ಶಿರೂರು ಭೂಕುಸಿತ ದುರಂತ : ಪತ್ತೆಯಾಯ್ತು ಎಂಟನೇ ಮೃತದೇಹ

ಸುದ್ದಿಗಳು News

Posted by vidyamaana on 2024-07-23 18:35:28 |

Share: | | | | |


ಶಿರೂರು ಭೂಕುಸಿತ ದುರಂತ : ಪತ್ತೆಯಾಯ್ತು ಎಂಟನೇ ಮೃತದೇಹ

ಕಾರವಾರ: ಶಿರೂರು ಭೂಕುಸಿತ ಸ್ಥಳದಲ್ಲಿ 8 ದಿವಸದ ಬಳಿಕ ಮತ್ತೊಂದು ಮೃತದೇಹ ಪತ್ತೆಯಾಗಿದೆ. ಈ ಮೂಲಕ 8ನೇ ಮೃತದೇಹ ಸಿಕ್ಕಂತಾಗಿದೆ. ಈ ನಡುವೆ ಕೇರಳದ ಲಾರಿ ಚಾಲಕ ಅರ್ಜುನ್‌ ಅವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. 

ಮಂಗಳವಾರ ಬೆಳಗ್ಗೆ ಗುಡ್ಡ ಕುಸಿತದಿಂದ ನಾಪತ್ತೆಯಾಗಿದ್ದ ಮಹಿಳೆ ಸಣ್ಣಿ ಹನ್ಮಂತ ಗೌಡ (57) ಸಾವನ್ನಪ್ಪಿದ್ದು, ಮೃತದೇಹ ದೊರೆತಿದೆ. ಗಂಗಾವಳಿ ನದಿಯ ಗಂಗೆಕೊಳ್ಳ ಸಮೀಪ ಅವರ ಶವ ಪತ್ತೆಯಾಗಿದೆ. ಶಿರೂರು ಗುಡ್ಡ ಕುಸಿತದಿಂದಾಗಿ ಉಳುವರೆ ಗ್ರಾಮದಲ್ಲಿ ಮನೆ ಕುಸಿತವಾಗಿ ಸಣ್ಣಿ ಹನ್ಮಂತ ಗೌಡ ಅವರು ಕಣ್ಮರೆಯಾಗಿದ್ದರು. ಇನ್ನೂ ಅರ್ಜುನ್‌ ಸಹಿತ ಮೂವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಸ್ಥಳದಲ್ಲಿ NDRF, SDRF, ಮಿಲಿಟರಿ ಕಾರ್ಯಪಡೆಯಿಂದ ಶೋಧ ಕಾರ್ಯ ಮುಂದುವರೆದಿದೆ. 

ಕೇರಳ ಮಾಧ್ಯಮಗಳ ಕವರೇಜ್‌ 

ಸದ್ಯ ಕರ್ನಾಟಕದ ಉತ್ತರ ಕನ್ನಡದಲ್ಲಾದ ಭೂಕುಸಿತ ವರದಿಯನ್ನ ಕನ್ನಡಿಗರು ಕೂಡಾ ಮಲಯಾಳಂ ಸುದ್ದಿವಾಹಿನಿಗಳಲ್ಲಿ ವೀಕ್ಷಿಸುವಂತಾಗಿದೆ. ಕೇರಳದ ಪ್ರಮುಖ ರಾಜ್ಯ ಮಟ್ಟದ ವಾಹಿನಿಗಳು ಕಳೆದ 4 ದಿನಗಳಿಂದಲೂ ಉತ್ತರ ಕನ್ನಡದಲ್ಲಿ ಬೀಡುಬಿಟ್ಟಿವೆ. ಅರ್ಜುನ್‌ ಶೋಧ ಕಾರ್ಯಾಚರಣೆಗೆ ಹೆಚ್ಚಿನ ಒತ್ತಡ ಏರುತ್ತಿದೆ. ಜೊತೆಗೆ ಕೇರಳದ ನಾಗರಿಕ ಸುರಕ್ಷತಾ ತಂಡಗಳು ಕೂಡಾ ಕಾರ್ಯಾಚರಣೆ ನಡೆಸುವ ನಿಟ್ಟಿನಲ್ಲಿ ಕೇರಳದಿಂದ ಶಿರೂರಿಗೆ ತಂಡವಾಗಿ ಆಗಮಿಸಿವೆ

 Share: | | | | |


ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಶೋಭಾ ಕರಂದ್ಲಾಜೆ?: ಸ್ಪಷ್ಟನೆ ನೀಡಿದ ಕೇಂದ್ರ ಸಚಿವೆ

Posted by Vidyamaana on 2023-10-23 11:39:49 |

Share: | | | | |


ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಶೋಭಾ ಕರಂದ್ಲಾಜೆ?: ಸ್ಪಷ್ಟನೆ ನೀಡಿದ ಕೇಂದ್ರ ಸಚಿವೆ

ಮೈಸೂರು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಕಟ್ಟಲು ಹೈಕಮಾಂಡ್ ತೀರ್ಮಾನಿಸಿದೆ ಎಂದು ತಿಳಿದುಬಂದಿದೆ.ಇನ್ನು ಬಗ್ಗೆ ಸ್ವತಃ ಶೋಭಾ ಕರಂದ್ಲಾಜೆ ಸ್ಪಷ್ಟನೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಶೋಭಾ ಕರಂದ್ಲಾಜೆ, ಬಿಜೆಪಿ ರಾಜ್ಯಾಧ್ಯಕ್ಷೆ ಸ್ಥಾನ ನೀಡುವ ಬಗ್ಗೆ ನನಗೆ ಮಾಹಿತಿ ಇಲ್ಲ. ನಾನು ಕೇಂದ್ರ ಸಚಿವೆಯಾಗಿಯೇ ಸಂತೋಷವಾಗಿದ್ದೇನೆ. ನಾನು ರಾಜ್ಯ ರಾಜಕಾರಣಕ್ಕೆ ಬರುವ ವಿಚಾರವೇ ಇಲ್ಲ. ನನಗೆ ಒಳ್ಳೇ ಖಾತೆ ಸಿಕ್ಕಿದೆ, ಅಲ್ಲಿಯೇ ಒಳ್ಳೇ ಕೆಲಸ ಮಾಡುತ್ತಿದ್ದೇನೆ. ನನಗೆ ವರಿಷ್ಠರಿಂದಲೂ ಯಾವ ಸೂಚನೆ ಬಂದಿಲ್ಲ. ಇಂತಹ ಸುದ್ದಿ ಹೇಗೆ ಬರುತ್ತಿವೆಯೋ ನನಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ

ಉಡುಪಿ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ - ಕೊಲೆ ಶಂಕೆ

Posted by Vidyamaana on 2023-10-17 20:26:45 |

Share: | | | | |


ಉಡುಪಿ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ - ಕೊಲೆ ಶಂಕೆ

ಉಡುಪಿ :ಕರಾವಳಿ ಹೋಟೆಲಿನ ಆವರಣದಲ್ಲಿ ವ್ಯಕ್ತಿಯೊಬ್ಬ ಮೃತಪಟ್ಟಿದ್ದು ಮೇಲ್ನೋಟಕ್ಕೆ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ.

ಮಾಹಿತಿ ಪಡೆದ ಸಮಾಜ ಸೇವಕ ವಿಶು ಶೆಟ್ಟಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸ್ ಅಧಿಕಾರಿ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ. ಕೆಎಂಸಿ ಮಣಿಪಾಲ ಹಾಗೂ ಮಂಗಳೂರಿನ ನ್ಯಾಯ ವಿಜ್ಞಾನ ಪ್ರಯೋಗಾಲಯದವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಹರಿತವಾದ ಆಯುಧದಿಂದ ವ್ಯಕ್ತಿಯ ಬಲ ಕೈ ಕಡಿದಿದ್ದು ತೀವ್ರ ರಕ್ತಸ್ರಾವವೇ ಸಾವಿಗೆ ಕಾರಣವಿರಬಹುದು ಎಂದು ಮೇಲ್ನೋಟಕ್ಕೆ ಕಂಡುಬಂದಿದೆ.


ಉಡುಪಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ವಿಶು ಶೆಟ್ಟಿಯವರು ಕೆಎಂಸಿ ಶವಾಗಾರದಲ್ಲಿ ಶವ ಇಡಲು ಪೊಲೀಸರಿಗೆ ಸಹಕರಿಸಿದ್ದಾರೆ. ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು, ವಿಶು ಶೆಟ್ಟಿ ಹಾಗೂ ರಾಮದಾಸ್ ಪಾಲನ್ ಕಾನೂನು ಪ್ರಕ್ರಿಯೆಗೆ ಸಹಕರಿಸಿದ್ದಾರೆ. ಸಂಬಂಧಿಕರು ಅಥವಾ ಸಂಬಂಧ ಪಟ್ಟವರು ಠಾಣೆಗೆ ಸಂಪರ್ಕಿಸುವಂತೆ ಕೋರಲಾಗಿದೆ.

ಒಂದು ಬಿಳಿಕೂದಲು ಕಿತ್ತರೆ ಸುತ್ತಲಿನ ಕೂದಲು ಬಿಳಿಯಾಗುತ್ತಾ?

Posted by Vidyamaana on 2023-11-24 07:22:12 |

Share: | | | | |


ಒಂದು ಬಿಳಿಕೂದಲು ಕಿತ್ತರೆ ಸುತ್ತಲಿನ ಕೂದಲು ಬಿಳಿಯಾಗುತ್ತಾ?

  ಕೂದಲನ್ನು ಕಿತ್ತುಕೊಳ್ಳುವುದರಿಂದ ಕೂದಲ ಬೇರಿಗೆ ತೊಂದರೆಯಾಗಬಹುದು. ಹೀಗಾಗಿ, ಕೂದಲು ಕೀಳುವುದು ಒಳ್ಳೆಯ ಅಭ್ಯಾಸವಲ್ಲ. ಆದರೆ, ಬೇರೆ ಕೂದಲು ಬಿಳಿಯಾಗುವುದಕ್ಕೂ ನಿಮ್ಮ ಕೂದಲು ಕಿತ್ತುಕೊಳ್ಳುವುದಕ್ಕೂ ಸಂಬಂಧವಿಲ್ಲ.ಕೂದಲಿನ ಬಗ್ಗೆ ನಮಗೆ ಹಲವು ನಂಬಿಕೆಗಳಿವೆ.ಅದರಲ್ಲೂ ಬಿಳಿಯಾದ ಕೂದಲನ್ನು ಕಿತ್ತರೆ ಅದರ ಸುತ್ತಲಿನ ಕೂದಲು ಬಿಳಿಯಾಗುತ್ತದೆ ಎಂಬುದು ಅನೇಕರ ನಂಬಿಕೆ. ಆದರೆ, ಇದು ನಿಜವಾ? ಕೂದಲಿನ ಕೋಶಕದಲ್ಲಿ ಮೆಲನಿನ್ ಕಡಿಮೆಯಾದಾಗ ನಿಮ್ಮ ಕೂದಲಿನ ಬಣ್ಣ ಬದಲಾವಣೆಯಾಗುತ್ತದೆ. ನಿಮ್ಮ ಜೀವಕೋಶಗಳು ಮೆಲನಿನ್ ಉತ್ಪಾದನೆಯನ್ನು ನಿಲ್ಲಿಸಿದಂತೆ, ನಿಮ್ಮ ಕೂದಲುಬೂದು ಅಥವಾ ಬಿಳಿ ಬಣ್ಣಕ್ಕೆ ತಿರುಗುತ್ತದೆ. ಆದ್ದರಿಂದ, ನಿಮ್ಮ ಬೂದು ಕೂದಲನ್ನು ಕಿತ್ತುಕೊಳ್ಳುವುದರಿಂದ ಉಳಿದ ಕೂದಲುಗಳು ಕೂಡ ಬಿಳಿಯಾಗುತ್ತವೆ ಎಂಬುದು ನಿಜವಲ್ಲ.ಆದರೆ, ಕೂದಲನ್ನು ಕಿತ್ತುಕೊಳ್ಳುವುದರಿಂದ ಕೂದಲ ಬೇರಿಗೆ ತೊಂದರೆಯಾಗಬಹುದು. ಹೀಗಾಗಿ, ಕೂದಲು ಕೀಳುವುದು ಒಳ್ಳೆಯ ಅಭ್ಯಾಸವಲ್ಲ. ಆದರೆ, ಬೇರೆ ಕೂದಲು ಬಿಳಿಯಾಗುವುದಕ್ಕೂ ನಿಮ್ಮ ಕೂದಲು ಕಿತ್ತುಕೊಳ್ಳುವುದಕ್ಕೂ ಸಂಬಂಧವಿಲ್ಲ. ಒಂದು ಕೂದಲು ಕಿತ್ತುಕೊಂಡರೆ ಅದು ಇತರ ಕೂದಲಿನ ಬೇರುಗಳನ್ನು ದುರ್ಬಲಗೊಳಿಸಬಹುದು. ಇದು ನಿರ್ದಿಷ್ಟ ಸ್ಥಳದಲ್ಲಿ ಕೂದಲು ಮತ್ತೆ ಬೆಳೆಯುವುದನ್ನು ತಡೆಯಬಹುದು.


ನಮ್ಮ ಜೀವನಶೈಲಿಯು ನಮ್ಮ ಜೀವಕೋಶಗಳ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ ಎಂಬುದನ್ನು ನಾವು ಅರ್ಥಮಾಡಿಕೊಳ್ಳಬೇಕು. ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ನೀವು ಬಯಸಿದರೆ ನೀವು ಸೇವಿಸಬೇಕಾದ ಮತ್ತು ತಪ್ಪಿಸಬೇಕಾದ ಆಹಾರಗಳು ಇಲ್ಲಿವೆ. ಯಾವ ಆಹಾರಗಳು ಉತ್ತಮ ಮೆಲನಿನ್ ಉತ್ಪಾದನೆಯನ್ನು ಉತ್ತೇಜಿಸುತ್ತವೆ? ಎಂಬ ಮಾಹಿತಿ ಇಲ್ಲಿದೆ.ದೀರ್ಘಕಾಲದವರೆಗೆ ಸೂರ್ಯನ ಬೆಳಕಿಗೆ ಒಡ್ಡಿಕೊಳ್ಳುವುದರಿಂದ ನಮ್ಮ ಚರ್ಮಕ್ಕೆ ಸಾಕಷ್ಟು ಹಾನಿ ಉಂಟಾಗುತ್ತದೆ. ಸೂರ್ಯನಿಗೆ ಅತಿಯಾದ ಶಾಖ ಕೂದಲಲ್ಲಿ ಮೆಲನಿನ್ ಮಟ್ಟವನ್ನು ಕಡಿಮೆ ಮಾಡುತ್ತದೆ. ಇದು ಕೂದಲು ಅಕಾಲಿಕವಾಗಿ ಬಿಳಿಯಾಗಲು ಕಾರಣವಾಗುತ್ತದೆ.


ಧೂಮಪಾನವು ದೇಹದ ಮೇಲೆ ವಿವಿಧ ನೆಗೆಟಿವ್ ಪರಿಣಾಮಗಳನ್ನು ಬೀರುತ್ತದೆ. ಅತಿಯಾದ ಧೂಮಪಾನವು ನೆತ್ತಿಯಲ್ಲಿ ರಕ್ತದ ಹರಿವನ್ನು ತಡೆಯುತ್ತದೆ. ಇದು ಕೂದಲಿನ ಆರೋಗ್ಯವನ್ನು ಹದಗೆಡಿಸುತ್ತದೆ. ವಾಸ್ತವವಾಗಿ, ಧೂಮಪಾನವು ಅಕಾಲಿಕವಾಗಿ ಕೂದಲು ಬಿಳಿಯಾಗುವುದು ಹಾಗೂ ಕೂದಲು ಉದುರುವಿಕೆಗೆ ಕಾರಣವಾಗಬಹುದು. ಒತ್ತಡ ಮತ್ತು ಆತಂಕದಂತಹ ಇತರ ಅಸ್ವಸ್ಥತೆಗಳು ನಿಮ್ಮ ಒಟ್ಟಾರೆ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರಬಹುದು. ಅತಿಯಾದ ಒತ್ತಡವು ನಿದ್ರೆಯ ಕೊರತೆ, ಹಸಿವಿನ ಕೊರತೆ ಮತ್ತು ಇತರ ಸಮಸ್ಯೆಗಳಿಗೆಕಾರಣವಾಗಬಹುದು. ಇವುಗಳು ದೇಹದ ಮೇಲೆ ಕೆಟ್ಟ ಪರಿಣಾಮ ಬೀರುತ್ತವೆ ಮತ್ತು ಕೂದಲು ಅಕಾಲಿಕವಾಗಿ ಬಿಳಿಯಾಗುವುದಕ್ಕೆ ಕಾರಣವಾಗಬಹುದು.ಕೂದಲಿನಲ್ಲಿ ಮೆಲನಿನ್ ಉತ್ಪಾದನೆಯನ್ನು ಉತ್ತೇಜಿಸುವಲ್ಲಿ ವಿಟಮಿನ್‌ಗಳು ಪ್ರಮುಖ ಪೋಷಕಾಂಶವಾಗಿದೆ. ಇದಲ್ಲದೆ, ವಿಶೇಷವಾಗಿ ವಿಟಮಿನ್ ಬಿ 12 ಕೆಂಪು ರಕ್ತ ಕಣಗಳನ್ನು ಉಳಿಸಿಕೊಳ್ಳಲು ದೇಹಕ್ಕೆ ಅಗತ್ಯವಾಗಿರುತ್ತದೆ. ದೇಹದಲ್ಲಿ ವಿಟಮಿನ್ ಬಿ 12 ಕೊರತೆಯು ಕೂದಲಿಗೆ ರಕ್ತದ ಹರಿವನ್ನು ಕಡಿಮೆ ಮಾಡುತ್ತದೆ. ವಿಟಮಿನ್ ಕೊರತೆಯು ಕೂದಲು ಬಿಳಿಯಾಗುವುದು ಮುಂತಾದ ವಿವಿಧ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡಬಹುದು.

ಇಂದು ಸಂಜೆ ವಿಟ್ಲದಲ್ಲಿ ನೂತನ ಶಾಸಕರು- ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮತದಾರರಿಗೆ ಅಭಿನಂದನಾ ಸಮಾರಂಭ

Posted by Vidyamaana on 2023-05-30 06:38:17 |

Share: | | | | |


ಇಂದು ಸಂಜೆ ವಿಟ್ಲದಲ್ಲಿ ನೂತನ ಶಾಸಕರು- ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮತದಾರರಿಗೆ ಅಭಿನಂದನಾ ಸಮಾರಂಭ

ವಿಟ್ಲ: ಪುತ್ತೂರು ವಿಧಾನ ಸಭಾ ಕ್ಷೇತ್ರದ ನೂತನ ಶಾಸಕರಾಗಿ ಆಯ್ಕೆಯಾದ ಅಶೋಕ್ ಕುಮಾರ್ ರೈ ಯುವರ ಅಭಿನಂದನಾ ಸಭೆ ಮೇ 30 ಮಂಗಳವಾರ ವಿಟ್ಲ ಚರ್ಚ್ ಬಳಿಯ ಶತಮಾನೋತ್ಸವ ಸಮುದಾಯ ಭವನದಲ್ಲಿ ನಡೆಯಲಿದೆ,

ಮಧ್ಯಾಹ್ನ 3.30 ಕ್ಕೆ ನಡೆಯುವ ಸಮಾರಂಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮತದಾರರಿಗೆ ಅಭಿನಂದನೆ ನಡೆಯಲಿದೆ.

ಆದರಿಂದ ಪಕ್ಷದ ಮುಖಂಡರು, ಮುಂಚೂಣಿ ಘಟಕದ ಪದಾದಿಕಾರಿಗಳು,ವಲಯ , ಬೂತ್ ಮಟ್ಟದ ಪದಾಧಿಕಾರಿಗಳು, ಬ್ಲಾಕ್ ಯುವ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಪಕ್ಷದ ಕಾರ್ಯಕರ್ತರು, ಹಿತೈಷಿಗಳು, ಬೆಂಬಲಿಗರು ಹೆಚ್ಚಿನ  ಸಂಖ್ಯೆಯಲ್ಲಿ ಆಗಮಿಸಿ  ಕಾರ್ಯಕ್ರಮ ಯಶಸಿಗೊಳಿಸಬೇಕಾಗಿ  ಪ್ರಕಟಣೆ ತಿಳಿಸಿದೆ.

ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈಯವರಿಂದ ಗ್ರಾಮೀಣ ಮತದಾರರ ಭೇಟಿ; ಮತ ಯಾಚನೆ

Posted by Vidyamaana on 2023-05-06 23:19:43 |

Share: | | | | |


ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈಯವರಿಂದ ಗ್ರಾಮೀಣ ಮತದಾರರ ಭೇಟಿ; ಮತ ಯಾಚನೆ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೆತ್ರದ ವಿವಿಧ ಗ್ರಾಮಗಳಿಗೆಭೇಟಿ ನೀಡಿ ಕಾಂಗ್ರೆಸ್ ಅಭ್ಯರ್ಥಿ ಶನಿವಾರ ಮತಯಾಚನೆ ನಡೆಸಿದರು. ಮುಖ್ಯವಾಗಿ ದಲಿತ ಕಾಲನಿಗಳು ಹಾಗೂ ಮನೆ ಮನೆಗೆ ಭೇಟಿ ನೀಡುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವಂತೆ ಮತದಾರರಲ್ಲಿ ಮನವಿ ಮಾಡಿದರು.

ಉಪ್ಪಿನಂಗಡಿ, ನೆಕ್ಕಿಲಾಡಿ, ಹಿರೆಬಂಡಾಡಿ, ಬನ್ನೂರು, ಒಳಮೊಗ್ರು, ಅರಿಯಡ್ಕ, ಬಜತ್ತೂರು, ಸೇರಿದಂತೆ ಹಲವು ಗ್ರಾಮಗಳಿಗೆ ಭೇಟಿ ನೀಡಿದ್ದರು. ಈ ವೇಳೆ ಹಲವಾರು ಕಾರ್ಯಕರ್ತರು ಇವರ ಜೊತೆಗಿದ್ದು ಅಭ್ಯರ್ಥಿ ಪರ ಮತಯಾಚನೆ ನಡೆಸಿದರು. ಈ ಸಂಧರ್ಭದಲ್ಲಿ ಮಾತನಾಡಿದ ಅಶೋಕ್ ರೈ ಬಹುತೇಕ ದಲಿತ ಕಾಲನಿಗಳು ಇನ್ನೂ ಅಭಿವೃದ್ದಿ ಕಂಡಿಲ್ಲ. ರಸ್ತೆಯಿಲ್ಲ, ಕುಡಿಯುವ ನೀರಿನ ವ್ಯವಸ್ಥೆಯನ್ನೂ ಸಮರ್ಪಕವಾಗಿ ಮಾಡಿಲ್ಲ. ದಲಿತರ ಅಭಿವೃದ್ದಿಗೆ ಸರಕಾರ ವರ್ಷದಿಂದ ವರ್ಷಕ್ಕೆ ಕೋಟಿಗಟ್ಟಲೆ ಅನುದಾನವನ್ನು ಮೀಸಲಿಡುತ್ತದೆ ಆದರೆ ಆ ಅನುದಾನ ಎಲ್ಲಿ ಬಳಕೆಯಾಗಿದೆ ಎಂಬುದು ಗೊತ್ತಾಗುತ್ತಿಲ್ಲ. ಕಳೆದ ಐದು ವರ್ಷಗಳಿಂದ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿ ಕಾಲನಿಗಳಲ್ಲಿ ಯಾವುದೇ ಅಭಿವೃದ್ದಿ ಕೆಲಸಗಳನ್ನು ಮಾಡಿಲ್ಲ. ಮುಗ್ದ ಜನರನ್ನು ಧರ್ಮದ ಹೆಸರಿನಲ್ಲಿ ಬಲಿಪಶುಗಳನ್ನಾಗಿ ಮಡಿ ಅವರನ್ನು ಬಳಕೆ ಮಾಡಿಕೊಂಡ ಬಿಜೆಪಿ ಅವರ ಅಭಿವೃದ್ದಿಗೆಂದೇ ಬಂದ ಹಣವನ್ನು ಇಲ್ಲಿ ವಿನಿಯೋಗಿಸಿಲ್ಲ ಎಂದು ಅರೋಪಿಸಿದರು.

ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರಲಿದ್ದು ಪುತ್ತೂರಿನಲ್ಲಿ ಕಾಂಗ್ರೆಸ್ ಗೆಲ್ಲಿಸಿದರೆ ಎಲ್ಲಾ ಕಾಲನೊಗಳ ಸಂಪೂರ್ಣ ಅಭಿವೃದ್ದಿ ಮಾಡುವುದಾಗಿ ಭರವಸೆ ನೀಡಿದರು.ಈ ಸಂದರ್ಬದಲ್ಲಿ ವಿಟ್ಲ- ಉಪ್ಪಿನಂಗಡಿ ಬ್ಲಾಕ್ ಅದ್ಯಕ್ಷರಾದ ಡಾ. ರಾಜಾರಾಂ ಕೆ ಬಿ, ಮುರಳೀಧರ್ ರೈ ಮಠಂತಬೆಟ್ಟು , ಉಪ್ಪಿನಂಗಡಿ ಗ್ರಾಪಂ ಸದಸ್ಯ ಯು ಟಿ ತೌಸೀಫ್ ಸೇರಿದಂತೆ ಹಲವು ಮಂದಿ ಕಾಂಗ್ರೆಸ್ ಮುಖಂಡರು, ಗ್ರಾಪಂ ಸದಸ್ಯರುಗಳು, ಮಾಜಿ ಗ್ರಾಪಂ ಸದಸ್ಯರುಗಳು, ವಿವಿಧ ಘಟಕಗಳ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ತಿತರಿದ್ದರು. ಮನೆ ಮನೆ ಭೇಟಿ ವೇಳೆ ಅಶೋಕ್ ರೈ ಯವರಿಗೆ ಅಭೂತ ಪೂರ್ವ ಬೆಂಬಲ ವ್ಯಕ್ತವಾಯಿತು.

9/11 ಸಮಸ್ಯೆ ಶೀಘ್ರವೇ ಇತ್ಯರ್ಥ: ಶಾಸಕ ಅಶೋಕ್ ರೈಗೆ ಭರವಸೆ ನೀಡಿದ ಸಚಿವ ಖರ್ಗೆ*

Posted by Vidyamaana on 2024-07-12 07:48:56 |

Share: | | | | |


9/11 ಸಮಸ್ಯೆ ಶೀಘ್ರವೇ ಇತ್ಯರ್ಥ: ಶಾಸಕ ಅಶೋಕ್ ರೈಗೆ ಭರವಸೆ ನೀಡಿದ ಸಚಿವ ಖರ್ಗೆ*

ಪುತ್ತೂರು: ೯/೧೧ ಸಮಸ್ಯೆಯಿಂದ ಜನರಿಗೆ ತುಂಬಾ ಕಷ್ಟವಾಗಿದ್ದು ಅದರಲ್ಲೂ ಗ್ರಾಮೀಣ ಭಾಗದ ಬಡವರಿಗೆ ತೀವ್ರ ಸಂಕಷ್ಟ ಎದುರಾಗಿದ್ದು ಈ ಸಮಸ್ಯೆಯನ್ನು ಶೀಘ್ರವೇ ಬಗೆಹರಿಸಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈಯವರು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ ಖರ್ಗೆಅವರಿಗೆ ಮನವಿ ಮಾಡಿದ್ದು ಸಮಸ್ಯೆಯನ್ನು ಶೀಘ್ರವೇ ಇತ್ಯರ್ಥಪಡಿಸುವ ಭರವಸೆ ನೀಡಿದ್ದಾರೆ.

ಗುರುವಾರ ಬೆಂಗಳೂರಿನಲ್ಲಿ ಸಚಿವರ ಕಚೇರಿಗೆ ಭೇಟಿ ನೀಡಿದ ಶಾಸಕ ಅಶೋಕ್ ರೈಯವರು ೯/೧೧ ಸಮಸ್ಯೆ ಗಂಭೀರವಾಗಿದೆ. ಮನೆ ಕಟ್ಟುವಲ್ಲಿ ಅಗತ್ಯವಾಗಿ ಬೇಕಾದ ಈ ಪತ್ರಕ್ಕಾಗಿ ಜನ ಪರದಾಟ ನಡೆಸುವಂತಾಗಿದೆ. ಈ ಹಿಂದೆ ಗ್ರಾಪಂ ಕಚೇರಿಯಲ್ಲೇ ೯/೧೧ ಪತ್ರವನ್ನು ನೀಡಲಾಗುತ್ತಿತ್ತು. ಅಧಿಕಾರ ಅವಧಿಯ ಕೊನೇ ಗಳಿಗೆಯಲ್ಲಿ ಕಳೆದ ಅವಧಿಯ ಬಿಜೆಪಿ ಸರಕಾರ ಈ ವ್ಯವಸ್ಥೆಯನ್ನು ಗ್ರಾಪಂ ನಿಂದ ಮೂಡಾಕ್ಕೆ ವರ್ಗಾವಣೆ ಮಾಡಿತ್ತು. ಆ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಸ್ತಿತ್ವಕ್ಕೆ ಬಂದರೂ ಅದೇ ಸಮಸ್ಯೆ ಮುಂದುವರೆದಿದೆ. ಜನರಿಗೆ ತೊಂದರೆ ನೀಡುವ ಯಾವುದೇ ಕಾನೂನು ಇಲ್ಲಿ ಬೇಡ. ೯/೧೧ ಗ್ರಾಮದ ಕಟ್ಟಕಡೇಯ ವ್ಯಕ್ತಿಗೂ ಅಗತ್ಯವಾಗಿ ಬೇಕಾಗಿದೆ. ಮನೆ ಕಟ್ಟುವ ವೇಳೆ ಈ ದಾಖಲೆ ಪತ್ರಕ್ಕಾಗಿ ಮಂಗಳೂರಿನ ಮುಡಾ ಕಚೇರಿಗೆ ತೆರಳಬೇಕಾಗಿದೆ. ಕಚೇರಿ ಅಲೆದಾಟ ಬಗ್ಗೆ ಪರಿಜ್ಞಾನವಿಲ್ಲದ ಬಡವರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಸರಕಾರ ಕೂಡಲೇ ಎಚ್ಚೆತ್ತು ೯/೧೧ ಸಮಸ್ಯೆಯನ್ನು ಇತ್ಯರ್ಥ ಮಾಡಬೇಕು ಎಂದು ಶಾಸಕರು ಸಚಿವರಲ್ಲಿ ಮನವಿ ಮಾಡಿದ್ದಾರೆ.

Recent News


Leave a Comment: