ಕಾಲೇಜು ಶುಲ್ಕ ಹಣದಲ್ಲಿ ದಂಡ ಕಟ್ಟಿದ ಯುವಕ.! PSI ಮಾಡಿದ್ದೇನು ಗೊತ್ತಾ..?

ಸುದ್ದಿಗಳು News

Posted by vidyamaana on 2024-07-25 06:35:41 |

Share: | | | | |


ಕಾಲೇಜು ಶುಲ್ಕ ಹಣದಲ್ಲಿ ದಂಡ ಕಟ್ಟಿದ ಯುವಕ.! PSI ಮಾಡಿದ್ದೇನು ಗೊತ್ತಾ..?

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಇಲಕಲ್ ನಗರದ ಕಂಠಿ ಸರ್ಕಲ್ ಬಳಿ ತ್ರಿಬಲ್ ರೈಡ್ ನಲ್ಲಿ ಬಂದ ಯುವಕರಿಗೆ ಪಿಎಸ್ ಐ ಬುದ್ದಿವಾದ ಹೇಳಿದ ಘಟನೆ ನಡೆದಿದೆ. ತ್ರಿಬಲ್ ರೈಡ್ ಮೂಲಕ ಕಾಲೇಜ್ ಅಡ್ಮಿಷನ್ ಗೆ ಹೊರಟಿದ್ದ ವಿದ್ಯಾರ್ಥಿಗಳನ್ನು ಇಳಕಲ್ ನಗರ ಠಾಣಾ ಮಹಿಳಾ ಪಿಎಸ್‌ಐ ಎಸ್.ಆರ್.ನಾಯಕ್ ಎಂಬವರು ಬಾಲಕನಿಗೆ ದಂಡ ಕಟ್ಟುವಂತೆ ಒತ್ತಾಯಿಸಿದ್ದರು.

ಆದ್ರೆ, ಕಣ್ಣೀರಿಟ್ಟ ಬಾಲಕ, ನನ್ನ ಬಳಿ ಹಣವಿಲ್ಲ ಆದರೆ, ಕಾಲೇಜು ಶುಲ್ಕ ಕಟ್ಟಲೆಂದು ಇಟ್ಟುಕೊಂಡಿರುವ ದುಡ್ಡಿದೆ ಅಷ್ಟೇ. ಅದನ್ನೇ ತಗೆದುಕೊಳ್ಳಿ ಎಂದು ಅಳುತ್ತ ದುಡ್ಡು ಕೊಟ್ಟಿದ್ದಾನೆ.

ಬಾಲಕನ ಹೇಳಿಕೆಯನ್ನು ಪರಿಶೀಲಿಸಿದ ಬಳಿಕ ಮಹಿಳಾ ಪಿಎಸ್‌ಐ ಅಪ್ಪಿಕೊಂಡು ಸಾಂತ್ವನ ತಿಳಿಸಿ, ತಮ್ಮ ಬಳಿಯಿದ್ದ ದಂಡದ ಹಣವನ್ನು ವಾಪಸ್ ಕೊಟ್ಟು, ಧೈರ್ಯ ತುಂಬಿದ್ದಾರೆ. ಪೋಷಕರು ಮಕ್ಕಳಿಗೆ ಬೈಕ್, ಸ್ಕೂಟರ್ ಕೊಡುವ ಮುನ್ನ ಹತ್ತು ಬಾರಿ ಎಚ್ಚರ ವಹಿಸಿ ಎಂದು ಮಹಿಳಾ ಪಿಎಸ್‌ಐ ಹೇಳಿದ್ದಾರೆ.

 Share: | | | | |


ಸುಳ್ಯ; ಅಜ್ಞಾವರದಲ್ಲಿ ಕೆರೆಗೆ ಬಿದ್ದ ಮೂರು ಕಾಡಾನೆಗಳು: ಮೇಲೆ ಬರಲಾಗದೇ ಪರದಾಡುತ್ತಿರುವ ಗಜಪಡೆ

Posted by Vidyamaana on 2023-04-13 03:58:39 |

Share: | | | | |


ಸುಳ್ಯ; ಅಜ್ಞಾವರದಲ್ಲಿ ಕೆರೆಗೆ ಬಿದ್ದ ಮೂರು ಕಾಡಾನೆಗಳು: ಮೇಲೆ ಬರಲಾಗದೇ ಪರದಾಡುತ್ತಿರುವ ಗಜಪಡೆ

ಸುಳ್ಯ; ಇಲ್ಲಿನ ಅಜ್ಜಾವರ ಗ್ರಾಮದ ತುದಿಯಡ್ಕ ಎಂಬಲ್ಲಿ ತೋಟವೊಂದರ ಕೆರೆಗೆ ನಿನ್ನೆ ರಾತ್ರಿ ನಾಲ್ಕು ಕಾಡಾನೆಗಳು ಬಿದ್ದಿವೆ. ಕೆರೆಯಿಂದ ಮೇಲೆ ಬರಲಾರದೇ ಕಾಡಾನೆಗಳು ಪರದಾಡುತ್ತಿವೆ.

ಇಲ್ಲಿನ ತುದಿಯಡ್ಕ ಎಂಬಲ್ಲಿನ ಸಂತೋಷ್ ಎಂಬವರ ತೋಟದ ಕೆರೆಗೆ ಬಿದ್ದ ಎರಡು ದೊಡ್ಡ ಮತ್ತೆರಡು ಮರಿಯಾನೆಗಳು ಮೇಲೆ ಬರಲಾಗದೇ ಪರದಾಡುತ್ತಿವೆ.

ಇತ್ತ ಆನೆಗಳನ್ನು ಕೆರೆಯಿಂದ ಕಾಡಾನೆಗಳನ್ನು ಮೇಲಕ್ಕೆತ್ತಲು, ಅರಣ್ಯ ಇಲಾಖಾ ಸಿಬ್ಬಂದಿ ಶ್ರಮಿಸುತ್ತಿದ್ದು, ಈ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

ಪುತ್ತೂರು : ಪೊಲೀಸ್ ದೌರ್ಜನ್ಯದಿಂದ ಹಲ್ಲೆಗೊಳಗಾದ ಯುವಕರ ಆರೋಗ್ಯ ವಿಚಾರಿಸಿದ ಪ್ರಭಾಕರ್ ಭಟ್ ಕಲ್ಲಡ್ಕ

Posted by Vidyamaana on 2023-05-18 11:40:22 |

Share: | | | | |


ಪುತ್ತೂರು : ಪೊಲೀಸ್ ದೌರ್ಜನ್ಯದಿಂದ ಹಲ್ಲೆಗೊಳಗಾದ ಯುವಕರ ಆರೋಗ್ಯ ವಿಚಾರಿಸಿದ ಪ್ರಭಾಕರ್ ಭಟ್ ಕಲ್ಲಡ್ಕ

ಪುತ್ತೂರು: ಬಿಜೆಪಿ ಮುಖಂಡರಿಬ್ಬರ ಅವಹೇಳನಕಾರಿ ಬ್ಯಾನರ್ ವಿಚಾರದಲ್ಲಿ ಪೊಲೀಸರಿಂದ ಬಂಧಿಸಲ್ಪಟ್ಟು ಮಾರಣಾಂತಿಕವಾಗಿ ಲಾಠಿ ಏಟುತಿಂದು ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿಂದು ಕಾರ್ಯಕರ್ತರನ್ನು ಡಾ. ಕಲ್ಲಡ್ಕ ಪ್ರಭಾಕರ ಭಟ್ ಭೇಟಿ ಮಾಡಿ ಸಾಂತ್ವನ ಹೇಳಿದರು.

ಬಳಿಕ ಮಾತನಾಡಿದ ಡಾ. ಭಟ್ ಅವರು, ಗಾಯಾಳು ಯುವಕನಲ್ಲಿ ಮಾತನಾಡಿದಾಗ ಆತ ಹೇಳಿದಂತೆ ಮೇಲಿನಿಂದ ಒತ್ತಡವಿದೆ ಎಂದು ಪೊಲೀಸರು ಹೇಳಿ ಹೊಡೆದಿದ್ದಾರೆ ಎಂದು ಹೇಳುತ್ತಿದ್ದಾನೆ, ಹಾಗಾದ್ರೆ ಯಾರ ಒತ್ತಡ ಎಂಬುದನ್ನು ಬಹಿರಂಗಪಡಿಸಬೇಕು. ಇದರಲ್ಲಿ ಕಾಂಗ್ರೆಸ್‌ನವರ ಕೈವಾಡ ಇರುವ ಶಂಕೆಯಿದೆ. ಹಿಂದು ಕಾರ್ಯಕರ್ತರನ್ನು ದೃತಿಗೆಡಿಸುವ ಕಾರ್ಯವನ್ನು ನಾವು ಸಹಿಸೋದಿಲ್ಲ ಎಂದು ಅವರು ಹೇಳಿದರು.

ಪೆನ್‌ಡ್ರೈವ್‌ ಪ್ರಕರಣ: ಕುತೂಹಲ ಕೆರಳಿಸಿದ ಪ್ರೀತಮ್‌ ಗೌಡ ಮೌನ

Posted by Vidyamaana on 2024-05-03 08:25:04 |

Share: | | | | |


ಪೆನ್‌ಡ್ರೈವ್‌ ಪ್ರಕರಣ: ಕುತೂಹಲ ಕೆರಳಿಸಿದ ಪ್ರೀತಮ್‌ ಗೌಡ ಮೌನ

ಬೆಂಗಳೂರು : ಹಾಸನ ರಾಜಕಾರಣಕ್ಕೆ ಸಂಬಂಧಪಟ್ಟಂತೆ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಕುಟುಂಬದ ವಿರುದ್ಧ ತೊಡೆತಟ್ಟಿದ್ದ ಹಾಸನ ಕ್ಷೇತ್ರದ ಬಿಜೆಪಿಯ ಮಾಜಿ ಶಾಸಕ ಪ್ರೀತಮ್‌ ಗೌಡ ಅವರು, ಪ್ರಜ್ವಲ್‌ ರೇವಣ್ಣ ಪ್ರಕರಣ ದೇಶಾದ್ಯಂತ ತೀವ್ರ ಬಿರುಗಾಳಿ ಎಬ್ಬಿಸಿದರೂ ಸಾರ್ವಜನಿಕವಾಗಿ ಕಾಣಿಸಿಕೊಳ್ಳದಿರುವುದು ಚರ್ಚೆಗೆ ಗ್ರಾಸವಾಗಿದೆ.ತಮ್ಮ ವಾಟ್ಸಾಪ್‌ ನಂಬರ್‌ನಲ್ಲಿ ಆಗಾಗ ಈ ವಿಚಾರಕ್ಕೆ ಸಂಬಂಧಪಟ್ಟಂತೆ ಸ್ಟೇಟಸ್‌ ಅಪ್‌ಡೇಟ್‌ ಮಾಡುತ್ತಿರುವುದನ್ನು ಬಿಟ್ಟರೆ, ಮಾಧ್ಯಮಗಳಿಗೆ ಹೇಳಿಕೆಯನ್ನೂ ಕೊಟ್ಟಿಲ್ಲ. ಪ್ರೀತಮ್‌ ಇದ್ದಕ್ಕಿದ್ದಂತೆ ತಟಸ್ಥರಾದಂತೆ ವರ್ತಿಸುತ್ತಿರುವುದು ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ.

ರಾಷ್ಟ್ರೀಯ ಲೋಕ ಅದಾಲತ್‌ -ಮುನಿಸು ಮರೆತು ಒಂದಾದ 33 ಜೋಡಿ!!

Posted by Vidyamaana on 2023-07-10 01:52:26 |

Share: | | | | |


ರಾಷ್ಟ್ರೀಯ ಲೋಕ ಅದಾಲತ್‌ -ಮುನಿಸು ಮರೆತು ಒಂದಾದ 33 ಜೋಡಿ!!

ಮೈಸೂರು: ಕೌಟುಂಬಿಕ ಕಲಹದಿಂದ ಬೇರ್ಪಟ್ಟು ವರ್ಷಾನುಗಟ್ಟಲೆ ಒಬ್ಬರಿಗೊಬ್ಬರು ಮುಖವನ್ನೇ ನೋಡದವರು ಅದಾಲತ್‌ನಲ್ಲಿ ಮುಖಾಮುಖಿಯಾಗಿ ಜೀವನದಲ್ಲಿ ಒಟ್ಟಿಗೆ ಸಾಗುವ ಮನಸ್ಸು ಮಾಡಿದರು…!

ವಿಚ್ಛೇದನ ಕೋರಿದ್ದ ದಂಪತಿಗಳು ನಗರದ ಕೌಟುಂಬಿಕ ನ್ಯಾಯಾಲಯದಲ್ಲಿ ಶನಿವಾರ ಆಯೋಜಿಸಿದ್ದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ರಾಜಿ ಸಂಧಾನದ ಮೂಲಕ ಪರಸ್ಪರ ಸಿಹಿ ತಿನ್ನಿಸಿ ಮತ್ತೆ ಜತೆಯಾದರು.

ಮಗುವಿಗೆ ಸ್ನಾನ ಮಾಡಿಸದಿರುವ ಕಾರಣಕ್ಕೆ ಉಂಟಾದ ಮನಸ್ತಾಪ ದೊಡ್ಡದಾಗಿ ನ್ಯಾಯಾಲಯದ ಮೆಟ್ಟಿಲೇರಿದ್ದ ಪ್ರಕರಣ ಸುಖಾಂತ್ಯ ಕಂಡಿತು. ಹೀಗೆ ಜೀವನದಲ್ಲಿ ಎದುರಾಗುವ ಸಣ್ಣಪುಟ್ಟ ಜಗಳ, ಮನಸ್ತಾಪಗಳನ್ನೇ ದೊಡ್ಡದು ಮಾಡಿಕೊಂಡು ಸಂಸಾರ ಬಂಧನದಿಂದ ದೂರವಾಗಲು ಮುಂದಾಗಿದ್ದ 33 ಜೋಡಿ ಮುನಿಸು ಮರೆತು ಒಂದಾದರು.

ಮಗುವಿಗೆ ಏಕೆ ಸ್ನಾನ ಮಾಡಿಸಿಲ್ಲ ಎಂದು ಗಂಡ ಪತ್ನಿಯನ್ನು ಕೇಳಿದ್ದೇ ತಪ್ಪಾಯ್ತು. ಇಷ್ಟಕ್ಕೇ ಹೆಂಡತಿ ಮುನಿಸಿಕೊಂಡು ವಿಚ್ಛೇದನಕ್ಕೆ ನೋಟಿಸ್ ಕಳುಹಿಸಿದ್ದಳು. ಇದರಿಂದ ಆರು ತಿಂಗಳು ದೂರವಾಗಿದ್ದ ದಂಪತಿ ಮಗುವಿನ ಭವಿಷ್ಯದ ದೃಷ್ಟಿಯಿಂದ ಮತ್ತೆ ಒಂದಾದರು. ಮತ್ತೊಂದು ಪ್ರಕರಣದಲ್ಲಿ ಇಬ್ಬರೂ ಇಂಜಿನಿಯರ್‌ಗಳಾಗಿರುವ ಜೋಡಿ ಕೆಲಸದ ಕಾರಣಕ್ಕೆ ದೂರವಾಗಲು ಬಯಸಿದ್ದರು. ಒಬ್ಬರು ಮೈಸೂರಿನಲ್ಲಿ, ಇನ್ನೊಬ್ಬರು ಬೆಂಗಳೂರಿನಲ್ಲಿ. ಮೈಸೂರು ಬಿಟ್ಟು ಹೋಗಲು ಪತ್ನಿಗೆ ಇಷ್ಟವಿಲ್ಲ, ಬೆಂಗಳೂರಿನಿಂದ ಬರಲು ಪತಿಗೆ ಆಗುತ್ತಿರಲಿಲ್ಲ. ಹೀಗಾಗಿ ವಿಷಯ ಮುನಿಸಿನವರೆಗೂ ಹೋಗಿ ನ್ಯಾಯಾಲಯದ ಮೆಟ್ಟಿಲೇರುವಂತೆ ಮಾಡಿತ್ತು.ಜವಾಬ್ದಾರಿ ಅರಿತು ಸಂಸಾರ ನಡೆಸಿ:

ಅದಾಲತ್‌ನಲ್ಲಿ ಒಂದಾದ ಜೋಡಿಗಳಿಗೆ ಶುಭ ಹಾರೈಸಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಅದ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಜಿ.ಎಸ್.ಸಂಗ್ರೇಶಿ ಅವರು, ಗಂಡ-ಹೆಂಡತಿ ತಿಳಿವಳಿಕೆಯಿಂದ, ಜವಾಬ್ದಾರಿ ಅರಿತು ಸಮಾಜಮುಖಿಯಾಗಿ ಸಂಸಾರ ನಡೆಸಬೇಕು. ಜಗಳ, ಕೋಪ, ಮನಸ್ತಾಪಕ್ಕೆ ಜಾಗ ನೀಡದೆ ಹೊಂದಾಣಿಕೆಯಿಂದ ನಡೆದರೆ ಸಂತಸದಿಂದ ಜೀವನ ನಡೆಸಬಹುದು ಎಂದು ಹೇಳಿದರು.

ಸಣ್ಣಪುಟ್ಟ ಕಾರಣಕ್ಕೆ ಗಂಡ-ಹೆಂಡತಿ ದೂರವಾಗಿ ಸಂಸಾರ ಒಡೆದು ಚೂರಾಗಿತ್ತು. ಕುಳಿತು ಮಾತನಾಡಿದರೆ ಸಾಕಷ್ಟು ಸಮಸ್ಯೆಗಳು ಬಗೆಹರಿಲಿವೆ. ಆದರೆ ಕೋಪದಲ್ಲಿ ತಾಳ್ಮೆ ಕಳೆದಕೊಂಡು ವರ್ತಿಸಿದರೆ ಯಾವುದೂ ಸರಿಯಾಗುವುದಿಲ್ಲ. ಇಂದು ಅವರನ್ನು ಒಟ್ಟುಗೂಡಿಸಿದ್ದು, ಗಂಡ-ಹೆಂಡತಿ ಜವಾಬ್ದಾರಿ ಅರಿತು ಸಂಸಾರ ನಡೆಸಬೇಕು. ಒಂದು ಕುಟುಂಬ ಉಳಿಸುವ ಒಳ್ಳೆಯ ಕಾರ್ಯವನ್ನು ನ್ಯಾಯಾಧೀಶರು, ವಕೀಲರು ಮಾಡಿದ್ದಾರೆ. ಅವರಿಗೆ ನಾನು ಅಭಿನಂದನೆ ಸಲ್ಲಿಸುತ್ತಿದ್ದೇನೆ ಎಂದರು.

ಈ ಬಾರಿಯ ಲೋಕ ಅದಾಲತ್‌ನಲ್ಲಿ ಹೆಚ್ಚು ಪ್ರಕರಣಗಳನ್ನು ಇತ್ಯರ್ಥಪಡಿಸಿ ಮೊದಲ ಸ್ಥಾನ ಪಡೆಯಬೇಕೆಂಬ ಉದ್ದೇಶದಿಂದ ಹೆಚ್ಚು ಚಟುವಟಿಕೆಯಿಂದ ತೊಡಗಿಸಿಕೊಳ್ಳಲಾಗಿತ್ತು. ಅದಾಲತ್‌ನಲ್ಲಿ 87 ಕೌಟುಂಬಿಕ ಪ್ರಕರಣಗಳು ಬಗೆಹರಿದಿದ್ದು, 33 ಜೋಡಿ ವಿಚ್ಛೇದನದ ನಿರ್ಧಾರ ಬದಲಿಸಿ ಒಂದಾಗಿದ್ದಾರೆ. ಜಿಲ್ಲೆಯಾದ್ಯಂತ ಹೆಚ್ಚು ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುವುದು. ಪ್ರಿ-ಲಿಟಿಗೇಷನ್ ಪ್ರಕರಣಗಳನ್ನೂ ಹೆಚ್ಚು ಬಗೆಹರಿಸಲಾಗುವುದು ಎಂದರು.

ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶೆ ವೇಲಾ ಡಿ. ಖೊಡೆ, ನ್ಯಾಯಾಧೀಶರಾದ ರುಡಾಲ್ಫ್ ಪಿರೇರಾ, ಗಿರೀಶ್ ಭಟ್, ವಕೀಲರ ಸಂಘದ ಅಧ್ಯಕ್ಷ ಮಹದೇವಸ್ವಾಮಿ, ಕಾರ್ಯದರ್ಶಿ ಎಸ್.ಉಮೇಶ್ ಇದ್ದರು.

ವರ್ಗಾವಣೆಗೊಂಡ ಗಿರೀಶ್ ನಂದನ್

Posted by Vidyamaana on 2023-07-07 14:08:27 |

Share: | | | | |


ವರ್ಗಾವಣೆಗೊಂಡ ಗಿರೀಶ್ ನಂದನ್

ಪುತ್ತೂರು: ಇಲ್ಲಿನ ಸಹಾಯಕ ಆಯುಕ್ತರಾಗಿದ್ದ ಗಿರೀಶ್ ನಂದನ್ ವರ್ಗಾವಣೆಗೊಂಡಿದ್ದಾರೆ.

ತೆರವಾಗಲಿರುವ ಪುತ್ತೂರು ಸಹಾಯಕ ಆಯುಕ್ತ ಹುದ್ದೆಗೆ ಮಂಗಳೂರು ಕೆ.ಐ.ಎ.ಡಿ.ಬಿ. ವಿಶೇಷ ಭೂಸ್ವಾಧೀನಾಧಿಕಾರಿ ಮಹೇಶ್ ಚಂದ್ರ ನೇಮಕಗೊಂಡಿದ್ದಾರೆ.

ಗಿರೀಶ್ ನಂದನ್ ಅವರು ಎತ್ತಿನಹೊಳೆ ಯೋಜನೆಯ ವಿಶೇಷ ಭೂಸ್ವಾಧಿನಾಧಿಕಾರಿಯಾಗಿ ನೇಮಕಗೊಂಡಿದ್ದಾರೆ.

ಮೈಮೇಲೆ ಪ್ರೇತ ಬರುವ ನೆಪ: 3 ತಿಂಗಳಿನಿಂದ ಕತ್ತಲ ಕೋಣೆಯಲ್ಲಿ ದಿಗ್ಭಂಧನವಾಗಿದ್ದ ಮಹಿಳೆಯ ರಕ್ಷಣೆ

Posted by Vidyamaana on 2024-01-04 11:36:22 |

Share: | | | | |


ಮೈಮೇಲೆ ಪ್ರೇತ ಬರುವ ನೆಪ: 3 ತಿಂಗಳಿನಿಂದ ಕತ್ತಲ ಕೋಣೆಯಲ್ಲಿ ದಿಗ್ಭಂಧನವಾಗಿದ್ದ ಮಹಿಳೆಯ ರಕ್ಷಣೆ

ಪುತ್ತೂರು: ನಗರದ ಹೊರವಲಯದ ಕೆಮ್ಮಿಂಜೆ ಗ್ರಾಮದ ಇಡಬೆಟ್ಟು ಸಮೀಪದ ಕರೆಜ್ಜ ಎಂಬಲ್ಲಿ ಕೊಠಡಿಯೊಂದರಲ್ಲಿ ದಿಗ್ಭಂಧನದಲ್ಲಿರಿಸಿದ್ದ ವಿವಾಹಿತ ಮಹಿಳೆಯೊಬ್ಬರನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳು ಪೊಲೀಸರ ಸಹಕಾರದೊಂದಿಗೆ ರಕ್ಷಿಸಿದ್ದಾರೆ. ಮಹಿಳೆಯನ್ನು ಚಿಕಿತ್ಸೆಗಾಗಿ ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.ಶ್ರೀಪತಿ ಹೆಬ್ಬಾರ್ ಎಂಬುವರ ಪತ್ನಿಯನ್ನು ಮನೆಯ ಪಕ್ಕದ ಸಿಮೆಂಟ್ ಶೀಟ್ ಅಳವಡಿಸಿದ ಕಿಟಕಿ, ವಿದ್ಯುತ್ ಬೆಳಕಿನ ವ್ಯವಸ್ಥೆ ಇಲ್ಲದ ಕೋಣೆಯಲ್ಲಿ ಕಳೆದ 3 ತಿಂಗಳಿನಿಂದ ದಿಗ್ಬಂಧನದಲ್ಲಿರಿಸಿರುವ ಕುರಿತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಅನಾಮಧೇಯ ಕರೆ ಬಂದಿತ್ತು.

ಈ ಹಿನ್ನೆಲೆಯಲ್ಲಿ ಮೇಲ್ವಿಚಾರಕರ ತಂಡ ಅಲ್ಲಿಗೆ ಭೇಟಿ ನೀಡಿ ಪರಿಶೀಲಿಸಿದಾಗ ಮಹಿಳೆ ಎದ್ದು ನಡೆಯಲಾರದ ಮತ್ತು ಸರಿಯಾಗಿ ಮಾತನಾಡಲಾಗದ ಸ್ಥಿತಿಯಲ್ಲಿದ್ದರು. ಆಸ್ಪತ್ರೆಗೆ ದಾಖಲಿಸುವುದಾಗಿ ತಿಳಿಸಿದಾಗ ನಿರಾಕರಿಸಿದ್ದರು. ಬಳಿಕ ಅಧಿಕಾರಿಗಳು ಸ್ಥಳೀಯರ ನೆರವಿನೊಂದಿಗೆ ಮಹಿಳೆಯನ್ನು ರಕ್ಷಿಸಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರು.ಶ್ರೀಪತಿ ಹೆಬ್ಬಾರ್ ಅವರ ಮನೆಯಲ್ಲಿದ್ದ ಅವರ ಸಹೋದರಿಯನ್ನು ಅಧಿಕಾರಿಗಳು ವಿಚಾರಿಸಿದಾಗ ಆಕೆಗೆ ಪ್ರೇತ ಮೈಮೇಲೆ ಬರುವ ಕಾರಣಕ್ಕಾಗಿ ದಿಗ್ಭಂಧನದಲ್ಲಿಸಿರುವುದಾಗಿ ತಿಳಿಸಿದ್ದರು. ಅಧಿಕಾರಿಗಳು ಶ್ರೀಪತಿ ಹೆಬ್ಬಾರ್​​ ಅವರನ್ನು ಮೊಬೈಲ್ ಮೂಲಕ ಸಂಪರ್ಕಿಸಲು ಪ್ರಯತ್ನಿಸಿದ್ದರೂ, ಅವರು ಕರೆ ಸ್ವೀಕರಿಸಿಲ್ಲ ಎಂಬ ಮಾಹಿತಿ ಲಭಿಸಿದೆ.


ದಿಗ್ಭಂಧನದಲ್ಲಿದ್ದ ಮಹಿಳೆಯ ಗಂಡ ಮತ್ತು ಆತನ ಸಹೋದರಿ ಇದೇ ಮನೆಯಲ್ಲಿ ವಾಸವಾಗಿದ್ದು, ಮಹಿಳೆಯನ್ನು ಪ್ರತ್ಯೇಕ ಕೊಠಡಿಯಲ್ಲಿ ಕೂಡಿಹಾಕಿರುವ ಬಗ್ಗೆ ಕೂಲಂಕುಷ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.,ಪ್ರೇತ ಮೈಮೇಲೆ ಬರುವ ನೆಪ?: ಅಡುಗೆ ವೃತ್ತಿ ಮಾಡುತ್ತಿದ್ದ ಶ್ರೀಪತಿ ಹೆಬ್ಬಾರ್​ ಅವರು ಬಂಟ್ವಾಳ ತಾಲೂಕಿನ ವಿಟ್ಲ ಮೂಲದ ಮಹಿಳೆಯನ್ನುಅಂತರ್ಜಾತಿ ವಿವಾಹವಾಗಿದ್ದರು. ಈ ಅವರ ಮೈಮೇಲೆ ಪ್ರೇತ ಬರುತ್ತದೆ ಎಂಬ ಕಾರಣದ ಹಿನ್ನೆಲೆಯಲ್ಲಿ ಮನೆಯ ಪಕ್ಕದ ಗೂಡಿನಂತಿರುವ ಕೊಠಡಿಯಲ್ಲಿ ಕೂಡಿ ಹಾಕಿ ದಿನವೊಂದಕ್ಕೆ ಒಂದು ಬಾರಿ ಮಾತ್ರ ಹಾಲು ಬಳಸದ ಚಹಾ ಮತ್ತು ಬಿಸ್ಕೆಟ್​ ಮಾತ್ರ ನೀಡಲಾಗುತ್ತಿತ್ತು. ಕಳೆದ ಮೂರು ತಿಂಗಳಿನಿಂದ ಈ ರೀತಿ ದಿಗ್ಭಂಧನದಲ್ಲಿರಿಸಲಾಗಿತ್ತು. ಸುದೀರ್ಘ ಸಮಯದಿಂದ ಸ್ನಾನ ಮಾಡಿಸದ ರೀತಿ, ತೀರಾ ಅಶಕ್ತರಾಗಿದ್ದರು ಎಂಬ ಮಾಹಿತಿ ಅಧಿಕಾರಿಗಳಿಗೆ ವಿಚಾರಣೆಯ ವೇಳೆ ದೊರಕಿದೆ.

Recent News


Leave a Comment: