ನಕಲಿ ಚಿನ್ನ ದ ಆಸೆಗೆ ತುಮಕೂರಿನಲ್ಲಿ ಬಲಿಯಾದರೇ ಬೆಳ್ತಂಗಡಿಯ ಮೂವರು?

ಸುದ್ದಿಗಳು News

Posted by vidyamaana on 2024-03-23 10:38:46 |

Share: | | | | |


ನಕಲಿ ಚಿನ್ನ ದ ಆಸೆಗೆ ತುಮಕೂರಿನಲ್ಲಿ ಬಲಿಯಾದರೇ ಬೆಳ್ತಂಗಡಿಯ ಮೂವರು?

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿ ಕೆರೆಗೆ ತಳ್ಳಿದ ಪ್ರಕರಣದಲ್ಲಿ ಮೂವರು ಸಾವನ್ನಪ್ಪಿದ ಸಂಬಂಧಪಟ್ಟಂತೆ ಆರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಪ್ರಕರಣದ‌ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಐದು ಜನರನ್ನು ಕೋರಾ ಪೊಲೀಸರು ಮಾ.22 ರಂದು ರಾತ್ರಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಗುರುತಿಸಿದ್ದಾರೆ.

ಇನ್ನು ಮೂರು ಜನ ಮೃತರೆಲ್ಲಾ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ ಪ್ಲ್ಯಾನ್ ಮಾಡಿ ಕರೆಸಿಕೊಂಡು ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ.

ಪ್ರಕರಣದ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಇತರ ಐದು ಜನ ಸೇರಿ ಒಟ್ಟು ಆರು ಜನರನ್ನು ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. 


ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು. ಇನ್ನು ಮೂವರ ಶವ ಸಂಪೂರ್ಣವಾಗಿ ಸುಟ್ಟಿರುವ ಕಾರಣ ಗುರುತು ಪತ್ತೆಹಚ್ಚಲು ಡಿಎನ್ಎ ಪರೀಕ್ಷೆ ಬಳಿಕ ಮನೆಮಂದಿಗೆ ಶವ ಬಿಟ್ಟು ಕೊಡಲಿದ್ದಾರೆ. ಡಿಎನ್ಎ ವರದಿ ಬರಲು ಸುಮಾರು ಒಂದು ವಾರ ಬೇಕಾಗುತ್ತದೆ ಎಂದು ಪೊಲೀಸರು ಮನೆಯವರಿಗೆ ತಿಳಸಿದ್ದಾರೆ.

 Share: | | | | |


ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Posted by Vidyamaana on 2024-05-01 09:29:26 |

Share: | | | | |


ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

ಉಪ್ಪಿನಂಗಡಿ : ಕೌಕ್ರಾಡಿ ಗ್ರಾಮದ ಕಟ್ಟೆ ಮಜಲಿನ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಉತ್ತರ ಪ್ರದೇಶ ಮೂಲದ ಸೋನು ಸೋಂಕರ್‌ ಅವರ ಪತ್ನಿ ರೀಮಾ ಸೋಂಕರ್‌ (26) ಮತ್ತು ಮಗು ರಿಯಾ (1) ನಾಪತ್ತೆಯಾಗಿರುವ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇಂಟೀರಿಯರ್‌ ಡೆಕೊರೇಟರ್‌ ಆಗಿರುವ ಸೋನು ಸೋಂಕರ್‌ ಉತ್ತರ ಪ್ರದೇಶದ ಅಜಾಮ್‌ ಘರ್‌ ಜಿಲ್ಲೆಯ

ನಾಳೆ ಜಿಲ್ಲೆಯಲ್ಲಿ ಲೋಕ ಮತದಾನ – ರಾಜಕೀಯ ಪಕ್ಷಗಳಿಗೆ ಬೂತ್ ತೆರೆಯಲು ಟಫ್ ರೂಲ್ಸ್!

Posted by Vidyamaana on 2024-04-25 13:59:22 |

Share: | | | | |


ನಾಳೆ ಜಿಲ್ಲೆಯಲ್ಲಿ ಲೋಕ ಮತದಾನ – ರಾಜಕೀಯ ಪಕ್ಷಗಳಿಗೆ ಬೂತ್ ತೆರೆಯಲು ಟಫ್ ರೂಲ್ಸ್!

ಪುತ್ತೂರು: ಏಪ್ರಿಲ್ ೨೬ರಂದು ನಡೆಯುವ ಲೋಕಸಭಾ ಚುನಾವಣೆಯ ಮತದಾನ ಸಂದರ್ಭದಲ್ಲಿ ಪ್ರತೀ ಮತಗಟ್ಟಯ ಹೊರಗೆ ರಾಜಕೀಯ ಪಕ್ಷಗಳು ಮತ್ತು ಸ್ವತಂತ್ರ ಅಭ್ಯರ್ಥಿಗಳು ತಮ್ಮದೇ ಆದ ಬೂತ್ ತೆರೆಯಲು ಅವಕಾಶವಿದ್ದರೂ ಇದಕ್ಕೆlಕಟ್ಟುನಿಟ್ಟಿನ ನಿಯಮಗಳು ಅನ್ವಯವಾಗುತ್ತವೆ ಎಂದು ಪುತ್ತೂರು ಸಹಾಯಕ ಆಯುಕ್ತರೂ, ಸಹಾಯಕ ಚುನಾವಣಾ ಅಧಿಕಾರಿಗಳೂ ಆಗಿರುವ ಜುಬಿನ್ ಮೊಹಾಪಾತ್ರ ಹೇಳಿದರು.


ಬುಧವಾರ ಈ ಬಗ್ಗೆ ಮಾಹಿತಿ ನೀಡಿದ ಅವರು, ಮತಗಟ್ಟೆಯ ಸುತ್ತ ೨೦೦ ಮೀಟರ್ ವ್ಯಾಪ್ತಿಯಲ್ಲಿ ಪ್ರತಿಬಂಧಕಾಜ್ಞೆ ಜಾರಿಯಲ್ಲಿರುತ್ತದೆ. ಅದಕ್ಕಿಂತ ಹೊರಗೆ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ತಮ್ಮ ಬೂತ್ ತೆರೆಯಬಹುದಾಗಿದೆ. ಆದರೆ ಒಂದು ಬೂತ್‌ನಲ್ಲಿ ಇಬ್ಬರಿಗಿಂತ ಹೆಚ್ಚು ಮಂದಿ ಇರಬಾರದು. ಇದ್ದಲ್ಲಿ ಚುನಾವಣಾ ಆಯೋಗದ ನಿಯಮ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದವರು ನುಡಿದರು.


೧೦ ಅಡಿ ಅಗಲ ಮತ್ತು ೧೦ ಅಡಿ ಉದ್ದದ ಒಂದು ಪೆಂಡಾಲ್ ಹಾಕಿ ಬೂತ್ ರಚಿಸಿಕೊಳ್ಳಬಹುದು. ಅದರ ಮೇಲೆ ಪಕ್ಷದ ಒಂದು ಧ್ವಜ, ಒಂದು ಬ್ಯಾನರ್ ಅಳವಡಿಸಬಹುದು. ಒಂದು ಟೇಬಲ್ ಹಾಕಿಕೊಂಡು ಇಬ್ಬರು ಮಾತ್ರ ಕೂರಬಹುದು. ಒಂದೇ ಕೇಂದ್ರದಲ್ಲಿ ಒಂದಕ್ಕಿAತ ಹೆಚ್ಚು ಮತಗಟ್ಟೆಗಳು (ಸೆಕ್ಟರ್ ಬೂತ್) ಇದ್ದ ಸಂದರ್ಭದಲ್ಲೂ ಪಕ್ಷಗಳ ಬೂತ್ ಒಂದಕ್ಕಿAತ ಹೆಚ್ಚು ಇರಬಾರದು.  ಅಲ್ಲಿ ಜನ ಗುಂಪುಗೂಡಲು ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದರು.

ಎಲ್ಲ  ಮತದಾನ ಕೇಂದ್ರಗಳಲ್ಲಿ  ಏ.೨೬ರಂದು ಮುಂಜಾನೆ ೫.೩೦ರಿಂದ ಅಣಕು ಮತದಾನ ನಡೆಯುತ್ತದೆ. ಎಲ್ಲ ಪಕ್ಷಗಳ ಪ್ರತಿನಿಧಿಗಳ ಸಮ್ಮುಖ ಅಣಕು ಮತದಾನದ ಮೂಲಕ ಮತಯಂತ್ರಗಳ ಪರಿಶೀಲನೆ ನಡೆಯಲಿದೆ. ಇದಾದ ಬಳಿಕ ಇವಿಎಂ ಅನ್ನು ಮತದಾನಕ್ಕೆ ಸಜ್ಜುಗೊಳಿಸಲಾಗುವುದು. ೭ ಗಂಟೆಗೆ ಮತದಾನ ಆರಂಭಗೊAಡು ಸಂಜೆ ೬.೩೦ರವರೆಗೆ ನಡೆಯಲಿದೆ. ಅವಧಿ  ಮುಗಿಯುವ ಹಂತದಲ್ಲಿ ಮತದಾನ ಕೇಂದ್ರದಲ್ಲಿ ಇದ್ದ  ಎಲ್ಲರಿಗೂ ಮತದಾನಕ್ಕೆ ಅವಕಾಶ ನೀಡಲಾಗುವುದು ಎಂದರು.

ಜಿಲ್ಲಾ ಚುನಾವಣಾ ಅಧಿಕಾರಿಯವರ ಆದೇಶದ ಪ್ರಕಾರ ಪ್ರತೀ ಮತಗಟ್ಟೆಗಳ ಸುತ್ತ ೨೦೦ ಮೀಟರ್ ವ್ಯಾಪ್ತಿಯನ್ನು ಸೂಕ್ಷ÷್ಮ ಪ್ರದೇಶವೆಂದು ಪರಿಗಣಿಸಿ ಆ ಪರಿಧಿಯಲ್ಲಿ ಕೆಂಪು ಧ್ವಜ ನೆಡಲಾಗುವುದು. ಅದರೊಳಗಿನ ವ್ಯಾಪ್ತಿಯಲ್ಲಿ ಯಾವುದೇ ಚಟುವಟಿಕೆಗೆ ಅವಕಾಶವಿಲ್ಲö ಎಂದು ಸಹಾಯಕ ಆಯುಕ್ತರು ಹೇಳಿದರು.

ಸಂಟ್ಯಾರ್ SDPI ಬೂತ್ ಸಮಿತಿ ವತಿಯಿಂದ - ಪಕ್ಷದ ಸಂಸ್ಥಾಪನಾ ದಿನಾಚರಣೆ

Posted by Vidyamaana on 2024-06-21 16:09:00 |

Share: | | | | |


ಸಂಟ್ಯಾರ್ SDPI ಬೂತ್ ಸಮಿತಿ ವತಿಯಿಂದ - ಪಕ್ಷದ ಸಂಸ್ಥಾಪನಾ ದಿನಾಚರಣೆ

ಪುತ್ತೂರು: 16ನೇ ವರ್ಷದೆಡೆಗೆ ಸ್ವಾಭಿಮಾನಿ ಮತ್ತು ಜನಪರ ರಾಜಕೀಯದ ದಿಟ್ಟ ಹೆಜ್ಜೆಗಳೊಂದಿಗೆ ಪಯಣಿಸುತ್ತಿರುವ ಪಕ್ಷದ ಸಂಸ್ಥಾಪನಾ ದಿನದ ಅಂಗವಾಗಿ ಜೂನ್ 21 2024 ರಂದು ಧ್ವಜಾರೋಹಣ ಕಾರ್ಯಕ್ರಮವು SDPI ಸಂಟ್ಯಾರ್ ಬೂತ್ ಸಮಿತಿ ವತಿಯಿಂದ ಸಂಟ್ಯಾರಿನಲ್ಲಿ ನಡೆಯಿತು.

ಧ್ವಜಾರೋಹಣ ವನ್ನು SDPI ದ.ಕ ಜಿಲ್ಲಾ ಸಮಿತಿ ಸದಸ್ಯರಾದ ಸಿದ್ದೀಕ್ ಕೆ ಎ ರವರು ನೆರವೇರಿಸಿದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು SDPI ಸಂಟ್ಯಾರ್ ಬೂತ್ ಸಮಿತಿ ಅಧ್ಯಕ್ಷರಾದ ಮಸೂದ್ ಸಂಟ್ಯಾರ್ ವಹಿಸಿದರು.

ಕುಕ್ಕೆ ಸುಬ್ರಹ್ಮಣ್ಯಕ್ಕೆ ನೂತನ ಆಡಳಿತಾಧಿಕಾರಿ ಯೇಸುರಾಜ್ ಧರ್ಮದ ಬಗ್ಗೆ ಅಪಪ್ರಚಾರ

Posted by Vidyamaana on 2024-05-03 07:21:29 |

Share: | | | | |


ಕುಕ್ಕೆ ಸುಬ್ರಹ್ಮಣ್ಯಕ್ಕೆ ನೂತನ ಆಡಳಿತಾಧಿಕಾರಿ ಯೇಸುರಾಜ್ ಧರ್ಮದ ಬಗ್ಗೆ ಅಪಪ್ರಚಾರ

ಮಂಗಳೂರು, ಮೇ.2: ರಾಜ್ಯದ ಮುಜರಾಯಿ ಇಲಾಖೆಗೊಳಪಟ್ಟ ಶ್ರೀಮಂತ ದೇಗುಲ ಎಂದು ಹೆಸರಾಗಿರುವ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ ಎಸ್.ಜೆ. ಯೇಸುರಾಜ್ ಎಂಬವರನ್ನು ನೇಮಕ ಮಾಡಲಾಗಿತ್ತು. ರಾಮನಗರ ಜಿಲ್ಲಾ ಮುಜರಾಯಿ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯೇಸುರಾಜ್ ಅವರನ್ನು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಎಇಓ ಆಗಿ ನೇಮಕ ಮಾಡಿರುವುದು ಚರ್ಚೆಗೂ ಕಾರಣವಾಗಿತ್ತು.


ಯೇಸುರಾಜ್ ಎನ್ನುವ ಹೆಸರಿನ ಕಾರಣಕ್ಕೆ ಅನ್ಯ ಧರ್ಮದವರನ್ನು ಹಿಂದುಗಳ ದೇವಸ್ಥಾನಕ್ಕೆ ನೇಮಕ ಮಾಡಿದ್ದಾರೆಂದು ಹಿಂದು ಸಂಘಟನೆಗಳ ನಾಯಕರು ಆಕ್ಷೇಪಿಸಿದ್ದರು. ಅವರ ಧರ್ಮದ ಹಿನ್ನೆಲೆಯ ಬಗ್ಗೆ ಪ್ರಶ್ನೆಯನ್ನೂ ಮಾಡಿದ್ದರು. ಈ ವಿಚಾರ ಆಕ್ಷೇಪಕ್ಕೆ ಗುರಿಯಾದ ಬೆನ್ನಲ್ಲೇ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟನೆ ನೀಡಿದ್ದು, ಯೇಸುರಾಜ್ ಅವರ ಹಿನ್ನೆಲೆ, ಗೋತ್ರಗಳ ದಾಖಲೆಯನ್ನು ಟ್ವಿಟರ್ ನಲ್ಲಿ ಬಿಡುಗಡೆ ಮಾಡಿದ್ದಾರೆ.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ: ಯದುವೀರಗೆ ಬಿಜೆಪಿ ಗಾಳ

Posted by Vidyamaana on 2024-03-10 04:47:04 |

Share: | | | | |


ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ: ಯದುವೀರಗೆ ಬಿಜೆಪಿ ಗಾಳ

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರನ್ನು ಕಣಿಕ್ಕಿಳಿಸುವ ಬಗ್ಗೆ ಬಿಜೆಪಿ ಯೋಜಿಸಿದ್ದು, ಅವರೊಂದಿಗೆ ಮಾತುಕತೆ ಕೂಡ ನಡೆಸಿದೆ. ಈ ಬೆಳವಣಿಗೆಯಿಂದ ಪ್ರತಾಪ ಸಿಂಹ ಅವರಿಗೆ ಟಿಕೆಟ್‌ ಕೈತಪ್ಪುವ ಭೀತಿ ಎದುರಾಗಿದೆ ಎಂದು ತಿಳಿದುಬಂದಿದೆ.ಈಗಾಗಲೇ ಹಾಲಿ ಸಂಸದ ಪ್ರತಾಪ ಸಿಂಹ ಅವರೊಂದಿಗೆ ಯದುವೀರರ ಹೆಸರನ್ನೂ ಶಿಫಾರಸು ಮಾಡಲಾಗಿದೆ ಎಂದೂ ತಿಳಿದುಬಂದಿದೆ.

ಯದುವೀರರವರವತಾಯಿ ಪ್ರಮೋದಾದೇವಿ ಒಡೆಯರ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಸಮ್ಮತಿಸಿದರೆ, ಅವರಿಗೇ ಟಿಕೆಟ್‌ ನೀಡಲು ಮುಖಂಡರು ಚಿಂತನೆ ನಡೆಸಿದ್ದು,. ಪ್ರತಾಪ ಸಿಂಹ ಅವರಿಗೆ ಟಿಕೆಟ್‌ ಕೈತಪ್ಪುವ ತಳಮಳ ಎದುರಾಗಿದೆ.ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರ‍ಪ್ಪ ಮತ್ತು ಆರ್‌ಎಸ್‌ಎಸ್‌ ನಾಯಕರು ಯದುವೀರರ ಹೆಸರನ್ನು ಪ್ರಸ್ತಾಪಿಸಿದ್ದಾರೆ. ಮೈಸೂರು ರಾಜವಂಶಸ್ಥರ ಕೊಡುಗೆಗಳನ್ನು ಜನ ಗೌರವದಿಂದ ಸ್ಮರಿಸುತ್ತಾರೆ. ಅದನ್ನು ರಾಜಕೀಯ ಲಾಭವನ್ನಾಗಿಸಿಕೊಳ್ಳುವುದು ಬಿಜೆಪಿ ನಾಯಕರ ಯೋಚನೆತಾಗಿದೆ. ಯದುವೀರ ಸ್ಪರ್ಧಿಸಿದರೆ ಮೈಸೂರು-ಕೊಡಗು ಕ್ಷೇತ್ರದೊಂದಿಗೆ ಚಾಮರಾಜನಗರ, ಮಂಡ್ಯ ಹಾಗೂ ಹಾಸನದಲ್ಲೂ ಪಕ್ಷಕ್ಕೆ ಅನುಕೂಲವಾಗಬಹುದೆಂಬುದು ಲೆಕ್ಕಾಚಾರ ಮಾಡಲಾಗಿದೆ. ಯಡಿಯೂರಪ್ಪ ಹೈಕಮಾಂಡ್‌ ಮಟ್ಟದಲ್ಲೂ ಇದನ್ನು ಮನವರಿಕೆ ಮಾಡಿಕೊಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ

ಕೇರಳದಲ್ಲಿ ಕೋವಿಡ್ ಸಬ್‌ವೇರಿಯಂಟ್ JN.1 ಪ್ರಕರಣ ಪತ್ತೆ: ಕರ್ನಾಟಕದಲ್ಲೂ ಹೆಚ್ಚಿದ ಆತಂಕ

Posted by Vidyamaana on 2023-12-16 15:11:46 |

Share: | | | | |


ಕೇರಳದಲ್ಲಿ ಕೋವಿಡ್ ಸಬ್‌ವೇರಿಯಂಟ್ JN.1 ಪ್ರಕರಣ ಪತ್ತೆ: ಕರ್ನಾಟಕದಲ್ಲೂ ಹೆಚ್ಚಿದ ಆತಂಕ

ತಿರುವನಂತಪುರಂ: ಕೋವಿಡ್ ಸಬ್‌ವೇರಿಯಂಟ್ ಜೆಎನ್.1, BA.2.86 ನ ತಳಿ ಕೇರಳದ ಕೆಲವು ಭಾಗಗಳಲ್ಲಿ ಪತ್ತೆಯಾಗಿದ್ದು, ಅದರ ಪರಿಣಾಮದ ಬಗ್ಗೆ ಕಳವಳವನ್ನು ಉಂಟುಮಾಡುತ್ತದೆ. ಹೀಗಾಗಿ ಕರ್ನಾಟಕದಲ್ಲೂ ಕೋವಿಡ್ ಹೆಚ್ಚಳದ ಆತಂಕ ಶುರುವಾಗಿದೆ.ಇಂಡಿಯಾ SARS-CoV-2 ಜೀನೋಮಿಕ್ಸ್ ಕನ್ಸೋರ್ಟಿಯಂ (INSACOG), ಇದು ಬಹು-ಪ್ರಯೋಗಾಲಯ, ಬಹು-ಏಜೆನ್ಸಿ, ಪ್ಯಾನ್-ಇಂಡಿಯಾ ನೆಟ್‌ವರ್ಕ್ ಆಗಿದ್ದು, ಹೊಸ ಬೆದರಿಕೆಯ ಕೋವಿಡ್ -19 ರೂಪಾಂತರಗಳನ್ನು ಅನುಕ್ರಮ ಮತ್ತು ಗಮನದಲ್ಲಿರಿಸುವ ಕಾರ್ಯವನ್ನು ಹೊಂದಿದೆ, ಅಲ್ಲಿ JN.1 ರಂದು ಕಣ್ಗಾವಲು ಮಾಡಿದೆ.ಇದು ಕೇರಳದಲ್ಲಿ ಕಂಡುಬಂದಿದೆ.


INSACOG ಮುಖ್ಯಸ್ಥ ಎನ್‌ಕೆ. ಅರೋರಾ, "ಈ ರೂಪಾಂತರವನ್ನು ಪ್ರತ್ಯೇಕಿಸಲಾಗಿದೆ ಮತ್ತು ನವೆಂಬರ್‌ನಲ್ಲಿ ವರದಿ ಮಾಡಲಾಗಿದೆ; ಇದು BA.2.86 ರ ಉಪರೂಪವಾಗಿದೆ.ನಾವು JN.1 ರ ಕೆಲವು ಪ್ರಕರಣಗಳನ್ನು ನೋಡಿದ್ದೇವೆ".


"ಭಾರತವು ಜಾಗರೂಕತೆಯಿಂದ ಇದೆ ಮತ್ತು ಇದುವರೆಗೆ ಯಾವುದೇ ಆಸ್ಪತ್ರೆಗೆ ದಾಖಲು ಅಥವಾ ತೀವ್ರವಾದ ಕಾಯಿಲೆಗಳು ವರದಿಯಾಗಿಲ್ಲ" ಎಂದು ಅವರು ಹೇಳಿದರು.


JN.1 ಅನ್ನು ಮೊದಲು ಯುನೈಟೆಡ್ ಸ್ಟೇಟ್ಸ್‌ನಲ್ಲಿ ಸೆಪ್ಟೆಂಬರ್ 2023 ರಲ್ಲಿ ಪತ್ತೆ ಮಾಡಲಾಯಿತು.


ರಾಷ್ಟ್ರೀಯ ಭಾರತೀಯ ವೈದ್ಯಕೀಯ ಸಂಘದ ಕೋವಿಡ್ ಕಾರ್ಯಪಡೆಯ ಸಹ-ಅಧ್ಯಕ್ಷ ರಾಜೀವ್ ಜಯದೇವನ್ ಪ್ರಕಾರ, "ಏಳು ತಿಂಗಳ ಅಂತರದ ನಂತರ, ಭಾರತದಲ್ಲಿ ಪ್ರಕರಣಗಳು ಹೆಚ್ಚುತ್ತಿವೆ. ಕೇರಳದಲ್ಲಿ ಕೋವಿಡ್ ವರದಿಗಳಿವೆ, ಆದರೆ ಇದುವರೆಗಿನ ತೀವ್ರತೆ ಮೊದಲಿನಂತೆಯೇ ಇದೆ."


"ಜೀನೋಮ್ ಸೀಕ್ವೆನ್ಸಿಂಗ್ ಪ್ರತಿ ಪ್ರದೇಶದಲ್ಲಿ ಯಾವ ರೀತಿಯ ವೈರಸ್ ಪರಿಚಲನೆಯಾಗುತ್ತದೆ ಎಂಬುದನ್ನು ಗುರುತಿಸುತ್ತದೆ. ಉದಾಹರಣೆಗೆ, ಭಾರತದಲ್ಲಿ, ಏಪ್ರಿಲ್ 2023 ರ ಅಲೆಯ ಸಮಯದಲ್ಲಿ, XBB ಉಪವರ್ಗಗಳು ಇದಕ್ಕೆ ಕಾರಣವೆಂದು ಕಂಡುಬಂದಿದೆ. ಆದಾಗ್ಯೂ, ಡಿಸೆಂಬರ್ ಜೀನೋಮ್ ಸೀಕ್ವೆನ್ಸಿಂಗ್ ಫಲಿತಾಂಶಗಳು ಇನ್ನೂ ಬರುತ್ತಿವೆ ಮತ್ತು ಆರಂಭಿಕ ಫಲಿತಾಂಶಗಳು ಕೇರಳದಲ್ಲಿ JN.1 ಪ್ರಕರಣವು ಕಂಡುಬಂದಿದೆ ಎಂದು ತೋರಿಸುತ್ತದೆ, "ಎಂದು ಅವರು ಹೇಳಿದರು.


ಜೆಎನ್.1 ರೂಪಾಂತರವು ವೇಗವಾಗಿ ಹರಡಲು ಮತ್ತು ರೋಗನಿರೋಧಕ ಶಕ್ತಿಯನ್ನು ತಪ್ಪಿಸುವ ಸಾಮರ್ಥ್ಯವನ್ನು ಹೊಂದಿದೆ ಎಂದು ಜಯದೇವನ್ ಹೇಳಿದರು.

Recent News


Leave a Comment: