ನಕಲಿ ಚಿನ್ನ ದ ಆಸೆಗೆ ತುಮಕೂರಿನಲ್ಲಿ ಬಲಿಯಾದರೇ ಬೆಳ್ತಂಗಡಿಯ ಮೂವರು?

ಸುದ್ದಿಗಳು News

Posted by vidyamaana on 2024-03-23 10:38:46 |

Share: | | | | |


ನಕಲಿ ಚಿನ್ನ ದ ಆಸೆಗೆ ತುಮಕೂರಿನಲ್ಲಿ ಬಲಿಯಾದರೇ ಬೆಳ್ತಂಗಡಿಯ ಮೂವರು?

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿ ಕೆರೆಗೆ ತಳ್ಳಿದ ಪ್ರಕರಣದಲ್ಲಿ ಮೂವರು ಸಾವನ್ನಪ್ಪಿದ ಸಂಬಂಧಪಟ್ಟಂತೆ ಆರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಪ್ರಕರಣದ‌ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಐದು ಜನರನ್ನು ಕೋರಾ ಪೊಲೀಸರು ಮಾ.22 ರಂದು ರಾತ್ರಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಗುರುತಿಸಿದ್ದಾರೆ.

ಇನ್ನು ಮೂರು ಜನ ಮೃತರೆಲ್ಲಾ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ ಪ್ಲ್ಯಾನ್ ಮಾಡಿ ಕರೆಸಿಕೊಂಡು ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ.

ಪ್ರಕರಣದ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಇತರ ಐದು ಜನ ಸೇರಿ ಒಟ್ಟು ಆರು ಜನರನ್ನು ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. 


ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು. ಇನ್ನು ಮೂವರ ಶವ ಸಂಪೂರ್ಣವಾಗಿ ಸುಟ್ಟಿರುವ ಕಾರಣ ಗುರುತು ಪತ್ತೆಹಚ್ಚಲು ಡಿಎನ್ಎ ಪರೀಕ್ಷೆ ಬಳಿಕ ಮನೆಮಂದಿಗೆ ಶವ ಬಿಟ್ಟು ಕೊಡಲಿದ್ದಾರೆ. ಡಿಎನ್ಎ ವರದಿ ಬರಲು ಸುಮಾರು ಒಂದು ವಾರ ಬೇಕಾಗುತ್ತದೆ ಎಂದು ಪೊಲೀಸರು ಮನೆಯವರಿಗೆ ತಿಳಸಿದ್ದಾರೆ.

 Share: | | | | |


ಕಾಪು : ಮಗಳ ಜೊತೆ ನಸೀದಾ ನಾಪತ್ತೆ

Posted by Vidyamaana on 2024-08-08 07:46:38 |

Share: | | | | |


ಕಾಪು : ಮಗಳ ಜೊತೆ ನಸೀದಾ ನಾಪತ್ತೆ

ಕಾಪು: ಮಲ್ಲಾರು ಪಕೀರಣಕಟ್ಟೆಯಲ್ಲಿ ವಾಸವಾಗಿದ್ದ ನಸೀದಾ (27) ತನ್ನ ಎರಡು ವರ್ಷ ಪ್ರಾಯದ ಮಗಳೊಂದಿಗೆ ನಾಪತ್ತೆಯಾಗಿರುವುದಾಗಿ ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ನಸೀದಾ ಅವರಿಗೆ ವಿಚ್ಛೇದನವಾಗಿದ್ದು,ಕಳೆದೊಂದು ವರ್ಷ ದಿಂದ ಮಗಳೊಂದಿಗೆ ವಾಸವಿದ್ದರು.

ಚಾರ್ಮಾಡಿ ಘಾಟ್ ನಲ್ಲಿ ಕೆಟ್ಟು ನಿಂತ ಎರಡು ಬಸ್ಸುಗಳು: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ

Posted by Vidyamaana on 2024-05-20 11:49:54 |

Share: | | | | |


ಚಾರ್ಮಾಡಿ ಘಾಟ್ ನಲ್ಲಿ ಕೆಟ್ಟು ನಿಂತ ಎರಡು ಬಸ್ಸುಗಳು: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ

ಬೆಳ್ತಂಗಡಿ: ಚಾರ್ಮಾಡಿ ಘಾಟ್ ನ ಅಣ್ಣಪ್ಪ ಸ್ವಾಮಿ ದೇವಸ್ಥಾನ ಬಳಿ ರಸ್ತೆ ಮಧ್ಯದಲ್ಲೇ ಎರಡು ಕೆ ಎಸ್ ಆರ್ ಟಿ ಸಿ ಬಸ್ಸುಗಳು ಕೆಟ್ಟು ನಿಂತ ಘಟನೆ‌ ನಡೆದಿದ್ದು, ಪರಿಣಾಮ ನೂರಾರು ವಾಹನಗಳು ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿದೆ.

ಗಂಟೆ ಗಟ್ಟಲೇ ಟ್ರಾಫಿಕ್ ಜಾಮ್ ಹಿನ್ನೆಲೆಯಲ್ಲಿ ವಿಷಯ ತಿಳಿದ ಹೈವೇ ಪಟ್ರೋಲ್ ನ ಎ. ಎಸ್.ಐ ಶಶಿ

ಹೃದಯದಲ್ಲಿ ಮಡುಗಟ್ಟಿದ ನೋವು ಮೊಗದಲ್ಲಿ ಮುಗುಳ್ನಗೆ ತನ್ನ ಸಾವಿನ ಸುದ್ದಿಯನ್ನು ತಾನೇ ಘೋಷಿಸಿದ ಮಹಿಳೆ

Posted by Vidyamaana on 2023-11-17 20:00:56 |

Share: | | | | |


ಹೃದಯದಲ್ಲಿ ಮಡುಗಟ್ಟಿದ ನೋವು ಮೊಗದಲ್ಲಿ ಮುಗುಳ್ನಗೆ ತನ್ನ ಸಾವಿನ ಸುದ್ದಿಯನ್ನು ತಾನೇ ಘೋಷಿಸಿದ ಮಹಿಳೆ

ಪ್ರೀತಿಸುವ ಗಂಡ, ಮುದ್ದಾದ ಮಕ್ಕಳು, ಜೀವನವನ್ನು ಸಾಗಿಸಲು ಬೇಕಾದಷ್ಟು ಸಂಪಾದನೆ ಇನ್ನೇನು ಬೇಕು ಹೇಳಿ ಬದುಕಲ್ಲಿ. ಆದರೆ ಅಂತಹ ಸುಂದರ ಬದುಕಲ್ಲಿ ಕ್ಯಾನ್ಸರ್​ ಎನ್ನುವ ಬಿರುಗಾಳಿ ಬೀಸಿದಾಗ ಅದನ್ನು ತಡೆದುಕೊಳ್ಳುವ ಶಕ್ತಿ ಯಾರಿಗೂ ಇರುವುದಿಲ್ಲ. ಆದರೆ ಈ ಮಹಿಳೆ ತನ್ನ ಸಾವಿನ ಸುದ್ದಿಯನ್ನು ತಾನೇ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಿದ್ದಾರೆ.


ಎಂದೂ ತನಗೆ ಇಂಥಾ ಪರಿಸ್ಥಿತಿ ಬಂದುಬಿಡ್ತಲ್ಲಾ ಎಂದು ದೇವರನ್ನು ಶಪಿಸಿಲ್ಲ, ಇರುವಷ್ಟು ದಿನ ಇದ್ದ ಜೀವನವನ್ನು ಖುಷಿಯಿಂದಲೇ ಕಳೆದಿದ್ದಾರೆ ಈ ಮಹಿಳೆ. ಈ ಮಹಿಳೆ ಹೆಸರು ಕೇಸಿ ಮ್ಯಾಕ್​ಇಂಟೈರ್​ ಆಕೆ ಅಂಡಾಶಯದ ಕ್ಯಾನ್ಸರ್​ನಿಂದ ಭಾನುವಾರ ನಿಧನರಾಗಿದ್ದಾರೆ. ಆಕೆ ಸಾಯುವ ಮುನ್ನ ಸಾಮಾಜಿಕ ಜಾಲತಾಣಗಳಲ್ಲಿ ತನ್ನ ಸಾವನ್ನು ಘೋಷಿಸಿ ಬಳಿಕ ಪ್ರೀತಿಪಾತ್ರರಿಗೆ ಕೊನೆಯ ವಿದಾಯವನ್ನು ಬರೆದಿದ್ದಳು.ನೀವು ಈ ಪೋಸ್ಟ್​ ಅನ್ನು ಓದುತ್ತಿದ್ದರು ನಾನು ಈ ಜಗತ್ತಿನಲ್ಲಿ ಇಲ್ಲ ಎಂದರ್ಥ, ನನಗೆ ಅಂಡಾಶಯ ಕ್ಯಾನ್ಸರ್​ ಇತ್ತು ಅದನ್ನು ನಾಲ್ಕನೇ ಹಂತವನ್ನು ತಲುಪಿತ್ತು. ಚಿಕಿತ್ಸೆ ಪಡೆದ ಬಳಿಕವೂ ಪುನರಾವರ್ತನೆಯಾಗಿದೆ.


ಈ ಐದು ತಿಂಗಳು ವರ್ಜೀನಿಯಾ, ರೋಡ್​ ಐಲೆಂಡ್​ ಹಾಗೂ ನ್ಯಾಯಾರ್ಕ್​ನಲ್ಲಿ ನನ್ನ ಸ್ನೇಹಿತರೊಂದಿಗೆ ಹಾಗೂ ಕುಟುಂಬದ ಜತೆ ಕಳೆಯಲು ಅವಕಾಶ ದೊರೆತಿರುವುದಕ್ಕೆ ನಾನು ಧನ್ಯ.


ಆಸ್ಪತ್ರೆಗೆ ತೆರಳಿ ಯಾರಿಗೂ ತಿಳಿಯದಂತೆ ಬೇರೆಯವರ ವೈದ್ಯಕೀಯ ಸಾಲವನ್ನು ತಾವು ಪಾವತಿಸಲು ಚಾರಿಟಿಯನ್ನು ತೆರೆಯುವುದು ಆಕೆಯ ಕನಸಾಗಿತ್ತು, ಆ ಕನಸನ್ನು ಸಾಕಾರಗೊಳಿಸುತ್ತೇನೆ ಎಂದು ಮಹಿಳೆಯ ಪತಿ ತಿಳಿಸಿದ್ದಾರೆ. ಶುಕ್ರವಾರದವರೆಗೆ 1.09 ಕೋಟಿ ರೂ. ಸಂಗ್ರಹವಾಗಿದೆ.

ಕೇಸಿ ಅವರು ಮಕ್ಕಳು ಹಾಗೂ ವಯಸ್ಕರಿಗೆ ಪುಸ್ತಕಗಳನ್ನು ಪ್ರಕಟಿಸುವ ಪೆಂಗ್ವಿನ್ ರಾಂಡಮ್​ ಹೌಸ್​ನಲ್ಲಿ ಪ್ರಕಾಶಕರಾಗಿದ್ದರು.ಕೇಸಿ ನಾನು ನಿನ್ನನ್ನು ತುಂಬಾ ಪ್ರೀತಿಸುತ್ತೇನೆ, ನಾವು ನಿಮ್ಮನ್ನು ಕಳೆದುಕೊಂಡುಬಿಟ್ಟೆವು, ನೀನೆಲ್ಲೇ ಇದ್ದರೂ ನಮ್ಮೊಂದಿಗೆ ಇದ್ದೀಯ ಎನ್ನುವ ಭಾವನೆ ನಮ್ಮದು ಎಂದು ಪತಿ ಬರೆದುಕೊಂಡಿದ್ದಾರೆ.

ಹಿಂದಿನ ಶಾಸಕರ ಕಚೇರಿಗೆ ವಾಸ್ತುದೋಷ!!!?

Posted by Vidyamaana on 2023-05-26 16:24:56 |

Share: | | | | |


ಹಿಂದಿನ ಶಾಸಕರ ಕಚೇರಿಗೆ ವಾಸ್ತುದೋಷ!!!?

ಪುತ್ತೂರು: ತಾಲೂಕು ಆಡಳಿತ ಸೌಧದಲ್ಲಿದ್ದ ಹಿಂದಿನ ಶಾಸಕರ ಕಚೇರಿಗೆ ವಾಸ್ತುದೋಷ ಎದುರಾಗಿತ್ತಂತೆ! ಆದ್ದರಿಂದ ಶಾಸಕರಾಗಿ ಆಯ್ಕೆಯಾಗಿರುವ ಅಶೋಕ್ ಕುಮಾರ್ ರೈ ಅವರು ಹೊಸ ಕಚೇರಿಯ ತಲಾಷ್’ನಲ್ಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಶುಕ್ರವಾರ ತಾಲೂಕು ಆಡಳಿತ ಸೌಧಕ್ಕೆ ಭೇಟಿ ನೀಡಿರುವ ನೂತನ ಶಾಸಕ ಅಶೋಕ್ ಕುಮಾರ್ ರೈ ಅವರು, ಸಹಾಯಕ ಆಯುಕ್ತರ ಜೊತೆ ಮಾತನಾಡುತ್ತಾ ಹೊಸ ಕಚೇರಿಯನ್ನು ಹುಡುಕಿ ಕೊಡಲು ಸೂಚಿಸಿದ್ದಾರೆ.

ಹಳೆ ಕಚೇರಿಯಲ್ಲಿ ವಾಸ್ತುದೋಷ ಇದೆಯೋ ಏನೋ ಗೊತ್ತಿಲ್ಲ. ಆದರೆ ಆ ಕಚೇರಿ ತೀರಾ ಚಿಕ್ಕದಾಗಿದ್ದು, ಸ್ಥಳಾವಕಾಶದ ಕೊರತೆಯಿದೆ. ನನ್ನನ್ನು ಭೇಟಿಯಾಗಲು ಬರುವ ಸಾರ್ವಜನಿಕರಿಗೆ ಸರಿಯಾಗಿ ಕುಳಿತುಕೊಳ್ಳುವಷ್ಟು ಸ್ಥಳಾವಕಾಶ ಇರಬೇಕು. ಆದ್ದರಿಂದ ದೊಡ್ಡ ಕೊಠಡಿಯ ವ್ಯವಸ್ಥೆ ಮಾಡುವಂತೆ ತಿಳಿಸಿದ್ದಾರೆ.

ತಾಲೂಕು ಆಡಳಿತ ಸೌಧದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರ ನೂತನ ಕಚೇರಿಯು ಕೆಲವೇ ದಿನಗಳಲ್ಲಿ ತೆರೆದುಕೊಳ್ಳಲಿದ್ದು, ತುರ್ತಾಗಿ ಕಚೇರಿ ಕೆಲಸ ನಡೆಯಲಿದೆ ಎಂದು ತಿಳಿದುಬಂದಿದೆ.

ಪುತ್ತೂರು ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಯರೊಂದಿಗೆ ಅನುಚಿತ ವರ್ತನೆ: ಕಡಬ ಮೂಲದ ಪ್ರವೀಣ್ ಪೊಲೀಸ್ ವಶಕ್ಕೆ

Posted by Vidyamaana on 2023-07-19 15:11:32 |

Share: | | | | |


ಪುತ್ತೂರು ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಯರೊಂದಿಗೆ ಅನುಚಿತ ವರ್ತನೆ: ಕಡಬ ಮೂಲದ ಪ್ರವೀಣ್ ಪೊಲೀಸ್ ವಶಕ್ಕೆ

ಪುತ್ತೂರು; ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸಿದ ಯುವಕನನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಪುತ್ತೂರಿನ ಕಲ್ಲಿಮಾರು ಎಂಬಲ್ಲಿ ನಡೆದಿದೆ.


ನಿನ್ನೆ ಬೆಳಿಗ್ಗೆ ಎಂದಿನಂತೆ ವಿದ್ಯಾರ್ಥಿನಿಯರಿಬ್ಬರು ಮನೆಯಿಂದ ಕಾಲೇಜಿಗೆ ತೆರಳುತ್ತಿದ್ದಾಗ ದಾರಿಯಲ್ಲಿ ಬಂದ ಯುವಕನೊಬ್ಬ ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ. ಆತನಿಂದ ತಪ್ಪಿಸಿಕೊಂಡು ಬಂದ ವಿದ್ಯಾರ್ಥಿನಿಯರು ಕಾಲೇಜಿಗೆ ಬಂದು ಕಾಲೇಜಿನ ಉಪನ್ಯಾಸಕಿಗೆ ಮಾಹಿತಿ ನೀಡಿದ್ದಾರೆ.


ಇನ್ನು ಈ ಯುವಕ ಕಡಬ ತಾಲೂಕಿನ ಬೆಳಂದೂರು ಮೂಲದ ಪ್ರವೀಣ್ ಯಾನೆ ಸೀತಾರಾಮ ಎನ್ನಲಾಗಿದೆ. ಈ ಬಗ್ಗೆ ಕಾಲೇಜಿನ ಉಪನ್ಯಾಸಕಿ ನೀಡಿದ ದೂರಿನಂತೆ ಪುತ್ತೂರು ನಗರ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ

ಅಕ್ರಮ ಜಾನುವಾರು ಸಾಗಾಟ ವಿಚಾರದಲ್ಲಿ ವೈಷಮ್ಯ

Posted by Vidyamaana on 2023-09-29 20:45:17 |

Share: | | | | |


ಅಕ್ರಮ ಜಾನುವಾರು ಸಾಗಾಟ ವಿಚಾರದಲ್ಲಿ ವೈಷಮ್ಯ

ಮಂಗಳೂರು: ನಗರದ ಅಡ್ಯಾರ್ ಪರಿಸರದಲ್ಲಿ ಅಕ್ರಮ ಜಾನುವಾರು ಸಾಗಾಟದ ತಂಡದ ಸದಸ್ಯರ ಕೊಲೆಗೆ ಸಂಚು ರೂಪಿಸಿದ ಕುಖ್ಯಾತ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿರುತ್ತಾರೆ.


ಈ ಹಿಂದೆ ಕೊಲೆ, ಕೊಲೆಯತ್ನ, ಜಾನುವಾರು ಕಳ್ಳತನ ಹಾಗೂ ಇತರ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗಳ ತಂಡವೊಂದು ಅಡ್ಯಾರ್ ಪರಿಸರದಲ್ಲಿ ಮಾರಾಕಾಯುಧಗಳೊಂದಿಗೆ ಮತ್ತೊಂದು ತಂಡದ ಸದಸ್ಯರ ಕೊಲೆಗೆ ಸಂಚು ರೂಪಿಸಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು. ಫರಂಗಿಪೇಟೆ ಅಮ್ಮೆಮ್ಮಾರ್ ನಿವಾಸಿಗಳಾದ ತಸ್ಲೀಮ್ @ ಗರುಡ ತಸ್ಲೀಮ್(34), 

ಹೈದರಾಲಿ @ ಹೈದು(26)  ಎಂಬವರನ್ನು ವಶಕ್ಕೆ ಪಡೆದು ಅವರ ವಶದಲ್ಲಿದ್ದ ತಲವಾರು-2, ಚೂರಿ-1, ಮೊಬೈಲ್ ಫೋನುಗಳು-2, ಹಾಗೂ KL -14-AB-7212 ಮಹೇಂದ್ರ ಪಿಕ್ ಅಪ್ ವಾಹನ ವಶಪಡಿಸಿದ್ದಾರೆ.  ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 5,21,000/- ಆಗಬಹುದು. ಆರೋಪಿಗಳ ವಿರುದ್ದ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. 






ಹತ್ತು ದಿನಗಳ ಹಿಂದಷ್ಟೆ ಜೈಲಿನಿಂದ ಬಿಡುಗಡೆ 


ಫರಂಗಿಪೇಟೆ ಪರಿಸರದಲ್ಲಿ ಅಕ್ರಮ ಜಾನುವಾರು ಸಾಗಾಟದ ಎರಡು ತಂಡಗಳ ನಡುವೆ ಜಾನುವಾರು ಸಾಗಾಟದ ವಿಷಯದಲ್ಲಿ ಗಲಾಟೆ ನಡೆದಿತ್ತು. ಅಕ್ರಮ ಜಾನುವಾರು ಸಾಗಾಟ ವಿಚಾರವಾಗಿದ್ದರಿಂದ ಠಾಣೆಯಲ್ಲಿ ದೂರು ದಾಖಲಾಗಿರಲಿಲ್ಲ. ಆನಂತರ, ತಸ್ಲಿಂ ಹಾಗೂ ಆತನ ಸಹಚರರು ಇನ್ನೊಂದು ತಂಡದ ಸದಸ್ಯರ ಕೊಲೆಗೆ ಸಂಚು ರೂಪಿಸಿ ಹೊಂಚು ಹಾಕುತ್ತಿದ್ದ ಮಾಹಿತಿ ಪಡೆದು ಪೊಲೀಸರು ದಾಳಿ ನಡೆಸಿದ್ದಾರೆ. 


ಆರೋಪಿಗಳ ಪೈಕಿ ತಸ್ಲೀಮ್ @ ಗರುಡ ತಸ್ಲೀಮ್ ಎಂಬಾತ ಈ ಹಿಂದೆ ಮಂಗಳೂರು ನಗರದ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆ ಯತ್ನ ಹಾಗೂ ದರೋಡೆ ಪ್ರಕರಣ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಜೋಡಿ ಕೊಲೆ ಪ್ರಕರಣ, ಬಂಟ್ವಾಳ ನಗರ ಠಾಣೆ ವ್ಯಾಪ್ತಿಯಲ್ಲಿ ಹಲ್ಲೆ, ಜಾನುವಾರು ಕಳ್ಳತನ ಪ್ರಕರಣ, ಸುಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕಳವು ಪ್ರಕರಣಗಳಲ್ಲಿ, ರೈಲ್ವೇ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ ಹೀಗೆ ಒಟ್ಟು 14 ಪ್ರಕರಣಗಳಲ್ಲಿ ಭಾಗಿಯಾಗಿದ್ದ. 10 ದಿನಗಳ ಹಿಂದೆ ನ್ಯಾಯಾಲಯದಿಂದ ಜಾಮೀನು ಪಡೆದು ಜೈಲಿನಿಂದ ಬಿಡುಗಡೆಗೊಂಡಿದ್ದ. ಇನ್ನೋರ್ವ ಆರೋಪಿ ಹೈದರಾಲಿ @ಹೈದು ಎಂಬಾತ ಈ ಹಿಂದೆ ಮೂಡಬಿದ್ರಿ ಠಾಣೆ ವ್ಯಾಪ್ತಿಯಲ್ಲಿ ನಡೆದ ಕೊಲೆ ಯತ್ನ ಪ್ರಕರಣ, ಉಳ್ಳಾಲ ಠಾಣೆಯಲ್ಲಿ ಜಾನುವಾರು ಕಳ್ಳತನ ಪ್ರಕರಣ ಹಾಗೂ ಉಡುಪಿ ಜಿಲ್ಲೆಯ ಕಾರ್ಕಳ ಪೊಲೀಸ್ ಠಾಣೆಯಲ್ಲಿ ಜಾನುವಾರು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ.

Recent News


Leave a Comment: