ನೆಟ್ಟೇ ಕಮ್ಮಿ ಆಪುಂಡು ನನ ಬರೋಡ್ಚಿ.. ಎಂದು ಹೇಳಿ ಮದ್ದು ಕೊಡ್ತಿದ್ದ ನರಸಿಂಹ ಭಟ್ ರಿಟೈರ್ಡ್

ಸುದ್ದಿಗಳು News

Posted by vidyamaana on 2023-07-10 07:10:00 | Last Updated by Vidyamaana on 2023-09-05 06:51:23

Share: | | | | |


ನೆಟ್ಟೇ ಕಮ್ಮಿ ಆಪುಂಡು ನನ ಬರೋಡ್ಚಿ.. ಎಂದು ಹೇಳಿ ಮದ್ದು ಕೊಡ್ತಿದ್ದ ನರಸಿಂಹ ಭಟ್ ರಿಟೈರ್ಡ್

ಪುತ್ತೂರು: “ನೆಟ್ಟೇ ಕಮ್ಮಿ. ನನ ಬರೋಡ್ಚಿ…”

ಹೀಗೆ ಹೇಳಿ ಔಷಧಿ ನೀಡಿದರೆಂದರೆ, ಯಾರದೇ ರೋಗವಾದರೂ ವಾಸಿಯಾಗಲೇಬೇಕು. ಆಸ್ಪತ್ರೆಗೆ ಹೋಗಿ ತಾಸುಗಟ್ಟಲೇ ಕಾಯಬೇಕೆಂದಿಲ್ಲ. ಹೆದರಿಕೆಯಾಗುವ ಬಿಲ್ ಕೂಡ ಇಲ್ಲ. ಯಾರೇ ಬಂದರೂ ಅವರ ನಗುವೇ ದಿವ್ಯೌಷಧ.

ಇದು ಎರಡೇ ಸಾಲಿನಲ್ಲಿ ವಿವರಣೆ ಕೊಡಬಹುದಾದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರ ಪರಿಚಯ. ತನ್ನ 16ನೇ ವಯಸ್ಸಿಗೇ ಡಾ. ಶಿವರಾಮ ಭಟ್ ಅವರ ಜೊತೆಗೆ ಕಾಂಪೌಂಡರ್ ಆಗಿ ಸೇರಿಕೊಂಡ ಅವರು, ಇದುವರೆಗೆ ಸುದೀರ್ಘ 68 ವರ್ಷಗಳ ಸೇವೆ ಸಲ್ಲಿಸಿದ್ದಾರೆ. ಹಾರಾಡಿಯಲ್ಲಿ ವಾಸವಾಗಿರುವ ಇವರ ತಂದೆ ಶಂಕರ್ ಭಟ್, ತಾಯಿ ಕಾವೇರಮ್ಮ. ಸರಸ್ವತಿ ಇವರ ಪತ್ನಿ. ಸಾಫ್ಟ್ ವೇರ್ ಇಂಜಿನಿಯರ್ ಆಗಿರುವ ಪುತ್ರ ಕಾರ್ತಿಕ್ ತನ್ನ ಪತ್ನಿ - ಮಗನೊಂದಿಗೆ ಲಂಡನಿನಲ್ಲಿ ವಾಸವಾಗಿದ್ದಾರೆ.

ಇದೀಗ ತನ್ನ 82ನೇ ವಯಸ್ಸಿನಲ್ಲಿ ವಿಶ್ರಾಂತ ಜೀವನಕ್ಕೆ ತೆರಳಿದ್ದಾರೆ. ವಯೋ ಸಹಜ ಸಮಸ್ಯೆಗಳ ಕಾರಣದಿಂದಾಗಿ ಡಾ. ಶಿವರಾಮ ಭಟ್ ಅವರ ಕ್ಲಿನಿಕ್ ಅನ್ನು ಬಂದ್ ಮಾಡಲಾಗಿದೆ ಎಂದು ಕ್ಲಿನಿಕ್ ಮುಂದುಗಡೆ ಬೋರ್ಡ್ ಹಾಕಲಾಗಿದೆ.

ಹಾಗಾಗಿ, ಔಷಧಕ್ಕೆಂದು ಆಗಮಿಸುವ ಜನರು ಬೋರ್ಡ್ ನೋಡಿ, ಹ್ಯಾಪ್ ಮೋರೆ ಹಾಕಿಕೊಂಡು ವಾಪಾಸ್ ಹೋಗುತ್ತಿದ್ದಾರೆ. ದಿನಕ್ಕೆ ಸುಮಾರು 300 ಮಂದಿಯಂತೆ ತಿಂಗಳಿಗೆ 10 ಸಾವಿರದಷ್ಟು ಮಂದಿ ಇವರ ಔಷಧವನ್ನೇ ಅವಲಂಬಿತರಾಗಿದ್ದರು. ಇದೀಗ ಇಷ್ಟು ಮಂದಿ ಬೇರೆ ವೈದ್ಯರ ಮೊರೆ ಹೋಗಲೇಬೇಕಾದ ಅನಿವಾರ್ಯತೆ ಎದುರಾಗಿದೆ.

ಮಳೆಗಾಲ ಆರಂಭವಾಯಿತೆಂದರೆ ಜ್ವರ, ಶೀತ, ಕೆಮ್ಮು ಸಿದ್ಧ. ಇದಕ್ಕೆಲ್ಲಾ ಕಾಂಪೌಂಡರ್ ನೀಡುವ 3 ಹೊತ್ತಿನ ಮದ್ದು ಸಾಕು. ಕಡಿಮೆ ಶುಲ್ಕ ಮಾತ್ರವಲ್ಲ, ಸುಲಭದಲ್ಲಿ ಸಿಗುವ ವೈದ್ಯರು ಎಂಬ ಕಾರಣಕ್ಕೆ ಜನರೂ ಇಲ್ಲಿಗೆ ಆಗಮಿಸುತ್ತಿದ್ದರು. ಇನ್ನು ಮುಂದೆ ಪುತ್ತೂರಿನ ಹೃದಯ ಭಾಗದಲ್ಲಿ ಇದ್ದ ಡಾ. ಶಿವರಾಮ ಭಟ್ ಅವರ ಕ್ಲಿನಿಕಿನಲ್ಲಿ ಕಾಂಪೌಂಡರ್ ಮದ್ದು ನೀಡುವುದಿಲ್ಲ!

ಡಾ. ಶಿವರಾಮ ಭಟ್ ಗುರು:

ಡಾ. ಶಿವರಾಮ ಭಟ್ ಅವರನ್ನೇ ಗುರುವಾಗಿ ನೆಚ್ಚಿಕೊಂಡಿದ್ದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರು, ಸುದೀರ್ಘ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಡಾ. ಶಿವರಾಮ ಭಟ್ ಅವರ ನಿಧನದ ನಂತರವೂ ಅವರ ಹೆಸರಿನಲ್ಲೇ ಕ್ಲಿನಿಕ್ ನಡೆಯುತ್ತಿತ್ತು. ಆಗ ಕಾಂಪೌಂಡರ್ ಅವರೇ ಔಷಧ ನೀಡುತ್ತಿದ್ದರು. ಕ್ಲಿನಿಕಿಗೆ ಆಗಮಿಸಿದ ಹೆಚ್ಚಿನ ಜನರಿಗೆ ಇವರೇ ಡಾ‌. ಶಿವರಾಮ ಭಟ್ ಎಂದು ನಂಬಿದ್ದರು.

ಸರ್ಕಾರಿ ಉದ್ಯೋಗದ ಅವಕಾಶವನ್ನೇ ಕೈಚೆಲ್ಲಿದರು!

ನರಸಿಂಹ ಭಟ್ ಅವರಿಗೆ ಸರ್ಕಾರಿ ಉದ್ಯೋಗದ ಅವಕಾಶವೂ ಕೈಬೀಸಿ ಕರೆಯಿತು. ಆದರೆ ಡಾ. ಶಿವರಾಮ್ ಭಟ್ ಅವರನ್ನೇ ಮಾನಸ ಗುರುವಾಗಿ ಸ್ವೀಕರಿಸಿದ್ದರಿಂದ, ಸರ್ಕಾರಿ ಉದ್ಯೋಗದ ಅವಕಾಶವನ್ನು ಕೈಚೆಲ್ಲಿದರು. ಡಾ. ಶಿವರಾಮ ಭಟ್ ಅವರು ಇರುವವರೆಗೂ ಹಾಗೂ ಅವರು ಇಲ್ಲದ ಬಳಿಕವೂ ತನ್ನ ಗುರುವಿನ ಹೆಸರಿನಲ್ಲಿಯೇ ಔಷಧ ನೀಡಿತ್ತಿದ್ದರು ಎನ್ನುವುದು ಕಾಂಪೌಂಡರ್ ಅವರ ವಿಶೇಷತೆ.

 Share: | | | | |


ಗ್ರಾಮೀಣ ವಿದ್ಯಾರ್ಥಿಗಳ ಪಾಲಿನ ಭಾಗ್ಯ ವಿಧಾತ ಭಾಗ್ಯೇಶ್ ರೈ ಅವರಿಗೆ ಶಿಕ್ಷಣ ಸೇವಾ ರತ್ನ ಪ್ರಶಸ್ತಿ

Posted by Vidyamaana on 2023-09-10 20:44:50 |

Share: | | | | |


ಗ್ರಾಮೀಣ ವಿದ್ಯಾರ್ಥಿಗಳ ಪಾಲಿನ ಭಾಗ್ಯ ವಿಧಾತ ಭಾಗ್ಯೇಶ್ ರೈ ಅವರಿಗೆ ಶಿಕ್ಷಣ ಸೇವಾ ರತ್ನ ಪ್ರಶಸ್ತಿ

ಬೆಂಗಳೂರು : ಪುತ್ತೂರಿನ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಮತ್ತು ಉದ್ಯೋಗಾಕಾಂಕ್ಷಿಗಳ ಪಾಲಿಗೆ ಭರವಸೆಯ ಆಶಾಕಿರಣವಾಗಿರುವ ‘ವಿದ್ಯಾಮಾತಾ ಅಕಾಡೆಮಿ’ಯ ಸ್ಥಾಪಕರಾಗಿರುವ ಭಾಗ್ಯೇಶ್ ರೈ ಅವರಿಗೆ ‘ಶಿಕ್ಷಣ ಸೇವಾ ರತ್ನ’ ಪ್ರಶಸ್ತಿ ಲಭಿಸಿದೆ.

‘ಜನಸಿರಿ ಫೌಂಡೇಶನ್’ ವತಿಯಿಂದ ಕೊಡ ಮಾಡುವ ರಾಜ್ಯಮಟ್ಟದ ‘ಶಿಕ್ಷಣ ಸೇವಾ ರತ್ನ’ ಪ್ರಶಸ್ತಿಯನ್ನು ನಗರದ ಟೌನ್ ಹಾಲ್ ನಲ್ಲಿ ನಡೆದ ಸಮಾರಂಭದಲ್ಲಿ ಭಾಗ್ಯೇಶ್ ರೈ ಅವರಿಗೆ ಪ್ರದಾನ ಮಾಡಲಾಯಿತು.

ಹಕ್ಕಿ-ಪಿಕ್ಕಿ ಸೇರಿದಂತೆ ನಾನಾ ಬುಡಕಟ್ಟು ಜನಾಂಗದ ವಿದ್ಯಾರ್ಥಿಗಳಿಗೆ ಸರಕಾರದ ಅನೇಕ ಸವಲತ್ತುಗಳನ್ನು ಒದಗಿಸುವಲ್ಲಿ ವಹಿಸಿದ್ದ ಶ್ರಮ, ಸಮಾನ ಶಿಕ್ಷಣ ನೀತಿ ಜಾರಿಗೆ ಬರಬೇಕೆಂಬ ಹೋರಾಟಗಳಲ್ಲಿ ಭಾಗವಹಿಸಿದ್ದಕ್ಕೆ, ವಿದ್ಯಾಮಾತ ಸಂಸ್ಥೆಯ ಮೂಲಕ ಸಾವಿರಾರು ವಿದ್ಯಾರ್ಥಿಗಳಿಗೆ ಉದ್ಯೋಗ ಮೇಳಗಳ ಮೂಲಕ ಉದ್ಯೋಗಾವಕಾಶಗಳನ್ನು ಕಲ್ಪಿಸಿ ಕೊಟ್ಟಿರುವುದು, ವಿದ್ಯಾಮಾತಾ ಅಕಾಡೆಮಿಯ ಮೂಲಕ ನೂರಾರು ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತೀರ್ಣರಾಗುವಂತೆ ಮಾಡಿ ಸರಕಾರಿ ಉದ್ಯೋಗ ದೊರಕುವಂತೆ ಮಾಡಿದ್ದು, ಅಗ್ನಿಪಥ್ ಯೋಜನೆಯ ಮೂಲಕ 18 ಯುವಕರು ದೇಶ ಸೇವೆ ಮಾಡಲು, ಸೈನ್ಯಕ್ಕೆ ಸೇರಲು ಕಾರಣಕರ್ತರಾಗಿರುವುದು, ಹಲವಾರು ಸರಕಾರಿ ಶಾಲೆಗಳಿಗೆ ವಿದ್ಯಾಮಾತಾದ ಹಲವಾರು ಯೋಜನೆಗಳ ಮೂಲಕ ಸಹಾಯ ಮಾಡುತ್ತಿರುವುದು.. ಸೇರಿದಂತೆ ವಿದ್ಯಾಮಾತಾ ಅಕಾಡೆಮಿಯ ಬಹುಮುಖಿ ಶಿಕ್ಷಣ ಸೇವೆಗಳನ್ನು ಗುರುತಿಸಿ ಪ್ರಶಸ್ತಿಯ ಆಯ್ಕೆ ಸಮಿತಿಯು ಕೊಡಗು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಿಂದ ಭಾಗ್ಯೇಶ್ ರೈ ಅವರನ್ನು ಆಯ್ಕೆ ಮಾಡಿದೆ.

ಕಾರ್ಯಕ್ರಮದಲ್ಲಿ ಕಾಲಜ್ಞಾನ ಮಠ ಗಜೇಂದ್ರಗಡದ ಕಾಲಜ್ಞಾನ ಬ್ರಹ್ಮ ಸದ್ಗುರು ವಿಜ್ಞಾನ ಕಾಲಜ್ಞಾನ ಶಿವಯೋಗಿ ಶರಣಬಸವ ಮಹಾಸ್ವಾಮಿಗಳು, ಶ್ರೀ ಬೇಲಿ ಮಠ ಮಹಾಸಂಸ್ಥಾನ ಕಾಟನ್ ಪೇಟೆ ಬೆಂಗಳೂರು ಇದರ ನಿ.ಪ್ರ. ಶಿವಾನುಭವ ಚರಮೂರ್ತಿ ಶಿವರುದ್ರ ಮಹಾಸ್ವಾಮಿಗಳು, ಶ್ರೀ ಸಿದ್ಧಾರೂಢ ಮಿಷನ್ ಆಶ್ರಮ ರಾಮೋಹಳ್ಳಿ ಬೆಂಗಳೂರಿನ ಡಾ. ಆರೂಢ ಭಾರತಿ ಸ್ವಾಮೀಜಿಯವರ ಸಾನಿಧ್ಯದಲ್ಲಿ, ನಿವೃತ್ತ ಐಎಎಸ್ ಅಧಿಕಾರಿಗಳಾದ ಕೆ ಶಿವರಾಮು, ಕರ್ನಾಟಕ ರಾಜ್ಯ ಪದವೀಧರ ವೇದಿಕೆಯ ರಾಮೋಜಿ ಗೌಡ, ನಾಡಿನ ಹಿರಿಯ ಖ್ಯಾತ ಕವಿಗಳಾದ ಬಿ ಆರ್ ಲಕ್ಷ್ಮಣ ರಾವ್ ಸೇರಿದಂತೆ ಹಲವಾರು ಗಣ್ಯರ ಉಪಸ್ಥಿತಿಯಲ್ಲಿ ಈ ಪ್ರಶಸ್ತಿಯನ್ನು ಭಾಗ್ಯೇಶ್ ರೈ ಅವರಿಗೆ ಪ್ರದಾನ ಮಾಡಲಾಯಿತು.

ಚಾಲಕನ ನಿಯಂತ್ರಣ ತಪ್ಪಿ ಕೋಳಿ ಸಾಗಾಟದ ಟೆಂಪೊ ಪಲ್ಟಿ; ಚಾಲಕ ಸೇರಿದಂತೆ ಮತ್ತೋರ್ವ ಅಪಾಯದಿಂದ ಪಾರು

Posted by Vidyamaana on 2023-12-01 15:59:59 |

Share: | | | | |


ಚಾಲಕನ ನಿಯಂತ್ರಣ ತಪ್ಪಿ ಕೋಳಿ ಸಾಗಾಟದ ಟೆಂಪೊ ಪಲ್ಟಿ; ಚಾಲಕ ಸೇರಿದಂತೆ ಮತ್ತೋರ್ವ ಅಪಾಯದಿಂದ ಪಾರು

ವಿಟ್ಲ: ಪಡೂರು ಗ್ರಾಮದ ಕಡಂಬು ಸಮೀಪದ ರಾದುಕಟ್ಟೆ ಎಂಬಲ್ಲಿ ಕೋಳಿ ಸಾಗಾಟದ ಟೆಂಪೊ ಒಂದು ಪಲ್ಟಿಯಾದ ಘಟನೆ ನಡೆದಿದೆ.


ಸಾಲೆತ್ತೂರು ಕಡೆಗೆ ತಮಿಳುನಾಡು ಗಡಿಭಾಗದಿಂದ ವಿಟ್ಲ ಮೂಲಕ ಕೋಳಿ ಸಾಗಾಟ ಮಾಡುತ್ತಿದ್ದ ಟೆಂಪೊ ಕಡಂಬು ಸಮೀಪದ ರಾದುಕಟ್ಟೆ ಎಂಬಲ್ಲಿ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.


ಇನ್ನು ವಾಹನದಲ್ಲಿದ್ದ ಚಾಲಕ ಸಹಿತ ಮತ್ತೋರ್ವ ವ್ಯಕ್ತಿ ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಲಾರಿ ಪಲ್ಟಿಯಾದ ರಭಸಕ್ಕೆ ರಸ್ತೆಗೆ ಅಡ್ಡವಾಗಿ ಬಿದ್ದಿದ್ದು, ಸಂಚಾರ ಅಸ್ತವ್ಯಸ್ತವಾಗಿದೆ.

ಮೌಲಾನಾ ಅಬ್ದುಲ್ ರಝಾಕ್ ಉಸ್ತಾದ್ (ಮಲೇಶಿಯಾ ) ನಿಧನ

Posted by Vidyamaana on 2023-05-02 23:26:01 |

Share: | | | | |


ಮೌಲಾನಾ ಅಬ್ದುಲ್ ರಝಾಕ್ ಉಸ್ತಾದ್ (ಮಲೇಶಿಯಾ ) ನಿಧನ


ಪುತ್ತೂರು : ಹಿರಿಯ ವಿದ್ವಾಂಸ, ಕಬಕ ಸಮೀಪದ ನಿವಾಸಿ ಮೌಲಾನಾ ಅಬ್ದುಲ್ ರಝಾಕ್ ಹಾಜಿ ಮಲೇಷಿಯಾ (61) ಅಲ್ಪಕಾಲದ ಅನಾರೋಗ್ಯದಿಂದ ಬುಧವಾರ ಮುಂಜಾನೆ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಅವರು ತನ್ನ  ಮನೆಯಲ್ಲಿ ನಡೆಯುವ ಮೌಲನಾ ಹಲ್ಕಾ ದ್ಸಿಕ್ರ್  ಆಧ್ಯಾತ್ಮಿಕ ಸಭೆಗೆ ಮಲೇಷ್ಯಾ ಪ್ರಧಾನಿ ಅನ್ವರ್ ಇಬ್ರಾಹಿಂ ಸಹಿತ ದೇಶ ವಿದೇಶಗಳ ಹಲವಾರು ಗಣ್ಯರು ಆಗಮಿಸುತ್ತಿದ್ದರು. ಮಲೇಷ್ಯಾ, ಸಿಂಗಾಪುರ, ದುಬೈ ಸಹಿತ ವಿವಿಧ ರಾಷ್ಟಗಳಲ್ಲಿ ಆಧ್ಯಾತ್ಮಿಕ ಸಭೆಗಳನ್ನು ನಡೆಸಿ ಹಲವಾರು ಅಭಿಮಾನಿ ವರ್ಗವನ್ನು ಹೊಂದಿದ್ದರು. ಕೊಡುಗೈದಾನಿಯೂ ಪರೋಪಕಾರಿಯೂ ಆಗಿದ್ದ ಅವರು ಜನಾನುರಾಗಿದ್ದರು.

ಮಿತ್ತೂರು ಸಿರಾಜುಲ್ ಹುದಾ ಜುಮಾ ಮಸೀದಿಯ ಗೌರವಾಧ್ಯಕ್ಷರಾಗಿ,  10 ವರ್ಷಗಳ ಕಾಲ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರ ಸಹಿತ ಅಪಾರ ಸಂಖ್ಯೆಯ ಅಭಿಮಾನಿಗಳು, ಬಂದು ಬಳಗವನ್ನು ಅಗಲಿದ್ದಾರೆ.

ಮೃತರ ಮನೆಗೆ ಸಮಸ್ತ ದ ಪ್ರಧಾನ ಕಾರ್ಯದರ್ಶಿ ಶೈಖುನಾ ಆಲಿ ಕುಟ್ಟಿ ಉಸ್ತಾದ್, ಸಯ್ಯಿದ್ ಝೈನುಲ್ ಆಬಿದೀನ್ ತಂಙಳ್ ಕುನ್ನುಂಗೈ, ದ.ಕ.ಜಿಲ್ಲಾ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್, ಬಂಬ್ರಾಣ ಉಸ್ತಾದ್, ಉಸ್ಮಾನುಲ್ ಫೈಝಿ ತೋಡಾರ್, ಸಿ.ಕೆ.ಕೆ. ಮಾಣಿಯೂರ್, ಚೆಂಗಳ ಅಬ್ದುಲ್ಲಾ ಫೈಝಿ, ಮಾಣಿ ದಾರುಲ್ ಎಜುಕೇಶನ್ ಟ್ರಸ್ಟ್ ಸಂಸ್ಥಾಪಕ, ಖಾಝಿ ಹಾಜಿ. ಎಂ.ಅಬ್ದುಲ್ ಹಮೀದ್ ಮುಸ್ಲಿಯಾರ್ ಸಹಿತ  ಹಲವಾರು ನಾಯಕರು ಭೇಟಿ ನೀಡಿ ಅಂತಿಮ ದರ್ಶನ ಪಡೆದರು




ದ.ಕನ್ನಡ ಜಿಲ್ಲೆಯ ವಿವಿಧ ರಸ್ತೆಗಳ ಅಭಿವೃದ್ಧಿಗೆ 42 ಕೋ. ರೂ. ಅನುದಾನ: ಸಂಸದ ಕ್ಯಾ. ಬ್ರಿಜೇಶ್ ಚೌಟ

Posted by Vidyamaana on 2024-09-03 20:43:08 |

Share: | | | | |


 ದ.ಕನ್ನಡ ಜಿಲ್ಲೆಯ ವಿವಿಧ ರಸ್ತೆಗಳ ಅಭಿವೃದ್ಧಿಗೆ 42 ಕೋ. ರೂ. ಅನುದಾನ: ಸಂಸದ ಕ್ಯಾ. ಬ್ರಿಜೇಶ್ ಚೌಟ

ಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಒಟ್ಟು 42 ಕೋಟಿ ರೂ. ಅನುದಾನ ಬಿಡುಗಡೆಗೊಳಿಸಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.

ಕೇಂದ್ರ ಸರ್ಕಾರವು, ಕೇಂದ್ರ ರಸ್ತೆ ಮತ್ತು ಮೂಲಸೌಕರ್ಯ ನಿಧಿ (CRIF) ಅಡಿ ಈ ಅನುದಾನ ನೀಡಿದ್ದು, ಜಿಲ್ಲಾ ವ್ಯಾಪ್ತಿಯಲ್ಲಿ ಸುಮಾರು 74.30 ಕಿಲೋ ಮೀಟರ್ ರಸ್ತೆಗಳ ಅಭಿವೃದ್ಧಿಪಡಿಸಲಾಗುತ್ತದೆ. ಈ ಎಲ್ಲಾ ಕಾಮಗಾರಿಗಳಿಗೆ ಕೇಂದ್ರ ಸರ್ಕಾರದಿಂದ 42 ಕೋಟಿ ರೂ. ಅನುದಾನ ಬಿಡುಗಡೆಗೊಳಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರಿಗೆ ಧನ್ಯವಾದ ಸಲ್ಲಿಸಲಾಗುವುದು ಎಂದು ತಿಳಿಸಿದರು

ಕಾಣೆಯಾಗಿದ್ದ ಶಿಕ್ಷಕಿಯ ಶವ ಪತ್ತೆ: ಕೊಲೆ ಶಂಕೆ

Posted by Vidyamaana on 2024-01-23 12:13:02 |

Share: | | | | |


ಕಾಣೆಯಾಗಿದ್ದ ಶಿಕ್ಷಕಿಯ ಶವ ಪತ್ತೆ: ಕೊಲೆ ಶಂಕೆ

ಮಂಡ್ಯ:‌ ಮೇಲುಕೋಟೆ ಎಸ್‌ಇಟಿ ಶಾಲೆಯ ಶಿಕ್ಷಕಿ, ಮಾಣಿಕ್ಯನಹಳ್ಳಿಯ ಲೋಕೇಶ್ ಎಂಬವರ ಪತ್ನಿ ದೀಪಿಕಾ (35) ಅವರನ್ನು ಐತಿಹಾಸಿಕ ಯೋಗಾನರಸಿಂಹ ಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಕೊಲೆ ಮಾಡಿ ಹೂತು ಹಾಕಿದ್ದು, ಅವರ ಮೇಲೆ ಇಬ್ಬರು ದುಷ್ಕರ್ಮಿಗಳು ಹಲ್ಲೆ ಮಾಡುತ್ತಿರುವ ವಿಡಿಯೊ ಪೊಲೀಸರಿಗೆ ಸಿಕ್ಕಿದೆ.ಜ.20ರಂದು ಶಾಲೆಯಿಂದ ಅವರು ವಾಪಸು ಬಾರದೆ, ಕುಟುಂಬ ಸದಸ್ಯರು ನಾಪತ್ತೆ ಪ್ರಕರಣ ದಾಖಲಿಸಿದ್ದರು. ತನಿಖೆ ಕೈಗೊಂಡ ಮೇಲುಕೋಟೆ ಪೊಲೀಸರಿಗೆ ಬೆಟ್ಟದ ತಪ್ಪಲಲ್ಲಿ ಅವರ ಸ್ಕೂಟರ್‌ ಪತ್ತೆಯಾಗಿತ್ತು. ನಂತರ, ಅವರನ್ನು ಕೊಲೆ ಮಾಡಿ ಗುಂಡಿ ತೆಗೆದು ಹೂತಿರುವುದು ಬೆಳಕಿಗೆ ಬಂತು. ಮೃತದೇಹವನ್ನು ಹೊರತೆಗೆದು ಮಂಡ್ಯ ಮಿಮ್ಸ್‌ ಆಸ್ಪತ್ರೆಗೆ ಸಾಗಿಸಲಾಯಿತು.


ಕೊಲೆಗೆ ಕಾರಣ ಗೊತ್ತಾಗಿಲ್ಲ. ಇಬ್ಬರು ಕಿಡಿಗೇಡಿಗಳು ಹಲ್ಲೆ ಮಾಡುತ್ತಿರುವ ದೃಶ್ಯವನ್ನು ಪ್ರವಾಸಿಗರೊಬ್ಬರು ಚಿತ್ರೀಕರಿಸಿ ಕಳುಹಿಸಿದ್ದಾರೆ. ದೃಶ್ಯ 10 ಸೆಕೆಂಡ್‌ ಇದ್ದು ಸಾಕಷ್ಟು ಮಾಹಿತಿ ಸಿಕ್ಕಿದೆ. ಶೀಘ್ರ ಕೊಲೆಗಾರರನ್ನು ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದರು.


ಶಾಸಕ ದರ್ಶನ್‌ ಪುಟ್ಟಣ್ಣಯ್ಯ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌.ಯತೀಶ್‌, ಉಪ ವಿಭಾಗಾಧಿಕಾರಿ ನಂದೀಶ್‌, ತಹಶೀಲ್ದಾರ್‌ ಶ್ರೇಯಸ್‌ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಪ್ರಕರಣ ದಾಖಲಾಗಿದೆ.

ಫೇಲ್ ಆದ ವಿಚಾರ ಅಪ್ಪನಿಗೆ ತಿಳಿಯುತ್ತೆ ಎಂದು ಇಂಜಿನಿಯರಿಂಗ್ ವಿದ್ಯಾರ್ಥಿ ಸೂಸೈಡ್

Posted by Vidyamaana on 2024-05-12 14:05:41 |

Share: | | | | |


ಫೇಲ್ ಆದ ವಿಚಾರ ಅಪ್ಪನಿಗೆ ತಿಳಿಯುತ್ತೆ ಎಂದು ಇಂಜಿನಿಯರಿಂಗ್ ವಿದ್ಯಾರ್ಥಿ ಸೂಸೈಡ್

 ಆನೇಕಲ್ ತಾಲೂಕಿನ ಜಿಗಣಿ ಬಳಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಕೆರೆಗೆ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜರುಗಿದೆ.21 ವರ್ಷದ ಅಮೃತೇಶ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎನ್ನಲಾಗಿದ್ದು, ಬಿಹಾರ ಮೂಲದ ಅಮೃತೇಶ್ ಪಾಂಡೆ ಜಿಗಣಿ ಕೆರೆಗೆ ಹಾರಿ ಪ್ರಾಣಬಿಟ್ಟಿದ್ದಾನೆ

ಹೇಮಲತಾ ಪಾಂಡೆ, ವಿಜಯ್ ಶಂಕರ್ ದಂಪತಿ ಪುತ್ರ ಅಮೃತೇಶ್ ಕಳೆದ ಕೆಲ ವರ್ಷಗಳ ಹಿಂದೆ ಜಿಗಣಿಗೆ ಬಂದು ನೆಲೆಸಿದ್ದ. ಮಗನಿಗೆ ಒಳ್ಳೆಯ ವಿದ್ಯಾಭ್ಯಾಸ ಕೊಡಿಸಬೇಕೆಂದು ಕನಸು ಕಂಡಿದ್ದ ಪೋಷಕರು ಅದರಂತೆಯೇ ಮೈಸೂರು ರಸ್ತೆಯ ಆರ್.ವಿ ಕಾಲೇಜಿಗೆ ಸೇರಿಸಿದ್ರು. ಅಮೃತೇಶ್, R​.V.ಕಾಲೇಜಿನಲ್ಲಿ 3ನೇ ವರ್ಷದ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ.

Recent News


Leave a Comment: