ಪುತ್ತೂರು: ಲಾರಿ - ಸ್ಕೂಟರ್ ನಡುವೆ ಭೀಕರ ಅಪಘಾತ :ಮಿತ್ತೂರು ನಿವಾಸಿ ಶಿವರಾಮ ನಾಯ್ಕ ಮೃತ್ಯು

ಸುದ್ದಿಗಳು News

Posted by vidyamaana on 2024-07-24 08:25:31 | Last Updated by Vidyamaana on 2024-07-24 08:25:31

Share: | | | | |


ಪುತ್ತೂರು: ಲಾರಿ - ಸ್ಕೂಟರ್ ನಡುವೆ ಭೀಕರ ಅಪಘಾತ :ಮಿತ್ತೂರು ನಿವಾಸಿ ಶಿವರಾಮ ನಾಯ್ಕ ಮೃತ್ಯು

ಪುತ್ತೂರು: ನೆಹರುನಗರ ಮಂಜಲ್ಪಡ್ಪು ಬಳಿಯ ಮಂಗಲ ಸ್ಟೋರ್ಸ್ ಮುಂಭಾಗ ಜು.23 ರಂದು  ಲಾರಿ ಮತ್ತು ತ್ರಿವೀಲ್ಡರ್ ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಮಿತ್ತೂರು ಏಮಾಜೆಯ ವಿಕಲಚೇತನ ಶಿವರಾಮ ನಾಯ್ಕ (50ವ) ಎಂಬವರು ಮೃತಪಟ್ಟ ಬಗ್ಗೆ ವರದಿಯಾಗಿದೆ

ಮಂಗಳೂರು ಕಡೆ ಹೋಗುತ್ತಿದ್ದ ಲಾರಿ ವೊಂದು ವಿಕಲಚೇತನ ಶಿವರಾಮ ಅವರು ಚಲಾಯಿಸುತ್ತಿದ್ದ ತ್ರಿವೀಲ್ಡ‌ರ್ ಸ್ಕೂಟರ್ ಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ತೀವ್ರ ಗಾಯಗೊಂಡ ಸವಾರ ಮೃತ ಪಟ್ಟಿದ್ದಾರೆಂದು ತಿಳಿದು ಬಂದಿದೆ.

 Share: | | | | |


ನೆಲ್ಯಾಡಿ : ಚಾಲಕನ ನಿಯಂತ್ರಣ ತಪ್ಪಿ ಹೊಳೆಗೆ ಬಿದ್ದ ಕಾರು

Posted by Vidyamaana on 2023-06-11 01:09:46 |

Share: | | | | |


ನೆಲ್ಯಾಡಿ : ಚಾಲಕನ ನಿಯಂತ್ರಣ ತಪ್ಪಿ ಹೊಳೆಗೆ  ಬಿದ್ದ ಕಾರು

ನೆಲ್ಯಾಡಿ : ಚಾಲಕನ ನಿಯಂತ್ರಣ ತಪ್ಪಿದ ಮಾರುತಿ ಎರ್ಟಿಗಾ ಕಾರು ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಅಡ್ಡಹೊಳೆ ಎಂಬಲ್ಲಿ ರಸ್ತೆ ಬದಿಯ ಹೊಳೆಗೆ ಉರುಳಿ ಬಿದ್ದ ಘಟನೆ ಭಾನುವಾರ ಬೆಳಗಿನ ಜಾವ ನಡೆದಿದೆ.

ಮೃತಪಟ್ಟವರನ್ನು ತಮಿಳುನಾಡಿನ ಹೊಸೂರು ಮೂಲದ ಹರಿಪ್ರಸಾದ್ (50) ಎಂದು ಗುರುತಿಸಲಾಗಿದ್ದು, ಗೋಪಿ (48) ಎಂಬವರು ಗಾಯಗೊಂಡವರು.


ಗಾಯಾಳುವನ್ನು ನೆಲ್ಯಾಡಿ ಅಶ್ವಿನಿ ಆಸ್ಪತ್ರೆಗೆ ಆಂಬ್ಯುಲೆನ್ಸ್ ಮೂಲಕ ದಾಖಲಿಸಲಾಗಿದೆ. ಕಾರು ನೀರಿನಲ್ಲಿ ಮುಳುಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ದ.ಕ ಜಿಲ್ಲೆಯಲ್ಲಿ ಮಳೆ ಹಾನಿಯಿಂದ 54.36 ಕೋಟಿ ನಷ್ಟ: 638 ಮನೆಗಳಿಗೆ ಹಾನಿ; ಗುಂಡೂರಾವ್ ಮಾಹಿತಿ

Posted by Vidyamaana on 2024-08-03 04:49:52 |

Share: | | | | |


ದ.ಕ ಜಿಲ್ಲೆಯಲ್ಲಿ ಮಳೆ ಹಾನಿಯಿಂದ 54.36 ಕೋಟಿ ನಷ್ಟ: 638 ಮನೆಗಳಿಗೆ ಹಾನಿ; ಗುಂಡೂರಾವ್ ಮಾಹಿತಿ

ಮಂಗಳೂರು: ದ.ಕ ಜಿಲ್ಲೆಯಲ್ಲಿ ಮಳೆ ಹಾನಿಯಿಂದ ಒಟ್ಟು 54.36 ಕೋಟಿ ನಷ್ಟವಾಗಿದೆ ಎಂದು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದಾರೆ.


ಇನ್ನು 20 ಕೋಟಿ ರೂ. ವಿಕೋಪ ನಿರ್ವಹಣೆಗೆ ಹಣ ಇದೆ. ಅದ್ಯಪಾಡಿ, ಕೆತ್ತಿಕಲ್‌ಗೆ ಪರಿಹಾರ ಕಂಡು ಹಿಡಿಯಲು ತಜ್ಞರ ತಂಡದಿಂಲೂ ಪರಿಶೀಲನೆಗೆ ತಂಡ ರಚನೆ ಮಾಡಲಾಗಿದೆ. ಮಳೆ ಹಾನಿ ಪರಿಶೀಲನೆ ನಡೆಸಿ ವರದಿ ನೀಡಲು ಸೂಚಿಸಿದ್ದೇನೆ. ಜಿಲ್ಲೆಯಲ್ಲಿ ಮಳೆ ಹಾನಿಯಿಂದ ಒಟ್ಟು 54.36 ಕೋಟಿ ನಷ್ಟವಾಗಿದೆ ಎಂದರು.

ಜಿಲ್ಲೆಯಲ್ಲಿ ಮಳೆ ಹಾನಿಯಿಂದ ಇದುವರೆಗೆ 11 ಮಂದಿ ಜೀವ ಕಳೆದುಕೊಂಡಿದ್ದಾರೆ. 154 ಮನೆಗಳು ಪೂರ್ತಿ ಹಾನಿ, 484 ಮನೆಗಳು ಭಾಗಶಃ ಹಾನಿಯಾಗಿದೆ ಎಂದಿದ್ದಾರೆ.

ಪುತ್ತಿಲ ಪರ ವಿಶ್ವಕರ್ಮ ಸಮುದಾಯದಿಂದ ವಿಶ್ವ ಸಂಕಲ್ಪ

Posted by Vidyamaana on 2023-04-29 12:21:46 |

Share: | | | | |


ಪುತ್ತಿಲ ಪರ ವಿಶ್ವಕರ್ಮ ಸಮುದಾಯದಿಂದ ವಿಶ್ವ ಸಂಕಲ್ಪ

ಪುತ್ತೂರು : ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ರವರ ಅಭಿಮಾನಿ ಬಳಗದಿಂದ ‘ವಿಶ್ವ ಸಂಕಲ್ಪ’ ಕಾರ್ಯಕ್ರಮ ಬೈಪಾಸ್ ರಸ್ತೆಯ ಆಶ್ಮಿ ಕಂಫರ್ಟ್ ನಲ್ಲಿ ನಡೆಯುತ್ತಿದ್ದು, ಹಲವಾರು ಮಂದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆಮಹಿಳೆಯರು, ಕಾರ್ಯಕರ್ತರು ಹಾಗೂ ಪುತ್ತಿಲ ಅಭಿಮಾನಿ ಬಳಗದವರು ‘ವಿಶ್ವ ಸಂಕಲ್ಪ’ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ.ಅರುಣ್ ಕುಮಾರ್ ಪುತ್ತಿಲ ರವರು ಈ ಬಾರಿ ಅಭ್ಯರ್ಥಿಯಾಗಿ ಸ್ಪರ್ಧಿಸಬೇಕೇನ್ನುವುದು ಕಾರ್ಯಕರ್ತರ ಆಶಯವಾಗಿತ್ತು. ಅದೇ ರೀತಿ ಅವರು ಚುನಾವಣಾ ಕಣಕ್ಕಿಳಿದಿದ್ದು, ಅವರು ಜಯಗಳಿಸಬೇಕೆನ್ನುವ ನಿಟ್ಟಿನಲ್ಲಿ ಕಾರ್ಯಕರ್ತರು ಹಗಲು ರಾತ್ರಿ ಶ್ರಮಿಸುತ್ತಿದ್ದು, ಮತಯಾಚನೆಗಾಗಿ ಹಲವು ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ..

ಗಮನಿಸಿ: ಸೊಳ್ಳೆ ಕಾಟದಿಂದ ತಪ್ಪಿಸಿಕೊಳ್ಳಲು ಸುಲಭವಾದ ಉಪಾಯ ಇಲ್ಲಿದೆ!

Posted by Vidyamaana on 2024-02-28 04:33:22 |

Share: | | | | |


ಗಮನಿಸಿ: ಸೊಳ್ಳೆ ಕಾಟದಿಂದ ತಪ್ಪಿಸಿಕೊಳ್ಳಲು ಸುಲಭವಾದ ಉಪಾಯ ಇಲ್ಲಿದೆ!

ಸೆಳ್ಳೆಗಳ ಕಾಟ ಅಷ್ಟಿಷ್ಟಲ್ಲ. ಸಂಜೆ ಆಯಿತೆಂದರೆ ಅದೆಲ್ಲಿಂದ ಬರುತ್ತವೆಯೋ ಮನೆಯೊಳಗೆ ನುಗ್ಗಿ ಮನೆಮಂದಿಗೆಲ್ಲ ಹಿಂಸೆ ನೀಡಲಾರಂಭಿಸುತ್ತವೆ. ಇವುಗಳಿಂದ ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ ಕೂಡ ಹೆಚ್ಚು. ಕೆಲವೊಮ್ಮೆ ಇವು ಮಾರಣಾಂತಿಕ ಕೂಡ ಹೌದು.ಇವುಗಳನ್ನು ನಿಯಂತ್ರಿಸಲು ಮಾರುಕಟ್ಟೆಯಲ್ಲಿ ಸಿಗುವ ಕೆಮಿಕಲ್‌ ಕ್ವಾಯಿಲ್‌ಗಳನ್ನು ಬಳಸಲಾಗುತ್ತದೆ. ಇದರಿಂದ ಸೊಳ್ಳೆಗಳು ನಿಯಂತ್ರಣಕ್ಕೇನೋ ಬರುತ್ತವೆ. ಆದರೆ ಈ ಕೆಮಿಕಲ್‌ ಹೊಗೆ ಅಥವಾ ವಾಸನೆ ಮನುಷ್ಯನ ಶ್ವಾಶಕೋಶಕ್ಕೆ ತುಂಬಾ ಡೇಂಜರ್‌. ಇದು ಮನುಷ್ಯನ ಆರೋಗ್ಯದ ಮೇಲೆ ತುಂಬಾ ಕೆಟ್ಟ ಪರಿಣಾಮ ಬೀರುತ್ತದೆ. ಹಾಗಾಗಿ ಯಾವುದೇ ಕೆಮಿಕಲ್‌ ಇಲ್ಲದೆ ನೈಸರ್ಗಿಕವಾಗಿ ಸೊಳ್ಳೆಗಳು ಮನೆಯೊಳಗೆ ಬರದಂತೆ ಕೆಲ ಉಪಾಯಗಳಿವೆ. ತಿಳಿದುಕೊಳ್ಳಿ.


ನಾವಿಂದು ಹೇಳುವ ಮನೆಮದ್ದು ಸೊಳ್ಳೆಗಳನ್ನು ನಿಯಂತ್ರಿಸಬಹುದು ಮತ್ತು ಇದರ ಹೊಗೆ ದೇಹಕ್ಕೆ ಯಾವುದೇ ತೊಂದರೆ ನೀಡದೇ ನಿಮ್ಮ ಉಸಿರಾಟಕ್ಕೂ ಔಷಧಿ ರೂಪದಲ್ಲಿ ಕೆಲಸ ಮಾಡುತ್ತದೆ. ಸೊಳ್ಳೆಗಳ ಕಾಟದಿಂದ ಮುಕ್ತಿಹೊಂದಲು ಬೇಕಾಗುವ ಸಾಮಗ್ರಿಗಳು

ಕರ್ಪೂರ, ಬೆಳ್ಳುಳ್ಳಿ, ತುಪ್ಪ, ಅಥವಾ ಕೊಬ್ಬರಿ ಎಣ್ಣೆ ಹಾಗು ಒಂದು ಮಣ್ಣಿನ ಬಟ್ಟಲು.

ಮೊದಲು ಒಂದು ಅರೆಯುವ ಕಲ್ಲಿಗೆ ಆರೇಳು ಎಸಳು ಬೆಳ್ಳುಳ್ಳು ಹಾಕಿಕೊಳ್ಳಿ, ಇದಕ್ಕೆ ಎರಡು ಕರ್ಪೂರ ಹಾಕಿ ಎರಡನ್ನೂ ಚೆನ್ನಾಗಿ ಜಜ್ಜಿಕೊಳ್ಳಿ. ಜಜ್ಜಿಕೊಂಡ ಈ ಮಿಶ್ರಣವನ್ನು ಒಂದು ಮಣ್ಣಿನ ಬಟ್ಟಲಿಗೆ ಹಾಕಿಕೊಳ್ಳಿ. ಇದಕ್ಕೆ ಸ್ವಲ್ಪ ಕೊಬ್ಬರಿ ಎಣ್ಣೆ ಅಥವಾ ತುಪ್ಪ ಹಾಕಿ ಬೇಕಿದ್ದರೆ ಇನ್ನಷ್ಟು ಕರ್ಪೂರ ಹಾಕಿ. ನಂತರ ಇದಕ್ಕೆ ಬೆಂಕಿ ಹಾಕಿ. ಬೆಂಕಿ ಹಾಕಿ ಹೊಗೆಯಾಡುತ್ತಿದ್ದಂತೆಯೇ ಮನೆಯಲ್ಲಾ ಈ ಹೊಗೆಯನ್ನು ಆಡಿಸಬೇಕು. ಮನೆಯ ಮೂಲೆ ಮೂಲೆಯಲ್ಲೂ ಇದರ ಹೋಗೆ ತಲುಪುವಂತೆ ನೋಡಿಕೊಳ್ಳಬೇಕು.ಸಂಜೆ ದೀಪ ಹಚ್ಚುವ ಸಮಯದಲ್ಲಿ ಹೀಗೆ ಮಾಡಿ. ಸೊಳ್ಳೆ ಬರುವ ಸಮಯದಲ್ಲಿ ಈ ಹೊಗೆಯಾಡಿಸಿದರೆ ಈ ಘಾಟಿನ ಹೊಗೆಗೆ ಸೊಳ್ಳೆ ಅಪ್ಪಿತಪ್ಪಿಯೂ ನಿಮ್ಮ ಮನೆಯೊಳಗೆ ನುಗ್ಗುವುದಿಲ್ಲ. ಇನ್ನು ಇದರ ಹೊಗೆ ನಿಮ್ಮ ಆರೋಗ್ಯಕ್ಕೂ ಒಳ್ಳೆಯದು. ಇದರಿಂದ ಯಾವುದೇ ಸೈಡ್‌ ಎಫೆಕ್ಟ್‌ ಇಲ್ಲ. ಒಮ್ಮೆ ಟ್ರೈ ಮಾಡಿ ನೋಡಿ.

ಸೂಚನೆ: ಆರೋಗ್ಯ ತಜ್ಞರು ಮತ್ತು ಅಧ್ಯಯನಗಳ ಪ್ರಕಾರ ಈ ವಿವರಗಳನ್ನು ಒದಗಿಸಲಾಗಿದೆ. ಈ ಲೇಖನವು ನಿಮ್ಮ ತಿಳುವಳಿಕೆಗಾಗಿ ಮಾತ್ರ. ಇವುಗಳನ್ನು ಅನುಸರಿಸುವ ಫಲಿತಾಂಶಗಳು ಕೇವಲ ವೈಯಕ್ತಿಕವಾಗಿವೆ. ಇವುಗಳನ್ನು ಅನುಸರಿಸುವ ಮೊದಲು ಸಂಬಂಧ ಪಟ್ಟ ವೈದ್ಯರು, ತಜ್ಞರನ್ನು ಸಂಪರ್ಕಿಸುವುದು ಉತ್ತಮ ಮಾರ್ಗವಾಗಿದೆ. ನೀವು ಗಮನಿಸಬಹುದು.

ಬೆಳ್ತಂಗಡಿ : ಅನಾರೋಗ್ಯದಿಂದ ಬಳಲುತ್ತಿದ್ದ ನರ್ಸಿಂಗ್ ವಿದ್ಯಾರ್ಥಿನಿ ಸುಮಾ

Posted by Vidyamaana on 2023-08-14 03:17:04 |

Share: | | | | |


ಬೆಳ್ತಂಗಡಿ : ಅನಾರೋಗ್ಯದಿಂದ ಬಳಲುತ್ತಿದ್ದ ನರ್ಸಿಂಗ್ ವಿದ್ಯಾರ್ಥಿನಿ ಸುಮಾ

ಬೆಳ್ತಂಗಡಿ: ಅನಾರೋಗ್ಯದಿಂದ ಬಳಲಿ ಚಿಕಿತ್ಸೆ ಪಡೆದು ಮನೆಯಲ್ಲಿದ್ದ ಯುವತಿ ಲೋ ಬಿಪಿ ಆಗಿ ಹೃದಯಾಘಾತಗಾಗಿ ಮೃತಪಟ್ಟ ಘಟನೆ ಆ 13 ರಂದು  ನಡೆದಿದೆ.


ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಗಂಡಿಬಾಗಿಲು ಜಾತಿಮಾರು ನಿವಾಸಿ  ರಾಜು ದೇವಾಡಿಗ ಮತ್ತು ಸರೋಜ ದಂಪತಿಗಳ ಮಗಳು ಸುಮಾ (19) ಮೃತಪಟ್ಟ ಯುವತಿಯಾಗಿದ್ದಾಳೆ.


ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಮೊದಲ ವರ್ಷದ ನರ್ಸಿಂಗ್ ವಿದ್ಯಾಭ್ಯಾಸ ಮಾಡುತಿದ್ದ ವಿದ್ಯಾರ್ಥಿನಿ ಸುಮ ಮನೆಗೆ ಬಂದಿದ್ದಳು. ಆಗಸ್ಟ್ 9 ರಂದು ಅನಾರೋಗ್ಯದ ಕಾರಣದಿಂದ ಸ್ಥಳೀಯ ಆಸ್ಪತ್ರೆಗೆ ತೆರಳಿ ಮಾತ್ರೆಗಳನ್ನು ಪಡೆದು ಮನೆಗೆ ತೆರಳಿದ್ದಳು. ನಂತರ ಆಗಸ್ಟ್11 ರಂದು ಮತ್ತೆ ಅನಾರೋಗ್ಯ ಜಾಸ್ತಿಯಾದ ಕಾರಣ ಮಂಗಳೂರು ಆಸ್ಪತ್ರೆಗೆ ಚಿಕಿತ್ಸೆಗೆ ಹೋಗಿದ್ದು ಗುಣಮುಖವಾಗಿರುವ ಕಾರಣ ತನ್ನ ಅಕ್ಕನ ಮನೆ ಬಳ್ಳಮಂಜಕ್ಕೆ ತೆರಳಿದ್ದು. ಆಗಸ್ಟ್ 13 ರಂದು ಸಂಜೆ ಮತ್ತೆ ಅಸ್ವಸ್ಥಗೊಂಡಿದ್ದು ಮಂಗಳೂರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಲೋ ಬಿಪಿ ಉಂಟಾಗಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ.

ಮಾಜಿ ಸಿಎಂ H.D ಕುಮಾರಸ್ವಾಮಿ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆ ಗೆ ದಾಖಲು

Posted by Vidyamaana on 2024-02-29 04:26:07 |

Share: | | | | |


ಮಾಜಿ ಸಿಎಂ H.D ಕುಮಾರಸ್ವಾಮಿ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆ ಗೆ ದಾಖಲು

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವಿಧಾನಸಭಾ ಕಲಾಪದಲ್ಲೂ ಭಾಗವಹಿಸಲು ಸಾಧ್ಯವಾಗದೆ ಅವರು ಇಂದು ಜಯನಗರದ ಅಫೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ.ವಿಧಾನಸಭಾ ಕಲಾಪದಲ್ಲಿ ಪಾಲ್ಗೊಳ್ಳಲು ಅವರು ಇಂದು ನೇರವಾಗಿ ವಿಧಾನಸೌಧಕ್ಕೆ ಆಗಮಿಸಿದ್ದರು ಈ ವೇಳೆ ಅವರಿಗೆ ಗಂಟಲು ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರು ತಕ್ಷಣ ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.


ರಾಜ್ಯಸಭಾ ಚುನಾವಣೆ ಮುಕ್ತಾಯದ ಹಿನ್ನೆಲೆಯಲ್ಲಿ ಮುಂದೂಡಿಕೆ ಮಾಡಲಾಗಿದ್ದ ವಿಧಾನಸಭಾ ಅಧಿವೇಶನದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಗಂಟಲು ನೋವು ಕಾಣಿಸಿಕೊಂಡಿದೆ. ಇದಕ್ಕೂ ಮುನ್ನ ಕಳೆದೊಂದು ವಾರದಿಂದ ಕುಮಾರಸ್ವಾಮಿ ಅವರು ಗಂಟಲು ಇನ್ಫೆಕ್ಷನ್‌ನಿಂದ ಬಳಲುತ್ತಿದ್ದರು. ಇನ್ನು ವಿಧಾನಸಭಾ ಕಲಾಪದಲ್ಲಿ ಪಾಲ್ಗೊಂಡು ಮಾತನಾಡಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಜಯನಗರ ಆಸ್ಪತ್ರೆಗೆ ದಾಖಲಾಗಿದ್ದಾರೆ.

Recent News


Leave a Comment: