ಅತಿ ವೇಗವಾಗಿ ಬಂದು ಮಹಿಳೆಗೆ ಡಿಕ್ಕಿ ಹೊಡೆದ ಟ್ಯಾಕ್ಸಿ; ವಿಡಿಯೊ ನೋಡಿ

ಸುದ್ದಿಗಳು News

Posted by vidyamaana on 2024-07-23 19:43:42 |

Share: | | | | |


ಅತಿ ವೇಗವಾಗಿ ಬಂದು ಮಹಿಳೆಗೆ ಡಿಕ್ಕಿ ಹೊಡೆದ ಟ್ಯಾಕ್ಸಿ; ವಿಡಿಯೊ ನೋಡಿ

ಪುಣೆ: ಅತಿ ವೇಗ ಅಪಘಾತಕ್ಕೆ ಕಾರಣವೆಂದು ತಿಳಿದರೂ ಕೂಡ ಕೆಲವು ಚಾಲಕರು ಅವಸರದಲ್ಲಿ ವೇಗವಾಗಿ ವಾಹನ ಚಲಾಯಿಸಿ ಜನರ ಜೀವಕ್ಕೆ ಆಪತ್ತು ತರುತ್ತಿದ್ದಾರೆ. ಎಲ್ಲೆಂದರಲ್ಲಿ ನಿಂತ ಜನರ ಮೇಲೂ ವಾಹನವನ್ನು ಹಾರಿಸಿಕೊಂಡು ಹೋಗುತ್ತಾರೆ. ಇದೀಗ ಅಂತಹದೊಂದು ಘಟನೆ ಮಹಾರಾಷ್ಟ್ರದಲ್ಲಿ ನಡೆದಿದ್ದು, ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Hit and Run Case)ಆಗಿದೆ.ಪ್ರಿ-ಚಿಂಚ್ವಾಡ್‍ನಲ್ಲಿ ಅತಿವೇಗವಾಗಿ ಚಲಿಸುತ್ತಿದ್ದ ಟ್ಯಾಕ್ಸಿ ಮಹಿಳೆಗೆ ಡಿಕ್ಕಿ ಹೊಡೆದು ನಂತರ ಚಾಲಕ ಅಪಘಾತದ ಸ್ಥಳದಿಂದ ಓಡಿಹೋದ ಹೊಸ ಹಿಟ್ ಅಂಡ್ ರನ್ ಪ್ರಕರಣ ವರದಿಯಾಗಿದೆ. ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಆಕೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂಬುದಾಗಿ ತಿಳಿದುಬಂದಿದೆ. ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಪುಣೆಯಿಂದ ಸುಮಾರು 15 ಕಿಲೋಮೀಟರ್ ದೂರದಲ್ಲಿರುವ ಪಿಂಪ್ರಿ-ಚಿಂಚ್ವಾಡ್‍ನಲ್ಲಿ ಈ ಘಟನೆ ನಡೆದಿದೆ. ಈ ಹಿಟ್ ಅಂಡ್ ರನ್ ಪ್ರಕರಣ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವಿಡಿಯೊದಲ್ಲಿ ಭಾನುವಾರ ಮಧ್ಯಾಹ್ನ 1:30ರ ಸುಮಾರಿಗೆ ರಸ್ತೆಯಲ್ಲಿ ಮಹಿಳೆ ನಡೆದುಕೊಂಡು ಹೋಗುತ್ತಿರುವಾಗ ಎದುರಿಗೆ ವೇಗವಾಗಿ ಬಂದ ಟ್ಯಾಕ್ಸಿ ಮಹಿಳಾ ಪಾದಚಾರಿಗೆ ಡಿಕ್ಕಿ ಹೊಡೆದು ಸ್ಥಳದಿಂದ ಪರಾರಿಯಾಗಿದೆ. ರಸ್ತೆಯಲ್ಲಿದ್ದ ಇತರ ಜನರು ಆಕೆಯ ಸಹಾಯಕ್ಕಾಗಿ ಓಡಿ ಬರುತ್ತಿರುವುದು ಕಂಡುಬಂದಿದೆ. ಟ್ಯಾಕ್ಸಿಗೆ ಡಿಕ್ಕಿ ಹೊಡೆದ ಮಹಿಳೆ ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದು, ಈ ಬಗ್ಗೆ ಪಿಂಪ್ರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎನ್ನಲಾಗಿದೆ.

ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ

ಈ ಪ್ರಕರಣದ ಬಗ್ಗೆ ಪಿಂಪ್ರಿ-ಚಿಂಚ್ವಾಡ್ ಡಿಸಿಪಿ ಶಿವಾಜಿ ಪವಾರ್ ಮಾತನಾಡಿ, ಈ ಅಪಘಾತದಲ್ಲಿ ಸಂತ್ರಸ್ತೆ ರೇಖಾ ಗಾಯಗೊಂಡಿದ್ದಾರೆ. ಈಗ ಅವರ ಆರೋಗ್ಯ ಸ್ಥಿರವಾಗಿದೆ. 24 ವರ್ಷದ ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಕಾರಿನ ಚಾಲಕ ಕುಡಿದಿರಲಿಲ್ಲ ಎಂದು ಪೊಲೀಸರು ದೃಢಪಡಿಸಿದ್ದಾರೆ. ಮೇಲ್ನೋಟಕ್ಕೆ ಚಾಲಕ ವಾಹನದ ನಿಯಂತ್ರಣ ಕಳೆದುಕೊಂಡಿರುವುದು ಕಂಡುಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದು ಮಹಾರಾಷ್ಟ್ರದಲ್ಲಿ ವರದಿಯಾದ ಮೊದಲ ಹಿಟ್ ಅಂಡ್ ರನ್ ಪ್ರಕರಣವಲ್ಲ. ಈಗಾಗಲೇ ಹಿಟ್ ಅಂಡ್ ರನ್ ಪ್ರಕರಣ ಮತ್ತೊಂದು ಸುದ್ದಿಯಲ್ಲಿ, ವೇಗವಾಗಿ ಬಂದ ಆಡಿ ಕಾರು ಎರಡು ಆಟೋರಿಕ್ಷಾಗಳಿಗೆ ಡಿಕ್ಕಿ ಹೊಡೆದಿದೆ. ಒಂದು ಆಟೋರಿಕ್ಷಾ ಚಾಲಕನ ಸ್ಥಿತಿ ಚಿಂತಾಜನಕವಾಗಿದ್ದು, ಅದರಲ್ಲಿದ್ದ ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಮುಲುಂಡ್ ಪೊಲೀಸರು ಆಡಿ ಕಾರನ್ನು ವಶಪಡಿಸಿಕೊಂಡಿದ್ದಾರೆ, ಆದರೆ ಅಪಘಾತದ ನಂತರ ಅದರ ಚಾಲಕ ನಾಪತ್ತೆಯಾಗಿದ್ದಾನೆ ಎನ್ನಲಾಗಿದೆ.

 Share: | | | | |


ಬನ್ನೂರಿನ ಮನೆಗೆ ಪೊಲೀಸ್ ದಾಳಿ: ಇಬ್ಬರು ಮಹಿಳೆಯರು ಪೊಲೀಶ್ ವಶ!!

Posted by Vidyamaana on 2024-08-29 19:07:13 |

Share: | | | | |


ಬನ್ನೂರಿನ ಮನೆಗೆ ಪೊಲೀಸ್ ದಾಳಿ: ಇಬ್ಬರು ಮಹಿಳೆಯರು ಪೊಲೀಶ್ ವಶ!!

ಪುತ್ತೂರು: ಬನ್ನೂರಿನ ಕರ್ಮಲದ ಮನೆಗೆ ನಗರ ಠಾಣಾ ಪೊಲೀಸರು ದಾಳಿ ನಡೆಸಿದ್ದು, ಇಬ್ಬರು ಮಹಿಳೆಯರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ರೋಟರಿ ಕ್ಲಬ್ ಯುವ ಪದಗ್ರಹಣ : ದಶಮಾನ ವರ್ಷದ ಅಧ್ಯಕ್ಷರಾಗಿ ಅಶ್ವಿನಿಕೃಷ್ಣ ಮುಳಿಯ, ಕಾರ್ಯದರ್ಶಿಯಾಗಿ ವಚನಾ ಜಯರಾಂ, ಕೋಶಾಧಿಕಾರಿಯಾಗಿ ಅಭಿಷ್ ಕೆ

Posted by Vidyamaana on 2024-07-10 16:45:35 |

Share: | | | | |


ರೋಟರಿ ಕ್ಲಬ್ ಯುವ ಪದಗ್ರಹಣ : ದಶಮಾನ ವರ್ಷದ ಅಧ್ಯಕ್ಷರಾಗಿ ಅಶ್ವಿನಿಕೃಷ್ಣ ಮುಳಿಯ, ಕಾರ್ಯದರ್ಶಿಯಾಗಿ ವಚನಾ ಜಯರಾಂ, ಕೋಶಾಧಿಕಾರಿಯಾಗಿ ಅಭಿಷ್ ಕೆ

ಪುತ್ತೂರು : ರೋಟರಿ ಕ್ಲಬ್ ಯುವ ಸ್ಥಾಪಿತವಾಗಿ ಹತ್ತನೇ ವರ್ಷದ ಸಂಭ್ರಮದಲ್ಲಿದೆ. 2024-25 ಅವಧಿಯ ಅಧ್ಯಕ್ಷೆಯಾಗಿ ಅಶ್ವಿನಿ ಕೃಷ್ಣ ಮುಳಿಯ, ಕಾರ್ಯದರ್ಶಿಯಾಗಿ ವಚನ ಜಯರಾಂ ಕೋಶಾಧಿಕಾರಿಯಾಗಿ ಅಭಿಷ್ ಕೆ ರವರು ಪದಗ್ರಹಣಗೊಳ್ಳಲಿದ್ದಾರೆ.

ಪದಗ್ರಹಣವನ್ನು ಪಿ.ಡಿ.ಜಿ ಡಾ. ಗೌರಿ ಹಡಿಗಾಲ್ ನೆರವೇರಿಸಲಿದ್ದಾರೆ.


ಕ್ಲಬ್ ನ ಕ್ಲಬ್ ಸರ್ವಿಸ್ ಡೈರೆಕ್ಟರ್ ಆಗಿ ಕುಸುಮ್ ರಾಜ್, ವೊಕೇಷನಲ್ ಸರ್ವಿಸ್ ಡೈರೆಕ್ಟರ್ ಆಗಿ ಗೌರವ ಭಾರದ್ವಾಜ್, ಕಮ್ಯುನಿಟಿ ಸರ್ವಿಸ್ ಡೈರೆಕ್ಟರ್ ಆಗಿ ನಿಹಾಲ್ ಶೆಟ್ಟಿ, ಇಂಟರ್ನ್ಯಾಷನಲ್ ಸರ್ವಿಸ್ ಡೈರೆಕ್ಟರ್ ಆಗಿ ವಿನೀತ್ ಶೆಣೈ, ಯುತ್ ಸರ್ವಿಸ್ ಡೈರೆಕ್ಟರ್ ಆಗಿ ಸುದರ್ಶನ್ ರೈ ಆಯ್ಕೆಯಾಗಿದ್ದಾರೆ.

ಬುಲೆಟಿನ್ ಎಡಿಟರ್ ಆಗಿ ಡಾ. ದೀಪಕ್ ಕೆ ಬಿ ಕ್ಲಬ್ ನ, ಅಸಿಸ್ಟೆಂಟ್ ಗವರ್ನರ್ ಆಗಿ ಡಾ. ಹರ್ಷಕುಮಾರ್ ರೈ, ಜೋನಲ್ ಲಿಫ್ಟಿನೆಂಟ್ ಆಗಿ ಡಾ. ಪೀಟರ್ ವಿಲ್ಸನ್ ಪ್ರಭಾಕರ್ ಅವರು ಕಾರ್ಯನಿರ್ವಹಿಸಲಿದ್ದಾರೆ.

ವೃದ್ದೆಯ ಮನೆಯಲ್ಲಿದ್ದ ಚಿನ್ನ ದಿಡೀರನೆ ನಾಪತ್ತೆ ಪೊಲೀಸರಿಗೆ ಕರೆ ಮಾಡಿದಾಗ ತಲೆದಿಂಬಿನಡಿಯಲ್ಲಿ ಪತ್ತೆ

Posted by Vidyamaana on 2023-06-14 12:18:39 |

Share: | | | | |


ವೃದ್ದೆಯ ಮನೆಯಲ್ಲಿದ್ದ ಚಿನ್ನ ದಿಡೀರನೆ ನಾಪತ್ತೆ ಪೊಲೀಸರಿಗೆ ಕರೆ ಮಾಡಿದಾಗ ತಲೆದಿಂಬಿನಡಿಯಲ್ಲಿ ಪತ್ತೆ

ಪುತ್ತೂರು: ವೃದ್ದೆಯರಿಬ್ಬರೇ ವಾಸ ಮಾಡುತ್ತಿದ್ದ ಮನೆಯಲ್ಲಿದ್ದ ಚಿನ್ನಾಭರಣ ದಿಡೀರನೆ ನಾಪತ್ತೆಯಾಗಿದ್ದು ಹುಡುಕಾಡಿದರೂ ಪತ್ತೆಯಾಗಿರಲಿಲ್ಲ ಕೊನೆಗೆ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಲಗಿದ್ದು ಪೊಲೀಸರು ಬರುವುದರೊಳಗೆ ಬೆಡ್‌ನ ತಲೆದಿಂಬಿನಡಿಯಲ್ಲಿ ಪತ್ತೆಯಾದ ಘಟನೆ ನಗರದ ದರ್ಬೆಯಲ್ಲಿ ನಡೆದಿದೆ.

ದರ್ಬೆ ಆಸ್ಪತ್ರೆಯ ಬಳಿ ಮನೆಯೊಂದರಲ್ಲಿ ನಿವೃತ್ತ ವೃದ್ದ ಶಿಕ್ಷಕಿಯರಿಬ್ಬರು ವಾಸ ಮಾಡುತ್ತಿದ್ದಾರೆ. ಇವರಿಬ್ಬರು ಮಾತ್ರ ಮನೆಯಲ್ಲಿದ್ದು ಮನೆಯಲ್ಲಿ ಬೇರೆ ಯಾರೂ ಇಲ್ಲ. ಕಳೆದ ಎರಡು ದಿನಗಳ ಹಿಂದೆ ಇವರು ಕಪಾಟಿನಲ್ಲಿಟ್ಟಿದ್ದ ಚಿನ್ನದ ಅರವೊಂದು ದಿಡೀರನೆ ನಾಪತ್ತೆಯಾಗಿತ್ತು. ಇಬ್ಬರು ವೃದ್ದೆ ಮತ್ತು ಕೆಲಸದಾಳು ಸೇರಿ ಮನೆಯಲ್ಲೆಲ್ಲಾ ಇಡೀ ದಿನ ಹುಡುಕಾಡಿದ್ದಾರೆ. ಎಲ್ಲಿ ಹುಡಕಿದರೂ ಚಿನ್ನದ ಸರ ಪತ್ತೆಯಾಗಲಿಲ್ಲ. ಮಾರನೇ ದಿನವೂ ಇಡೀ ಮನೆಯನ್ನೇ ಗುಡಿಸಿ ಹುಡುಕಿದ್ದಾರೆ ಆದರೂ ಪತ್ತೆಯಾಗಲಿಲ್ಲ. ಕೊನೆಗೆ ವೃದ್ದೆಯರಿಬ್ಬರು ಸಮಾಜ ಸೇವಕರೋರ್ವರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಅವರು ಮನೆಗೆ ಬಂದು ಹುಡುಕಾಟ ನಡೆಸಿದ್ದಾರೆ ಆದರೂ ಚಿನ್ನ ಸಿಗಲಿಲ್ಲ. ಕೊನೆಗೆ ಪೊಲಿಸರಿಗೆ ಕರೆ ಮಾಡಿ ವಿಷಯ ತಿಳಿಸಲಾಯ್ತು . ಪೊಲೀಸರು ಬರುವಿಕೆಯನ್ನು ಕಾಯುತ್ತಾ ಮನೆಯೊರಗೆ ವೃದ್ದೆಯರಿಬ್ಬರು ಕೂತಿದ್ದರು. ಆ ವೇಳೆ ಮನೆಯೊಳಗಿದ್ದ ಕೆಲಸದಾಳು ಚಿನ್ನ ಸಿಕ್ಕಿದೆ ಬೆಡ್‌ರೂಂನ ತಲೆದಿಂಬಿನಡಿಯಲ್ಲಿ ಇತ್ತು ಎಂದು ವೃದ್ದೆಯ ಕೈಗೆ ಕೊಟ್ಟರು. ಅಷ್ಟು ಹುಡುಕಾಡಿದರೂ ಸಿಗದ ಚಿನ್ನ ಏಕಾಏಕಿ ತಲೆದಿಂಬಿನಡಿಯಲ್ಲಿ ಹೇಗೆ ಬಂತು ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ಪೊಲೀಸರು ವಿಚಾರಣೆ ನಡೆಸಿದ್ದಾರೆ ಎಂಬ ಮಾಹಿತಿಯೂ ಇದೆ.

ಉದ್ಯಮಿ ಪರ್ಲಡ್ಕ ಮೊಹಮ್ಮದ್ ಹಾರೀಸ್ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ನಿಧನ

Posted by Vidyamaana on 2023-05-28 01:51:41 |

Share: | | | | |


ಉದ್ಯಮಿ ಪರ್ಲಡ್ಕ  ಮೊಹಮ್ಮದ್  ಹಾರೀಸ್ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ನಿಧನ

ಪುತ್ತೂರು:ಪರ್ಲಡ್ಕ ನಿವಾಸಿಯಾಗಿದ್ದು ಸೌದಿ ಅರೇಬಿಯಾದಲ್ಲಿ ಉದ್ಯಮಿಯಾಗಿದ್ದ ಮೊಹಮ್ಮದ್ ಹಾರೀಸ್ (43ವ)ರವರು ಮೇ 27ರಂದು ರಾತ್ರಿ ಸೌದಿ ಅರೇಬಿಯಾ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾದರು.


ಪುತ್ತೂರು ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ, ದರ್ಬೆ ನಿವಾಸಿಯಾಗಿದ್ದ ದಿ.ಮೊಹಮ್ಮದ್ ಹಟ್ಟಾ ಅವರ ಸಹೋದರ, ಸಿಂಡಿಕೇಟ್ ಬ್ಯಾಂಕ್‌ನ ನಿವೃತ್ತ ಉದ್ಯೋಗಿ ಪರ್ಲಡ್ಕದ ಪಿ. ಅಬ್ದುಲ್ಲಾ ಹಾಜಿ ದರ್ಬೆ ಎಂಬವರ ಪುತ್ರ ಮೊಹಮ್ಮದ್ ಹಾರೀಸ್ ಅವರು ಹಲವು ವರ್ಷಗಳಿಂದ ಸೌದಿ ಅರೇಬಿಯಾದಲ್ಲಿ ಸ್ವಂತ ಉದ್ಯಮ ಮಾಡಿಕೊಂಡು ಪತ್ನಿ ಮಕ್ಕಳು ಸಮೇತರಾಗಿ ಸೌದಿ ಅರೇಬಿಯಾದ ಜುಬೈಲ್‌ನಲ್ಲಿ ವಾಸ್ತವ್ಯ ಹೊಂದಿದ್ದರು. ಮೇ 27ರಂದು ರಾತ್ರಿ ಅವರ ಆರೋಗ್ಯದಲ್ಲಿ ಏರುಪೇರಾಗಿ ಹೃದಯಾಘಾತದಿಂದ ನಿಧನರಾದರು.ಮೃತರು ತಂದೆ , ತಾಯಿ, ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಮತ್ತು ಓರ್ವ ಸಹೋದರ, ಸಹೋದರಿಯನ್ನು ಅಗಲಿದ್ದಾರೆ.

ಮೈಸೂರಿಂದ ಬಿಜೆಪಿ ಟಿಕೆಟ್ ಘೋಷಣೆ: ಯದುವೀರ್ ಮೊದಲ ಪ್ರತಿಕ್ರಿಯೆ

Posted by Vidyamaana on 2024-03-14 04:53:09 |

Share: | | | | |


ಮೈಸೂರಿಂದ ಬಿಜೆಪಿ ಟಿಕೆಟ್ ಘೋಷಣೆ: ಯದುವೀರ್ ಮೊದಲ ಪ್ರತಿಕ್ರಿಯೆ

ಮೈಸೂರು: ಮುಂಬರುವ ಲೋಕಸಭಾ ಚುನಾವಣೆಗೆ ಮೈಸೂರು-ಕೊಡಗು ಕ್ಷೇತ್ರದಿಂದ ಸ್ಪರ್ಧಿಸಲು ನನಗೆ ಭಾರತೀಯ ಜನತಾ ಪಕ್ಷದಿಂದ ಅವಕಾಶ ನೀಡಲಾಗಿದೆ. ನಮ್ಮ ಪೂರ್ವಜರ ಮಹತ್ತರ ಕೊಡುಗೆಗಳಿಂದ ಕರ್ನಾಟಕ ಜನತೆಯ ಬೆಂಬಲ ಮತ್ತು ಭಾವನಾತ್ಮಕ ಸಂಪರ್ಕವು ನಿಸ್ಸಂದೇಹವಾಗಿ ನಮ್ಮೊಟ್ಟಿಗಿದೆ ಎಂದು ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.ಟಿಕೆಟ್‌ ಘೋಷಣೆ ಬಳಿಕ ಫೇಸ್‌ಬುಕ್‌ನ ತಮ್ಮ ಖಾತೆಯಲ್ಲಿ ಪೋಸ್ಟ್ ಹಾಕಿರುವ ಅವರು, ಒಂಬತ್ತು ವರ್ಷಗಳಿಂದ ನಾನು ನಮ್ಮ ಕ್ಷೇತ್ರದ ಹಾಗೂ ರಾಜ್ಯದ ಸಾರ್ವಜನಿಕ ಜೀವನದ ಭಾಗವಾಗಿದ್ದೇನೆ. ಅನೇಕ ಪ್ರಜಾಬಾಂಧವರನ್ನು ಭೇಟಿ ಮಾಡುವ ಅವಕಾಶ ಸಿಕ್ಕಿದೆ. ನನ್ನನ್ನು ಮುಕ್ತವಾಗಿ ಒಬ್ಬ ಸ್ನೇಹಿತನಂತೆ ಸ್ವಾಗತಿಸಿ ಆತಿಥ್ಯವನ್ನು ನೀಡಿದ್ದೀರಿ. ಈಗ ಆ ಋಣವನ್ನು ತೀರಿಸಲು ಅವಕಾಶ ಕೇಳುತ್ತಿದ್ದೇನೆ ಎಂದು ಕೋರಿದ್ದಾರೆ.


ನಿಮ್ಮೆಲ್ಲರ ಬೆಂಬಲ ಮತ್ತು ಆಶೀರ್ವಾದದಿಂದ ಮೈಸೂರು ಮತ್ತು ಕೊಡಗಿನ ಸರ್ವಾಂಗೀಣ ಏಳಿಗೆ ಮತ್ತು ಅಭಿವೃದ್ಧಿಗಾಗಿ ಕೆಲಸ ಮಾಡಲು ನಾನು ಆಶಿಸುತ್ತಿದ್ದೇನೆ. ಜನರ ಶುಭ ಹಾರೈಕೆ ಮತ್ತು ಬೆಂಬಲವನ್ನು ಎದುರು ನೋಡುತ್ತಿದ್ದೇನೆ ಎಂದು ಹೇಳಿದ್ದಾರೆ.


ಚುನಾವಣೆಯಲ್ಲಿ ಪಕ್ಷವನ್ನು ಪ್ರತಿನಿಧಿಸಲು ತಮ್ಮ ಮೇಲೆ ನಂಬಿಕೆ ಇಟ್ಟ ಪ್ರಧಾನಿ ನರೇಂದ್ರ ಮೋದಿ ಅವರಿಂದಹಿಡಿದು ‍ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರೆಲ್ಲರಿಗೂ ಧನ್ಯವಾದ ಅರ್ಪಿಸಿದ್ದಾರೆ.

ಎರಡು ಅವಧಿಯನ್ನು ಯಶಸ್ವಿಯಾಗಿ ಪೂರೈಸಿದ್ದಕ್ಕಾಗಿ ಪ್ರತಾಪ ಸಿಂಹ ಅವರನ್ನು ಅಭಿನಂದಿಸುತ್ತೇನೆ. ಈ ಕ್ಷೇತ್ರದ ಅಭಿವೃದ್ಧಿಗೆ ಅವರ ಬದ್ಧತೆ ನಮ್ಮೆಲ್ಲರ ಭವಿಷ್ಯದ ಆಕಾಂಕ್ಷೆಗಳಿಗೆ ಭದ್ರ ಅಡಿಪಾಯ ಹಾಕಿಕೊಟ್ಟಿದೆ ಎಂದು ಶ್ಲಾಘಿಸಿದ್ದಾರೆ.

ವಂಚನೆ ಪ್ರಕರಣ ; ಆರೋಪಿ ಚೈತ್ರಾ ಜೊತೆಗೆ ಕುಂದಾಪುರ ಸ್ಥಳನಾಮ ಬಳಸದಂತೆ ಮಾಧ್ಯಮಗಳಿಗೆ ಕೋರ್ಟ್​​ ತಡೆಯಾಜ್ಞೆ

Posted by Vidyamaana on 2023-09-24 07:16:32 |

Share: | | | | |


ವಂಚನೆ ಪ್ರಕರಣ ; ಆರೋಪಿ ಚೈತ್ರಾ ಜೊತೆಗೆ ಕುಂದಾಪುರ ಸ್ಥಳನಾಮ ಬಳಸದಂತೆ ಮಾಧ್ಯಮಗಳಿಗೆ ಕೋರ್ಟ್​​ ತಡೆಯಾಜ್ಞೆ

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಟಿಕೆಟ್​ ಕೊಡಿಸುವುದಾಗಿ ಹೇಳಿ ಉದ್ಯಮಿಯೊಬ್ಬರಿಂದ ಕೋಟ್ಯಾಂತರ ರೂ. ವಂಚನೆ ನಡೆಸಿರುವ ಪ್ರಕರಣದಲ್ಲಿ ಆರೋಪಿಯಾಗಿರುವ ಚೈತ್ರಾ ಹೆಸರಿನ ಜೊತೆಗೆ ‘ಕುಂದಾಪುರ’ ಎಂಬ ಸ್ಥಳನಾಮ ಬಳಸದಂತೆ ಬೆಂಗಳೂರು ನಗರದ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.


ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ಆರೋಪಿ ಜೊತೆಗಿನ ಕುಂದಾಪುರ ಹೆಸರು ತೆಗೆದುಹಾಕುವಂತೆ ಕೋರಿ ನ್ಯಾಯಾಲಯಕ್ಕೆ ಉಡುಪಿ ಜಿಲ್ಲೆಯ ಕುಂದಾಪುರ ಮೂಲದ ಉದ್ಯಮಿ, ಪ್ರಸ್ತುತ ಬೆಂಗಳೂರು ಹನುಮಂತ ನಗರದ ನಿವಾಸಿ ಗಣೇಶ್​ ಶೆಟ್ಟಿ ಅರ್ಜಿ ಸಲ್ಲಿಸಿದ್ದರು.


ವಂಚನೆ ಪ್ರಕರಣದಲ್ಲಿ ಆರೋಪಿಯಾಗಿರುವ ಚೈತ್ರಾ ಅವರ ಸುದ್ದಿ ಪ್ರಸಾರ ಮಾಡುವಾಗ ಹೆಸರಿನ ಜೊತೆಗೆ ಕುಂದಾಪುರ ಹೆಸರನ್ನು ಬಳಸುವುದರಿಂದ ಕುಂದಾಪುರ ಊರಿನ ಹೆಸರಿಗೆ ಘಾಸಿಯಾಗುತ್ತದೆ. ಈ ಒಂದು ಘಟನೆಯಿಂದ ಭವಿಷ್ಯದ ಪೀಳಿಗೆಯನ್ನು ಕೆಟ್ಟ ದೃಷ್ಟಿಯಿಂದ ನೋಡುವಂತಾಗಬಹುದು. ಕುಂದಾಪುರ ದೇವಾಲಯಗಳಿರುವ ಮತ್ತು ಪ್ರಕೃತಿ ಸೊಬಗಿನ ಊರು. ಈ ಊರಿನ ಹೆಸರು ಆರೋಪಿಯೊಬ್ಬರ ಹೆಸರಿನ ಜೊತೆಗೆ ಥಳುಕು ಹಾಕಿದ ಕಾರಣಕ್ಕೆ ಹಾಳಾಗಬಾರದು ಎಂದು ಅರ್ಜಿಯಲ್ಲಿ ಕೋರಲಾಗಿತ್ತು.


ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಮತ್ತು ತಂಡದ ವಿಚಾರಣೆಯನ್ನು ಸಿಸಿಬಿ ಪೊಲೀಸರು ನಡೆಸುತ್ತಿದ್ದು ಈ ನಡುವೆ ಚೈತ್ರಾ ಪ್ರಕರಣದಲ್ಲಿ ಕುಂದಾಪುರ ಹೆಸರನ್ನು ಪದೇ ಪದೇ ಬಳಸುತ್ತಿರುವುದರಿಂದ ಅಲ್ಲಿನ ನಿವಾಸಿಗಳ, ಸ್ಥಳೀಯರ ಭಾವನೆಗೆ ಧಕ್ಕೆಯಾಗುತ್ತಿರುವುದರಿಂದ ಮಾದ್ಯಮಗಳಿಗೆ ಕುಂದಾಪುರ ಹೆಸರನ್ನು ಬಳಸದಂತೆ ನಿರ್ಬಂಧ ನೀಡುವಂತೆ ಕೋರ್ಟ್​ ಮೊರೆ ಹೋಗಿದ್ದರು. ಅದರಂತೆ ಕೋರ್ಟ್ ತಡೆಯಾಜ್ಞೆ ವಿಧಿಸಿದ್ದು, ಹೆಸರಿನ ಜೊತೆಗೆ ಸ್ಥಳನಾಮ ಬಳಸದಂತೆ ಸಮನ್ಸ್ ನೀಡಿದೆ, ಅಲ್ಲದೆ, ವಿಚಾರಣೆಯನ್ನು ಡಿಸೆಂಬರ್ 5ಕ್ಕೆ ಕಾಯ್ದಿರಿಸಿದೆ. ಈ ಬಗ್ಗೆ ಹೈಕೋರ್ಟ್ ವಕೀಲರಾದ ಎಚ್. ಪವನಚಂದ್ರ ಶೆಟ್ಟಿ ವಾದಿಸಿದ್ದರು.



Leave a Comment: