ಶಿರೂರಿನ ಭೂಕುಸಿತದಲ್ಲಿ ಕಾಣೆಯಾದ ಲಾರಿ ನೀರಿನ ಅಡಿಯಲ್ಲಿ ಪತ್ತೆ; ಮಾಹಿತಿ ನೀಡಿದ ಸಚಿವ

ಸುದ್ದಿಗಳು News

Posted by vidyamaana on 2024-07-24 18:06:21 | Last Updated by Vidyamaana on 2024-07-24 18:06:21

Share: | | | | |


ಶಿರೂರಿನ ಭೂಕುಸಿತದಲ್ಲಿ ಕಾಣೆಯಾದ ಲಾರಿ ನೀರಿನ ಅಡಿಯಲ್ಲಿ ಪತ್ತೆ; ಮಾಹಿತಿ ನೀಡಿದ ಸಚಿವ

ಕಾರವಾರ: ಉತ್ತರ ಕನ್ನಡದ ಶಿರೂರಿನ ಭೂಕುಸಿತದಲ್ಲಿ ನಾಪತ್ತೆಯಾಗಿದ್ದ ಕೋಝಿಕ್ಕೋಡ್ ಮೂಲದ ಅರ್ಜುನ್ ಅವರ ಲಾರಿ ಎಂದು ನಂಬಲಾದ ಟ್ರಕ್ ನದಿಯ ಆಳದಲ್ಲಿ ಇರುವ ಸುಳಿವು ಲಭ್ಯವಾಗಿದೆ. ಕರ್ನಾಟಕದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಇದನ್ನು ಖಚಿತಪಡಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ಸಚಿವರು ಮಾಹಿತಿ ನೀಡಿದ್ದಾರೆ.

ನದಿಯ ಕೆಳಭಾಗದಲ್ಲಿ ಟ್ರಕ್ ಪತ್ತೆಯಾಗಿದೆ ಎಂದು ತಿಳಿದು ಬಂದಿದ್ದು ಅದಕ್ಕಾಗಿ ಶೋಧ ನಡೆಯುತ್ತಿದೆ.

ಶಿರೂರಿನಲ್ಲಿ ನಡೆಯುತ್ತಿರುವ ರಕ್ಷಣಾ ಕಾರ್ಯಾಚರಣೆಯ ಒಂಬತ್ತನೇ ದಿನದಂದು, ಲಾರಿಯ ಬಗ್ಗೆ ನಿರ್ಣಾಯಕ ಮಾಹಿತಿಯನ್ನು ಪಡೆಯಲಾಗಿದೆ. ಇಂದು ಬೆಳಗ್ಗೆ ಬೂಮ್ ಲೆಂಗ್ತ್ ಕ್ರೇನ್ ಬಂದಿದ್ದು, ತಪಾಸಣೆ ಪುನರಾರಂಭವಾಗಿದೆ. ಈ ಯಂತ್ರವು 60 ಅಡಿ ಆಳದವರೆಗೆ ಹುಡುಕಬಲ್ಲ ಸಾಮರ್ಥ್ಯ ಹೊಂದಿದೆ. ಪೊಲೀಸ್ ವಾಹನದೊಂದಿಗೆ ವಾಹನವನ್ನು ಸ್ಥಳಕ್ಕೆ ತರಲಾಗಿದೆ.

ಈ ಕುರಿತು ಕೃಷ್ಣ ಬೈರೇಗೌಡ Xನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ತಮ್ಮ X ಖಾತೆಯಲ್ಲಿ ಈ ರೀತಿ ಬರೆದುಕೊಂಡಿದ್ದಾರೆ.ಜುಲೈ 16 ರಂದು ಬೆಳಿಗ್ಗೆ ಕೋಝಿಕ್ಕೋಡ್‌ನ ಕಂಡ್ಯಕ್ಕಲ್ ಮೂಲದ ಅರ್ಜುನ್ (30) ಕರ್ನಾಟಕ-ಗೋವಾ ಗಡಿಯಲ್ಲಿ ಹಾದು ಹೋಗುವ ಪನ್ವೇಲ್-ಕನ್ಯಾಕುಮಾರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಕ್ಕೀಡಾಗಿದ್ದರು. ಭೂಕುಸಿತದಲ್ಲಿ ಟೀ ಅಂಗಡಿ ಮಾಲೀಕ ಸೇರಿದಂತೆ 10 ಜನರು ಸಾವನ್ನಪ್ಪಿದ ಸ್ಥಳದಲ್ಲಿ ಲಾರಿಯ ಜಿಪಿಎಸ್ ಸ್ಥಳವನ್ನು ಕೊನೆಯದಾಗಿ ಪತ್ತೆ ಹಚ್ಚಲಾಯಿತು.

 Share: | | | | |


ಶಾಸಕರು ಏಳು ಜನ ಪಿಎ ಗಳನ್ನು ಯಾಕೆ ಇಟ್ಟಿದ್ದಾರೆ?

Posted by Vidyamaana on 2023-09-02 13:16:53 |

Share: | | | | |


ಶಾಸಕರು ಏಳು ಜನ ಪಿಎ ಗಳನ್ನು ಯಾಕೆ ಇಟ್ಟಿದ್ದಾರೆ?

ತನ್ನ ಕಚೇರಿಗೆ ಬರುವವರನ್ನು ವಿಚಾರಿಸಲು, ಅವರ ಸಮಸ್ಯೆ ಆಲಿಸಲು ಕಚೇರಿಯಲ್ಲಿ ಜನ ಇರಬೇಕೆಂಬ ದೂರ ದೃಷ್ಟಿ ಶಾಸಕರಲ್ಲಿತ್ತು ,ಯಾರೇ ಏನೇ ಅಂದರೂ ಶಾಸಕರು ಅದರ ಬಗ್ಗೆ ತಲೆಕೆಡಿಸಿಕೊಳ್ಳಲು ಹೋಗಿಲ್ಲ. ಕಚೇರಿಗೆ ಬರುವ ಬಡವರಿಗೆ ಸೇವೆ ಸಿಗಬೇಕೆಂಬ ಹಂಬಲ ಅವರಲ್ಲಿತ್ತು.‌ ಏಳು ಜನ ಪಿಎ ಗಳನ್ನು ಯಾಕೆ ಇಟ್ಟಿದ್ದಾರೆ ಎಂಬುದು ಕೆಲವರಿಗೆ ಅರ್ಥವಾಗಿರಬಹುದು ಆದರೆ ಕೆಲವರಿಗೆ ಅರ್ಥವಾಗದೆನೂ ಇರಬಹುದು. ಅರ್ಥ ಮಾಡಿಕೊಳ್ಳದೆ ಇರುವುದು ತಪ್ಪು ಎಂದು ಹೇಳಲಾಗದು.

ಶುಕ್ರವಾರ ಮಧ್ಯಾಹ್ನ ಊಟ ಮುಗಿಸಿ ಶಾಸಕರ ಕಚೇರಿ ಕಡೆ ತೆರಳಿದ್ದೆ. ಕಚೇರಿ ಮುಂಬಾಗಿಲ ಬಳಿ ವೃದ್ದೆ ಯೋರ್ವರು ನೆಲದ‌ಮೇಲೆ ಕುಳಿತಿದ್ದರು ಪಕ್ಕದಲ್ಲಿ ಪಿಎ ಲಿಂಗಪ್ಪರೂ ಅವರ ಜೊತೆ ಮಾತನಾಡುತ್ತಿದ್ದರೂ ಆ ಕ್ಷಣದಲ್ಲಿ ನಾನೊಂದು ಫೋಟೋ ಕ್ಲಿಕ್ಕಿಸಿದೆ. ಬಳಿಕ ನಾನೂ‌ಆ ವೃದ್ದೆ‌ತಾಯಿ ಲಿಂಗಪ್ಪರ ಬಳಿ ಹೇಳುತ್ತಿದ್ದ ಸಮಸ್ಯೆಯನ್ನೂ ಆಲಿಸಿದೆ. ಬಳಿಕ ಯಾಕೆ ನೀವು ನೆಲದ ಮೇಲೆ ಕೂತಿದ್ದೀರಿ ಎಂದು ಕೇಳಿಬಿಟ್ಟೆ. ಆಗ ಆ ಮಹಿಳೆ ನನಗೆ ಕುರ್ಚಿ ಮೇಲೆ ಕುಳಿತುಕೊಳ್ಳಲು ಆಗುತ್ತಿಲ್ಲ ಅದಕ್ಕೆ ನೆಲದ ಮೇಲೆ ಕುಳಿತೆ ನಾನು ಕುಳಿತಾಗ ಇವರೂ (ಲಿಂಗಪ್ಪ) ರೂ ಕುಳಿತರು, ನನ್ನ‌ಸಮಸ್ಯೆಗೆ ಪರಿಹಾರವನ್ನೂ ಸೂಚಿಸಿದರು ಎಂದು ಹೇಳಿದಾಗ ಶಾಸಕರು ಯಾಕೆ ಕಚೇರಿಯಲ್ಲಿ ಪಿಎ ಗಳನ್ನು ಇಟ್ಟುಕೊಂಡಿದ್ದಾರೆ ಎಂದು ಪ್ರಶ್ನಿಸಿದವರಿಗೆ ಉತ್ತರ ಸಿಕ್ಕಿರಬಹುದು ಎಂದು‌ ಮನಸ್ಸಿನಲ್ಲೇ ಗ್ರಹಿಸಿಕೊಂಡೆ.‌


ಅರೆಶಿರೂರು ಹೆಲಿಪ್ಯಾಡ್ ಬಳಿ ಆಕಸ್ಮಿಕ ಬೆಂಕಿ; ಅಪಾಯದಿಂದ ಪಾರಾದ ಸಿಎಂ ಬೊಮ್ಮಾಯಿ

Posted by Vidyamaana on 2023-04-13 07:08:47 |

Share: | | | | |


ಅರೆಶಿರೂರು ಹೆಲಿಪ್ಯಾಡ್ ಬಳಿ ಆಕಸ್ಮಿಕ ಬೆಂಕಿ; ಅಪಾಯದಿಂದ ಪಾರಾದ ಸಿಎಂ ಬೊಮ್ಮಾಯಿ

ಬೈಂದೂರು: ಹೆಲಿಕಾಪ್ಟರ್ ಟೆಕ್ ಆಫ್ ಆಗುವ ಸಂದರ್ಭ ಹೆಲಿಪ್ಯಾಡ್ ಬಳಿ ಬೆಂಕಿ ಕಾಣಿಸಿಕೊಂಡ ಘಟನೆ ಎ. 13ರ ಗುರುವಾರ ಅರೆಶಿರೂರಿನಲ್ಲಿ ನಡೆದಿದೆ.ಸಿಎಂ ಬೊಮ್ಮಾಯಿ ಅರೆಶಿರೂರು ಹೆಲಿಪ್ಯಾಡ್ ಮೂಲಕ ಕೊಲ್ಲೂರು ಅಗಮಿಸಿದ ಸಂದರ್ಭ ಈ ಘಟನೆ ಸಂಭವಿಸಿದೆ.ಸಿಎಂ ಎಸ್ಕಾರ್ಟ್ ಹೋದ ಬಳಿಕ ಬೆಂಕಿ ಕಾಣಿಸಿಕೊಂಡಿದ್ದು, ಭಾರಿ ಅವಘಡ ತಪ್ಪಿದೆ.

ಹೆಲಿಕಾಪ್ಟರ್ ಫ್ಯಾನ್ ಗಾಳಿಗೆ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದ್ದು, ಸ್ಥಳದಲ್ಲಿ  ಬೈಂದೂರು ಅಗ್ನಿಶಾಮಕ ದಳದವರಿಂದ ಕ್ಷೀಪ್ರ ಕಾರ್ಯಾಚರಣೆ ನಡೆಸಿ, ಬೆಂಕಿ ನಂದಿಸಲಾಗಿದೆ. ‌ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ದಂಪತಿ ಸಮೇತ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿ ದೇವಸ್ಥಾನದ ಪ್ರಾಂಗಣದ ಗರುಡಗಂಬಕ್ಕೆ ಪೂಜೆ ಸಲ್ಲಿಸಿದರು.

ನನ್ನ ಬೂತ್ ನಾನೇ ಅಭ್ಯರ್ಥಿ ಕಾಂಗ್ರೆಸ್ಸಿನಿಂದ ವಿಶೇಷ ಅಭಿಯಾನ

Posted by Vidyamaana on 2023-05-07 06:52:22 |

Share: | | | | |


ನನ್ನ ಬೂತ್ ನಾನೇ ಅಭ್ಯರ್ಥಿ ಕಾಂಗ್ರೆಸ್ಸಿನಿಂದ ವಿಶೇಷ ಅಭಿಯಾನ

ಪುತ್ತೂರು: ಮೇ 10ರ೦ದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಇನ್ನೇನು ನಾಲ್ಕು ದಿನಗಳು ಮಾತ್ರ ಬಾಕಿ ಉಳಿದಿದ್ದು ಕಾಂಗ್ರೆಸ್‌ ಅಭ್ಯರ್ಥಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಪರವಾಗಿ ಮೇ 6ರಂದು ನನ್ನ ಬೂತ್ ನಾನೇ ಅಭ್ಯರ್ಥಿ ವಿಶೇಷ ಅಭಿಯಾನ ನಡೆಯಿತು.


ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 220 ಬೂತ್‌ಗಳಿಗೂ ಒಂದೇ ದಿನ ತೆರಳಿ ಅಭ್ಯರ್ಥಿ ಪರ ಮತಯಾಚಿಸಿದರು. ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ನೀಡಲಾಗಿರುವ ಗ್ಯಾರೆಂಟಿಗಳ ಭರವಸೆ, ಪಕ್ಷ ಮಾಡಿರುವ ಸಾಧನೆ ಮತ್ತು ಅಭ್ಯರ್ಥಿ ಅಶೋಕ್ ಕುಮಾರ್ ರೈಯವರು ಮಾಡಿರುವ ಜನ ಸೇವೆ ಇತ್ಯಾದಿಗಳ ಕುರಿತು ಮತದಾರರಿಗೆ ಮಾಹಿತಿ ನೀಡಿದ ಪಕ್ಷದ ಕಾರ್ಯಕರ್ತರು ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ ಪುತ್ತೂರಿನ ಸರ್ವಾಂಗೀಣ ಅಭಿವೃದ್ಧಿಗೆ ಆಶೀರ್ವದಿಸುವಂತೆ ಕೋರಿದರು.

ಬನ್ನೂರು ನಿವಾಸಿ ಸೀತಾರಾಮ ಶೆಟ್ಟಿ ನೇಣು ಬಿಗಿದು ಆತ್ಮಹತ್ಯೆ

Posted by Vidyamaana on 2024-04-29 21:24:36 |

Share: | | | | |


ಬನ್ನೂರು ನಿವಾಸಿ ಸೀತಾರಾಮ ಶೆಟ್ಟಿ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು: ಇಲ್ಲಿನ ಬನ್ನೂರಿನ ಮೇಲ್ಮಜಲು ನಿವಾಸಿ ಸೀತಾರಾಮ ಶೆಟ್ಟಿ (55 ವ.) ಆದಿತ್ಯವಾರ ರಾತ್ರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಖಾಸಗಿ ಗ್ಯಾಸ್ ಕಂಪೆನಿಯಲ್ಲಿ ಕಳೆದ ಹಲವಾರು ವರ್ಷಗಳಿಂದ ದುಡಿಯುತ್ತಿದ್ದ ಇವರು, ಮನೆಮನೆಗೆ ಗ್ಯಾಸ್ ಪೂರೈಕೆ ಮಾಡುತ್ತಿದ್ದರು.

ರದ್ದಾದ ವಿಜಯೋತ್ಸವದ ಬಗ್ಗೆ ನಗರ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದಾಲಿ ಸ್ಪಷ್ಟನೆ

Posted by Vidyamaana on 2023-06-02 09:17:05 |

Share: | | | | |


ರದ್ದಾದ ವಿಜಯೋತ್ಸವದ ಬಗ್ಗೆ  ನಗರ ಕಾಂಗ್ರೆಸ್ ಅಧ್ಯಕ್ಷ  ಮಹಮ್ಮದಾಲಿ ಸ್ಪಷ್ಟನೆ

ಪುತ್ತೂರು: ಪುತ್ತೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈಯವರು ಗೆದ್ದು ಶಾಸಕರಾಗಿ ಆಯ್ಕೆಯಾಗಿರುವುದರಿಂದ ಪಕ್ಷದ ವತಿಯಿಂದ ಸಂಭ್ರಮದ ವಿಜಯೋತ್ಸವ ಆಚರಿಸಬೇಕೆಂದು ಕಾರ್ಯಕರ್ತರ ಬಯಕೆ ಸಹಜವಾಗಿರುತ್ತದೆ.

ಕಳೆದ ಸೋಮವಾರ ನಡೆದ ಕಾಂಗ್ರೆಸ್ ಪ್ರಮುಖರ ಸಭೆಯಲ್ಲಿ ಬೊಲ್ವಾರ್ ನಿಂದ - ದರ್ಬೆಯವರೆಗೆ ವಿಜಯೋತ್ಸವದ ಮೆರವಣಿಗೆ ನಡೆಸುವುದೆಂದು ತೀರ್ಮಾನಕ್ಕೆ ಬರಲಾಗಿತ್ತು ಎಂದು ನಗರ ಕಾಂಗ್ರೆಸ್ ಅಧ್ಯಕ್ಷ ಎಚ್. ಮಹಮ್ಮದ್ ಆಲಿ ತಿಳಿಸಿದ್ದಾರೆ.


ಜೂನ್ 3ರಂದು ಶನಿವಾರ ನಡೆಯಲಿರುವ ವಿಜಯೋತ್ಸವ ಕಾರ್ಯಕ್ರಮದ ಬಗ್ಗೆ ನಡೆದ ಪೂರ್ವಬಾವಿ ಸಭೆಯಲ್ಲಿ ಹವಾಮಾನ ವರದಿಯಂತೆ ಶುಕ್ರವಾರವೇ ಮುಂಗಾರು ಮಳೆ ಪ್ರಾರಂಭವಾಗುವ ಮುನ್ಸೂಚನೆ ಇರುವುದರಿಂದ ವಿಜಯೋತ್ಸವದ ಮೆರವಣಿಗೆಗೆ ಮಳೆ ಅಡ್ಡಿಯಾದೀತು ಎಂಬ ಸಂಶಯ ಹಾಗೂ ಈಗಾಗಲೇ ನಾಮಪತ್ರ ಸಲ್ಲಿಸುವ ದಿನ ದರ್ಬೆಯಿಂದ - ಕಿಲ್ಲೆ ಮೈದಾನವರೆಗೆ ಮೆರವಣಿಗೆ ನಡೆಸಲಾಗಿದೆ,

ಬಹಿರಂಗ ಪ್ರಚಾರದ ಅಂತಿಮ ದಿನ ಬೊಲ್ವಾರ್ ನಿಂದ - ದರ್ಬೆಯವರೆಗೆ  ಭ್ರಹತ್ ರೋಡ್ ಶೋ,ನಡೆಸಲಾಗಿದೆ,

ಚುನಾವಣ ಪಲಿತಾಂಶದ ದಿನ  ಅಶೋಕ್ ಕುಮಾರ್ ರೈ ಯವರು ಶಾಸಕರಾಗಿ ಆಯ್ಕೆಯಾಗಿ ಬಂದ ಸಂದರ್ಭದಲ್ಲಿ ಮಾಣಿಯಿಂದ - ಪುತ್ತೂರಿನ ದರ್ಬೆಯ ಚುನಾವಣ ಕಚೇರಿ ತನಕ ಬ್ರಹತ್ ಮೆರವಣಿಗೆ ನಡೆಸಿ ವಿಜಯೋತ್ಸವ ಆಚರಿಸಲಾಗಿದೆ,

ಪುನ್ಹ ಮೆರವಣಿಗೆ ಮಾಡಿ ವಿಜಯೋತ್ಸವ ಆಚರಿಸುವುದು ಅಬಾಸವಾಗಿ ಕಾಣುತ್ತದೆ,  ಮೆರವಣಿಗೆ ನಡೆಸಿದಾಗ ಟ್ರಾಫಿಕ್ ಜಾಮ್ ಆಗಿ ಜನರಿಗೆ ತೊಂದರೆ ಆಗುತ್ತದೆ,

ಮೆರವಣಿಗೆ ನಡೆಸಿ ದರ್ಬೆಯಲ್ಲಿ ಕೊನೆಗೊಳಿಸಿದರೆ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಲು ಅವಕಾಶವಾಗುವುದಿಲ್ಲ, ಹಾಲ್ ನಲ್ಲಿ ಸಭೆ ನಡೆಸಿದರೆ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿ ಒಳ್ಳೆಯ ಭೋಜನ ನೀಡಬಹುದು ಎಂಬ ಕಾರಣಕ್ಕಾಗಿ ವಿಜಯೋತ್ಸವ ಮೆರವಣಿಗೆ ಕಾರ್ಯಕ್ರಮ ರದ್ದುಪಡಿಸಿ, ಪುತ್ತೂರು ಪುರಭವನದಲ್ಲಿ ಶಾಸಕರಿಗೆ ಅಭಿನಂದನೆ, ಕಾರ್ಯಕರ್ತರಿಗೆ ಹಾಗೂ ಮತದಾರರಿಗೆ ಕೃತಜ್ಞತ ಸಮರ್ಪಣೆ ಕಾರ್ಯಕ್ರಮ ನಡೆಸುವ ತೀರ್ಮಾನವು ಪಕ್ಷದ ಪ್ರಮುಖರ ತೀರ್ಮಾನವೇ ಹೊರತು ಶಾಸಕ ಅಶೋಕ್ ಕುಮಾರ್ ರೈ ಯವರ ಒಬ್ಬರ ತೀರ್ಮಾನವಲ್ಲ ಎಂಬುದರ ಬಗ್ಗೆ ಕಾರ್ಯಕರ್ತರಿಗೆ ಅರಿಕೆ ಮಾಡಿಕೊಳ್ಳುತ್ತಾ ಶನಿವಾರ ನಡೆಯುವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಹಕರಿಸಬೇಕಾಗಿ ವಿನಂತಿಸುತ್ತಿದ್ದೇನೆ.

ನೆಲ್ಯಾಡಿ: ಕೆಟ್ಟುನಿಂತಿದ್ದ ಲಾರಿ ಗೆ ಬೈಕ್ ಢಿಕ್ಕಿ

Posted by Vidyamaana on 2023-07-26 01:56:16 |

Share: | | | | |


ನೆಲ್ಯಾಡಿ: ಕೆಟ್ಟುನಿಂತಿದ್ದ ಲಾರಿ ಗೆ ಬೈಕ್ ಢಿಕ್ಕಿ

ನೆಲ್ಯಾಡಿ, ಜು. 25. ರಸ್ತೆ ಬದಿ ಕೆಟ್ಟು ನಿಂತಿದ್ದ ಲಾರಿಗೆ ಹಿಂದಿನಿಂದಿ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸಣ್ಣಂಪಾಡಿ ಎಂಬಲ್ಲಿ ನಡೆದಿದೆ.ಮೃತ ಬೈಕ್ ಸವಾರನನ್ನು ನೆಲ್ಯಾಡಿ ಮೊರಂಕಳ ನಿವಾಸಿ ಇಕ್ಬಾಲ್ಎಂದು ಗುರುತಿಸಲಾಗಿದೆ. ಮೃತ ಇಕ್ಬಾಲ್ಉಪ್ಪಿನಂಗಡಿಯಿಂದ ನೆಲ್ಯಾಡಿ ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಸಣ್ಣಂಪಾಡಿ ಸಮೀಪ ಕೆಟ್ಟು ನಿಂತಿದ್ದ ಪಾರ್ಸೆಲ್ ಸಾಗಾಟದ ವಾಹನಕ್ಕೆ ಹಿಂದಿನಿಂದ ಢಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಉಪ್ಪಿನಂಗಡಿ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.

Recent News


Leave a Comment: