ಶಿರೂರು ಭೂಕುಸಿತ ದುರಂತ : ಪತ್ತೆಯಾಯ್ತು ಎಂಟನೇ ಮೃತದೇಹ

ಸುದ್ದಿಗಳು News

Posted by vidyamaana on 2024-07-23 18:35:28 |

Share: | | | | |


ಶಿರೂರು ಭೂಕುಸಿತ ದುರಂತ : ಪತ್ತೆಯಾಯ್ತು ಎಂಟನೇ ಮೃತದೇಹ

ಕಾರವಾರ: ಶಿರೂರು ಭೂಕುಸಿತ ಸ್ಥಳದಲ್ಲಿ 8 ದಿವಸದ ಬಳಿಕ ಮತ್ತೊಂದು ಮೃತದೇಹ ಪತ್ತೆಯಾಗಿದೆ. ಈ ಮೂಲಕ 8ನೇ ಮೃತದೇಹ ಸಿಕ್ಕಂತಾಗಿದೆ. ಈ ನಡುವೆ ಕೇರಳದ ಲಾರಿ ಚಾಲಕ ಅರ್ಜುನ್‌ ಅವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. 

ಮಂಗಳವಾರ ಬೆಳಗ್ಗೆ ಗುಡ್ಡ ಕುಸಿತದಿಂದ ನಾಪತ್ತೆಯಾಗಿದ್ದ ಮಹಿಳೆ ಸಣ್ಣಿ ಹನ್ಮಂತ ಗೌಡ (57) ಸಾವನ್ನಪ್ಪಿದ್ದು, ಮೃತದೇಹ ದೊರೆತಿದೆ. ಗಂಗಾವಳಿ ನದಿಯ ಗಂಗೆಕೊಳ್ಳ ಸಮೀಪ ಅವರ ಶವ ಪತ್ತೆಯಾಗಿದೆ. ಶಿರೂರು ಗುಡ್ಡ ಕುಸಿತದಿಂದಾಗಿ ಉಳುವರೆ ಗ್ರಾಮದಲ್ಲಿ ಮನೆ ಕುಸಿತವಾಗಿ ಸಣ್ಣಿ ಹನ್ಮಂತ ಗೌಡ ಅವರು ಕಣ್ಮರೆಯಾಗಿದ್ದರು. ಇನ್ನೂ ಅರ್ಜುನ್‌ ಸಹಿತ ಮೂವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಸ್ಥಳದಲ್ಲಿ NDRF, SDRF, ಮಿಲಿಟರಿ ಕಾರ್ಯಪಡೆಯಿಂದ ಶೋಧ ಕಾರ್ಯ ಮುಂದುವರೆದಿದೆ. 

ಕೇರಳ ಮಾಧ್ಯಮಗಳ ಕವರೇಜ್‌ 

ಸದ್ಯ ಕರ್ನಾಟಕದ ಉತ್ತರ ಕನ್ನಡದಲ್ಲಾದ ಭೂಕುಸಿತ ವರದಿಯನ್ನ ಕನ್ನಡಿಗರು ಕೂಡಾ ಮಲಯಾಳಂ ಸುದ್ದಿವಾಹಿನಿಗಳಲ್ಲಿ ವೀಕ್ಷಿಸುವಂತಾಗಿದೆ. ಕೇರಳದ ಪ್ರಮುಖ ರಾಜ್ಯ ಮಟ್ಟದ ವಾಹಿನಿಗಳು ಕಳೆದ 4 ದಿನಗಳಿಂದಲೂ ಉತ್ತರ ಕನ್ನಡದಲ್ಲಿ ಬೀಡುಬಿಟ್ಟಿವೆ. ಅರ್ಜುನ್‌ ಶೋಧ ಕಾರ್ಯಾಚರಣೆಗೆ ಹೆಚ್ಚಿನ ಒತ್ತಡ ಏರುತ್ತಿದೆ. ಜೊತೆಗೆ ಕೇರಳದ ನಾಗರಿಕ ಸುರಕ್ಷತಾ ತಂಡಗಳು ಕೂಡಾ ಕಾರ್ಯಾಚರಣೆ ನಡೆಸುವ ನಿಟ್ಟಿನಲ್ಲಿ ಕೇರಳದಿಂದ ಶಿರೂರಿಗೆ ತಂಡವಾಗಿ ಆಗಮಿಸಿವೆ

 Share: | | | | |


ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ : ಆರೋಪಿಗೆ ಜಾಮೀನು

Posted by Vidyamaana on 2023-11-19 11:10:35 |

Share: | | | | |


ಬಾಲಕಿಯ ಮೇಲೆ  ಲೈಂಗಿಕ ದೌರ್ಜನ್ಯ ಪ್ರಕರಣ : ಆರೋಪಿಗೆ ಜಾಮೀನು

ಪುತ್ತೂರು: ಸುಮಾರು ಎರಡು ವರ್ಷಗಳ ಹಿಂದೆ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ್ದಾನೆ ಎಂಬ ಆರೋಪವನ್ನು ಎದುರಿಸುತ್ತಿದ್ದ  ರಾಮ ಕುಂಜ ಗ್ರಾಮದ ಖಂಡಿಗ ನಿವಾಸಿ  ಸೇಸಪ್ಪ ರವರಿಗೆ ಜಿಲ್ಲಾ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.


 ದಿನಾಂಕ 04/10/2020 ರಂದು ಬೆಳಿಗ್ಗೆ 11:00 ಗಂಟೆಗೆ ನೊಂದ ಬಾಲಕಿಯ ಮನೆಯಾದ ಹಳೆ ನೇರಂಕಿಯಲ್ಲಿ ಬೆದರಿಸಿ, ಒತ್ತಾಯ ಪೂರ್ವಕವಾಗಿ ದೈಹಿಕ ಸಂಪರ್ಕ ಮಾಡಿರುವುದಾಗಿದೆ. ಆಕೆಯ ದೈಹಿಕ ಬದಲಾವಣೆಯನ್ನು ಗುರುತಿಸಿ ಪ್ರಾಥಮಿಕ ಆರೋಗ್ಯ ಕೇಂದ್ರದವರು ತಪಾಸಣೆ ನಡೆಸಿದಾಗ  ಗರ್ಭಿಣಿ ಎಂಬುದಾಗಿ  ತಿಳಿದಿರುವುದಾಗಿದೆ. ಈ ಬಗ್ಗೆ  ಬಾಲಕಿಯ ತಾಯಿಯು  ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರಿನಂತೆ ಪೊಲೀಸರು  ಭಾರತೀಯ ದಂಡ ಸಂಖ್ಯೆಯ ಕಲಂ 376 ಮತ್ತು ಪೋಕ್ಸೋ ಕಾಯಿದೆಯ ಕಲಂ 5 ಮತ್ತು 6 ರನ್ವಯ ಪ್ರಕರಣ ದಾಖಲಿಸಿದ್ದರು. ತದನಂತರ ತನಿಖೆ ಮುಂದುವರಿಸಿ, ಆರೋಪಿಯನ್ನಲಾಗಿದ್ದ ಸೇಸಪ್ಪ ರವರನ್ನು ದಸ್ತಗಿರಿ ಮಾಡಿ ತನಿಖೆ ನಡೆಸಿದ್ದರು.ನಂತರ ಪೊಲೀಸರು ಆರೋಪಿ ವಿರುದ್ಧ ದೋಷರೋಪಣ ಪಟ್ಟಿಯನ್ನು ಮಾನ್ಯ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಹೀಗಿರುವಾಗ, ಆರೋಪಿಯು ತನ್ನ ಪರ

ವಕೀಲರಾದ ಕಜೆ ಲಾ ಚೇಂಬರ್ಸ್ ನ  ಶ್ರೀ ಮಹೇಶ್ ಕಜೆ ಅವರ ಮುಖಾಂತರ   ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.ಆರೋಪಿಯು ಈ ಕೃತ್ಯ ನಡೆಸಿದ್ದಾರೆ ಎಂಬುವುದಕ್ಕೆ ಯಾವುದೇ ಪೂರಕವಾದ ಸಾಕ್ಷಾಧಾರಗಳು ಮೇಲ್ನೋಟಕ್ಕೆ ಕಂಡು ಬಂದಿರುವುದಿಲ್ಲ,ದೂರಿನಲ್ಲಿ ನ ವಿಳಂಬ, ಡಿಎನ್ಎ ಋಣಾತ್ಮಕ ವರದಿ, ಸೂಕ್ತ  ವೈಜ್ಞಾನಿಕ ಸಾಕ್ಷಾಧಾರಗಳ  ಕೊರತೆ,  ಎಂಬಿತ್ಯಾದಿ  ಅಂಶಗಳನ್ನು ವಾದಿಸಿದ್ದರು  ಸರಕಾರಿ ಅಭಿಯೋಜಕರು ಆಕ್ಷೇಪವನ್ನು ಸಲ್ಲಿಸಿದ್ದರು. ವಾದ -ವಿವಾದವನ್ನು ಆಲಿಸಿದ ಪುತ್ತೂರಿನ ಮಾನ್ಯ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಪ್ರಭಾರ ನ್ಯಾಯಾಧೀಶರಾದ ಮಂಗಳೂರಿನ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀ ಕಾಂತರಾಜು ಎಸ್ ವಿ ರವರು ಆರೋಪಿಗೆ ಶರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದಾರೆ.

ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಡಾ.ರಜನೀಶ್ ಗೋಯಲ್ ನೇಮಕ

Posted by Vidyamaana on 2023-11-21 21:02:55 |

Share: | | | | |


ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಡಾ.ರಜನೀಶ್ ಗೋಯಲ್ ನೇಮಕ

ಬೆಂಗಳೂರು : ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಂತ ವಂದಿತಾ ಶರ್ಮಾ ಅವರ ಅವಧಿ ನ.30ಕ್ಕೆ ಮುಕ್ತಾಯಗೊಳ್ಳುತ್ತಿದೆ. ಈ ಹಿನ್ನಲೆಯಲ್ಲಿ ನೂತನ ಮುಖ್ಯ ಕಾರ್ಯದರ್ಶಿಯಾಗಿ ಡಾ.ರಜನೀಶ್ ಗೋಯಲ್ ಅವರನ್ನು ನೇಮಕ ಮಾಡಲಾಗಿದೆ.ಈ ಕುರಿತಂತೆ ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದ್ದು, 1986ನೇ ಸಾಲಿನ ಕರ್ನಾಟಕ ಕೇಡರ್ ಐಎಎಸ್ ಅಧಿಕಾರಿ ಡಾ.ರಜನೀಶ್ ಗೋಯಲ್ ಅವರನ್ನು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಿ ಆದೇಶಿಸಲಾಗಿದೆ ಎಂದು ತಿಳಿಸಿದೆ.ದಿನಾಂಕ 30-11-2023ರಂದು ಸಿಎಸ್ ವಂದಿತಾ ಶರ್ಮಾ ಅವರು ನಿವೃತ್ತರಾಗಲಿದ್ದಾರೆ. ಅವರ ಸ್ಥಾನಕ್ಕೆ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದಂತ ಡಾ.ರಜನೀಶ್ ಗೋಯಲ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.

ತರಕಾರಿ ವ್ಯಾಪಾರಿಯ ತಳ್ಳುಗಾಡಿ ಕದ್ದೊಯ್ದ ಖತರ್ನಾಕ್‌ ಕಳ್ಳ

Posted by Vidyamaana on 2024-07-18 12:04:56 |

Share: | | | | |


ತರಕಾರಿ ವ್ಯಾಪಾರಿಯ ತಳ್ಳುಗಾಡಿ ಕದ್ದೊಯ್ದ ಖತರ್ನಾಕ್‌ ಕಳ್ಳ

ಮೈಸೂರು, ಜು.17: ಕಾಲ ಕೆಟ್ಟೋಗಿದೆ ಶ್ರೀಮಂತರ ಬಳಿ ಚಿನ್ನ, ಬೆಳ್ಳಿ ಹಣ ಕದಿಯುತ್ತಿದ್ದವರು, ಈಗ ಬಡವರ ವಸ್ತುಗಳನ್ನು ಕದಿಯುವ ಕೆಲಸಕ್ಕೆ ಕೈ ಹಾಕಿದ್ದಾರೆ. ಇದಕ್ಕೆ ಸಾಂಸ್ಕೃತಿಕ ನಗರಿ ಮೈಸೂರಿ(Mysore)ನಲ್ಲಿ ನಡೆದಿರುವ ಈ ಘಟನೆಯೇ ಸಾಕ್ಷಿಯಾಗಿದೆ. ಹೌದು, ಮೈಸೂರಿನ ಹೃದಯಭಾಗದಲ್ಲಿರುವ ಸರಸ್ವತಿಪುರಂನಲ್ಲಿ ತಳ್ಳುವ ಗಾಡಿಯಲ್ಲಿ ತರಕಾರಿ ಮಾರುತ್ತಿದ್ದ ತಿಮ್ಮೇಗೌಡ ಎಂಬುವವರ ತಳ್ಳುವ ಗಾಡಿಯನ್ನು ಕಳ್ಳತನ ಮಾಡಲಾಗಿದೆ.

ಪ್ರತಿದಿನವೂ ತಳ್ಳುವ ಗಾಡಿಯಲ್ಲಿ ವ್ಯಾಪಾರ ಮಾಡಿ ಜೀವನ ಮಾಡುತ್ತಿದ್ದ ತಿಮ್ಮೇಗೌಡ ಅವರ ಕುಟುಂಬ ಈಗ ಸಂಕಷ್ಟಕ್ಕೆ ಸಿಲುಕಿದೆ. ಸಾಲ ಸೋಲ ಮಾಡಿ ಒಂದು ತಳ್ಳುವ ಗಾಡಿ ಖರೀದಿ ಮಾಡಿ ಅದರಲ್ಲಿ ಈರುಳ್ಳಿ ತರಕಾರಿ ಮಾರಿ ಜೀವನ ನಡೆಸುತ್ತಿದ್ದರು. ಪ್ರತಿದಿನ ಸರಸ್ವತಿಪುರಂ ಬಡಾವಣೆಯ ಜವರೇಗೌಡ ಪಾರ್ಕ್‌ ಬಳಿ ವ್ಯಾಪಾರ ಮಾಡುತ್ತಿದ್ದರು. ಕಳೆದ ಸೋಮವಾರ ಸಹ ಎಂದಿನಂತೆ ವ್ಯಾಪಾರ ಮಾಡುತ್ತಿದ್ದರು. ಆದರೆ, ಮಧ್ಯಾಹ್ನದ ವೇಳೆಗೆ ಮಳೆ ಶುರುವಾದ ಕಾರಣ ವ್ಯಾಪಾರ ನಿಲ್ಲಿಸಿ ತರಕಾರಿ

ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಿಜೆಪಿ ಪಕ್ಷದಿಂದ ಉಚ್ಚಾಟನೆ

Posted by Vidyamaana on 2023-03-07 15:06:59 |

Share: | | | | |


ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಿಜೆಪಿ ಪಕ್ಷದಿಂದ ಉಚ್ಚಾಟನೆ

ಬೆಂಗಳೂರು: ಲಂಚ ಪ್ರಕರಣ ಸಂಬಂಧ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಕೆ ಮಾಡಾಳ್ ವಿರೂಪಾಕ್ಷಪ್ಪರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಲೋಕಾಯುಕ್ತ ದಾಳಿಗೆ ಒಳಗಾಗಿ ನಾಪತ್ತೆಯಾಗಿದ್ದ ಶಾಸಕ ವಿರೂಪಾಕ್ಷಪ್ಪ ಜಾಮೀನು ದೊರೆತ ಹಿನ್ನೆಲೆಯಲ್ಲಿ ಇಂದು ಸಾರ್ವಜನಿಕವಾಗಿ ಕಾಣಿಸಿಕೊಂಡ್ರು.

ಕರ್ನಾಟಕ ಸಾಬೂನು ಮತ್ತು ಮಾರ್ಜಕ ಲಿ.ಗೆ (ಕೆಎಸ್‌ಡಿಎಲ್) ರಾಸಾಯನಿಕ ಕಚ್ಚಾ ವಸ್ತುಗಳ ಪೂರೈಕೆ ಟೆಂಡರ್ ನೀಡಲು ಲಂಚ ಪಡೆದ ಪ್ರಕರಣಕ್ಕೆ ಸಂಬಂಧ ಬಿಜೆಪಿಗೆ ಭಾರೀ ಮುಜುಗರ ತಂದಿದ್ದು ಹೈಕಮಾಂಡ್ ಈ ನಿರ್ಧಾರ ತೆಗೆದುಕೊಂಡಿದೆ.

ಹಾಜಿ ಅಲಿ ದರ್ಗಾ ನವೀಕರಣ: ನಟ ಅಕ್ಷಯ್ ಕುಮಾರ್ 1.21 ಕೋಟಿ ರೂ. ದೇಣಿಗೆ!

Posted by Vidyamaana on 2024-08-08 22:06:48 |

Share: | | | | |


ಹಾಜಿ ಅಲಿ ದರ್ಗಾ ನವೀಕರಣ: ನಟ ಅಕ್ಷಯ್ ಕುಮಾರ್ 1.21 ಕೋಟಿ ರೂ. ದೇಣಿಗೆ!

ಮುಂಬೈ : ಹಾಜಿ ಅಲಿ ದರ್ಗಾದ ನವೀಕರಣ ಯೋಜನೆಗೆ ಬಾಲಿವುಡ್ ಸೂಪರ್ ಸ್ಟಾರ್ ಅಕ್ಷಯ್ ಕುಮಾರ್ 1.21 ಕೋಟಿ ರೂ. ದೇಣಿಗೆ ನೀಡಿದ್ದಾರೆ ಎಂದು ಮಸೀದಿಯ ಟ್ರಸ್ಟ್ ನ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.ಈ ವಿಷಯವನ್ನು ಹಾಜಿ ಅಲಿ ದರ್ಗಾದ ವ್ಯವಸ್ಥಾಪಕ ಟ್ರಸ್ಟಿ ಸುಹೈಲ್ ಖಂದ್ವಾನಿ ಅವರು ಎಕ್ಸ್ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

ನ್ಯೂ ಇಯರ್ ಪಾರ್ಟಿ ಅವಾಂತರ – ಟೈಟ್ ಆಗಿ ಸ್ನೇಹಿತನ ಮೂಗು ಕಚ್ಚಿದ ರಾಕೇಶ್

Posted by Vidyamaana on 2024-01-01 17:51:25 |

Share: | | | | |


ನ್ಯೂ ಇಯರ್ ಪಾರ್ಟಿ ಅವಾಂತರ – ಟೈಟ್ ಆಗಿ ಸ್ನೇಹಿತನ ಮೂಗು ಕಚ್ಚಿದ ರಾಕೇಶ್

ಬೆಳ್ತಂಗಡಿ : ಹೊಸ ವರ್ಷದ ಆಚರಣೆಯ ಪಾರ್ಟಿಯಲ್ಲಿ ಸ್ನೇಹಿತನ ಜೊತೆ ಕ್ಷುಲ್ಲಕ ವಿಚಾರಕ್ಕೆ ಗಲಾಟೆಯಾಗಿ ನಂತರ ಕುಡಿದ ಮತ್ತಿನಲ್ಲಿ ಒಬ್ಬನ ಮೂಗು ಕಚ್ಚಿ ತುಂಡರಿಸಿದ ಘಟನೆ ಬೆಳ್ತಂಗಡಿಯ ಪಿಲ್ಯದಲ್ಲಿ ನಡೆದಿದೆ‌.


ಬೆಳ್ತಂಗಡಿ ತಾಲೂಕಿನ ಪಿಲ್ಯ ಗ್ರಾಮದ ಉಲ್ಪೆ ಎಂಬಲ್ಲಿನ ನಿವಾಸಿ ದೀಕ್ಷಿತ್ (28) ಎಂಬ ಯುವಕ ಯುವಕ ಮೂಗು ತುಂಡರಿಸಿಕೊಂಡ ಯುವಕನಾಗಿದ್ದಾನೆ.ಮೂಗು ತುಂಡರಿಸಿದ ಆರೋಪಿ ಯುವಕ ರಾಕೇಶ್ ಎಂಬಾತ ಮೂಲತಃ ಮೂಡಿಗೆರೆ ತಾಲೂಕಿನವನಾಗಿದ್ದು , ಪ್ರಸ್ತುತ ಬೆಳ್ತಂಗಡಿ ತಾಲೂಕಿನ ಪಿಲ್ಯ ಗ್ರಾಮದ ಸಂಬಂಧಿಕರ ಮನೆಯಲ್ಲಿ ವಾಸವಿದ್ದು , ಸ್ಥಳೀಯ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾನೆ. ಡಿಸೆಂಬರ್ 31 ರಂದು ರಾತ್ರಿ ಹೊಸ ವರ್ಷದ ಸಂದರ್ಭದಲ್ಲಿ ಮದ್ಯ ಸೇವಿಸಿ ಕ್ಷುಲ್ಲಕ ವಿಚಾರದಲ್ಲಿ ಸ್ನೇಹಿತನ ಜೊತೆ ಗಲಾಟೆ ನಡೆದಿದೆ. ಗಲಾಟೆ ವಿಕೋಪಕ್ಕೆ ತಿರುಗಿ ರಾಕೇಶ್ ಎಂಬಾತ ದೀಕ್ಷಿತ್ ಎಂಬಾತನ ಮೂಗನ್ನು ಕಚ್ಚಿ ತುಂಡರಿಸಿದ್ದಾನೆ. 


ಘಟನೆಯಿಂದ ಗಂಭೀರ ಗಾಯಗೊಂಡ ದೀಕ್ಷಿತ್ ನನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ನಂತರ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.


ಈ ಪ್ರಕರಣ ಸಂಬಂಧ ವೇಣೂರು ಪೋಲಿಸರಿಗೆ ದೂರು ನೀಡಲಾಗಿದ್ದು , ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Recent News


Leave a Comment: