ವಿಟ್ಲ : ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅಪ್ಪ-ಅಮ್ಮ ಆಟ ಆಡಲು ಬಂದ ಜೋಡಿ ಜನ ನೋಡಿ ಪರಾರಿ!

ಸುದ್ದಿಗಳು News

Posted by vidyamaana on 2024-07-24 23:15:54 |

Share: | | | | |


ವಿಟ್ಲ : ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅಪ್ಪ-ಅಮ್ಮ ಆಟ ಆಡಲು ಬಂದ ಜೋಡಿ ಜನ ನೋಡಿ ಪರಾರಿ!

ವಿಟ್ಲ : ಕಳೆಂಜಿಮಲೆ ರಕ್ಷಿತಾರಣ್ಯಕ್ಕೆ ಯುವತಿಯೋರ್ವಳನ್ನು ಯುವಕನೋರ್ವ ಬೈಕ್ ನಲ್ಲಿ ಕಾಡಿಗೆ ಕರೆದುಕೊಂಡು ಬಂದಿದ್ದು, ಈ ಬಗ್ಗೆ ತಿಳಿಯುತ್ತಲೇ ಹಲವಾರು ಮಂದಿ ಕಾಡಿನಲ್ಲಿ ಹುಡುಕಾಡಿದ್ದಾರೆನ್ನಲಾಗಿದೆ.

ಜನ ಸೇರುತ್ತಿದ್ದಂತೆ ಅರೆ ನಗ್ನ ಸ್ಥಿತಿಯಲ್ಲಿ ಬೈಕ್, ಬಟ್ಟೆಗಳನ್ನು ಸ್ಥಳದಲ್ಲಿಯೇ ಬಿಟ್ಟು ಯುವಕ-ಯುವತಿ ಪರಾರಿಯಾಗಿದ್ದಾರೆನ್ನಲಾಗಿದೆ.

ಸಾರ್ವಜನಿಕರ ಮಾಹಿತಿ ಹಿನ್ನಲೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಕಾಡಿನಲ್ಲಿದ್ದ ಬೈಕ್, ಯುವತಿಯ ಬ್ಯಾಗ್, ಮಾತ್ರೆಗಳು, ಕಾಂಡೋಮ್, ಚಪ್ಪಲಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

 Share: | | | | |


ಹಾಲಿ ಶಾಸಕರು ಮಾಜಿ ಶಾಸಕರ ಬಗ್ಗೆ ಅವಹೇಳನಕಾರಿಯಾಗಿ ಮಾತಾನಾಡುವುದು, ಜನತೆಗೆ ಸುಳ್ಳು ಮಾಹಿತಿ ನೀಡುವುದು ಘನತೆಗೆ ತಕ್ಕುದಲ್ಲ’ – ರಾಧಾಕೃಷ್ಣ ಆಳ್ವ

Posted by Vidyamaana on 2024-01-13 21:27:38 |

Share: | | | | |


ಹಾಲಿ ಶಾಸಕರು ಮಾಜಿ ಶಾಸಕರ ಬಗ್ಗೆ ಅವಹೇಳನಕಾರಿಯಾಗಿ ಮಾತಾನಾಡುವುದು, ಜನತೆಗೆ ಸುಳ್ಳು ಮಾಹಿತಿ ನೀಡುವುದು ಘನತೆಗೆ ತಕ್ಕುದಲ್ಲ’ – ರಾಧಾಕೃಷ್ಣ ಆಳ್ವ

ಪುತ್ತೂರು : ಆರಂಭದ ಒಂದು ಮಳೆಗೆ ಕೊಡೆ ಹರಿದಂತೆ ಎಂಬ ಗಾದೆಯಂತೆ ಶಾಸಕರಾಗಿ ಮೊದಲ ಅರ್ಧ ವರ್ಷದಲ್ಲಿಯೇ ಈ ಹಿಂದಿನ ಶಾಸಕರು ತಂದಿರುವ ಅನುದಾನದ ಕಾಮಗಾರಿಯು ಶಿಲಾನ್ಯಾಸವಾಗಿ ಕೆಲಸ ಪ್ರಗತಿಯಲ್ಲಿರುವಾಗಲೇ ಹಾಲಿ ಶಾಸಕರು ಮತ್ತೊಮ್ಮೆ ಶಂಕುಸ್ಥಾಪನೆ ಮಾಡುತ್ತಾ ಇರುವುದು ಜನಸಾಮಾನ್ಯರ ನಡುವಿನಲ್ಲಿ ನಗೆಪಾಟಲಿಗೀಡಾಗಿರುವುದಂತು ಸತ್ಯ ಎಂದು ಪುತ್ತೂರು ಗ್ರಾಮಾಂತರ ಮಂಡಲದ ಪದಾಧಿಕಾರಿಗಳ ಸಭೆಯಲ್ಲಿ ಅಧ್ಯಕ್ಷರಾದ ರಾಧಕೃಷ್ಣ ಆಳ್ವ ಹೇಳಿದರು.


ಪುತ್ತೂರು ಕ್ಷೇತ್ರಾದ್ಯಂತ ಈಗ ನಡೆಯುತ್ತಿರುವ ಎಲ್ಲಾ ಕಾಮಗಾರಿಗಳು ಅದರಲ್ಲಿಯೂ ಉಪ್ಪಿನಂಗಡಿಯ ದ್ವಿಪದ ರಸ್ತೆಯಾಗಿರಲಿ., ಬಿಳಿಯೂರುಕಟ್ಟೆ-ಸಾಜ-ಕುದ್ದುಪದವು ರಸ್ತೆಯ ಕಾಮಗಾರಿಯಾಗಿರಲಿ.., ಎಲ್ಲವೂ ಕೂಡ ಬಿಜೆಪಿ ಸರಕಾರ ಇರುವಾಗ ಬಂದಿರುವಂತ ಅನುದಾನಗಳು ಆದರೆ ಹಾಲಿ ಶಾಸಕರು ಹೋದಲ್ಲಿ ಎಲ್ಲಾ ಮಾಜಿ ಶಾಸಕರನ್ನು ಅವಹೇಳನಕಾರಿಯಾಗಿ ಮಾತಾನಾಡುವುದು ಮತ್ತು ಜನರಿಗೆ ಸುಳ್ಳು ಮಾಹಿತಿಯನ್ನು ನೀಡುವುದು ಘನತೆಗೆ ತಕ್ಕುದಲ್ಲ ಎಂದು ಹೇಳಿದರು.ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠೆಯ ಅಂಗವಾಗಿ ಜನವರಿ14ರಿಂದ 21ರವರೆಗೆ ದೇವಸ್ಥಾನ, ದೈವಸ್ಥಾನ, ಮಠ ಮಂದಿರಗಳ ಸ್ವಚ್ಛತೆಯಲ್ಲಿ ಕಾರ್ಯಕರ್ತರು ,ಪದಾಧಿಕಾರಿಗಳು ಭಾಗವಹಿಸಬೇಕು ಮತ್ತು ಜ.22 ಪ್ರತಿಷ್ಠಾ ದಿನದಂದು ಎಲ್ಲಾ ಹಿಂದೂ ಮನೆಗಳಲ್ಲಿ ಪ್ರಧಾನಿಯವರ ಆಶಯದಂತೆ ದೀಪ ಬೆಳಗಿಸುವಂತೆ ಈ ಸಂದರ್ಭದಲ್ಲಿ ವಿನಂತಿಸಿದರು.


ಮಂಡಲದ ಪ್ರ.ಕಾರ್ಯದರ್ಶಿ ನಿತೀಶ್ ಶಾಂತಿವನ ಸ್ವಾಗತಿಸಿದರು.


ಮಂಡಲ ಉಪಾಧ್ಯಕ್ಷರಾದ ಹರಿಪ್ರಸಾದ್ ಯಾದವ್ , ಮುಕುಂದ ಬಜತ್ತೂರು, ಅರುಣ್ ವಿಟ್ಲ, ಮೀನಾಕ್ಷಿ ಮಂಜುನಾಥ್,ಉಷಾ ಮುಳಿಯ,ವಿಜಯ ಕೋರಂಗ, ಖಜಾಂಜಿ ರಮೇಶ್ ಭಟ್, ಕಾರ್ಯದರ್ಶಿ ರಮಣಿ ಗಾಣಿಗ, ಲೋಹಿತ್ ಅಮ್ಚಿನಡ್ಕ, ವಿವಿಧ ಮೋರ್ಚಾ ಅಧ್ಯಕ್ಷ ಕಾರ್ಯದರ್ಶಿಗಳಾದ ಯಶಸ್ವಿನಿ ಶಾಸ್ತ್ರಿ, ಯಶೋಧ ಗೌಡ, ಸುರೇಶ್ ಕಣ್ಣರಾಯ, ಪುನೀತ್ ಮಾಡತ್ತಾರು, ನವೀನ್ ಪಡ್ನೂರು,ಸುನೀಲ್ ದಡ್ಡು, ಮಹಾಶಕ್ತಿ ಕಾರ್ಯದರ್ಶಿಗಳಾದ ಸುರೇಶ್ ಅತ್ರಮಜಲು, ದಯಾನಂದ ಶೆಟ್ಟಿ ಉಜ್ರೆಮಾರು ಮೊದಲಾದವರು ಉಪಸ್ಥಿತರಿದ್ದರು.ಮಂಡಲ ಪ್ರ.ಕಾರ್ಯದರ್ಶಿ ಪುರುಷೋತ್ತಮ ಮಂಗ್ಲಿಮನೆ ಧನ್ಯವಾದ ಸಲ್ಲಿಸಿದರು.

ವಾರ್ಡ್ ಸಮಸ್ಯೆ ಪರಿಹರಿಸದ ನಗರಸಭೆ ಸದಸ್ಯನನ್ನು ಕೂಡಿ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಸ್ಥಳೀಯರು

Posted by Vidyamaana on 2023-07-27 13:13:01 |

Share: | | | | |


ವಾರ್ಡ್ ಸಮಸ್ಯೆ ಪರಿಹರಿಸದ ನಗರಸಭೆ ಸದಸ್ಯನನ್ನು ಕೂಡಿ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಸ್ಥಳೀಯರು

ಗದಗ: ವಾರ್ಡ್ ಸಮಸ್ಯೆ ಪರಿಹರಿಸಲು ನಿರ್ಲಕ್ಷಿಸಿದ ಆರೋಪದ ಮೇಲೆ ಸ್ಥಳೀಯ ನಿವಾಸಿಗಳು ನಗರಸಭೆ ಸದಸ್ಯನನ್ನು ಗಂಟೆಗೂ ಅಧಿಕ ಕಾಲ ಕೊಠಡಿಯಲ್ಲಿ ಕೂಡಿ ಹಾಕಿದ ಘಟನೆ ಸ್ಥಳೀಯ ಬಣ್ಣದ ನಗರದಲ್ಲಿ ಗುರುವಾರ ನಡೆದಿದೆ.


ನಗರಸಭೆ ಮೂರನೇ ವಾರ್ಡಿನ ಸದಸ್ಯ ಮಾಧುಸಾ ಮೇರವಾಡೆ ಅವರನ್ನು ಸ್ಥಳೀಯ ಮಹಿಳೆಯರು ಕೂಡಿ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಆಗಮಿಸಿ ಸದಸ್ಯ ಮಾಧುಸಾ ಅವರನ್ನು ಬಿಡುಗಡೆಗೊಳಿಸಿದರು.


ನಗರಸಭೆ 3ನೇ ವಾರ್ಡ್ ನ ಬಣ್ಣದ ನಗರವು ಮೂಲಸೌಲಭ್ಯಗಳಿಂದ ವಂಚಿತವಾಗಿದೆ. ಕುಡಿಯುವ ನೀರು ಸಮರ್ಪಕವಾಗಿ ಪೂರೈಕೆಯಾಗುತ್ತಿಲ್ಲ. ರಸ್ತೆಗಳು ಹದಗೆಟ್ಟಿವೆ. ಬೀದಿ ದೀಪಗಳಿಲ್ಲದೇ ಸ್ಥಳೀಯ ನಿವಾಸಿಗಳಿಗೆ ಸಂಚರಿಸಲು ಸಮಸ್ಯೆ ಆಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರುಬಣ್ಣದ ನಗರವು ಮೂಲಸೌಲಭ್ಯಗಳನ್ನು ಕಲ್ಪಿಸುವಂತೆ ನಗರಸಭೆ ಸದಸ್ಯ ಮಾಧುಸಾ ಮೇರವಾಡೆ ಅವರಿಗೆ ಹಲವಾರು ಬಾರಿ ಗಮನಕ್ಕೆ ತಂದಿದ್ದರೂ, ಸಮಸ್ಯೆಗೆ ಸ್ಪಂಧಿಸದ ಕಾರಣ ಆಕ್ರೋಶಗೊಂಡ ಸ್ಥಳೀಯ ನಿವಾಸಿಗಳು ನಗರದ ಈಶ್ವರ ಸೇವಾ ಟ್ರಸ್ಟ್ ಕಮೀಟಿ ಕಚೇರಿಯ ಕೊಠಡಿಯಲ್ಲಿ ಕೂಡಿಹಾಕಿದರು. ಇದರಿಂದ ವಿಚಲಿತಗೊಂಡ ಸದಸ್ಯ ಮಾಧುಸಾ ಅವರು ವಿಷಯ ತಿಳಿಸಲು ನಗರಸಭೆ ಪೌರಾಯುಕ್ತರಿಗೆ ದೂರವಾಣಿ ಮೂಲಕ ಕರೆ ಮಾಡಿದರು. ಆದರೆ, ಆಯುಕ್ತರು ಕರೆ ಸ್ವೀಕರಿಸಿಲ್ಲ.

ಉಡುಪಿ ಹತ್ಯಾಕಾಂಡ: ಪ್ರವೀಣ್ ಚೌಗುಲೆಯ ನ್ಯಾಯಾಂಗ ಬಂಧನ ಮತ್ತೆ ವಿಸ್ತರಣೆ

Posted by Vidyamaana on 2023-12-18 20:26:16 |

Share: | | | | |


ಉಡುಪಿ ಹತ್ಯಾಕಾಂಡ: ಪ್ರವೀಣ್ ಚೌಗುಲೆಯ ನ್ಯಾಯಾಂಗ ಬಂಧನ ಮತ್ತೆ ವಿಸ್ತರಣೆ

ಉಡುಪಿ: ನೇಜಾರಿನಲ್ಲಿ ತಾಯಿ ಮತ್ತು ಮೂರು ಮಕ್ಕಳನ್ನು ಅಮಾನುಷವಾಗಿ ಹತ್ಯೆ ಮಾಡಿದ ಪ್ರಕರಣದ ಆರೋಪಿ ಪ್ರವೀಣ್ ಅರುಣ್ ಚೌಗುಲೆಯ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆಯಾಗಿದೆ. ಡಿ.30ರವರೆಗೆ ನ್ಯಾಯಾಂಗ ಬಂಧನವನ್ನು ವಿಸ್ತರಿಸಿ ಉಡುಪಿಯ ಪ್ರಧಾನ ಸಿವಿಲ್ ನ್ಯಾಯಾಧೀಸರು ಆದೇಶಿಸಿದ್ದಾರೆ.


ಡಿ.5ರಂದು ನ್ಯಾಯಾಲಯ ಡಿ.18ರವರೆಗೆ ನ್ಯಾಯಾಂಗ ಬಂಧನವನ್ನು ವಿಸ್ತರಿಸಲಾಗಿತ್ತು. ಇಂದಿಗೆ ನ್ಯಾಯಾಂಗ ಬಂಧನ ಅವಧಿ ಮುಗಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಆರೋಪಿಯನ್ನು ವಿಡಿಯೋ ಕಾನ್ಸರೆನ್ಸ್ ಮೂಲಕ ನ್ಯಾಯಾಧೀಶೆ ದೇವ ಅವರ ಮುಂದೆ ಹಾಜರುಪಡಿಸಲಾಗಿತ್ತು.


ನ್ಯಾಯಾಧೀಶರು ಆರೋಪಿಯ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ ವಿಸ್ತರಿಸಿ, ಡಿ.30ಕ್ಕೆ ಹಾಜರುಪಡಿಸುವಂತೆ ಆದೇಶ ನೀಡಿದ್ದಾರೆ.

ಬೆಳ್ತಂಗಡಿ : ಚಾರ್ಮಾಡಿ ಘಾಟ್ ನಲ್ಲಿ ಬಸ್ - ಸ್ಕೂಟರ್ ಅಪಘಾತ: ಇರ್ಫಾನ್ ಸ್ಥಳದಲ್ಲೇ ಮೃತ್ಯು-ಅವಿನ್ ಗಂಭೀರ

Posted by Vidyamaana on 2023-06-05 14:58:38 |

Share: | | | | |


ಬೆಳ್ತಂಗಡಿ : ಚಾರ್ಮಾಡಿ ಘಾಟ್ ನಲ್ಲಿ ಬಸ್ - ಸ್ಕೂಟರ್ ಅಪಘಾತ: ಇರ್ಫಾನ್ ಸ್ಥಳದಲ್ಲೇ ಮೃತ್ಯು-ಅವಿನ್ ಗಂಭೀರ

ಚಾರ್ಮಾಡಿ : ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ಮೂರನೇ ತಿರುವಿನಲ್ಲಿ ಬಸ್ ಮತ್ತು ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ಜೂ.5ರಂದು ನಡೆದಿದೆ.

ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ರಸ್ತೆಯ ಮೂಲಕವಾಗಿ ಚಿಕ್ಕಮಗಳೂರು ಕಡೆ ಹೋಗುತ್ತಿದ್ದ ಸರಕಾರಿ ಬಸ್ ಹಾಗೂ ಚಾರ್ಮಾಡಿ ಕಡೆ ಬರುತ್ತಿದ್ದ ಸ್ಕೂಟರ್ ನಡುವೆ ಅಪಘಾತ ಸಂಭವಿಸಿದ್ದು, ಸ್ಕೂಟರ್‌ನಲ್ಲಿದ್ದ ಬಾಳೆಹೊನ್ನೂರಿನ ಮಹಾಗುಂಡಿ ನಿವಾಸಿ ಇರ್ಫಾನ್(21ವ) ಸ್ಥಳದಲ್ಲೇ ಸಾವನ್ನಪ್ಪಿದ್ದು, ಸಹಸವಾರ ಬಾಳೆಹೊನ್ನೂರು ನಿವಾಸಿ ಅವಿನ್ (22ವ) ಗಂಭೀರ ಗಾಯಗೊಂಡಿದ್ದಾರೆ.

ಇವರನ್ನು ಚಾರ್ಮಾಡಿಯ ಸಮಾಜ ಸೇವಕ ಸಿನಾನ್ ತಂಡ ಅಂಬುಲೆನ್ಸ್ ಮೂಲಕ ಮಂಗಳೂರು ಆಸ್ಪತ್ರೆಗೆ ಸಾಗಿಸಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರಿನಲ್ಲಿ ನರ್ಸಿಂಗ್ ಓದುತಿದ್ದ ಕಾಸರಗೋಡು ಮೂಲದೆ ವಿದ್ಯಾರ್ಥಿನಿ ಫಾತಿಮಾ ಆತ್ಮಹತ್ಯೆ

Posted by Vidyamaana on 2023-03-18 12:39:37 |

Share: | | | | |


ಮಂಗಳೂರಿನಲ್ಲಿ ನರ್ಸಿಂಗ್ ಓದುತಿದ್ದ ಕಾಸರಗೋಡು ಮೂಲದೆ ವಿದ್ಯಾರ್ಥಿನಿ ಫಾತಿಮಾ ಆತ್ಮಹತ್ಯೆ

ಕಾಸರಗೋಡು: ನರ್ಸಿಂಗ್ ವಿದ್ಯಾರ್ಥಿನಿಯೋರ್ವಳು ನೇಣು ಬಿಗುದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಪೆರಿಯ ಚಾಳಿಂಗಲ್ ಎನ್ನಪಾರ ನಿವಾಸಿ ಫಾತಿಮಾ(18) ಎಂದು ಗುರುತಿಸಲಾಗಿದೆ. ಫಾತಿಮಾ ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.

ಮಂಗಳೂರಿನಲ್ಲಿ ನರ್ಸಿಂಗ್ ಓದುತ್ತಿದ್ದ ಫಾತಿಮಾ ಶುಕ್ರವಾರ ಕಾಲೇಜಿಗೆ ಹೋಗಿರಲಿಲ್ಲ. ಸಂಜೆ ಕಾಞಂಗಾಡ್‌ನಿಂದ ತಾಯಿ ಮತ್ತು ಅವರ ಸಹೋದರಿ ಹಿಂದಿರುಗಿದಾಗ ಫಾತಿಮಾ ಮಲಗುವ ಕೋಣೆಯಲ್ಲಿ  ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.ಫಾತಿಮಾಳಿಗೆ ಇತ್ತೀಚೆಗಷ್ಟೇ ಗಲ್ಫ್ ವ್ಯಕ್ತಿಯೊಂದಿಗೆ ವಿವಾಹವಾಗಿತ್ತು. ಮದುವೆಯ ನಂತರ ನನ್ನ ಓದು ನಿಲ್ಲುತ್ತದೆ ಎಂಬ ಆತಂಕದಿಂದ ಮನನೊಂದ ಆಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಫಾತಿಮಾಳ ತಂದೆ ಶಂಶುದ್ದೀನ್ ಕೋವಿಡ್ ಸಮಯದಲ್ಲಿ ಅನಾರೋಗ್ಯದಿಂದ ನಿಧನರಾಗಿದ್ದರು. ಮನೆಮಗಳ ಅಗಲುವಿಕೆ ಕುಟುಂಬಸ್ಥರನ್ನು ಕಣ್ಣೀರಲ್ಲಿ ಮುಳುಗಿಸಿದೆ.

ಆಯುಷ್ಮಾನ್ ಭಾರತ್ ಕಾರ್ಡ್ ಹೇಗೆ ಆರೋಗ್ಯ ರಕ್ಷಣೆ ನೀಡುತ್ತದೆ ; ಯಾರು ಅರ್ಹರು.? ಇಲ್ಲಿದೆ ಡಿಟೈಲ್ಸ್

Posted by Vidyamaana on 2024-02-11 07:43:09 |

Share: | | | | |


ಆಯುಷ್ಮಾನ್ ಭಾರತ್ ಕಾರ್ಡ್  ಹೇಗೆ ಆರೋಗ್ಯ ರಕ್ಷಣೆ ನೀಡುತ್ತದೆ ; ಯಾರು ಅರ್ಹರು.? ಇಲ್ಲಿದೆ ಡಿಟೈಲ್ಸ್

ನವದೆಹಲಿ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಭಾರತ ಸರ್ಕಾರದೊಂದಿಗೆ ಆಯುಷ್ಮಾನ್ ಭಾರತ್ ಕಾರ್ಡ್ ಯೋಜನೆಯಡಿ ಪಿಎಂ ಜನ ಆರೋಗ್ಯ ಯೋಜನೆಯನ್ನ ಪ್ರಾರಂಭಿಸಿತು. ಸರ್ಕಾರಿ ಮತ್ತು ಇತರ ಸಂಯೋಜಿತ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಪಡೆಯಬಹುದಾದ ಅರ್ಹ ವ್ಯಕ್ತಿಗಳಿಗೆ ಈ ಕಾರ್ಡ್ ನೀಡಲಾಗುತ್ತದೆ, ಇದು 5 ಲಕ್ಷ ರೂ.ಗಳವರೆಗೆ ರಕ್ಷಣೆಯನ್ನ ನೀಡುತ್ತದೆ.ಈ ಕಾರ್ಡ್ ಪಡೆಯಲು, ಒಬ್ಬರು ನೋಂದಾಯಿಸಿಕೊಳ್ಳಬೇಕು ಮತ್ತು ಕೆಲವು ಅರ್ಹತಾ ಮಾನದಂಡಗಳನ್ನ ಪೂರೈಸಬೇಕು. ಅನುಮೋದನೆಯ ನಂತ್ರ ಅರ್ಜಿದಾರರು ಆರೋಗ್ಯ ಕಾರ್ಡ್ನ್ನ ಪಡೆಯುತ್ತಾರೆ ಮತ್ತು ನಂತ್ರ ಯೋಜನೆಯಡಿ ಪ್ರಯೋಜನಗಳನ್ನ ಪಡೆಯಬಹುದು.


ಅರ್ಜಿ ಸಲ್ಲಿಸುವ ಮೊದಲು, ಆಯುಷ್ಮಾನ್ ಭಾರತ್ ಕಾರ್ಡ್ಗೆ ಅರ್ಹತೆ ಪಡೆಯಲು ನಿಮ್ಮ ಬಳಿ ಎಲ್ಲಾ ಅಗತ್ಯ ದಾಖಲೆಗಳಿವೆ ಎಂದು ಖಚಿತಪಡಿಸಿಕೊಳ್ಳುವುದು ಅತ್ಯಗತ್ಯ. ಅರ್ಹತಾ ಮಾನದಂಡಗಳು ಈ ಕೆಳಗಿನವುಗಳನ್ನ ಒಳಗೊಂಡಿವೆ.


ಅರ್ಹತಾ ಮಾನದಂಡ.?

* ವಾರ್ಷಿಕ ಆದಾಯ 2.5 ಲಕ್ಷ ರೂ.ಗಿಂತ ಕಡಿಮೆ.

* ಕುಟುಂಬದಲ್ಲಿ 16 ವರ್ಷಕ್ಕಿಂತ ಮೇಲ್ಪಟ್ಟ ಆದಾಯ ಗಳಿಸುವ ಸದಸ್ಯರ ಅನುಪಸ್ಥಿತಿ.

* ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡದ ವರ್ಗಕ್ಕೆಸೇರಿದವರು.

* ಶಾಶ್ವತ ನಿವಾಸವಿಲ್ಲದೆಯೂ ಅರ್ಜಿ ಸಲ್ಲಿಸುವ ಸಾಮರ್ಥ್ಯ.


ಅರ್ಜಿ ಪ್ರಕ್ರಿಯೆಗಾಗಿ, ನೀವು ಈ ಕೆಳಗಿನ ಅಗತ್ಯ ದಾಖಲೆಗಳನ್ನ ಹೊಂದಿದ್ದೀರಿ ಎಂದು ಖಚಿತಪಡಿಸಿಕೊಳ್ಳಿ.!

* ಆಧಾರ್ ಕಾರ್ಡ್

* ವಾಸಸ್ಥಳ ಪ್ರಮಾಣಪತ್ರ

* ಆದಾಯ ಪ್ರಮಾಣ ಪತ್ರಗಳು

* ಛಾಯಾಚಿತ್ರ

* ವರ್ಗ ಪ್ರಮಾಣಪತ್ರ


ಆಯುಷ್ಮಾನ್ ಭಾರತ್ ಕಾರ್ಡ್ ನ ಪ್ರಯೋಜನಗಳು ಈ ಕೆಳಗಿನಂತಿವೆ.!

* ವಿವಿಧ ಆಸ್ಪತ್ರೆಗಳಲ್ಲಿ ಹೆಚ್ಚಿನ ರೋಗಗಳು ಮತ್ತು ಚಿಕಿತ್ಸೆಗಳಿಗೆ ವ್ಯಾಪ್ತಿ.

* ಪ್ರವೇಶ ಸೇವೆಗಳು ಮತ್ತು ಉಚಿತ ಚಿಕಿತ್ಸೆ.


ರಾಜ್ಯ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ.

* 15 ದಿನಗಳ ಆಸ್ಪತ್ರೆ ವೆಚ್ಚಗಳ ಕವರೇಜ್.


ಆಯುಷ್ಮಾನ್ ಭಾರತ್ ಕಾರ್ಡ್ ಗಾಗಿ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ.!

* https://pmjay.gov.in/ ಆಯುಷ್ಮಾನ್ ಭಾರತ್ ಕಾರ್ಡ್ 2024 ರ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಮತ್ತು ನಿಮ್ಮ ಬಳಿ ಅಗತ್ಯ ದಾಖಲೆಗಳಿವೆ ಎಂದು ಖಚಿತಪಡಿಸಿಕೊಳ್ಳಿ.

* ಅಭಾ ನೋಂದಣಿಯ ಮೇಲೆ ಕ್ಲಿಕ್ ಮಾಡಿ ಮತ್ತು ಕಾರ್ಯವಿಧಾನವನ್ನು ಪೂರ್ಣಗೊಳಿಸಲು ಆಧಾರ್ ಕಾರ್ಡ್ ಸಂಖ್ಯೆಯನ್ನ ಬಳಸಿ.

* OTP ನಮೂದಿಸಿ.

* ನಿಮ್ಮ ಹೆಸರು, ಆದಾಯ ಮತ್ತು ಪ್ಯಾನ್ ಕಾರ್ಡ್ ಸಂಖ್ಯೆಯಂತಹ ಮಾಹಿತಿಯನ್ನ ಒದಗಿಸಿ.

* ಅಧಿಕಾರಿಗಳ ಅನುಮೋದನೆಗಾಗಿ ಕಾಯಿರಿ, ಅದರ ನಂತರ ನೀವು ಆಯುಷ್ಮಾನ್ ಕಾರ್ಡ್ ಡೌನ್ಲೋಡ್ ಮಾಡಬಹುದು.ಆಯುಷ್ಮಾನ್ ಭಾರತ್ ಕಾರ್ಡ್ ಯೋಜನೆಯು ದುರ್ಬಲ ಕುಟುಂಬಗಳಿಗೆ ವಿನಾಶಕಾರಿ ಆರೋಗ್ಯ ವೆಚ್ಚಗಳಿಂದ ಆರ್ಥಿಕ ರಕ್ಷಣೆ ಒದಗಿಸುವ ಮತ್ತು ಗುಣಮಟ್ಟದ ಆರೋಗ್ಯ ಸೇವೆಗಳ ಪ್ರವೇಶವನ್ನ ಖಚಿತಪಡಿಸಿಕೊಳ್ಳುವ ಗುರಿಯನ್ನ ಹೊಂದಿದೆ. ಅರ್ಜಿ ಪ್ರಕ್ರಿಯೆಗೆ ಅಂಟಿಕೊಳ್ಳುವ ಮೂಲಕ ಮತ್ತು ಅರ್ಹತಾ ಮಾನದಂಡಗಳನ್ನ ಪೂರೈಸುವ ಮೂಲಕ, ವ್ಯಕ್ತಿಗಳು ಈ ಯೋಜನೆಯು ನೀಡುವ ಪ್ರಯೋಜನಗಳನ್ನು ಪಡೆಯಬಹುದು.

Recent News


Leave a Comment: