ಶಿರೂರು ದುರಂತ: ಮಾನವೀಯ ನೆರವು ನೀಡಿದ ಪತ್ರಕರ್ತರಿಗೆ ಅಭಿನಂದನೆ ಸಲ್ಲಿಸಿದ ಜಿಲ್ಲಾಧಿಕಾರಿ

ಸುದ್ದಿಗಳು News

Posted by vidyamaana on 2024-07-24 22:11:50 |

Share: | | | | |


ಶಿರೂರು ದುರಂತ: ಮಾನವೀಯ ನೆರವು ನೀಡಿದ ಪತ್ರಕರ್ತರಿಗೆ ಅಭಿನಂದನೆ ಸಲ್ಲಿಸಿದ ಜಿಲ್ಲಾಧಿಕಾರಿ

‌ಮಂಗಳೂರು: ಶಿರೂರು ಗುಡ್ಡ ಕುಸಿತ ದುರಂತದಲ್ಲಿ ಮೃತಪಟ್ಟಿದ್ದ ವೃದ್ಧೆಯ ಅಂತ್ಯ ಸಂಸ್ಕಾರಕ್ಕೆ ಮಾನವೀಯತೆ ನೆಲೆಯಲ್ಲಿ ನೆರವು ನೀಡಿದ್ದ ಮಂಗಳೂರಿನ ಪತ್ರಕರ್ತರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ತಮ್ಮ ಕಚೇರಿಗೆ ಆಹ್ವಾನಿಸಿ ಸನ್ಮಾನಿಸಿದರು.ಶಿರೂರು ಗುಡ್ಡ ದುರಂತದಲ್ಲಿ ಉಳುವರೆ ಗ್ರಾಮದ ಸಣ್ಣಿ ಹನುಮಂತ ಗೌಡ ಎಂಬ ವೃದ್ಧೆಯ ಮೃತದೇಹ 8 ದಿನಗಳ ಬಳಿಕ ಮಂಗಳವಾರ ಸಿಕ್ಕಿದ್ದು ಪೋಸ್ಟ್ ಮಾರ್ಟಂ ಬಳಿಕ ಮೃತದೇಹವನ್ನು ಮನೆಯಿದ್ದ ಜಾಗಕ್ಕೆ ಸಾಗಿಸಿ ಅಂತಿಮ ಸಂಸ್ಕಾರ ನಡೆಸಲು ಪತ್ರಕರ್ತರಾದ ಶಶಿ ಬೆಳ್ಳಾಯರು, ಮೋಹನ್ ಕುತ್ತಾರ್, ಆರಿಫ್ ಯು.ಆರ್. ಗಿರೀಶ್ ಮಳಲಿ ಹಾಗೂ ಶಿವಶಂಕರ್ ನೆರವಾಗಿದ್ದರು

ಈ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದ್ದನ್ನು ಗಮನಿಸಿದ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅವರಿಂದ ಪತ್ರಕರ್ತರ ಮಾಹಿತಿ ಪಡೆದು ಕಚೇರಿಯಲ್ಲಿ ಸನ್ಮಾನಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ಇಂದಾಜೆ ಅವರು ಜಿಲ್ಲಾಧಿಕಾರಿಯವರಿಗೆ ಪತ್ರಕರ್ತರ ಪರಿಚಯ ಮಾಡಿಕೊಟ್ಟರು.


ಬಳಿಕ ಮಾತಾಡಿದ ಜಿಲ್ಲಾಧಿಕಾರಿ ಅವರು, ನಿಮ್ಮ ಈ ಕಾರ್ಯ ಶ್ಲಾಘನೀಯವಾಗಿದೆ. ಇದೊಂದು ದಕ್ಷಿಣ ಕನ್ನಡ ಜಿಲ್ಲೆಗೆ ಹೆಮ್ಮೆ ತರುವಂತಹ ಕಾರ್ಯ. ಮುಂದೆಯೂ ಇಂತಹ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಳ್ಳಿ, ಏನಾದರೂ ಅಗತ್ಯ ನೆರವು ಬೇಕಾದಲ್ಲಿ ಜಿಲ್ಲಾಡಳಿತ ನಿಮ್ಮ ಜೊತೆಗಿದೆ. ನಿಮ್ಮಂತಹ ಉತ್ಸಾಹಿ ತರುಣರ ಅವಶ್ಯಕತೆ ಸಮಾಜಕ್ಕೆ ಇದೆ ಎಂದು ಬೆನ್ನುತಟ್ಟಿದರು. ಅಲ್ಲದೇ ಶಿರೂರು ಮತ್ತು ಉಳುವರೆ ಗ್ರಾಮದ ಸದ್ಯದ ಸ್ಥಿತಿಗತಿಯ ಬಗ್ಗೆ ಪತ್ರಕರ್ತರಿಂದ ಮಾಹಿತಿ ಪಡೆದರು

 Share: | | | | |


ಪುತ್ತೂರು : ಶಾಸಕರ ಇಂದಿನ ಕಾರ್ಯಕ್ರಮ ಸೆ 6

Posted by Vidyamaana on 2023-09-06 04:26:21 |

Share: | | | | |


ಪುತ್ತೂರು : ಶಾಸಕರ ಇಂದಿನ ಕಾರ್ಯಕ್ರಮ ಸೆ 6

ಪುತ್ತೂರು ಶಾಸಕ ಅಶೋಕ್ ಕುಮಾರ್ ಅವರು ಸೆ 6 ರಂದು

ಬೆಳಿಗ್ಗೆ 10 ಗಂಟೆಗೆ ಯಾದವ ಸಮಾಜ ಪಾಣಾಜೆ ಅಷ್ಟಮಿ

10.30 ಕ್ಕೆ  ಇರ್ದೆ ದೂಮಡ್ಕ ಅಷ್ಟಮಿ

11.30 ಕ್ಕೆ ದರ್ಬೆತ್ತಡ್ಕ‌ಅಷ್ಟಮಿ

  12.30ಕುಂಡಡ್ಕ‌ವಿಷ್ಣುಮೂರ್ತಿ ದೇವಸ್ಥಾನ ಅಷ್ಟಮಿ

1.00 ಕ್ಕೆ ಫ್ರೆಂಡ್ಸ್ ಕ್ಲಬ್ ಮಿತ್ತೂರು‌ಅಷ್ಟಮಿ

ಬಳಿಕ ಬೆಂಗಳೂರು ಪ್ರಯಾಣ

ನಿಫಾ ವೈರಸ್ ಎಂದರೇನು? ಲಕ್ಷಣಗಳೇನು ಗೊತ್ತಾ? ಈ ಸೋಂಕಿಗೆ ಚಿಕಿತ್ಸೆ ಇಲ್ಲವೇ?

Posted by Vidyamaana on 2023-09-14 16:49:44 |

Share: | | | | |


ನಿಫಾ ವೈರಸ್ ಎಂದರೇನು? ಲಕ್ಷಣಗಳೇನು ಗೊತ್ತಾ? ಈ ಸೋಂಕಿಗೆ ಚಿಕಿತ್ಸೆ ಇಲ್ಲವೇ?

1998ರಲ್ಲಿ ಮಲೇಷ್ಯಾದ ಕಾಂಪುಂಗ್ ಸುಂಗಾತ್ ನಿಫಾ ವಲಯದಲ್ಲಿ ಕಾಣಿಸಿಕೊಂಡ ಮಾರಕ ಜ್ವರಕ್ಕೆ ಕಾರಣವಾದ ವೈರಸನ್ನು ನಿಫಾ ವೈರಸ್ ಎಂದು ಕರೆಯುತ್ತಾರೆ. ನಿಫಾ ವೈರಸ್ ಬಾವಲಿಗಳ ಮೂಲಕ ಹರಡುತ್ತದೆ. ಈ ಕ್ಷಣದವರೆಗೆ ಈ ರೋಗಕ್ಕೆ ಔಷಧಿ ಕಂಡುಹಿಡಿದಿಲ್ಲ. ಹೀಗಾಗಿ ನಿಫಾ ವೈರಸ್ ಮಾರಣಾಂತಿಕ ಎಂದೇ ಕುಖ್ಯಾತಿ ಪಡೆದಿದೆ.ಈ ವೈರಸ್ ಪತ್ತೆಯಾದರೆ ಶೇ.74ರಷ್ಟು ಸಾವು ಖಚಿತ ಎನ್ನಲಾಗಿದೆ


ವೈರಸ್ ಹೇಗೆ ಹರಡುತ್ತದೆ?: ಸೋಂಕಿರುವ ಬಾವಲಿ ಕಚ್ಚಿದ ಹಣ್ಣನ್ನು ತಿನ್ನವುದರಿಂದ ವೈರಸ್‌ ಹರಡುವ ಸಾಧ್ಯತೆಗಳಿವೆ. ಅಲ್ಲದೆ ಇದೊಂದು ಸಾಂಕ್ರಾಮಿಕ ಕಾಯಿಲೆಯಾದ್ರಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಹೀಗಾಗಿ ಬಾವಲಿಗಳು ಕಚ್ಚಿದ ಸಾಧ್ಯತೆಯಿರುವ ಹಣ್ಣುಗಳನ್ನು ತಿನ್ನಲೇಬೇಡಿ.


ನಿಫಾ ವೈರಸ್ ಲಕ್ಷಣಗಳೇನು?

* ಜ್ವರ, ತಲೆ ನೋವು, ವಾಂತಿ, ತಲೆ ಸುತ್ತುವಿಕೆ

* ಕೆಲವರಲ್ಲಿ ಅಪಸ್ಮಾರದ ಲಕ್ಷಣಗಳು ಕಾಣಿಸುತ್ತವೆ

* ಈ ಲಕ್ಷಣಗಳು ಸಾಮಾನ್ಯವಾಗಿ 10ರಿಂದ 12 ದಿನ ಕಾಣಿಸುತ್ತದೆ

* ಬಳಿಕ ಪ್ರಜ್ಞಾಹೀನರಾಗುತ್ತಾರೆ

* ನಂತರ ಈ ಜ್ವರ ತೀವ್ರವಾಗಿ ಮೆದುಳಿಗೆ ವ್ಯಾಪಿಸುತ್ತದೆ

* ಕೆಲವು ಬಾರಿ ಸೂಕ್ತ ಚಿಕಿತ್ಸೆ ಲಭಿಸದಿದ್ದರೆ ಸಾವು ಸಂಭವಿಸಬಹುದು

ನಿಫಾ ವೈರಸ್ ವಿಶ್ವದ ಯಾವೆಲ್ಲಾ ಭಾಗಗಳಲ್ಲಿ

ಹರಡಿತ್ತು?

ನಿಫಾ ವೈರಸ್ ಮೊದಲು ಕಾಣಿಸಿಕೊಂಡಿದ್ದು, 1998ರಲ್ಲಿ.. ಮಲೇಷ್ಯಾ ಹಾಗೂ ಸಿಂಗಪುರ ದೇಶಗಳಲ್ಲಿ ನೂರಾರು ಜನರನ್ನು ಈ ಮಹಾಮಾರಿ ಬಲಿ ತೆಗೆದಿಕೊಂಡಿತ್ತು. 300ಕ್ಕೂ ಹೆಚ್ಚು ಮಂದಿ ಸೋಂಕಿತರಾಗಿದ್ದರು. ಒಟ್ಟು ಸೋಂಕಿತರ ಪೈಕಿ ಶೇ. 70 ರಿಂದ 86ರಷ್ಟು ಮಂದಿ ಸಾವನ್ನಪ್ಪಿದ್ದರು. 1998 ರಿಂದ 2015ರವರೆಗೆ ವಿಶ್ವಾದ್ಯಂತ ಒಟ್ಟು 600ಕ್ಕೂ ಹೆಚ್ಚು ನಿಫಾ ಪ್ರಕರಣಗಳು ವರದಿಯಾಗಿವೆ ಎಂದು ವಿಶ್ವ ಆರೋಗ್ಯ ಸಂಸ್ತೆ ಹೇಳಿದೆ. 2001ರಲ್ಲಿ ಭಾರತ ಹಾಗೂ ಬಾಂಗ್ಲಾ ದೇಶಗಳಲ್ಲಿ ಒಟ್ಟು 91 ಮಂದಿ ನಿಫಾ ವೈರಸ್ ಸೋಂಕಿಗೆ ತುತ್ತಾಗಿದ್ದರು. ಈ ಪೈಕಿ 62 ಮಂದಿ ಸಾವನ್ನಪ್ಪಿದ್ದರು. 2018ರಲ್ಲಿ


ಕೇರಳದಲ್ಲಿ 21 ಮಂದಿ ನಿಫಾ ಮಾರಿಗೆ600ಕ್ಕೂ ಹೆಚ್ಚು ನಿಫಾ ಪ್ರಕರಣಗಳು ವರದಿಯಾಗಿವ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. 2001ರಲ್ಲಿ ಭಾರತ ಹಾಗೂ ಬಾಂಗ್ಲಾ ದೇಶಗಳಲ್ಲಿ ಒಟ್ಟು 91 ಮಂದಿ ನಿಫಾ ವೈರಸ್ ಸೋಂಕಿಗೆ ತುತ್ತಾಗಿದ್ದರು. ಈ ಪೈಕಿ 62 ಮಂದಿ ಸಾವನ್ನಪ್ಪಿದ್ದರು. 2018ರಲ್ಲಿ ಕೇರಳದಲ್ಲಿ 21 ಮಂದಿ ನಿಫಾ ಮಾರಿಗೆ ಬಲಿಯಾಗಿದ್ದರು. 2019 ಹಾಗೂ 2021ರಲ್ಲೂ ಕೇರಳದಲ್ಲಿ ಕಾಣಿಸಿಕೊಂಡಿದ್ದ ನಿಫಾ, ಇದೀಗ ಮತ್ತೆ ಕೇರಳದಲ್ಲಿ ತಲೆ ಎತ್ತಿದೆ.

ಮಹೇಶ್ ಬಸ್ ಮಾಲಕ ಪ್ರಕಾಶ್ ಶೆಟ್ಟಿ ನೇಣು ಬಿಗಿದು ಆತ್ಮಹತ್ಯೆ

Posted by Vidyamaana on 2023-10-01 20:05:52 |

Share: | | | | |


ಮಹೇಶ್ ಬಸ್ ಮಾಲಕ ಪ್ರಕಾಶ್ ಶೆಟ್ಟಿ ನೇಣು ಬಿಗಿದು ಆತ್ಮಹತ್ಯೆ

ಮಂಗಳೂರು : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಜನಮನ್ನಣೆಗಳಿಸಿದ ಖಾಸಗಿ ಬಸ್ಸೊಂದರ ಮಾಲಕ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ.

ಮಹೇಶ್ ಬಸ್ ಮಾಲಕ ಪ್ರಕಾಶ್ (40) ಮೃತರು.

ಮಹೇಶ್ ಬಸ್ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರತಿನಿತ್ಯ ಓಡಾಡುತ್ತಿದ್ದು, ಜನಮನ್ನಣೆಗಳಿಸಿದ ಖಾಸಗಿ ಬಸ್ ಗಳಲ್ಲಿ ಒಂದಾಗಿದೆ.


ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.

ಮೃತರನ್ನು ಮಹೇಶ್ ಬಸ್ ಮಾಲೀಕ ಜಯರಾಮ ಶೇಖ ಎಂಬವರ ಪುತ್ರ ಪ್ರಕಾಶ್ ಶೆಟ್ಟಿ ಎಂದು ಗುರುತಿಸಲಾಗಿದೆ. ಖಾಸಗಿ ಬಸ್ ಕ್ಷೇತ್ರದಲ್ಲಿ ತುಳುನಾಡಿನಲ್ಲಿ ಹೆಸರುವಾಸಿಯಾದ ಮಹೇಶ್ ಬಸ್ ನೂರಾರು ಬಸ್ ಗಳನ್ನು ಹೊಂದಿದೆ.


ಫ್ಲ್ಯಾಟ್‌ನಲ್ಲಿ ಪತ್ನಿ ಮತ್ತು ಪುತ್ರಿಯೊಂದಿಗೆ ವಾಸವಾಗಿದ್ದ ಅವರು ರವಿವಾರ ಬೆಳಗ್ಗೆ ತನ್ನ ರೂಮ್‌ಗೆ ಹೋಗಿದ್ದರು. ಮಧ್ಯಾಹ್ನ ಊಟಕ್ಕೂ ಹೊರಗೆ ಬಂದಿರಲಿಲ್ಲ. ಪತ್ನಿ ಕರೆಯಲು ಹೋದಾಗ ಬಾಗಿಲು ತೆರೆಯಲಿಲ್ಲ. ಇದರಿಂದ ಸಂಶಯಗೊಂಡು ಬಾಗಿಲು ಒಡೆದು ನೋಡಿದಾಗ ಪ್ರಕಾಶ್‌ ಫ್ಯಾನ್‌ಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ.

ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ



ಸುರತ್ಕಲ್: ಆಯತಪ್ಪಿ ನದಿಗೆ ಬಿದ್ದ ಬಜ್ಪೆ ನಿವಾಸಿ ಶಾಕಿರ್ ಮೃತ್ಯು

Posted by Vidyamaana on 2023-11-21 07:18:37 |

Share: | | | | |


ಸುರತ್ಕಲ್: ಆಯತಪ್ಪಿ ನದಿಗೆ ಬಿದ್ದ ಬಜ್ಪೆ ನಿವಾಸಿ ಶಾಕಿರ್ ಮೃತ್ಯು

ಸುರತ್ಕಲ್: ನದಿಯಲ್ಲಿ ಈಜಲು ತೆರಳಿದ್ದ ವೇಳೆ ಆಯತಪ್ಪಿ ನದಿಗೆ ಬಿದ್ದು ಯುವಕನೋರ್ವ ಮೃತಪಟ್ಟಿರುವ ಘಟನೆ ಸುರತ್ಕಲ್ ಮರವೂರು ರೈಲ್ವೇ ಸೇತುವೆಯ ಕೆಳಗಿನ ನದಿಯಲ್ಲಿ ಸೋಮವಾರ ನಡೆದಿದೆ.



ಮೃತರನ್ನು ಮೂಲತಃ ಬಜ್ಪೆ ನಿವಾಸಿ ಪ್ರಸ್ತುತ ಸುರತ್ಕಲ್‌ ಸಮೀಪದ ಚೊಕ್ಕಬೊಟ್ಟುವಿನಲ್ಲಿ ವಾಸವಾಗಿರುವ ಶಾಕಿರ್‌ (30) ಎಂದು ತಿಳಿದುಬಂದಿದೆ.


ಮೃತ ಶಾಕಿರ್‌ ತನ್ನ 4 ಮಂದಿ ಸ್ನೇಹಿತರೊಂದಿಗೆ ಮರವೂರು ರೈಲ್ವೇ ಸೇತುವೆಯ ಕೆಳ ಭಾಗಕ್ಕೆ ಈಜಲೆಂದು ತೆರಳಿದ್ದರು. ಈ ವೇಳೆ ಶಾಕಿರ್‌ ಕಾಲು ಜಾರಿ ಆಯತಪ್ಪಿ ನದಿಗೆ ಬಿದ್ದು ನೀರಿನಲ್ಲಿ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ಬಳಿಕ ಜೊತೆಗಿದ್ದ ಸ್ನೇಹಿತರು ಪೊಲೀಸರು ಮತ್ತು ಸಂಬಂಧಿಕರಿಗೆ ಮಾಹಿತಿ ನೀಡಿದ್ದಾರೆ.


ಘಟನೆ ನಡೆದ ತಕ್ಷಣ ಸ್ಥಳಕ್ಕೆ ಬಂದ ಕಾವೂರು ಪೊಲೀಸರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಬಳಿಕ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಮೇಲೆತ್ತಿದ್ದಾರೆ ಎಂದು ತಿಳಿದು ಬಂದಿದೆ.


ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಈ ಬಗ್ಗೆ ಕಾವೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇಂದು ಜು.8 ದ.ಕ. ಜಿಲ್ಲೆಯ ಶಾಲೆ ಕಾಲೇಜುಗಳಿಗೆ ರಜೆ ಇಲ್ಲ: ಡಿಸಿ ಮುಲ್ಲೈ ಮುಗಿಲನ್

Posted by Vidyamaana on 2023-07-07 23:11:51 |

Share: | | | | |


ಇಂದು ಜು.8 ದ.ಕ. ಜಿಲ್ಲೆಯ ಶಾಲೆ ಕಾಲೇಜುಗಳಿಗೆ ರಜೆ ಇಲ್ಲ: ಡಿಸಿ ಮುಲ್ಲೈ ಮುಗಿಲನ್

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವುದರಿಂದ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸುವ ಅನಿವಾರ್ಯತೆ ಕಂಡುಬರುವುದಿಲ್ಲ ಎಂದು ದ.ಕ. ಜಿಲ್ಲಾಧಿಕಾರಿ ಮುತ್ತೈ ಮುಗಿಲನ್  ತಿಳಿಸಿದ್ದಾರೆ.


ಸೂಕ್ತವಾದ ರೀತಿಯಲ್ಲಿ ಎಚ್ಚರಿಕೆ ಮತ್ತು ವಿದ್ಯಾರ್ಥಿಗಳ ಸುರಕ್ಷತೆಯನ್ನು ಪರಿಶೀಲಿಸಿಕೊಂಡು ಶಾಲೆ, ಕಾಲೇಜು ನಡೆಸಲು ಜಿಲ್ಲಾಧಿಕಾರಿ ಸೂಚಿಸಿರುತ್ತಾರೆ

ಉಡುಪಿಯಲ್ಲಿ ತಾಯಿ, ಮಕ್ಕಳ ಕಗ್ಗೋಲೆ ಪ್ರಕರಣ: ಪೊಲೀಸ್ ಇಲಾಖೆಗೆ ಕೃತಜ್ಞತೆ ಸಲ್ಲಿಸಿದ ಕುಟುಂಬ

Posted by Vidyamaana on 2023-11-18 20:00:07 |

Share: | | | | |


ಉಡುಪಿಯಲ್ಲಿ ತಾಯಿ, ಮಕ್ಕಳ ಕಗ್ಗೋಲೆ  ಪ್ರಕರಣ: ಪೊಲೀಸ್ ಇಲಾಖೆಗೆ ಕೃತಜ್ಞತೆ ಸಲ್ಲಿಸಿದ ಕುಟುಂಬ

ಉಡುಪಿ : ನೇಜಾರು ತಾಯಿ ಮತ್ತು ಮಕ್ಕಳ ಕೊಲೆ ಪ್ರಕರಣವನ್ನು ಕ್ಷಿಪ್ರವಾಗಿ ಪತ್ತೆ ಮಾಡಿದ ಉಡುಪಿ ಪೊಲೀಸ್ ಇಲಾಖೆಯನ್ನು ಮೃತರ ಕುಟುಂಬ ಇಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್ ಅವರನ್ನು ಭೇಟಿಯಾಗಿ ಅಭಿನಂದಿಸಿತು.


ನೇಜಾರಿನ ನೂರ್ ಮುಹಮ್ಮದ್, ಅವರ ಮಗ ಅಸಾದ್,ಮೃತ ಹಸೀನಾರ ಸಹೋದರ ಅಶ್ರಫ್, ಇವರ ಮಗಳು ಫಾತಿಮಾ ಅಸ್ಟಾ ಸಂಬಂಧಿಕ ಯಾಸೀನ್, ಕಾಂಗ್ರೆಸ್ ಮುಖಂಡ ಎಂ.ಎ.ಗಫೂರ್ ಅವರು ಎಸ್ಪಿಯವರನ್ನು ಭೇಟಿಯಾಗಿ ಅಭಿನಂದಿಸಿದರು.ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಎಂ.ಎ.ಗಫೂರ್, ತನಿಖೆ ತೀವ್ರಗತಿಯಲ್ಲಿ ನಡೆಯುತ್ತಿದೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ. ನೂರ್ ಮುಹಮ್ಮದ್ ತಮ್ಮ ಕುಟುಂಬದ ಜೊತೆ ಬೆರೆತು ಸಮಯ ಕಳೆಯುವಂತೆ ಮತ್ತು ಮಗನಿಗೆ ಭವಿಷ್ಯದ ಕುರಿತು ಕೆಲವು ಮಾರ್ಗದರ್ಶನ ನೀಡಿದರು ಎಂದು ತಿಳಿಸಿದರು.


ಅದೇ ರೀತಿ ಸಮಾಜದ ಸುರಕ್ಷತೆ, ಸೌಹಾರ್ದತೆ ಬಗ್ಗೆಯೂ ಎಸ್ಪಿಯವರ ಜೊತೆ ಚರ್ಚೆ ಮಾಡಿದ್ದೇವೆ.


ಸಮಾಜದಲ್ಲಿ ಶಾಂತಿ ಸಾಮರಸ್ಯ ನಿರ್ಮಾಣವಾಗಿ, ಜನ ಭಯಭೀತಿಯಿಂದ ಹೊರಬರಬೇಕು. ಮಹಿಳೆಯರು ಸುರಕ್ಷಿತವಾಗಿ ಕೆಲಸಕ್ಕೆ ಹೋಗುವಂತೆ ಮಾಡಬೇಕು ಎಂಬುದರ ಕುರಿತು ಎಸ್ಪಿ ಜೊತೆ ಮಾತುಕತೆ ನಡೆಸಿದ್ದೇವೆ ಎಂದು ಅವರು ಹೇಳಿದರು

Recent News


Leave a Comment: