ಮೃತಪಟ್ಟ ಗರ್ಭಿಣಿ ಮನೆಗೆ ಭೇಟಿ ನೀಡಿದ ಪುತ್ತಿಲ

ಸುದ್ದಿಗಳು News

Posted by vidyamaana on 2023-06-29 12:19:28 |

Share: | | | | |


ಮೃತಪಟ್ಟ ಗರ್ಭಿಣಿ ಮನೆಗೆ ಭೇಟಿ ನೀಡಿದ ಪುತ್ತಿಲ

ಪುತ್ತೂರು: ಹೊಸ ಉದ್ಯಮವೊಂದರ ಉದ್ಘಾಟನಾ ಕಾರ್ಯಕ್ರಮ ಮುಗಿಸಿ ಹಿಂದಿರುಗಿ ಬರುವಾಗ ಅರುಣ್ ಕುಮಾರ್ ಪುತ್ತಿಲ ಹೆರಿಗೆಗೆ ದಾಖಲಾಗಿದ್ದ ಗರ್ಭಿಣಿ ಮೃತಪಟ್ಟ ಮನೆಗೆ ತೆರಳಿ ಸಾಂತ್ವನ ಹೇಳಿದರು.


ಕಾರ್ಯಕ್ರಮ ಮುಗಿಸಿ ಬರುವಾಗ ರಸ್ತೆಯಲ್ಲಿ ಜನ ಸೇರಿದ್ದನ್ನು ನೋಡಿ ವಿಚಾರಿಸಿದಾಗ ಮೃತಪಟ್ಟ ಬಗ್ಗೆ ತಿಳಿದುಬಂದಿದ್ದು,  ನಂತರ ಮನೆಗೆ ತೆರಳಿ ಸಾಂತ್ವನ ಹೇಳಿದರು. 

ಶೇಕಮಲೆ ಬೊಳ್ಳಾಡಿ ಇಬ್ರಾಹಿಂ ಎಂಬವರ ಪತ್ನಿ 9 ತಿಂಗಳ ಗರ್ಭಿಣಿ ಹಸೀನಾ (29) ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಾಗಿದ್ದರು.  ಜೂ.28 ರಂದು ಹೆರಿಗೆ ಸಂದರ್ಭ ಹೃದಯಾಘಾತದಿಂದ ನಿಧನರಾದರು. 

ಹೆರಿಗೆಯಲ್ಲಿ ಮಗು ಜೀವಂತವಾಗಿದ್ದು, ಎಜೆ ಆಸ್ಪತ್ರೆಯ ವೈದ್ಯರಿಗೆ ಕರೆ ಮಾಡಿ ಅರುಣ್ ಪುತ್ತಿಲರು ಮಗುವಿನ ಆರೋಗ್ಯ ವಿಚಾರಿಸಿದರು. 

ಈ ಹಿಂದೆಯೂ ಅಪಘಾತ ನಡೆದ ಸಂದರ್ಭ ಧರ್ಮ ನೋಡದೆ ತನ್ನದೇ  ಕಾರಿನಲ್ಲಿ ರಕ್ತದ ಮಡುವಿನಲ್ಲಿದ್ದ  ಗಾಯಳುಗಳನ್ನು ಹಾಕಿಕೊಂಡು ಹೋದ ಉದಾಹರಣೆಯೂ ಇದೆ. ಅವರ ಕಾರಿನಲ್ಲಿ ಅಪಘಾತಗೊಂಡ  ಮುಸ್ಲಿಂ ಮಗುವೊಂದು ಮೃತಪಟ್ಟಿದೆ. 

ಮೊನ್ನೆಯಷ್ಟೇ ಮಂಗಳೂರಿನಿಂದ ಬರುತಿದ್ದಾಗ ರಸ್ತೆ ಬದಿಯ ಚರಂಡಿಗೆ ಬಿದ್ದಿದ್ದ ಕಾರನ್ನು ಮೇಲೆತ್ತಲು ಸಹಾಯ ಮಾಡಿದ್ದರು.

 Share: | | | | |


ಎಸ್.ಡಿ.ಎಂ. ಕಾನೂನು ಕಾಲೇಜಿನಲ್ಲಿ ಅಂತ‌ರ್ ಕಾಲೇಜು ತೆಂಕುತಿಟ್ಟು ಯಕ್ಷಗಾನ ಸ್ಪರ್ಧೆ – ಯಕ್ಷೋತ್ಸವ-2024

Posted by Vidyamaana on 2024-02-25 09:04:02 |

Share: | | | | |


ಎಸ್.ಡಿ.ಎಂ. ಕಾನೂನು ಕಾಲೇಜಿನಲ್ಲಿ ಅಂತ‌ರ್ ಕಾಲೇಜು ತೆಂಕುತಿಟ್ಟು ಯಕ್ಷಗಾನ ಸ್ಪರ್ಧೆ – ಯಕ್ಷೋತ್ಸವ-2024

ಮಂಗಳೂರು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಹಾಗೂ ಸಂಶೋಧನಾ ಕೇಂದ್ರದ ವತಿಯಿಂದ ಮೂರು ದಿನಗಳ ಕಾಲ ನಡೆಯುವ 32ನೇ ವರ್ಷದ ಅಂತ‌ರ್ ಕಾಲೇಜು ತೆಂಕುತಿಟ್ಟು ಯಕ್ಷಗಾನ ಸ್ಪರ್ಧೆ ‘ಯಕ್ಷೋತ್ಸವ-2024’ ಕಾರ್ಯಕ್ರಮವು ದಿನಾಂಕ 23-02-2024 ರಂದು ಕಾಲೇಜಿನ ಆವರಣದಲ್ಲಿ ಆರಂಭಗೊಂಡಿತು.

ಯಕ್ಷೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪುತ್ತೂರಿನ ಹಿರಿಯ ವಕೀಲರಾದ  ಮಹೇಶ್ ಕಜೆ “ಯಕ್ಷಗಾನ ಪರಿಪೂರ್ಣ ಕಲೆಯಾಗಿದೆ. ಯಕ್ಷಗಾನ ನಮ್ಮ ಮಣ್ಣಿನ ಶ್ರೀಮಂತ ಗಂಡು ಕಲೆಯಾಗಿದ್ದು, ಇದನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಬೆಳೆಸಲು ‘ಯಕ್ಷೋತ್ಸವ’ದಂತಹ ವೇದಿಕೆ ಸೂಕ್ತವಾಗಿದೆ. ಎಸ್‌.ಡಿ.ಎಂ. ಕಾನೂನು ಕಾಲೇಜಿನಲ್ಲಿ ಹಲವಾರು ಜನರ ಪರಿಶ್ರಮದಿಂದ ಇಂದು ‘ಯಕ್ಷೋತ್ಸವ’ ಮುಂದುವರೆಯುತ್ತಿದೆ. ವಿದ್ಯಾರ್ಥಿಗಳ ತಂಡ ಮುಂದಿಟ್ಟ ಹೆಜ್ಜೆಗಳಿಂದಾಗಿ 32 ವರ್ಷಗಳಿಂದ ಯಶಸ್ವಿಯಾಗಿ ನಡೆಯುತ್ತಿದೆ” ಎಂದರು.


ಕಾಲೇಜಿನ ಪೂರ್ವ ವಿದ್ಯಾರ್ಥಿ ಸಂಘದ ಅಧ್ಯಕ್ಷ ಡಾ. ದೇವರಾಜ್ ಕೆ. ಮಾತನಾಡಿ “ಕಳೆದ 32 ವರ್ಷಗಳಿಂದ ಆಡಳಿತ ಮಂಡಳಿಯ ಸಹಕಾರದಿಂದ ಉತ್ತಮ ಕಾರ್ಯ ನಡೆಯುತ್ತಿದೆ. ಕೆಲವು ಅನಿವಾರ್ಯ ಸಂದರ್ಭದಲ್ಲಿ ನಿಲ್ಲಿಸುವ ಹಂತಕ್ಕೆ ಬಂದಾಗ ಆಡಳಿತ ಮಂಡಳಿ ಹಾಗೂ ಹಳೆ ವಿದ್ಯಾರ್ಥಿಗಳ ಸಹಕಾರದಿಂದ ಮುನ್ನಡೆಸಲು ಸಾಧ್ಯವಾಗಿದೆ” ಎಂದರು. ‘ಯಕ್ಷೋತ್ಸವ’ದ ಸಂಚಾಲಕರಾದ ಪ್ರೊ. ಪುಷ್ಪರಾಜ್ ಕೆ. ಮಾತನಾಡಿ “ಆರಂಭದ ದಿನಗಳಿಂದ ಇಲ್ಲಿಯ ತನಕ ವಿವಿಧ ರೀತಿಯಲ್ಲಿ ಹೊಸತನಕ್ಕೆ ‘ಯಕ್ಷೋತ್ಸವ’ ಸಾಕ್ಷಿಯಾಗಿದೆ” ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ‘ಯಕ್ಷೋತ್ಸವ’ದ ಮಾಜಿ ಸಂಚಾಲಕ ನರೇಶ್ ಮಲ್ಲಿಗೆಮಾಡು ಹಾಗೂ ರಂಜಿತ್ ನಾಯ್ಕ ಅವರನ್ನು ಸನ್ಮಾನಿಸಲಾಯಿತು. ಕಾಲೇಜು ಪ್ರಾಂಶುಪಾಲ ಡಾ. ತಾರಾನಾಥ್ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಪುರುಷೋತ್ತಮ ಭಟ್‌ ಶುಭ ಹಾರೈಸಿದರು. ಯಕ್ಷೋತ್ಸವ ಸಲಹಾ ಸಮಿತಿ ಸದಸ್ಯ, ಪೂರ್ವ ವಿದ್ಯಾರ್ಥಿ ಮತ್ತು ಯಕ್ಷೋತ್ಸವ ಆರಂಭಿಸಿದ ತಂಡದ ಕಲಾವಿದ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಡಾ. ಚಂದ್ರಲೇಖ ಸ್ವಾಗತಿಸಿ, ವಿದ್ಯಾರ್ಥಿನಿ ಪ್ರಮಯಿ ನಿರೂಪಿಸಿ, ಯಕ್ಷೋತ್ಸವದ ಕಾರ್ಯನಿರ್ವಹಣಾ ಕಾರ್ಯದರ್ಶಿ ದಿಶಾ ವಂದಿಸಿದರು.

ಮಂಗಳೂರು ಮಾದಕ ವಸ್ತು ಕೊಕೇನ್ ಪತ್ತೆ: ಇಬ್ಬರು ಆರೋಪಿಗಳ ಬಂಧನ

Posted by Vidyamaana on 2024-03-19 08:03:50 |

Share: | | | | |


ಮಂಗಳೂರು ಮಾದಕ ವಸ್ತು ಕೊಕೇನ್ ಪತ್ತೆ: ಇಬ್ಬರು ಆರೋಪಿಗಳ ಬಂಧನ

ಮಂಗಳೂರು, ಮಾ.20: ಗೋವಾದಿಂದ ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ಮಾದಕ ವಸ್ತುವಾದ ಕೊಕೇನ್ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಪತ್ತೆ ಹಚ್ಚಿ 35 ಗ್ರಾಂ ಕೊಕೇನ್ ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಅಂಬ್ಲಮೊಗರು ಕೊಳಂಜಹಿಟ್ಟು ಸದಕತ್.ಯು ಯಾನೆ ಶಾನ್ ನವಾಝ್(31) ಮತ್ತು ಅಂಬ್ಲಮೊಗರು ಸೇನರಬೆಟ್ಟು ಅಶ್ಫಕ್ ಯಾನೆ ಅಶ್ಫಾ (25) ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ಆರೋಪಿಗಳ ವಶದಲ್ಲಿದ್ದ ದ್ವಿಚಕ್ರ ವಾಹನ ಮತ್ತು ಅದರಲ್ಲಿ ಸಾಗಾಟ ಮಾಡುತ್ತಿದ್ದ 2,72,000 ರೂ. ಮೌಲ್ಯದ 35 ಗ್ರಾಂ ನಿಷೇಧಿತ ಮಾದಕ ವಸ್ತು ಕೊಕೇನ್, 3 ಮೊಬೈಲ್ ಫೋನ್ ಗಳು, ಡಿಜಿಟಲ್ ತೂಕ ಮಾಪಕ, ನಗದು ರೂ. 5560 ನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 4,00,000 ಆಗಿರುತ್ತದೆ. ಈ ಬಗ್ಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.ಮಂಗಳೂರು ನಗರಕ್ಕೆ ಗೋವಾದಿಂದ ಮಾದಕ ವಸ್ತುವಾದ ಕೊಕೇನ್ ಅನ್ನು ಖರೀದಿಸಿಕೊಂಡು ಸಾಗಾಟ, ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಇನ್ಸ್‌ಪೆಕ್ಟರ್ ಶ್ಯಾಮ್ ಸುಂದರ್ ಎಚ್ ಎಂ ನೇತೃತ್ವದ ಸಿಸಿಬಿ ಪೊಲೀಸರು ಉಳ್ಳಾಲ ತಾಲೂಕು ಆಂಬ್ಲಮೊಗರು ಗ್ರಾಮದ ಎಲಿಯಾರ್ ಪದವು ಮೈದಾನದ ಬಳಿ ದ್ವಿಚಕ್ರ ವಾಹನದಲ್ಲಿ ಕೊಕೇನ್ ಮಾರಾಟ ಮತ್ತು ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ಪತ್ತೆ ಹಚ್ಚಿದರು.

ಮಾದಕ ವಸ್ತು ಮಾರಾಟ ಮತ್ತು ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿಗಳ ಪೈಕಿ ನವಾಝ್ ವಿರುದ್ಧ ಈ ಹಿಂದೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಸಾಗಾಟದ ಪ್ರಕರಣ ಹಾಗೂ ಹಲ್ಲೆ ಪ್ರಕರಣ ದಾಖಲಾಗಿರುತ್ತದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.ನಿರೀಕ್ಷಕರಾದ ಶ್ಯಾಮ್ ಸುಂದರ್ ಎಚ್ ಎಂ, ಪಿಎಸ್‌ಐ ಗಳಾದ ಶರಣಪ್ಪ ಭಂಡಾರಿ ಮತ್ತು ಸಿಸಿಬಿ ಸಿಬ್ಬಂದಿ ಪಾಲ್ಗೊಂಡಿದ್ದರು.

ಮಾ.23-24 : ಕೆಮ್ಮಿಂಜೆ ಶ್ರೀ ರಾಮ ಭಜನಾ ಮಂದಿರದ ಪುನರ್ ಪ್ರತಿಷ್ಠಾಪನೆ | ಆಮಂತ್ರಣ ಪತ್ರಿಕೆ ಬಿಡುಗಡೆ.

Posted by Vidyamaana on 2024-04-06 16:13:34 |

Share: | | | | |


ಮಾ.23-24 : ಕೆಮ್ಮಿಂಜೆ ಶ್ರೀ ರಾಮ ಭಜನಾ ಮಂದಿರದ ಪುನರ್ ಪ್ರತಿಷ್ಠಾಪನೆ | ಆಮಂತ್ರಣ ಪತ್ರಿಕೆ ಬಿಡುಗಡೆ.

ಪುತ್ತೂರು: ಶ್ರೀ ರಾಮ ಭಜನಾ ಮಂದಿರ ಟ್ರಸ್ಟ್ ವತಿಯಿಂದ ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ-ಶ್ರೀ ಮಹಾವಿಷ್ಣು ದೇವಸ್ಥಾನದ ವಠಾರದಲ್ಲಿರುವ ಶ್ರೀ ರಾಮ ಭಜನಾ ಮಂದಿರದ ಪುನರ್ ಪ್ರತಿಷ್ಠಾಪನೆ ಏ.23 ಹಾಗೂ 24 ರಂದು ನಡೆಯಲಿದ್ದು, ಈ ಪ್ರಯುಕ್ತ ಆಮಂತ್ರಣ ಪತ್ರಿಕೆಯನ್ನು ಇಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬಿಡುಗಡೆ ಮಾಡಲಾಯಿತು.

ಮೊದಲಿಗೆ ದೇವಸ್ಥಾನ ಗರ್ಭಗುಡಿಯಲ್ಲಿ ದೇವಸ್ಥಾನದ ಪ್ರಧಾನ ಅರ್ಚಕ ವಸಂತ ಕೆದಿಲಾಯರು ಕಾರ್ಯಕ್ರಮದ ಯಶಸ್ಸಿಗಾಗಿ ಪ್ರಾರ್ಥನೆ ನೆರವೇರಿಸಿ ಪ್ರಸಾದ ನೀಡಿದರು.


ಈ ಘಟನೆ ದುಬೈನಲ್ಲಿ ಆಗ್ತಿದ್ರೆ ಕಥೆನೇ ಬೇರೆ ಇತ್ತು – ಕೊಲೆಗಾರನಿಗೆ ಮರಣ ದಂಡನೆಯಾಗ್ಬೇಕು

Posted by Vidyamaana on 2023-08-27 01:52:31 |

Share: | | | | |


ಈ ಘಟನೆ ದುಬೈನಲ್ಲಿ ಆಗ್ತಿದ್ರೆ ಕಥೆನೇ ಬೇರೆ ಇತ್ತು – ಕೊಲೆಗಾರನಿಗೆ ಮರಣ ದಂಡನೆಯಾಗ್ಬೇಕು

ಪುತ್ತೂರು: ದೇಶದಲ್ಲಿ ಕಾನೂನು ಕಠಿಣವಾಗಬೇಕಾದ ಅವಶ್ಯಕತೆಯಿದ್ದು ದುಬೈ ಮಾದರಿಯ ಕಾನೂನು ಇಲ್ಲಿ ಜಾರಿಗೆ ಬರಬೇಕಾದ ಅನಿವಾರ್ಯತೆಯಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಎರಡು ದಿನಗಳ ಹಿಂದೆ ಪುತ್ತೂರಿನಲ್ಲಿ ಪದ್ಮರಾಜ ಎಂಬಾತನಿಂದ ಕೊಲೆಯಾದ ವಿಟ್ಲ ಕುದ್ದುಪದವು ಸಮೀಪದ ಗೌರಿ ಅವರ ಮನೆಗೆ ಭೇಟಿ ನೀಡಿದ ವೇಳೆ ಅವರು ಮಾತನಾಡಿದರುನಮ್ಮಲ್ಲಿ ನಡೆದಂತಹ ಘಟನೆ ದುಬೈಯಲ್ಲಿ

ನಡೆಯುತ್ತಿದ್ದರೆ ಒಂದು ವಾರದಲ್ಲಿ ಇಲ್ಲವೇ ಹತ್ತು

ವಿಧಿಸುತ್ತಿದ್ದರು. ಕೊಲೆಗಾರರಿಗೆ,

ದಿನದೊಳಗೆ ಅವರಿಗೆ ಮರಣ ದಂಡನೆ ಶಿಕ್ಷೆ ಅತ್ಯಾಚಾರಿಗಳಿಗೆ ಅದೇ ರೀತಿಯ ಶಿಕ್ಷೆ ಇಲ್ಲೂ ಜಾರಿಯಾಗಬೇಕು. ಅಂತಹ ಶಿಕ್ಷೆ ಜಾರಿಯಾದಾಗಲೇ ಇಂತಹ ದುಷ್ಟ ಕೃತ್ಯಗಳನ್ನು, ಸಮಾಜ ವಿದ್ರೋಹಿ ಕೆಲಸಗಳನ್ನು ಮಟ್ಟ ಹಾಕಲು ಸಾಧ್ಯ ಎಂದು ಅವರು ಹೇಳಿದರುಕಾನೂನಿನ ಭಯ ಇಲ್ಲದೆ ಇರುವುದೇ ಎಂದು ಅನೇಕ ಕೆಟ್ಟ ಚಟುವಟಿಕೆಗಳಿಗೆ ಕಾರಣವಾಗುತ್ತಿದೆ. ಕೊಲೆ ಮಾಡಿ ಜೈಲಿಗೆ ಹೋದವರು ವಾಪಸ್ ಬಂದು ರಾಜಾರೋಷವಾಗಿ ತಿರುಗಾಡುತ್ತಾರೆ. ಅವರಿಗೆ ಸಮಾಜದಲ್ಲಿ ವಿಶೇಷ ಗೌರವ ಸಿಗುವ ಕಾರ್ಯಗಳು ಕೆಲವು ನಡೆಯುತ್ತಿದೆ. ಹಾಗಾಗಿ ಇಂತಹ ಕೃತ್ಯ ಎಸಗಿದವರಿಗೆ ಮರಣ ದಂಡನೆ ಶಿಕ್ಷೆ ಆಗಬೇಕು ಎಂದು ಅಶೋಕ್ ರೈ ಹೇಳಿದರು.


ಆರೋಪಿಗೆ ಹೇಗಾದರೂ ಶಿಕ್ಷೆ ಕೊಡಿಸಲೇಬೇಕು, ಆತನನ್ನು ಬಿಟ್ರೆ ಇನ್ನೂ ಹೀಗೆಯೇ ಮಾಡುತ್ತಾನೆ. ಇಷ್ಟು ಸಣ್ಣ ಹುಡುಗಿ ಸತ್ತ ಮೇಲೆ ಆತನೂ ಹೋಗಬೇಕು ಎಂದು ಶಾಸಕರಿಗೆ ಮೃತ ಗೌರಿಯವರತಾಯಿ ಸೀತಾ ಅವರು ಮನವಿ ಸಲ್ಲಿಸಿದರು. ಈ ವೇಳೆ ಅವರಿಗೆ ಉತ್ತರಿಸಿದ ಶಾಸಕರು, ನಮಲ್ಲಿರುವುದು ಹಳೆಯ ಕಾನೂನು. ಕೊಲೆ ಮಾಡಿದವರು 6 ತಿಂಗಳಲ್ಲಿ ಹೊರಗೆ ಬರುತ್ತಾರೆ.ಹಾಗೆ ಬರುವಾಗ ಪದ್ಮರಾಜೆ ಎಂದಿರುವವನು ಪದ್ಮಣ್ಣೆ ಆಗುತ್ತಾನೆ. ಇದು ನಮ್ಮ ಜನರ ಪರಿಸ್ಥಿತಿ. ಇದು ಕಡಿಮೆಯಾಗಬೇಕು. ಒಂದೆರಡು ಜನರಿಗೆ ಮರಣದಂಡನೆ ಶಿಕ್ಷೆಯಾದರೆ ಇದೆಲ್ಲವೂ ನಿಲ್ಲುತ್ತದೆ. ಕೆಲವೊಂದು ಬೇರೆ ಕೇಸ್‌ಗಳಲ್ಲಿ ಶಿಕ್ಷೆ ಆಗಲು 15 ವರ್ಷ ಬೇಕಾಗುತ್ತದೆ. ಆದರೆ ಇಂತಹ ಕೇಸ್‌ಗಳಲ್ಲಿ 1 ವರ್ಷದ ಒಳಗೆ ಶಿಕ್ಷೆ  ನೀಡಿದರೆ ಕಾನೂನಿನ 

ಬಗ್ಗೆ ಭಯ ಬರುತ್ತದೆ. ಕಾನೂನು ಮಾಡುವುದು ನಾವೇ ಜನಪ್ರತಿನಿಧಿಗಳು, ಕಾನೂನು ಬದಲಾವಣೆ ಮಾಡುವ ಅವಶ್ಯ ಕತೆ ಇದೆ ಎಂದು ಶಾಸಕರು ಉತ್ತರಿಸಿದರು


ಈ ಸಂದರ್ಭದಲ್ಲಿ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ ಡಾ.ರಾಜಾರಾಮ್ ಕೆ.ಬಿ., ಮಾಜಿ ಜಿ.ಪಂ. ಉಪಾಧ್ಯಕ್ಷ ಎಂ.ಎಸ್‌. ಮಹಮ್ಮದ್, ವಿಟ್ಲ-ಉಪ್ಪಿನಂಗಡಿ ಬ್ಲಾಕ್‌ ಯುವ ಕಾಂಗ್ರೆಸ್‌ ಅಧ್ಯಕ್ಷ ಫಾರೂಕ್ ಪೆರ್ನೆ, ಜಿಲ್ಲಾ ಅಲ್ಪಸಂಖ್ಯಾತ ಘಟಕದ ಜಿಲ್ಲಾ ಕಾರ್ಯದರ್ಶಿ ನಝೀರ್ ಮಠ, ಪುತ್ತೂರು ಯುವ ಕಾಂಗ್ರೆಸ್‌ ಅಧ್ಯಕ್ಷ ಶ್ರೀಪ್ರಸಾದ್ ಪಾಣಾಜೆ, ಕಾಂಗ್ರೆಸ್‌ ಮುಖಂಡರಾದ ಪ್ರಹ್ಲಾದ್ ಬೆಳ್ಳಿಪ್ಪಾಡಿ ಸೇರಿದಂತೆ ಸ್ಥಳೀಯ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

ವಿಟ್ಲ : ಮಹಿಳೆಯ ಜೊತೆ ಅಸಭ್ಯ ವರ್ತನೆ ಪ್ರಕರಣ : ಆರೋಪಿ ಅಬೂಬಕ್ಕರ್ ಬಂಧನ.

Posted by Vidyamaana on 2023-05-17 06:16:59 |

Share: | | | | |


ವಿಟ್ಲ : ಮಹಿಳೆಯ ಜೊತೆ ಅಸಭ್ಯ ವರ್ತನೆ ಪ್ರಕರಣ : ಆರೋಪಿ ಅಬೂಬಕ್ಕರ್ ಬಂಧನ.

ವಿಟ್ಲ : ಮಹಿಳೆಯ ಜೊತೆ ಅಸಭ್ಯ ರೀತಿಯಲ್ಲಿ ವರ್ತಿಸಿದ ಘಟನೆಗೆ ಸಂಬಂಧಿಸಿದಂತೆ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ.

ಕನ್ಯಾನದ ಅಬೂಬಕ್ಕರ್ (46) ಬಂಧಿತ ಆರೋಪಿಈತ ಮೋಟಾರ್ ಸೈಕಲ್ ನಲ್ಲಿ ಬಂದು ದಾರಿ ಕೇಳುವ ನೆಪದಲ್ಲಿ ಮಹಿಳೆಯ ಜೊತೆ ಅಸಭ್ಯವಾಗಿ ವರ್ತಿಸಿದ್ದ.

ಆರೋಪಿ ಪತ್ತೆಯ ಕಾರ್ಯದಲ್ಲಿ ವಿಟ್ಲ ಠಾಣೆಯ ಪೊಲೀಸ್ ನಿರೀಕ್ಷಕರಾದ ನಾಗರಾಜ್‌ ಹೆಚ್ ಈ ರವರ ಮಾರ್ಗದರ್ಶನದಂತೆ ವಿಟ್ಲ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಕಾರ್ತಿಕ್ ಕಾತರಕಿ ಹಾಗೂ ಸಿಬ್ಬಂದಿಗಳಾದ ಹೆಚ್‌ಸಿ ರಕ್ಷಿತ್ ಮತ್ತು ಪಿಸಿ ಹೇಮರಾಜ ರವರು ಪಾಲ್ಗೊಂಡಿದ್ದರು.

ಮಂಗಳೂರು: ಅಪಘಾತದಲ್ಲಿ ಇಬ್ಬರು ಮೃತಪಟ್ಟ ಪ್ರಕರಣ: ತುಳು ಕಾಮಿಡಿಯನ್ ಅರ್ಪಿತ್ ಬಂಧನ

Posted by Vidyamaana on 2023-02-04 06:03:37 |

Share: | | | | |


ಮಂಗಳೂರು: ಅಪಘಾತದಲ್ಲಿ ಇಬ್ಬರು ಮೃತಪಟ್ಟ ಪ್ರಕರಣ: ತುಳು ಕಾಮಿಡಿಯನ್ ಅರ್ಪಿತ್ ಬಂಧನ

ಮಂಗಳೂರು: ಕಾರು ಡಿಕ್ಕಿಯಾಗಿ ಇಬ್ಬರ ಸಾವಿಗೆ ಕಾರಣವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ತುಳು ಸ್ಟ್ಯಾಂಡ್ ಆಫ್ ಕಾಮಿಡಿಯನ್ ಅರ್ಪಿತ್ ಅವರನ್ನು ಬಂಧಿಸಲಾಗಿದೆ.ಮಂಗಳೂರು ಹೊರ ವಲಯದ ಮುಲ್ಕಿ ಸಮೀಪದ ಪಡುಪಣಂಬೂರು ಪೆಟ್ರೋಲ್ ಬಂಕ್ ಬಳಿ ಮಂಗಳವಾರ ಮಧ್ಯರಾತ್ರಿ ಕಾರು ಢಿಕ್ಕಿ ಹೊಡೆದು ಇಬ್ಬರು ಸಾವನ್ನಪ್ಪಿ, ಓರ್ವ ಗಂಭೀರ ಗಾಯಗೊಂಡಿದ್ದ. ಘಟನೆಯ ಬಳಿಕ ಪರಾರಿಯಾಗಿದ್ದ ಆರೋಪಿ ಕಾರು ಚಾಲಕ ಅರ್ಪಿತ್ ಅವರನ್ನು ಉತ್ತರ ಟ್ರಾಫಿಕ್ ಪೊಲೀಸರು ಕಾರು ಸಮೇತ ಬಂಧಿಸಿದ್ದಾರೆಎನ್ನಲಾಗಿದೆ.ಮಧ್ಯಪ್ರದೇಶದ ಇಂದೋರ್‌ನಿಂದ ಕೇರಳ ಕಡೆಗೆ ಹೋಗುತ್ತಿದ್ದ ಲಾರಿಯೊಂದರ ಟಯರ್ ಪಡುಪಣಂಬೂರು ಬಳಿ ಪಂಕ್ಚರ್ ಆಗಿತ್ತು. ಲಾರಿಯಲ್ಲಿದ್ದ ಮಧ್ಯಪ್ರದೇಶ ನಿವಾಸಿಗಳಾದ ಬಬುಲು(23), ಆಚಲ್ ಸಿಂಗ್ (30) ಹಾಗೂ ಕೇರಳ ನಿವಾಸಿ ಅನೀಶ್(42) ಎಂಬವರು ಕೆಳಗಿಳಿದು ಹೆದ್ದಾರಿ ಬದಿಯಲ್ಲಿ ಟಯರ್ ತೆಗೆದು ಸರಿ ಮಾಡುತ್ತಿದ್ದರು. ಈ ವೇಳೆ ಹೆದ್ದಾರಿಯಲ್ಲಿ ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಅತೀ ವೇಗದಿಂದ ಬಂದ ಕಾರು ಲಾರಿಯ ಟಯರ್ ದುರಸ್ತಿ ಮಾಡುತ್ತಿದ್ದ ಮೂವರಿಗೆ ಢಿಕ್ಕಿ ಹೊಡೆದು ಪರಾರಿಯಾಗಿತ್ತು. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದರು.ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ತನಿಖೆ ನಡೆಸಿ ಆರೋಪಿ ಅರ್ಪಿತ್ ಅವರನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.



Leave a Comment: