ಚಾಲಕನ ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದ ಪಿಕಪ್ ವಾಹನ

ಸುದ್ದಿಗಳು News

Posted by vidyamaana on 2023-07-14 03:02:36 | Last Updated by Vidyamaana on 2023-09-05 09:08:10

Share: | | | | |


ಚಾಲಕನ ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದ ಪಿಕಪ್ ವಾಹನ

ವಿಟ್ಲ: ಪರಿಯಲ್ಲಡ್ಕ – ಸಾರಡ್ಕ ರಸ್ತೆಯ ಕೂರೇಲು ಎಂಬಲ್ಲಿ ಪಿಕಪ್ ರಸ್ತೆಯಿಂದ ಮನೆಯ ಮೇಲೆ ಬಿದ್ದಿದ್ದು, ಮನೆಯ ಒಳಗೆ ಮಹಿಳೆ ಸಿಲುಕಿ ಹಾಕಿಕೊಂಡಿದ್ದಾರೆ.ಕೂರೇಲು ಮಧ್ಯದ ಅಂಗಡಿಯ ಸಮೀಪದಲ್ಲಿ ರಸ್ತೆಯಿಂದ ಕೆಳಗಿದ್ದ ಮನೆಗೆ ಜು.14 ರ ಬೆಳಗ್ಗಿನ ಜಾವ ಚಾಲಕ ನಿಯಂತ್ರಣ ತಪ್ಪಿದ ಪಿಕಪ್ ಮನೆಯ ಮೇಲೆ ಬಿದ್ದಿದೆಅಪಘಾತದಿಂದ ಹಂಚಿನ ಮನೆ ಸಂಪೂರ್ಣ ಹಾನಿಯಾಗಿದೆ. ಪಿಕಪ್ ಕೋಳಿ ಸಾಗಟ ನಡೆಸುತಿತ್ತು. ಅಪಘಾತದಿಂದ ನೂರಾರು ಕೋಳಿಗಳು ಸತ್ತಿದೆ. ಅಪಘಾತ ನಡೆದಾಗ ಮನೆಯ ಒಳಗೆ ಮಹಿಳೆ ಮಲಗಿದ್ದರು, ಮಹಿಳೆಗೆ ಗಂಭೀರ ಗಾಯವಾದ ಪರಿಸ್ಥಿಯಲಿದ್ದಾರೆ.ಪಿಕಪ್ ವಾಹನವನ್ನು ತೆರವು ಮಾಡಡೆ, ಮಹಿಳೆಯನ್ನು ಹೊರಗೆ ತೆಗೆಯಲು ಸಾಧ್ಯವಿಲ್ಲದ ಸ್ಥಿತಿ ನಿರ್ಮಾಣವಾಗಿದೆ.

ಸ್ಥಳದಲ್ಲಿ ವಿಟ್ಲ ಪೊಲೀಸರು, ತುರ್ತು ಸೇವಾ ವಾಹನ ಬೀಡು ಬಿಟ್ಟಿದ್ದು, ಕ್ರೇನ್ ಬಳಸಿ ವಾಹನ ಮೇಲೆತ್ತುವ ಕಾರ್ಯಾಚರಣೆ ನಡೆಯುತ್ತಿದೆ.

 Share: | | | | |


ಕಾನೂನು ವಿದ್ಯಾರ್ಥಿಗೆ ಯುವತಿಯ ಬೆತ್ತಲೆ ವಿಡಿಯೋ ಕಾಲ್

Posted by Vidyamaana on 2023-10-06 10:36:47 |

Share: | | | | |


ಕಾನೂನು ವಿದ್ಯಾರ್ಥಿಗೆ ಯುವತಿಯ ಬೆತ್ತಲೆ ವಿಡಿಯೋ ಕಾಲ್

ಉತ್ತರ ಪ್ರದೇಶ: ಕಾನೂನು ವಿದ್ಯಾರ್ಥಿಯೊಬ್ಬನಿಗೆ ಲೈಂಗಿಕ ಸುಲಿಗೆಕೋರರು ಹಿಂಸೆ ಕೊಟ್ಟ ಘಟನೆ ಉತ್ತರ ಪ್ರದೇಶದ ಲಖನೌನಲ್ಲಿ ನಡೆದಿದೆ. ಬಿಹಾರ ಮೂಲದ ಕಾನೂನು ವಿದ್ಯಾರ್ಥಿಗೆ ಕಾಡಿದ ಲೈಂಗಿಕ ಸುಲಿಗೆಕೋರರು ಆತನಿಂದ 77 ಸಾವಿರ ರೂ. ವಸೂಲಿ ಮಾಡಿದ್ದಾರೆ.


ಕಾಲೇಜ್‌ನ ಹಾಸ್ಟೆಲ್ ರೂಂನಲ್ಲಿ ಇದ್ದ ಕಾನೂನು ವಿದ್ಯಾರ್ಥಿಯ ಮೊಬೈಲ್‌ಗೆ ಅಪರಿಚಿತ ನಂಬರ್ ಒಂದರಿಂದ  ವಿಡಿಯೋ ಕಾಲ್ ಬಂದಿತ್ತು. ಕಾಲ್ ರಿಸೀವ್ ಮಾಡಿದ ಕೂಡಲೇ ಬೆತ್ತಲಾಗಿದ್ದ ಯುವತಿಯೊಬ್ಬಳ ವಿಡಿಯೋ ಕಾಣ ಸಿಕ್ಕಿತ್ತು. ಆ ಯುವತಿಯು ನೀನೂ ಕೂಡಾ ಬೆತ್ತಲಾಗು ಎಂದು ವಿದ್ಯಾರ್ಥಿಗೆ ಪುಸಲಾಯಿಸಿದ್ದಳು. ಯುವತಿಯ ಮಾತಿಗೆ ಮರುಳಾದ ವಿದ್ಯಾರ್ಥಿ ಆಕೆ ಹೇಳಿದಂತೆಯೇ ತಾನೂ ಬೆತ್ತಲಾದ. ಕೇವಲ 30 ಸೆಕೆಂಡ್‌ನಲ್ಲಿಯೇ ಈ ಕರೆ ಕಡಿತವಾಗಿತ್ತು ಎನ್ನಲಾಗಿದೆ. ಇದಾದ ಕೂಡಲೇ ವಿದ್ಯಾರ್ಥಿಯ ಮೊಬೈಲ್‌ಗೆ ಬೆದರಿಕೆ ಕರೆ ಬಂತು. ವಿದ್ಯಾರ್ಥಿಗೆ ಕರೆ ಮಾಡಿದ್ದ ಯುವತಿ ಹಣ ಕೊಡು, ಇಲ್ಲವಾದ್ರೆ ನಿನ್ನ ಬೆತ್ತಲೆ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಬಹಿರಂಗ ಮಾಡುತ್ತೇನೆ ಎಂದು ಬೆದರಿಕೆ ಹಾಕಿದಳು ಎನ್ನಲಾಗಿದೆ.


ಯುವತಿಯ ಬೆದರಿಕೆ ಕರೆಯಿಂದಾಗಿ ಕಂಗಾಲಾದ ವಿದ್ಯಾರ್ಥಿ ಕೂಡಲೇ ತನ್ನ ಎರಡು ಬ್ಯಾಂಕ್ ಖಾತೆಗಳಿಂದ ಒಟ್ಟು 77,599 ರೂ.ಗಳನ್ನು ಯುವತಿಯ ಖಾತೆಗೆ ವರ್ಗಾಯಿಸಿದ್ದಾನೆ. ಸೆಂಟ್ರಲ್ ಬ್ಯಾಂಕ್ ಹಾಗೂ ಕೆನರಾ ಬ್ಯಾಂಕ್‌ನ ಎರಡು ಖಾತೆಗಳಿಗೆ ಹಣ ವರ್ಗಾವಣೆ ಮಾಡಿರೋದಾಗಿ ಯುವಕ ಮಾಹಿತಿ ನೀಡಿದ್ದಾನೆ. ಇನ್ನು ಯುವತಿ ತನಗೆ ಕರೆ ಮಾಡಿದ ಮೊಬೈಲ್ ಸಮಖ್ಯೆ ಹನ್ಸ್‌ರಾಜ್ ಎಂಬುವನಿಗೆ ಸೇರಿದ್ದು ಎಂದು ವಿದ್ಯಾರ್ಥಿ ಪತ್ತೆ ಹಚ್ಚಿದ್ದಾನೆ. ಮತ್ತೊಂದು ನಂಬರ್‌ನ ಮೂಲ ಗೊತ್ತಾಗಿಲ್ಲ ಎಂದು ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.


ವಿಡಿಯೋ ಕರೆ ಬಳಿಕ ವಿದ್ಯಾರ್ಥಿಗೆ ಮೊದಲಿಗೆ ಯುವತಿಯ ಮೊಬೈಲ್ ಕರೆ ಬಂದಿದೆ. ಆಕೆ ವಿಡಿಯೋ ಡಿಲೀಟ್ ಮಾಡಲು 28 ಸಾವಿರ ರೂ. ಕೊಡು ಎಂದು ಬೇಡಿಕೆ ಇಟ್ಟಿದ್ದಾಳೆ. ಆಗ ಯುವಕ ಈ ಬೇಡಿಕೆ ತಿರಸ್ಕರಿಸಿದ್ದಾನೆ. ಹಣ ಕೊಡೋದಿಲ್ಲ ಎಂದು ಪಟ್ಟು ಹಿಡಿದಿದ್ದಾನೆ. ಈ ವೇಳೆ ಯುವತಿ ಕರೆ ಕಟ್ ಮಾಡಿದ್ದಾಳೆ. ನಂತರ ಪುರುಷನೊಬ್ಬನ ಮೊಬೈಲ್ ಕರೆ ಬಂದಿದೆ. ಆತ ತನ್ನನ್ನು ತಾನು ದಿಲ್ಲಿಯ ಪೊಲೀಸ್ ಆಯುಕ್ತ ಎಂದು ಪರಿಚಯಿಸಿಕೊಂಡಿದ್ದಾನೆ. ನೀನು ಹಣ ಕೊಡದಿದ್ದರೆ ನಿನ್ನ ಭವಿಷ್ಯವನ್ನೇ ಹಾಳು ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ.


ಯುವತಿ ನಿನ್ನ ಜೊತೆ ಬೆತ್ತಲೆಯಾಗಿ ವಿಡಿಯೋ ಸಂಭಾಷಣೆ ಮಾಡಿದ್ದಾಳೆ. ಈ ಸಂಬಂಧ ನಾವು ಎಫ್‌ಐಆರ್ ದಾಖಲು ಮಾಡಿಕೊಂಡಿದ್ದೇವೆ. ಈಗಾಗಲೇ ವಿಡಿಯೋ ಯೂಟ್ಯೂಬ್‌ನಲ್ಲಿದೆ. ನೀನು ಹಣ ಕೊಡದೇ ಹೋದರೆ ಈ ವಿಡಿಯೋ ವೈರಲ್ ಆಗುತ್ತದೆ ಎಂದು ವಿದ್ಯಾರ್ಥಿಗೆ ಬೆದರಿಕೆ ಹಾಕಿದ್ದಾರೆ. ಹೀಗಾಗಿ, ಆತ ದಿಕ್ಕೇ ತೋಚದಂತಾಗಿ ಹಣ ನೀಡಿದ್ದಾನೆ ಎಂದು ಎಫ್‌ಐಆರ್‌ನಲ್ಲಿ ನಮೂದಿಸಲಾಗಿದೆ.

ಸುರತ್ಕಲ್: ದುಷ್ಕರ್ಮಿಗಳಿಂದ ಹತ್ಯೆಗೀಡಾಗಿದ್ದ ಫಾಝಿಲ್ ಸಹೋದರ ಆದಿಲ್ ಗೆ ಹಲ್ಲೆ.

Posted by Vidyamaana on 2023-02-08 16:23:20 |

Share: | | | | |


ಸುರತ್ಕಲ್: ದುಷ್ಕರ್ಮಿಗಳಿಂದ ಹತ್ಯೆಗೀಡಾಗಿದ್ದ ಫಾಝಿಲ್ ಸಹೋದರ  ಆದಿಲ್ ಗೆ ಹಲ್ಲೆ.

ಸುರತ್ಕಲ್: ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆಗೀಡಾಗಿದ್ದ ಫಾಝಿಲ್ ಅವರ ಸಹೋದರ ಆದಿಲ್ ಎಂಬವರಿಗೆ ಮೂವರು ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ಕಾಟಿಪಳ್ಳದ ಗಣೇಶ್ ಪುರ ಎಂಬಲ್ಲಿ ನಡೆದಿದೆ.

ಈ ವೇಳೆ ಸ್ಥಳದಲ್ಲಿದ್ದ ಸಾರ್ವಜನಿಕರು ಆರೋಪಿಗಳನ್ನು ಪೊಲೀಸರಿಗೆ ಒಪ್ಪಿಸಿದ್ದು, ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಮತ್ತೋರ್ವ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಸುರತ್ಕಲ್ ಪೊಲೀಸರು ಭೇಟಿ ನೀಡಿದ್ದಾರೆ.

ಗುತ್ತಿಗೆದಾರನ ಮನೆಯಲ್ಲಿ ಸಿಕ್ಕಿದ್ದು ಕಮಿಷನ್ ಹಣ, ತೆಲಂಗಾಣದ ಚುನಾವಣೆಗೆ ತೆಗೆದಿಟ್ಟ ಹಣ ; ನಳಿನ್ ಕುಮಾರ್ ಆರೋಪ

Posted by Vidyamaana on 2023-10-14 12:10:54 |

Share: | | | | |


ಗುತ್ತಿಗೆದಾರನ ಮನೆಯಲ್ಲಿ ಸಿಕ್ಕಿದ್ದು ಕಮಿಷನ್ ಹಣ, ತೆಲಂಗಾಣದ ಚುನಾವಣೆಗೆ ತೆಗೆದಿಟ್ಟ ಹಣ ; ನಳಿನ್ ಕುಮಾರ್ ಆರೋಪ

ಮಂಗಳೂರು: ಬೆಂಗಳೂರಿನ ಗುತ್ತಿಗೆದಾರರೊಬ್ಬರ ಮನೆಯಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿ ವಶಕ್ಕೆ ಪಡೆದ 42 ಕೋಟಿ ರೂಪಾಯಿ ನಗದು ಕಮಿಷನ್ ನೀಡಲು ತಂದಿಟ್ಟಿದ್ದ ಹಣ ಎಂಬ ಮಾಹಿತಿ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.


ಸುದ್ದಿಗಾರರೊಂದಿಗೆ ಮಾತನಾಡಿ, ಬೆಂಗಳೂರಿನಲ್ಲಿ ಅಂಬಿಕಾಪತಿ ಎಂಬ ಗುತ್ತಿಗೆದಾರನ ಮನೆಗೆ ಐಟಿ ದಾಳಿ ಆಗಿದೆ. ಕೆಲ ದಿನಗಳ ಹಿಂದೆ 600 ಕೋಟಿ ರೂ. ಬಾಕಿ ಹಣವನ್ನು ಸರ್ಕಾರ ಬಿಡುಗಡೆ ಮಾಡಿತ್ತು. ಈಗ ಅಲ್ಲಿ ಸಿಕ್ಕಿರುವುದು ಕಮಿಷನ್ ಹಣ ಎಂಬ ಮಾಹಿತಿ ಸಿಕ್ಕಿದೆ. ರಾಜ್ಯದಲ್ಲಿ ಇವತ್ತು ಎಟಿಎಂ ಸರ್ಕಾರ ಕೆಲಸ ಮಾಡುತ್ತಿದೆ ಎನ್ನುವುದಕ್ಕೆ ಇದೇ ಸಾಕ್ಷಿ. 


ಇದು ತೆಲಂಗಾಣದ ಚುನಾವಣೆಗೆ ಸಂಗ್ರಹಿಸಲಾದ ಹಣ ಎನ್ನಲಾಗುತ್ತಿದೆ. ಕೆಲವು ಅಧಿಕಾರಿಗಳೇ ಈ ಹಿಂದೆ ರಾಜ್ಯಪಾಲರಿಗೆ ಕಮಿಷನ್ ಬಗ್ಗೆ ದೂರು ಕೊಟ್ಟಿದ್ದರು. ನಾವು ಚುನಾವಣೆ ಹೊತ್ತಲ್ಲೇ ಇದು ಎಟಿಎಂ ಸರಕಾರ ಅಂದಿದ್ದೆವು ಎಂದರು. 


ರಾಜ್ಯದಲ್ಲಿ ಆಡಳಿತ ಹಳಿ ತಪ್ಪಿದೆ ಅನ್ನೋದಕ್ಕೆ ಸಾಕ್ಷಿ ಇದು. ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಯಾವುದೇ ಕೆಲಸಕ್ಕೆ ಹಿಂಜರಿಯಲ್ಲ. ಈಗಾಗಲೇ ಎರಡು ಗುತ್ತಿಗೆದಾರರು ಇವರ ಕಿರುಕುಳಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಐಟಿಯವರು ಯಾರ ಒತ್ತಡದಿಂದಲೂ ದಾಳಿಗಳನ್ನು ಮಾಡುವುದಿಲ್ಲ. ಗುತ್ತಿಗೆದಾರರಿಗೆ ಅನುದಾನ ಬಿಡುಗಡೆಯಾದ ಬೆನ್ನಲ್ಲೇ ಹಣ ಸಿಕ್ಕಿರೋದು ಅನುಮಾನ ಹುಟ್ಟಿಸಿದೆ ಎಂದರು.


ಇದೊಂದು ಭ್ರಷ್ಟಾಚಾರಿಗಳ ಬೆಂಗಾವಲಿಗಿರುವ ಕಲೆಕ್ಷನ್ ಮತ್ತು ಎಟಿಎಂ ಸರ್ಕಾರ. ಸುಳ್ಳು ಹೇಳಿ, ಭರವಸೆ ಕೊಟ್ಟು ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ ಎಂದ ಅವರು, ಇಡೀ ಕರ್ನಾಟಕ ಕತ್ತಲೆಯಲ್ಲಿದೆ, ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಆಗುತ್ತಿದೆ. ರೈತರಿಗೆ ವಿದ್ಯುತ್ ಇಲ್ಲ, ನಿದ್ದೆಗೆಟ್ಟರೂ ರೈತರಿಗೆ ಕರೆಂಟ್ ಇಲ್ಲ ಎಂದು ಕಿಡಿ ಕಾರಿದರು.

ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ: 11 ಮಂದಿಗೆ ನೋಟಿಸ್

Posted by Vidyamaana on 2023-12-11 21:13:30 |

Share: | | | | |


ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ: 11 ಮಂದಿಗೆ ನೋಟಿಸ್

ಉಡುಪಿ : ಆರೋಪಿ ಪ್ರವೀಣ್ ಚೌಗಲೆಗೆ ಸೂಕ್ತ ಭದ್ರತೆ ನೀಡಲು ಕಷ್ಟವಾದ ಕಾರಣ, ಆತನನ್ನು ಉಡುಪಿ ಸಬ್ ಜೈಲಿನಿಂದ ಪರಪ್ಪನ ಅಗ್ರಹಾರಕ್ಕೆ ಸ್ಥಳಾಂತರ ಮಾಡಲಾಗಿತ್ತು. ವಿಡಿಯೋ ಕಾನ್ಫರೆನ್ಸ್ ಮೂಲಕವೇ ವಿಚಾರಣೆಗೂ ವ್ಯವಸ್ಥೆ ಮಾಡಲಾಗಿದೆ. ಪರಿಸ್ಥಿತಿ ಇಷ್ಟೊಂದು ಸೂಕ್ಷ್ಮವಾಗಿರುವಾಗ, ಜನರ ಸಂಯಮವನ್ನು ಗೌರವಿಸಬೇಕಾದ ಇಲಾಖೆ ನೊಟೀಸು ನೀಡಿ ಮತ್ತೊಂದು ತಲೆನೋವು ಎದುರು ಹಾಕಿಕೊಂಡಂತಿದೆ.ಉಡುಪಿಯ ನೇಜಾರಿನಲ್ಲಿ (Udupi, Nezari)ನಡೆದ ನಾಲ್ವರ ಅಮಾನುಷ ಹತ್ಯೆ (Murder) ಪ್ರಕರಣದಲ್ಲಿ ಅನಪೇಕ್ಷಿತ ಬೆಳವಣಿಗೆಯೊಂದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ಆರೋಪಿ ಪ್ರವೀಣ್ ಚೌಗಲೆಯನ್ನು ಮಹಜರಿಗೆ ಕರೆತಂದಾಗ ಉಂಟಾದ ಗದ್ದಲ, ಲಾಠಿಚಾರ್ಜ್ ಸಂಬಂಧ 11 ಮಂದಿಗೆ ನೊಟೀಸು ನೀಡಿರುವ ಪೊಲೀಸ್ ಇಲಾಖೆ ನಡೆ ಗೊಂದಲ ಸೃಷ್ಟಿಸಿದೆ. ಈ ಪೈಕಿ ಕೊಲೆಯತ್ನ ಪ್ರಕರಣ ದಾಖಲಿಸಲು ಪೊಲೀಸ್ ಇಲಾಖೆ ಸಿದ್ದತೆ ನಡೆಸಿದೆ ಎಂಬ ವದಂತಿ ನೇಜಾರಿನ ಜನರನ್ನು (Villagers) ಮತ್ತಷ್ಟು ಆತಂಕಕ್ಕೆ (Angry) ತಳ್ಳಿದೆ.


ನೇಜಾರಿನ ಹತ್ಯಾಕಾಂಡ ಕುರಿತಂತೆ ಸಾರ್ವಜನಿಕರಲ್ಲಿ ಅದರಲ್ಲೂ ಮುಸ್ಲೀಂ ಸಮುದಾಯದಲ್ಲಿ ಇನ್ನಿಲ್ಲದ ಆಕ್ರೋಶ ಮಡುಗಟ್ಟಿದೆ. 15 ನಿಮಿಷದ ಅವಧಿಯಲ್ಲಿ ನಾಲ್ವರನ್ನು ಬಲಿ ಪಡೆದ ಪಾತಕಿ ಪ್ರವೀಣ್ ಚೌಗಲೆಗೆ ಗಲ್ಲು ಶಿಕ್ಷೆ ಆಗಬೇಕೆಂದು ಉಡುಪಿಯ ಜನತೆ ಒಕ್ಕೊರಲಿನಿಂದ ಒತ್ತಾಯಿಸುತ್ತಿದ್ದಾರೆ. ಘಟನೆ ನಡೆದು ಸಾಕಷ್ಟು ಸಮಯ ಕಳೆದರೂ ಜನರ ಕೋಪ ಮಾತ್ರ ತಣ್ಣಗಾಗಿಲ್ಲ.ಪ್ರಕರಣ ಇನ್ನೂ ಹಸಿಯಾಗಿರುವಾಗಲೇ, ಆರೋಪಿ ಪ್ರವೀಣನನ್ನು ನವೆಂಬರ್ 16 ರಂದುಸೂಕ್ತ ಭದ್ರತೆಗಳಿಲ್ಲದೆ ಘಟನೆ ನಡೆದ ಮನೆಗೆ ಪೊಲೀಸರು ಕರೆತಂದಿದ್ದರು. ಈ ವೇಳೆ ಉದ್ರಿಕ್ತ ಜನರು ಪ್ರವೀಣನ ಮೇಲೆ ಹಲ್ಲೆಗೆ ಮುಂದಾಗಿದ್ದರು. ಕೋಪಗೊಂಡಿದ್ದ ಜನರನ್ನು ಹಿಮ್ಮೆಟ್ಟಿಸಲು ಪೊಲೀಸರು ವಿಫಲರಾಗಿದ್ದರು. ನಂತರ ಲಾಠಿ ಚಾರ್ಜ್ ನಡೆಸಿದ್ದರು.


ಇದೀಗ ಈ ಘಟನೆ ಸಂಬಂಧ ಹಲ್ಲೆಗೆ ಮುಂದಾದ 11 ಮಂದಿಯನ್ನು ಗುರುತಿಸಿ ಮಲ್ಪೆ ಪೊಲೀಸರು ನೊಟೀಸು ನೀಡಿದ್ದಾರೆ. ಈ ಪೈಕಿ ಮೂವರ ಮೇಲೆ 307, ಅಂದರೆ ಆರೋಪಿಯ ಕೊಲೆ ಯತ್ನ ಸಂಬಂಧ ಪ್ರಕರಣ ದಾಖಲಿಸಲು ತಯಾರಿ ನಡೆಯುತ್ತಿದೆ ಎಂಬ ವದಂತಿ ಜನರ ಆಕ್ರೋಶಕ್ಕೆ ಕಾರಣವಾಗಿತ್ತು. ಆದರೆ ಸಂತ್ರಸ್ಥ ಕುಟುಂಬ ಮಧ್ಯಪ್ರವೇಶಿಸುವ ಮೂಲಕ ವಿವಾದ ತಿಳಿಗೊಂಡಿದೆ.ವಾಸ್ತವದಲ್ಲಿ ಪ್ರವೀಣ್ ಚೌಗಲೆಗೆ ಭದ್ರತೆ ನೀಡುವುದು ಪೊಲೀಸ್ ಇಲಾಖೆಗೆ ದೊಡ್ಡ ತಲೆನೋವಾಗಿತ್ತು. ಕೋರ್ಟ್ ಗೆ ಹಾಜರುಪಡಿಸುವಾಗಲೂ ಹತ್ತಾರು ಪೊಲೀಸರನ್ನು ನಿಯೋಜಿಸಲಾಗಿತ್ತು. ಆದರೆ ಮಹಜರು ವೇಳೆ ಮಾತ್ರ ಸೂಕ್ತ ರಕ್ಷಣೆ ಇಲ್ಲದೆ ಕರೆತರಲಾಗಿತ್ತು. ಸಹಜವಾಗಿಯೇ ಕೋಪದಲ್ಲಿದ್ದ ನಾಗರಿಕರು, ಆರೋಪಿಯತ್ತ ನುಗ್ಗಿ ದಾಳಿಗೆ ಮುಂದಾಗಿದ್ದರು.


ಈ ವೇಳೆ ಲಾಠಿಚಾರ್ಜ್ ನಡೆದು, ಬಳಿಕ ಸ್ಥಳೀಯರ ಪ್ರತಿಭಟನೆಯೂ ನಡೆದಿತ್ತು. ಲಾಠಿ ಚಾರ್ಜ್ ಮಾಡಿದ ಬಗ್ಗೆ ಜನರು ಕೋಪ ವ್ಯಕ್ತಪಡಿಸಿದ್ದರು. ಇದೀಗ ಈ ಗಲಾಟೆ ಸಂಬಂಧ ಹಲವರಿಗೆ ನೊಟೀಸು ನೀಡಲಾಗಿದೆ. ನಾಲ್ವರ ಹತ್ಯೆಯಾದರೂ ಸಂಯಮದಿಂದಿದ್ದ ಸ್ಥಳೀಯ ಜನತೆಯ ಬಗ್ಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿತ್ತು, ಇದೀಗ ಪೊಲೀಸರು ಮತ್ತೆ ಕೇಸ್ ಓಪನ್ ಮಾಡಿರೋದು, ಸಹಜವಾಗಿಯೇ ಇಲಾಖೆಯ ಮೇಲೆ ಕೋಪಕ್ಕೆ ಕಾರಣವಾಗಿದೆ. ಕೊನೆಯಲ್ಲಿ ಪೊಲೀಸರು ಜನರ ಆಕ್ರೋಶ ಅರಿತು, ವಿಚಾರಣೆ ನಡೆಸಿ ಠಾಣಾ ಜಾಮೀನಿನ ಮೂಲಕ ಬಿಡುಗಡೆಗೊಳಿಸಿದ್ದಾರೆ.ಏನೇ ಆದರೂ ಕಾನೂನು ಕ್ರಮ ಅನಿವಾರ್ಯ ಅನ್ನೋದು ಇಲಾಖೆಯ ಧೋರಣೆಯಾಗಿದೆ.

ಉಡುಪಿ ಜಯಲಕ್ಷ್ಮಿ ಸಿಲ್ಕ್ಸ್ ಬಟ್ಟೆ ಮಳಿಗೆಯಲ್ಲಿ ಮಿಸ್ ಫೈರಿಂಗ್

Posted by Vidyamaana on 2023-12-30 22:43:45 |

Share: | | | | |


ಉಡುಪಿ ಜಯಲಕ್ಷ್ಮಿ ಸಿಲ್ಕ್ಸ್ ಬಟ್ಟೆ ಮಳಿಗೆಯಲ್ಲಿ ಮಿಸ್ ಫೈರಿಂಗ್

ಉಡುಪಿ, ಡಿ.30: ನಗರದ ಪ್ರಸಿದ್ದ ಬಟ್ಟೆ ಮಳಿಗೆ ಜಯಲಕ್ಷ್ಮಿ ಸಿಲ್ಕ್ಸ್ ನಲ್ಲಿ ಶನಿವಾರ ಮಧ್ಯಾಹ್ನ ಗನ್ ಮಿಸ್‌ ಫೈರಿಂಗ್‌ ಆಗಿದ್ದು ಸಿಬ್ಬಂದಿಯೊಬ್ಬರು ಗಾಯಗೊಂಡ ಘಟನೆ ನಡೆದಿದೆ.


ಬಟ್ಟೆ ಮಳಿಗೆಯಲ್ಲಿ ಗ್ರಾಹಕರು ಯಾರೋ ಗನ್ ಬಿಟ್ಟು ಹೋಗಿದ್ದಾರೆ ಎನ್ನಲಾಗುತ್ತಿದ್ದು ಅದನ್ನು ಎತ್ತಿಕೊಂಡ ಸಿಬ್ಬಂದಿ ಆಪರೇಟ್‌ ಮಾಡಿ ಪರೀಕ್ಷಿಸಲು ಮುಂದಾಗಿದ್ದಾರೆ. ಈ ವೇಳೆ ಅಲ್ಲೇ ಇದ್ದ ಇನ್ನೋರ್ವ ಸಿಬ್ಬಂದಿಗೆ ಗುಂಡು ತಗುಲಿದ್ದು, ಗಾಯಗೊಂಡಿದ್ದಾರೆ. ಅವರನ್ನು ಕೂಡಲೇ ಉಡುಪಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.


ಘಟನಾ ಸ್ಥಳಕ್ಕೆ ಉಡುಪಿ ನಗರ ಪೊಲೀಸರು ದೌಡಾಯಿಸಿದ್ದು, ಗನ್‌ ವಶಕ್ಕೆ ಪಡೆದುಕೊಂಡಿದ್ದಾರೆ. ಗನ್‌ ಯಾರಿಗೆ ಸೇರಿದ್ದು, ಮಳಿಗೆಯಲ್ಲಿ ತಂದಿಟ್ಟಿದ್ದು ಯಾರು ಎನ್ನುವ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‌

ಆರ್ಯಾಪು ಗ್ರಾಪಂ: ಇಬ್ಬರು ಬಿಜೆಪಿ ಬೆಂಬಲಿತ ಸದಸ್ಯರು ಕಾಂಗ್ರೆಸ್ ಸೇರ್ಪಡೆ

Posted by Vidyamaana on 2023-08-14 08:59:16 |

Share: | | | | |


ಆರ್ಯಾಪು ಗ್ರಾಪಂ: ಇಬ್ಬರು ಬಿಜೆಪಿ ಬೆಂಬಲಿತ ಸದಸ್ಯರು ಕಾಂಗ್ರೆಸ್ ಸೇರ್ಪಡೆ

ಪುತ್ತೂರು: ಆರ್ಯಾಪು ಗ್ರಾಪಂನ ಇಬ್ಬರು ಗ್ರಾಪಂ ಸದಸ್ಯರು ಶಾಸಕರಾದ ಅಶೋಕ್ ರೈ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ   ಎಂ ಬಿ ವಿಶ್ವನಾಥ ರೈ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಣಕ್ಕೆ ಅಧಿಕೃತ ಸೇರ್ಪಡೆಯಾದರು. ಆರ್ಯಾಪು ಮೂರನೇ ವಾರ್ಡಿನ ಬಿಜೆಪಿ ಬೆಂಬಲಿತ ಸದಸ್ಯರಾದ ಪವಿತ್ರ ರೈ ಹಾಗೂ ಪೂರ್ಣಿಮಾ ರೈ ಕಾಂಗ್ರೆಸ್ ಸೇರಿದ ಗ್ರಾಪಂ ಸದಸ್ಯರು. ಗ್ರಾಪಂ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಬೆನ್ನಲ್ಲೇ ಬಿಜೆಪಿ ಸದಸ್ಯರಿಬ್ಬರು ಬಿಜೆಪಿ ತ್ಯಜಿಸಿ ಕಾಂಗ್ರೆಸ್ ಸೇರ್ಪಡೆಯಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ. 

ಶಾಸಕರಾದ ಅಶೋಕ್ ರೈ ,ಬ್ಲಾಕ್ ಅಧ್ಯಕ್ಷರಾದ ಎಂ ಬಿ ವಿಶ್ವನಾಥ ರೈ ಯವರು ಪಕ್ಷದ ದ್ವಜ ನೀಡಿ ಇಬ್ನರನ್ನೂ ಪಕ್ಷಕ್ಕೆ ಸೇರ್ಪಡೆಗೊಳಿಸಿದರು. ಈ ವೇಳೆ ಮಾತನಾಡಿದ ಶಾಸಕರು ಪಕ್ಷದ ಸಿದ್ದಾಂತ ಹಾಗೂ ಅಭಿವೃದ್ದಿ ಕಾರ್ಯಗಳನ್ನು‌ಮೆಚ್ಚಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ ಅವರಿಬ್ ರನ್ನೂ ಪಕ್ಷಕ್ಕೆ ಬರಮಾಡಿಕೊಂಡಿದ್ದೇವೆ. ಮುಂದಿನ ದಿನಗಳಲ್ಲಿ ಅವರ ವಾರ್ಡಿನಲ್ಲಿ ಅಭಿವೃದ್ದಿ ಕೆಲಸಗಳು ನಡೆಯಲಿದೆ ಎಂದು ಹೇಳಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ ಬಿ ವಿಶ್ವನಾಥ ರೈ ಮಾತನಾಡಿ ಪಕ್ಷದ ಸಿದ್ದಾಂತ ಹಾಗೂ ನಮ್ಮ ಶಾಸಕರ ಅಭಿವೃದ್ದಿ ಕೆಲಸಗಳನ್ನು‌ಮೆಚ್ಚಿ ನಮ್ಮ ಜೊತೆ ಸೇರಿಕೊಂಡಿದ್ದಾರೆ.ಮುಂದಿನ ದಿನಗಳಲ್ಲಿ ಆರ್ಯಾಪು ಗ್ರಾಪಂ ನಲ್ಲಿ ಅಭಿವೃದ್ದಿ ಪರ್ವ ಆರಂಭವಾಗಲಿದೆ ಎಂದು ಹೇಳಿದರು.



ನಮ್ಮನ್ನು ಕಡೆಗಣಿಸಿದ್ದಾರೆ,ಪಕ್ಷದಲ್ಲಿ ಗೌರವ ಇಲ್ಲ


ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಇಬ್ಬರು ಗ್ರಾಪಂ ಸದಸ್ಯರು ಮಾತನಾಡಿ ನಾವು ಕಳೆದ 20 ವರ್ಷಗಳಿಗಿಂತಲೂ ಅಧಿಕ ಕಾಲದಿಂದ ಬಿಜೆಪಿಗಾಗಿ ಕೆಲಸ ಮಾಡಿದ್ದೆವು. ಪಕ್ಷದಲ್ಲಿ ನಮ್ಮನ್ನು ಕಡೆಗಣಿಸಲಾಗುತ್ತಿದೆ ಮತ್ತು ಕಾರ್ಯಕರ್ತರಿಗೆ ಗೌರವ ಇಲ್ಲ. ಅಭಿವೃದ್ದಿ ಕೆಲಸಗಳನ್ನು ಮಾಡುವಲ್ಲಿ ಬಿಜೆಪಿ ಹಿಂದೆ ಇದೆ. ಪುತ್ತೂರು ಶಾಸಕರ ಬಡವರ ಪರ ಇರುವ ಕಾಳಜಿ ಮತ್ತು ಅವರ ಅಭಿವೃದ್ದಿ ಯೋಜನೆಗಳು, ಕಾಂಗ್ರೆಸ್ ಸರಕಾರದ ಬಡವರ ಗ್ಯಾರಂಟಿ ಯೋಜನೆಗಳು ನಮ್ಮನ್ನು ಕಾಂಗ್ರೆಸ್ ಸೇರುವಂತೆ ಮಾಡಿದೆ ಎಂದು ತಿಳಿಸಿದ್ದಾರೆ.

ಈ ವೇಳೆ ಬ್ಲಾಕ್ ಕಾಂಗ್ರೆಸ್ ಎಸ್ ಟಿ ಘಟಕದ ಅಧ್ಯಕ್ಷ ಮಹಾಲಿಂಗ ನಾಯ್ಕ್, ಸಾಮಾಜಿಕ ಜಾಲತಾಣದ ಬ್ಲಾಕ್ ಘಟಕದ ಅಧ್ಯಕ್ಷ ಸಿದ್ದಿಕ್ ಸುಲ್ತಾನ್ ಸೇರಿದಂತೆ ಪಕ್ಷದ ಮುಖಂಡರು ಉಪಸ್ಥಿತರಿದ್ದರು.



Leave a Comment: