ಜುಂಬಾ ಡ್ಯಾನ್ಸ್‌ ಮಾಡುತ್ತಲೇ ಹೃದಯಾಘಾತಕ್ಕೆ ಖ್ಯಾತ ಉದ್ಯಮಿ ಬಲಿ,ಸಾವಿನ ಕೊನೆ ಕ್ಷಣ ಸೆರೆ!

ಸುದ್ದಿಗಳು News

Posted by vidyamaana on 2024-07-23 06:33:29 | Last Updated by Vidyamaana on 2024-07-23 06:33:29

Share: | | | | |


ಜುಂಬಾ ಡ್ಯಾನ್ಸ್‌ ಮಾಡುತ್ತಲೇ ಹೃದಯಾಘಾತಕ್ಕೆ ಖ್ಯಾತ ಉದ್ಯಮಿ ಬಲಿ,ಸಾವಿನ ಕೊನೆ ಕ್ಷಣ ಸೆರೆ!

ಮುಂಬೈ :ಫಿಟ್ನೆಸ್ ಕಾಪಾಡಿಕೊಳ್ಳಲು ಹಲವರು ಜುಂಬಾ ಡ್ಯಾನ್ಸ್ ಮೊರೆ ಹೋಗುತ್ತಾರೆ. ಪ್ರತಿ ದಿನ ಜುಂಬಾ ಡ್ಯಾನ್ಸ್ ಕ್ಲಾಸ್‌ಗೆ ತೆರಳಿ ಬೆವರು ಹರಿಸುತ್ತಾರೆ. ಹೀಗೆ ಮಹಾರಾಷ್ಟ್ರದ ಉದ್ಯಮಿ ಕವಲ್ಜಿತ್ ಸಿಂಗ್ ಬಗ್ಗಾ ಫಿಟ್ನೆಸ್‌ಗಾಗಿ ಪ್ರತಿ ದಿನ ಜುಂಬಾ ಕ್ಲಾಸ್‌ಗೆ ತೆರಳಿ ಡ್ಯಾನ್ಸ್ ಮಾಡುತ್ತಾ ಬೆವರು ಹರಿಸುತ್ತಾರೆ.

ಇಂದು ಬೆಳಗ್ಗೆ ಜುಂಬಾ ಡ್ಯಾನ್ಸ್ ಮಾಡುತ್ತಿದ್ದಂತೆ ಉದ್ಯಮಿ ಕವಲ್ಜಿತ್ ಸಿಂಗ್ ಬಗ್ಗಾ ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಆಸ್ಪತ್ರೆ ದಾಖಲಿಸಿದರೂ ಉದ್ಯಮಿ ಬದುಕುಳಿಯಲಿಲ್ಲ.


ಛತ್ರಪತಿ ಸಂಭಾಜಿನಗರದ ನಿವಾಸಿಯಾಗಿರುವ ಅವಲ್ಜಿತ್ ಸಿಂಗ್ ಬಾಗ್ಗಾ ಪ್ರತಿದಿನ ಜುಂಬಾ ಡ್ಯಾನ್ಸ್ ಮಾಡುತ್ತಾರೆ. ಎಂದಿನಂತೆ ಇಂದೂ ಕೂಡ ಅವಲ್ಜಿತ್ ಸಿಂಗ್ ಬಾಗ್ಗಾ ಜುಂಬಾ ಡ್ಯಾನ್ಸ್‌ಗೆ ತೆರಳಿದ್ದಾರೆ. ಅವಲ್ಜಿತ್ ಸಿಂಗ್ ರೀತಿಯಲ್ಲಿ ಇತರ ಕೆಲವರು ಜುಂಬಾ ಡ್ಯಾನ್ಸ್ ಮಾಡುತ್ತಿದ್ದಾರೆ. ಜುಂಬಾ ಕ್ಲಾಸ್ ತೆರಳಿ 15 ನಿಮಿಷಗಳ ಕಾಲ ಡ್ಯಾನ್ಸ್ ಮಾಡಿದ್ದಾರೆ. ಹಲವರು ಇದೇ ಕ್ಲಾಸ್‌ನಲ್ಲಿ ಅವಲ್ಜಿತ್ ಸಿಂಗ್ ಜೊತೆ ಡ್ಯಾನ್ಸ್ ಮಾಡಿದ್ದಾರೆ.

ಕೊನೆಯ ಸಾಲಿನ ಬದಿಯಲ್ಲಿದ್ದ ಅವಲ್ಜಿತ್ ಸಿಂಗ್ ಡ್ಯಾನ್ಸ್ ಮಾಡುತ್ತಿದ್ದಂತೆ ಹೃದಯಾಘಾತವಾಗಿದೆ. ಡ್ಯಾನ್ಸ್ ಮಾಡಲು ಸಾಧ್ಯವಾಗದೆ ನಿಂತಿದ್ದಾರೆ. ಚೇತರಿಸಿಕೊಳ್ಳಲು ಕೆಲ ಕ್ಷಣ ನಿಂತಿದ್ದಾರೆ. ಇತರರು ಡ್ಯಾನ್ಸ್‌ನಲ್ಲಿ ತಲ್ಲೀನರಾಗಿದ್ದರು. ಆದರೆ ಅವಲ್ಜಿತ್ ಸಿಂಗ್ ಚೇತರಿಸಿಕೊಳ್ಳಲಿಲ್ಲ. ಕಾರಣ ತೀವ್ರ ಹೃದಯಾಘಾತದಿಂದ ಅವಲ್ಜಿತ್ ಕುಸಿದಿದ್ದಾರೆ. ಈ ವೇಳೆ ಮೆಲ್ಲನೆ ಕುಳಿತುಕೊಳ್ಳಲು ಪ್ರಯತ್ನಿಸಿದ್ದಾರೆ. ಆದರೆ ಸಾಧ್ಯವಾಗಿಲ್ಲ. ಅವಲ್ಜಿತ್ ಸಿಂಗ್ ಕುಸಿದು ಬೀಳುತ್ತಿದ್ದಂತೆ ಇತರರು ತಕ್ಷಣವೇ ನೆರವಿಗೆ ಧಾವಿಸಿದ್ದಾರೆ. ನೀರು ತಂದು ಕುಡಿಸುವ ಪ್ರಯತ್ನ ಮಾಡಿದ್ದಾರೆ. ಆದರೆ ಯಾವುದಕ್ಕೂ ಅವಲ್ಜಿತ್ ಸಿಂಗ್ ಸ್ಪಂದಿಸಿಲ್ಲ.

ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ

ಅವಲ್ಜಿತ್ ಎತ್ತಿಕೊಂಡು ವಾಹನದ ಮೂಲಕ ಆಸ್ಪತ್ರೆ ದಾಖಲಿಸಿದ್ದಾರೆ. ಆಸ್ಪತ್ರೆ ದಾಖಲಿಸುವ ಮೊದಲೇ ಅವಲ್ಜಿತ್ ಸಿಂಗ್ ಬಾಗ್ಗಾ ಪ್ರಾಣ ಪಕ್ಷಿ ಹಾರಿಹೋಗಿದೆ. ತಪಾಸಣೆ ನಡೆಸಿದ ವೈದ್ಯರು ಅವಲ್ಜಿತ್ ಸಿಂಗ್ ಮೃತಪಟ್ಟಿರುವುದಾಗಿ ಖಚಿತಪಡಿಸಿದ್ದಾರೆ.

ಜಿಮ್ ಅಭ್ಯಾಸದ ವೇಳೆ ಈ ರೀತಿ ಹೃದಯಾಘಾತಕ್ಕೆ ಕೆಲವರು ಪ್ರಾಣ ಕಳೆದುಕೊಂಡಿದ್ದಾರೆ. ಇತ್ತೀಚಗೆ ಹೃದಯಾಘಾತದ ಪ್ರಮಾಣ ಹೆಚ್ಚಾಗುತ್ತಿದೆ ಅನ್ನೋ ಮಾತುಗಳು ಕೇಳಿಬರುತ್ತಿದೆ. ಈ ಬೆಳವಣಿಗೆ ನಡುವೆ ಇದೀಗ ಉದ್ಯಮಿ ಅವಲ್ಜಿತ್ ಸಿಂಗ್ ಬಾಗ್ಗಾ ನಿಧನ ಸುದ್ದಿ ಆತಂಕ ಹೆಚ್ಚಿಸಿದೆ. ಉತ್ತಮ ಆರೋಗ್ಯ ಕಾಪಾಡಿಕೊಂಡಿದ್ದ ಕವಲ್ಜಿತ್ ಸಿಂಗ್ ದಿಢೀರ್ ನಿಧನ ಇದೀಗ ಮತ್ತೆ ಹಲವು ಚರ್ಚೆಗಳಿಗೆ ಗ್ರಾಸವಾಗಿದೆ.

 Share: | | | | |


ಕಡಬ : ನೇಣು ಬಿಗಿದು ಕಾಣಿಯೂರು ಮೂಲದ ದಿವ್ಯಾಶ್ರೀ ಆತ್ಮಹತ್ಯೆ

Posted by Vidyamaana on 2024-03-04 16:29:08 |

Share: | | | | |


ಕಡಬ : ನೇಣು ಬಿಗಿದು ಕಾಣಿಯೂರು ಮೂಲದ ದಿವ್ಯಾಶ್ರೀ ಆತ್ಮಹತ್ಯೆ

ಕಾಣಿಯೂರು : ಅಪಪ್ರಚಾರಕ್ಕೆ ಮನನೊಂದ ಯುವತಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಕಾಣಿಯೂರಿನಲ್ಲಿ ನಡೆದಿದೆ.

ಕಡಬ ತಾಲೂಕಿನ ಕಾಣಿಯೂರು ಗ್ರಾಮದ ಅನಿಲ ಮನೆ ಪದ್ಮಯ್ಯ ಗೌಡ ಅವರ ಪುತ್ರಿ ದಿವ್ಯಾಶ್ರೀ (26) ಮೃತ ಯುವತಿ.ಮಾ.3ರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ದಿವ್ಯಾಶ್ರೀ ಅವರು ತಮ್ಮ ಮನೆಯ ಅಡುಗೆ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೃತ್ಯ ನಡೆಸಿರುವುದನ್ನು ಗಮನಿಸಿ ಮನೆಯವರು ಆಸ್ಪತ್ರೆಗೆ ದಾಖಲಿಸಿದರೂ ಆದಾಗಲೇ ಯುವತಿ ಮೃತಪಟ್ಟಿದ್ದರು.

ಯುವತಿಯ ಬಗ್ಗೆ ಎರಡು ತಿಂಗಳ ಹಿಂದೆ ಅಪಪ್ರಚಾರ ನಡೆಸಲಾಗಿದ್ದು, ಇದೇ ಕಾರಣಕ್ಕೆ ನೊಂದು ಯುವತಿ ಕೃತ್ಯ ಎಸಗಿದ್ದಾರೆ ಎಂದು ಬೆಳ್ಳಾರೆ ಠಾಣೆಗೆ ನೀಡಲಾದ ದೂರಿನಲ್ಲಿ ತಿಳಿಸಲಾಗಿದೆ.ಈ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಗದ ತಕರಾರು - ಹೆತ್ತವರ ಮೇಲೆಯೇ ಕೆತ್ತಿ ಬೀಸಿದ ಕುಡುಕ ಮಗ

Posted by Vidyamaana on 2023-11-21 08:33:43 |

Share: | | | | |


ಜಾಗದ ತಕರಾರು - ಹೆತ್ತವರ ಮೇಲೆಯೇ ಕೆತ್ತಿ ಬೀಸಿದ ಕುಡುಕ ಮಗ

ಬೆಳ್ಳಾರೆ : ಮಗನೇ ತಂದೆ-ತಾಯಿಯ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿದ ಘಟನೆ ಬೆಳ್ಳಾರೆ ಸಮೀಪದ ಕಲ್ಲಗುಡ್ಡೆ ಕೊಡಿಯಾಳದಲ್ಲಿ ನಡೆದಿದೆ ಎಂದು ವರದಿಯಾಗಿದೆ.


ಬೆಳ್ಳಾರೆ ಸಮೀಪದ ಕಲ್ಲಗುಡ್ಡೆ ಕೊಡಿಯಾಳ ನಿವಾಸಿಗಳಾದ ಮಂಜುನಾಥ್, ಧರ್ಮವತಿ ಗಾಯಗೊಂಡ ದಂಪತಿಗಳು ಎಂದು ಗುರುತಿಸಲಾಗಿದೆ.


ಜಾಗದ ವಿಚಾರವಾಗಿ ಮನೆಯಲ್ಲಿ ಜಗಳ ನಡೆದಿದ್ದು, ಈ ವೇಳೆ ಮಗ ತಂದೆ-ತಾಯಿ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿದ್ದು, ಗಂಭೀರ ಗಾಯಗೊಂಡ ಅವರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.


ಬೆಳ್ಳಾರೆ ಠಾಣಾ ವ್ಯಾಪ್ತಿಯ ಕಲ್ಲಗುಡ್ಡೆ ಕೊಡಿಯಾಲ ಎಂಬಲ್ಲಿ ಮಂಜುನಾಥ್ ಮತ್ತು ಪತ್ನಿಗೆ ಪುತ್ರ ದೇವಿಪ್ರಸಾದ್ ಕತ್ತಿಯಿಂದ ಕಡಿದು ಕೊಲೆಯತ್ನ ಮಾಡಿದ್ದು, ಕಂಠಪೂರ್ತಿ ಕುಡಿದ ಪುತ್ರ ಜಮೀನು ವಿಚಾರವಾಗಿ ತಂದೆ, ತಾಯಿ ಮೇಲೆ ಹಲ್ಲೆ ನಡೆಸಿದ್ದಾನ್ನೆಲಾಗಿದೆ.


ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿದೆ. ಆರೋಪಿಯನ್ನು  ಪೊಲೀಸರು  ಬಂಧಿಸಿದ್ದಾರೆ .

ಡಿ ಗ್ರೂಪ್ (ರಿ) ವಿಟ್ಲ ಇದರ ವಾರ್ಷಿಕ ಮಹಾಸಭೆ -ನೂತನ ಪದಾಧಿಕಾರಿಗಳ ಆಯ್ಕೆ

Posted by Vidyamaana on 2024-02-24 12:25:46 |

Share: | | | | |


ಡಿ ಗ್ರೂಪ್ (ರಿ) ವಿಟ್ಲ ಇದರ ವಾರ್ಷಿಕ ಮಹಾಸಭೆ -ನೂತನ ಪದಾಧಿಕಾರಿಗಳ ಆಯ್ಕೆ

ವಿಟ್ಲ: ಡಿ " ಗ್ರೂಪ್ (ರಿ) ವಿಟ್ಲ ಇದರ ವಾರ್ಷಿಕ ಮಹಾಸಭೆಯು ಅಝೀಝ್ ಸನ ಇವರ ಅಧ್ಯಕ್ಷತೆಯಲ್ಲಿ ಸಂಘಟನೆಯ ಕಚೇರಿಯಲ್ಲಿ ನಡೆಯಿತು.

   ನಿರ್ಗಮನ ಅಧ್ಯಕ್ಷ ಖಲಂದರ್ ಪರ್ತಿಪ್ಪಾಡಿ ಇವರು ಸಂಘಟನೆಯು ನಡೆದು ಬಂದ ಹಾದಿ,ಮುಂದಿನ ಯೋಜನೆಯ ಬಗ್ಗೆ ವಿವರ ನೀಡಿದರು.

    ನಿಷ್ಕ್ರಿಯ ಸದಸ್ಯರನ್ನು ಕೈ ಬಿಟ್ಟು ಹಕೀಂ ಬಿಗ್‌ಬೇಕ್,ರಫೀಕ್ ಇಂಜಿನಿಯರ್,ಸಫ್ವಾನ್ ಎಲ್‌ಐಸಿ ಹಾಗೂ ಇಸ್ಮಾಯಿಲ್ ಸೂಪರ್ ಇವರನ್ನು ನೂತನ ಸದಸ್ಯರನ್ನಾಗಿ ಸೇರ್ಪಡೆಗೊಳಿಸಲಾಯಿತು. ರಮ್ಝಾನ್ 28 ರಂದು ಇಫ್ತಾರ್‌ ಕೂಟ ಏರ್ಪಡಿಸುವುದಾಗಿ ತೀರ್ಮಾನಿಸಲಾಯಿತು.

     2024-25 ಸಾಲಿನ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು

ಅಧ್ಯಕ್ಷರಾಗಿವಿ.ಎಚ್.ರಿಯಾಝ್,ಗೌರವಾಧ್ಯಕ್ಷರಾಗಿ ಅಝೀಝ್ ಸನ, ಉಪಾಧ್ಯಕ್ಷರಾಗಿ ಶೀತಲ್ ಇಕ್ಬಾಲ್, ಕಾರ್ಯದರ್ಶಿಯಾಗಿ ಶಾಕಿರ್ ಅಳಕೆಮಜಲು, ಜತೆ ಕಾರ್ಯದರ್ಶಿ ಯಾಗಿ ವಿ.ಕೆ.ಎಂ.ಹಂಝ,ಕೋಶಾಧಿಕಾರಿಯಾಗಿ ಬಶೀರ್ ಬೊಬ್ಬೆಕೇರಿ.,ಮಾದ್ಯಮ ಪ್ರತಿನಿಧಿಗಳಾಗಿ ಅಬೂಬಕರ್ ಅನಿಲಕಟ್ಟೆ ಮತ್ತು ಮಹಮ್ಮದ್ ಅಲಿ ವಿಟ್ಲ, ಗೌರವ ಸಲಹೆಗಾರರಾಗಿ ಝುಬೈರ್ ಮಾಸ್ಟರ್, ಖಲಂದರ್ ಪರ್ತಿಪ್ಪಾಡಿ, ಇಸಾಕ್ ವಿಟ್ಲ,ಸಮದ್ ಮೇಗಿನಪೇಟೆ.

ಆ್ಯಂಬುಲೆನ್ಸ್ ನಿರ್ವಹಣೆಗಾರರಾಗಿ ಹಂಝ ವಿಟ್ಲ, ತೌಸೀಫ್ ವಿಟ್ಲ, ಉಬೈದ್ ವಿಟ್ಲ, ರಫೀಕ್ ಪೊನ್ನೋಟು,

ಸೌದಿ ಅರೇಬಿಯಾ ವಕ್ತಾರರಾಗಿ ಫಾರಿಸ್ ಮತ್ತು ಮನ್ಸೂರ್ ಮಂಗಿಲಪದವು

ದುಬೈ ವಕ್ತಾರರಾಗಿ  ರಾಝಿಕ್ ಡಿ ಇವರನ್ನು ಆಯ್ಕೆ ಮಾಡಲಾಯಿತು.

ನೂತನ ಪದಾಧಿಕಾರಿಗಳು ತಮ್ಮ ಅನಿಸಿಕೆಗಳನ್ನು ವ್ಯಕ್ತ ಪಡಿಸಿದರು.

   ಅಬೂಬಕರ್ ಅನಿಲಕಟ್ಟೆ ಸ್ವಾಗತಿಸಿ, ವಂದಿಸಿದರು.

ಶಾಸಕರ ಇಂದಿನ ಕಾರ್ಯಕ್ರಮ(ಜೂ.5)

Posted by Vidyamaana on 2023-06-04 23:14:37 |

Share: | | | | |


ಶಾಸಕರ ಇಂದಿನ ಕಾರ್ಯಕ್ರಮ(ಜೂ.5)

ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈ ಅವರು ಜೂನ್ 5ರಂದು ಬೆಳಿಗ್ಗೆ 9.30ಕ್ಕೆ ಉಪ್ಪಿನಂಗಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸೀಯಳಾಭಿಷೇಕ ನೆರವೇರಿಸಲಿದ್ದಾರೆ.

ನಂತರ 10.30ಕ್ಕೆ ಪುತ್ತೂರು ಬಾಲವನದಲ್ಲಿ ವಿಶ್ವ ಪರಿಸರ ದಿನಾಚರಣೆಯಲ್ಲಿ ಭಾಗಿಯಾಗುವರು.

ಬೆಳಿಗ್ಗೆ 11.15ಕ್ಕೆ ಕುಂಬ್ರ ಕರ್ನಾಟಕ ಇಸ್ಲಾಮಿಕ್ ಅಕಾಡೆಮಿಯಲ್ಲಿ ಶಾಸಕರಿಗೆ ಅಭಿನಂದನಾ ಸಮಾರಂಭ ಏರ್ಪಡಿಸಲಾಗಿದೆ.

ನೂತನ ಸಂಸದೆ ಕಂಗನಾ ರಣಾವತ್ ಗೆ ಕಪಾಳಮೋಕ್ಷ

Posted by Vidyamaana on 2024-06-06 18:58:41 |

Share: | | | | |


ನೂತನ ಸಂಸದೆ ಕಂಗನಾ ರಣಾವತ್ ಗೆ ಕಪಾಳಮೋಕ್ಷ

ಚಂಡೀಗಢ: ನೂತನ ಸಂಸದೆಯಾದ ಕಂಗನಾ ರಾಣಾವತ್ ಅವರು ಭದ್ರತೆಯನ್ನು ಮೀರಿ ಮೊಬೈಲ್ ಕೈಯಲ್ಲೇ ಹಿಡಿದು ತೆರಳೋದಕ್ಕೆ ವಿಮಾನ ನಿಲ್ದಾಣದಲ್ಲಿ ಮುಂದಾಗಿದ್ದಾರೆ. ಈ ವೇಳೆ ಪೊಲೀಸ್ ಪೇದೆಯೊಂದಿಗೆ ಕಿರಿಕ್ ತೆಗೆದಿದ್ದಾರೆ. ಆ ಬಳಿಕ ವಾಗ್ವಾದ ನಡೆದಿದೆ. ಈ ವೇಳೆಯಲ್ಲಿ ನೂತನ ಸಂಸದೆ ಕಂಗನಾ ರಾಣಾವತ್ ಗೆ ಪೊಲೀಸ್ ಪೇದೆ ಕಪಾಳ ಮೋಕ್ಷ ಮಾಡಿರೋದಾಗಿ ತಿಳಿದು ಬಂದಿದೆ.

ಬಾಲಿವುಡ್ ನಟಿ ಕಂಗನಾ ರನೌತ್ ಅವರಿಗೆ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆಗೆ ಸೇರಿದ ಮಹಿಳಾ ಸಿಬ್ಬಂದಿ ಕಪಾಳಮೋಕ್ಷ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಚೀನಾದ ನ್ಯೂಮೋನೀಯ ಪರಿಣಾಮ : ಆಸ್ಪತ್ರೆಗಳ ಸನ್ನದ್ಧತೆಯನ್ನು ಪರಿಶೀಲಿಸಲು ರಾಜ್ಯಗಳಿಗೆ ಕೇಂದ್ರ ಸರ್ಕಾರ ಸಲಹೆ

Posted by Vidyamaana on 2023-11-26 20:08:05 |

Share: | | | | |


ಚೀನಾದ ನ್ಯೂಮೋನೀಯ ಪರಿಣಾಮ : ಆಸ್ಪತ್ರೆಗಳ ಸನ್ನದ್ಧತೆಯನ್ನು ಪರಿಶೀಲಿಸಲು ರಾಜ್ಯಗಳಿಗೆ ಕೇಂದ್ರ ಸರ್ಕಾರ ಸಲಹೆ

ದೆಹಲಿ : ಚೀನಾದಲ್ಲಿ ನ್ಯುಮೋನಿಯಾ ಪ್ರಕರಣಗಳು ಹೆಚ್ಚಾಗುತ್ತಿರುವ ಮಧ್ಯೆ ಸಾರ್ವಜನಿಕ ಆರೋಗ್ಯ ಮತ್ತು ಆಸ್ಪತ್ರೆಗಳ ಸನ್ನದ್ಧತೆಯ ಕ್ರಮಗಳನ್ನು ತತ್ ಕ್ಷಣವೇ ಪರಿಶೀಲಿಸುವಂತೆ ಕೇಂದ್ರ ಸರಕಾರ ಇಂದು ರಾಜ್ಯ ಸರಕಾರಗಳಿಗೆ ಸೂಚನೆ ನೀಡಿದೆ. ಚೀನಾದ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ಕೇಂದ್ರ ಸರಕಾರ ಹೇಳಿದ್ದು, ಸದ್ಯಕ್ಕೆ ಯಾವುದೇ ಎಚ್ಚರಿಕೆಗೆ ಯಾವುದೇ ಕಾರಣವಿಲ್ಲ" ಎಂದು ಒತ್ತಿ ಹೇಳಿದೆ.ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಆರೋಗ್ಯ ಕಾರ್ಯದರ್ಶಿ ಪತ್ರ ಬರೆದಿದ್ದು, ಆಸ್ಪತ್ರೆಗಳಲ್ಲಿ ಹಾಸಿಗೆಗಳು, ಔಷಧಗಳು ಮತ್ತು ಇನ್ಫ್ಲುಯೆನ್ಸಕ್ಕೆ ಲಸಿಕೆಗಳು, ವೈದ್ಯಕೀಯ ಆಮ್ಲಜನಕ, ಪ್ರತಿಜೀವಕಗಳು, ವೈಯಕ್ತಿಕ ರಕ್ಷಣ ಸಾಧನಗಳು, ಆಮ್ಲಜನಕ ಸ್ಥಾವರಗಳು ಮತ್ತು ವೆಂಟಿಲೇಟರ್‌ಗಳ ಕಾರ್ಯವೈಖರಿ, ಆರೋಗ್ಯ ಸೌಲಭ್ಯಗಳಲ್ಲಿನ ಸೋಂಕು ನಿಯಂತ್ರಣ ಅಭ್ಯಾಸಗಳು,ಪರೀಕ್ಷಾ ಕಿಟ್‌ಗಳಂತಹ ವೈದ್ಯಕೀಯ ಮೂಲಸೌಕರ್ಯಗಳನ್ನು ಹೆಚ್ಚಿಸಲು ಕ್ರಮಗಳನ್ನು ತೆಗೆದುಕೊಳ್ಳುವಂತೆ ನಿರ್ದೇಶಿಸಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ನೀಡಿದೆ. ಸಣ್ಣ ಮಕ್ಕಳಲ್ಲಿ ಮೈಕ್ರೋಪ್ಲಾಸ್ಮಾ ನ್ಯುಮೋನಿಯಾ(ವಾಕಿಂಗ್‌ ನ್ಯುಮೋನಿಯಾ) ಸಾಮಾನ್ಯ ಬ್ಯಾಕ್ಟೀರಿಯಾ ಆಧಾರಿತ ಸಮಸ್ಯೆ ಚೀನಾದಲ್ಲಿ ಕಾಣಿಸಿಕೊಂಡ ಬಳಿಕ ಬೀಜಿಂಗ್‌ ಮತ್ತು ಲಿಯನಾನಿಂಗ್‌ ಪ್ರಾಂತ್ಯಗಳ ಆಸ್ಪತ್ರೆಗಳಲ್ಲಿ ಮಕ್ಕಳು ಚಿಕಿತ್ಸೆಗೆ ಆಗಮಿಸುವ ಸಂಖ್ಯೆ ಹೆಚ್ಚಾಗಿದೆ. ಆದರೆ, ಹೊಸ ಸಮಸ್ಯೆಗೆ ಕಾರಣ ಏನು ಎಂಬ ಬಗ್ಗೆ ಅಲ್ಲಿನ ಸರಕಾರ ಸ್ಪಷ್ಟನೆ ನೀಡಿಲ್ಲವಾಗಿದೆ.

Recent News


Leave a Comment: