ಬಂಟ್ವಾಳ : ವಗ್ಗ ಬಳಿ ಅಂಬುಲೆನ್ಸ್ ನಿಯಂತ್ರಣ ತಪ್ಪಿ ಪಲ್ಟಿ

ಸುದ್ದಿಗಳು News

Posted by vidyamaana on 2023-08-18 08:29:00 |

Share: | | | | |


ಬಂಟ್ವಾಳ : ವಗ್ಗ ಬಳಿ ಅಂಬುಲೆನ್ಸ್  ನಿಯಂತ್ರಣ ತಪ್ಪಿ ಪಲ್ಟಿ

ಬೆಳ್ತಂಗಡಿ: ರೋಗಿಯೊಬ್ಬರನ್ನು  ಕೊಂಡುಹೋಗುತ್ತಿರುವ ವೇಳೆ ಟುಫಾನ್ ಅಂಬುಲೆನ್ಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಚಾಲಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ವಗ್ಗ ಬಳಿ ಆಗಸ್ಟ್ 18 ರಂದು ನಡೆದಿದೆ.



ಬೆಳ್ತಂಗಡಿಯಿಂದ ಮಂಗಳೂರಿಗೆ ರೋಗಿಯೊಬ್ಬರನ್ನು ಕೊಂಡೊಯ್ಯುತ್ತಿರುವ ವೇಳೆ ಬಂಟ್ವಾಳದ ವಗ್ಗ ಬಳಿ ಅಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ವೇಳೆ ಚಾಲಕ ಮಡಂತ್ಯಾರ್ ಮಾಲಾಡಿ ನಿವಾಸಿ ಶಬೀರ್ ಎಂಬವರು ಗಂಭೀರ ಗಾಯಗೊಂಡಿದ್ದು ತಕ್ಷಣ ಅವರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ಕೊಂಡು ಹೋದರೂ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೇ  ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

 Share: | | | | |


ಬೆಳ್ತಂಗಡಿ ಪಿಕಪ್ ವಾಹನ ಡಿಕ್ಕಿಯಾಗಿ ವಿದ್ಯಾರ್ಥಿ ಮಹಮ್ಮದ್ ರಂಝಿನ್ ಮೃತ್ಯು

Posted by Vidyamaana on 2023-10-18 19:18:01 |

Share: | | | | |


ಬೆಳ್ತಂಗಡಿ  ಪಿಕಪ್ ವಾಹನ ಡಿಕ್ಕಿಯಾಗಿ ವಿದ್ಯಾರ್ಥಿ ಮಹಮ್ಮದ್ ರಂಝಿನ್ ಮೃತ್ಯು

ಬೆಳ್ತಂಗಡಿ: ರಸ್ತೆ ದಾಟುತ್ತಿರುವ ವೇಳೆ ಪಿಕಪ್ ವಾಹನವೊಂದು ಡಿಕ್ಕಿ ಹೊಡೆದು ಬಾಲಕ ಮೃತಪಟ್ಟಿರುವ ಘಟನೆ ಲಾಯಿಲ ಜಂಕ್ಷನ್ ನಲ್ಲಿ ನಡೆದಿದೆ.


ಬೆಳ್ತಂಗಡಿ ತಾಲೂಕಿನ ಪಾರೆಂಕಿ ಗ್ರಾಮದ ಮಹಮ್ಮದ್ ರಂಝಿನ್(10) ಮೃತ ಬಾಲಕ.



ಶಾಲಾ ರಜೆಯ ಹಿನ್ನೆಲೆ ಮಹಮ್ಮದ್ ರಂಝಿನ್ ಸಂಬಂಧಿಕರ ಮನೆಗೆ ಬಂದಿದ್ದು, 11:50ರ ಸುಮಾರಿಗೆ ಅಂಗಡಿಗೆ ಹೋಗಿ ವಾಪಾಸ್ ರಸ್ತೆ ದಾಟುವಾಗ ಲಾಯಿಲ ಜಂಕ್ಷನ್ ಬಳಿ ಉಜಿರೆಯಿಂದ ಬೆಳ್ತಂಗಡಿ ಕಡೆಗೆ ಬಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದೆ. ಪರಿಣಾಮ ಬಾಲಕ ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದಾನೆ. ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯೆ ಬಾಲಕ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಗ್ರಾಮೀಣ ವಿದ್ಯಾರ್ಥಿಗಳ ಪಾಲಿನ ಭಾಗ್ಯ ವಿಧಾತ ಭಾಗ್ಯೇಶ್ ರೈ ಅವರಿಗೆ ಶಿಕ್ಷಣ ಸೇವಾ ರತ್ನ ಪ್ರಶಸ್ತಿ

Posted by Vidyamaana on 2023-09-10 20:44:50 |

Share: | | | | |


ಗ್ರಾಮೀಣ ವಿದ್ಯಾರ್ಥಿಗಳ ಪಾಲಿನ ಭಾಗ್ಯ ವಿಧಾತ ಭಾಗ್ಯೇಶ್ ರೈ ಅವರಿಗೆ ಶಿಕ್ಷಣ ಸೇವಾ ರತ್ನ ಪ್ರಶಸ್ತಿ

ಬೆಂಗಳೂರು : ಪುತ್ತೂರಿನ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಮತ್ತು ಉದ್ಯೋಗಾಕಾಂಕ್ಷಿಗಳ ಪಾಲಿಗೆ ಭರವಸೆಯ ಆಶಾಕಿರಣವಾಗಿರುವ ‘ವಿದ್ಯಾಮಾತಾ ಅಕಾಡೆಮಿ’ಯ ಸ್ಥಾಪಕರಾಗಿರುವ ಭಾಗ್ಯೇಶ್ ರೈ ಅವರಿಗೆ ‘ಶಿಕ್ಷಣ ಸೇವಾ ರತ್ನ’ ಪ್ರಶಸ್ತಿ ಲಭಿಸಿದೆ.

‘ಜನಸಿರಿ ಫೌಂಡೇಶನ್’ ವತಿಯಿಂದ ಕೊಡ ಮಾಡುವ ರಾಜ್ಯಮಟ್ಟದ ‘ಶಿಕ್ಷಣ ಸೇವಾ ರತ್ನ’ ಪ್ರಶಸ್ತಿಯನ್ನು ನಗರದ ಟೌನ್ ಹಾಲ್ ನಲ್ಲಿ ನಡೆದ ಸಮಾರಂಭದಲ್ಲಿ ಭಾಗ್ಯೇಶ್ ರೈ ಅವರಿಗೆ ಪ್ರದಾನ ಮಾಡಲಾಯಿತು.

ಹಕ್ಕಿ-ಪಿಕ್ಕಿ ಸೇರಿದಂತೆ ನಾನಾ ಬುಡಕಟ್ಟು ಜನಾಂಗದ ವಿದ್ಯಾರ್ಥಿಗಳಿಗೆ ಸರಕಾರದ ಅನೇಕ ಸವಲತ್ತುಗಳನ್ನು ಒದಗಿಸುವಲ್ಲಿ ವಹಿಸಿದ್ದ ಶ್ರಮ, ಸಮಾನ ಶಿಕ್ಷಣ ನೀತಿ ಜಾರಿಗೆ ಬರಬೇಕೆಂಬ ಹೋರಾಟಗಳಲ್ಲಿ ಭಾಗವಹಿಸಿದ್ದಕ್ಕೆ, ವಿದ್ಯಾಮಾತ ಸಂಸ್ಥೆಯ ಮೂಲಕ ಸಾವಿರಾರು ವಿದ್ಯಾರ್ಥಿಗಳಿಗೆ ಉದ್ಯೋಗ ಮೇಳಗಳ ಮೂಲಕ ಉದ್ಯೋಗಾವಕಾಶಗಳನ್ನು ಕಲ್ಪಿಸಿ ಕೊಟ್ಟಿರುವುದು, ವಿದ್ಯಾಮಾತಾ ಅಕಾಡೆಮಿಯ ಮೂಲಕ ನೂರಾರು ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತೀರ್ಣರಾಗುವಂತೆ ಮಾಡಿ ಸರಕಾರಿ ಉದ್ಯೋಗ ದೊರಕುವಂತೆ ಮಾಡಿದ್ದು, ಅಗ್ನಿಪಥ್ ಯೋಜನೆಯ ಮೂಲಕ 18 ಯುವಕರು ದೇಶ ಸೇವೆ ಮಾಡಲು, ಸೈನ್ಯಕ್ಕೆ ಸೇರಲು ಕಾರಣಕರ್ತರಾಗಿರುವುದು, ಹಲವಾರು ಸರಕಾರಿ ಶಾಲೆಗಳಿಗೆ ವಿದ್ಯಾಮಾತಾದ ಹಲವಾರು ಯೋಜನೆಗಳ ಮೂಲಕ ಸಹಾಯ ಮಾಡುತ್ತಿರುವುದು.. ಸೇರಿದಂತೆ ವಿದ್ಯಾಮಾತಾ ಅಕಾಡೆಮಿಯ ಬಹುಮುಖಿ ಶಿಕ್ಷಣ ಸೇವೆಗಳನ್ನು ಗುರುತಿಸಿ ಪ್ರಶಸ್ತಿಯ ಆಯ್ಕೆ ಸಮಿತಿಯು ಕೊಡಗು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಿಂದ ಭಾಗ್ಯೇಶ್ ರೈ ಅವರನ್ನು ಆಯ್ಕೆ ಮಾಡಿದೆ.

ಕಾರ್ಯಕ್ರಮದಲ್ಲಿ ಕಾಲಜ್ಞಾನ ಮಠ ಗಜೇಂದ್ರಗಡದ ಕಾಲಜ್ಞಾನ ಬ್ರಹ್ಮ ಸದ್ಗುರು ವಿಜ್ಞಾನ ಕಾಲಜ್ಞಾನ ಶಿವಯೋಗಿ ಶರಣಬಸವ ಮಹಾಸ್ವಾಮಿಗಳು, ಶ್ರೀ ಬೇಲಿ ಮಠ ಮಹಾಸಂಸ್ಥಾನ ಕಾಟನ್ ಪೇಟೆ ಬೆಂಗಳೂರು ಇದರ ನಿ.ಪ್ರ. ಶಿವಾನುಭವ ಚರಮೂರ್ತಿ ಶಿವರುದ್ರ ಮಹಾಸ್ವಾಮಿಗಳು, ಶ್ರೀ ಸಿದ್ಧಾರೂಢ ಮಿಷನ್ ಆಶ್ರಮ ರಾಮೋಹಳ್ಳಿ ಬೆಂಗಳೂರಿನ ಡಾ. ಆರೂಢ ಭಾರತಿ ಸ್ವಾಮೀಜಿಯವರ ಸಾನಿಧ್ಯದಲ್ಲಿ, ನಿವೃತ್ತ ಐಎಎಸ್ ಅಧಿಕಾರಿಗಳಾದ ಕೆ ಶಿವರಾಮು, ಕರ್ನಾಟಕ ರಾಜ್ಯ ಪದವೀಧರ ವೇದಿಕೆಯ ರಾಮೋಜಿ ಗೌಡ, ನಾಡಿನ ಹಿರಿಯ ಖ್ಯಾತ ಕವಿಗಳಾದ ಬಿ ಆರ್ ಲಕ್ಷ್ಮಣ ರಾವ್ ಸೇರಿದಂತೆ ಹಲವಾರು ಗಣ್ಯರ ಉಪಸ್ಥಿತಿಯಲ್ಲಿ ಈ ಪ್ರಶಸ್ತಿಯನ್ನು ಭಾಗ್ಯೇಶ್ ರೈ ಅವರಿಗೆ ಪ್ರದಾನ ಮಾಡಲಾಯಿತು.

ನಿಧನ

Posted by Vidyamaana on 2024-01-09 07:34:05 |

Share: | | | | |


 ನಿಧನ

ಪುತ್ತೂರು: ಬಡಕ್ಕೋಡಿ ಸಮೀಪದ ಕೊಂಬಳ್ಳಿ ನಿವಾಸಿ ಉಮ್ಮರ್ (34.ವ) 

ಅಲ್ಪಕಾಲದ ಅಸೌಖ್ಯದಿಂದ ಜ.9ರಂದು ಸ್ವಗೃಹದಲ್ಲಿ ನಿಧಾನರಾದರು.


 ಮೃತರು ಪತ್ನಿ ಮತ್ತು ಮಗು, ತಂದೆ, ಸಹೋದರ ಹಾಗೂ ಸಹೋದರಿ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಉಳ್ಳಾಲ : ಮೊಬೈಲ್ ನೋಡಿಕೊಂಡೇ ಬಸ್ ಚಲಾಯಿಸಿದ ಚಾಲಕ-ವೀಡಿಯೋ ವೈರಲ್

Posted by Vidyamaana on 2023-07-23 16:38:04 |

Share: | | | | |


ಉಳ್ಳಾಲ : ಮೊಬೈಲ್ ನೋಡಿಕೊಂಡೇ ಬಸ್ ಚಲಾಯಿಸಿದ ಚಾಲಕ-ವೀಡಿಯೋ ವೈರಲ್

ಉಳ್ಳಾಲ : ಸ್ಟೇಟ್ ಬ್ಯಾಂಕ್ -ತಲಪಾಡಿ ನಡುವೆ ಚಲಿಸುವ ಸಿಟಿ ಬಸ್ ಚಾಲಕ ಚಾಲನೆ ವೇಳೆ ಮೊಬೈಲ್ ಉಪಯೋಗಿಸುತ್ತಿರುವುದನ್ನು ಪ್ರಯಾಣಿಕರೊಬ್ಬರು ಸೆರೆಹಿಡಿದಿರುವುದು, ಇದೀಗ ವೈರಲ್ ಆಗಿದೆ. ಸಾರ್ವಜನಿಕ ವಲಯದಿಂದ ಚಾಲಕನ ವಿರುದ್ಧ ಕ್ರಮಕ್ಕಾಗಿ ಆಗ್ರಹ ವ್ಯಕ್ತವಾಗಿದೆ.42 ನಂಬರಿನ ಸೈಂಟ್ ಆಂಟನಿ ಬಸ್ ಚಾಲಕ ನಿರ್ಲಕ್ಷ್ಯ ರೀತಿಯಲ್ಲಿ ಬಸ್ ಚಲಾಯಿಸಿದ್ದಾನೆ. ನೇತ್ರಾವತಿ ಸೇತುವೆಯಿಂದ ಮೊಬೈಲ್ ನೋಡಲು ಆರಂಭಿಸಿದ ಚಾಲಕ ತೊಕ್ಕೊಟ್ಟು ವರೆಗೂ , ಒಂದು ಕೈಯಲ್ಲಿ ಸ್ಟೇರಿಂಗ್, ಇನ್ನೊಂದು ಕೈಯಲ್ಲಿ ಮೊಬೈಲ್ ಹಿಡಿದುಕೊಂಡು ಬೇಜವಾಬ್ದಾರಿಯುತ ವಾಗಿ ಬಸ್ಸನ್ನು ಚಲಾಯಿಸಿರುವುದು ವೀಡಿಯೋದಲ್ಲಿ ಸೆರೆಯಾಗಿದೆ.


ಬಸ್ಸಲ್ಲಿ ಅಧಿಕ ಪ್ರಯಾಣಿಕರೂ ಇದ್ದರು ಎಂಬುದನ್ನು ಪ್ರಯಾಣಿಕ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ರಸ್ತೆಗಿಂತ ಹೆಚ್ಚಾಗಿ ಮೊಬೈಲನ್ನೇ ಚಾಲಕ ವೀಕ್ಷಿಸುತ್ತಿರುವುದು ಅನಾಹುತ ಆಹ್ವಾನಿಸುತ್ತಿದೆ.


ಸಾರಿಗೆ ಅಧಿಕಾರಿಗಳು ಬಸ್ ಪರ್ಮಿಟ್ ರದ್ದುಗೊಳಿಸಬೇಕು ಹಾಗೂ ಸಂಚಾರಿ ಪೊಲೀಸರು ಚಾಲಕನ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.117 (ಐಎಂವಿ) ಮೋಟಾರ್ ಆಕ್ಟ್ ನಡಿ ಸಿಟಿ ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಲಾಗುವುದು. ಪ್ರಸ್ತುತ ಕಾಯಿದೆಯಡಿ ಲೈಸನ್ಸ್ ರದ್ದುಗೊಳಿಸುವುದು ಹಾಗೂ ದಂಡ ವಿಧಿಸಲಾಗುವುದು. ಸಾರ್ವಜನಿಕವಾಗಿ ವೀಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಸ್ವಯಂಪ್ರೇರಿತವಾಗಿ ಇಲಾಖೆ ಪ್ರಕರಣ ದಾಖಲಿಸಲಾಗುವುದು’ ಎಂದು ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ರಮೇಶ್ ಹಾನಾಪುರ ತಿಳಿಸಿದ್ದಾರೆ.

ಬ್ಯಾನರ್ ಪ್ರಕರಣ: ಕಾಂಗ್ರೆಸ್ ಪತ್ರಿಕಾಗೋಷ್ಠಿ

Posted by Vidyamaana on 2023-05-16 09:37:41 |

Share: | | | | |


ಬ್ಯಾನರ್ ಪ್ರಕರಣ: ಕಾಂಗ್ರೆಸ್ ಪತ್ರಿಕಾಗೋಷ್ಠಿ

ಪುತ್ತೂರು: ಬ್ಯಾನರ್ ಪ್ರಕರಣಕ್ಕೆ ಸಂಬಂಧಿಸಿ ಕೃತ್ಯ ಎಸಗಿದವರು ಯಾರು ಎಂದು ಗೊತ್ತಿದ್ದರೂ, ಬಿಜೆಪಿ ಪ್ರತಿಭಟನಾ ನಾಟಕ ಮಾಡಿದ್ದಾರೆ. ಬಿಜೆಪಿಯಿಂದ ಕಾಂಗ್ರೆಸ್ ಮೇಲೆ ಗೂಬೆ ಕೂರಿಸುವ ಕೆಲಸ ಆಗಿರುವುದು ಕೈಲಾಗದವರು ಮೈ ಪರಚಿಕೊಂಡಂತೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ ಅವರು ಪತ್ರಿಕಾಗೋಷ್ಟಿಯಲ್ಲಿ ಹೇಳಿದ್ದಾರೆ.

ಇವತ್ತು ಪರಿಸ್ಥಿತಿ ಎನಾಗಿದೆ ಎಂದರೆ ಬಿಜೆಪಿ ವಿಲವಿಲ ಒದ್ದಾಡುತ್ತಿದೆ. ಯಾರಿಗೂ ಚಪ್ಪಲಿ ಹಾಕುವ ದುಸ್ತಿತಿ ನಮ್ಮ ಪಕ್ಷಕ್ಕೆ ಬಂದಿಲ್ಲ. ಮುಂದಿನ ದಿನ ಇಂತಹ ಪ್ರತಿಭಟನೆ ಮಾಡಲು ತಯಾರಾಗಬೇಕೆಂಬ ಬಿಜೆಪಿಯ ನಾಯಕರ ಹೇಳಿಕೆ ನಮಗೆ ಪ್ರಯೋಜನವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಮತ್ತು ಪುತ್ತೂರಿನಲ್ಲಿ ಕಾಂಗ್ರೆಸ್ ಶಾಸಕ ಬಂದಿರುವ ಹಿನ್ನಲೆಯಲ್ಲಿ ಬಿಜೆಪಿ ನಾಯಕರು ಹತಾಶ ಮನೋಭಾವದಿಂದ ಎನೆನೋ ಹೇಳಲು ಹೊರಟ್ಟಿದ್ದಾರೆ. ಬ್ಯಾನರ್ ಹಾಕಿದ ವಿಚಾರದಲ್ಲಿ ತಪ್ಪಿತಸ್ಥರು ಯಾರೆ ಆದರೂ ಪೊಲೀಸರು ಅವರನ್ನು ಹಿಡಿಯಬೇಕು. ನಾವಂತು ಪಕ್ಷದ ವತಿಯಿಂದ ಬ್ಯಾನರ್ ವಿಚಾರದಲ್ಲಿ ಕೈ ಹಾಕಲಿಲ್ಲ ಎಂದರು.

ಬಿಜೆಪಿ ನೀರಿನಿಂದ ಹೊರ ಬಂದ ಮೀನಿನಂತೆ ಚಡಪಡಿಸುತ್ತಿದೆ:

ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಮಳ ರಾಮಚಂದ್ರ ಅವರು ಮಾತನಾಡಿ ಸಂಜೀವ ಮಠಂದೂರು ಅವರು ಈಗ ಜೋರಾಗಿದ್ದಾರೆ.ಅವರು ಶಾಸಕರಾಗಿದ್ದಾಗ ಜೋರಾಗಿರುತ್ತಿದ್ದರೆ ಅವರಿಗೆ ಶಾಸಕತ್ವದ ಟಿಕೇಟ್ ಸಿಗುತ್ತಿತ್ತು. ಆದರೆ ಈಗ ಅವರು ಬೀದಿಗೆ ಬಂದಿದ್ದಾರೆ. ಇವತ್ತು ಅಧಿಕಾರ ಬಿಟ್ಟು ನೀರಿನಿಂದ ಹೊರ ಬಂದ ಮೀನಿನಂತೆ ಆಗಿದ್ದಾರೆ. ಯಾಕೆಂದರೆ ಬ್ಯಾನರ್ ಹಾಕಿದ ವಿಚಾರದಲ್ಲಿ ಅವರು ಹಿಂದು ಕಾರ್ಯಕರ್ತರಿಗೆ ಧಿಕ್ಕಾರ ಹಾಕಿದ್ದು ಯಾಕೆ ಎಂದ ಅವರು ಬಿಜೆಪಿಯವರು ರಚನಾತ್ಮಕ ವಿರೋಧ ಪಕ್ಷವಾಗಿ ಕೆಲಸ ಮಾಡಿ, ಟೀಕೆ ಮಾಡುವುದು ಬೇಡ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಮಳ ರಾಮಚಂದ್ರ, ಅಲ್ಪಸಂಖ್ಯಾತ ಘಟಕ ಅಧ್ಯಕ್ಷ ಅಬ್ದುಲ್ ಶುಕೂರ್ ಹಾಜಿ, ನಗರ ಕಾಂಗ್ರೆಸ್ ಅಧ್ಯಕ್ಷ ಹೆಚ್ ಮಹಮ್ಮದ್ ಆಲಿ, ಉಪಾಧ್ಯಕ್ಷ ಮೌರಿಸ್ ಮಸ್ಕರೇನಸ್ ಉಪಸ್ಥಿತರಿದ್ದರು.

ನವದೆಹಲಿಯಲ್ಲಿ ಬಿಜೆಪಿ ಹಿರಿಯ ಮುಖಂಡರನ್ನು ಭೇಟಿ ಮಾಡಿದ ಸಂಸದ ಬ್ರಿಜೇಶ್ ಚೌಟ

Posted by Vidyamaana on 2024-06-09 16:20:13 |

Share: | | | | |


ನವದೆಹಲಿಯಲ್ಲಿ ಬಿಜೆಪಿ ಹಿರಿಯ ಮುಖಂಡರನ್ನು ಭೇಟಿ ಮಾಡಿದ ಸಂಸದ ಬ್ರಿಜೇಶ್ ಚೌಟ

ನವದೆಹಲಿ: ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ನವದೆಹಲಿಯಲ್ಲಿ ಬಿಜೆಪಿಯ ಹಿರಿಯ ನಾಯಕರನ್ನು ಭೇಟಿ ಮಾಡಿದ್ದಾರೆ.

ಮಾಜಿ ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್ ಮತ್ತು ಜನರಲ್ ವಿ.ಕೆ. ಸಿಂಗ್ ಅವರನ್ನು ಸೌಹಾರ್ದ ಭೇಟಿ ಮಾಡಿದ ಬ್ರಿಜೇಶ್ ಚೌಟ ಕೆಲವು ಹೊತ್ತು ಮಾತುಕತೆ ನಡೆಸಿದ್ದಾರೆ.



Leave a Comment: