ಪುತ್ತೂರು: ಲಾರಿ - ಸ್ಕೂಟರ್ ನಡುವೆ ಭೀಕರ ಅಪಘಾತ :ಮಿತ್ತೂರು ನಿವಾಸಿ ಶಿವರಾಮ ನಾಯ್ಕ ಮೃತ್ಯು

ಸುದ್ದಿಗಳು News

Posted by vidyamaana on 2024-07-24 08:25:31 | Last Updated by Vidyamaana on 2024-07-24 08:25:31

Share: | | | | |


ಪುತ್ತೂರು: ಲಾರಿ - ಸ್ಕೂಟರ್ ನಡುವೆ ಭೀಕರ ಅಪಘಾತ :ಮಿತ್ತೂರು ನಿವಾಸಿ ಶಿವರಾಮ ನಾಯ್ಕ ಮೃತ್ಯು

ಪುತ್ತೂರು: ನೆಹರುನಗರ ಮಂಜಲ್ಪಡ್ಪು ಬಳಿಯ ಮಂಗಲ ಸ್ಟೋರ್ಸ್ ಮುಂಭಾಗ ಜು.23 ರಂದು  ಲಾರಿ ಮತ್ತು ತ್ರಿವೀಲ್ಡರ್ ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಮಿತ್ತೂರು ಏಮಾಜೆಯ ವಿಕಲಚೇತನ ಶಿವರಾಮ ನಾಯ್ಕ (50ವ) ಎಂಬವರು ಮೃತಪಟ್ಟ ಬಗ್ಗೆ ವರದಿಯಾಗಿದೆ

ಮಂಗಳೂರು ಕಡೆ ಹೋಗುತ್ತಿದ್ದ ಲಾರಿ ವೊಂದು ವಿಕಲಚೇತನ ಶಿವರಾಮ ಅವರು ಚಲಾಯಿಸುತ್ತಿದ್ದ ತ್ರಿವೀಲ್ಡ‌ರ್ ಸ್ಕೂಟರ್ ಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ತೀವ್ರ ಗಾಯಗೊಂಡ ಸವಾರ ಮೃತ ಪಟ್ಟಿದ್ದಾರೆಂದು ತಿಳಿದು ಬಂದಿದೆ.

 Share: | | | | |


ಪುತ್ತೂರು ಬಿಜೆಪಿ ಕಚೇರಿಗೆ ಭೇಟಿ ನೀಡಿದ ಅರುಣ್ ಕುಮಾ‌ರ್ ಪುತ್ತಿಲ

Posted by Vidyamaana on 2024-03-17 09:58:27 |

Share: | | | | |


ಪುತ್ತೂರು ಬಿಜೆಪಿ ಕಚೇರಿಗೆ ಭೇಟಿ ನೀಡಿದ ಅರುಣ್ ಕುಮಾ‌ರ್ ಪುತ್ತಿಲ

ಪುತ್ತೂರು: ಪುತ್ತಿಲ ಪರಿವಾರ ಬಿಜೆಪಿಯೊಂದಿಗೆ ವಿಲೀನವಾದ ಬಳಿಕ ಅರುಣ್ ಕುಮಾರ್ ಪುತ್ತಿಲ ಅವರು ಪುತ್ತೂರು ಬಿಜೆಪಿ ಕಚೇರಿಗೆ ಮಾ 17 ರಂದು ಭೇಟಿ ನೀಡಿದರು.

ಪುತ್ತೂರು ಬಿಜೆಪಿ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಅಳ್ವ, ನಗರ ಮಂಡಲದ ಅಧ್ಯಕ್ಷ ಪಿ ಜಿ ಜಗನ್ನಿವಾಸ ರಾವ್ ಸಹಿತ ಪ್ರಮುಖರು ಅವರನ್ನು ಸ್ವಾಗತಿಸಿದರು. ಪ್ರಸನ್ನ ಕುಮಾರ್ ಮಾರ್ತ, ಉಮೇಶ್ ಕೋಡಿಬೈಲು, ರವಿ ಕುಮಾರ್, ಅನಿಲ್ ತೆಂಕಿಲ ಸಹಿತ ಹಲವಾರು ಮಂದಿ ಅರುಣ್ ಕುಮಾ‌ರ್ ಪುತ್ತಿಲ ಜೊತೆಗಿದ್ದರು.

ಸಂದರ್ಭ ಬಿಜೆಪಿ ರಾಜ್ಯ ಹಿಂದುಳಿದ ಮೋರ್ಚದ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಪುರುಷೋತ್ತಮ ಮುಂಗ್ಲಿಮನೆ, ಯುವರಾಜ್ ಪೆರಿಯತ್ತೋಡಿ, ಹರಿಪ್ರಸಾದ್ ಯಾದವ್, ಜಿಲ್ಲಾ ಬಿಜೆಪಿ ಪ್ರಮುಖರಾದ ಬುಡಿಯಾರು ರಾಧಾಕೃಷ್ಣ ರೈ, ವಿದ್ಯಾ ಆರ್ ಗೌರಿ,ಆರ್ ಸಿ ನಾರಾಯಣ್ ಸಹಜ್ ರೈ,ಸುರೇಶ್ ಕಣ್ಣರಾಯ, ಸುಧೀ‌ರ್ ಶೆಟ್ಟಿ, ಜ್ಯೋತಿ ಆರ್ ನಾಯಕ್, ರಾಧಾಕೃಷ್ಣ ನಂದಿಲ, ಇಂದುಶೇಖ‌ರ್, ಲೋಹಿತ್ ಅಮ್ಮಿನಡ್ಕ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.

ಕೊಲೆ ಬೆದರಿಕೆ ಆರೋಪ: ವಿಷ ಸೇವಿಸಿ ವಿದ್ಯಾರ್ಥಿನಿ ಆಶಾ ಆತ್ಮಹತ್ಯೆ

Posted by Vidyamaana on 2023-10-14 13:13:40 |

Share: | | | | |


ಕೊಲೆ ಬೆದರಿಕೆ ಆರೋಪ: ವಿಷ ಸೇವಿಸಿ ವಿದ್ಯಾರ್ಥಿನಿ ಆಶಾ ಆತ್ಮಹತ್ಯೆ

ಹಾಸನ: ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಡುವುದಾಗಿ ಹೆದರಿಸಿದ್ದರಿಂದ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನ ಬೆಳ್ಳೊಟ್ಟೆ ಗ್ರಾಮದಲ್ಲಿ ನಡೆದಿದೆ.

       ಆಶಾ (20) ಮೃತ ಯುವತಿ. ಬೇಲೂರು ಪಟ್ಟಣದ ಕಾಲೇಜುವೊಂದರಲ್ಲಿ ದ್ವಿತೀಯ ಬಿಕಾಂ ಓದುತ್ತಿದ್ದ ಆಶಾಳನ್ನು ಅದೇ ಕಾಲೇಜಿನಲ್ಲಿ ದ್ವಿತೀಯ ಬಿಎ ಓದುತ್ತಿದ್ದ ಆಲೂರು ತಾಲೂಕು ಕಾಟೀಹಳ್ಳಿ ಗ್ರಾಮದ ಮಂಜುನಾಥ ಎಂಬಾತ ಪ್ರೀತಿಸುತ್ತಿದ್ದ. ಇತ್ತೀಚೆಗೆ ಇದೇ ಮಂಜುನಾಥ ಬೇರೊಂದು ಹುಡುಗಿ ಜೊತೆ ಸುತ್ತಾಡುತ್ತಿದ್ದ. ಇದನ್ನು ಗಮನಿಸಿದ ಆಶಾ ಮಂಜುನಾಥನನ್ನು ಹೀಗೇಕೆ ಮಾಡುತ್ತಿದ್ದೀಯಾ ಎಂದು ಪ್ರಶ್ನೆ ಮಾಡಿದ್ದಳು. ನೀನು ನನ್ನನ್ನು ಹೀಗೆಲ್ಲಾ ಪ್ರಶ್ನೆ ಮಾಡಬೇಡ. ಪ್ರಶ್ನಿಸಿದರೆ ಕೊಲೆ ಮಾಡುತ್ತೇನೆ. ಅಷ್ಟೇ ಅಲ್ಲ, ನೀನು ನನ್ನೊಂದಿಗೆ ಸುತ್ತಾಡಿರುವ ಫೋಟೋ, ಮೆಸೇಜ್ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಸಿ, ನಿಂದಿಸಿದ್ದ ಎಂದ ಆರೋಪಿಸಲಾಗಿದೆ.

ಪುತ್ತೂರು ನಗರ ಮಂಡಲದ‌ ಮನೆ ಸಂಪರ್ಕ ಅಭಿಯಾನಕ್ಕೆ ಚಾಲನೆ

Posted by Vidyamaana on 2024-03-31 11:00:28 |

Share: | | | | |


ಪುತ್ತೂರು ನಗರ ಮಂಡಲದ‌ ಮನೆ ಸಂಪರ್ಕ ಅಭಿಯಾನಕ್ಕೆ ಚಾಲನೆ

ಪುತ್ತೂರು :ಭಾರತೀಯ ಜನತಾ ಪಾರ್ಟಿಯ ಪುತ್ತೂರು ವಿಧಾನಸಭಾ ಕ್ಷೇತ್ರದ ಪುತ್ತೂರು ನಗರ ಮಂಡಲದ‌ ಮನೆ ಸಂಪರ್ಕ ಅಭಿಯಾನಕ್ಕೆ ಮಾ 31ರಂದು ನೆಲಪ್ಪಾಲಿನ ಬೂತ್ ಸಂಖ್ಯೆ 63 ರಲ್ಲಿ ಚಾಲನೆ ನೀಡಲಾಯಿತು , ಈ ಸಂಧರ್ಭದಲ್ಲಿ ಎಪ್ರಿಲ್ 2ರಂದು ನಡೆಯುವ ಕಾರ್ಯಕರ್ತರ ಸಮಾವೇಶದ ಮಾಹಿತಿ ನೀಡಲಾಯಿತು .

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಬಂಧನ

Posted by Vidyamaana on 2023-09-09 08:36:03 |

Share: | | | | |


ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಬಂಧನ

ಆಂಧ್ರಪ್ರದೇಶ: ಮಾಜಿ ಮುಖ್ಯಮಂತ್ರಿ, ಟಿಡಿಪಿ ಪಕ್ಷದ ನಾಯಕ ಚಂದ್ರಬಾಬು ನಾಯ್ಡು ಅವರನ್ನು ಸೆ.9ರ ಶನಿವಾರ ಆಂಧ್ರದ ನಂದ್ಯಾಲದಲ್ಲಿ ನಸುಕಿನ ವೇಳೆ ಸಿಐಡಿ ಪೊಲೀಸರು ಬಂಧಿಸಿದ್ದಾರೆ.

ಚಂದ್ರಬಾಬು ನಾಯ್ಡು ಅವರು ಸ್ಕಿಲ್​ ಡೆವಲಪ್​​ಮೆಂಟ್​ ಯೋಜನೆಯಲ್ಲಿ 371 ಕೋಟಿ ರೂ. ಅಕ್ರಮ ಎಸಗಿದ್ದು, ಹಗರಣ ಸಂಬಂಧ ಸೂಕ್ತ ಉತ್ತರ ನೀಡದ ಹಿನ್ನೆಲೆ ಹೈಕೋರ್ಟ್ ಸೂಚನೆ ಮೇರೆಗೆ ಬಂಧಿಸಲಾಗಿದೆ ಎಂದು ವರದಿಯಾಗಿದೆ.


ಚಂದ್ರಬಾಬು ನಾಯ್ಡು ವಿರುದ್ಧ 58 ಕೋಟಿ ಯೋಜನೆಯ ವೆಚ್ಚವನ್ನು 371 ಕೋಟಿ ರೂ.ಗೆ ಹೆಚ್ಚಿಸಿದ ಆರೋಪ ಕೇಳಿಬಂದಿತ್ತು. ಈ  ಹಗರಣ ಸಂಬಂಧ ಸೂಕ್ತ ಉತ್ತರ ನೀಡದ ಹಿನ್ನೆಲೆಯಲ್ಲಿ ಹೈಕೋರ್ಟ್ ಸೂಚನೆ ಮೇರೆಗೆ ಐಪಿಸಿ ಸೆಕ್ಷನ್​ 166, 167, 481, 420, 465, 468, 471, 409, 201, r/w 109, 34 ಮತ್ತು 37ರ ಅಡಿ ಅವರನ್ನು ಬಂಧಿಸಲಾಗಿದೆ.

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಮಹಿಳೆಯ ಮೃತದೇಹ ಪತ್ತೆ

Posted by Vidyamaana on 2024-08-21 03:43:06 |

Share: | | | | |


ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಮಹಿಳೆಯ ಮೃತದೇಹ ಪತ್ತೆ

ಬಂಟ್ವಾಳ: ಮಹಿಳೆಯೋರ್ವರ ಮೃತದೇಹ ನೇತ್ರಾವತಿ ನದಿಯಲ್ಲಿ ತೇಲಾಡುವ ಸ್ಥಿತಿಯಲ್ಲಿ ಮಂಗಳವಾರ ಪತ್ತೆಯಾಗಿದೆ.

ಶಂಭೂರು ಗ್ರಾಮದ ಎ.ಎಮ್.ಆರ್. ಪವ‌ರ್ ಲಿಮಿಟೆಡ್ ಡ್ಯಾಂ ನ 6ನೇ ಗೇಟ್ ನ ಬಳಿ ಸುಮಾರು 40 ರಿಂದ 50 ವರ್ಷದ ಅಪರಿಚಿತ ಮಹಿಳೆಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಇರುವುದು ಕಂಡು ಬಂದಿದ್ದು, ಸುಮಾರು 15 ದಿನಗಳ ಹಿಂದೆ ಮಹಿಳೆ ನೀರಿಗೆ ಬಿದ್ದು ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.

ಮೂಡಬಿದರೆ; ಶಿಷ್ಟಾಚಾರ ಉಲ್ಲಂಘಿಸಿದ ಆರೋಪದಡಿ ತಾ.ಪಂ.ಕಾರ್ಯನಿರ್ವಹಣಾಧಿಕಾರಿ ದಯಾವತಿ ಹಾಗೂ ಇರುವೈಲು ಪಿಡಿಓ ಕಾಂತಪ್ಪ ಅಮಾನತು

Posted by Vidyamaana on 2023-08-01 16:52:39 |

Share: | | | | |


ಮೂಡಬಿದರೆ; ಶಿಷ್ಟಾಚಾರ ಉಲ್ಲಂಘಿಸಿದ ಆರೋಪದಡಿ ತಾ.ಪಂ.ಕಾರ್ಯನಿರ್ವಹಣಾಧಿಕಾರಿ ದಯಾವತಿ ಹಾಗೂ ಇರುವೈಲು ಪಿಡಿಓ ಕಾಂತಪ್ಪ ಅಮಾನತು

ಮೂಡಬಿದರೆ; ಶಿಷ್ಟಾಚಾರ ಉಲ್ಲಂಘಿಸಿದ ಆರೋಪದಡಿ ಮೂಡಬಿದರೆ ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಹಾಗೂ ಇರುವೈಲು ಪಿಡಿಓರನ್ನು ಅಮಾನತು ಮಾಡಲಾಗಿದೆ.


ಮೂಡುಬಿದಿರೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ದಯಾವತಿ ಮತ್ತು ಇರುವೈಲು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕಾಂತಪ್ಪ ಅವರನ್ನು ದ.ಕ ಜಿಲ್ಲಾ ಪಂಚಾಯಿತಿ ಸಿಇಓ ಡಾ.ಆನಂದ್ ಕೆ. ಅಮಾನತಗೊಳಿಸಿದ್ದಾರೆ.


ಇರುವೈಲು ಗ್ರಾಮ ಪಂಚಾಯಿತಿಯ ನೂತನ ಕಟ್ಟಡ ಉದ್ಘಾಟನಾ ಸಮಾರಂಭಕ್ಕೆ ಸಂಬಂಧಿಸಿ ಮುದ್ರಣವಾದ ಆಮಂತ್ರಣ ಪತ್ರಿಕೆಯಲ್ಲಿ ಶಿಷ್ಟಾಚಾರ ಉಲ್ಲಂಘಿಸಿದ ಕಾರಣಕ್ಕೆ ಅಮಾನತು ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

Recent News


Leave a Comment: