ಶಿರೂರಿನ ಭೂಕುಸಿತದಲ್ಲಿ ಕಾಣೆಯಾದ ಲಾರಿ ನೀರಿನ ಅಡಿಯಲ್ಲಿ ಪತ್ತೆ; ಮಾಹಿತಿ ನೀಡಿದ ಸಚಿವ

ಸುದ್ದಿಗಳು News

Posted by vidyamaana on 2024-07-24 18:06:21 | Last Updated by Vidyamaana on 2024-07-24 18:06:21

Share: | | | | |


ಶಿರೂರಿನ ಭೂಕುಸಿತದಲ್ಲಿ ಕಾಣೆಯಾದ ಲಾರಿ ನೀರಿನ ಅಡಿಯಲ್ಲಿ ಪತ್ತೆ; ಮಾಹಿತಿ ನೀಡಿದ ಸಚಿವ

ಕಾರವಾರ: ಉತ್ತರ ಕನ್ನಡದ ಶಿರೂರಿನ ಭೂಕುಸಿತದಲ್ಲಿ ನಾಪತ್ತೆಯಾಗಿದ್ದ ಕೋಝಿಕ್ಕೋಡ್ ಮೂಲದ ಅರ್ಜುನ್ ಅವರ ಲಾರಿ ಎಂದು ನಂಬಲಾದ ಟ್ರಕ್ ನದಿಯ ಆಳದಲ್ಲಿ ಇರುವ ಸುಳಿವು ಲಭ್ಯವಾಗಿದೆ. ಕರ್ನಾಟಕದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಇದನ್ನು ಖಚಿತಪಡಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ಸಚಿವರು ಮಾಹಿತಿ ನೀಡಿದ್ದಾರೆ.

ನದಿಯ ಕೆಳಭಾಗದಲ್ಲಿ ಟ್ರಕ್ ಪತ್ತೆಯಾಗಿದೆ ಎಂದು ತಿಳಿದು ಬಂದಿದ್ದು ಅದಕ್ಕಾಗಿ ಶೋಧ ನಡೆಯುತ್ತಿದೆ.

ಶಿರೂರಿನಲ್ಲಿ ನಡೆಯುತ್ತಿರುವ ರಕ್ಷಣಾ ಕಾರ್ಯಾಚರಣೆಯ ಒಂಬತ್ತನೇ ದಿನದಂದು, ಲಾರಿಯ ಬಗ್ಗೆ ನಿರ್ಣಾಯಕ ಮಾಹಿತಿಯನ್ನು ಪಡೆಯಲಾಗಿದೆ. ಇಂದು ಬೆಳಗ್ಗೆ ಬೂಮ್ ಲೆಂಗ್ತ್ ಕ್ರೇನ್ ಬಂದಿದ್ದು, ತಪಾಸಣೆ ಪುನರಾರಂಭವಾಗಿದೆ. ಈ ಯಂತ್ರವು 60 ಅಡಿ ಆಳದವರೆಗೆ ಹುಡುಕಬಲ್ಲ ಸಾಮರ್ಥ್ಯ ಹೊಂದಿದೆ. ಪೊಲೀಸ್ ವಾಹನದೊಂದಿಗೆ ವಾಹನವನ್ನು ಸ್ಥಳಕ್ಕೆ ತರಲಾಗಿದೆ.

ಈ ಕುರಿತು ಕೃಷ್ಣ ಬೈರೇಗೌಡ Xನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ತಮ್ಮ X ಖಾತೆಯಲ್ಲಿ ಈ ರೀತಿ ಬರೆದುಕೊಂಡಿದ್ದಾರೆ.ಜುಲೈ 16 ರಂದು ಬೆಳಿಗ್ಗೆ ಕೋಝಿಕ್ಕೋಡ್‌ನ ಕಂಡ್ಯಕ್ಕಲ್ ಮೂಲದ ಅರ್ಜುನ್ (30) ಕರ್ನಾಟಕ-ಗೋವಾ ಗಡಿಯಲ್ಲಿ ಹಾದು ಹೋಗುವ ಪನ್ವೇಲ್-ಕನ್ಯಾಕುಮಾರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಕ್ಕೀಡಾಗಿದ್ದರು. ಭೂಕುಸಿತದಲ್ಲಿ ಟೀ ಅಂಗಡಿ ಮಾಲೀಕ ಸೇರಿದಂತೆ 10 ಜನರು ಸಾವನ್ನಪ್ಪಿದ ಸ್ಥಳದಲ್ಲಿ ಲಾರಿಯ ಜಿಪಿಎಸ್ ಸ್ಥಳವನ್ನು ಕೊನೆಯದಾಗಿ ಪತ್ತೆ ಹಚ್ಚಲಾಯಿತು.

 Share: | | | | |


ಧರ್ಮಸ್ಥಳ ಸಿರಿ ಸಂಸ್ಥೆಯ ಹೊಸ ಉತ್ಪನ್ನಗಳ ಲೋಕಾರ್ಪಣೆ

Posted by Vidyamaana on 2023-10-17 07:26:33 |

Share: | | | | |


ಧರ್ಮಸ್ಥಳ ಸಿರಿ ಸಂಸ್ಥೆಯ ಹೊಸ ಉತ್ಪನ್ನಗಳ ಲೋಕಾರ್ಪಣೆ

ಧರ್ಮಸ್ಥಳ: ದಿನ ನಿತ್ಯದ ಪೂಜೆ, ದೇವರ ಧ್ಯಾನ ಹಾಗೂ ಪ್ರಾರ್ಥನೆ ಸಮಯದಲ್ಲಿ ದೀಪ ಮತ್ತು ಧೂಪ ಬಳಸುವುದು ನಮ್ಮ ಸಂಪ್ರದಾಯವಾಗಿದೆ. ಸಿರಿ ಸಂಸ್ಥೆಯ ನೂತನ ಉತ್ಪನ್ನಗಳಾದ ಶೃತಿ, ಸ್ತುತಿ, ಸಂಯಮ ಮತ್ತು ಶ್ರದ್ಧಾ ಎಂಬ ಹೊಸ ಅಗರ್ ಬತ್ತಿಗಳನ್ನು ಮೈಸೂರಿನ ಸೈಕಲ್ ಬ್ರಾಂಡ್ ಅಗರ್ ಬತ್ತಿ ಸಹಭಾಗಿತ್ವದಲ್ಲಿ ಧರ್ಮಸ್ಥಳದಲ್ಲಿ ಸೋಮವಾರ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.ನೂತನ ಉತ್ಪನ್ನಗಳು ಎಲ್ಲರ ಮನೆ-ಮನಗಳನ್ನು ಬೆಳಗಲಿ ಎಂದು ಹೆಗ್ಗಡೆಯವರು ಹಾರೈಸಿದರು.


ನೂತನ ಉತ್ಪನ್ನಗಳಿಂದ ಗ್ರಾಮೀಣ ಮಹಿಳೆಯರಿಗೆ ಹೆಚ್ಚಿನ ಉದ್ಯೋಗಾವಕಾಶ ಲಭಿಸಲಿದೆ ಎಂದು ಹೆಗ್ಗಡೆಯವರು ತಿಳಿಸಿದರು.ಸೈಕಲ್ ಬ್ರಾಂಡ್ ಅಗರ್ ಬತ್ತಿಯ ಸಿ.ಇ.ಒ. ಅರ್ಜುನ್‌ರಂಗ ಮತ್ತು ವಿಜಿರೋಮ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ವಿಜಯಲಕ್ಷ್ಮೀ ವಿಜಯ್ ಕುಮಾರ್ ಶುಭಾಶಂಸನೆ ಮಾಡಿದರು.


ಸಿರಿ ಸಂಸ್ಥೆಗೆ ನಾಲ್ಕು ಸಂಚಾರಿ ವಾಹನಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹಸ್ತಾಂತರಿಸಲಾಯಿತು. ಸಿ.ಒ.ಒ. ಅನಿಲ್ ಕುಮಾರ್ ಉಪಸ್ಥಿತರಿದ್ದರು.ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ. ಎನ್. ಜನಾರ್ದನ್ ಸ್ವಾಗತಿಸಿದರು. ಆಡಳಿತ ನಿರ್ದೇಶಕ ಪ್ರಸನ್ನ ಯು. ಧನ್ಯವಾದವಿತ್ತರು. ಜೀವನ ಕುಮಾರ್ ಕಾರ್ಯಕ್ರಮ ನಿರ್ವಹಿಸಿದರು.

ಹಿಜಾಬ್‌ನ್ನು ಸಮವಸ್ತ್ರ ಆಧಾರಿತವಾಗಿ ನೋಡಿದ್ದೇ ಹೊರತು ಧರ್ಮಾಧಾರಿತವಾಗಿ ಅಲ್ಲ: ರಘುಪತಿ ಭಟ್

Posted by Vidyamaana on 2024-05-31 07:57:34 |

Share: | | | | |


ಹಿಜಾಬ್‌ನ್ನು ಸಮವಸ್ತ್ರ ಆಧಾರಿತವಾಗಿ ನೋಡಿದ್ದೇ ಹೊರತು ಧರ್ಮಾಧಾರಿತವಾಗಿ ಅಲ್ಲ: ರಘುಪತಿ ಭಟ್

ಕುಂದಾಪುರ : ನಾನು ಹಿಜಾಬ್‌ನ್ನು ಸಮವಸ್ತ್ರ ಆಧಾರಿತವಾಗಿ ನೋಡಿದ್ದೇ ಹೊರತು ಧರ್ಮಾಧಾರಿತವಾಗಿ ಮಾಡಿಲ್ಲ ಎಂದು ಹಿಜಾಬ್ ಪರ ಹೋರಾಟಗಾರ್ತಿ ಅಲಿಯಾ ಅಸ್ಸಾದಿಗೆ ಮಾಜಿ ಶಾಸಕ ರಘುಪತಿ ಭಟ್ ತಿರುಗೇಟು ನೀಡಿದ್ದಾರೆ.ಕುಂದಾಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಶಾಸಕನಾಗುವ ಮೊದಲು ಆ ಕಾಲೇಜಿನಲ್ಲಿ ವಸ್ತ್ರಸಂಹಿತೆ ಜಾರಿಯಲ್ಲಿತ್ತು.

ತಿಂಗಳಿಗೆ 8,500ರೂ ಪಡೆಯಲು ಪೋಸ್ಟ್ ಆಫೀಸ್ ಮುಂದೆ ಸಾಲುಗಟ್ಟಿ ಮಹಿಳೆಯರು

Posted by Vidyamaana on 2024-05-29 16:19:09 |

Share: | | | | |


ತಿಂಗಳಿಗೆ 8,500ರೂ ಪಡೆಯಲು ಪೋಸ್ಟ್ ಆಫೀಸ್ ಮುಂದೆ ಸಾಲುಗಟ್ಟಿ ಮಹಿಳೆಯರು

ಬೆಂಗಳೂರು : ಅಧಿಕಾರಕ್ಕೆ ಬಂದರೆ ರಕ್ಷಣಾ ಸೇವೆಗಳ ನೇಮಕಾತಿಯ ಅಗ್ನಿಪಥ್ ಯೋಜನೆಯನ್ನು ರದ್ದುಗೊಳಿಸಿ, ಪ್ರತಿ ತಿಂಗಳು ಪ್ರತಿ ಮಹಿಳೆಯ ಖಾತೆಗೆ 8,500 ರೂ.ಗಳನ್ನು ಜಮಾ ಮಾಡಲಾಗುವುದು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸೋಮವಾರ ಹೇಳಿದ್ದಾರೆ. ಬಿಹಾರದಲ್ಲಿ ಮಹಾಘಟಬಂಧನ್ ಅಭ್ಯರ್ಥಿಗಳ ಪರವಾಗಿ ಬ್ಯಾಕ್ ಟು ಬ್ಯಾಕ್ ಚುನಾವಣಾ ರ್ಯಾಲಿಗಳನ್ನುದ್ದೇಶಿಸಿ ಮಾತನಾಡಿದ ಅವರು, ದೇಶಾದ್ಯಂತ ಇಂಡಿಯಾ ಮೈತ್ರಿ ಕೂಟದ ಪರವಾಗಿ ಸ್ಪಷ್ಟ ಅಲೆ ಇರುವುದರಿಂದ ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಲು ಸಾಧ್ಯವಾಗುವುದಿಲ್ಲ ಎಂದು ಪ್ರತಿಪಾದಿಸಿದರು.

ಖಾಸಗಿ ಬಸ್ಸಿನ ಓವರ್ ಟೇಕ್ ಧಾವಂತ: ಬೈಕ್ ಸವಾರ ದಾರುಣ ಮೃತ್ಯು

Posted by Vidyamaana on 2024-03-02 09:56:38 |

Share: | | | | |


ಖಾಸಗಿ ಬಸ್ಸಿನ ಓವರ್ ಟೇಕ್ ಧಾವಂತ: ಬೈಕ್ ಸವಾರ ದಾರುಣ ಮೃತ್ಯು

ಬೆಳ್ತಂಗಡಿ: ಬಸ್ ಮತ್ತು ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ದಾರುಣವಾಗಿ ಮೃತಪಟ್ಟ ಘಟನೆ ಮಾ 1ರಂದು ರಾತ್ರಿ ಮಂಗಳೂರಿನ ಕಂಕನಾಡಿ ಸಮೀಪ ನಡೆದಿದೆ‌.

ಕಕ್ಕಿಂಜೆ ಸಮೀಪದ ಚಾರ್ಮಾಡಿ ಜಲಾಲಿಯಾ ನಗರದ ನಿವಾಸಿ, ವಹೀದಾ ಅವರ ಮಗ ಸಿನಾನ್  (21 ವರ್ಷ) ಮೃತಪಟ್ಟ ದುರ್ದೈವಿ. ಇವರನ್ನು ಮಂಗಳೂರಿನ ಯೆನಪೋಯ ಕಾಲೇಜಿನ  ವಿಧ್ಯಾರ್ಥಿ ಎಂದು ಗುರುತಿಸಲಾಗಿದೆ.

ಬಡಕುಟುಂಬದ ಸಿನಾನ್  ಪಾರ್ಟ್ ಟೈಮ್ ಪುಡ್ ಡೆಲಿವರಿ ಕೆಲಸ ಮಾಡುತ್ತಿದ್ದರು. ತನ್ನ ಕುಟುಂಬಕ್ಕೆ ಆಧಾರಸ್ತಂಭವಾಗಿದ್ದ ಅವರು, ವಿದ್ಯಾಭ್ಯಾಸವನ್ನು ತನ್ನ ಖರ್ಚಿನಿಂದಲೇ ನಿಭಾಯಿಸುತ್ತಿದ್ದರು. ಇದೇ ರೀತಿ ನಿನ್ನೆ ರಾತ್ರಿ ವೇಳೆ ಫುಡ್ ಡೆಲಿವರಿ ಮಾಡುತ್ತಿದ್ದಾಗ ವಾಹನ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ. ಖಾಸಗಿ ಬಸ್ಸೊಂದು ಬೈಕನ್ನು ಓವರ್ ಟೇಕ್ ಮಾಡುವ ಭರದಲ್ಲಿ ಬೈಕಿನ ಹ್ಯಾಂಡ್ಲಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರ ಬಸ್ಸಿನಡಿಗೆ ಬಿದ್ದು, ದಾರುಣವಾಗಿ ಮೃತಪಟ್ಟಿದ್ದಾರೆ.

ಮೃತರು ತಂದೆ,ತಾಯಿ, ತಮ್ಮ, ತಂಗಿಯನ್ನು ಅಗಲಿದ್ದಾರೆ.

ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ: ಪರಪ್ಪನ ಅಗ್ರಹಾರಕ್ಕೆ ವರ್ಗಾಯಿಸಲು ಆರೋಪಿಗಳು ಕೋರಿದ್ದ ಅರ್ಜಿ ವಜಾ

Posted by Vidyamaana on 2024-03-22 04:50:04 |

Share: | | | | |


ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ: ಪರಪ್ಪನ ಅಗ್ರಹಾರಕ್ಕೆ ವರ್ಗಾಯಿಸಲು ಆರೋಪಿಗಳು ಕೋರಿದ್ದ ಅರ್ಜಿ ವಜಾ

ಬೆಂಗಳೂರು :- ಹೈಕೋರ್ಟ್ ಏಕಸದಸ್ಯ ಪೀಠ ಮಹತ್ವದ ತೀರ್ಪು ನೀಡಿದ್ದು, ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ‌ ಪರಪ್ಪನ ಅಗ್ರಹಾರ ಜೈಲಿಗೆ ವರ್ಗಾಯಿಸಲು 11 ಆರೋಪಿಗಳ ಅರ್ಜಿಯನ್ನು ವಜಾ ಮಾಡಿದೆ.ತಮ್ಮ ಮೇಲೆ‌ ದಾಳಿ ನಡೆಯುವ ಭೀತಿಯಿಂದ‌ ರಿಟ್ ಅರ್ಜಿ ಸಲ್ಲಿಸುವ ಮೂಲಕ ಎಲ್ಲಾ ಆರೋಪಿಗಳನ್ನೂ ಪರಪ್ಪನ‌ ಅಗ್ರಹಾರ ಜೈಲಿಗೆ ವರ್ಗಾಯಿಸಲು ಅಬ್ದುಲ್ ಬಷೀರ್ ಮತ್ತಿತರರು ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದರು.ಕುಟುಂಬದ ಸದಸ್ಯರು, ವಕೀಲರೊಂದಿಗೆ ಭೇಟಿಗೆ ಸಮಸ್ಯೆಯ ಕಾರಣ ನೀಡಿ ರಿಟ್ ಸಲ್ಲಿಸಲಾಗಿತ್ತು.


ಎನ್‌ಐಎ ಸೂಚನೆ ಮೇರೆಗೆ ಕೊಲೆ‌ ಆರೋಪಿಗಳನ್ನು ವರ್ಗಾಯಿಸಲಾಗಿತ್ತು. ಮೊಹಮ್ಮದ್ ಜಬೀರ್ ತಪ್ಪೊಪ್ಪಿಗೆ ಸಾಕ್ಷಿಯಾಗಲು ಸಿದ್ಧನಿದ್ದ ಹಿನ್ನೆಲೆ ಸುರಕ್ಷತೆ ದೃಷ್ಟಿಯಿಂದ 15 ಆರೋಪಿಗಳನ್ನು ವಿವಿಧ ಜೈಲುಗಳಿಗೆ ಖೈದಿಗಳನ್ನು ವರ್ಗಾಯಿಸಲು ಎನ್‌ಐಎ ಪತ್ರ ಬರೆದಿತ್ತು. ಆರೋಪಿಗಳನ್ನು ಬೆಂಗಳೂರು ಜೈಲಿಗೆ ವರ್ಗಾಯಿಸಲು ಹೈಕೋರ್ಟ್ ನಕಾರವೆತ್ತಿದೆ.


ಜೈಲುಗಳಲ್ಲಿ ಖೈದಿಗಳಿಗೆ ವಿಡಿಯೋ ಕಾನ್ಫರೆನ್ಸ್​ ಸೌಲಭ್ಯ ಒದಗಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಏಕಸದಸ್ಯ ಪೀಠ ನಿರ್ದೇಶನ ನೀಡಿದೆ. ಕುಟುಂಬದ ಸದಸ್ಯರು, ವಕೀಲರೊಂದಿಗೆ ಕಾನೂನಿಗೆ ಅನುಗುಣವಾಗಿ ಸಂವಹನಕ್ಕೆ ಅವಕಾಶ ಮತ್ತು ಸಂಭಾಷಣೆ ವೇಳೆ ಹೆಡ್​ ಫೋನ್ ಒದಗಿಸಲು ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಆದೇಶಿಸಿದೆ.

BREAKING: ಕರ್ನಾಟಕ ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ 11 ಸದಸ್ಯರು ಅವಿರೋಧವಾಗಿ ಆಯ್ಕೆ

Posted by Vidyamaana on 2024-06-06 16:46:38 |

Share: | | | | |


BREAKING: ಕರ್ನಾಟಕ ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ 11 ಸದಸ್ಯರು ಅವಿರೋಧವಾಗಿ ಆಯ್ಕೆ

ಬೆಂಗಳೂರು : ವಿಧಾನ ಸಭೆಯಿಂದ ವಿಧಾನ ಪರಿಷತ್ತಿನ ಸದಸ್ಯರ ಆಯ್ಕೆಗಾಗಿ ಚುನಾವಣೆ ಘೋಷಣೆಯಾಗಿತ್ತು. ಈ ಚುನಾವಣೆಯಲ್ಲಿ ವಿಧಾನಸಭೆಯಿಂದ ವಿಧಾನಪರಿಷತ್ತಿಗೆ 11 ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇಂದು ಪ್ರಕಟವಾದಂತ ಚುನಾವಣಾ ಫಲಿತಾಂಶದಲ್ಲಿ ಕರ್ನಾಟಕ ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ 11 ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Recent News


Leave a Comment: