ಮೃತಪಟ್ಟ ಗರ್ಭಿಣಿ ಮನೆಗೆ ಭೇಟಿ ನೀಡಿದ ಪುತ್ತಿಲ

ಸುದ್ದಿಗಳು News

Posted by vidyamaana on 2023-06-29 12:19:28 |

Share: | | | | |


ಮೃತಪಟ್ಟ ಗರ್ಭಿಣಿ ಮನೆಗೆ ಭೇಟಿ ನೀಡಿದ ಪುತ್ತಿಲ

ಪುತ್ತೂರು: ಹೊಸ ಉದ್ಯಮವೊಂದರ ಉದ್ಘಾಟನಾ ಕಾರ್ಯಕ್ರಮ ಮುಗಿಸಿ ಹಿಂದಿರುಗಿ ಬರುವಾಗ ಅರುಣ್ ಕುಮಾರ್ ಪುತ್ತಿಲ ಹೆರಿಗೆಗೆ ದಾಖಲಾಗಿದ್ದ ಗರ್ಭಿಣಿ ಮೃತಪಟ್ಟ ಮನೆಗೆ ತೆರಳಿ ಸಾಂತ್ವನ ಹೇಳಿದರು.


ಕಾರ್ಯಕ್ರಮ ಮುಗಿಸಿ ಬರುವಾಗ ರಸ್ತೆಯಲ್ಲಿ ಜನ ಸೇರಿದ್ದನ್ನು ನೋಡಿ ವಿಚಾರಿಸಿದಾಗ ಮೃತಪಟ್ಟ ಬಗ್ಗೆ ತಿಳಿದುಬಂದಿದ್ದು,  ನಂತರ ಮನೆಗೆ ತೆರಳಿ ಸಾಂತ್ವನ ಹೇಳಿದರು. 

ಶೇಕಮಲೆ ಬೊಳ್ಳಾಡಿ ಇಬ್ರಾಹಿಂ ಎಂಬವರ ಪತ್ನಿ 9 ತಿಂಗಳ ಗರ್ಭಿಣಿ ಹಸೀನಾ (29) ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಾಗಿದ್ದರು.  ಜೂ.28 ರಂದು ಹೆರಿಗೆ ಸಂದರ್ಭ ಹೃದಯಾಘಾತದಿಂದ ನಿಧನರಾದರು. 

ಹೆರಿಗೆಯಲ್ಲಿ ಮಗು ಜೀವಂತವಾಗಿದ್ದು, ಎಜೆ ಆಸ್ಪತ್ರೆಯ ವೈದ್ಯರಿಗೆ ಕರೆ ಮಾಡಿ ಅರುಣ್ ಪುತ್ತಿಲರು ಮಗುವಿನ ಆರೋಗ್ಯ ವಿಚಾರಿಸಿದರು. 

ಈ ಹಿಂದೆಯೂ ಅಪಘಾತ ನಡೆದ ಸಂದರ್ಭ ಧರ್ಮ ನೋಡದೆ ತನ್ನದೇ  ಕಾರಿನಲ್ಲಿ ರಕ್ತದ ಮಡುವಿನಲ್ಲಿದ್ದ  ಗಾಯಳುಗಳನ್ನು ಹಾಕಿಕೊಂಡು ಹೋದ ಉದಾಹರಣೆಯೂ ಇದೆ. ಅವರ ಕಾರಿನಲ್ಲಿ ಅಪಘಾತಗೊಂಡ  ಮುಸ್ಲಿಂ ಮಗುವೊಂದು ಮೃತಪಟ್ಟಿದೆ. 

ಮೊನ್ನೆಯಷ್ಟೇ ಮಂಗಳೂರಿನಿಂದ ಬರುತಿದ್ದಾಗ ರಸ್ತೆ ಬದಿಯ ಚರಂಡಿಗೆ ಬಿದ್ದಿದ್ದ ಕಾರನ್ನು ಮೇಲೆತ್ತಲು ಸಹಾಯ ಮಾಡಿದ್ದರು.

 Share: | | | | |


ಕಡಬ: ರೈಲು ನಿಲ್ದಾಣದಲ್ಲಿ ಅನಿಲ ಸೋರಿಕೆ ಗುಮಾನಿ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ಹಾಗೂ ಎಮರ್ಜೆನ್ಸಿ ರೆಸ್ಪಾನ್ಸ್ ಟೀಮ್.

Posted by Vidyamaana on 2023-02-09 04:32:46 |

Share: | | | | |


ಕಡಬ: ರೈಲು ನಿಲ್ದಾಣದಲ್ಲಿ  ಅನಿಲ ಸೋರಿಕೆ ಗುಮಾನಿ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ಹಾಗೂ ಎಮರ್ಜೆನ್ಸಿ ರೆಸ್ಪಾನ್ಸ್ ಟೀಮ್.

ಕಡಬ : ಅಡುಗೆ ಅನಿಲ ಸೋರಿಕೆಯಾಗಿದೆ ಎಂಬ ಗುಮಾನಿಯ ಮೇರೆಗೆ ಅಗ್ನಿಶಾಮಕ ದಳ ಹಾಗೂ ಗ್ಯಾಸ್ ಕಂಪೆನಿಯ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿದ ಘಟನೆ ಸುಬ್ರಹ್ಮಣ್ಯ ರೋಡ್ ರೈಲ್ವೇ ನಿಲ್ದಾಣದಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ.ಮಂಗಳೂರಿನಿಂದ ಆಗಮಿಸಿದ್ದ ಗ್ಯಾಸ್ ಟ್ಯಾಂಕರನ್ನು ಹೊತ್ತ ಗೂಡ್ಸ್ ರೈಲಿನಲ್ಲಿ ಅನಿಲ ಸೋರಿಕೆಯಾಗುತ್ತಿದೆ ಎಂಬ ಗುಮಾನಿ ಎದ್ದಿದ್ದು, ಪೂರಕವೆಂಬಂತೆ ಪರಿಸರದಲ್ಲಿ ಗ್ಯಾಸ್ ವಾಸನೆ ಬಂದಿತ್ತೆನ್ನಲಾಗಿದೆ. ತಕ್ಷಣವೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಪುತ್ತೂರಿನಿಂದ ಹಾಗೂ ಸುಳ್ಯದಿಂದ | ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿದ್ದಾರೆ. ತಕ್ಷಣವೇ ಕಾರ್ಯಪ್ರವೃತ್ತಗೊಂಡ ಅನಿಲ ಕಂಪೆನಿಯು ಎಮರ್ಜೆನ್ಸಿ ರೆಸ್ಪಾನ್ಸ್ ತಂಡವನ್ನು ಸ್ಥಳಕ್ಕೆ ಕಳುಹಿಸಿದೆ. ಈ ನಡುವೆ ದಕ್ಷಿಣ ಕನ್ನಡ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಭರತ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ.

ಬೆಳಗಾವಿ ಸುವರ್ಣ ಸೌಧದ ಮುಂಭಾಗದಲ್ಲಿ ಗಿಡ ನೆಟ್ಟ ಶಾಸಕ ಅಶೋಕ್ ರೈ

Posted by Vidyamaana on 2023-12-07 12:39:41 |

Share: | | | | |


ಬೆಳಗಾವಿ ಸುವರ್ಣ ಸೌಧದ ಮುಂಭಾಗದಲ್ಲಿ ಗಿಡ ನೆಟ್ಟ ಶಾಸಕ ಅಶೋಕ್ ರೈ

ಪುತ್ತೂರು: ವಿಧಾನ ಸಭಾ ಅಧಿವೇಶನ ನಡೆಯುತ್ತಿರುವ ಬೆಳಗಾವಿ ಸುವರ್ಣ ಸೌಧದ ಮುಂಭಾಗದಲ್ಲಿ ಪುತ್ತೂರು ಶಾಸಕರಾದ ಅಶೋಕ್ ರೈ ಗಿಡ ನೆಡುವ ಮೂಲಕ ಬೆಳಗಾವಿಯ ಅಧಿವೇಶನದ ಸವಿನೆನಪಿನ ಗುರುತು ಮಾಡಿದರು. ಹಲಸಿನ ಗಿಡವನ್ನು ಶಾಸಕರು ನೆಡುವ ಮೂಲಕ ತನ್ನ ಪರಿಸರ  ಪ್ರೇಮವನ್ನು ಮೆರೆದರು. ಪುತ್ತೂರಿನ ರಸ್ತೆ ಬದಿಗಳಲ್ಲಿ ಕಾಟು ಮಾವಿನ ಗಿಡ ನೆಡುವ ಮೂಲಕ ಸುದ್ದಿಯಾಗಿದ್ದ ಶಾಸಕರು ಬೆಳಗಾವಿಯಲ್ಲಿ ಹಲಸಿನ ಗಿಡ ನೆಡುವ ಮೂಲಕ ಎರಡನೇ ಬಾರಿಗೆ ಸುದ್ದಿಯಾದರು.

ಜನನ-ಮರಣ ನೋಂದಣಿಗೆ ಈಗ ಆಧಾರ್ ಕಾರ್ಡ್ ಕಡ್ಡಾಯವಲ್ಲ : ಕೇಂದ್ರ ಸರ್ಕಾರದಿಂದ ಮಹತ್ವದ ಮಾಹಿತಿ

Posted by Vidyamaana on 2023-06-30 02:01:02 |

Share: | | | | |


ಜನನ-ಮರಣ ನೋಂದಣಿಗೆ ಈಗ ಆಧಾರ್ ಕಾರ್ಡ್ ಕಡ್ಡಾಯವಲ್ಲ : ಕೇಂದ್ರ ಸರ್ಕಾರದಿಂದ ಮಹತ್ವದ ಮಾಹಿತಿ

ನವದೆಹಲಿ : ದೇಶದಲ್ಲಿ ಜನನ ಮತ್ತು ಮರಣ ನೋಂದಣಿ ಸಮಯದಲ್ಲಿ ಆಧಾರ್ ದೃಢೀಕರಣವನ್ನ ಕೈಗೊಳ್ಳಲು ರಿಜಿಸ್ಟ್ರಾರ್ ಜನರಲ್ (RGI) ಕಚೇರಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಆದಾಗ್ಯೂ, ಅಂತಹ ನೋಂದಣಿಗೆ ಆಧಾರ್ ಕಡ್ಡಾಯವಲ್ಲ. ಜನನ ಮತ್ತು ಮರಣ ನೋಂದಣಿ ಸಮಯದಲ್ಲಿ ಒದಗಿಸಲಾದ ಗುರುತಿನ ವಿವರಗಳನ್ನ ದೃಢೀಕರಿಸಲು ಆಧಾರ್ ಡೇಟಾಬೇಸ್ನ್ನ ಬಳಸಲು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಆರ್ಜಿಐ ಕಚೇರಿಗೆ ಅನುಮತಿ ನೀಡಿದೆ ಎಂದು ಜೂನ್ 27 ರಂದು ಪ್ರಕಟವಾದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಜನನ ಮತ್ತು ಮರಣ ನೋಂದಣಿ ಕಾಯ್ದೆ 1969 ಏನು.?

ಜನನ ಮತ್ತು ಮರಣ ನೋಂದಣಿ ಕಾಯ್ದೆ 1969ರ ಅಡಿಯಲ್ಲಿ, ನೇಮಕಗೊಂಡ ರಿಜಿಸ್ಟ್ರಾರ್ಗೆ ಆಧಾರ್ ಸಂಖ್ಯೆಯ ಪರಿಶೀಲನೆಗಾಗಿ ಸ್ವಯಂಪ್ರೇರಿತ ಆಧಾರದ ಮೇಲೆ ಹೌದು ಅಥವಾ ಇಲ್ಲ ಆಧಾರ್ ದೃಢೀಕರಣವನ್ನ ಕೈಗೊಳ್ಳಲು ಅವಕಾಶ ನೀಡಲಾಗುವುದು ಎಂದು ಅದು ಹೇಳುತ್ತದೆ.


ಜನನದ ಸಂದರ್ಭದಲ್ಲಿ ಮಗು, ಪೋಷಕರು ಮತ್ತು ಮಾಹಿತಿದಾರರ ಗುರುತನ್ನ ಸ್ಥಾಪಿಸುವ ಉದ್ದೇಶಕ್ಕಾಗಿ ಮತ್ತು ಜನನ ಮತ್ತು ಮರಣದ ನೋಂದಣಿಯ ಸಮಯದಲ್ಲಿ ಒದಗಿಸಲಾದ ಪ್ರಕರಣದಲ್ಲಿ, ಪೋಷಕರು, ಸಂಗಾತಿ ಹಾಗೂ ಮಾಹಿತಿದಾರರ ಗುರುತನ್ನ ಸ್ಥಾಪಿಸುವ ಉದ್ದೇಶಕ್ಕಾಗಿ ಪ್ರಕರಣ ಇರಬಹುದುಆಧಾರ್ ದೃಢೀಕರಣದ ಬಳಕೆಗೆ ಸಂಬಂಧಿಸಿದಂತೆ ಸಚಿವಾಲಯ ನಿಗದಿಪಡಿಸಿದ ಮಾರ್ಗಸೂಚಿಗಳನ್ನ ರಾಜ್ಯ ಸರ್ಕಾರ ಮತ್ತು ಕೇಂದ್ರಾಡಳಿತ ಪ್ರದೇಶ ಆಡಳಿತಗಳು ಅನುಸರಿಸುತ್ತವೆ. ಉತ್ತಮ ಆಡಳಿತ, ಸಾರ್ವಜನಿಕ ಹಣದ ಹರಿವು ಮತ್ತು ಸುಗಮ ಜೀವನವನ್ನ ಉತ್ತೇಜಿಸಲು ಸಂಸ್ಥೆಗಳನ್ನ ವಿನಂತಿಸುವ ಮೂಲಕ ಕೇಂದ್ರ ಸರ್ಕಾರವು ಆಧಾರ್ ದೃಢೀಕರಣವನ್ನ ಅನುಮತಿಸಬಹುದು ಎಂದು ಸಚಿವಾಲಯವು 2020 ರಲ್ಲಿ ನಿಯಮಗಳನ್ನ ಅಧಿಸೂಚನೆ ಹೊರಡಿಸಿತು.

ಮುಕ್ಕೂರು :15 ನೇ ವರ್ಷದ ಗಣೇಶೋತ್ಸವ- ಮೂರೈದು- ಹದಿನೈದರ ಹುತ್ತರಿ

Posted by Vidyamaana on 2024-08-18 21:07:46 |

Share: | | | | |


ಮುಕ್ಕೂರು :15 ನೇ ವರ್ಷದ ಗಣೇಶೋತ್ಸವ- ಮೂರೈದು- ಹದಿನೈದರ ಹುತ್ತರಿ

ಮುಕ್ಕೂರು: ಮುಕ್ಕೂರು-ಕುಂಡಡ್ಕ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ 15 ನೇ ವರ್ಷದ ಗಣೇಶೋತ್ಸವ ಪ್ರಯುಕ್ತ ಮೂರೈದು- ಹದಿನೈದರ ಹುತ್ತರಿ ಕಾರ್ಯಕ್ರಮವು ಸೆ.7 ಮತ್ತು 8 ರಂದು ಮುಕ್ಕೂರು ಶಾಲಾ ವಠಾರದಲ್ಲಿ ಜರುಗಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ದ.ಕ.ಲೋಕಸಭಾ ಕ್ಷೇತ್ರದ ಮಾಜಿ ಸದಸ್ಯ ನಳಿನ್ ಕುಮಾರ್ ಕಟೀಲು ಅವರು ಕುಂಜಾಡಿ‌ ನಿವಾಸದಲ್ಲಿ ರವಿವಾರ ಬಿಡುಗಡೆಗೊಳಿಸಿದರು.

ಕಳೆದ ಹದಿನಾಲ್ಕು ವರ್ಷಗಳಿಂದ ಮುಕ್ಕೂರು ಪರಿಸರದಲ್ಲಿ ಗಣೇಶೋತ್ಸವ ಕಾರ್ಯಕ್ರಮ ಆಚರಿಸಲಾಗುತ್ತಿದ್ದು ಈ ವರ್ಷ ಹದಿನೈದರ ಸಂಭ್ರಮದಲ್ಲಿದೆ. ಕಾರ್ಯಕ್ರಮವೂ ಸರ್ವರ ಒಗ್ಗೂಡುವಿಕೆಯೊಂದಿಗೆ ಅರ್ಥಪೂರ್ಣವಾಗಿ ಸಂಪನ್ನಗೊಳ್ಳಲಿ ಎಂದು ಮಾಜಿ ಸಂಸದ ನಳಿನ್ ಕುಮಾರ್ ‌ಕಟೀಲು ಶುಭ ಹಾರೈಸಿದರು.

ಪುತ್ತೂರಿನಲ್ಲಿ ಬಿಜೆಪಿ ಗೆಲುವಿನ ಆಶೆಗೆ ಬಲ ತುಂಬಿದ ಯೋಗಿ ಭೇಟಿ

Posted by Vidyamaana on 2023-05-06 10:27:51 |

Share: | | | | |


ಪುತ್ತೂರಿನಲ್ಲಿ ಬಿಜೆಪಿ ಗೆಲುವಿನ ಆಶೆಗೆ ಬಲ ತುಂಬಿದ ಯೋಗಿ ಭೇಟಿ

ಪುತ್ತೂರು : ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಪರ ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪುತ್ತೂರಿಗೆ ಆಗಮಿಸಿದ್ದು, ಶ್ರೀ ಮಹಾಲಿಂಗೇಶ್ವರ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ. ದೇವಸ್ಥಾನದ ಬಳಿಯಿಂದ ರೋಡ್‌ ಶೋ ಆರಂಭಗೊಳಿಸಿದರು.ಮೊಟ್ಟೆತ್ತಡ್ಕ ಹೆಲಿಪ್ಯಾಡ್‌ ನಿಂದ ವಾಹನದ ಮೂಲಕ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಯೋಗಿ ಆದಿತ್ಯನಾಥ್‌ ಆಗಮಿಸಿ ಶ್ರೀ ಮಹಾಲಿಂಗೇಶ್ವರ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು.ದೇವಳದ ಬಳಿ ಮತ್ತು ರಸ್ತೆ ಇಕ್ಕೆಲಗಳಲ್ಲಿ ಯೋಗಿ ನೋಡಲು ಜನ ಸಲು ಗಟ್ಟಿ ನಿಂತಿದ್ದು, ಯೋಗಿ ಜನತೆಯತ್ತ ಕೈ ಬೀಸಿ ಸಂಭ್ರಮಿಸಿದ್ದಾರೆ

ಕಾಸರಗೋಡು:ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ಕೆಮರಾ ನಿಗಾ ಆರಂಭ- ಮೊದಲ ದಿನ 1,040 ನಿಯಮ ಉಲ್ಲಂಘನೆ

Posted by Vidyamaana on 2023-06-07 03:58:50 |

Share: | | | | |


ಕಾಸರಗೋಡು:ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌  ಕೆಮರಾ ನಿಗಾ ಆರಂಭ- ಮೊದಲ ದಿನ 1,040 ನಿಯಮ ಉಲ್ಲಂಘನೆ

ಕಾಸರಗೋಡು: ರಸ್ತೆಗಳಲ್ಲಿ ಸಾರಿಗೆ ಕಾನೂನು ಉಲ್ಲಂಘನೆ ನಡೆಸುತ್ತಿರುವವರನ್ನು ಗುರುತಿಸಿ ಕಾನೂನು ಕ್ರಮ ಕೈಗೊಳ್ಳಲು ರಸ್ತೆ ಬದಿಯಲ್ಲಿ ಸ್ಥಾಪಿಸಲಾದ ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ (ಎಐ) ಕೆಮರಾಗಳು ಕಾರ್ಯಾಚರಣೆ ಆರಂಭಿಸಿದ್ದು, ಮೊದಲ ದಿನ ಜೂ. 5ರಂದು ಬೆಳಗ್ಗೆ 8ರಿಂದ ರಾತ್ರಿ 8 ಗಂಟೆಯ ವರೆಗಿನ ಅವಧಿಯಲ್ಲಿ ಕಾಸರಗೋಡು ಜಿಲ್ಲೆಯಲ್ಲಿ 1,040 ಸಾರಿಗೆ ಉಲ್ಲಂಘನೆ ಪ್ರಕರಣಗಳು ಪತ್ತೆಯಾಗಿವೆ.ಕೇರಳ ರಾಜ್ಯದಲ್ಲಿ ಒಟ್ಟು 38,520 ಸಾರಿಗೆ ಕಾನೂನು ಉಲ್ಲಂಘನೆ ಪತ್ತೆಯಾಗಿವೆ. 250ರಿಂದ 3 ಸಾವಿರ ರೂ. ತನಕ ದಂಡ ವಸೂಲು ಮಾಡಲಾಗುವುದು ಎಂದು ಸಾರಿಗೆ ಇಲಾಖೆ ತಿಳಿಸಿದೆ. ಸಾರಿಗೆ ನಿಯಮ ಉಲ್ಲಂ ಸಿದವರಿಗೆ ಶೀಘ್ರದಲ್ಲೇ ನೋಟಿಸ್‌ ಬರಲಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಜನರನ್ನು ಹಿಂಡುವ ಯೋಜನೆ: ಕಾಂಗ್ರೆಸ್‌

ಹದಗೆಟ್ಟ ರಸ್ತೆಗಳು ಮತ್ತು ಸುರಕ್ಷಿತ ಚಾಲನೆಗೆ ಪೂರಕ ಸೌಲಭ್ಯಗಳನ್ನು ಒದಗಿಸದೇ ಇರುವುದು ಸಂಚಾರ ಉಲ್ಲಂಘನೆಗೆ ಕಾರಣ. ರಾಜ್ಯದ ಪಿಣರಾಯಿ ಸರಕಾರವು ರಸ್ತೆಗಳಲ್ಲಿ ಮೂಲಸೌಲಭ್ಯಗಳನ್ನು ಕಲ್ಪಿಸುವ ಬದಲು ಎಐ ಕೆಮರಾದ ಮೂಲಕ ಜನರನ್ನು ಹಿಂಡಿ ಬೊಕ್ಕಸ ತುಂಬಿಸಿಕೊಳ್ಳುವ ಕೆಲಸ ಮಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಕೆ. ಸುಧಾಕರನ್‌ ಇದೇವೇಳೆ ಆರೋಪಿಸಿದ್ದಾರೆ.ರಾಜ್ಯದಲ್ಲಿ ಮೊದಲ ದಿನವೇ 38,520 ಸಂಚಾರ ನಿಯಮ ಉಲ್ಲಂಘನೆಗಳನ್ನು ಪತ್ತೆಹಚ್ಚುವ ಮೂಲಕ ಸರಾಸರಿ 1,000 ರೂ.ಗಳಂತೆ ಜನರಿಂದ ಸುಮಾರು 4 ಕೋಟಿ ಸಂಗ್ರಹಿಸಲಾಗಿದೆ. ಮಾಸಿಕ 115 ಕೋಟಿ ರೂ.ಗಳನ್ನು ಸಂಗ್ರಹಿಸುವ ನಿರೀಕ್ಷೆಯನ್ನು ಸರಕಾರ ಹೊಂದಿದೆ. ಇದು ಮದ್ಯದ ಅನಂತರದ ಎರಡನೇ ಅತಿ ಹೆಚ್ಚು ಆದಾಯವಾಗಿದೆ ಮತ್ತು ಲಾಟರಿ ಆದಾಯಕ್ಕಿಂತಲೂ ಹೆಚ್ಚು. ಎಐ ಕೆಮರಾ ಯೋಜನೆಯಲ್ಲಿನ ಭ್ರಷ್ಟಾಚಾರದ ವಿರುದ್ಧ ಕಾಂಗ್ರೆಸ್‌ ಹೋರಾಟವನ್ನು ಮುಂದುವರಿಸಲಿದೆ ಎಂದು ತಿಳಿಸಿದ್ದಾರೆ.

Recent News


Leave a Comment: