ಹತ್ತೂರ ಒಡೆಯನ ನೆಲಕ್ಕೆ ಕಾಲಿಟ್ಟ MRPL ತೆಂಕಿಲದಲ್ಲಿ ಮಹೇಶ್ವರ ಪೆಟ್ರೋಲಿಯಂ ಶುಭಾರಂಭ

ಸುದ್ದಿಗಳು News

Posted by vidyamaana on 2024-07-23 21:30:52 |

Share: | | | | |


ಹತ್ತೂರ ಒಡೆಯನ ನೆಲಕ್ಕೆ ಕಾಲಿಟ್ಟ MRPL ತೆಂಕಿಲದಲ್ಲಿ ಮಹೇಶ್ವರ ಪೆಟ್ರೋಲಿಯಂ ಶುಭಾರಂಭ

ಪುತ್ತೂರು: ಪೆಟ್ರೋಲಿಯಂ ಉತ್ಪನ್ನಗಳ ತಯಾರಿಕಾ ಸಂಸ್ಥೆ ಒ.ಎನ್.ಜಿ.ಸಿ.ಯ ಅಂಗ ಸಂಸ್ಥೆಯಾಗಿರುವ ಎಂ.ಆರ್.ಪಿ.ಎಲ್.ನ ಹೈಕ್ಯೂ ರಿಟೇಲ್ ಔಟ್ ಲೆಟ್ ಮಹೇಶ್ವರ ಪೆಟ್ರೋಲಿಯಂ ಜು.21ರಂದು ಮಾಣಿ-ಮೈಸೂರು ರಾಷ್ಟಿಯ ಹೆದ್ದಾರಿಯ ಪುತ್ತೂರಿನ ಬೈಪಾಸ್ ರಸ್ತೆಯ ತೆಂಕಿಲದಲ್ಲಿ ವಿವಿಧ ಗಣ್ಯರ ಸಮ್ಮುಖದಲ್ಲಿ ಶುಭಾರಂಭ ಗೊಂಡಿತ್ತು . ಸಭಾ ಕಾರ್ಯಕ್ರಮಕ್ಕೂ ಮೊದಲು ಅತಿಥಿ ಗಣ್ಯರ ಉಪಸ್ಥಿತಿಯಲ್ಲಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಮಾಜಿ ಶಾಸಕ ಸಂಜೀವ ಮಠಂದೂರು ಅವರು ಸಂಸ್ಥೆಯ ಕಚೇರಿಯನ್ನು ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿದರು. ಸವಣೂರು ವಿದ್ಯಾಸಂಸ್ಥೆಗಳ ಸಂಚಾಲಕರಾಗಿರುವ ಸವಣೂರು ಸೀತಾರಾಮ ರೈ, ಸ್ಥಳೀಯ ನಗರ ಸಭಾ ಸದಸ್ಯೆ ಯಶೋಧಾ ಪೂಜಾರಿ ಮತ್ತು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ಪೆಟ್ರೋಲ್ ಹಾಕುವ ಯಂತ್ರಗಳ ರಿಬ್ಬನ್ ಕತ್ತರಿಸುವ ಮೂಲಕ ಸಾಂಕೇತಿಕವಾಗಿ ತೈಲ ತುಂಬುವ ಕಾರ್ಯಕ್ಕೆ ಚಾಲನೆಯನ್ನು ನೀಡಿದರು. ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷರಾಗಿರುವ ವಾಮನ್ ಪೈ ಅವರು ಉಚಿತ ನೈಟ್ರೋಜನ್ ಪೂರೈಕ್ ವ್ಯವಸ್ಥೆಯನ್ನು ಉದ್ಘಾಟಿಸಿದರು.

ಬಳಿಕ, ಎವಿಜಿ ಇಂಗ್ಲಿಷ್ ಮೀಡಿಯಂ ಶಾಲೆಯ ಪ್ರಾಂಶುಪಾಲೆ ಅವರ ಪ್ರಾರ್ಥನೆಯೊಂದಿಗೆ ಸಭಾ ಕಾರ್ಯಕ್ರಮ ಪ್ರಾರಂಭ ಗೊಂಡಿತ್ತು . ಮಹೇಶ್ವರ ಪೆಟ್ರೋಲಿಯಂ ಸಂಸ್ಥೆಯ ಮಾಲಕರಾಗಿರುವ ಶಿವಪ್ರಸಾದ್ ಶೆಟ್ಟಿ ಕಿನಾರ ಅವರು ಅತಿಥಿ ಗಣ್ಯರನ್ನು ಕಾರ್ಯಕ್ರಮಕ್ಕೆ ಆತ್ಮೀಯವಾಗಿ ಸ್ವಾಗತಿಸಿದರು. ಶಾಸಕ ಅಶೋಕ್ ಕುಮಾರ್ ರೈ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಮಾಜಿ ಶಾಸಕ ಸಂಜೀವ ಮಠಂದೂರು ಸಹಿತ ವೇದಿಕೆಯಲ್ಲಿದ್ದ ಅತಿಥಿ ಗಣ್ಯರು ದೀಪ ಪ್ರಜ್ವಲಿಸುವ ಮೂಲಕ ಮಹೇಶ್ವರ ಪೆಟ್ರೋಲಿಯಂ ಸಂಸ್ಥೆಯ ಕಾರ್ಯಾಚರಣೆಗೆ ಅಧಿಕೃತ ಚಾಲನೆಯನ್ನು ನೀಡಿದರು.

ತಲಪಾಡಿ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದ ಆನುವಂಶಿಕ ಅರ್ಚಕರಾಗಿರುವ ಗಣೇಶ್ ಭಟ್ ಅವರು ಮಾತನಾಡಿ, ತಲಪಾಡಿಯ ದುರ್ಗಾಪರಮೇಶ್ವರಿ ದೇವರು ಈ ಸಂಸ್ಥೆಯ ಮಾಲಕರಾಗಿರುವ ಶಿವಪ್ರಸಾದ್ ಶೆಟ್ಟಿ ಅವರಿಗೆ ಕುಲದೇವರಾಗಿರುವ ಕಾರಣ ತಲಪಾಡಿ ಕ್ಷೇತ್ರöಕ್ಕೂ ಪುತ್ತೂರಿಗೂ ವಿಶೇಷ ನಂಟಿದೆ ಎಂದು ಹೇಳಿದರು. ಶಿವಪ್ರಸಾದ್ ಶೆಟ್ಟಿ ಅವರು ದೈವಭಕ್ತರಾಗಿದ್ದು ಅವರ ಸತ್ಕರ್ಮ ಮತ್ತು ದೇವರ ಮೇಲೆ ಅವರಿಟ್ಟ ಭಕ್ತಿ ಹಾಗೂ ಗುರು-ಹಿರಿಯರ ಮೇಲಿನ ಗೌರವ ಅವರನ್ನು ಇಂದು ಈ ಮಟ್ಟಕ್ಕೆ ತಂದು ನಿಲ್ಲಿಸಿದೆ. ದೈವ-ದೇವರ ಅನುಗ್ರಹದೊಂದಿಗೆ ಈ ನೂತನ ಸಂಸ್ಥೆಯು ಉತ್ತಮ ಸೇವೆಯ ಮೂಲಕ ಗ್ರಾಹಕರ ಮೆಚ್ಚುಗೆಗೆ ಪಾತ್ರವಾಗಿ ಇನ್ನಷ್ಟು ಹೆಸರುವಾಸಿಯಾಗಲಿ ಎಂದು ಅವರು ಶುಭಾಶೀರ್ವಾದ ನೀಡಿದರು.

Additional Image

ದ.ಕ. ಲೋಕಸಭಾ ಕ್ಷೇತ್ರದ ಮಾಜಿ ಸಂಸದರಾಗಿರುವ ನಳಿನ್ ಕುಮಾರ್ ಕಟೀಲ್ ಅವರು ಮಾತನಾಡಿ, ಭಾರತೀಯ ಸಂಸ್ಕೃತಿಯಲ್ಲಿ ಭಗವಂತನನ್ನು ತೋರಿಸುವವ ಗುರು, ಜ್ಞಾನವನ್ನು ಕೊಡುವವ ಗುರು ಎಂಬ ಮಾತನ್ನು ನಮ್ಮ ಹಿರಿಯತು ಹೇಳಿದ್ದಾರೆ. ಅಂತಹ ಗುರುವಿನ ಪ್ರೇರಣೆ ಇರತಕ್ಕಂತಹ ವೇದವ್ಯಾಸ ಮಹರ್ಷಿಗಳ ಜನ್ಮದಿನದ ಪುಣ್ಯಸಂದರ್ಭವಾಗಿರುವ ಈ ಗುರುಪೂರ್ಣಮಿಯ ದಿನದಂದು ಈ ಪುತ್ತೂರಿನ ಪುಣ್ಯ ನೆಲದಲ್ಲಿ ಮಹೇಶ್ವರ ಪೆಟ್ರೋಲಿಯಂ ಸಂಸ್ಥೆ ಉದ್ಘಾಟನೆಗೊಂಡಿರುವುದು ಈ ಸಂಸ್ಥೆಗೆ ಗುರುಹಿರಿಯರ ಆಶೀರ್ವಾದ ಇದೆ ಎಂಬುದಕ್ಕೆ ಸ್ಪಷ್ಟ ನಿದರ್ಶನ ಎಂದು ಹೇಳಿದರು. ಈ ಸಂಸ್ಥೆಯು ಎಂ.ಆರ್.ಪಿ.ಎಲ್.ನ ಒಂದಹ ಅತ್ಯುನ್ನತ ಸಂಸ್ಥೆಯಾಗಿ ಬೆಳೆಯುತ್ತದೆ, ಮಾತ್ರವಲ್ಲದೇ ಶಿವಪ್ರಸಾದ್ ಶೆಟ್ಟಿ ಅವರು ಓರ್ವ ಯಸಸ್ವಿ ಪೆಟ್ರೋಲಿಯಂ ಉದ್ಯಮಿಯಾಗಿ ಬೆಳೆಯುತ್ತಾರೆ ಎಂಬ ವಿಶ್ವಾಸವನ್ನು ಕಟೀಲ್ ಅವರು ಇದೇ ಸಂದರ್ಭದಲ್ಲಿ ವ್ಯಕ್ತಪಡಿಸಿದರು. ಶಿವಪ್ರಸಾದ್ ಅವರು ಭೂವ್ಯವಹಾರದಲ್ಲಿ ಓರ್ವ ಯಶಸ್ವಿ ಉದ್ಯಮಿಯಾಗಿ ಪುತ್ತೂರಿನ ಮಟ್ಟಿಗೆ ಉತ್ತಮ ಸಾಧನೆಯನ್ನು ಮಾಡಿದ್ದಾರೆ. ಶ್ರೀಮಂತಿಕೆ ಬಂದಾಗ ಕೆಲವರಿಗೆ ಎಲ್ಲವೂ ಮರೀತದೆ, ಆದರೆ ಶಿವಪ್ರಸಾದ್ ಅವರು ತಮ್ಮಲ್ಲಿರುವ ಹೃದಯ ಶ್ರೀಮಂತಿಕೆಯಿAದ ತಮ್ಮ ವ್ಯವಹಾರದ ಜೊತೆಗೆ ಸಾಮಾಜಿಕ ಕಾರ್ಯದಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಇನ್ನು ಶಿವಪ್ರಸಾದ್ ಅವರು ಓರ್ವ ಧಾರ್ಮಿಕ ಮನೋಭಾವದ ವ್ಯಕ್ತಿ ಎಂಬುದಕ್ಕೆ ಉದಾಹರಣೆಯಾಗಿ, ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯದ ಸಂದರ್ಭದಲ್ಲಿ ಒಂದು ಗುಡಿ ನಿರ್ಮಾಣದ ಸಂಪೂರ್ಣ ಜವಾಬ್ದಾರಿ ತನ್ನದು ಎಂದು ಮಾತುಕೊಟ್ಟು ಅದರಂತೆ ನಡೆದುಕೊಂಡ ವಿಚಾರವನ್ನು ಕಟೀಲ್ ಅವರು ಸಭೆಯ ಮುಂದೆ ಬಿಚ್ಚಿಟ್ಟರು. ತೈಲೋದ್ಯಮ ಕ್ಷೇತ್ರದಲ್ಲಿ ಕಳೆದ ಹತ್ತು ವರ್ಷಗಳಲ್ಲಿ ದೇಶಾದ್ಯಂತ ಕ್ರಾಂತಿಕಾರಿ ಬದಲಾವಣೆಗಳಾಗಿದ್ದು ಎಂ.ಆರ್.ಪಿ.ಎಲ್, ಭಾರತ್ ಪೆಟ್ರೋಲಿಯಂ ಸಹಿತ ಎಲ್ಲಾ ಸಂಸ್ಥೆಗಳೂ ಸ್ಪರ್ಧಾತ್ಮಕ ವ್ಯವಹಾರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದು ಇದು ಈ ಕ್ಷೇತ್ರದಲ್ಲಿ ಅಪರಿಮಿತ ಅವಕಾಶಕ್ಕೆ ಕಾರಣವಾಗಿದೆ ಎಂದು ಅವರು ಹೇಳಿದರು. ಪುತ್ತೂರು ಪರಿಸರದಲ್ಲಿ ಎಂ.ಆರ್.ಪಿ.ಎಲ್.ನ ಪ್ರಥಮ ಔಟ್ ಲೆಟ್ ಪ್ರಾರಂಭಿಸುವ ಅವಕಾಶ ಶಿವಪ್ರಸಾದ್ ಅವರಿಗೆ ಸಿಕ್ಕಿರುವುದಕ್ಕೆ ಅವರನ್ನು ಈ ಸಂದರ್ಭದಲ್ಲಿ ಅಭಿನಂದಿಸುವುದಾಗಿ ಮತ್ತು ಈ ಉದ್ಯಮದಲ್ಲಿ ಶಿವಪ್ರಸಾದ್ ಅವರಿಗೆ ಯಶಸ್ಸು ಲಭಿಸಲಿ ಎಂಬ ಸದಾಶಯದ ನುಡಿಗಳನ್ನು ನಳಿನ್ ಕುಮಾರ್ ಕಟೀಲ್ ನೀಡಿದರು. 

Additional Image


Additional Image

ವ್ಯಕ್ತಿಯೊಬ್ಬರು ಉದ್ಯಮದಲ್ಲಿ ಬೆಳೆದರೂ ಕೂಡ ಹೇಗೆ ತನ್ನ ಪಾಡಿಗೆ ತನ್ನ ವ್ಯವಹಾರವನ್ನು ನಡೆಸಿಕೊಂಡು ಸಾಮಾಜಿಕವಾಗಿಯೂ, ಧಾರ್ಮಿಕವಾಗಿಯೂ ತನ್ನನ್ನು ತೊಡಗಿಸಕೊಳ್ಳುತ್ತಾರೆ ಎಂಬುದಕ್ಕೆ ಶಿವಪ್ರಸಾದ್ ಅವರು ಉತ್ತಮ ಉದಾಹರಣೆಯಾಗಿದ್ದಾರೆ ಎಂದು ಅಶೋಕ್ ಕುಮಾರ್ ರೈ ಹೇಳಿದರು. ಕಳೆದ ಸಲ ಮಹಾಲಿಂಗೇಶ್ವರ ದೇವರಿಗೆ ಒಂದಷ್ಟು ಜನರ ಸಹಕಾರದೊಂದಿಗೆ ಬಂಗಾರದ ಮಾಲೆಯನ್ನು ಒಪ್ಪಿಸುವಲ್ಲಿ ಮುಂದಾಳತ್ವವನ್ನು ಶಿವಪ್ರಸಾದ್ ಅವರು ವಹಿಸಿಕೊಂಡಿರುವುದು ಅವರಲ್ಲಿರುವ ಧಾರ್ಮಿಲ ಪ್ರಜ್ಞೆಗೆ ಸಾಕ್ಷಿ ಎಂಬ ವಿಚಾರವನ್ನು ಶಾಸಕರು ಈ ಸಂದರ್ಬದಲ್ಲಿ ವಿಶೇಷವಾಗಿ ಶ್ಲಾಘಿಸಿದರು.

 Share: | | | | |


ಐದು ರಾಜ್ಯಗಳ ವಿಧಾನಸಭೆಗೆ ಚುನಾವಣೆ ಘೋಷಣೆ

Posted by Vidyamaana on 2023-10-09 15:45:30 |

Share: | | | | |


ಐದು ರಾಜ್ಯಗಳ ವಿಧಾನಸಭೆಗೆ ಚುನಾವಣೆ ಘೋಷಣೆ

ಹೊಸದಿಲ್ಲಿ: ಲೋಕಸಭಾ ಚುನಾವಣೆಗೆ ಪೂರ್ವಭಾಯಿಯಾಗಿ ದೇಶದ ಕುತೂಹಲ ಕೆರಳಿಸಿರುವ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಘೋಷಣೆಯಾಗಿದೆ. ಸೋಮವಾರ ಭಾರತೀಯ ಚುನಾವಣಾ ಆಯೋಗವು ಐದು ರಾಜ್ಯಗಳ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದೆ.



ಮಿಜೋರಾಂ, ಛತ್ತೀಸ್‌ಗಢ, ಮಧ್ಯಪ್ರದೇಶ, ರಾಜಸ್ಥಾನ ಮತ್ತು ತೆಲಂಗಾಣ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಕೇಂದ್ರ ಚುನಾವಣಾ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಅವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು.


ಮಿಜೋರಾಂ ವಿಧಾನಸಭೆ ಚುನಾವಣೆಯು ನವೆಂಬರ್ 7ರಂದು ನಡೆಯಲಿದೆ. ಛತ್ತೀಸ್ ಗಡದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದ್ದು, ನ.7 ಮತ್ತು 17ರಂದು ಮತದಾನ ನಡೆಯಲಿದೆ. ಮಧ್ಯ ಪ್ರದೇಶದಲ್ಲಿ ನ.17, ರಾಜಸ್ಥಾನದಲ್ಲಿ ನ.23ರಂದು ಮತ್ತು ತೆಲಂಗಾಣದಲ್ಲಿ ನ. 30ರಂದು ಮತದಾನ ನಡೆಯಲಿದೆ.


ಎಲ್ಲಾ ಐದು ರಾಜ್ಯಗಳಲ್ಲಿ ಮತ ಎಣಿಕೆಯು ಡಿಸೆಂಬರ್ 3ರಂದು ನಡೆಯಲಿದೆ.

ಶಾಸಕರ ಇಂದಿನ ಕಾರ್ಯಕ್ರಮ ಆ 26

Posted by Vidyamaana on 2023-08-26 01:55:01 |

Share: | | | | |


ಶಾಸಕರ ಇಂದಿನ ಕಾರ್ಯಕ್ರಮ ಆ 26

ಪುತ್ತೂರು ಶಾಸಕ ಅಶೋಕ್ ಕುಮಾರ್ ಅವರು ಆಗಸ್ಟ್ 26 ರಂದು

ಬೆಳಿಗ್ಗೆ ಡಿಸಿಸಿ ಸಭೆ

ಸಂಜೆ 4 ಗಂಟೆಗೆ ಬಿರುಮಲೆ ಬೆಟ್ಟದಲ್ಲಿ‌ ಮ್ಯಾರಥಾನ್ ಚಾಲನೆ

ರೈ ಎಸ್ಟೇಟ್ ಚಾರಿಟೇಬಲ್ ಟ್ರಸ್ಟ್ ನಿಂದ ವಸ್ತ್ರ ವಿತರಣೆ

Posted by Vidyamaana on 2023-11-06 13:43:19 |

Share: | | | | |


ರೈ ಎಸ್ಟೇಟ್ ಚಾರಿಟೇಬಲ್ ಟ್ರಸ್ಟ್ ನಿಂದ ವಸ್ತ್ರ ವಿತರಣೆ

ಪುತ್ತೂರು : ರೈ ಎಸ್ಟೇಟ್ ಎಜುಕೇಶನಲ್ ಆಂಡ್  ಚಾರಿಟೇಬಲ್ ಟ್ರಸ್ಟ್ ವತಿಯಿಂದ ನ.13 ರಂದು ದೀಪಾವಳಿ ಪ್ರಯುಕ್ತ ನಡೆಯುವ ವಸ್ತ್ರ ವಿತರಣೆ ಹಾಗೂ ಸಹಭೋಜನಾ ಕಾರ್ಯಕ್ರಮವು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿದ್ದು ಇದರ ಚಪ್ಪರ ಮುಹೂರ್ತವು ನಡೆಯಿತು.

ಶಾಸಕರಾದ ಅಶೋಕ್ ರೈ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ಕಾರ್ಯಕ್ರಮದಲ್ಲಿ  ಟ್ರಸ್ಟ ಮುಖ್ಯಸ್ಥರಾದ ಸುಮಾ ಅಶೋಕ್ ರೈ, ಸೀತಾರಾಮ ರೈ ಹೆಗ್ಗಡೆ ಹಿತ್ತಿಲು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ ಬಿ ವಿಶ್ವನಾಥ ರೈ, ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿ,  ಟ್ರಸ್ಟ್ ಕಾರ್ಯಾಧ್ಯಕ್ಷರಾದ ಸುದೇಶ್ ಶೆಟ್ಟಿ, ಕೆಪಿಸಿಸಿ ಕಾರ್ಯದರ್ಶಿ ಎಂ ಎಸ್ ಮಹಮ್ಮದ್, ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ಮಹಮ್ಮದ್ ಬಡಗನ್ನೂರು, ಮಾಜಿ ಜಿಪಂ ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ, ವಿಟ್ಲ ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷ ಡಾ.ರಾಜಾರಾಂ ಕೆ ಬಿ, ಕೋಡಿಂಬಾಡಿ ಗ್ರಾಪಂ ಉಪಾಧ್ಯಕ್ಷರಾದ ಜಯಪ್ರಕಾಶ್ ಬದಿನಾರ್, ನಿಹಾಲ್ ಶೆಟ್ಟಿ, ರಿತೇಶ್ ಶೆಟ್ಟಿ,  ಮುರಳೀದರ್ ರೈ ಮಟಂತಬೆಟ್ಟು, ಕೃಷ್ಣಪ್ರಸಾದ್ ಆಳ್ವ,  ಪಂಜಿಗುಡ್ಡೆ ಈಶ್ವರಭಟ್, ಶಿವರಾಮ ಆಳ್ವ,ನ್ಯಾಯವಾದಿ ಅರುಣಾ ಆಳ್ವ ಟ್ರಸ್ಟಿನ ಸದಸ್ಯ ಪ್ರಮುಖರಾದ ಕೃಷ್ಣಪ್ರಸಾದ್ ಭಟ್, ಯೋಗೀಶ್ ಸಾಮಾನಿ, ಶಿವಪ್ರಸಾದ್, ರಾಕೇಶ್ ರೈಕುದ್ಕಾಡಿ,ರಾಮಣ್ಣ ಪಿಲಿಂಜ, ಚಂದ್ರಶೇಕರ ಕಲ್ಲಗುಡ್ಡೆ,ಮೊದಲಾದವರು ಉಪಸ್ಥಿತರಿದ್ದರು.

ಚಾರ್ಮಾಡಿ ಘಾಟ್ ನಲ್ಲಿ ಬಸ್ ಗಳ ಮುಖಾಮುಖಿ ಡಿಕ್ಕಿ

Posted by Vidyamaana on 2023-07-07 13:49:31 |

Share: | | | | |


ಚಾರ್ಮಾಡಿ ಘಾಟ್  ನಲ್ಲಿ ಬಸ್ ಗಳ ಮುಖಾಮುಖಿ ಡಿಕ್ಕಿ

ಚಿಕ್ಕಮಗಳೂರು: ಚಾರ್ಮಾಡಿ ಘಾಟ್ ನಲ್ಲಿ ಎರಡು ಸರ್ಕಾರಿ ಬಸ್ಸುಗಳು ಮುಖಾಮುಖಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಎರಡೂ ಬಸ್ ಗಳ ಡ್ರೈವರ್ ಗಳ ಕಾಲಿಗೂ ತೀವ್ರ ಗಾಯಗಳಾಗಿದ್ದು ಇಬ್ಬರನ್ನೂ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ನಲ್ಲಿ ಘಟನೆ ನಡೆದಿದ್ದು, ಎರಡು ಬಸ್ಸುಗಳಲ್ಲಿ 80ಕ್ಕೂ ಹೆಚ್ಚು ಜನ ಪ್ರಯಾಣಿಕರು ಇದ್ದರು.

ಅಪಘಾತಕ್ಕೆ ರಸ್ತೆ ಕಾಮಗಾರಿ ಮತ್ತು ಕವಿದಿದ್ದ ದಟ್ಟ ಮಂಜು ಕಾರಣ ಎಂದು ಹೇಳಲಾಗಿದೆ.

ಅಪಘಾತದಿಂದಾಗಿ ಚಾರ್ಮಾಡಿ ಘಾಟ್ ನಲ್ಲಿ ಕಿಲೋ ಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿ ಕೆಲವು ಪ್ರಯಾಣಿಕರು ಹತ್ತು ಕಿಲೋ ಮೀಟರ್ ದೂರ ನಡೆದು ಕೊಟ್ಟಿಗೆಹಾರ ತಲುಪಿದ್ದಾರೆ.

ಪುತ್ತೂರು ರಾಜಕೀಯಕ್ಕೆ ಅಕ್ಷರಮಾಲೆಯ ಆರಂಭದ ಪಾಠ

Posted by Vidyamaana on 2023-04-18 07:27:15 |

Share: | | | | |


ಪುತ್ತೂರು ರಾಜಕೀಯಕ್ಕೆ ಅಕ್ಷರಮಾಲೆಯ ಆರಂಭದ ಪಾಠ

ಪುತ್ತೂರು: ರಾಜ್ಯ ರಾಜಕಾರಣವೇ ಪುತ್ತೂರಿನತ್ತ ತಿರುಗಿ ನೋಡುವಂತಾಗಿದೆ. ಬಂಡಾಯ, ಪಕ್ಷಾಂತರ ಇದರ ಹೊರತಾಗಿ ಕೆಲ ಅನೂಹ್ಯ ಘಟನೆಗಳಿಗೆ ಪುತ್ತೂರು ಸಾಕ್ಷಿಯಾಗಿದೆ. ಮುಂದೇನು ಎಂದು ಮತದಾರರು ತುದಿಗಾಲಲ್ಲಿ ನಿಂತುಕೊಳ್ಳುವಂತಾಗಿದೆ. ಇದರ ನಡುವೆ ರಾಜಕೀಯಕ್ಕೆ ಅಕ್ಷರಮಾಲೆಯ ಆರಂಭದ ಪಾಠ ಮಾಡಲು ಹೊರಟ್ಟಿದ್ದಾರೆ ಅಭ್ಯರ್ಥಿಗಳು.

ಅ+ಅ+ಆ… ಇದು ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳ ಹೆಸರಿನ ಮೊದಲ ಅಕ್ಷರ. ಅಶೋಕ್ ಕುಮಾರ್ ರೈ, ಅರುಣ್ ಕುಮಾರ್ ಪುತ್ತಿಲ, ಆಶಾ ತಿಮ್ಮಪ್ಪ ಈ ಮೂರು ಅಭ್ಯರ್ಥಿಗಳ ಹೆಸರಿನ ಮೊದಲ ಅಕ್ಷರ ಅಕ್ಷರಮಾಲೆಯ ಮೊದಲ ಅಕ್ಷರದಿಂದ ಆರಂಭವಾಗುತ್ತದೆ. ಅಂದರೆ ಇವರುಗಳು ಪುತ್ತೂರಿನ ರಾಜಕೀಯಕ್ಕೆ ಹೊಸ ಪಾಠ ಹೇಳಲು ಹೊರಟಿದ್ದಾರೆಯೇ ಎಂಬಂತೆ ಭಾಸವಾಗುವಂತಿದೆ.

      ಇದೀಗ ರಾಜಕೀಯ ಗಂಭೀರತೆ ಪಡೆದುಕೊಂಡಿದ್ದರೆ, ಇಂತಹದ್ದೊಂದು ಚೋದ್ಯದ ಸಂಗತಿ ಎಲ್ಲೆಡೆ ಚರ್ಚೆಯಾಗುತ್ತಿದೆ. ಕಾಂಗ್ರೆಸ್ ಅಧಿಕೃತ ಅಭ್ಯರ್ಥಿಯಾಗಿ ಆಯ್ಕೆಯಾದವರು ಸಮಾಜ ಸೇವಕ ಎಂದೇ ಗುರುತಿಸಿಕೊಂಡ ಅಶೋಕ್ ಕುಮಾರ್ ರೈ. ಇನ್ನು, ಬಿಜೆಪಿಯ ಟಿಕೇಟ್ ನಿರೀಕ್ಷೆಯಲ್ಲಿದ್ದು, ಇದೀಗ ಪಕ್ಷೇತರರಾಗಿ ಸ್ಪರ್ಧಿಸುತ್ತಿರುವವರು ಹಿಂದೂ ಫೈರ್ ಬ್ರಾಂಡ್ ಅರುಣ್ ಕುಮಾರ್ ಪುತ್ತಿಲ. ಬಿಜೆಪಿಯ ಅಧಿಕೃತ ಅಭ್ಯರ್ಥಿ ಲೇಡಿ ಬಾಂಡ್ ಆಶಾ ತಿಮ್ಮಪ್ಪ.

ಈ ಮೂವರ ತ್ರಿಕೋನ ಸ್ಪರ್ಧೆ ರಾಜಕೀಯಕ್ಕೆ ಹೊಸ ಭಾಷ್ಯ ಬರೆಯಬಹುದೇ? ಅಥವಾ ರಾಜ್ಯ, ರಾಷ್ಟ್ರ ನಾಯಕರಿಗೆ ಹೊಸ ಸಂದೇಶವನ್ನು ಕಳುಹಿಸಬಹುದೇ? ಅಭ್ಯರ್ಥಿಗಳ ಸೋಲು – ಗೆಲುವು ರಾಜಕೀಯಕ್ಕೆ ಹೊಸ ತಿರುವನ್ನೇ ನೀಡಬಹುದೇ? ಹೀಗೆ ನಾನಾ ರೀತಿಯ ಪ್ರಶ್ನೆಗಳು ಮತದಾರರ ತಲೆಯಲ್ಲಿ ಓಡಾಡುತ್ತಿವೆ.

ಪುತ್ತೂರು: ಅರುಣ್ ಪುತ್ತಿಲ ಬೆಂಬಲಿಗರ ತುರ್ತು ಸಭೆ

Posted by Vidyamaana on 2023-04-12 13:51:58 |

Share: | | | | |


ಪುತ್ತೂರು: ಅರುಣ್ ಪುತ್ತಿಲ ಬೆಂಬಲಿಗರ ತುರ್ತು ಸಭೆ

ಪುತ್ತೂರು : ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ರವರಿಗೆ ವಿಧಾನ ಸಭಾ ಚುನಾವಣೆಯ ಬಿಜೆಪಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಪುತ್ತಿಲ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಅಸಮಾಧಾನಗೊಂಡಿದ್ದು, ಈ ಹಿನ್ನೆಲೆ ಕೊಟೇಚಾ ಸಭಾಂಗಣದಲ್ಲಿ ಬೆಂಬಲಿಗರ ನೇತೃತ್ವದಲ್ಲಿ ತುರ್ತು ಸಭೆ ಕರೆಯಲಾಗಿದೆ.ಸಭೆಗೆ ನೂರಾರು ಸಂಖ್ಯೆಯಲ್ಲಿ ಜನ ಆಗಮಿಸಿದ್ದು, ಕೊಟೇಚಾ ಹಾಲ್ ನ ಹೊರಗೆ ಹಾಗೂ ಒಳಗಡೆ ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದಾರೆ

ಕಳೆದ ಎರಡು ಅವಧಿಯಲ್ಲಿ ಅರುಣ್ ಅವರ ಹೆಸರು ಅಭ್ಯರ್ಥಿತನಕ್ಕೆ ಕೇಳಿ ಬಂದಿದ್ದರೂ ಅವಕಾಶ ಸಿಕ್ಕಿರಲಿಲ್ಲ.ಅಭ್ಯರ್ಥಿಯಾಗಿ ಆಯ್ಕೆ ಮಾಡುವಂತೆ ಅವರ ಬೆಂಬಲಿಗರು ಟ್ವಿಟರ್ ಅಭಿಯಾನದ ಮೂಲಕ ನರೇಂದ್ರ ಮೋದಿ, ಅಮಿತ್ ಶಾ ಅವರ ಗಮನಕ್ಕೆ ತರುವ ಪ್ರಯತ್ನ ಮಾಡಿದ್ದರು. ಬಿಜೆಪಿಯ ಸರ್ವೇ ಕಾರ್ಯದಲ್ಲಿ ಕೇಳಿ ಬಂದಿದ್ದ ಆಕಾಂಕ್ಷಿತರ ಪಟ್ಟಿಯಲ್ಲಿ ಅರುಣ್ ಹೆಸರು ಕೂಡ ಇತ್ತು ಎನ್ನಲಾಗಿದ್ದು, ಹೀಗಾಗಿ ಈ ಬಾರಿ ಅರುಣ್ ಅವರಿಗೆ ಟಿಕೆಟ್ ಸಿಗುವ ನಿರೀಕ್ಷೆಯನ್ನು ಬೆಂಬಲಿಗರು ಹೊಂದಿದ್ದರುಟಿಕೆಟ್ ಸಿಗದ ಹಿನ್ನೆಲೆ ತೀವ್ರ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಪಕ್ಷೇತರರಾಗಿ ಕಣಕ್ಕಿಳಿಯುವಂತೆ ಒತ್ತಡ ಹೇರಲಾಗುತ್ತಿದ್ದು, ಮುಂದಿನ ನಡೆ ಯಾವ ರೀತಿಯಾಗಿದೆ ಎಂದು ಕಾದು ನೋಡಬೇಕಿದೆ.

Recent News


Leave a Comment: