ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಸುದ್ದಿಗಳು News

Posted by vidyamaana on 2024-03-23 15:52:34 | Last Updated by Vidyamaana on 2024-03-23 15:52:34

Share: | | | | |


ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಕಾರಿನೊಳಗಿದ್ದ ಮೂವರು ಸಾವನ್ನಪ್ಪಿದ ಸಂಬಂಧಿಸಿದಂತೆ ಮೂವರು ಸೇರಿ 50 ಲಕ್ಷ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಕುಟುಂಬ ಸದಸ್ಯರು ಕೋರಾ ಪೊಲೀಸರ ವಿಚಾರಣೆ ವೇಳೆ ಮಾಹಿತಿ ನೀಡಿದ್ದಾರೆ.

*💥Whats App Group ಗೆ ಸೇರಲು ಕ್ಲಿಕ್ ಮಾಡಿ

*ಹಣ ತೆಗೆದುಕೊಂಡು ಹೋದ ವಿಚಾರ*:  ಇನ್ನೂ ಕಾರಿನಲ್ಲಿ ಹೋಗುವಾಗ ಮದಡ್ಕದ ಇಸಾಕ್ ಉಜಿರೆಯಲ್ಲಿದ್ದ ಸ್ವಂತ ಮನೆಯನ್ನು ಮಾರಾಟ ಮಾಡಿದ ಹಣ ಮತ್ತು ಮಗಳ ಚಿನ್ನವನ್ನು ಅಡವಿಟ್ಟು ಸುಮಾರು 35 ಲಕ್ಷ ಹಣವನ್ನು ತೆಗೆದುಕೊಂಡು ಹೋಗಿದ್ದರು ಎಂದು ಇಸಾಕ್ ಪತ್ನಿ ಕೋರಾ ಪೊಲೀಸ್ ಠಾಣೆಯಲ್ಲಿ ಮಾ.23 ರಂದು ಪೊಲೀಸ್ ವಿಚಾರಣೆ ವೇಳೆ ಹೇಳಿಕೆಯನ್ನು ನೀಡಿದ್ದಾರೆ. ಇನ್ನೂ ಶಿರ್ಲಾಲು ಸಿದ್ದಿಕ್ ಮತ್ತು ಟಿ.ಬಿ.ಕ್ರಾಸ್ ಸಾಹುಲ್ ಹಮೀದ್ ಕೂಡ ಸ್ನೇಹಿತರ ಮೂಲಕ ಪಡೆದ ಸುಮಾರು 15 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಮನೆಯವರು ಹೇಳಿಕೆ ನೀಡಿದ್ದಾರೆ. ಒಟ್ಟು ಮೂವರ ಬಳಿ 50 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ಇತ್ತು ಎನ್ನಲಾಗಿದೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಹೇಳಲಾಗಿದೆ.

ಮೂವರು ಕೂಡ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ  ಪ್ಲ್ಯಾನ್ ಮಾಡಿ ಕರೆಸಿಕೊಂಡು ಮಾ.21 ರಂದು ರಾತ್ರಿ ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಿ ನಂತರ ಹಣವನ್ನು ದೋಚಿದ್ದಾರೆ ಎನ್ನಲಾಗಿದೆ. ಇನ್ನೂ ಪ್ರಕರಣ ಸಂಬಂಧ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಸೇರಿ ಆರು ಜನರನ್ನು ಮೊಬೈಲ್ ಕಾಲ್ ಡಿಟೈಲ್ಸ್ ಮೂಲಕ  ಕಾರ್ಯಾಚರಣೆ ನಡೆಸಿ ಮಾ.22 ರಂದು ರಾತ್ರಿ ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಬೆಂಕಿಗಾಹುತಿಯಾದ ಕಾರನ್ನು ಕೋರಾ ಪೊಲೀಸ್ ಠಾಣೆಗೆ ತೆಗೆದುಕೊಂಡು ಬಂದಿದ್ದು. ಮೂವರ ಶವ ಸರಕಾರಿ ಆಸ್ಪತ್ರೆಯಲ್ಲಿ ಡಿಎನ್ಎ ಪರೀಕ್ಷೆ ಮಾಡಿದ ಬಳಿಕ ಮುಂದಿನ ಗುರುವಾರ ಅಥವಾ ಶುಕ್ರವಾರ ಮೃತದೇಹವನ್ನು ಗುರುತು ಪತ್ತೆಯಾದ ಬಳಿಕ ಅವರ ಕಟುಂಬ ಸದಸ್ಯರಿಗೆ ನೀಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.


 Share: | | | | |


ಕಲ್ಲಡ್ಕ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ವೈಷ್ಣವಿ ನೇಣಿಗೆ ಶರಣು..!!

Posted by Vidyamaana on 2023-03-09 08:47:17 |

Share: | | | | |


ಕಲ್ಲಡ್ಕ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ವೈಷ್ಣವಿ ನೇಣಿಗೆ ಶರಣು..!!

ಕಲ್ಲಡ್ಕ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೋರ್ವಳು ಮನೆಯಲ್ಲಿ ನೇಣು ಬಿಗಿದುಕೊಂಡು ಶರಣಾದ ಘಟನೆ ಕಲ್ಲಡ್ಕದಲ್ಲಿ ನಡೆದಿದೆ. 

ಬಾಳ್ತಿಲ ಗ್ರಾಮ ಪಂಚಾಯತ್ ಬಳಿಯ ನಿವಾಸಿ ಚಂದ್ರಶೇಖರ್ ಗೌಡ ಮತ್ತು ಸೌಮ್ಯ ದಂಪತಿಗಳ ಪುತ್ರಿ ವೈಷ್ಣವಿ(17) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ.

ಕಲ್ಲಡ್ಕ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ವೈಷ್ಣವಿ ಕಾಲೇಜ್‌ಗೆಂದು ಹೊರಟು ಹೋಗಿ ಏನೋ ಮರೆತು ಹೋಗಿದ್ದೇನೆಂದು ವಾಪಾಸ್ ಮನೆಗೆ ಬಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ..ವೈಷ್ಣವಿ ರವರ ತಂದೆ ಚಂದ್ರಶೇಖರ್ ರವರು ರಾಮಕುಂಜ ಶಾಲೆಯಲ್ಲಿ ಶಿಕ್ಷಕರಾಗಿದ್ದು, ತಾಯಿ ಸೌಮ್ಯ ಕಲ್ಲಡ್ಕ ಶ್ರೀ ರಾಮ ಪ್ರೌಢಶಾಲೆಯಲ್ಲಿ ಶಿಕ್ಷಕಿಯಾಗಿದ್ದಾರೆ.

ಬೆಂಗಳೂರಿನಲ್ಲಿ ಅಮಾನವೀಯ ಘಟನೆ: ಸ್ವಂತ ತಮ್ಮನಿಂದಲೇ ಯುವತಿಯ ಗೃಹ ಬಂಧನ

Posted by Vidyamaana on 2023-12-22 08:18:00 |

Share: | | | | |


ಬೆಂಗಳೂರಿನಲ್ಲಿ ಅಮಾನವೀಯ ಘಟನೆ: ಸ್ವಂತ ತಮ್ಮನಿಂದಲೇ ಯುವತಿಯ ಗೃಹ ಬಂಧನ

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಅಮಾನವೀಯ ಘಟನೆಯೊಂದು ಬೆಳಕಿಗೆ ಬಂದಿದೆ. ಜ್ಯೋತಿಷಿಯ ಮಾತು ಕೇಳಿ ಯುವತಿಯನ್ನು ಮನೆಯೊಳಗೆ ಕೂಡಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಲಗ್ಗೆರೆಯಲ್ಲಿ (Laggere) ನಡೆದಿದೆಘಟನೆ ಏನು..?: ಮೂಲತಃ ಚನ್ನರಾಯಪಟ್ಟಣದ ಮಾದೇಹಳ್ಳಿ ಗ್ರಾಮದ ಯುವತಿ ಡಿಗ್ರಿ ಮುಗಿಸಿದ್ದಾಳೆ.ಈಕೆಗೆ 4 ತಿಂಗಳ ಹಿಂದೆ ಬೆನ್ನುನೋವು ಶುರುವಾಗಿತ್ತು. ಈ ವೇಳೆ ಯುವತಿ ತಮ್ಮ ಈ ಸಮಸ್ಯೆಯ ಕುರಿತು ವೈದ್ಯರ ಬಳಿ ತೆರಳದೆ ಜ್ಯೋತಿಷಿ ಮೊರೆ ಹೋಗಿದ್ದಾನೆ. ಅಂತೆಯೇ ಜ್ಯೋತಿಷಿ ಮಾತು ಕೇಳಿ ಕಳೆದ ಮೂರು ತಿಂಗಳಿನಿಂದ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಿರಲಿಲ್ಲ. ಪರಿಣಾಮ ಆಕೆಯ ಆರೋಗ್ಯದಲ್ಲಿ ತೀವ್ರ ಸಮಸ್ಯೆಯಾಗಿದೆ.


3 ತಿಂಗಳಿನಿಂದ ಅರಿಶಿಣ ನೀರು, ನಿಂಬೆ ಹಣ್ಣು ರಸ ಕುಡಿಸ್ತಿದ್ರು. ಊಟನೇ ನೀಡ್ತಿರಲಿಲ್ಲ. ಕಳೆದ ಒಂದು ತಿಂಗಳ ಹಿಂದೆ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ಆಕೆಗೆ ಕ್ಯಾನ್ಸರ್ ಇರೋದು ದೃಢವಾಗಿದೆ. ನಾಲ್ಕು ತಿಂಗಳ ಹಿಂದೆಯೇ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಿದ್ದರೆ ಈ ವೇಳೆಗಾಗ್ಲೇ ನಿವಾರಣೆಯ ಹಂತಕ್ಕೆ ಬರುತ್ತಿತ್ತು. ಆದರೆ ಮಂತ್ರವಾದಿಯ ಮಾತು ಕೇಳಿ ಯುವತಿಯ ತಮ್ಮ ಹಾಗೂ ತಾಯಿ ಚಿಕಿತ್ಸೆ ಕೊಡಿಸದೇ ಜೀವಕ್ಕೆ ಕುತ್ತು ತಂದಿದ್ದಾರೆ.


ಯುವತಿ ಮೆಸೇಜ್: ಯುವತಿಯನ್ನ ಮನೆಯೊಳಗೆ ಕೂಡಿಟ್ಟು ನಾಲ್ಕು ಗೋಡೆಗಳ ಮಧ್ಯೆ ಚಿತ್ರಹಿಂಸೆ  ನೀಡಲಾಗುತ್ತಿತ್ತು. 4 ತಿಂಗಳು, 120 ದಿನ, 2880 ಗಂಟೆ ಮನೆಯಲ್ಲೇ ನರಳಾಟ ಅನುಭವಿಸಿದ್ದಾಳೆ. ಪರಿಣಾಮ ಹೊಟ್ಟೆ ಊದ್ಕೊಂಡು ಮನೆಯಲ್ಲೇ ನರಳಾಡುತ್ತಿದ್ದರೂ ಮನೆಯವರು ಆಸ್ಪತ್ರೆಗೆ ಕರೆದೊಯ್ದಿಲ್ಲ. ತೀವ್ರ ಹೊಟ್ಟೆ ನೋವು ತಾಳದೇ ಯುವತಿ ಕಿರುಚಾಡುತ್ತಿದ್ದಾಗ ತಮ್ಮ ಹಲ್ಲೆ ಕೂಡ ಮಾಡಿದ್ದಾನೆ. ಇದರಿಂದ ನೊಂದ ಯುವತಿ ಪ್ಲೀಸ್ ನನ್ನನ್ನ ಕಾಪಾಡಿ.. ಸಹಾಯ ಮಾಡಿ ಎಂದು ಪರಿಚಯಸ್ಥರಿಗೆ ಮೆಸೇಜ್ ಹಾಕಿದ್ದಾಳೆ.

ಮನೆ ಲೀಜ್ ಪಡೆಯೋ ಗ್ರಾಹಕರೇ ಎಚ್ಚರ -ಬ್ಯಾಂಕಿನವರು ಬೀದಿಗೆ ತಳ್ಳಬಹುದು ಹುಷಾರ್

Posted by Vidyamaana on 2024-03-01 12:20:35 |

Share: | | | | |


ಮನೆ ಲೀಜ್ ಪಡೆಯೋ ಗ್ರಾಹಕರೇ ಎಚ್ಚರ -ಬ್ಯಾಂಕಿನವರು ಬೀದಿಗೆ ತಳ್ಳಬಹುದು ಹುಷಾರ್

ಬೆಂಗಳೂರು : ಅವ್ರು ತಿಂಗಳ ಬಾಡಿಗೆ ಸಹವಾಸ ಬೇಡ ಎಂದು ಲಕ್ಷ ಲಕ್ಷ ಹಣ ಪಾವತಿಸಿ ಅಪಾರ್ಟ್ಮೆಂಟ್ ನಲ್ಲಿ ಪ್ಲಾಟ್ ಲೀಸ್ಗೆ ಪಡೆದಿದ್ದರು. ಮೂರು ತಿಂಗಳು ಕಳೆಯುತ್ತಿದ್ದಂತೆ ಅವ್ರಿಗೆ ಕಾದಿತ್ತು ಮುಂದೆ ಶಾಕ್. ಬಾಗಿಲಿಗೆ ಬಂದ ಬ್ಯಾಂಕಿ ನೋಟಿಸ್ ನೋಡಿ ಶಾಕ್ ಆಗಿದ್ರು.ಏಕಾಏಕಿ ಬ್ಯಾಂಕಿನವರು ಮನೆಗೆ ಬೀಗ ಜಡಿದಿದ್ದು, ಪ್ಲಾಟ್ ಲೀಸ್ಗೆ ಪಡೆದವರು ಅತ್ತ ಇರಲು ಮನೆ ಇಲ್ಲದೆ, ಇತ್ತ ಕೊಟ್ಟ ಹಣವು ಇಲ್ಲದ ಬೀದಿ ಪಾಲಾಗಿದ್ದಾರೆ.. ಅಷ್ಟಕ್ಕೂ ಈ ಘಟನೆ ನಡೆದಿದಾದ್ರು ಎಲ್ಲಿ ಅಂತೀರಾ ನೋಡಿ ಈ ರಿಪೋರ್ಟ್ ನಲ್ಲಿ..


ಹೀಗೆ ಫೋಟೋದಲ್ಲಿ ಪೋಸ್ ಕೋಡುತ್ತಿರುವ ಇವ್ರು ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಚಂದಾಪುರ ನಿವಾಸಿಗಳಾದ ಅಜಿತ್ ಕುಮಾರ್ ಮತ್ತು ಸುಜತಾ. ವಂಚನೆಯನ್ನೆ ಕಾಯಕ ಮಾಡಿಕೊಂಡಿರುವ ಇವ್ರು ಆನೇಕಲ್ ಪೊಲೀಸರ ಅತಿಥಿಯಾಗಿದ್ದಾರೆ. ಹೌದು ಚಂದಾಪುರ ರಸ್ತೆಯಲ್ಲಿನ ಯುಬಿಎಚ್ಸಿ ಅಪಾರ್ಟ್ಮೆಂಟ್ನಲ್ಲಿನ ತಮ್ಮ ಎರಡು ಪ್ಲಾಟ್ಗಳ ಮೇಲೆ ಬರೋಬ್ಬರಿ ಐವತ್ತು ಲಕ್ಷ ಲೋನ್ ಪಡೆದ ಅಸಾಮಿಗಳು ಅದೇ ಪ್ಲಾಟ್ ಗಳನ್ನು ಲೀಜ್ಗೆ ನೀಡಿ ಲಕ್ಷ ಲಕ್ಷ ವಸೂಲಿ ಮಾಡಿದ್ದಾರೆ. ಬಳಿಕ ಬ್ಯಾಂಕ್ ಲೋನ್ ಕಟ್ಟದೇ ಎಸ್ಕೇಪ್ ಆಗಿದ್ದಾರೆ. ಮೂರ್ನಾಲ್ಕು ನೋಟಿಸ್ ಕೊಟ್ಟ ಬ್ಯಾಂಕಿನವರು ಪ್ಲಾಟ್ ವಾಸಿಗಳನ್ನು ಉಟ್ಟಬಟ್ಟೆಯಲ್ಲಿ ಹೊರ ಹಾಕಿ ಬೀಗ ಜಡಿದಿದ್ದಾರೆ.ಇನ್ನೂ ರಿಯಲ್ ಎಸ್ಟೇಟ್ ಹೆಸರಲ್ಲಿ ರೀಲ್ ಬಿಟ್ಟು ಯಾಮಾರಿಸುವ ಅಜಿತ್ ಮತ್ತು ಸುಜತಾ ದಂಪತಿ ತಾವು ರಿಯಲ್ ಎಸ್ಟೇಟ್ ನಲ್ಲಿ ಒಳ್ಳೆಯ ಬಿಸಿನೆಸ್ ಮಾಡುತ್ತಿದ್ದೆವೆ. ತಮ್ಮದು ಸಾಕಷ್ಟು ಪ್ಲಾಟ್, ವಿಲ್ಲಾ ಮತ್ತು ನಿವೇಶನಗಳಿದ್ದು, ಕಡಿಮೆ ಬೆಲೆಗೆ ಲೀಜ್ ಮತ್ತು ಮಾರಾಟ ಮಾಡುತ್ತೆವೆ ಎಂದು ಜಾಹಿರಾತು ನೀಡುತ್ತಾರೆ. ಇವರ ಬಿಲ್ಡ್ ಅಪ್ ಕಂಡು ಇಂದು ಪ್ಲಾಟ್ ಲೀಜ್ ಪಡೆದವರು ಅಕ್ಷರಶಃ ಹಣ ಮತ್ತು ಮನೆ ಕಳೆದುಕೊಂಡು ಕಂಗಾಲಾಗಿದ್ದಾರೆ. ಇನ್ನೂ ಸಾಕಷ್ಟು ಮಂದಿಗೆ ಅಜಿತ್ ದಂಪತಿ ಮಕ್ಮಲ್ ಟೋಪಿ ಹಾಕಿದ್ದು, ನಮಗೆ ನ್ಯಾಯ ಕೊಡಿಸಿ ಎಂದು ವಂಚನೆಗಳೊಗಾದ ಗ್ರಾಹಕರು ಆನೇಕಲ್ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.


ಇನ್ನೂ ಆನೇಕಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಂಚಕ ದಂಪತಿಯನ್ನ ಬಂಧಿಸಿ ಜೈಲಿಗೆ ಕಳುಹಿಸಿದ್ದು, ಲಕ್ಷಾಂತರ ರೂಪಾಯಿ ಹಣ ನೀಡಿ ಮನೆ ಲೀಸ್ಗೆ ಪಡೆದಿದ್ದ ಗ್ರಾಹಕರು ಅತ್ತ ನೀಡಿದ ಹಣವೂ ಕೈ ಸೇರದೆ ಇತ್ತ ಇರಲು ಮನೆಯು ಸಹ ಇಲ್ಲದೆ ಬೀದಿಗೆ ಬೀಳುವಂತಾಗಿದ್ದು ಮಾತ್ರ ವಿಪರ್ಯಾಸ ಸಂಗತಿ.

ನೆಟ್ಟೇ ಕಮ್ಮಿ ಆಪುಂಡು ನನ ಬರೋಡ್ಚಿ.. ಎಂದು ಹೇಳಿ ಮದ್ದು ಕೊಡ್ತಿದ್ದ ನರಸಿಂಹ ಭಟ್ ರಿಟೈರ್ಡ್

Posted by Vidyamaana on 2023-07-10 07:10:00 |

Share: | | | | |


ನೆಟ್ಟೇ ಕಮ್ಮಿ ಆಪುಂಡು ನನ ಬರೋಡ್ಚಿ.. ಎಂದು ಹೇಳಿ ಮದ್ದು ಕೊಡ್ತಿದ್ದ ನರಸಿಂಹ ಭಟ್ ರಿಟೈರ್ಡ್

ಪುತ್ತೂರು: “ನೆಟ್ಟೇ ಕಮ್ಮಿ. ನನ ಬರೋಡ್ಚಿ…”

ಹೀಗೆ ಹೇಳಿ ಔಷಧಿ ನೀಡಿದರೆಂದರೆ, ಯಾರದೇ ರೋಗವಾದರೂ ವಾಸಿಯಾಗಲೇಬೇಕು. ಆಸ್ಪತ್ರೆಗೆ ಹೋಗಿ ತಾಸುಗಟ್ಟಲೇ ಕಾಯಬೇಕೆಂದಿಲ್ಲ. ಹೆದರಿಕೆಯಾಗುವ ಬಿಲ್ ಕೂಡ ಇಲ್ಲ. ಯಾರೇ ಬಂದರೂ ಅವರ ನಗುವೇ ದಿವ್ಯೌಷಧ.

ಇದು ಎರಡೇ ಸಾಲಿನಲ್ಲಿ ವಿವರಣೆ ಕೊಡಬಹುದಾದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರ ಪರಿಚಯ. ತನ್ನ 16ನೇ ವಯಸ್ಸಿಗೇ ಡಾ. ಶಿವರಾಮ ಭಟ್ ಅವರ ಜೊತೆಗೆ ಕಾಂಪೌಂಡರ್ ಆಗಿ ಸೇರಿಕೊಂಡ ಅವರು, ಇದುವರೆಗೆ ಸುದೀರ್ಘ 68 ವರ್ಷಗಳ ಸೇವೆ ಸಲ್ಲಿಸಿದ್ದಾರೆ. ಹಾರಾಡಿಯಲ್ಲಿ ವಾಸವಾಗಿರುವ ಇವರ ತಂದೆ ಶಂಕರ್ ಭಟ್, ತಾಯಿ ಕಾವೇರಮ್ಮ. ಸರಸ್ವತಿ ಇವರ ಪತ್ನಿ. ಸಾಫ್ಟ್ ವೇರ್ ಇಂಜಿನಿಯರ್ ಆಗಿರುವ ಪುತ್ರ ಕಾರ್ತಿಕ್ ತನ್ನ ಪತ್ನಿ - ಮಗನೊಂದಿಗೆ ಲಂಡನಿನಲ್ಲಿ ವಾಸವಾಗಿದ್ದಾರೆ.

ಇದೀಗ ತನ್ನ 82ನೇ ವಯಸ್ಸಿನಲ್ಲಿ ವಿಶ್ರಾಂತ ಜೀವನಕ್ಕೆ ತೆರಳಿದ್ದಾರೆ. ವಯೋ ಸಹಜ ಸಮಸ್ಯೆಗಳ ಕಾರಣದಿಂದಾಗಿ ಡಾ. ಶಿವರಾಮ ಭಟ್ ಅವರ ಕ್ಲಿನಿಕ್ ಅನ್ನು ಬಂದ್ ಮಾಡಲಾಗಿದೆ ಎಂದು ಕ್ಲಿನಿಕ್ ಮುಂದುಗಡೆ ಬೋರ್ಡ್ ಹಾಕಲಾಗಿದೆ.

ಹಾಗಾಗಿ, ಔಷಧಕ್ಕೆಂದು ಆಗಮಿಸುವ ಜನರು ಬೋರ್ಡ್ ನೋಡಿ, ಹ್ಯಾಪ್ ಮೋರೆ ಹಾಕಿಕೊಂಡು ವಾಪಾಸ್ ಹೋಗುತ್ತಿದ್ದಾರೆ. ದಿನಕ್ಕೆ ಸುಮಾರು 300 ಮಂದಿಯಂತೆ ತಿಂಗಳಿಗೆ 10 ಸಾವಿರದಷ್ಟು ಮಂದಿ ಇವರ ಔಷಧವನ್ನೇ ಅವಲಂಬಿತರಾಗಿದ್ದರು. ಇದೀಗ ಇಷ್ಟು ಮಂದಿ ಬೇರೆ ವೈದ್ಯರ ಮೊರೆ ಹೋಗಲೇಬೇಕಾದ ಅನಿವಾರ್ಯತೆ ಎದುರಾಗಿದೆ.

ಮಳೆಗಾಲ ಆರಂಭವಾಯಿತೆಂದರೆ ಜ್ವರ, ಶೀತ, ಕೆಮ್ಮು ಸಿದ್ಧ. ಇದಕ್ಕೆಲ್ಲಾ ಕಾಂಪೌಂಡರ್ ನೀಡುವ 3 ಹೊತ್ತಿನ ಮದ್ದು ಸಾಕು. ಕಡಿಮೆ ಶುಲ್ಕ ಮಾತ್ರವಲ್ಲ, ಸುಲಭದಲ್ಲಿ ಸಿಗುವ ವೈದ್ಯರು ಎಂಬ ಕಾರಣಕ್ಕೆ ಜನರೂ ಇಲ್ಲಿಗೆ ಆಗಮಿಸುತ್ತಿದ್ದರು. ಇನ್ನು ಮುಂದೆ ಪುತ್ತೂರಿನ ಹೃದಯ ಭಾಗದಲ್ಲಿ ಇದ್ದ ಡಾ. ಶಿವರಾಮ ಭಟ್ ಅವರ ಕ್ಲಿನಿಕಿನಲ್ಲಿ ಕಾಂಪೌಂಡರ್ ಮದ್ದು ನೀಡುವುದಿಲ್ಲ!

ಡಾ. ಶಿವರಾಮ ಭಟ್ ಗುರು:

ಡಾ. ಶಿವರಾಮ ಭಟ್ ಅವರನ್ನೇ ಗುರುವಾಗಿ ನೆಚ್ಚಿಕೊಂಡಿದ್ದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರು, ಸುದೀರ್ಘ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಡಾ. ಶಿವರಾಮ ಭಟ್ ಅವರ ನಿಧನದ ನಂತರವೂ ಅವರ ಹೆಸರಿನಲ್ಲೇ ಕ್ಲಿನಿಕ್ ನಡೆಯುತ್ತಿತ್ತು. ಆಗ ಕಾಂಪೌಂಡರ್ ಅವರೇ ಔಷಧ ನೀಡುತ್ತಿದ್ದರು. ಕ್ಲಿನಿಕಿಗೆ ಆಗಮಿಸಿದ ಹೆಚ್ಚಿನ ಜನರಿಗೆ ಇವರೇ ಡಾ‌. ಶಿವರಾಮ ಭಟ್ ಎಂದು ನಂಬಿದ್ದರು.

ಸರ್ಕಾರಿ ಉದ್ಯೋಗದ ಅವಕಾಶವನ್ನೇ ಕೈಚೆಲ್ಲಿದರು!

ನರಸಿಂಹ ಭಟ್ ಅವರಿಗೆ ಸರ್ಕಾರಿ ಉದ್ಯೋಗದ ಅವಕಾಶವೂ ಕೈಬೀಸಿ ಕರೆಯಿತು. ಆದರೆ ಡಾ. ಶಿವರಾಮ್ ಭಟ್ ಅವರನ್ನೇ ಮಾನಸ ಗುರುವಾಗಿ ಸ್ವೀಕರಿಸಿದ್ದರಿಂದ, ಸರ್ಕಾರಿ ಉದ್ಯೋಗದ ಅವಕಾಶವನ್ನು ಕೈಚೆಲ್ಲಿದರು. ಡಾ. ಶಿವರಾಮ ಭಟ್ ಅವರು ಇರುವವರೆಗೂ ಹಾಗೂ ಅವರು ಇಲ್ಲದ ಬಳಿಕವೂ ತನ್ನ ಗುರುವಿನ ಹೆಸರಿನಲ್ಲಿಯೇ ಔಷಧ ನೀಡಿತ್ತಿದ್ದರು ಎನ್ನುವುದು ಕಾಂಪೌಂಡರ್ ಅವರ ವಿಶೇಷತೆ.

ಭಾರತದಿಂದ ಆಸ್ಕರ್‌ಗೆ ಅಧಿಕೃತ ಪ್ರವೇಶ ಪಡೆದ ಮಲಯಾಳಂನ 2018 ಸಿನಿಮಾ

Posted by Vidyamaana on 2023-09-27 13:38:48 |

Share: | | | | |


ಭಾರತದಿಂದ ಆಸ್ಕರ್‌ಗೆ ಅಧಿಕೃತ ಪ್ರವೇಶ ಪಡೆದ ಮಲಯಾಳಂನ 2018 ಸಿನಿಮಾ

ಮುಂಬಯಿ: 96ನೇ ಆಸ್ಕರ್‌ ಅವಾರ್ಡ್ಸ್‌ಗೆ ಭಾರತದಿಂದ ಅಧಿಕೃತವಾಗಿ ಪ್ರವೇಶ ಪಡೆಯುವ ಸಿನಿಮಾವಾಗಿ ಮಾಲಿವುಡ್‌ ಸಿನಿಮಾ 2018 ಆಯ್ಕೆ ಆಗಿದೆ ಎಂದು ಘೋಷಿಸಲಾಗಿದೆ.

ಇತ್ತೀಚೆಗೆ ನಿರ್ದೇಶಕ ಗಿರೀಶ್ ಕಾಸರವಳ್ಳಿ ನೇತೃತ್ವದ 17 ಸದಸ್ಯರ ತೀರ್ಪುಗಾರರನ್ನು ಒಳಗೊಂಡಿರುವ ಆಯ್ಕೆ ಸಮಿತಿಗೆ ಭಾರತದಾದ್ಯಂತ ತೆರೆಕಂಡ 22 ಸಿನಿಮಾಗಳು ಅಧಿಕೃತ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಿತ್ತು.


ಇದರಲ್ಲಿ “ಬಾಲಗಮ್”, “ದಿ ಕೇರಳ ಸ್ಟೋರಿ”, “ಜ್ವಿಗಾಟೊ” “ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ”ಅನಂತ್ ಮಹದೇವನ್ ಅವರ ಸ್ಟೋರಿ ಟೇಲರ್ (ಹಿಂದಿ), ಮ್ಯೂಸಿಕ್‌ ಸ್ಕೂಲ್ (ಹಿಂದಿ), ಮಿಸಸ್ ಚಟರ್ಜಿ vs ನಾರ್ವೆ (ಹಿಂದಿ), 12th ಫೇಲ್‌ (ಹಿಂದಿ) ವಿದುತಲೈ ಭಾಗ 1 (ತಮಿಳು), ಘೂಮರ್ (ಹಿಂದಿ), ಮತ್ತು ದಸರಾ (ತೆಲುಗು) ಸಿನಿಮಾಗಳು ಆಸ್ಕರ್‌ ನ ಅಧಿಕೃತ ಪ್ರವೇಶ ಪಡೆಯುವ ಸಾಲ್ಲಿನಲ್ಲಿತ್ತು.


ಅಂತಿಮವಾಗಿ ಜೂಡ್‌ ಆಂಟನಿ ಜೋಸೆಫ್‌ ನಿರ್ದೇಶನದ ಮಲಯಾಳಂ ಸಿನಿಮಾ “2018” ಆಸ್ಕರ್‌ ಸ್ಪರ್ಧೆಗೆ ಭಾರತದಿಂದ ಅಧಿಕೃತವಾಗಿ ಆಯ್ಕೆಯಾಗಿದೆ. ಇದೇ ವರ್ಷದ ಮೇ.5 ರಂದು ರಿಲೀಸ್‌ ಆಗಿದ್ದ ಈ ಸಿನಿಮಾದಲ್ಲಿ ಟೊವಿನೋ ಥಾಮಸ್ ಸೇರಿದಂತೆ ಕುಂಚಾಕೋ ಬೋಬನ್, , ಆಸಿಫ್ ಅಲಿ ಮುಂತಾದವರು ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದರು. ಈ ಸಿನಿಮಾ ಕೇರಳದಲ್ಲಿ ಬಂದ ಪ್ರವಾಹದ ನೈಜ ಕಥೆಯನ್ನೊಳಗೊಂಡಿದೆ. ಬಾಕ್ಸ್‌ ಆಫೀಸ್‌ 100 ಕೋಟಿ ಕಮಾಯಿ ಮಾಡಿ, ದೊಡ್ಡ ಹಿಟ್‌ ಆಗಿತ್ತು.

ಅಡಿಕೆ ದೋಚಿದ ಕಳ್ಳರು, ಬಶೀರ್ ನನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಮಾಲಿಕ

Posted by Vidyamaana on 2023-11-26 22:35:44 |

Share: | | | | |


ಅಡಿಕೆ ದೋಚಿದ ಕಳ್ಳರು, ಬಶೀರ್ ನನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಮಾಲಿಕ

ಅಡಿಕೆಯನ್ನು ಕದ್ದು ವಾಹನಕ್ಕೆ ತುಂಬಿಸುತ್ತಿರುವುದನ್ನು ಕಂಡು ಅದನ್ನು ತಡೆದ ವೇಳೆ ಅಪರಿಚಿತ ವ್ಯಕ್ತಿಗಳು ವ್ಯಕ್ತಿಯೋರ್ವರಿಗೆ ತಲವಾರಿನಿಂದ ಹಲ್ಲೆ ನಡೆಸಿ, ಕದ್ದ ಅಡಿಕೆಯೊಂದಿಗೆ ಪರಾರಿಯಾಗಿದ್ದಾರೆ. ಈ ವೇಳೆ ಓರ್ವ ಕಳ್ಳನನ್ನು ಅಡಿಕೆ ಚೀಲಗಳ ಮಾಲೀಕ ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸವಣೂರು ಗ್ರಾಮದ ಪಣೆಮಜಲು ಎಡಪತ್ಯ ಫಾರ್ಮ್ಸ್ ಎಂಬಲ್ಲಿ ನಡೆದಿದೆ.ಈ ಬಗ್ಗೆ ಕಡಬ ತಾಲೂಕಿನ ಸವಣೂರು ಗ್ರಾಮದ ಕಡಬ ನಿವಾಸಿ ಎ. ಆರ್. ಚಂದ್ರ ಎಂಬುವರು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರನ್ನು ನೀಡಿದ್ದಾರೆ.


ದೂರಿನಲ್ಲೇನಿದೆ..? ದಿನಾಂಕ 25.11.2023 ರಂದು


ಬೆಳಗಿನ ಜಾವ 03.30 ಸುಮಾರಿಗೆ ಚಂದ್ರ ಎಂಬುವರ ಮಗನಾದ ನಿಷ್ಕಲ್ ರಾಮ ಎಂಬವರು, ಮೈಸೂರಿನಿಂದ ಮೋಟಾ‌ರ್ ಸೈಕಲಿನಲ್ಲಿ ತಮ್ಮ ಸವಣೂರು ಗ್ರಾಮದ ಪಣೆಮಜಲು ಎಡಪತ್ಯ ಫಾರ್ಮ್ಸ್ ಎಂಬಲ್ಲಿರುವ ಮನೆಗೆ ಬಂದಾಗ, ತನ್ನ ಮನೆಯ ಅಂಗಳದಲ್ಲಿ ಒಂದು ಕಾರು ಮತ್ತು ಒಂದು ಸ್ಕೂಟರ್‌ನಲ್ಲಿ ಬಂದಿದ್ದ ಇಬ್ಬರು ಅಪರಿಚಿತ ವ್ಯಕ್ತಿಗಳು ತಾವು ತಂದಿದ್ದ ವಾಹನಗಳಲ್ಲಿ ತನ್ನ ಮನೆಯ ಅಡಿಕೆಯನ್ನು ಕದ್ದು ತುಂಬಿಸುತ್ತಿರುವುದು ಕಂಡು ಬಂದಿದೆ.ಈ ಬಗ್ಗೆ ನಿಷ್ಕಲ್ ರಾಮ ಅವರು ಪ್ರಶ್ನಿಸಿದ್ದು, ಈ ವೇಳೆ ಈ ಅಪರಿಚಿತ ವ್ಯಕ್ತಿಗಳು ನಿಷ್ಕಲ್ ರಾಮ ಅವರಿಗೆ ತಲವಾರಿನಿಂದ ಹಲ್ಲೆ ನಡೆಸಿ, ಅವರ ಪೈಕಿ ಓರ್ವ ಆರೋಪಿಯು ಅದಾಗಲೇ ಎರಡು ಗೋಣಿ ಚೀಲದಲ್ಲಿ ಸುಲಿದು ತುಂಬಿಸಿಟ್ಟಿದ್ದ ಅಂದಾಜು ರೂ. 24000/- ರೂ.

ಮೌಲ್ಯದ ಅಡಿಕೆಯನ್ನು ಸ್ಕೂಟರಲ್ಲಿ ಇಟ್ಟುಕೊಂಡು

ಸ್ಥಳದಿಂದ ಪರಾರಿಯಾಗಿದ್ದಾನೆ. ಇನ್ನೊಬ್ಬ ಆರೋಪಿಯು ಕಾರಿನಲ್ಲಿ ತುಂಬಿಸಿಟ್ಟಿದ್ದ ಅಂದಾಜು ರೂ. 75000/- ಮೌಲ್ಯದ 8 ಪ್ಲಾಸ್ಟಿಕ್ ಚೀಲ ಸುಲಿಯದ ಅಡಿಕೆಯೊಂದಿಗೆ ಕಾರಿನಲ್ಲಿ ಸ್ಥಳದಿಂದ ಪರಾರಿಯಾಗಲು ಪ್ರಯತ್ನಿಸಿದ್ದ. ಈ ವೇಳೆ ಗಲಾಟೆ ಕೇಳಿ ಸ್ಥಳಕ್ಕೆ ಬಂದ

ಸ್ಥಳೀಯರು ಆತನನ್ನು ತಡೆದು ನಿಲ್ಲಿಸಿ ವಿಚಾರಿಸಿದಾಗ,ಆತನು ತನ್ನ ಹೆಸರು ಬಶೀರ್ ಎಂಬುದಾಗಿ ಹಾಗೂ ತನ್ನೊಂದಿಗಿದ್ದು ಪರಾರಿಯಾದ ವ್ಯಕ್ತಿಯ ಹೆಸರು ಹಕೀಂ ಎಂಬುದಾಗಿ ತಿಳಿಸಿರುತ್ತಾನೆ. ಈ ಹಿನ್ನೆಲೆ ಆರೋಪಿಯನ್ನು ಬೆಳ್ಳಾರೆ ಠಾಣೆಗೆ ಕರೆತಂದು 

ಘಟಣೆಯ ಬಗ್ಗೆ ದೂರು ನೀಡಿದ್ದಾರೆ. ಬೆಳ್ಳಾರೆ ಪೊಲೀಸ್‌ ಠಾಣೆಯಲ್ಲಿ ಅ. ಕ್ರ 78/2023 ಕಲಂ 392, 397 ಜೊತೆಗೆ 34 ಐಪಿಸಿಯಂತೆ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.



Leave a Comment: