ಅತಿ ವೇಗವಾಗಿ ಬಂದು ಮಹಿಳೆಗೆ ಡಿಕ್ಕಿ ಹೊಡೆದ ಟ್ಯಾಕ್ಸಿ; ವಿಡಿಯೊ ನೋಡಿ

ಸುದ್ದಿಗಳು News

Posted by vidyamaana on 2024-07-23 19:43:42 |

Share: | | | | |


ಅತಿ ವೇಗವಾಗಿ ಬಂದು ಮಹಿಳೆಗೆ ಡಿಕ್ಕಿ ಹೊಡೆದ ಟ್ಯಾಕ್ಸಿ; ವಿಡಿಯೊ ನೋಡಿ

ಪುಣೆ: ಅತಿ ವೇಗ ಅಪಘಾತಕ್ಕೆ ಕಾರಣವೆಂದು ತಿಳಿದರೂ ಕೂಡ ಕೆಲವು ಚಾಲಕರು ಅವಸರದಲ್ಲಿ ವೇಗವಾಗಿ ವಾಹನ ಚಲಾಯಿಸಿ ಜನರ ಜೀವಕ್ಕೆ ಆಪತ್ತು ತರುತ್ತಿದ್ದಾರೆ. ಎಲ್ಲೆಂದರಲ್ಲಿ ನಿಂತ ಜನರ ಮೇಲೂ ವಾಹನವನ್ನು ಹಾರಿಸಿಕೊಂಡು ಹೋಗುತ್ತಾರೆ. ಇದೀಗ ಅಂತಹದೊಂದು ಘಟನೆ ಮಹಾರಾಷ್ಟ್ರದಲ್ಲಿ ನಡೆದಿದ್ದು, ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Hit and Run Case)ಆಗಿದೆ.ಪ್ರಿ-ಚಿಂಚ್ವಾಡ್‍ನಲ್ಲಿ ಅತಿವೇಗವಾಗಿ ಚಲಿಸುತ್ತಿದ್ದ ಟ್ಯಾಕ್ಸಿ ಮಹಿಳೆಗೆ ಡಿಕ್ಕಿ ಹೊಡೆದು ನಂತರ ಚಾಲಕ ಅಪಘಾತದ ಸ್ಥಳದಿಂದ ಓಡಿಹೋದ ಹೊಸ ಹಿಟ್ ಅಂಡ್ ರನ್ ಪ್ರಕರಣ ವರದಿಯಾಗಿದೆ. ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಆಕೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂಬುದಾಗಿ ತಿಳಿದುಬಂದಿದೆ. ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಪುಣೆಯಿಂದ ಸುಮಾರು 15 ಕಿಲೋಮೀಟರ್ ದೂರದಲ್ಲಿರುವ ಪಿಂಪ್ರಿ-ಚಿಂಚ್ವಾಡ್‍ನಲ್ಲಿ ಈ ಘಟನೆ ನಡೆದಿದೆ. ಈ ಹಿಟ್ ಅಂಡ್ ರನ್ ಪ್ರಕರಣ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವಿಡಿಯೊದಲ್ಲಿ ಭಾನುವಾರ ಮಧ್ಯಾಹ್ನ 1:30ರ ಸುಮಾರಿಗೆ ರಸ್ತೆಯಲ್ಲಿ ಮಹಿಳೆ ನಡೆದುಕೊಂಡು ಹೋಗುತ್ತಿರುವಾಗ ಎದುರಿಗೆ ವೇಗವಾಗಿ ಬಂದ ಟ್ಯಾಕ್ಸಿ ಮಹಿಳಾ ಪಾದಚಾರಿಗೆ ಡಿಕ್ಕಿ ಹೊಡೆದು ಸ್ಥಳದಿಂದ ಪರಾರಿಯಾಗಿದೆ. ರಸ್ತೆಯಲ್ಲಿದ್ದ ಇತರ ಜನರು ಆಕೆಯ ಸಹಾಯಕ್ಕಾಗಿ ಓಡಿ ಬರುತ್ತಿರುವುದು ಕಂಡುಬಂದಿದೆ. ಟ್ಯಾಕ್ಸಿಗೆ ಡಿಕ್ಕಿ ಹೊಡೆದ ಮಹಿಳೆ ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದು, ಈ ಬಗ್ಗೆ ಪಿಂಪ್ರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎನ್ನಲಾಗಿದೆ.

ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ

ಈ ಪ್ರಕರಣದ ಬಗ್ಗೆ ಪಿಂಪ್ರಿ-ಚಿಂಚ್ವಾಡ್ ಡಿಸಿಪಿ ಶಿವಾಜಿ ಪವಾರ್ ಮಾತನಾಡಿ, ಈ ಅಪಘಾತದಲ್ಲಿ ಸಂತ್ರಸ್ತೆ ರೇಖಾ ಗಾಯಗೊಂಡಿದ್ದಾರೆ. ಈಗ ಅವರ ಆರೋಗ್ಯ ಸ್ಥಿರವಾಗಿದೆ. 24 ವರ್ಷದ ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಕಾರಿನ ಚಾಲಕ ಕುಡಿದಿರಲಿಲ್ಲ ಎಂದು ಪೊಲೀಸರು ದೃಢಪಡಿಸಿದ್ದಾರೆ. ಮೇಲ್ನೋಟಕ್ಕೆ ಚಾಲಕ ವಾಹನದ ನಿಯಂತ್ರಣ ಕಳೆದುಕೊಂಡಿರುವುದು ಕಂಡುಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದು ಮಹಾರಾಷ್ಟ್ರದಲ್ಲಿ ವರದಿಯಾದ ಮೊದಲ ಹಿಟ್ ಅಂಡ್ ರನ್ ಪ್ರಕರಣವಲ್ಲ. ಈಗಾಗಲೇ ಹಿಟ್ ಅಂಡ್ ರನ್ ಪ್ರಕರಣ ಮತ್ತೊಂದು ಸುದ್ದಿಯಲ್ಲಿ, ವೇಗವಾಗಿ ಬಂದ ಆಡಿ ಕಾರು ಎರಡು ಆಟೋರಿಕ್ಷಾಗಳಿಗೆ ಡಿಕ್ಕಿ ಹೊಡೆದಿದೆ. ಒಂದು ಆಟೋರಿಕ್ಷಾ ಚಾಲಕನ ಸ್ಥಿತಿ ಚಿಂತಾಜನಕವಾಗಿದ್ದು, ಅದರಲ್ಲಿದ್ದ ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಮುಲುಂಡ್ ಪೊಲೀಸರು ಆಡಿ ಕಾರನ್ನು ವಶಪಡಿಸಿಕೊಂಡಿದ್ದಾರೆ, ಆದರೆ ಅಪಘಾತದ ನಂತರ ಅದರ ಚಾಲಕ ನಾಪತ್ತೆಯಾಗಿದ್ದಾನೆ ಎನ್ನಲಾಗಿದೆ.

 Share: | | | | |


ಚೆಲ್ಯಡ್ಕ ಸೇತುವೆಯ ಸಂಚಾರ ನಿಷೇಧ ; ಒಳಮೊಗ್ರು ಬಿಜೆಪಿ ಶಕ್ತಿಕೇಂದ್ರದಿಂದ ಸಂಸದರಿಗೆ ಮನವಿ

Posted by Vidyamaana on 2024-07-06 21:48:39 |

Share: | | | | |


ಚೆಲ್ಯಡ್ಕ ಸೇತುವೆಯ ಸಂಚಾರ ನಿಷೇಧ ; ಒಳಮೊಗ್ರು ಬಿಜೆಪಿ ಶಕ್ತಿಕೇಂದ್ರದಿಂದ ಸಂಸದರಿಗೆ ಮನವಿ

ಪುತ್ತೂರು : ದೇವಸ್ಯ – ದೇರ್ಲ ಲೋಕೋಪಯೋಗಿ ರಸ್ತೆಯಲ್ಲಿ ಬೆಟ್ಟಂಪಾಡಿ ಗ್ರಾಮದ ಚೆಲ್ಯಡ್ಕ ಸೇತುವೆಯಲ್ಲಿ ಘನ ವಾಹನ ಸಂಚಾರ ನಿಷೇಧಿಸಿದರಿಂದಾಗಿ ಒಳಮೊಗ್ರು , ಆರ್ಯಾಪು , ಬೆಟ್ಟಂಪಾಡಿ , ಬಲ್ನಾಡು ಗ್ರಾಮದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ತೀವ್ರ ಸಮಸ್ಯೆಯಾಗಿದ್ದು, ಒಳಮೊಗ್ರು ಗ್ರಾಮದ ಒಂದು ಹಳ್ಳಿ ಸಂಪರ್ಕ ಕಡಿದುಕೊಂಡಂತಾಗಿದೆ. ಆದ್ದರಿಂದ ಶೀಘ್ರವಾಗಿ ಸಮಸ್ಯೆ ಬಗೆಹರಿಸುವಂತೆ ಸೂಚಿಸಬೇಕೆಂದು ಒಳಮೊಗ್ರು ಬಿಜೆಪಿ ಶಕ್ತಿಕೇಂದ್ರದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ಮನವಿ ಸಲ್ಲಿಸಿದರು.

ಉಪ್ಪಿನಂಗಡಿ: ಪೆರಿಯಡ್ಕ ಹಾಲು ಉತ್ಪಾದಕರ ಸೊಸೈಟಿಯಲ್ಲಿ ಕಳ್ಳತನ

Posted by Vidyamaana on 2024-03-21 20:40:14 |

Share: | | | | |


ಉಪ್ಪಿನಂಗಡಿ: ಪೆರಿಯಡ್ಕ ಹಾಲು ಉತ್ಪಾದಕರ ಸೊಸೈಟಿಯಲ್ಲಿ ಕಳ್ಳತನ

ಉಪ್ಪಿನಂಗಡಿ :ಪೆರಿಯಡ್ಕದ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ನುಗ್ಗಿದ ಕಳ್ಳನೋರ್ವ ಹಣಕ್ಕಾಗಿ ತಡಕಾಡಿದ ಘಟನೆ ಮಾ. 20ರಂದು ಬೆಳಕಿಗೆ ಬಂದಿದೆ.

ಮಾ. 19ರ ಸಂಜೆ ಸಂಘದ ಕಚೇರಿಯನ್ನು ಬಂದ್‌ ಮಾಡಿ ಸಿಬಂದಿ ತೆರಳಿದ್ದು, ಬೆಳಗ್ಗೆ ಬರುವಾಗ ಕಚೇರಿಯ ಷಟರ್‌ನ ಬೀಗ ಮುರಿದು ಕಳ್ಳನೋರ್ವ ಒಳಗೆ ನುಗ್ಗಿದ್ದಾನೆ. . ಈತ ಹಣಕ್ಕಾಗಿ ಮೇಜಿನ ಡ್ರಾವರ್‌ಗಳನ್ನು ಮುರಿದು ಸುಮಾರು ಒಂದೂವರೆ ಸಾವಿರ ರೂ. ಎಗರಿಸಿ, ಪರಾರಿಯಾಗಿದ್ದಾನೆ.

ಸ್ಥಳೀಯ ಮನೆಯೊಂದರಿಂದ ಪಿಕ್ಕಾಸನ್ನು ತಂದು ಷಟರ್‌ನ ಬೀಗ ಮುರಿಯಲು ಬಳಸಿದ್ದ ಎಂದು ತಿಳಿದು ಬಂದಿದೆ. ಗುರುತು ಸಿಗದಂತೆ ಮುಖಕ್ಕೆ ಬಟ್ಟೆಯನ್ನು ಸುತ್ತಿಕೊಂಡಿದ್ದ ಈತನ ಚಲನವಲನಗಳು ಸಂಘದ ಸಿಸಿ ಕೆಮರಾದಲ್ಲಿ ಪತ್ತೆಯಾಗಿವೆ. ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಗಮನಿಸಿ : ಗ್ರಾಮಪಂಚಾಯಿತಿಗಳಲ್ಲಿ ಜನನ-ಮರಣ ನೋಂದಣಿ ಮಾಡುವ ಕುರಿತು ಇಲ್ಲಿದೆ ಮಾಹಿತಿ

Posted by Vidyamaana on 2024-07-02 06:38:49 |

Share: | | | | |


ಗಮನಿಸಿ : ಗ್ರಾಮಪಂಚಾಯಿತಿಗಳಲ್ಲಿ ಜನನ-ಮರಣ ನೋಂದಣಿ ಮಾಡುವ ಕುರಿತು ಇಲ್ಲಿದೆ ಮಾಹಿತಿ

ಬೆಂಗಳೂರು : ರಾಜ್ಯದ ಗ್ರಾಮೀಣ ಜನತೆಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಜನನ, ಮರಣದ ನೋಂದಣಿಯನ್ನು ಇನ್ನು ಮುಂದೆ ಗ್ರಾಮ ಪಂಚಾಯಿತಿಯಲ್ಲೇ ಆರಂಭಿಸುವ ಪ್ರಕ್ರಿಯೆ (ಜುಲೈ 1 ರಿಂದ) ಜಾರಿಗೆ ಬಂದಿದೆ.

ಗ್ರಾಮೀಣ ಪ್ರದೇಶದಲ್ಲಿ ಜನನ, ಮರಣ ನೋಂದಣಿ ವ್ಯವಸ್ಥೆಗೆ ಬಲ ತುಂಬುವ ಜೊತೆಗೆ 30 ದಿನದೊಳಗೆ ನೋಂದಾಯಿಸಲು ಅನುಕೂಲವಾಗುವಂತೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳನ್ನು ಜನನ, ಮರಣ ಉಪನೋಂದಣಾಧಿಕಾರಿಗಳನ್ನಾಗಿ ಸರ್ಕಾರ ನೇಮಿಸಿದೆ.

ದ.ಕ ಜಿಲ್ಲೆಯಲ್ಲಿ ಮುಂದಿನ 2 ದಿನ ಗುಡುಗು ಸಹಿತ ಆಲಿಕಲ್ಲು ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

Posted by Vidyamaana on 2023-03-20 02:58:57 |

Share: | | | | |


ದ.ಕ ಜಿಲ್ಲೆಯಲ್ಲಿ ಮುಂದಿನ 2 ದಿನ ಗುಡುಗು ಸಹಿತ ಆಲಿಕಲ್ಲು ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಮಾರ್ಚ್ 21ರಿಂದ ಮತ್ತೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂಬುದಾಗಿ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಈ ಬಗ್ಗೆ ಮಾಹಿತಿ ನೀಡಿರುವಂತ ಹವಾಮಾನ ಇಲಾಖೆಯು, ಮೇಲೆ ಸುಳಿಗಾಳಿಯ ಪರಿಣಾಮದಿಂದಾಗಿ ರಾಜ್ಯದ ಕೊಡಗು, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ತುಮಕೂರು, ಉಡುಪಿ, ಬೀದರ್, ಬೆಳಗಾವಿ, ಬಾಗಲಕೋಟೆ, ಯಾದಗಿರಿ ಹಾಗೂ ಕಲಬುರ್ಗಿ ಜಿಲ್ಲೆಯಲ್ಲಿ ಮುಂದಿನ 2 ದಿನ ಗುಡುಗು ಸಹಿತ ಆಲಿಕಲ್ಲು ಮಳೆಯಾಗಲಿದೆ ಎಂಬುದಾಗಿ ಮುನ್ಸೂಚನೆ ನೀಡಿದೆ.ಅಂದಹಾಗೆ ಕಳೆದ ಭಾನುವಾರದಂದು ಮೈಸೂರಿನ ಹುಣಸೂರು, ತುಮಕೂರಿನ ಚಿಕ್ಕನಾಯಕನಹಳ್ಳಿ, ಉಡುಪಿಯ ಬ್ರಹ್ಮಾವರ, ಬಳ್ಳಾರಿಯ ಹಗರಿಬೊಮ್ಮನಹಳ್ಳಿ, ಚಾಮರಾಜನಗರದ ಹರದಹಳ್ಳಿ ಹಾಗೂ ವಿವಿಧೆಡೆ ಆಲಿಕಲ್ಲು ಸಹಿತ ಮಳೆಯಾಗಿತ್ತು. ಆಲಿಕಲ್ಲಿನ ಬೆಳ್ಳನೆಯ ರಾಶಿ ಕಂಡ ಜನರು ಕರ್ನಾಟಕ ಹಿಮಾಲಯವಾಗಿದೆ ಎಂಬುದಾಗಿ ಅಚ್ಚರಿಗೊಂಡಿದ್ದರು. ಈ ಬೆನ್ನಲ್ಲೆ ಮಾರ್ಚ್ 21ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮತ್ತೆ ಆಲಿಕಲ್ಲು ಸಹಿತ ಮಳೆಯಾಗುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದ ಕ ಲೋಕ ಸಭಾ ಕ್ಷೇತ್ರದ ಜಿಲ್ಲಾ ಪ್ರಚಾರ ಸಮಿತಿಯ ಸಹ ಉಸ್ತುವಾರಿ ಯಾಗಿ ಮಹಮ್ಮದ್ ಬಡಗನ್ನೂರು ನೇಮಕ

Posted by Vidyamaana on 2024-04-11 15:29:45 |

Share: | | | | |


ದ ಕ ಲೋಕ ಸಭಾ ಕ್ಷೇತ್ರದ ಜಿಲ್ಲಾ ಪ್ರಚಾರ ಸಮಿತಿಯ ಸಹ ಉಸ್ತುವಾರಿ ಯಾಗಿ ಮಹಮ್ಮದ್ ಬಡಗನ್ನೂರು ನೇಮಕ

ಪುತ್ತೂರು :ಲೋಕಸಭಾ ಕ್ಷೇತ್ರದ ಚುನಾವಣೆ ಹಿನ್ನಲೆಯಲ್ಲಿ ಕೆಪಿಸಿಸಿ ಯಿಂದ ದ ಕ ಲೋಕ ಸಭಾ ಕ್ಷೇತ್ರಕ್ಕೆ ಮಾಜಿ ಸಚಿವ ರಮಾನಾಥ ರೈ ಯವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪ್ರಚಾರ ಸಮಿತಿಯನ್ನು ರಚಿಸಲಾಗಿದ್ದು, ಮಹಮ್ಮದ್ ಬಡಗನ್ನೂರು  ರವರನ್ನು ಜಿಲ್ಲಾ ಪ್ರಚಾರ ಸಮಿತಿಯ ಸಹ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ.

ಅರಂತೋಡು : ಪಾದಾಚಾರಿಗೆ ಕಾರು ಡಿಕ್ಕಿ - ಗಾಯಾಳು ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಮೃತ್ಯು

Posted by Vidyamaana on 2023-08-07 16:19:28 |

Share: | | | | |


ಅರಂತೋಡು : ಪಾದಾಚಾರಿಗೆ ಕಾರು ಡಿಕ್ಕಿ - ಗಾಯಾಳು ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಮೃತ್ಯು

ಸುಳ್ಯ : ಪಾದಾಚಾರಿಗೆ ಓಮಿನಿ ಕಾರು ಡಿಕ್ಕಿ ಹೊಡೆದು ಪರಿಣಾಮ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಅರಂತೋಡಿನಿಂದ ಆ 7 ರಂದು ವರದಿಯಾಗಿದೆ.


ಮೀನು ವ್ಯಾಪಾರಕ್ಕೆಂದು ಹೋಗುತ್ತಿದ್ದ ಓಮಿನಿ ಕಾರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಉಳುವಾರು ನಿವಾಸಿ ತೀರ್ಥರಾಮ ಎಂಬುವರಿಗೆ ಡಿಕ್ಕಿ ಹೊಡೆದಿದೆ. ತಲೆಗೆ ಗಂಭೀರ ಗಾಯಗಳಾಗಿದ್ದ ಅವರನ್ನು ಕೂಡಲೇ ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಕೆವಿಜಿ ಆಸ್ಪತ್ರೆಗೆ ಕರೆತಂದರಾದರೂ ಚಿಕಿತ್ಸೆ ಫಲಿಸದೇ ಮೃತಪಟ್ಟರೆಂದು ತಿಳಿದು ಬಂದಿದೆ.

Recent News


Leave a Comment: