ವಿವಾಹಿತ ಯುವಕನ ಜತೆ ವಿದ್ಯಾರ್ಥಿನಿ ಲವ್, ಕೆರೆಗೆ ಹಾರಿ ಇಬ್ಬರೂ ಆತ್ಮಹತ್ಯೆ!

ಸುದ್ದಿಗಳು News

Posted by vidyamaana on 2024-07-03 13:36:16 |

Share: | | | | |


ವಿವಾಹಿತ ಯುವಕನ ಜತೆ ವಿದ್ಯಾರ್ಥಿನಿ ಲವ್, ಕೆರೆಗೆ ಹಾರಿ ಇಬ್ಬರೂ ಆತ್ಮಹತ್ಯೆ!

ಬೆಂಗಳೂರು (ಜು.3): ಇಲ್ಲಿನ ಹೊರವಲಯದ ನೈಸ್ ರಸ್ತೆ ಸಮೀಪದ ಕೆರೆಗೆ ಹಾರಿ ಯುವ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕಾಲೇಜು ವಿದ್ಯಾರ್ಥಿನಿ ಅಂಜನಾ(20) ಮತ್ತು ಶ್ರೀಕಾಂತ್(25) ಸಾವನ್ನಪ್ಪಿರುವ ದುರ್ದೈವಿಗಳಾಗಿದ್ದಾರೆ. ಜುಲೈ 1ರಂದು ಪ್ರೇಮಿಗಳು ನಾಪತ್ತೆಯಾಗಿದ್ದರು.

ಕಳೆದ ಕೆಲ ವರ್ಷಗಳಿಂದ ಇಬ್ಬರು ಪರಸ್ಪರ ಪ್ರೀತಿಸ್ತಿದ್ದರು. ಆದರೆ ಯುವಜೋಡಿಯ ಪ್ರೀತಿಗೆ ವಿದ್ಯಾರ್ಥಿನಿ ಪೋಷಕರಿಂದ ವಿರೋಧ ವ್ಯಕ್ತವಾಗಿತ್ತು. ವಿದ್ಯಾರ್ಥಿನಿ ತಲಘಟ್ಟಪುರ ಸಮೀಪದ ಅಂಜನಾಪುರ ಬಳಿ ವಾಸವಿದ್ದಳು. ಯುವಕ ಶ್ರೀಕಾಂತ್ ಕೋಣನಕುಂಟೆ ನಿವಾಸಿಯಾಗಿದ್ದ. ಇಬ್ಬರೂ ನಾಪತ್ತೆಯಾಗಿದ್ದರು. ನಾಪತ್ತೆ ಹಿನ್ನಲೆ ಎರಡೂ ಕಡೆಯವರ ಪೋಷಕರು ಕೋಣನಕುಂಟೆ ಮತ್ತು ತಲಘಟ್ಟಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಇದೀಗ ಇಬ್ಬರೂ ಶವವಾಗಿ ಪತ್ತೆಯಾಗಿದ್ದಾರೆ. ನಮ್ಮ ಸಾವಿಗೆ ನಾವೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಜೋಡಿ ಆತ್ಮಹತ್ಯೆ ಮಾಡಿಕೊಂಡಿದೆ.

ಮದುವೆಯಾಗಿದ್ದ ಶ್ರೀಕಾಂತ್!

ಶ್ರೀಕಾಂತ್ ಗೆ ಬೇರೊಬ್ಬರ ಜೊತೆಗೆ ವಿವಾಹವಾಗಿದೆ. ಆದರೂ ಅಂಜನಾಳನ್ನ ಪ್ರೀತಿ ಮಾಡ್ತಿದ್ದ. ಇಬ್ಬರು ಒಟ್ಟಿಗೆ ಬದುಕಲು ಅವಕಾಶ ಇಲ್ಲ ಎಂದು ಸಾಯೋ ನಿರ್ಧಾರ ಮಾಡಿದ್ದಾರೆ. ಮೊದಲು ಶ್ರೀಕಾಂತ್ ಮೃತದೇಹ ಕೆರೆಯಲ್ಲಿ ಕಾಣಿಸಿದೆ. ಆತನನ್ನ ಮೇಲೆತ್ತಿದ್ದ ನಂತರ ಅಂಜನಾ ಮೃತದೇಹ ಕೂಡ ಮೇಲೆ ಬಂದಿದೆ. ಅಂಜನಾ ಮೃತದೇಹದ ಬಗ್ಗೆ ಪೊಲೀಸರಿಗೂ ಮಾಹಿತಿ ಇರುದಿಲ್ಲ. ಇಬ್ಬರು ಕೈಗೆ ಹಗ್ಗ ಕಟ್ಟಿಕೊಂಡಿದ್ದರಿಂದ ಇಬ್ಬರ ಮೃತದೇಹ ಒಟ್ಟಿಗೆ ಸಿಕ್ಕಿದೆ. ಮೊಬೈಲ್ ನಲ್ಲಿ ವೀಡಿಯೊ ಮಾಡಿರುವ ಯುವತಿ ಅಂಜನಾ ಅದನ್ನ ಆಟೋದಲ್ಲಿ ಬಿಟ್ಟು ಶ್ರೀಕಾಂತ್ ಜೊತೆಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನಮ್ಮ ಸಾವಿಗೆ ಯಾರು ಕಾರಣ ಅಲ್ಲ. ನಾವಿಬ್ಬರು ಒಟ್ಟಿಗೆ ಬದುಕಲು ಆಗಲ್ಲ. ಹಾಗಾಗಿ ಸಾಯ್ತಿದ್ದೇವೆ ಎಂದು ವಿಡಿಯೋ ಮಾಡಿದ್ದಾಳೆ. ಮೊಬೈಲ್ ವಶಕ್ಕೆ ಪಡೆದುಕೊಂಡಿರೊ ತಲಘಟ್ಟಪುರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 Share: | | | | |


ಬೆಳ್ತಂಗಡಿಯಲ್ಲಿ ಮತ್ತೆ ಕಾಂಗ್ರೆಸ್ ಬಿನ್ನಮತ ಸ್ಫೋಟ

Posted by Vidyamaana on 2023-07-14 15:26:38 |

Share: | | | | |


ಬೆಳ್ತಂಗಡಿಯಲ್ಲಿ ಮತ್ತೆ ಕಾಂಗ್ರೆಸ್ ಬಿನ್ನಮತ ಸ್ಫೋಟ

ಬೆಳ್ತಂಗಡಿ: ಈ ಬಾರಿಯ ವಿಧಾನ ಸಭಾ ಚುನಾವಣೆ ಸೋಲು ಗೆಲುವಿನ ವಿಮರ್ಶೆಗಾಗಿ ಸೇರಿದ್ದ ವೀಕ್ಷಕರ ಮುಂದೆಯೇ ರಕ್ಷಿತ್ ಶಿವರಾಂ ಸೋಲಿಗೆ ಬ್ಲಾಕ್ ಕಾಂಗ್ರೆಸ್ ನೇರ ಕಾರಣ ಎಂದು ಆತ್ಮೀಯ ಬಳಗವೊಂದು ಸಭೆಯಲ್ಲಿ ಗಲಭೆ ಎಬ್ಬಿಸಿ ಗಲಾಟೆ ನಡೆದ ಘಟನೆ ಜು.14 ರಂದು ಸಂಜೆ ನಡೆದಿದೆ.

ಬೆಳ್ತಂಗಡಿ ಮೂರು ಮಾರ್ಗದ ಬಳಿ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ಜಿ.ಪಂ. ಮಾಜಿ ಅಧ್ಯಕ್ಷೆ ಮಮತಾ ಗಟ್ಟಿ, ರಾಜ್ಯಸಭಾ ಮಾಜಿ ಸದಸ್ಯ ಇಬ್ರಾಹಿಂ, ಸಹಿತ ಅಶ್ವಿನ್ ರೈ ಬಂಟ್ವಾಳ್ ವೀಕ್ಷಕರಾಗಿ ಸೇರಿದ್ದರು.


ಸಭೆ ಆರಂಭವಾಗುತ್ತಲೆ ರಾಜೇಶ್ ಭಟ್ ಸವಣಾಲು ಮತ್ತು ಪ್ರವೀಣ್ ಫೆರ್ನಾಂಡೀಸ್, ಸಚಿನ್ ನೂಜೋಡಿ ಸಹಿತ 30 ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸೋಲಿಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶೈಲೇಶ್ ಕುಮಾರ್ ,ರಂಜನ್ ಗೌಡ ಹಾಗೂ ಗಂಗಾಧರ್ ಗೌಡ ಕಾರಣ ಅವರನ್ನು ಪಕ್ಷದಿಂದ ಉಚ್ಚಾನೆ ಮಾಡಬೇಕೆಂದು ಬಿಗಿ ಪಟ್ಟು ಹಿಡಿದು ಗಲಾಟೆ ನಡೆಸಿದರು.

ವಿಧಾನ ಪರಿಸತ್ ಸದಸ್ಯ ಕೆ.ಹರೀಶ್ ಕುಮಾರ್ ಪುತ್ರ ಅಭಿನಂದನ್ ಹರೀಶ್ ಹಾಗೂ ಸ್ವಯಂ ಘೋಷಿತ ನಾಯಕನೆನಿಸಿಕೊಂಡ ಮೋಹನ್ ಗೌಡ ಕಲ್ಮಂಜ ಕಾರ್ಯಕರ್ತರ ಬಳಿ ಏಕವಚನದಲ್ಲಿ ಮಾತಾನಾಡಿದ್ದು ಈ ವೇಳೆ ಅಭಿನಂದನ್ ಹರೀಶ್ ಕುಮಾರ್ ಉಂದು ಎನ್ನಾ ಅಫೀಸ್, ಉಂದು ಎನ್ನ ಚೇರ್ ,ಉಂದು ಎಂಕ್ಲೆನಾ ಪಾರ್ಟಿ , ಉಂದು ಎಂಕ್ಲೆನಾ ಸೋಫಾ ಅಂತ ಹೇಳಿ ನೀವು ಒಳಗೆ ಬರಬೇಡಿ ಎಂದು ಬೊಬ್ಬೆ ಹಾಕಿದ್ದಾನೆ‌. ಈ ನಡುವೆ ಮಾತಿಗೆ ಮಾತು ಬೆಳೆದು ಒಬ್ಬರಿಗೊಬ್ಬರು ಹೊಡೆದಾಡಿಕೊಳ್ಳುವವರೆಗೆ ಗಲಾಟೆ ತಲುಪಿತು. ರೌಡಿಸಂ ಮಾಡಿದ ಮೋಹನ್ ಗೌಡ ಕಲ್ಮಂಜ ನಿಗೆ ಗಣೇಶ್ ಕಾಣಿಯೂರು ಕಪಾಲಕ್ಕೆ ಭಾರಿಸಿ ಅಲ್ಲಿಂದ ಓಡಿಸಿದ್ದಾನೆ.

ತಕ್ಷಣ ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಘಟನೆಯನ್ನು ಶಾಂತಗೊಳಿಸಿದರು.  .

ಕುಸಿದು ಬಿದ್ದ ಚೈತ್ರಾ ಕುಂದಾಪುರ – ಎಮರ್ಜೆನ್ಸಿ ವಾರ್ಡ್‌ಗೆ ಶಿಫ್ಟ್‌

Posted by Vidyamaana on 2023-09-15 09:58:06 |

Share: | | | | |


ಕುಸಿದು ಬಿದ್ದ ಚೈತ್ರಾ ಕುಂದಾಪುರ – ಎಮರ್ಜೆನ್ಸಿ ವಾರ್ಡ್‌ಗೆ ಶಿಫ್ಟ್‌

ಬೆಂಗಳೂರು : ಉದ್ಯಮಿಗೆ ವಂಚನೆ ಎಸಗಿದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಚೈತ್ರಾ ಕುಂದಾಪುರ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.


ಇಂದು ಬೆಳಗ್ಗೆ 8 ಗಂಟೆಯ ವೇಳೆಗೆ ಮಹಿಳಾ ಸಾಂತ್ವನ ಕೇಂದ್ರದಿಂದ ಚೈತ್ರಾಳನ್ನು ಸಿಸಿಬಿ ಕಚೇರಿಗೆ ವಿಚಾರಣೆಗೆ ಕರೆತಂದಿದ್ದಾರೆ. 45 ನಿಮಿಷದ ವಿಚಾರಣೆ ವೇಳೆ ಆಕೆ ಪ್ರಜ್ಞಾಹೀನ ಸ್ಥಿತಿಗೆ ಬಂದು ಕುಸಿದು ಬಿದ್ದಿದ್ದಾಳೆ.


ವಿಚಾರಣೆ ವೇಳೆ ಮೂರ್ಛ ಹೋದ ಚೈತ್ರಾಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಸದ್ಯ ತುರ್ತು ಚಿಕಿತ್ಸಾವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.


ಚೈತ್ರಾ ಬಾಯಿಯಲ್ಲಿ ನೊರೆ ಬಂದ ದೃಶ್ಯ ಸೆರೆಯಾಗಿದೆ. ಈಗ ಬಂದಿರುವ ಮಾಹಿತಿ ಪ್ರಕಾರ ಚೈತ್ರಾ ಮೂರ್ಛ ರೋಗದಿಂದ ಬಳಲುತ್ತಿದ್ದು, ವಿಚಾರಣೆ ವೇಳೆ ಪ್ರಜ್ಞೆ ತಪ್ಪಿರುವ ಸಾಧ್ಯತೆಯಿದೆ.

ಮಂಗಳೂರು: ದ.ಕ. ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಮುಲೈ ಮುಹಿಲನ್ ಎಂ.ಪಿ. ಅಧಿಕಾರ ಸ್ವೀಕಾರ

Posted by Vidyamaana on 2023-06-17 09:51:47 |

Share: | | | | |


ಮಂಗಳೂರು: ದ.ಕ. ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಮುಲೈ ಮುಹಿಲನ್ ಎಂ.ಪಿ. ಅಧಿಕಾರ ಸ್ವೀಕಾರ

ಮಂಗಳೂರು: ಇಂದು ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಮುಲೈ ಮುಹಿಲನ್ ಎಂ.ಪಿ. ಅಧಿಕಾರ ಸ್ವೀಕರಿಸಿದರು.

ಎಂ.ಆರ್.ರವಿಕುಮಾರ್ ಅವರು ನೂತನ ಜಿಲ್ಲಾಧಿಕಾರಿಗೆ ಮುಲೈ ಮುಹಿಲನ್ ಎಂ.ಪಿ.ಅವರಿಗೆ ಅಧಿಕಾರ ಹಸ್ತಾಂತರ ಮಾಡಿದರು. ತಮಿಳುನಾಡು ಮೂಲದ ಮುಲೈ ಮುಹಿಲನ್ ಈ ಮೊದಲು ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್ ಬೆಂಗಳೂರು ಇದರ ಕಾರ್ಯ ನಿರ್ವಾಹಕ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ಬೆಳ್ತಂಗಡಿ : ವೃದ್ಧೆಯನ್ನು ಕೊಲೆ ಮಾಡಿ ದರೋಡೆ ಮಾಡಿದಪ್ರಕರಣ

Posted by Vidyamaana on 2023-06-07 10:20:53 |

Share: | | | | |


ಬೆಳ್ತಂಗಡಿ : ವೃದ್ಧೆಯನ್ನು ಕೊಲೆ ಮಾಡಿ ದರೋಡೆ ಮಾಡಿದಪ್ರಕರಣ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಕೆರೆಕೋಡಿ ಮನೆಯಲ್ಲಿ ಒಬ್ಬಂಟಿಯಾಗಿದ್ದ ಅಜ್ಜಿಯನ್ನು ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿ ಚಿನ್ನಾಭರಣ ಹಾಗೂ ಹಣ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿದ್ದ ಆರೋಪಿ ಅಶೋಕ್ ಇಂದು ಬೆಳಗ್ಗೆ ಮಂಗಳೂರಿನ ವೆನ್ಲಕ್  ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.


ಶುಗರ್ ಹಾಗೂ ಟಿ ಬಿ ಕಾಯಿಲೆಯಿಂದ ಬಳಲುತ್ತಿದ್ದ ಆತನನ್ನು  ವೆನ್ಲಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಆತ ಇಂದು ಬೆಳಗ್ಗೆ ಸಾವನ್ನಪ್ಪಿದ್ದಾನೆ. ಈತ ಸಾವನ್ನಪ್ಪಿದ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ

Posted by Vidyamaana on 2024-04-11 13:08:15 |

Share: | | | | |


ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ

ಮಂಗಳೂರು : ನಗರದ ಹೊರವಲಯದ ಎಳನೀರು ಫ್ಯಾಕ್ಟರಿಯೊಂದರಿಂದ ತಂದ ಎಳನೀರು ಕುಡಿದು ಕೆಲವರು ಅಸ್ವಸ್ಥರಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ವರದಿ ಆಧಾರದಲ್ಲಿ ದ.ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ| ತಿಮ್ಮಯ್ಯ ಅವರು ಫ್ಯಾಕ್ಟರಿಗೆ ಭೇಟಿ ಪರಿಶೀಲನೆ ನಡೆಸಿದ್ದಾರೆ.ಈ ಕುರಿತು ಪ್ರತಿಕ್ರಿಯಿಸಿದ ಡಿಎಚ್‌ಒ ಆರೋಗ್ಯ ಇಲಾಖೆ ತಂಡದಿಂದ ಎಳನೀರು ಪ್ಯಾಕ್ಟರಿಗೆ ಭೇಟಿ ನೀಡಿದ್ದೇವೆ. ಸುಮಾರು 15 ಲೀಟರ್ ಎಳನೀರನ್ನು ಪರೀಕ್ಷಾರ್ಥ ಸಂಗ್ರಹಣೆ ಮಾಡಿ ಪ್ರಯೋಗಾಲಯಕ್ಕೆ ಕಳುಹಿಸಿದ್ದೇವೆ. ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದ್ದಾರೆ.


ಮೂರು ಮಂದಿಗೆ ಆಸ್ಪತ್ರೆಯಲ್ಲಿ‌ ಚಿಕಿತ್ಸೆ


ಅಸ್ವಸ್ಥರಾದ ಮೂರು ಮಂದಿಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ‌ ಚಿಕಿತ್ಸೆ ನೀಡಲಾಗುತ್ತಿದೆ. ಇಬ್ಬರು ಮಹಿಳೆಯರು ಮತ್ತು 12 ವರ್ಷದ ಮಗು ಸೇರಿದೆ. ಅವರ ಮೋಷನ್ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಸುಮಾರು 13 ಮಂದಿ ಈಗಾಗಲೇ ಹೊರ ರೋಗಿಗಳಾಗಿ‌ ಚಿಕಿತ್ಸೆ ಪಡೆದುಕೊಂಡಿದ್ದಾರೆ ಎಂದು ಡಿಎಚ್‌ಒ ತಿಳಿಸಿದ್ದಾರೆ.

ಇಡೀ ರಾಷ್ಟ್ರಕ್ಕೆ ಕರ್ನಾಟಕದ ಗ್ಯಾರಂಟಿ ಯೋಜನೆ ಮಾದರಿ : ಬಜೆಟ್ ಅಧಿವೇಶನದಲ್ಲಿ ಗವರ್ನರ್ ಗೆಹ್ಲೊಟ್ ಬಣ್ಣನೆ

Posted by Vidyamaana on 2024-02-12 15:49:37 |

Share: | | | | |


ಇಡೀ ರಾಷ್ಟ್ರಕ್ಕೆ ಕರ್ನಾಟಕದ ಗ್ಯಾರಂಟಿ ಯೋಜನೆ  ಮಾದರಿ : ಬಜೆಟ್ ಅಧಿವೇಶನದಲ್ಲಿ ಗವರ್ನರ್ ಗೆಹ್ಲೊಟ್ ಬಣ್ಣನೆ

ಬೆಂಗಳೂರು : ಇಂದಿನಿಂದ 10 ದಿನಗಳವರೆಗೆ ಕರ್ನಾಟಕ ವಿಧಾನ ಮಂಡಲದ ಬಜೆಟ್ ಅಧಿವೇಶನ ನಡೆಯತ್ತಿದ್ದು, ಅಧಿವೇಶನದ ಆರಂಭದ ದಿನ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದ ರಾಜ್ಯಪಾಲ ಥಾವರ್​ಚಂದ್​ ಗೆಹ್ಲೋಟ್, ಇಡೀ ದೇಶಕ್ಕೆ ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳು ಮಾದರಿಯಾಗಿವೆ ಎಂದು ಬಣ್ಣಿಸಿದರು.ಅಧಿವೇಶನದ ಆರಂಭದ ದಿನ ಜಂಟಿ ಅಧಿವೇಶನ ಉದ್ದೇಶಿಸಿ ಇಂದು ಮಾತನಾಡಿದ ಅವರು, ಸರ್ಕಾರವು ನಡೆ ನುಡಿಗಳಗಳನ್ನು ಒಂದಾಗಿಸಿಕೊಂಡು ಕೆಲಸ ಮಾಡುತ್ತಿದೆ. ಕರ್ನಾಟಕ ಮಾದರಿಯನ್ನು ಸರ್ಕಾರ ಅಧಿಕಾರಕ್ಕೆ ಬಂದ ಕ್ಷಣದಿಂದಲೇ ಅನುಸರಿಸುತ್ತಾ ಬಂದಿದೆ. ಹೆಚ್ಚುತ್ತಿರುವ ಆರ್ಥಿಕ ಅಸಮಾನತೆಯಿಂದಾಗಿ ಬಡವರಿಗೆ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಸಾಂತ್ವನವನ್ನು ಒದಗಿಸಿವೆ ಎಂದು ಹೇಳಿದರು.


ಇಡೀ ದೇಶಕ್ಕೆ ಕರ್ನಾಟಕ ಸರ್ಕಾರದ ಗ್ಯಾರಂಟಿ ಮಾದರಿಯಾಗಿವೆ. ಶಕ್ತಿ, ಅನ್ನಭಾಗ್ಯ, ಯುವನಿಧಿ, ಗೃಹಲಕ್ಷ್ಮೀ, ಗೃಹಜ್ಯೋತಿ ಯಶಸ್ವಿಯಾಗಿ ಜಾರಿಗೊಳಿಸಲಾಗಿದೆ. ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಬಡವರಿಗೆ ತೃಪ್ತಿ ನೀಡಿವೆ ಎಂದು ಅವರು ಹೇಳಿದರು.ಆರ್ಥಿಕ ಅಸಮಾನತೆಯಿಂದ ಅಶಕ್ತರಾಗಿರುವ ಜನತೆಯ ಬದುಕಿಗೆ ಕೇವಲ ಈ ಗ್ಯಾರಂಟಿಗಳು ಮಾತ್ರ ಸಾಕಾಗುವುದಿಲ್ಲ ಎನ್ನುವ ಅರಿವು ಸರ್ಕಾರಕ್ಕೆ ಇದೆ. ಸರ್ಕಾರವು ಜಾರಿಗೆ ತಂದ ಗ್ಯಾರಂಟಿ ಯೋಜನೆಗಳಿಂದ ಎರಡು ಕೋಟಿಗೂ ಅಧಿಕ ಕುಟುಂಬಗಳು ಬಡತನ ರೇಖೆಗಿಂತ ಹೊರಗೆ ಬಂದು ಮಧ್ಯಮ ವರ್ಗದ ಸ್ಥಿತಿಗೆ ಏರುತ್ತಿವೆ.


ಬರಗಾಲವಿದ್ದರೂ ರಸ್ತೆ ನೀರು ಶಿಕ್ಷಣ ಆರೋಗ್ಯ ಕೃಷಿ ತೋಟಗಾರಿಕೆ ಹೈನುಗಾರಿಕೆ ಕೈಗಾರಿಕೆ ಕ್ಷೇತ್ರಗಳಲ್ಲಿ ಅಭಿವೃದ್ಧಿ ನಡೆದಿದ್ದಾಗಿದ್ದು ಬಜೆಟ್ ನಲ್ಲಿ 97 ರಷ್ಟು ಘೋಷಣೆಗಳಿಗೆ ಅಧಿಸೂಚನೆ ಹೊರಡಿಸಿದೆ. ಬರಪೀಡಿತ ಪ್ರದೇಶಗಳ ನೆರವಿಗೆ ಸರ್ಕಾರ ಅನುದಾನ ನೀಡಿದೆ ಸರ್ಕಾರ ಕೊಬ್ಬರಿಗೆ ಬೆಂಬಲ ಬೆಲೆಯನ್ನು ಘೋಷಿಸಿದೆ ಅಲ್ಲದೆ ಬೆಳೆ ಹಾನಿಗೆ ಕೂಡ ಪರಿಹಾರ ನೀಡಿದೆ ಎಂದು ತಿಳಿಸಿದರು.


ಕರ್ನಾಟಕ ಉದಯವಾಗಿ ಐವತ್ತು ವರ್ಷಗಳಾಗಿವೆ ಕರ್ನಾಟಕ ಸಂಭ್ರಮ 50 ಆಚರಣೆ ಮಾಡಲಾಗುತ್ತಿದೆ ನಮ್ಮ ಭಾಷೆ ಸಂಸ್ಕೃತಿಯ ಮೇಲೆ ದಾಳಿಯನ್ನು ಸಹಿಸುವುದಿಲ್ಲ ಕನ್ನಡ ಸಂಸ್ಕೃತಿ ಕಾಪಾಡಲು ಸರ್ಕಾರ ಸೂಕ್ತವಾದಂತಹ ಕ್ರಮ ಕೈಗೊಂಡಿದೆ ಎಂದು ತಿಳಿಸಿದರು.ಅಧಿವೇಶನ ಆರಂಭಕ್ಕೂ ಮುನ್ನ ವಿಧಾನಸೌಧಕ್ಕೆ ಆಗಮಿಸಿದ ರಾಜ್ಯಪಾಲರಿಗೆ ಭವ್ಯ ಸ್ವಾಗತ ದೊರೆಯಿತು. ವಿಧಾನಸೌಧ ಗ್ರ್ಯಾಂಡ್ ಸ್ಟೆಪ್ ದ್ವಾರದಲ್ಲಿ ರಾಜ್ಯಪಾಲ ಥಾವರ್​ಚಂದ್​ ಗೆಹ್ಲೋಟ್ ಅವರಿಗೆ ಮೈಸೂರು ಕರ್ನಾಟಿಕ್ ಬ್ಯಾಂಡ್, ಮೈಸೂರು ಇಂಗ್ಲಿಷ್ ಬ್ಯಾಂಡ್, ಮೌಂಟೆಡ್ ಲ್ಯಾನ್ಸ್ ಮೇನ್, ಮೌಂಟೆಡ್ ಹಾರ್ಸ್ ಎಸ್ಕಾರ್ಟ್, ಸಿಎಆರ್ ಪೊಲೀಸ್ ಬ್ಯಾಂಡ್ ಮೂಲಕ ಸ್ವಾಗತ ಕೋರಲಾಯಿತು. ರಾಜ್ಯಪಾಲ ಗೆಹ್ಲೋಟ್​ರನ್ನು ಸಿಎಂ ಸಿದ್ದರಾಮಯ್ಯ ಸ್ವಾಗತಿಸಿದರು. ಈ ವೇಳೆ ವಿಧಾನಸಭೆ ಸ್ಪೀಕರ್ ಯುಟಿ ಖಾದರ್, ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ಇತರರು ಹಾಜರಿದ್ದರು



Leave a Comment: