ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಸುದ್ದಿಗಳು News

Posted by vidyamaana on 2024-03-23 15:52:34 | Last Updated by Vidyamaana on 2024-03-23 15:52:34

Share: | | | | |


ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಕಾರಿನೊಳಗಿದ್ದ ಮೂವರು ಸಾವನ್ನಪ್ಪಿದ ಸಂಬಂಧಿಸಿದಂತೆ ಮೂವರು ಸೇರಿ 50 ಲಕ್ಷ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಕುಟುಂಬ ಸದಸ್ಯರು ಕೋರಾ ಪೊಲೀಸರ ವಿಚಾರಣೆ ವೇಳೆ ಮಾಹಿತಿ ನೀಡಿದ್ದಾರೆ.

*💥Whats App Group ಗೆ ಸೇರಲು ಕ್ಲಿಕ್ ಮಾಡಿ

*ಹಣ ತೆಗೆದುಕೊಂಡು ಹೋದ ವಿಚಾರ*:  ಇನ್ನೂ ಕಾರಿನಲ್ಲಿ ಹೋಗುವಾಗ ಮದಡ್ಕದ ಇಸಾಕ್ ಉಜಿರೆಯಲ್ಲಿದ್ದ ಸ್ವಂತ ಮನೆಯನ್ನು ಮಾರಾಟ ಮಾಡಿದ ಹಣ ಮತ್ತು ಮಗಳ ಚಿನ್ನವನ್ನು ಅಡವಿಟ್ಟು ಸುಮಾರು 35 ಲಕ್ಷ ಹಣವನ್ನು ತೆಗೆದುಕೊಂಡು ಹೋಗಿದ್ದರು ಎಂದು ಇಸಾಕ್ ಪತ್ನಿ ಕೋರಾ ಪೊಲೀಸ್ ಠಾಣೆಯಲ್ಲಿ ಮಾ.23 ರಂದು ಪೊಲೀಸ್ ವಿಚಾರಣೆ ವೇಳೆ ಹೇಳಿಕೆಯನ್ನು ನೀಡಿದ್ದಾರೆ. ಇನ್ನೂ ಶಿರ್ಲಾಲು ಸಿದ್ದಿಕ್ ಮತ್ತು ಟಿ.ಬಿ.ಕ್ರಾಸ್ ಸಾಹುಲ್ ಹಮೀದ್ ಕೂಡ ಸ್ನೇಹಿತರ ಮೂಲಕ ಪಡೆದ ಸುಮಾರು 15 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಮನೆಯವರು ಹೇಳಿಕೆ ನೀಡಿದ್ದಾರೆ. ಒಟ್ಟು ಮೂವರ ಬಳಿ 50 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ಇತ್ತು ಎನ್ನಲಾಗಿದೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಹೇಳಲಾಗಿದೆ.

ಮೂವರು ಕೂಡ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ  ಪ್ಲ್ಯಾನ್ ಮಾಡಿ ಕರೆಸಿಕೊಂಡು ಮಾ.21 ರಂದು ರಾತ್ರಿ ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಿ ನಂತರ ಹಣವನ್ನು ದೋಚಿದ್ದಾರೆ ಎನ್ನಲಾಗಿದೆ. ಇನ್ನೂ ಪ್ರಕರಣ ಸಂಬಂಧ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಸೇರಿ ಆರು ಜನರನ್ನು ಮೊಬೈಲ್ ಕಾಲ್ ಡಿಟೈಲ್ಸ್ ಮೂಲಕ  ಕಾರ್ಯಾಚರಣೆ ನಡೆಸಿ ಮಾ.22 ರಂದು ರಾತ್ರಿ ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಬೆಂಕಿಗಾಹುತಿಯಾದ ಕಾರನ್ನು ಕೋರಾ ಪೊಲೀಸ್ ಠಾಣೆಗೆ ತೆಗೆದುಕೊಂಡು ಬಂದಿದ್ದು. ಮೂವರ ಶವ ಸರಕಾರಿ ಆಸ್ಪತ್ರೆಯಲ್ಲಿ ಡಿಎನ್ಎ ಪರೀಕ್ಷೆ ಮಾಡಿದ ಬಳಿಕ ಮುಂದಿನ ಗುರುವಾರ ಅಥವಾ ಶುಕ್ರವಾರ ಮೃತದೇಹವನ್ನು ಗುರುತು ಪತ್ತೆಯಾದ ಬಳಿಕ ಅವರ ಕಟುಂಬ ಸದಸ್ಯರಿಗೆ ನೀಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.


 Share: | | | | |


ಶಾಸಕರ ಇಂದಿನ ಕಾರ್ಯಕ್ರಮ ಆ 19

Posted by Vidyamaana on 2023-08-19 02:19:09 |

Share: | | | | |


ಶಾಸಕರ ಇಂದಿನ ಕಾರ್ಯಕ್ರಮ ಆ 19

ಪುತ್ತೂರು ಶಾಸಕ ಅಶೋಕ್ ಕುಮಾರ್ ಅವರು ಆಗಸ್ಟ್ 19 ರಂದು


ಮಧ್ಯಾಹ್ನ 3 ಗಂಟೆಗೆ ಪುಣಚ ವಲಯ ಕಾಂಗ್ರೆಸ್ ವತಿಯಿಂದ ಕಾರ್ಯಕರ್ತರ ಸಭೆ

ಅಭಿನಂದನಾ ಸಮಾರಂಭ ಹಾಗೂ ಸಾರ್ವಜನಿಕರಿಂದ ಅಹವಾಲು ಸ್ವೀಕಾರ


ಸ್ಥಳ: ಪರಿಯಾಲ್ತಡ್ಕ ಶಾಲಾ ವಠಾರ

ಫೆ 20 : ಎಸ್‍.ಡಿ.ಪಿ.ಐ. ಪುತ್ತೂರು ವಿಧಾನಸಭಾ ಕ್ಷೇತ್ರದ ವತಿಯಿಂದ ಕಾರ್ಯಕರ್ತರ ಸಮಾವೇಶ

Posted by Vidyamaana on 2024-02-19 21:35:05 |

Share: | | | | |


ಫೆ 20 : ಎಸ್‍.ಡಿ.ಪಿ.ಐ. ಪುತ್ತೂರು ವಿಧಾನಸಭಾ ಕ್ಷೇತ್ರದ ವತಿಯಿಂದ ಕಾರ್ಯಕರ್ತರ ಸಮಾವೇಶ

ಪುತ್ತೂರು: ಎಸ್‍.ಡಿ.ಪಿ.ಐ. ಪುತ್ತೂರು ವಿಧಾನಸಭಾ ಕ್ಷೇತ್ರದ ವತಿಯಿಂದ ಕಾರ್ಯಕರ್ತರ ಸಮಾವೇಶ ಫೆ.20 ರಂದು ಸಂಜೆ 7 ಗಂಟೆಗೆ ಪುತ್ತೂರು ಲಯನ್ಸ್ ಕ್ಲಬ್‍ ಸಭಾಂಗಣದಲ್ಲಿ ನಡೆಯಲಿದೆ ಎಂದು ಎಸ್‌. ಡಿ. ಪಿ. ಐ. ಪುತ್ತೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಇಬ್ರಾಹಿಂ ಸಾಗ‌ರ್ ತಿಳಿಸಿದ್ದಾರೆ.


ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಪ್ರಸಕ್ತ ದೇಶದಲ್ಲಿ ಸಂವಿಧಾನ ವಿರೋಧಿ ಆಡಳಿತದಿಂದಾಗಿ ಪ್ರಜಾಪ್ರಭುತ್ವವು ಅಪಾಯದತ್ತ ಸಾಗುತ್ತಿರುವುದಲ್ಲದೆ ಪ್ರಸಕ್ತ ರಾಜ್ಯ ಸರಕಾರವು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿ ಸಮಾಜದಲ್ಲಿ ತಾರತಮ್ಯ ನೀತಿಯನ್ನು ಅನುಸರಿಸುತ್ತಾ ಬರುತ್ತಿದ್ದು ಪಕ್ಷದ ಕಾರ್ಯಕರ್ತರನ್ನು ಹಾಗೂ ದೇಶದ ಬಹು ಸಮಾಜವನ್ನು ಎಚ್ಚರಗೊಳಿಸುವ ನಿಟ್ಟಿನಲ್ಲಿ ಈ ಸಮಾವೇಶ ನಡೆಯಲಿದೆ ಎಂದು ತಿಳಿಸಿದ ಅವರು, ಸೋಶಿಯಲ್ ಡೆಮಾಕ್ರಟಿಕ್ ಪಕ್ಷ ಕಾರ್ಯಕರ್ತರಿಗೆ ದೇಶದ ಪ್ರಸಕ್ತ ರಾಜಕೀಯತೆಯನ್ನು ತಿಳಿಸುವ ಕಾರ್ಯ ಮಾಡಲಿದೆ. ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ರಿಯಾಝ್ ಪರಂಗಿಪೇಟೆ,  ರಾಜ್ಯ ಮತ್ತು ಜಿಲ್ಲಾ ಮುಖಂಡರುಗಳು ಸಮಾವೇಶದಲ್ಲಿ ಬಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮವೂ ನಡೆಯಲಿದೆ ಎಂದು ಹೇಳಿದರು.


ದ.ಕ.ಜಿಲ್ಲೆ ಸೇರಿದಂತೆ ದೇಶದ 60 ಕಡೆಗಳಲ್ಲಿ ಪಕ್ಷದಿಂದ ಮುಂದಿನ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲಿದ್ದು, ಅಭ್ಯರ್ಥಿಗಳ ಪಟ್ಟಿಯನ್ನು ಫೆ.27 ರಂದು ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು. ದೇಶದಲ್ಲಿ ವಿವಿಧತೆಯಲ್ಲಿ ಏಕತೆ ಕಾಣಬೇಕು.


ಎಸ್‌. ಡಿ. ಪಿ. ಐ. ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಉಪಾಧ್ಯಕ್ಷ ಅಬ್ದುಲ್ ಹಮೀದ್ ಸಾಲ್ಮರ ಮಾತನಾಡಿ, ಹಸಿವು ಮುಕ್ತ ಮತ್ತು ಭಯ ಮುಕ್ತ ರಾಷ್ಟ್ರ ಎಂಬ ಘೋಷಣೆಯೊಂದಿಗೆ ಪಕ್ಷವು ಎಲ್ಲಾ ಜಾತಿ ಧರ್ಮಗಳಲ್ಲಿ ಏಕತೆಯನ್ನು ಮೂಡಿಸುವ ಕೆಲಸ ಮಾಡುತ್ತಿದೆ. ಈ ದೇಶ ಬರೀ ಹಿಂದೂ ದೇಶವೆಂಬ ಕಲ್ಪನೆಯಲ್ಲಿ ಆಡಳಿತ ನಡೆಯುತ್ತಿರುವಾಗ ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಕೇವಲ ಒಂದು ಜಾತಿ, ಧರ್ಮವನ್ನು ಸೀಮಿತವಾಗದೆ ಬಸವಣ್ಣ, ಅಂಬೆಡ್ಕ‌ರ್, ನಾರಾಯಣ ಗುರುಗಳ ಕಲ್ಪಣೆಯನ್ನು ಮುಂದಿಟ್ಟು ದೇಶದಲ್ಲಿ ಸೌಹಾರ್ದತೆಯನ್ನು ಕಂಡುಕೊಳ್ಳಬೇಕು ಎಂದರು.


ಪತ್ರಿಕಾಗೋಷ್ಟಿಯಲ್ಲಿ ಎಸ್‌. ಡಿ. ಪಿ. ಐ. ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಜೊತೆ ಕಾರ್ಯದರ್ಶಿ ಅಬ್ದುಲ್ ರಹಿಮಾನ್, ಉಸ್ಮಾನ್ ಎ.ಕೆ ಉಪಸ್ಥಿತರಿದ್ದರು.

ಮರ್ಧಾಳ ಮಸೀದಿಯ ಕಾಂಪೌಂಡ್ ಒಳಗೆ ನುಗ್ಗಿ ಘೋಷಣೆ ಕೂಗಿದ ಪ್ರಕರಣ

Posted by Vidyamaana on 2023-09-25 18:02:25 |

Share: | | | | |


ಮರ್ಧಾಳ ಮಸೀದಿಯ ಕಾಂಪೌಂಡ್ ಒಳಗೆ ನುಗ್ಗಿ ಘೋಷಣೆ ಕೂಗಿದ ಪ್ರಕರಣ

ಕಡಬ: ರಾತ್ರಿ ವೇಳೆ ಬೈಕ್ ನಲ್ಲಿ ಆಗಮಿಸಿದ ಕಿಡಿಗೇಡಿಗಳಿಬ್ಬರು ಮಸೀದಿಯ ಕಾಂಪೌಂಡ್ ಒಳಗೆ ನುಗ್ಗಿ ಜೈಶ್ರೀರಾಂ ಘೋಷಣೆ ಕೂಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.



ಬಂಧಿತ ಆರೋಪಿಯನ್ನು ಬಿಳಿನೆಲೆ ಸೂಡ್ಲು ನಿವಾಸಿ ಕೀರ್ತನ್ (25) ಎಂದು ಗುರುತಿಸಲಾಗಿದೆ. ಮತ್ತೋರ್ವ ಆರೋಪಿ ಕೈಕಂಬ ನಡ್ತೋಟ ನಿವಾಸಿ ಸಚಿನ್ ಪರಾರಿಯಾಗಿದ್ದು, ಆತನ ಪತ್ತೆಗೆ ಬಲೆ ಬೀಸಲಾಗಿದೆ.



ರವಿವಾರ ರಾತ್ರಿ ಸುಮಾರು 11 ಗಂಟೆಯ ವೇಳೆಗೆ ಕಡಬ ಠಾಣಾ ವ್ಯಾಪ್ತಿಯ ಮರ್ಧಾಳ ಬದ್ರಿಯಾ ಜುಮಾ ಮಸೀದಿಯ ಕಾಂಪೌಂಡ್ ಒಳಗೆ ಬೈಕಿನಲ್ಲಿ ಬಂದ ಇಬ್ಬರು ಕಿಡಿಗೇಡಿಗಳು ಮಸೀದಿಯ ವರಾಂಡದಲ್ಲಿ ಬೈಕನ್ನು ಹಿಂತಿರುಗಿಸಿ ತೆರಳಿರುವುದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಜೈಶ್ರೀರಾಂ ಘೋಷಣೆ ಕೂಗಿದ್ದಾರೆ ಎನ್ನಲಾಗಿದ್ದು, ಮಸೀದಿಯಲ್ಲಿದ್ದ ಧರ್ಮಗುರುಗಳನ್ನು ಕಂಡು ತಕ್ಷಣವೇ ಹಿಂತಿರುಗಿರುವುದಾಗಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

ಮಂಗಳೂರು : ಖಾಸಗಿ ಬಸ್ ನಿರ್ವಾಕರ ನಡುವೆ ಜಗಳ; ಇಬ್ಬರ ಬಂಧನ

Posted by Vidyamaana on 2024-09-06 07:17:20 |

Share: | | | | |


ಮಂಗಳೂರು : ಖಾಸಗಿ ಬಸ್ ನಿರ್ವಾಕರ ನಡುವೆ ಜಗಳ; ಇಬ್ಬರ ಬಂಧನ

ಮಂಗಳೂರು : ತಲಪಾಡಿ - ಮಂಗಳೂರು ನಡುವೆ ಸಂಚರಿಸುವ ಪದ್ಮ ಟ್ರಾವೆಲ್ಸ್ ಬಸ್ ಮತ್ತು ಹೊಸಂಗಡಿ ಜಂಕ್ಷನ್ ನಿಂದ ಮಂಗಳೂರು ನಡುವೆ ಸಂಚರಿಸುವ ಅಸರ್ ಟ್ರಾವೆಲ್ಸ್ ಬಸ್ ನಿರ್ವಾಕರ ನಡುವೆ ಜಗಳ ನಡೆದಿದ್ದು, ಇದರ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.ಬಸ್ ನಿರ್ವಾಹಕರಾದ ಅಜಯ್ ಮತ್ತು ವಿಷ್ಣು ಎಂಬವರು ಪರಸ್ಪರ ಹೊಡೆದಾಡಿಕೊಂಡಿದ್ದು,ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಟ್ಲ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ: ಮೂವರು ಆರೋಪಿಗಳ ಬಂಧನ

Posted by Vidyamaana on 2023-07-30 15:47:41 |

Share: | | | | |


ವಿಟ್ಲ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ: ಮೂವರು ಆರೋಪಿಗಳ ಬಂಧನ

ವಿಟ್ಲ: ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಮೂವರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆಮೂಡಬಿದರೆ ಮೂಲದ ಪ್ರಸ್ತುತ ಬೆರಿಪದವಿ ನಿವಾಸಿ ಅಕ್ಷಯ್ ದೇವಾಡಿಗ, ಬಾಯಾರು ಗ್ರಾಮದ ಕೊಜಪ್ಪ ನಿವಾಸಿ ಕಮಲಾಕ್ಷ ಬೆಳ್ಳಾಡ, ಬೆರಿಪದವು ನಿವಾಸಿ ಸುಕುಮಾರ ಬೆಳ್ಳಾಡ ಬಂಧಿತರಾಗಿದ್ದಾರೆ.ಅಕ್ಷಯ್ ಬೆರಿಪದವಿನಲ್ಲಿ ಅಣ್ಣನ ಮನೆಯಲ್ಲಿದ್ದು ಕೊಂಡು ಪೈಟಿಂಗ್ ಕೆಲಸ ನಿರ್ವಹಿಸುತ್ತಿದ್ದರೆ, ಕಮಲಾಕ್ಷ ಗಾರೆ ಕೆಲಸ ಹಾಗೂ ಸುಕುಮಾರ ಚಾಲಕ ವೃತ್ತಿಯನ್ನು ನಡೆಸಿಕೊಂಡಿದ್ದರು.ವಿಟ್ಲ ಠಾಣೆಯಲ್ಲಿ ಪೊಕ್ಸ್‌ ಹಾಗೂ ದಲಿತ ದೌರ್ಜನ್ಯ ಪ್ರಕರಣ ದಾಖಲಾಗಿದ್ದು, ಯುವತಿ ನೀಡಿದ ಮಾಹಿತಿಯಂತೆ ಮೂರು ಮಂದಿಯ ಬಂಧನ ಮಾಡಲಾಗಿದೆ

ಕಾಸರಗೋಡಿನ ಶೇಣಿಯಲ್ಲಿ ಬಾಲಿವುಡ್ ತಾರೆ ಸನ್ನಿ ಲಿಯೋನ್

Posted by Vidyamaana on 2024-04-27 16:51:17 |

Share: | | | | |


ಕಾಸರಗೋಡಿನ ಶೇಣಿಯಲ್ಲಿ ಬಾಲಿವುಡ್ ತಾರೆ ಸನ್ನಿ ಲಿಯೋನ್

ಕಾಸರಗೋಡು : ನಟಿ ಸನ್ನಿ ಲಿಯೋನ್ ಕಾಸರಗೋಡಿನಲ್ಲಿ ಪ್ರತ್ಯಕ್ಷವಾಗಿದ್ದಾರೆ. ಕಾಸರಗೋಡಿನ ಸೀತಂಗೋಳಿ ಸಮೀಪದ ಶೇಣಿಯಲ್ಲಿ ಸಿನಿಮಾ ಸನ್ನಿ ಲಿಯೋನ್ ಅವರ ಹಿಂದಿ ಸಿನಿಮಾ ಶೂಟಿಂಗ್ ನಡೆಯುತ್ತಿದ್ದು ಅದರಲ್ಲಿ ಭಾಗಿಯಾಗಿದ್ದಾರೆ.ನೆಚ್ಚಿನ ತಾರೆಯನ್ನು ನೋಡಲು ಅಭಿಮಾನಿಗಳು ಮುಗಿ ಬಿದ್ದಿದ್ದಾರೆ.

Recent News


Leave a Comment: