ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಸುದ್ದಿಗಳು News

Posted by vidyamaana on 2024-03-23 15:52:34 | Last Updated by Vidyamaana on 2024-03-23 15:52:34

Share: | | | | |


ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಕಾರಿನೊಳಗಿದ್ದ ಮೂವರು ಸಾವನ್ನಪ್ಪಿದ ಸಂಬಂಧಿಸಿದಂತೆ ಮೂವರು ಸೇರಿ 50 ಲಕ್ಷ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಕುಟುಂಬ ಸದಸ್ಯರು ಕೋರಾ ಪೊಲೀಸರ ವಿಚಾರಣೆ ವೇಳೆ ಮಾಹಿತಿ ನೀಡಿದ್ದಾರೆ.

*💥Whats App Group ಗೆ ಸೇರಲು ಕ್ಲಿಕ್ ಮಾಡಿ

*ಹಣ ತೆಗೆದುಕೊಂಡು ಹೋದ ವಿಚಾರ*:  ಇನ್ನೂ ಕಾರಿನಲ್ಲಿ ಹೋಗುವಾಗ ಮದಡ್ಕದ ಇಸಾಕ್ ಉಜಿರೆಯಲ್ಲಿದ್ದ ಸ್ವಂತ ಮನೆಯನ್ನು ಮಾರಾಟ ಮಾಡಿದ ಹಣ ಮತ್ತು ಮಗಳ ಚಿನ್ನವನ್ನು ಅಡವಿಟ್ಟು ಸುಮಾರು 35 ಲಕ್ಷ ಹಣವನ್ನು ತೆಗೆದುಕೊಂಡು ಹೋಗಿದ್ದರು ಎಂದು ಇಸಾಕ್ ಪತ್ನಿ ಕೋರಾ ಪೊಲೀಸ್ ಠಾಣೆಯಲ್ಲಿ ಮಾ.23 ರಂದು ಪೊಲೀಸ್ ವಿಚಾರಣೆ ವೇಳೆ ಹೇಳಿಕೆಯನ್ನು ನೀಡಿದ್ದಾರೆ. ಇನ್ನೂ ಶಿರ್ಲಾಲು ಸಿದ್ದಿಕ್ ಮತ್ತು ಟಿ.ಬಿ.ಕ್ರಾಸ್ ಸಾಹುಲ್ ಹಮೀದ್ ಕೂಡ ಸ್ನೇಹಿತರ ಮೂಲಕ ಪಡೆದ ಸುಮಾರು 15 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಮನೆಯವರು ಹೇಳಿಕೆ ನೀಡಿದ್ದಾರೆ. ಒಟ್ಟು ಮೂವರ ಬಳಿ 50 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ಇತ್ತು ಎನ್ನಲಾಗಿದೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಹೇಳಲಾಗಿದೆ.

ಮೂವರು ಕೂಡ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ  ಪ್ಲ್ಯಾನ್ ಮಾಡಿ ಕರೆಸಿಕೊಂಡು ಮಾ.21 ರಂದು ರಾತ್ರಿ ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಿ ನಂತರ ಹಣವನ್ನು ದೋಚಿದ್ದಾರೆ ಎನ್ನಲಾಗಿದೆ. ಇನ್ನೂ ಪ್ರಕರಣ ಸಂಬಂಧ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಸೇರಿ ಆರು ಜನರನ್ನು ಮೊಬೈಲ್ ಕಾಲ್ ಡಿಟೈಲ್ಸ್ ಮೂಲಕ  ಕಾರ್ಯಾಚರಣೆ ನಡೆಸಿ ಮಾ.22 ರಂದು ರಾತ್ರಿ ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಬೆಂಕಿಗಾಹುತಿಯಾದ ಕಾರನ್ನು ಕೋರಾ ಪೊಲೀಸ್ ಠಾಣೆಗೆ ತೆಗೆದುಕೊಂಡು ಬಂದಿದ್ದು. ಮೂವರ ಶವ ಸರಕಾರಿ ಆಸ್ಪತ್ರೆಯಲ್ಲಿ ಡಿಎನ್ಎ ಪರೀಕ್ಷೆ ಮಾಡಿದ ಬಳಿಕ ಮುಂದಿನ ಗುರುವಾರ ಅಥವಾ ಶುಕ್ರವಾರ ಮೃತದೇಹವನ್ನು ಗುರುತು ಪತ್ತೆಯಾದ ಬಳಿಕ ಅವರ ಕಟುಂಬ ಸದಸ್ಯರಿಗೆ ನೀಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.


 Share: | | | | |


ಸುದ್ದಿ ಬಿಡುಗಡೆ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಡಾ. ಯು.ಪಿ. ಶಿವಾನಂದರಿಗೆ ಮೊಹರೆ ಹನುಮಂತರಾಯ ಪ್ರಶಸ್ತಿ

Posted by Vidyamaana on 2023-03-09 07:37:57 |

Share: | | | | |


ಸುದ್ದಿ ಬಿಡುಗಡೆ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಡಾ. ಯು.ಪಿ. ಶಿವಾನಂದರಿಗೆ ಮೊಹರೆ ಹನುಮಂತರಾಯ ಪ್ರಶಸ್ತಿ

ಪುತ್ತೂರು: ರಾಜ್ಯ ಸರಕಾರದ 2018ನೇ ಸಾಲಿನ ಪ್ರತಿಷ್ಠಿತ ಮೊಹರೆ ಹನುಮಂತರಾಯ ಪ್ರಶಸ್ತಿಗೆ ಸುದ್ದಿ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಹಾಗೂ ಸುದ್ದಿ ಬಿಡುಗಡೆ ಪ್ರಧಾನ ಸಂಪಾದಕ ಡಾ. ಯು.ಪಿ. ಶಿವಾನಂದ್ ಆಯ್ಕೆಯಾಗಿದ್ದಾರೆ.

ಇವರಿಗೆ ಮಾರ್ಚ್ 13ರಂದು ಬೆಂಗಳೂರು ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಪ್ರತಿಷ್ಠಿತ ಮೊಹರೆ ಹನುಮಂತರಾಯ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ‌.

ವಿವಿಧ ಆಂದೋಲನಗಳ ಮೂಲಕ ಜನಜಾಗೃತಿ ಮೂಡಿಸುವಲ್ಲಿ ಯಶಸ್ವಿಯಾಗಿರುವ ಡಾ. ಯು.ಪಿ. ಶಿವಾನಂದ್ ಅವರು, ಕೃಷಿ ಜಾತ್ರೆಯನ್ನು ಯಶಸ್ವಿಯಾಗಿ ಸಂಘಟಿಸಿದ್ದರು. ಶಿಕ್ಷಣ ಮತ್ತು ಉದ್ಯೋಗ ಮಾಹಿತಿ ಕೇಂದ್ರವನ್ನು ಆರಂಭಿಸಿರುವುದಲ್ಲದೇ, ಇಂತಹ ಹಲವು ಪ್ರಥಮಗಳಿಗೆ ನಾಂದಿ ಹಾಡಿದ್ದಾರೆ. ಬಲಾತ್ಕಾರದ ಬಂದ್ ವಿರುದ್ಧದ ಹೋರಾಟ, ಭ್ರಷ್ಟಾಚಾರ ವಿರುದ್ಧದ ಹೋರಾಟ, ವಾರಾಂತ್ಯ ಕರ್ಫ್ಯೂ, ಶುದ್ಧ ಕುಡಿಯುವ ನೀರಿಗಾಗಿ ಅಭಿಯಾನ ಮೊದಲಾದ ಹೋರಾಟಗಳನ್ನು ಯಶಸ್ವಿಯಾಗಿ ಸಂಘಟಿಸಿದ್ದು, ರಾಜ್ಯ ಮಟ್ಟದಲ್ಲಿ ಶ್ಲಾಘನೆಗೆ ಪಾತ್ರವಾಗಿದ್ದಾರೆ.

2ನೇ ಸುತ್ತಿನಲ್ಲೂ ಅಶೋಕ್ ಕುಮಾರ್ ರೈ 2220 ಮತಗಳ ಮುನ್ನಡೆ

Posted by Vidyamaana on 2023-05-13 04:05:50 |

Share: | | | | |


2ನೇ ಸುತ್ತಿನಲ್ಲೂ  ಅಶೋಕ್ ಕುಮಾರ್ ರೈ  2220 ಮತಗಳ ಮುನ್ನಡೆ

ಪುತ್ತೂರು : ತ್ರಿಕೋಣ ಸ್ಪರ್ಧೆಯ ಕಣವಾಗಿರುವ ಪುತ್ತೂರಿನಲ್ಲಿ ಮೊದಲ ಸುತ್ತಿನ ಮತ ಎಣಿಕೆಯ ಬಳಿಕ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ 1034 ಮತಗಳ ಮುನ್ನಡೆ ಸಾಧಿಸಿದ್ದಾರೆ . ಎರಡನೇ ಸುತ್ತಿನಲ್ಲೂ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಲೀಡ್ ಪಡೆದಿದ್ದು 2220 ಮತಗಳ ಮುನ್ನಡೆ ಪಡೆದಿದ್ದಾರೆ

ಕಡಬದಲ್ಲಿ ಡಯಾಲಿಸಿಸ್ ಕೇಂದ್ರವನ್ನು ಆರಂಭಿಸುವಂತೆ ಆರೋಗ್ಯ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

Posted by Vidyamaana on 2023-06-07 13:39:50 |

Share: | | | | |


ಕಡಬದಲ್ಲಿ ಡಯಾಲಿಸಿಸ್ ಕೇಂದ್ರವನ್ನು ಆರಂಭಿಸುವಂತೆ ಆರೋಗ್ಯ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು: ತಾಲೂಕು ಕೇಂದ್ರವಾಗಿರುವ ಕಡಬದಲ್ಲಿ ಡಯಾಲಿಸಿಸ್ ಕೇಂದ್ರವನ್ನು ಆರಂಭಿಸುವಂತೆ ಪುತ್ತೂರು ಶಾಸಕರಾದ ಅಶೋಕ್ ರೈಯವರು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ಗುಂಡೂರಾವ್ ರವರಿಗೆ ಮನವಿ ಮಾಡಿದ್ದಾರೆ.

ಜೂ. ೭ ರಂದು ಬೆಂಗಳೂರಿನಲ್ಲಿ ಸಚಿವರ ಬಳಿ ತೆರಳಿದ ಶಾಸಕರು ಸಚಿವರ ಜೊತೆ ಪುತ್ತೂರು ವಿಧಾನಸಭಾ ಕ್ಷೇತ್ರದ ವಿಚಾರಕ್ಕೆ ಸಂಬಂಧಿಸಿದಂತೆ ಸುದೀರ್ಘ ಮತುಕತೆ ನಡೆಸಿದರು. ತಾಲೂಕು ಕೇಂದ್ರವಾಗಿರುವ ಕಡಬದಲ್ಲಿ ಡಯಾಲಿಸ್ ಕೇಂದ್ರವನ್ನು ತಕ್ಷಣವೇ ಆರಂಭಿಸಬೇಕಿದೆ. ಕಡಬದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಈಗಾಗಲೇ ಡಯಾಲಿಸಿಸ್ ಕೇಂದ್ರವನ್ನು ಆರಂಭ ಮಾಡಿ, ಮೂರು ಡಯಾಲಿಸಿಸ್ ಯಂತ್ರವನ್ನು ನೀಡಲಗಿದೆ. ಆದರೆ ಡಯಾಲಿಸಿಸ್ ಕೇಂದ್ರಕ್ಕೆ ಆರ್‌ವೊ ಪ್ಲಾಂಟ್ ಆಳವಡಿಸಿ ಸೂಕ್ತವಾದ ಸಿಬಂದಿಗಳ ನೇಮಕ ಮಾಡದೇ ಇರುವ ಕಾರಣ ಡಯಾಲಿಸಿಸ್ ಕೇಂದ್ರ ಕಾರ್ಯಚರಣೆಯಲ್ಲಿಲ್ಲ. ಸರಕಾರ ತಕ್ಷಣವೇ ಕಡಬ ಸಮುದಾಯ ಕೇಂದ್ರದಲ್ಲಿರುವ ಡಯಾಲಿಸಿಸ್ ಕೇಂದ್ರಕ್ಕೆ ಆರ್‌ವೊ ಮತ್ತು ಸಿಬಂದಿಗಳನ್ನು ನೇಮಕ ಮಾಡಿ ಕೇಂದ್ರವನ್ನು ಆರಂಭಿಸಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ. ಕಡಬ ತಾಲೂಕು ವ್ಯಾಪ್ತಿಯಲ್ಲಿನ ಜನರು ಡಯಾಲಿಸ್‌ಗಾಗಿ ೪೫ ಕಿ ಮೀರದ ಪುತ್ತೂರು ಅಥವಾ ಸುಳ್ಯಕ್ಕೆ ತೆರಳಿ ಡಯಾಲಿಸಿಸ್ ಮಾಡಬೇಕಾದ ಅನಿವಾರ್ಯತೆ ಇದ್ದು , ಸರದಿ ಸಾಲಿನಲ್ಲಿ ನಿಂತು ಡಯಾಲಿಸಿಸ್ ಮಾಡಬೇಕಾದ ಪರಿಸ್ಥಿತಿ ಇದೆ ಎಂದು ಶಾಸಕರು ಸಚಿವರ ಗಮನಕ್ಕೆ ತಂದರು. ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿರುವ ಡಯಾಲಿಸಿಸ್ ಕೇಂದ್ರವನ್ನು ತುರ್ತಾಗಿ ಆರಂಭಿಸುವಂತೆಯೂ ಮನವಿ ಮಾಡಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಟಿ ಕೆ ಅನಿಲ್‌ಕುಮಾರ್ ಅವರನ್ನೂ ಭೇಟಿಯಾಗಿ ಶಾಸಕರು ಮನವಿ ಸಲ್ಲಿಸಿದ್ದಾರೆ.

ಜು.9: ಮಾಸ್ ಲಿಮಿಟೆಡ್ ನ ಪುತ್ತೂರಿನ ಕಾವು ಅಡಿಕೆ ಖರೀದಿ ಕೇಂದ್ರದ ಉದ್ಘಾಟನೆ

Posted by Vidyamaana on 2024-07-02 11:34:54 |

Share: | | | | |


ಜು.9: ಮಾಸ್ ಲಿಮಿಟೆಡ್ ನ ಪುತ್ತೂರಿನ ಕಾವು ಅಡಿಕೆ ಖರೀದಿ ಕೇಂದ್ರದ ಉದ್ಘಾಟನೆ

ಪುತ್ತೂರು: ಮಂಗಳೂರು ಕೃಷಿಕರ ಸಹಕಾರಿ ಸಂಘ ಮಂಗಳೂರು ಇವರಿಂದ ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಹಯೋಗದಲ್ಲಿ ಸಹಕಾರ ರತ್ನ ಡಾ। ಎಂ ಎನ್ ರಾಜೇಂದ್ರ ಕುಮಾರ್ ಇವರ ಸಹಕಾರದೊಂದಿಗೆ ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ಅಡಿಕೆ ಖರೀದಿ ಕೇಂದ್ರದ ಉದ್ಘಾಟನೆ ನಡೆಯಲಿದೆ ಎಂದು ಮಾಸ್ ಲಿಮಿಟೆಡ್ ನ ಅಧ್ಯಕ್ಷ ಕೆ ಸೀತಾರಾಮ ರೈ ಸವಣೂರು ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಶಾಸಕ ಅಶೋಕ್ ಕುಮಾರ್ ರೈ ಅವರು ಅಡಿಕೆ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ. ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಗೊಟ್ಟು ಮತ್ತು ಎಸ್ ಬಿ ಜಯರಾಮ ರೈ ಮತ್ತು ಅರಿಯಡ್ಕ ಗ್ರಾ.ಪಂ ಅಧ್ಯಕ್ಷ ಸಂತೋಷ್‌ ಮಣಿಯಾಣಿ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಮಂಗಳೂರು ಕಮಿಷನರ್ ಕುಲದೀಪ್ ಜೈನ್ ವರ್ಗಾವಣೆ

Posted by Vidyamaana on 2023-09-05 03:40:40 |

Share: | | | | |


ಮಂಗಳೂರು ಕಮಿಷನರ್ ಕುಲದೀಪ್ ಜೈನ್ ವರ್ಗಾವಣೆ

ಮಂಗಳೂರು: ನಗರದ ನೂತನ ಪೊಲೀಸ್ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಅನುಪಮ್ ಅಗರ್ವಾಲ್ ಅವರನ್ನು ನೇಮಕ ಮಾಡಲಾಗಿದೆ


ರಾಜ್ಯ ಸರ್ಕಾರವೂ ಹಾಲಿ ಮಂಗಳೂರು ಪೊಲೀಸ್ ಕಮೀಷನರ್ ಆಗಿರುವ ಕುಲದೀಪ್ ಕುಮಾರ್ ಆರ್ ಜೈನ್ ಅವರು ಸೇರಿದಂತೆ 35 ಐಪಿಎಸ್ ಅಧಿಕಾರಿಗಳನ್ನು ಬೆಳ್ಳಂಬೆಳಗ್ಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.


ಕುಲದೀಪ್ ಅವರಿಗೆ ಇನ್ನು ಹುದ್ದೆ ತೋರಿಸಿದರೇ ವರ್ಗಾವಣೆ ಮಾಡಿದೆ.


ನೂತನ ಆಯುಕ್ತರಾಗಿರುವ ಅನುಪಮ್ ಅಗರ್ವಾಲ್ 2008-ಬ್ಯಾಚ್ IPS ಅಧಿಕಾರಿಯಾಗಿದ್ದು ಮೂಲತಃ ರಾಜಸ್ಥಾನದ ಜೋಧ್‌ಪುರದವರು. ಈ ಹಿಂದೆ ಕರ್ನಾಟಕ ಪೊಲೀಸ್ ಅಕಾಡೆಮಿಯ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು.

ಪ್ರಯಾಣಿಕರ ಗಮನಕ್ಕೆ : ಸಕಲೇಶಪುರ-ಬಾಳ್ಳುಪೇಟೆ ನಡುವೆ ಭೂ ಕುಸಿತ, 10 ರೈಲುಗಳ ಸಂಚಾರ ರದ್ದು

Posted by Vidyamaana on 2024-08-12 09:22:11 |

Share: | | | | |


ಪ್ರಯಾಣಿಕರ ಗಮನಕ್ಕೆ : ಸಕಲೇಶಪುರ-ಬಾಳ್ಳುಪೇಟೆ ನಡುವೆ ಭೂ ಕುಸಿತ, 10 ರೈಲುಗಳ ಸಂಚಾರ ರದ್ದು

ಬೆಂಗಳೂರು : ಈಗಾಗಲೇ ಸಕಲೇಶಪುರ - ಬಾಳ್ಳುಪೇಟೆ ನಡುವೆ ರೈಲು ಹಳಿಗಳ ಮೇಲೆ ಭೂ ಕುಸಿತ ಉಂಟಾದ ಪರಿಣಾಮ ಐದು ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿತ್ತು. ಅಲ್ಲದೇ ಎರಡು ರೈಲುಗಳ ವೇಳೆ ಕಡಿತ, ಮತ್ತೆರಡು ರೈಲುಗಳ ಸಂಚಾರ ಮಾರ್ಗವನ್ನು ಬದಲಿಸಲಾಗಿತ್ತು. ಈ ಬೆನ್ನಲ್ಲೇ ಮತ್ತೆ 10 ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ.

ಈ ಕುರಿತಂತೆ ನೈರುತ್ಯ ರೈಲ್ವೆಯ ಮೈಸೂರು ವಿಭಾಗದ ಸಕಲೇಶಪುರ-ಬಾಳ್ಳುಪೇಟೆ ನಿಲ್ದಾಣಗಳ ನಡುವೆ ಭೂಕುಸಿತ ಸಂಭವಿಸಿದ ಕಾರಣ, ಈ ಕೆಳಗಿನ ರೈಲು ಸೇವೆಗಳನ್ನು ರದ್ದುಪಡಿಸಲಾಗಿದೆ ಎಂದು ತಿಳಿಸಿದೆ.


ರದ್ದುಗೊಂಡ ರೈಲುಗಳು

Recent News


Leave a Comment: