ಪುತ್ತೂರು :ಭೀಕರ ಅಪಘಾತ - 10 ಕ್ಕೂ ಹೆಚ್ಚು ವಾಹನಗಳು ಪುಡಿ ಪುಡಿ

ಸುದ್ದಿಗಳು News

Posted by vidyamaana on 2024-05-27 18:41:30 |

Share: | | | | |


ಪುತ್ತೂರು :ಭೀಕರ ಅಪಘಾತ - 10 ಕ್ಕೂ  ಹೆಚ್ಚು ವಾಹನಗಳು ಪುಡಿ ಪುಡಿ

ಪುತ್ತೂರು : ಪುತ್ತೂರಿನ ಹೊರ ವಲಯದ ಸಂಟ್ಯಾರಿನಲ್ಲಿ ಭೀಕರ ಅಪಘಾತ ನಡೆದು 10ಕ್ಕೂ ಹೆಚ್ಚು ವಾಹನಗಳು ಪುಡಿ ಪುಡಿಯಾದ ಘಟನೆ ಮೇ.27ರಂದು ಸಂಜೆ ನಡೆದಿದೆ. 

ಪಾಣಾಜೆ - ಸಂಟ್ಯಾರ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಸಂಟ್ಯಾರ್ ಜಂಕ್ಷನ್ ನಲ್ಲಿ ನಿಲ್ಲಿಸಿದ್ದ ಹತ್ತಕ್ಕೂ ಹೆಚ್ಚು ಬೈಕ್ ಗಳು ಪುಡಿ ಪುಡಿಯಾಗಿ ಚೆಲ್ಲಪಿಲ್ಲಿಯಾಗಿದೆ. 


ಪಾಣಾಜೆ ಕಡೆಯಿಂದ ಅತೀ ವೇಗದಲ್ಲಿ ಬರುತಿದ್ದ ಕಾರೊಂದು  ಈ ಹತ್ತಕ್ಕೂ ಹೆಚ್ಚು ದ್ವಿಚಕ್ರ ವಾಹನಗಳಿಗೆ ಡಿಕ್ಕಿಯಾಗಿದೆ. ಸಂಟ್ಯಾರ್ ಜಂಕ್ಷನ್ ನಲ್ಲಿ   ವಾಹನ ನಿಲ್ಲಿಸಿ ಬಸ್ ನಲ್ಲಿ ಉದ್ಯೋಗಕ್ಕೆ ತೆರಳುವವರ 10 ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಪುಡಿ ಪುಡಿಯಾಗಿ ಚೆಲ್ಲಪಿಲ್ಲಿಯಾಗಿದೆ.

 Share: | | | | |


ಅಕ್ರಮ ಆಸ್ತಿ ಗಳಿಕೆ:ಪುತ್ತೂರು ಮೂಲದ ತಹಶೀಲ್ದಾರ್ ಅಜಿತ್ ರೈ 7 ದಿನ ಲೋಕಾಯುಕ್ತ ಕಸ್ಟಡಿಗೆ

Posted by Vidyamaana on 2023-06-30 11:45:49 |

Share: | | | | |


ಅಕ್ರಮ ಆಸ್ತಿ ಗಳಿಕೆ:ಪುತ್ತೂರು ಮೂಲದ ತಹಶೀಲ್ದಾರ್ ಅಜಿತ್ ರೈ 7 ದಿನ ಲೋಕಾಯುಕ್ತ ಕಸ್ಟಡಿಗೆ

ಬೆಂಗಳೂರು: ಲೋಕಾಯುಕ್ತ ದಾಳಿ ವೇಳೆ ಅಕ್ರಮ ಆಸ್ತಿ, ಸಂಪತ್ತು ಪತ್ತೆಯಾದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ತಹಶೀಲ್ದಾರ್ ಅಜಿತ್ ರೈ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಕೋರ್ಟ್ ಅವರನ್ನು ಹೆಚ್ಚಿನ ತನಿಖೆಗಾಗಿ ಏಳು ದಿನಗಳ ಕಾಲ ಲೋಕಾಯುಕ್ತ ಕಸ್ಟಡಿಗೆ ಒಪ್ಪಿಸಿ ಶುಕ್ರವಾರ ಆದೇಶ ನೀಡಿದೆ.

24 ಗಂಟೆಗಳಿಗೂ ಹೆಚ್ಚು ಕಾಲ ನಡೆದ ದಾಳಿ, ಶೋಧ ಕಾರ್ಯದ ವೇಳೆ ತಹಶೀಲ್ದಾರ್ ಅವರ ನಿವಾಸ ಮತ್ತು ಇತರ ಕಡೆಗಳಲ್ಲಿ ಆಸ್ತಿಗಳಲ್ಲಿ ಅಕ್ರಮ ಆಸ್ತಿ ಪತ್ತೆಯಾದ ಹಿನ್ನೆಲೆಯಲ್ಲಿ ಲೋಕಾಯುಕ್ತರು ಗುರುವಾರ ಅವರನ್ನು ಬಂಧಿಸಿದ್ದರು.

ಬ್ಯಾಂಕ್‌ನಿಂದ ಕಿರುಕುಳ ಆರೋಪ; ವಿಕಾಸಸೌಧದೆದುರು ದಂಪತಿಯಿಂದ ಆತ್ಮಹತ್ಯೆ ಹೈಡ್ರಾಮಾ

Posted by Vidyamaana on 2024-01-10 20:26:23 |

Share: | | | | |


ಬ್ಯಾಂಕ್‌ನಿಂದ ಕಿರುಕುಳ ಆರೋಪ; ವಿಕಾಸಸೌಧದೆದುರು ದಂಪತಿಯಿಂದ ಆತ್ಮಹತ್ಯೆ ಹೈಡ್ರಾಮಾ

ಬೆಂಗಳೂರು: ಖಾಸಗಿ ಬ್ಯಾಂಕ್‌ನಲ್ಲಿ (Private Bank) ಪಡೆದುಕೊಂಡಿದ್ದ ಸಾಲಕ್ಕೆ ದುಪ್ಪಟ್ಟು ಹಣ ಕಟ್ಟಿದರೂ ಕಿರುಕುಳ ನಿಂತಿಲ್ಲ ಎಂದು ಆರೋಪಿಸಿ ಕುಟುಂಬವೊಂದು ವಿಕಾಸಸೌಧದ ಮುಂದೆ ಆತ್ಮಹತ್ಯೆಗೆ (Self Harming) ಯತ್ನಿಸಿದೆ. ಕೂಡಲೇ ಅವರನ್ನು ಸ್ಥಳದಲ್ಲಿದ್ದ ಪೊಲೀಸರು ತಡೆದಿದ್ದಾರೆ.ವಿಕಾಸಸೌಧದ ಮುಂದೆ ಬಂದಿದ್ದ ಶಾಯಿಸ್ತಾ ಬಾನು ಹಾಗೂ ಮೊಹಮದ್ ಮುನಾಯಿದ್ ಉಲ್ಲಾ ದಂಪತಿ ಏಕಾಏಕಿ ಸೀಮೆಎಣ್ಣೆಯನ್ನು ಮೈಮೇಲೆ ಸುರಿದುಕೊಂಡಿದ್ದಾರೆ.

ತಮಗೆ ಅನ್ಯಾಯವಾಗಿದೆ, ಹೀಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ ಎಂದು ಕೂಗಿಕೊಡಿದ್ದಾರೆ. ಆದರೆ, ಅಷ್ಟರಲ್ಲಿ ವಿಕಾಸಸೌಧದ ಕಾವಲಿಗೆ ಇದ್ದ ಪೊಲೀಸರು ಅವರನ್ನು ತಡೆದಿದ್ದು, ರಕ್ಷಣೆ ಮಾಡಿದ್ದಾರೆ.


ಏನಿದು ಪ್ರಕರಣ?

ಜೆಜೆ ನಗರದಲ್ಲಿ ಶಾಯಿಸ್ತಾ ಬಾನು ಹಾಗೂ ಮೊಹಮದ್ ಮುನಾಯಿದ್ ಉಲ್ಲಾ ದಂಪತಿಯ ಮನೆಯ ಇದೆ. ಈ ಮನೆ ಮೇಲೆ 50 ಲಕ್ಷ ರೂಪಾಯಿ ಸಾಲವನ್ನು ಈ ಕುಟುಂಬವು ಪಡೆದಿದೆ ಎನ್ನಲಾಗಿದೆ. ಈ ಸಾಲಕ್ಕೆ ಈಗ ಬಡ್ಡಿ ಸೇರಿ ಒಟ್ಟು 97 ಲಕ್ಷ ರೂಪಾಯಿಯನ್ನು ಕಟ್ಟಿದರೂ ಬ್ಯಾಂಕ್‌ನಿಂದ ಕಿರುಕುಳ ತಪ್ಪಿಲ್ಲ ಎಂದು ಆರೋಪ ಮಾಡಿದ್ದಾರೆ. ಹೀಗಾಗಿ ತಮಗೆ ಬೇರೆ ದಾರಿ ಇಲ್ಲದೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ ಎಂದು ಹೇಳಿದ್ದಾರೆ.ಆತ್ಮಹತ್ಯೆಗೆ ಯತ್ನಿಸಿದ ದಂಪತಿ ಮೇಲೆ ಕೇಸ್ ದಾಖಲು

ಆತ್ಮಹತ್ಯೆಗೆ ಯತ್ನಿಸಿದ ದಂಪತಿ ಮೇಲೆ ಈಗ ಪೊಲೀಸರು ಕೇಸ್ ದಾಖಲು ಮಾಡಿದ್ದಾರೆ. ಐಪಿಸಿ 309 (ಆತ್ಮಹತ್ಯೆಗೆ ಯತ್ನ) ಹಾಗೂ ಐಪಿಸಿ 290 (ಸಾರ್ವಜನಿಕ ಸ್ಥಳಗಳಲ್ಲಿ ದುರ್ವರ್ತನೆ ) ಅಡಿ ಕೇಸ್ ದಾಖಲಾಗಿದೆ. ಶಾಯಿಸ್ತಾ ಬಾನು ಹಾಗು ಮೊಹಮದ್ ಮುನಾಯಿದ್ ಉಲ್ಲಾ ಇಬ್ಬರ ಮೇಲೂ ಪ್ರಕರಣ ದಾಖಲಾಗಿದೆ. ಆ ಬಳಿಕ ಮುಚ್ಚಳಿಕೆ ಬರೆಸಿಕೊಂಡು ಠಾಣಾ ಜಾಮೀನಿನ ಮೇಲೆ ಅವರನ್ನು ಪೊಲೀಸರು ಬಿಡುಗಡೆ ಮಾಡಿ ಕಳುಹಿಸಿದ್ದಾರೆ

ಪುತ್ತೂರು: ಲಾರಿ - ಸ್ಕೂಟರ್ ನಡುವೆ ಭೀಕರ ಅಪಘಾತ :ಮಿತ್ತೂರು ನಿವಾಸಿ ಶಿವರಾಮ ನಾಯ್ಕ ಮೃತ್ಯು

Posted by Vidyamaana on 2024-07-24 08:25:31 |

Share: | | | | |


ಪುತ್ತೂರು: ಲಾರಿ - ಸ್ಕೂಟರ್ ನಡುವೆ ಭೀಕರ ಅಪಘಾತ :ಮಿತ್ತೂರು ನಿವಾಸಿ ಶಿವರಾಮ ನಾಯ್ಕ ಮೃತ್ಯು

ಪುತ್ತೂರು: ನೆಹರುನಗರ ಮಂಜಲ್ಪಡ್ಪು ಬಳಿಯ ಮಂಗಲ ಸ್ಟೋರ್ಸ್ ಮುಂಭಾಗ ಜು.23 ರಂದು  ಲಾರಿ ಮತ್ತು ತ್ರಿವೀಲ್ಡರ್ ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಮಿತ್ತೂರು ಏಮಾಜೆಯ ವಿಕಲಚೇತನ ಶಿವರಾಮ ನಾಯ್ಕ (50ವ) ಎಂಬವರು ಮೃತಪಟ್ಟ ಬಗ್ಗೆ ವರದಿಯಾಗಿದೆ

ಪುತ್ತೂರು ಗ್ರಾಮಾಂತರ ಠಾಣಾ ಎಸ್.ಐ. ಆಗಿ ಜಂಬೂರಾಜ್ ಮಹಾಜನ್ ನೇಮಕ

Posted by Vidyamaana on 2023-12-02 14:06:13 |

Share: | | | | |


ಪುತ್ತೂರು ಗ್ರಾಮಾಂತರ ಠಾಣಾ ಎಸ್.ಐ. ಆಗಿ ಜಂಬೂರಾಜ್ ಮಹಾಜನ್ ನೇಮಕ

ಪುತ್ತೂರು: ಡಿ.ಸಿ.ಆ‌ರ್.ಬಿ. ಚಿಕ್ಕಮಗಳೂರು

ಘಟಕದಲ್ಲಿದ್ದ ಜಂಬೂರಾಜ್ ಮಹಾಜನ್ ಅವರನ್ನು ಪುತ್ತೂರು ಗ್ರಾಮಾಂತರ ಠಾಣಾ ಪಿ.ಎಸ್.ಐ. ಆಗಿ ನೇಮಕಗೊಳಿಸಿ ಪೊಲೀಸ್ ಉಪ ಮಹಾನಿರೀಕ್ಷಕ ಚಂದ್ರಗುಪ್ತ ಆದೇಶಿಸಿದ್ದಾರೆ.


ಇವರು ಈ ಹಿಂದೆ ಪುತ್ತೂರು ನಗರ ಠಾಣೆಯಲ್ಲಿ ಪಿ.ಎಸ್.ಐ. ಆಗಿ ಕರ್ತವ್ಯ ನಿರ್ವಹಿಸಿದ್ದರು.ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಪಿ.ಎಸ್.ಐ. ಆಗಿದ್ದ ಧನಂಜಯ ಬಿ.ಸಿ. ಅವರು ಪಶ್ಚಿಮ ವಲಯ ಕಚೇರಿಗೆ ಸ್ಥಳಾಂತರಗೊಂಡಿದ್ದು, ತೆರವಾದ ಹುದ್ದೆಗೆ ಜಂಬೂರಾಜ್ ಮಹಾಜನ್ ವರ್ಗಾವಣೆಗೊಂಡಿದ್ದಾರೆ.

ಕೆದಿಲ : ಸೇತುವೆಯಲ್ಲಿ ಸಿಲುಕಿಕೊಂಡ ಪಿಕಪ್

Posted by Vidyamaana on 2023-07-23 09:24:22 |

Share: | | | | |


ಕೆದಿಲ : ಸೇತುವೆಯಲ್ಲಿ ಸಿಲುಕಿಕೊಂಡ ಪಿಕಪ್

ಪುತ್ತೂರು : ಕೆದಿಲ ಗ್ರಾಮದ ಕಾಂತುಕೋಡಿಯ ಮುಳುಗು ಸೇತುವೆಯೊಂದರಲ್ಲಿ ಪಿಕಪ್ ವಾಹನವೊಂದು ಸಿಲುಕಿ ಹಾಕಿಕೊಂಡಿರುವ ಘಟನೆ ನಡೆದಿದೆ.ಕೆದಿಲ ಬೀಟಿಗೆ ಹಾಲಿನ ಸೊಸೈಟಿ ಮೂಲಕ ಕಾಂತುಕೋಡಿ ಆಗಿ ಪಡೀಲಿಗೆ ಸಂಪರ್ಕ ಮಾಡುವ ರಸ್ತೆಯ ಕಾಂತುಕೋಡಿ ಎಂಬಲ್ಲಿನ ಸೇತುವೆಯೊಂದು ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಸಂಪೂರ್ಣ ಮುಳುಗಡೆಯಾಗಿದೆ.


ಈ ಸೇತುವೆಯಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದರೂ ಪಿಕಪ್ ಚಾಲಕರೋರ್ವರು ತಮ್ಮ ವಾಹನವನ್ನು ಚಲಾಯಿಸಿಕೊಂಡು ಬಂದಿದ್ದು, ಸೇತುವೆಯ ಮಧ್ಯದಲ್ಲಿ ಸಿಲುಕಿಕೊಂಡಿದೆ.ಕ್ಷಣದಿಂದ ಕ್ಷಣಕ್ಕೆ ನೀರಿನಮಟ್ಟ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಸ್ಥಳೀಯ ವಾಸಿಗಳು ಅದರೊಳಗಡೆ ಸಿಲುಕಿರುವವರನ್ನು ರಕ್ಷಣೆ ಮಾಡಿದ್ದಾರೆ. ಪಿಕಪ್ ವಾಹನವು ಪಡೀಲು ಭಾಗದಿಂದ ಕೆದಿಲ ಭಾಗಕ್ಕೆ ತೆರಳುತ್ತಿತ್ತು ಎನ್ನಲಾಗಿದೆ.

ಕನ್ನಡಿಗ ಕೆಎಲ್ ರಾಹುಲ್ ವಿರುದ್ಧ ಎಲ್‌ಎಸ್‌ಜಿ ಮಾಲಿಕರ ಅಸಮಾಧಾನ; ರೊಚ್ಚಿಗೆದ್ದ ಫ್ಯಾನ್ಸ್ - ವಿಡಿಯೋ ವೈರಲ್

Posted by Vidyamaana on 2024-05-09 07:17:06 |

Share: | | | | |


ಕನ್ನಡಿಗ ಕೆಎಲ್ ರಾಹುಲ್ ವಿರುದ್ಧ ಎಲ್‌ಎಸ್‌ಜಿ ಮಾಲಿಕರ ಅಸಮಾಧಾನ; ರೊಚ್ಚಿಗೆದ್ದ ಫ್ಯಾನ್ಸ್ - ವಿಡಿಯೋ ವೈರಲ್

ಐಪಿಎಲ್ 2024ರ ಆವೃತ್ತಿಯಲ್ಲಿ ಕನ್ನಡಿಗ ಕೆಎಲ್ ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ನಿರೀಕ್ಷಿತ ಪ್ರದರ್ಶನ ನೀಡಿಲ್ಲ. ಆದರೂ ತಂಡದ ಪ್ಲೇ ಆಫ್ ಕನಸು ಇನ್ನೂ ಜೀವಂತವಾಗಿದೆ. ಬುಧವಾರ ನಡೆದ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ 10 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿತು.ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು 20 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 164 ರನ್‌ ಕಲೆಹಾಕಿತು. ಈ ಸವಾಲಿನ ಮೊತ್ತವನ್ನು ಬೆನ್ನಟ್ಟಿದ ಸನ್‌ರೈಸರ್ಸ್ ಹೈದರಾಬಾದ್ 9.4 ಓವರ್ ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 165 ರನ್ ಗಳಿಸುವ ಮೂಲಕ 10 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿತು.

Recent News


Leave a Comment: