ಶಿರೂರು ಭೂಕುಸಿತ ದುರಂತ : ಪತ್ತೆಯಾಯ್ತು ಎಂಟನೇ ಮೃತದೇಹ

ಸುದ್ದಿಗಳು News

Posted by vidyamaana on 2024-07-23 18:35:28 |

Share: | | | | |


ಶಿರೂರು ಭೂಕುಸಿತ ದುರಂತ : ಪತ್ತೆಯಾಯ್ತು ಎಂಟನೇ ಮೃತದೇಹ

ಕಾರವಾರ: ಶಿರೂರು ಭೂಕುಸಿತ ಸ್ಥಳದಲ್ಲಿ 8 ದಿವಸದ ಬಳಿಕ ಮತ್ತೊಂದು ಮೃತದೇಹ ಪತ್ತೆಯಾಗಿದೆ. ಈ ಮೂಲಕ 8ನೇ ಮೃತದೇಹ ಸಿಕ್ಕಂತಾಗಿದೆ. ಈ ನಡುವೆ ಕೇರಳದ ಲಾರಿ ಚಾಲಕ ಅರ್ಜುನ್‌ ಅವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. 

ಮಂಗಳವಾರ ಬೆಳಗ್ಗೆ ಗುಡ್ಡ ಕುಸಿತದಿಂದ ನಾಪತ್ತೆಯಾಗಿದ್ದ ಮಹಿಳೆ ಸಣ್ಣಿ ಹನ್ಮಂತ ಗೌಡ (57) ಸಾವನ್ನಪ್ಪಿದ್ದು, ಮೃತದೇಹ ದೊರೆತಿದೆ. ಗಂಗಾವಳಿ ನದಿಯ ಗಂಗೆಕೊಳ್ಳ ಸಮೀಪ ಅವರ ಶವ ಪತ್ತೆಯಾಗಿದೆ. ಶಿರೂರು ಗುಡ್ಡ ಕುಸಿತದಿಂದಾಗಿ ಉಳುವರೆ ಗ್ರಾಮದಲ್ಲಿ ಮನೆ ಕುಸಿತವಾಗಿ ಸಣ್ಣಿ ಹನ್ಮಂತ ಗೌಡ ಅವರು ಕಣ್ಮರೆಯಾಗಿದ್ದರು. ಇನ್ನೂ ಅರ್ಜುನ್‌ ಸಹಿತ ಮೂವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಸ್ಥಳದಲ್ಲಿ NDRF, SDRF, ಮಿಲಿಟರಿ ಕಾರ್ಯಪಡೆಯಿಂದ ಶೋಧ ಕಾರ್ಯ ಮುಂದುವರೆದಿದೆ. 

ಕೇರಳ ಮಾಧ್ಯಮಗಳ ಕವರೇಜ್‌ 

ಸದ್ಯ ಕರ್ನಾಟಕದ ಉತ್ತರ ಕನ್ನಡದಲ್ಲಾದ ಭೂಕುಸಿತ ವರದಿಯನ್ನ ಕನ್ನಡಿಗರು ಕೂಡಾ ಮಲಯಾಳಂ ಸುದ್ದಿವಾಹಿನಿಗಳಲ್ಲಿ ವೀಕ್ಷಿಸುವಂತಾಗಿದೆ. ಕೇರಳದ ಪ್ರಮುಖ ರಾಜ್ಯ ಮಟ್ಟದ ವಾಹಿನಿಗಳು ಕಳೆದ 4 ದಿನಗಳಿಂದಲೂ ಉತ್ತರ ಕನ್ನಡದಲ್ಲಿ ಬೀಡುಬಿಟ್ಟಿವೆ. ಅರ್ಜುನ್‌ ಶೋಧ ಕಾರ್ಯಾಚರಣೆಗೆ ಹೆಚ್ಚಿನ ಒತ್ತಡ ಏರುತ್ತಿದೆ. ಜೊತೆಗೆ ಕೇರಳದ ನಾಗರಿಕ ಸುರಕ್ಷತಾ ತಂಡಗಳು ಕೂಡಾ ಕಾರ್ಯಾಚರಣೆ ನಡೆಸುವ ನಿಟ್ಟಿನಲ್ಲಿ ಕೇರಳದಿಂದ ಶಿರೂರಿಗೆ ತಂಡವಾಗಿ ಆಗಮಿಸಿವೆ

 Share: | | | | |


ಮಾಜಿ ಸಿಎಂ H.D ಕುಮಾರಸ್ವಾಮಿ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆ ಗೆ ದಾಖಲು

Posted by Vidyamaana on 2024-02-29 04:26:07 |

Share: | | | | |


ಮಾಜಿ ಸಿಎಂ H.D ಕುಮಾರಸ್ವಾಮಿ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆ ಗೆ ದಾಖಲು

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವಿಧಾನಸಭಾ ಕಲಾಪದಲ್ಲೂ ಭಾಗವಹಿಸಲು ಸಾಧ್ಯವಾಗದೆ ಅವರು ಇಂದು ಜಯನಗರದ ಅಫೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ.ವಿಧಾನಸಭಾ ಕಲಾಪದಲ್ಲಿ ಪಾಲ್ಗೊಳ್ಳಲು ಅವರು ಇಂದು ನೇರವಾಗಿ ವಿಧಾನಸೌಧಕ್ಕೆ ಆಗಮಿಸಿದ್ದರು ಈ ವೇಳೆ ಅವರಿಗೆ ಗಂಟಲು ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರು ತಕ್ಷಣ ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.


ರಾಜ್ಯಸಭಾ ಚುನಾವಣೆ ಮುಕ್ತಾಯದ ಹಿನ್ನೆಲೆಯಲ್ಲಿ ಮುಂದೂಡಿಕೆ ಮಾಡಲಾಗಿದ್ದ ವಿಧಾನಸಭಾ ಅಧಿವೇಶನದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಗಂಟಲು ನೋವು ಕಾಣಿಸಿಕೊಂಡಿದೆ. ಇದಕ್ಕೂ ಮುನ್ನ ಕಳೆದೊಂದು ವಾರದಿಂದ ಕುಮಾರಸ್ವಾಮಿ ಅವರು ಗಂಟಲು ಇನ್ಫೆಕ್ಷನ್‌ನಿಂದ ಬಳಲುತ್ತಿದ್ದರು. ಇನ್ನು ವಿಧಾನಸಭಾ ಕಲಾಪದಲ್ಲಿ ಪಾಲ್ಗೊಂಡು ಮಾತನಾಡಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಜಯನಗರ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮನೆಯಲ್ಲಿ ಇರುವೆಗಳ ಸಮಸ್ಯೆ ಕಾಡುತ್ತಿದೆಯೇ

Posted by Vidyamaana on 2023-05-22 10:40:02 |

Share: | | | | |


ಮನೆಯಲ್ಲಿ ಇರುವೆಗಳ ಸಮಸ್ಯೆ ಕಾಡುತ್ತಿದೆಯೇ

    ಅನೇಕ ಮನೆಗಳಲ್ಲಿ, ಅಡುಗೆಮನೆ ಅಥವಾ ಆಹಾರವನ್ನು ಸಂಗ್ರಹಿಸುವ ಪ್ರದೇಶವು ಸೋಂಕಿತ ಪ್ರದೇಶವಾಗಿರುತ್ತದೆ. ಈ ಇರುವೆಗಳ ಹಿಡಿತದಿಂದ ಪಾರಾಗಲು  ಹಲವು ರೀತಿಯ ಸ್ಪ್ರೇಗಳನ್ನು ಬಳಸಲಾಗುತ್ತದೆ. ಆದರೆ ಯಾವುದೇ ಫಲಿತಾಂಶವಿಲ್ಲದೆ ಗೃಹಿಣಿಯರು ಹತಾಶರಾಗುತ್ತಾರೆ. ಅಂತಹವರಿಗಾಗಿ ಇರುವೆಗಳ ಹಿಡಿತದಿಂದ ಪಾರಾಗಲು ಬೆಸ್ಟ್ ಟಿಪ್ಸ್ ತಂದಿದ್ದೇವೆ. ಈ ಟಿಪ್ಸ್ ಪ್ರಕಾರ ಯಾವುದೇ ಕೆಮಿಕಲ್  ಬಳಸಬೇಕಿಲ್ಲ.. ಅಡುಗೆ ಮನೆಯ ಸಾಮಾಗ್ರಿಗಳನ್ನು ಸಮಂಜಸವಾಗಿ ಬಳಸಿದರೆ ಸಾಕು ಕರಿಮೆಣಸು ಇರುವೆಗಳನ್ನು ಹಿಮ್ಮೆಟ್ಟಿಸಲು ಉತ್ತಮವಾಗಿ ಸಹಾಯ ಮಾಡುತ್ತದೆ. ಹೌದು, ಕಾಳುಮೆಣಸಿನ ಕಾಟಕ್ಕೆ ಇರುವೆಗಳು ಓಡಿಹೋಗುವುದು ಖಚಿತ. ಅದಕ್ಕಾಗಿ ಅಡುಗೆ ಮನೆಯಲ್ಲಿ ಇರುವೆ ಸ್ಪ್ರೇ ಬದಲು ಅಲ್ಲೊಂದು ಇಲ್ಲೊಂದು ಕಾಳುಮೆಣಸನ್ನು ಹಾಕಿದರೆ ಪರವಾಗಿಲ್ಲ.

ಇರುವೆಗಳನ್ನು ತೊಡೆದುಹಾಕಲು, ಒಂದು ಬಾಟಲಿಯಲ್ಲಿ ಎರಡು ಕಪ್ ನೀರಿನಲ್ಲಿ ಸ್ವಲ್ಪ ಪುದೀನಾ ಎಣ್ಣೆಯನ್ನು ಸೇರಿಸಿ ಮತ್ತು ಇರುವೆ ಇರುವಲ್ಲಿ ಸಿಂಪಡಿಸಿ. ಸಿಂಪಡಿಸುವಾಗ ಸಾಕುಪ್ರಾಣಿಗಳನ್ನು ಅವುಗಳಿಂದ ದೂರವಿರಿಸಲು ಮರೆಯಬೇಡಿಹಾಗೆಯೇ ಎರಡು ಲೋಟ ನೀರಿನಲ್ಲಿ ಟ್ರೀ ಆಯಿಲ್ ಸೇರಿಸಿ ಚಿಮುಕಿಸಿ, ಈ ನೀರಿನಲ್ಲಿ ಹತ್ತಿ ಉಂಡೆಗಳನ್ನು ಅದ್ದಿ ಅಡುಗೆ ಮನೆಯಲ್ಲಿಟ್ಟರೆ ಒಳ್ಳೆಯ ಫಲಿತಾಂಶ ಸಿಗುತ್ತದೆ.

ದಾಲ್ಚಿನ್ನಿ ಇರುವೆಗಳನ್ನು ತೊಡೆದುಹಾಕಲು ಸಹ ಸಹಾಯ ಮಾಡುತ್ತದೆ. ಹತ್ತಿಯ ಉಂಡೆಗಳನ್ನು ದಾಲ್ಚಿನ್ನಿ ಎಣ್ಣೆಯಲ್ಲಿ ಅದ್ದಿ ಇರುವೆಗಳು ಓಡಾಡುವ ಸ್ಥಳಗಳಲ್ಲಿ ಇಟ್ಟರೆ ಅವು ಬರದಂತೆ ತಡೆಯುತ್ತವೆ.

ಬಿಳಿ ವಿನೆಗರ್ ಅನ್ನು ಇರುವೆಗಳಿರುವಲ್ಲಿ ಸಿಂಪಡಿಸಬಹುದು ಮತ್ತು ಉತ್ತಮ ಫಲಿತಾಂಶವನ್ನು ಕಾಣಬಹುದು.

ಹಾಗೆಯೇ ಎರಡು ಲೋಟ ನೀರಿಗೆ ಬೇವಿನ ಎಣ್ಣೆ ಹಾಕಿ ಬಾಟಲಿಯಲ್ಲಿ ಸ್ಪ್ರೇ ಮಾಡಿದರೆ ಇರುವೆಗಳು ನಿಮ್ಮ ಬರುವುದಿಲ್ಲ.

ಪತ್ರಕರ್ತನ ಮೊಬೈಲ್ ಒಡೆದು ಹಾಕಿದ ಪ್ರಕರಣ ಸುಖಾಂತ್ಯ

Posted by Vidyamaana on 2023-07-20 02:17:28 |

Share: | | | | |


ಪತ್ರಕರ್ತನ ಮೊಬೈಲ್ ಒಡೆದು ಹಾಕಿದ ಪ್ರಕರಣ ಸುಖಾಂತ್ಯ

ಪುತ್ತೂರು: ಪತ್ರಕರ್ತ ನಿಶಾಂತ್ ಬಿಲ್ಲಂಪದವು ಅವರ ಮೊಬೈಲ್ ಒಡೆದು ಹಾಕಿರುವ ಪ್ರಕರಣ ಇದೀಗ ಸುಖಾಂತ್ಯ ಕಂಡಿದೆ ಎಂದು ತಿಳಿದುಬಂದಿದೆ.

ಬಪ್ಪಳಿಗೆ ಎಂಬಲ್ಲಿ ಚಿತ್ರೀಕರಣ ನಡೆಸುತ್ತಿದ್ದ ವೇಳೆ ಮೊಬೈಲ್ ಕಸಿದು‌ ಹಾನಿಗೊಳಿಸಲಾಗಿದೆ ಎಂದು ನಿಶಾಂತ್ ಆರೋಪಿಸಿದ್ದರು. ಇದನ್ನು ಪತ್ರಕರ್ತರ ಸಂಘಗಳು ಖಂಡಿಸಿ, ಸೂಕ್ತ ತನಿಖೆ ನಡೆಸಲು ಆಗ್ರಹಿಸಿದ್ದವು. ಇದೀಗ ಬಂದ ಮಾಹಿತಿಯಂತೆ, ಮೊಬೈಲ್ ಒಡೆದು‌ ಹಾಕಿದವರು‌ ಹೊಸ ಮೊಬೈಲನ್ನು ನಿಶಾಂತ್ ಅವರಿಗೆ ನೀಡಿದ್ದಾರೆ ಎನ್ನಲಾಗಿದೆ. ಈ‌ ಹಿನ್ನೆಲೆಯಲ್ಲಿ ಪ್ರಕರಣವನ್ನು ಸುಖಾಂತ್ಯಗೊಳಿಸಲಾಗಿದೆ ಎಂದು‌ ತಿಳಿದುಬಂದಿದೆ.

ಎ.16 ಕ್ಕೆ ಪುತ್ತೂರಿಗೆ ಸಿ ಎಂ, ಡಿಸಿಎಂ - ರೋಡ್ ಶೋ: ಕಾರ್ಯಕ್ರಮದ ಪೂರ್ವಭಾವಿ ಸಭೆ

Posted by Vidyamaana on 2024-04-13 07:27:10 |

Share: | | | | |


ಎ.16 ಕ್ಕೆ ಪುತ್ತೂರಿಗೆ ಸಿ ಎಂ, ಡಿಸಿಎಂ - ರೋಡ್ ಶೋ: ಕಾರ್ಯಕ್ರಮದ ಪೂರ್ವಭಾವಿ ಸಭೆ

ಪುತ್ತೂರು: ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಲು ಸಿಎಂ ಸಿದ್ದರಾಮಯ್ಯ  ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ರವರು ಪುತ್ತೂರಿಗೆ ಆಗಮಿಸಲಿದ್ದು ಕಿಲ್ಲೆ ಮೈದಾನದಲ್ಲಿ ಬೃಹತ್ ಚುನಾವಣಾ ಪ್ರಚಾರ ಸಭೆ ನಡೆಯಲಿದೆ ಎಂದು ಶಾಸಕರಾದ ಅಶೋಕ್ ರೈ ತಿಳಿಸಿದರು.

ಮಧ್ಯಾಹ್ನ 3 ಗಂಟೆಗೆ ಮೊಟ್ಟೆತ್ತಡ್ಕ ಹೆಲಿಪ್ಯಾಡ್ ನಲ್ಲಿ ಬಂದಿಳಿಯಲಿದ್ದು ಆ ಬಳಿಕ ಕಿಲ್ಲೆ ಮೈದಾನದಲ್ಲಿ ಸಮಾವೇಶದಲ್ಲಿ‌ಭಾಗವಹಿಸಲಿದ್ದು ಸಂಜೆ 5 ಗಂಟೆಗೆ ನಿರ್ಗಮಿಸಲಿದ್ದಾರೆ.

ಕಾರ್ಯಕ್ರಮದಲ್ಲಿ 15 ಸಾವಿರಕ್ಕೂ‌ಮಿಕ್ಕಿ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಜಿಲ್ಲಾ ಮಟ್ಟದ ಸಮಾವೇಶವನ್ನು ಪುತ್ತೂರಿನಲ್ಲಿ ಆಯೋಜನೆ ಮಾಡಲಾಗಿದೆ. ಕಾರ್ಯಕ್ರಮಕ್ಕೆ ಬೇಕಾದ ಎಲ್ಲಾ ಸಿದ್ದತೆಗಳನ್ನು ನಡೆಸಲಾಗುತ್ತಿದೆ ಎಂದು ಹೇಳಿದರು.

ಮಂಗಳೂರು : ಕಾಮಗಾರಿಯ ವರದಿ ನೀಡಲು ಗುತ್ತಿಗೆದಾರನಿಂದ ಲಂಚಕ್ಕೆ ಬೇಡಿಕೆ

Posted by Vidyamaana on 2023-10-18 16:43:20 |

Share: | | | | |


ಮಂಗಳೂರು : ಕಾಮಗಾರಿಯ ವರದಿ ನೀಡಲು ಗುತ್ತಿಗೆದಾರನಿಂದ ಲಂಚಕ್ಕೆ ಬೇಡಿಕೆ

ಮಂಗಳೂರು, ಅ.18: ರಸ್ತೆ ಕಾಮಗಾರಿ ಗುಣಮಟ್ಟ ಪರಿಶೀಲಿಸಿ ವರದಿ ನೀಡುವುದಕ್ಕಾಗಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಲೋಕೋಪಯೋಗಿ ಇಲಾಖೆಯ ಕಿರಿಯ ಇಂಜಿನಿಯರ್ ಒಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 


ಮಂಗಳೂರಿನ ಬೋಂದೆಲ್ ನಲ್ಲಿರುವ ಪಿಡಬ್ಲ್ಯುಡಿ ಇಲಾಖೆಯ ಕಚೇರಿಗೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಗುಣಮಟ್ಟ ಭರವಸೆ ವಿಭಾಗದ ಸಹಾಯಕ ಇಂಜಿನಿಯರ್ ರೊನಾಲ್ಡ್ ಲೋಬೋ ಅವರನ್ನು ಬಂಧಿಸಿದ್ದಾರೆ. 20 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗಲೇ ಇಂಜಿನಿಯರ್ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. 


ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮದ ಪರಿಶಿಷ್ಟ ಜಾತಿ ಕಾಲನಿಯ ಎಎನ್ಎಂ ರಸ್ತೆ ಕಾಮಗಾರಿ (25 ಲಕ್ಷ) ಹಾಗೂ ಕರಿಮಣೇಲು ಗ್ರಾಮದ ಕೈರೋಳಿ ಎಂಬಲ್ಲಿನ ಪರಿಶಿಷ್ಟ ಜಾತಿ ಕಾಲನಿಯ ರಸ್ತೆ ಕಾಮಗಾರಿ (20 ಲಕ್ಷ) ನಡೆದು, ಬಿಲ್ ಪಾವತಿಯಾಗುವುದಕ್ಕೆ ಮೊದಲು ಕ್ವಾಲಿಟಿ ಚೆಕ್ಕಿಂಗ್ ರಿಪೋರ್ಟ್ ಕೊಡಬೇಕಾಗಿತ್ತು. ಗುತ್ತಿಗೆ ಕಾಮಗಾರಿ ನಿರ್ವಹಿಸಿದ್ದ ಪ್ರಭಾಕರ ನಾಯ್ಕ್ ಕ್ವಾಲಿಟಿ ಚೆಕ್ಕಿಂಗ್ ವರದಿ ಪಡೆಯಲೆಂದು ಮಂಗಳೂರಿನ ಎಇ ರೊನಾಲ್ಡ್ ಲೋಬೋ ಅವರಲ್ಲಿ ಬಂದಾಗ, 22 ಸಾವಿರ ರು. ಲಂಚದ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಗುತ್ತಿಗೆದಾರ ಲೋಕಾಯುಕ್ತ ಗಮನಕ್ಕೆ ತಂದಿದ್ದು ಅಧಿಕಾರಿಗಳ ಸೂಚನೆಯಂತೆ ಟ್ರಾಪ್ ಮಾಡಿದ್ದಾರೆ. 20 ಸಾವಿರ ರೂ. ಹಣ ನೀಡುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ. ಲೋಕಾಯುಕ್ತ ಎಸ್ಪಿ ಸೈಮನ್ ಹಾಗು ಡಿವೈಎಸ್ಪಿ ಚೆಲುವರಾಜು ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು

ತಿಂಗಳೊಳಗೆ ಬಸ್‌ಗಳಿಗೆ ಬಾಗಿಲು ಅಳವಡಿಸಲು ದ.ಕ. ಜಿಲ್ಲಾಧಿಕಾರಿ ಸೂಚನೆ

Posted by Vidyamaana on 2024-02-29 15:25:20 |

Share: | | | | |


ತಿಂಗಳೊಳಗೆ ಬಸ್‌ಗಳಿಗೆ ಬಾಗಿಲು ಅಳವಡಿಸಲು ದ.ಕ. ಜಿಲ್ಲಾಧಿಕಾರಿ ಸೂಚನೆ

ಮಂಗಳೂರು : ದ.ಕ. ಜಿಲ್ಲೆಯ ವಿವಿಧ ರೂಟ್‌ಗಳಲ್ಲಿ ಚಲಿಸುವ ಎಲ್ಲಾ ಸಾರ್ವಜನಿಕ ಬಸ್‌ಗಳಲ್ಲಿ ಒಂದು ತಿಂಗಳೊಳಗೆ ಬಾಗಿಲನ್ನು ಅಳವಡಿಸಿ ಅಫಿದಾವಿತ್ ಸಲ್ಲಿಸಲು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.ದ.ಕ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.2017ರಿಂದ ನೋಂದಣಿಯಾಗುವ ಎಲ್ಲಾ ಬಸ್ಸುಗಳು ಕಡ್ಡಾಯವಾಗಿ ಬಾಗಿಲನ್ನು ಹೊಂದಿರಬೇಕು ಎಂದು ಕಾನೂನಿನಲ್ಲಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಬಸ್ಸುಗಳು ಇದನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಮುಂದಿನ ಒಂದು ತಿಂಗಳೊಳಗೆ ಇದನ್ನು ಕಟ್ಟುನಿಟ್ಟಾಗಿ ಜಾರಿಗೆ ತಂದು ಬಸ್ ಮಾಲಕರು ಅಫಿದಾವಿತ್ ಸಲ್ಲಿಸಬೇಕು ಎಂದು ಡಿಸಿ ಆರ್‌ಟಿಒಗೆ ನಿರ್ದೇಶನ ನೀಡಿದರು. 


ಸಾರ್ವಜನಿಕರ ಜೀವರಕ್ಷಣೆಯ ವಿಷಯದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಲಾಗದು. ಇದರಲ್ಲಿ ನಿರ್ಲಕ್ಷ್ಯವನ್ನು ಸಹಿಸುವ ಪ್ರಶ್ನೆಯೇ ಇಲ್ಲ. ಬಸ್‌ಗಳಲ್ಲಿ ಬಾಗಿಲನ್ನು ಅಳವಡಿಸಬೇಕೆಂದು ಸಾರ್ವಜನಿಕರಿಂದಲೂ ತೀವ್ರ ಒತ್ತಡ ಬರುತ್ತಿವೆೆ. ಜನಸಂಪರ್ಕ ಸಭೆಗಳಲ್ಲಿಯೂ ಮನವಿಗಳು ಬಂದಿವೆ. ಕೇರಳ, ತಮಿಳುನಾಡು, ಆಂಧ್ರಪ್ರದೇಶ ಮತ್ತಿತರ ರಾಜ್ಯಗಳಲ್ಲೂ ಬಸ್‌ಗಳಲ್ಲಿ ಬಾಗಿಲು ಅಳವಡಿಸಿ ಸಂಚರಿಸುತ್ತಿವೆ. ಬೆಂಗಳೂರಿನಲ್ಲಿಯೂ ಸಿಟಿ ಬಸ್‌ಗಳಲ್ಲಿ ಬಾಗಿಲು ಇರುವುದರಿಂದ ಸಾರ್ವಜನಿಕರ ಸಂಚಾರನಿರಾತಂಕವಾಗಿದೆ. ಇದರಿಂದ ಸಂಚಾರ ವ್ಯವಸ್ಥೆಯೂ ಸುಗಮವಾಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿಯೂ ಜಾರಿಗೆ ತರುವುದು ಅನಿವಾರ್ಯವಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು. 

ಫ್ಲೈಓವರ್ ಕತ್ತಲು: ಹೆದ್ದಾರಿ ಪ್ರಾಧಿಕಾರಕ್ಕೆ ಸೂಚನೆ 

ರಾ.ಹೆ.ಯಲ್ಲಿ ಮಂಗಳೂರು ನಗರ ವ್ಯಾಪ್ತಿಯಲ್ಲಿ ಹಾದು ಹೋಗಿರುವ ಸುರತ್ಕಲ್, ಕೂಳೂರು, ಕೊಟ್ಟಾರ ಚೌಕಿ, ಕುಂಟಿಕಾನ, ಪಂಪ್‌ವೆಲ್ ಮೇಲ್ಸೇತುವೆಗಳಲ್ಲಿ ದಾರಿದೀಪದ ವ್ಯವಸ್ಥೆ ಇಲ್ಲದೆ ರಾತ್ರಿ ವೇಳೆ ಕತ್ತಲು ಆವರಿಸಿರುವ ಬಗ್ಗೆ ಜಿಲ್ಲಾಧಿಕಾರಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. 

ಕಳೆದ 10 ವರ್ಷಗಳಿಂದ ಈ ಸಮಸ್ಯೆ ಇದ್ದರೂ, ರಾ.ಹೆ. ಪ್ರಾಧಿಕಾರವು ಯಾವುದೇ ಕ್ರಮ ಕೈಗೊಂಡಿಲ್ಲ. ಈ ಬಗ್ಗೆ ಮಂಗಳೂರು ಮನಪಾದೊಂದಿಗೂ ಚರ್ಚಿಸಿಲ್ಲ. ಇದರಿಂದ ಹಲವಾರು ಅಪಘಾತಗಳು ಸಂಭವಿಸಿ, ಜೀವಹಾನಿಯಾಗಿರುವ ಘಟನೆಗಳು ನಡೆದಿವೆ.ಹೆದ್ದಾರಿಯ ಮೂಲ ಯೋಜನೆಯಲ್ಲಿಯೇ ಇದನ್ನು ಯಾಕೆ ಸೇರಿಸಿಲ್ಲ ಎಂಬುದರ ಬಗ್ಗೆ ವಿವರಣೆ ನೀಡುವಂತೆ ಜಿಲ್ಲಾಧಿಕಾರಿ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ನಿರ್ದೇಶಿಸಿದರು. 


ಜಿಲ್ಲೆಯ ಹಲವೆಡೆ ವಿವಿಧ ಕಾಮಗಾರಿಗಳಿಗಾಗಿ ಕೆಲವು ಏಜನ್ಸಿಗಳು ಅನುಮತಿ ಇಲ್ಲದೆ ಲೋಕೋಪಯೋಗಿ ರಸ್ತೆಗಳನ್ನು ಅಗೆದು, ಪೈಪ್, ಕೇಬಲ್ ಅಳವಡಿಸಿರುವ ಬಗ್ಗೆ ದೂರುಗಳು ಬಂದಿದೆ. ತಕ್ಷಣ ಅಂತಹವರಿಗೆ ನೊಟೀಸ್ ಜಾರಿ ಮಾಡಿ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಲೋಕೋಪಯೋಗಿ ಇಲಾಖೆಗೆ ಸೂಚಿಸಿದರು. 

ಸ್ಟೇಟ್‌ಬ್ಯಾಂಕ್ ವೃತ್ತ ಸಮಸ್ಯೆ 

ನಗರದ ಹೃದಯಭಾಗದ ಸ್ಟೇಟ್‌ಬ್ಯಾಂಕ್ ಬಳಿಯ ಹ್ಯಾಮಿಲ್ಟನ್ ವೃತ್ತವನ್ನು ಅವೈಜ್ಞಾನಿಕವಾಗಿ ನಿರ್ಮಿಸಲಾಗಿದ್ದು, ಸುಗಮ ಸಂಚಾರಕ್ಕೆ ತೀವ್ರ ಅಡಚಣೆಯಾಗುತ್ತಿದೆ. ವಾಹನ ಸವಾರರು ತೀವ್ರಗೊಂದಲಕ್ಕೀಡಾಗುತ್ತಿದ್ದಾರೆ ಎಂದು ಸಭೆಯಲ್ಲಿ ಉಪಸ್ಥಿತರಿದ್ದ ನಾಗರಿಕ ಸಂಘಟನೆಗಳ ಪ್ರತಿನಿಧಿಗಳು ತಿಳಿಸಿದರು. 


ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮಾತನಾಡಿ, ಡಿ.ಸಿ. ಕಚೇರಿಯ ಮುಂದಿನ ವೃತ್ತವೇ ಈ ರೀತಿ ಅನಿಶ್ಚಿತತೆ ಸ್ಥಿತಿಯಲ್ಲಿ ನಿಲ್ಲಿಸಿರುವುದು ಸರಿಯಲ್ಲ. ಈ ವೃತ್ತದ ಸುತ್ತಮುತ್ತಲಿನಲ್ಲಿ ಪಾರ್ಕಿಂಗ್, ಫ್ಲೆಕ್ಸ್, ಕಟೌಟ್ ಸಮಸ್ಯೆಯೂ ಇದೆ. ಯಾವುದೇ ಸ್ಮಾರ್ಟ್‌ಸಿಟಿ ಕಾಮಗಾರಿ ಸಂಪೂರ್ಣವಾಗಿ ಮುಕ್ತಾಯವಾಗಬೇಕು. ಕಾಮಗಾರಿ ಪೂರ್ಣಗೊಂಡ ಬಳಿಕ ಇನ್ನೊಂದು ಸಮಸ್ಯೆ ಸೃಷ್ಟಿಯಾಗಬಾರದು. ಈ ನಿಟ್ಟಿನಲ್ಲಿ ನಗರಪಾಲಿಕೆ, ನಗರ ಪೊಲೀಸ್ ಮತ್ತು ಸ್ಮಾರ್ಟ್‌ಸಿಟಿ ಅಧಿಕಾರಿಗಳು ಸಮನ್ವಯದಿಂದ ಸ್ಟೇಟ್ ಬ್ಯಾಂಕ್ ವೃತ್ತ ಸಂಚಾರ ಸಮಸ್ಯೆಯನ್ನು ಶೀಘ್ರದಲ್ಲೇ ಇತ್ಯರ್ಥ ಮಾಡಬೇಕು ಎಂದು ಸೂಚಿಸಿದರು. ನಗರದ ಲೇಡಿಹಿಲ್, ಕಂಕನಾಡಿ, ವೆಲೆನ್ಸಿಯಾ ಮತ್ತಿತರ ಕಡೆ ಸಂಜೆಯಾಗುತ್ತಿದ್ದಅತೆ ಹಳೆಯ ವಾಹನಗಳನ್ನು ರಸ್ತೆಯಲ್ಲಿಯೇ ನಿಲ್ಲಿಸಿ ಅದರಲ್ಲಿ ತಿಂಡಿ ತಿನಿಸು ಮಾರಾಟ ಮಾಡಲಾಗುತ್ತಿದೆ. ರಸ್ತೆ, ಫುಟ್‌ಪಾತ್ ಅತಿಕ್ರಮಿಸಿ ವ್ಯಾಪಾರ ಮಾಡಲಾಗುತ್ತಿದ್ದು, ಇಲ್ಲಿಗೆ ಬರುವ ಗ್ರಾಹಕರ ವಾಹನಗಳನ್ನು ರಸ್ತೆಯಲ್ಲಿಯೇ ನಿಲ್ಲಿಸಲಾಗುತ್ತಿದೆ. ಇದರಿಂದ ಸುಗಮ ಸಂಚಾರಕ್ಕೆ ಸಮಸ್ಯೆಯಾಗುತ್ತಿದೆ ಎಂದು ಸಭೆಯಲ್ಲಿ ದೂರು ವ್ಯಕ್ತವಾಯಿತು. ಈ ಬಗ್ಗೆ ತಪಾಸಣೆ ನಡೆಸಿ ಕ್ರಮಕೈಗೊಳ್ಳುವಂತೆ ಮಹಾನಗರಪಾಲಿಕೆ ಮತ್ತು ಪೊಲೀಸ್ ಅಧಿಕಾರಿಗಳಿಗೆ ಡಿಸಿ ಸೂಚಿಸಿದರು. 

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಉಪ ಪೊಲೀಸ್ ಆಯುಕ್ತ ದಿನೇಶ್ ಕುಮಾರ್, ಮಹಾನಗರಪಾಲಿಕೆ ಆಯುಕ್ತ ಆನಂದ್, ಆರ್‌ಟಿಒ ಶ್ರೀಧರ್ ಮಲ್ನಾಡ್, ಲೋಕೋಪಯೋಗಿ ಇಲಾಖೆಯ ಕಾರ್ಯಕಾರಿ ಇಂಜಿನಿಯರ್ ಅಮರನಾಥ್ ಜೈನ್ ಮತ್ತಿತರರು ಉಪಸ್ಥಿತರಿದ್ದರು.



Leave a Comment: