KSRTC ಬಸ್-ಕಾರು ಡಿಕ್ಕಿ, ಕ್ರೈಸ್ಥ ಧರ್ಮಗುರು ಫಾ. ಆಂಥೋಣಿ ಪೀಟರ್ ಮೃತ್ಯು..

ಸುದ್ದಿಗಳು News

Posted by vidyamaana on 2024-07-24 17:11:55 |

Share: | | | | |


KSRTC ಬಸ್-ಕಾರು ಡಿಕ್ಕಿ, ಕ್ರೈಸ್ಥ ಧರ್ಮಗುರು ಫಾ. ಆಂಥೋಣಿ ಪೀಟರ್ ಮೃತ್ಯು..

ಶಿವಮೊಗ್ಗ : ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಕಾರು ಡಿಕ್ಕಿಯಾದ ಪರಿಣಾಮ ಕ್ರೈಸ್ತ ಧರ್ಮಗುರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಸಮೀಪ ಸವಳಂಗ ಚಿನ್ನಿಕಟ್ಟೆ ಬಳಿ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ.ಕೆಎಸ್‌ಆರ್‌ಟಿಸಿ ಬಸ್ಸು ಹಾನಗಲ್‌ನಿಂದ ಶಿವಮೊಗ್ಗ ಕಡೆಗೆ ಹೋಗುತ್ತಿತ್ತುಎನ್ನಲಾಗಿದೆ.

ಕ್ರೈಸ್ತ ಧರ್ಮಗುರು ಇದ್ದ ಕಾರು ಶಿವಮೊಗ್ಗ ಕಡೆಯಿಂದ ತೆರಳುತ್ತಿತ್ತು. ಚಿನ್ನಿಕಟ್ಟೆ ಬಳಿ ಕಾರು, ಬಸ್ಸು ಮುಖಾಮುಖಿ ಡಿಕ್ಕಿಯಾಗಿವೆ. ಅಪಘಾತದ ರಭಸಕ್ಕೆ ಕಾರು ರಸ್ತೆ ಪಕ್ಕದ ಜಮೀನಿಗೆ ಉರುಳಿ ಬಿದ್ದಿದ್ದು ಸಂಪೂರ್ಣ ನುಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಶಿಕಾರಿಪುರ ಧರ್ಮಕೇಂದ್ರದ ಧರ್ಮಗುರು ಆಂಥೋಣಿ ಪೀಟರ್‌ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದ್ದು ನ್ಯಾಮತಿ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿದ್ದಾರೆ.

 Share: | | | | |


ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನತೀರ್ಥ ಸ್ವಾಮೀಜಿಗಳ ಆಶೀರ್ವಾದ ಡಾ.ಧನಂಜಯ ಸರ್ಜಿ

Posted by Vidyamaana on 2024-05-23 13:54:45 |

Share: | | | | |


ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನತೀರ್ಥ ಸ್ವಾಮೀಜಿಗಳ ಆಶೀರ್ವಾದ ಡಾ.ಧನಂಜಯ ಸರ್ಜಿ

ಪುತ್ತೂರು: ಕರ್ನಾಟಕ ವಿಧಾನ ಪರಿಷತ್ ನೈರುತ್ಯ ಪಧವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಅವರು ಮೇ.23ರಂದು ಉಡುಪಿಯ ಶ್ರೀ ಕೃಷ್ಣ ದೇಗುಲಕ್ಕೆ ಭೇಟಿ ನೀಡಿ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನತೀರ್ಥ ಸ್ವಾಮೀಜಿಗಳ ಆಶೀರ್ವಾದ ಪಡೆದರು. ಈ ಸಂಧರ್ಭದಲ್ಲಿ ಉಡುಪಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಯಶಪಾಲ್ ಸುವರ್ಣ

ವಾಹನ ಸವಾರರೇ ಗಮನಿಸಿ : ನಾಳೆಯೊಳಗೆ HSRP ನಂಬರ್ ಪ್ಲೇಟ್ ಹಾಕಿಸದಿದ್ರೆ ದಂಡ ಬೀಳುತ್ತೆ ಹುಷಾರು

Posted by Vidyamaana on 2024-06-11 14:40:36 |

Share: | | | | |


ವಾಹನ ಸವಾರರೇ ಗಮನಿಸಿ : ನಾಳೆಯೊಳಗೆ HSRP ನಂಬರ್ ಪ್ಲೇಟ್ ಹಾಕಿಸದಿದ್ರೆ ದಂಡ ಬೀಳುತ್ತೆ ಹುಷಾರು

ಬೆಂಗಳೂರು : ಕರ್ನಾಟಕ ಸಾರಿಗೆ ಇಲಾಖೆಯು ರಾಜ್ಯದಲ್ಲಿ ಎಲ್ಲ ವಾಹನಗಳಿಗೂ ಹೈ ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್‌ಗಳು (HSRP) ಅಳವಡಿಕೆಗೆ ಆದೇಶ ಹೊರಡಿಸಿದೆ. ಆದರೆ, ರಾಜ್ಯ ಸರ್ಕಾರ ಈಗಾಗಲೇ ಹಲವು ಬಾರಿ ಅವಧಿ ವಿಸ್ತರಣೆ ಮಾಡಿ ಜೂನ್.‌ 12ಕ್ಕೆ ಗಡುವು ವಿಸ್ತರಿಸಿದೆ

2019ರ ಏಪ್ರಿಲ್ 1ರ ಮೊದಲು ರಾಜ್ಯದಲ್ಲಿ ನೋಂದಣಿಯಾಗಿರುವ ಎಲ್ಲ ವಾಹನಗಳಿಗೆ ಎಚ್‌ಎಸ್‌ಆರ್ಪಿ ಅಳವಡಿಸುವುದನ್ನು ಕಡ್ಡಾಯಗೊಳಿಸಿ ಸಾರಿಗೆ ಇಲಾಖೆ ಕಳೆದ ವರ್ಷ ಆಗಸ್ಟ್ನಲ್ಲಿ ಅಧಿಸೂಚನೆ ಹೊರಡಿಸಿತ್ತು. ರಾಜ್ಯದಲ್ಲಿ ಸುಮಾರು ಎರಡು ಕೋಟಿ ವಾಹನಗಳಿಗೆ ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ ಅಗತ್ಯವಿದೆ ಎಂದು ಸಾರಿಗೆ ಅಧಿಕಾರಿಗಳು ಅಂದಾಜಿಸಿದ್ದಾರೆ.

ರಾಜ್ಯ ಸಾರಿಗೆ ಇಲಾಖೆ ಜೂನ್‌ 12 ರವರೆಗೆ ಎಚ್ ಎಸ್ ಆರ್ ಪಿ ಪಡೆಯಲು ನೋಂದಣಿ ಮಾಡಿಕೊಳ್ಳಲು ಅವಕಾಸ ನೀಡಿದೆ. ಅದಾದನಂತರ ಜೂನ್.‌13 ರಿಂದ ಪೊಲೀಸ್ ಇಲಾಖೆ ಜೊತೆಗೂಡಿ ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಇಲ್ಲದ ವಾಹನಗಳಿಗೆ ದಂಡ ವಿಧಿಸಲು ನಿರ್ಧರಿಸಲಾಗಿದೆ. ಅವಧಿಯೊಳಗೆ ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸದಿದ್ದರೆ 500 ರೂ.ನಿಂದ 1,000 ರೂ.ವರೆಗೆ ದಂಡ ವಿಧಿಸುವುದಾಗಿ ಸಾರಿಗೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ದಕ್ಷಿಣ ಕನ್ನಡಕ್ಕೆ ದಿನೇಶ್ ಗುಂಡೂರಾವ್ ಉಸ್ತುವಾರಿ

Posted by Vidyamaana on 2023-06-09 08:52:56 |

Share: | | | | |


ದಕ್ಷಿಣ ಕನ್ನಡಕ್ಕೆ ದಿನೇಶ್ ಗುಂಡೂರಾವ್ ಉಸ್ತುವಾರಿ

ಬೆಂಗಳೂರು: ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ದಕ್ಷಿಣ ಕನ್ನಡಕ್ಕೆ ದಿನೇಶ್ ಗುಂಡೂರಾವ್, ಉಡುಪಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ.

ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳ ಜಾಮೀನು ಅರ್ಜಿ ವಜಾ ಗೊಳಿಸಿದ ಹೈಕೋರ್ಟು

Posted by Vidyamaana on 2023-10-04 22:05:55 |

Share: | | | | |


ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳ ಜಾಮೀನು ಅರ್ಜಿ ವಜಾ ಗೊಳಿಸಿದ ಹೈಕೋರ್ಟು

ಬೆಂಗಳೂರು: ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ

ಯುವ ಮೋರ್ಚಾ ಪದಾಧಿಕಾರಿ ಪ್ರವೀಣ್ ನೆಟ್ಟಾರು(Praveen Nettar)ಹತ್ಯೆ ಪ್ರಕರಣದ ಮೂವರು ಆರೋಪಿಗಳು ಸಲ್ಲಿಸಿದ ಜಾಮೀನು ಅರ್ಜಿಯನ್ನು ನಿರಾಕರಿಸಿ ಹೈಕೋರ್ಟ್‌ ಆದೇಶಿಸಿದೆ.


💥 *ವಿದ್ಯಮಾನ Youtube Channel* *Subscribe ಆಗಿಲ್ವಾ..?*


ನ್ಯಾಯಮೂರ್ತಿ ಎಚ್.ಬಿ. ಪ್ರಭಾಕರ್ ಶಾಸ್ತ್ರಿ ನ್ಯಾ ಅನಿಲ್ ಕೆ.ಕಟ್ಟಿ ಅವರಿದ್ದ ವಿಭಾಗೀಯ ಪೀಠವು, ಆತನ ಹತ್ಯೆ ಸಂಬಂಧ ಸಂಚಿನಲ್ಲಿ ಆರೋಪಿಗಳು ಭಾಗಿಯಾದ ಆರೋಪವಿದೆ ಹೀಗಾಗಿ ಕೆ.ಇಸ್ಮಾಯಿಲ್ ಶಫಿ, (ಆರೋಪಿ 9), ಕೆ.ಮೊಹಮ್ಮದ್ ಇಟ್ಬಾಲ್ (ಆರೋಪಿ 10) ಹಾಗೂ ಎಂ.ಶಾಹೀದ್ (ಆರೋಪಿ 11) ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಳಿಸಲಾಗಿದೆ ಎಂದು ಆದೇಶಿಸಿದೆ.ಮೇಲ್ಮನವಿದಾರ ಆರೋಪಿಗಳು ಪ್ರಕರಣದಲ್ಲಿ ಸಕ್ರಿಯ ಪಾತ್ರ ವಹಿಸಿರುವುದನ್ನು ತೋರಿಸಲು ಸೂಕ್ತ ಸಾಕ್ಷ್ಯಧಾರಗಳು ಲಭ್ಯವಿದೆ. ಮೃತನ ಮೇಲೆ બેઈ ದಾಳಿ ನಡೆದ ವೇಳೆ ಸ್ಥಳದಲ್ಲಿ ಈ ಮೂರು ಆರೋಪಿಗಳು ಪ್ರತ್ಯಕ್ಷವಾಗಿ ಹಾಜರಲಿಲ್ಲ. ಆದರೆ, ಪ್ರವೀಣ್ ನೆಟ್ಟಾರು ಹತ್ಯೆಗೆ ಯೋಜನೆ ರೂಪಿಸಲು ಹಮ್ಮಿಕೊಂಡಿದ್ದ ಸಂಚಿನ ಸಭೆಯಲ್ಲಿ ಭಾಗವಹಿಸಿದ್ದರು ಹಾಗೂ ಹತ್ಯೆ ಯೋಜನೆ ಬಗ್ಗೆ ಚರ್ಚಿಸಿದ್ದರು. ಸಂಚು ರೂಪಿಸಲು ಯಾವುದೇ ಬಹಿರಂಗ ಕಾಣಿಸಬೇಕೇಂದೇನು ಇಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

💥 *ವಿದ್ಯಮಾನ Youtube Channel* *Subscribe ಆಗಿಲ್ವಾ..?*

ನಾಲ್ವರು ಸಾಕ್ಷಿಗಳ ಹೇಳಿಕೆ ಪ್ರಕಾರ ಆರೋಪಿಗಳು ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ. ತನಿಖಾಧಿಕಾರಿಗಳು ಸಂಗ್ರಹಿಸಿರುವ ಆರೋಪಿಗಳ ಪೋನ್ ಕರೆಗಳ ವಿವರಗಳು ಸಹ ಪ್ರಕರಣದಲ್ಲಿ ಮೇಲ್ಮನವಿದಾರ ಆರೋಪಿಗಳು ಪಿತೂರಿ ನಡೆಸುವುದನ್ನು ತೋರಿಸುತ್ತದೆ. ಆರೋಪಿಗಳು ಪ್ರಕರಣದಲ್ಲಿ ನಿರ್ದಿಷ್ಟ ಸಕ್ರಿಯ ಮತ್ತು ಗಮನಾರ್ಹ ಪಾತ್ರ ನಿರ್ವಹಿಸುವುದನ್ನು ಮೇಲ್ನೋಟಕ್ಕೆ ದೃಢಪಡಿಸುವ ಸಾಕ್ಷ್ಯಗಳು ನ್ಯಾಯಾಲಯದ ಮುಂದಿದೆ ಎಂದು ಪೀಠ ಆದೇಶದಲ್ಲಿ ಹೇಳಿದೆ.ಮೇಲ್ಮನವಿದಾರರು ನೆಟ್ಟಾರು ಹತ್ಯೆಯ ಪಿತೂರಿಯಲ್ಲಿ ಭಾಗವಹಿಸಿರುವುದು ಸತ್ಯವಾಗಿದ್ದು, ಅದು ಭಯೋತ್ಪಾದಕ ಕೃತ್ಯವನ್ನು ಸಮರ್ಥಿಸುವ, ಪ್ರೋತ್ಸಾಹಿಸುವ ಮತ್ತು ಸುಗಮಗೊಳಿಸುವ ಕೆಲಸವಾಗಿದೆ. ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ ಅಡಿ (ಯುಎಪಿಎ) ಆರೋಪಿಗಳ ನಡೆಸಿರುವ ಕೃತ್ಯವು ಶಿಕ್ಷಾರ್ಹ ಅಪರಾಧವಾಗಿದೆ ಎಂದು ತಿಳಿಸಿದ ಪೀಠ ಮೇಲ್ಮನವಿಯನ್ನು ವಜಾಗೊಳಿಸಿದೆ.

💥 *ವಿದ್ಯಮಾನ Youtube Channel* *Subscribe ಆಗಿಲ್ವಾ..?*


ಹೃದಯಾಘಾತದಿಂದ ಭಾರತೀಯ ನೌಕಾಪಡೆಯ ಮಹಾನಿರ್ದೇಶಕ ರಾಕೇಶ್ ಪಾಲ್ ನಿಧನ

Posted by Vidyamaana on 2024-08-18 22:06:05 |

Share: | | | | |


ಹೃದಯಾಘಾತದಿಂದ ಭಾರತೀಯ ನೌಕಾಪಡೆಯ ಮಹಾನಿರ್ದೇಶಕ ರಾಕೇಶ್ ಪಾಲ್ ನಿಧನ

ನವದೆಹಲಿ: ಭಾರತೀಯ ಕೋಸ್ಟ್ ಗಾರ್ಡ್ ಮಹಾನಿರ್ದೇಶಕ ರಾಕೇಶ್ ಪಾಲ್ ಅವರು ಭಾನುವಾರ ಚೆನ್ನೈನಲ್ಲಿ ಹೃದಯಾಘಾತದಿಂದ ನಿಧನರಾದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಾಲ್ ಅವರು ಕಳೆದ ವರ್ಷ ಜುಲೈ 19 ರಂದು ಭಾರತೀಯ ಕೋಸ್ಟ್ ಗಾರ್ಡ್ನ 25 ನೇ ಮಹಾನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡಿದ್ದರು.

ಪಾಲ್ ಅವರನ್ನು ಚೆನ್ನೈನ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದುಬಂದಿದೆ. ಕೋಸ್ಟ್ ಗಾರ್ಡ್ ಮಹಾನಿರ್ದೇಶಕರು ಚೆನ್ನೈನಲ್ಲಿ ಹೃದಯಾಘಾತದಿಂದ ನಿಧನರಾದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅವರ ಪಾರ್ಥಿವ ಶರೀರವನ್ನು ದೆಹಲಿಗೆ ತರಲು ವ್ಯವಸ್ಥೆ ಮಾಡಲಾಗುತ್ತಿದೆ.

ಪಾಲ್ ಅವರ ನಿಧನವು ಅಕಾಲಿಕ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ ಮತ್ತು ಅವರ ನಾಯಕತ್ವದಲ್ಲಿ ಭಾರತೀಯ ಕರಾವಳಿ ಕಾವಲು ಪಡೆ ಭಾರತದ ಕಡಲ ಭದ್ರತೆಯನ್ನು ಬಲಪಡಿಸುವಲ್ಲಿ ದೊಡ್ಡ ದಾಪುಗಾಲು ಹಾಕಿದೆ ಎಂದು ಹೇಳಿದರು.

ಸಿ.ಟಿ.ರವಿ ಸಿಎಂ ಆಗಲಿ.. ಬಿಜೆಪಿಯಲ್ಲಿ ಸಂಚಲನ ಸೃಷ್ಟಿಸಿದ ಈಶ್ವರಪ್ಪ ಹೇಳಿಕೆ

Posted by Vidyamaana on 2023-04-25 12:40:04 |

Share: | | | | |


ಸಿ.ಟಿ.ರವಿ ಸಿಎಂ ಆಗಲಿ.. ಬಿಜೆಪಿಯಲ್ಲಿ ಸಂಚಲನ ಸೃಷ್ಟಿಸಿದ ಈಶ್ವರಪ್ಪ ಹೇಳಿಕೆ

ಚಿಕ್ಕಮಗಳೂರು: ಚುನಾವಣೆ ನಡೆಯುವ ಮೊದಲೇ ರಾಜಕೀಯ ಪಕ್ಷಗಳಲ್ಲಿ ಮುಂದಿನ ಸಿಎಂ ಚರ್ಚೆ ಜೋರಾಗಿದೆ. ಅಧಿಕಾರಕ್ಕೇರುವ ಮುನ್ನವೇ ಸಿಎಂ ಕೂಗು ಕೇಳಿ ಬರುತ್ತಿದೆ. ಮಾಜಿ ಸಚಿವ ಕೆ.ಎಸ್.‌ ಈಶ್ವರಪ್ಪನವರು ಸಿಟಿ ರವಿ ಅವರು ಮುಂದಿನ ಸಿಎಂ ಆಗಲಿ ಎಂದು ಹೇಳಿದ್ದಾರೆ.

ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ನಿಡಘಟ್ಟದಲ್ಲಿ ನಡೆದ, ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಈ ಚುನಾವಣೆಯಲ್ಲಿ ಸಿಟಿ ರವಿ ಅವರನ್ನು ದೊಡ್ಡ ಅಂತರದಿಂದ ಗೆಲ್ಲಿಸಿ ಅವರನ್ನು ಕರ್ನಾಟಕದ ಮುಂದಿನ ಸಿಎಂಯನ್ನಾಗಿ ಮಾಡಬೇಕೆಂದಿದ್ದಾರೆ.ಕಾಂಗ್ರೆಸ್‌ ನಲ್ಲಿ ಓಡಾಡುತ್ತಿದ್ದ ಸಿಎಂ ಕೂಗು ಇದೀಗ ಬಿಜೆಪಿಯಲ್ಲೂ ಕೇಳಿ ಬಂದಿದೆ. ಬಹಿರಂಗ ಸಭೆಯಲ್ಲೇ ಸಿ.ಟಿ.ರವಿ ಪರ ಈಶ್ವರಪ್ಪ ಅವರು ಒಲವು ತೋರಿದ್ದು, ಇದೀಗ ಈ ಸಂಬಂಧಿತ ವಿಡಿಯೋ ಸದ್ದು ಮಾಡುತ್ತಿದೆ.ನಿನ್ನೆಯಷ್ಟೇ ಸಿಟಿ ರವಿ ಅವರು ಮೈಸೂರಿನಲ್ಲಿ ಮಾತನಾಡುವ ವೇಳೆ ಸಿಎಂ ಆಗುವ ಇಂಗಿತವನ್ನು ವ್ಯಕ್ತಪಡಿಸಿದ್ದರು.ಈಶ್ವರಪ್ಪ ಅವರ ಈ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಮಹತ್ವ ಪಡೆದುಕೊಂಡಿದೆ

Recent News


Leave a Comment: