ್ ಪಾರ್ಕಗೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಕೂಡಲೇ ಸ್ಥಳಕ್ಕೆ ಬಿಡದಿ ಠಾಣೆ ಪೋಲಿಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.ಈ ವೇಳೆ ಯಾವುದೇ ಸ್ಫೋಟಕ ಪತ್ತೆಯಾಗಿಲ್ಲದ್ದರಿಂದ ಇದು ಒಂದು ಹುಸಿ ಬಾಂಬ್ ಬೆದರಿಕೆ ಸಂದೇಶ ಎಂದು ಸ್ಪಷ್ಟಪಡಿಸಿದರು.

ಇಂಗ್ಲಿಷ್ ಬಳಸಿ ಉರ್ದು ಭಾಷೆಯಲ್ಲಿ ಆಗಸ್ಟ್ 3 ರಂದು ಕಳುಹಿಸಿದ್ದ ಬಾಂಬ್ ಬೆದರಿಕೆ ಸಂದೇಶ ಇದೀಗ ತಡವಾಗಿ ಬೆಳಕಿಗೆ ಬಂದಿದೆ. ನಾಳೆ ಭಾನುವಾರ ವಂಡರ್ ಲಾದಲ್ಲಿ 3 ಬಾಂಬ್ ಸ್ಫೋಟಿಸುತ್ತೇವೆ. ಮುಸ್ಲಿಮರ ಮೇಲೆ ದಬ್ಬಾಳಿಕೆ ಮಾಡುವವರಿಗೆ ಶಿಕ್ಷೆಯಾಗಲಿದೆ. ಕನ್ನಡದ ಕಾಫಿರರಿಗೆ ಶಿಕ್ಷೆ ಆಗಲಿದೆ ಎಂದು ಬೆದರಿಕೆ ಸಂದೇಶವನ್ನು ಬಂದಿದೆ.

ಬಿಹಾರದಲ್ಲಿ ಭೀಕರ ರೈಲು ದುರಂತ ; ನಾಲ್ವರು ದುರ್ಮರಣ 50ಕ್ಕೂ ಹೆಚ್ಚು ಮಂದಿಗೆ ಗಾಯ 21 ರೈಲುಗಳ ಮಾರ್ಗ ಬದಲಾವಣೆ

Posted by Vidyamaana on 2023-10-12 12:39:18 |

Share: | | | | |


ಬಿಹಾರದಲ್ಲಿ ಭೀಕರ ರೈಲು ದುರಂತ  ; ನಾಲ್ವರು ದುರ್ಮರಣ 50ಕ್ಕೂ ಹೆಚ್ಚು ಮಂದಿಗೆ ಗಾಯ 21 ರೈಲುಗಳ ಮಾರ್ಗ ಬದಲಾವಣೆ

ಬಿಹಾರ, ಅ.12: ದೆಹಲಿ–ಕಾಮಾಕ್ಯ ನಾರ್ತ್‌ ಈಸ್ಟ್‌ ಎಕ್ಸ್‌ಪ್ರೆಸ್‌ ರೈಲಿನ ಆರು ಬೋಗಿಗಳು ಬಿಹಾರದ ಬಕ್ಸರ್‌ ಜಿಲ್ಲೆಯ ರಘುನಾಥಪುರ ನಿಲ್ದಾಣದ ಬಳಿ ಹಳಿ ತಪ್ಪಿದ ನಂತರ ಭಾರತೀಯ ರೈಲ್ವೆಯು ಎರಡು ರೈಲುಗಳ ಸಂಚಾರವನ್ನು ರದ್ದುಗೊಳಿಸಿದ್ದು, 21 ರೈಲುಗಳ ಮಾರ್ಗವನ್ನು ಬದಲಾಯಿಸಿದೆ.


ರಾತ್ರಿ ಸುಮಾರು 9.53ಕ್ಕೆ ಘಟನೆ ಸಂಭವಿಸಿದ್ದು, ಎಕ್ಸ್‌ಪ್ರೆಸ್‌ ರೈಲಿನ ಎಸಿ ಕೋಚ್ ಸೇರಿದಂತೆ ಆರು ಬೋಗಿಗಳು ಹಳಿತಪ್ಪಿವೆ. ಅಪಘಾತದಲ್ಲಿ ನಾಲ್ವರು ಪ್ರಯಾಣಿಕರು ಮೃತಪಟ್ಟಿದ್ದಾರೆ ಎಂದು ಬಕ್ಸರ್‌ ಪೊಲೀಸ್‌ ವರಿಷ್ಠಾಧಿಕಾರಿ ಮನೀಶ್‌ ಕುಮಾರ್‌ ತಿಳಿಸಿದ್ದಾರೆ.ಘಟನೆಯಲ್ಲಿ ಸುಮಾರು 70 ಪ್ರಯಾಣಿಕರು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗಳಿಗೆ ರವಾಸಿಸಲಾಗಿದೆ ಎಂದು ರೈಲ್ವೆ ಪೊಲೀಸ್‌ ಪಡೆ ಅಧಿಕಾರಿಯೊಬ್ಬರು ಹೇಳಿದ್ದಾರೆ.


ಕಾಶಿ ಪಾಟ್ನ ಜನ ಶತಾಬ್ದಿ ಎಕ್ಸ್‌ಪ್ರೆಸ್‌ (15125) ಮತ್ತು ಪಾಟ್ನ ಕಾಶಿ ಜನ ಶತಾಬ್ದಿ ಎಕ್ಸ್‌ಪ್ರೆಸ್‌ (15126) ರೈಲುಗಳನ್ನು ರದ್ದುಗೊಳಿಸಲಾಗಿದೆ ಎಂದು ಈಸ್ಟ್ ಸೆಂಟ್ರಲ್‌ ರೈಲ್ವೆ ವಲಯದ ಹೇಳಿಕೆ ತಿಳಿಸಿದೆಪುಣೆ–ದಾನಪುರ್‌ ಎಸ್‌ಎಫ್‌ ಎಕ್ಸ್‌ಪ್ರೆಸ್‌, ಪಟ್ಲಿಪುತ್ರ ಎಸ್‌ಎಫ್‌ ಎಕ್ಸ್‌ಪ್ರೆಸ್‌, ದಿಬ್ರುಗಢ ರಾಜಧಾನಿ ಎಕ್ಸ್‌ಪ್ರೆಸ್‌, ವಿಕ್ರಮಶಿಲಾ ಎಕ್ಸ್‌ಪ್ರೆಸ್‌, ರಾಜೇಂದ್ರ ನಗರ ಟರ್ಮಿನಲ್‌ ತೇಜಸ್‌ ರಾಜಧಾನಿ ಎಕ್ಸ್‌ಪ್ರೆಸ್‌ ಸೇರಿದಂತೆ ಒಟ್ಟು 21 ರೈಲುಗಳನ್ನು ಪರ್ಯಾಯ ಮಾರ್ಗಗಳಿಗೆ ಬದಲಾಯಿಸಲಾಗಿದೆ.


ದೆಹಲಿ–ಕಾಮಾಕ್ಯ ನಾರ್ತ್‌ ಈಸ್ಟ್‌ ಎಕ್ಸ್‌ಪ್ರೆಸ್‌ 23 ಬೋಗಿಗಳನ್ನು ಹೊಂದಿದ್ದು, ಬುಧವಾರ ಬೆಳಿಗ್ಗೆ ಸುಮಾರು 7.40 ಗಂಟೆಗೆ ದೆಹಲಿಯ ಆನಂದ್‌ ವಿಹಾರ್‌ ಟರ್ಮಿನಲ್‌ನಿಂದ ಕಾಮಾಕ್ಯಕ್ಕೆ ಹೊರಟಿತ್ತು.


ಘಟನೆ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ‘ಬಕ್ಸರ್‌ನ ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಎನ್‌ಡಿಆರ್‌ಎಫ್‌, ಎಸ್‌ಡಿಆರ್‌ಎಫ್‌, ಜಿಲ್ಲಾಡಳಿತ, ರೈಲ್ವೆ ಅಧಿಕಾರಿಗಳು ಮತ್ತು ಸ್ಥಳೀಯ ನಿವಾಸಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಶೀಘ್ರದಲ್ಲೆ ರಕ್ಷಣಾ ಕಾರ್ಯಾಚರಣೆ ಪೂರ್ಣಗೊಳ್ಳಲಿದ್ದು, ನಂತರ ಹಳಿಗಳ ಮರುಸ್ಥಾಪನೆ ಕಾರ್ಯ ನಡೆಯಲಿದೆ’ ಎಂದು ತಿಳಿಸಿದ್ದಾರೆ.ಜನರಿಗೆ ತ್ವರಿತ ಪರಿಹಾರವನ್ನು ಒದಗಿಸಲು ತಕ್ಷಣ ಕ್ರಮಗಳನ್ನು ತೆಗೆದುಕೊಳ್ಳುವಂತೆ ವಿಪತ್ತು ನಿರ್ವಹಣೆ ಮತ್ತು ಆರೋಗ್ಯ ಇಲಾಖೆಗಳಿಗೆ ತಿಳಿಸಲಾಗಿದೆ. ಬಕ್ಸರ್‌ ಮತ್ತು ಭೋಜಪುರದ ಜಿಲ್ಲಾಧಿಕಾರಿಗಳ ಬಳಿಯೂ ಮಾತನಾಡಿದ್ದೇನೆ ಮತ್ತು ಶೀಘ್ರದಲ್ಲೆ ಸ್ಥಳಕ್ಕೆ ತಲುಪಲು, ಪರಿಹಾರ ಕಾರ್ಯವನ್ನು ವೇಗಗೊಳಿಸಲು ಸೂಚನೆಗಳನ್ನು ನೀಡಿದ್ದೇನೆ’ ಎಂದು ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್‌ ಹೇಳಿದ್ದಾರೆ

ಬೈಕ್ ಸ್ಕಿಡ್ ನಲ್ಲಿ ಗಂಭೀರ ಗಾಯಗೊಂಡಿದ್ದ ಪ್ರಸಾದ್ - ಚಿಕಿತ್ಸೆ ಫಲಕಾರಿಯಾಗದೆ ನಿಧನ

Posted by Vidyamaana on 2024-03-06 16:35:52 |

Share: | | | | |


ಬೈಕ್ ಸ್ಕಿಡ್ ನಲ್ಲಿ ಗಂಭೀರ   ಗಾಯಗೊಂಡಿದ್ದ ಪ್ರಸಾದ್ - ಚಿಕಿತ್ಸೆ ಫಲಕಾರಿಯಾಗದೆ ನಿಧನ

ಪುತ್ತೂರು : ಪರ್ಲಡ್ಕ ಬೈಪಾಸ್ ಬಳಿ ಫೆ.29 ರಂದು ಬೈಕ್ ಸ್ಕಿಡ್ ಆಗಿ ಗಾಯಗೊಂಡಿದ್ದ ಮೆಕ್ಯಾನಿಕ್ ಶಾಂತಿಗೋಡಿನ ಯುವಕ ಪ್ರಸಾದ್ ಚಿಕಿತ್ಸೆ ಫಲಕಾರಿಯಾಗದೆ ಮಾ 06 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಶಾಂತಿಗೋಡು ಗ್ರಾಮದ ಬೀರ್ಮಕಜೆ ನಿವಾಸಿ ಪುತ್ತೂರು ಬೈಪಾಸ್‌ ರಸ್ತೆಯ ಗ್ಯಾರೆಜೊಂದರಲ್ಲಿ ಮೆಕಾನಿಕ್ ಆಗಿರುವ ಪ್ರಸಾದ್ (27) ದೇರಳಕಟ್ಟೆ ಆಸ್ಪತ್ರೆಯಲ್ಲಿ ಚಿಂತಾಜನಕ ಸ್ಥಿತಿಯಲ್ಲಿದ್ದರು.

Recent News


Leave a Comment: