ಚಾಲಕನ ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದ ಪಿಕಪ್ ವಾಹನ

ಸುದ್ದಿಗಳು News

Posted by vidyamaana on 2023-07-14 03:02:36 | Last Updated by Vidyamaana on 2023-09-05 09:08:10

Share: | | | | |


ಚಾಲಕನ ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದ ಪಿಕಪ್ ವಾಹನ

ವಿಟ್ಲ: ಪರಿಯಲ್ಲಡ್ಕ – ಸಾರಡ್ಕ ರಸ್ತೆಯ ಕೂರೇಲು ಎಂಬಲ್ಲಿ ಪಿಕಪ್ ರಸ್ತೆಯಿಂದ ಮನೆಯ ಮೇಲೆ ಬಿದ್ದಿದ್ದು, ಮನೆಯ ಒಳಗೆ ಮಹಿಳೆ ಸಿಲುಕಿ ಹಾಕಿಕೊಂಡಿದ್ದಾರೆ.ಕೂರೇಲು ಮಧ್ಯದ ಅಂಗಡಿಯ ಸಮೀಪದಲ್ಲಿ ರಸ್ತೆಯಿಂದ ಕೆಳಗಿದ್ದ ಮನೆಗೆ ಜು.14 ರ ಬೆಳಗ್ಗಿನ ಜಾವ ಚಾಲಕ ನಿಯಂತ್ರಣ ತಪ್ಪಿದ ಪಿಕಪ್ ಮನೆಯ ಮೇಲೆ ಬಿದ್ದಿದೆಅಪಘಾತದಿಂದ ಹಂಚಿನ ಮನೆ ಸಂಪೂರ್ಣ ಹಾನಿಯಾಗಿದೆ. ಪಿಕಪ್ ಕೋಳಿ ಸಾಗಟ ನಡೆಸುತಿತ್ತು. ಅಪಘಾತದಿಂದ ನೂರಾರು ಕೋಳಿಗಳು ಸತ್ತಿದೆ. ಅಪಘಾತ ನಡೆದಾಗ ಮನೆಯ ಒಳಗೆ ಮಹಿಳೆ ಮಲಗಿದ್ದರು, ಮಹಿಳೆಗೆ ಗಂಭೀರ ಗಾಯವಾದ ಪರಿಸ್ಥಿಯಲಿದ್ದಾರೆ.ಪಿಕಪ್ ವಾಹನವನ್ನು ತೆರವು ಮಾಡಡೆ, ಮಹಿಳೆಯನ್ನು ಹೊರಗೆ ತೆಗೆಯಲು ಸಾಧ್ಯವಿಲ್ಲದ ಸ್ಥಿತಿ ನಿರ್ಮಾಣವಾಗಿದೆ.

ಸ್ಥಳದಲ್ಲಿ ವಿಟ್ಲ ಪೊಲೀಸರು, ತುರ್ತು ಸೇವಾ ವಾಹನ ಬೀಡು ಬಿಟ್ಟಿದ್ದು, ಕ್ರೇನ್ ಬಳಸಿ ವಾಹನ ಮೇಲೆತ್ತುವ ಕಾರ್ಯಾಚರಣೆ ನಡೆಯುತ್ತಿದೆ.

 Share: | | | | |


ಮುಂದಿನ ಎರಡು ದಿನ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಜು.18,19 ರಂದು ರೆಡ್‌ ಅಲರ್ಟ್‌ ಘೋಷಣೆ

Posted by Vidyamaana on 2024-07-17 17:54:29 |

Share: | | | | |


ಮುಂದಿನ ಎರಡು ದಿನ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಜು.18,19 ರಂದು ರೆಡ್‌ ಅಲರ್ಟ್‌ ಘೋಷಣೆ

ಮಂಗಳೂರು: ಮುಂದಿನ ಎರಡು ದಿನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದ್ದು ಅದರಂತೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಜು.18 ಮತ್ತು 19 ರಂದು ರೆಡ್‌ ಅಲರ್ಟ್‌ ಘೋಷಿಸಿದೆ.

ವಿಮಾನ ಪತನ: ಮಲಾವಿ ದೇಶದ ಉಪಾಧ್ಯಕ್ಷ ಸೌಲೋಸ್ ಚಿಲಿಮಾ ಸಹಿತ 10 ಮಂದಿ ಮೃತ್ಯು

Posted by Vidyamaana on 2024-06-11 17:30:29 |

Share: | | | | |


ವಿಮಾನ ಪತನ: ಮಲಾವಿ ದೇಶದ ಉಪಾಧ್ಯಕ್ಷ ಸೌಲೋಸ್ ಚಿಲಿಮಾ ಸಹಿತ 10 ಮಂದಿ ಮೃತ್ಯು

ಹೊಸದಿಲ್ಲಿ: ಮಲಾವಿ ದೇಶದ ಉಪಾಧ್ಯಕ್ಷ ಸೌಲೋಸ್‌ ಚಿಲಿಮಾ ಹಾಗೂ ಒಂಬತ್ತು ಮಂದಿ ಇತರರು ಇಂದು ವಿಮಾನ ದುರಂತವೊಂದರಲ್ಲಿ ಮೃತಪಟ್ಟಿದ್ದಾರೆಂದು ದೇಶದ ಅಧ್ಯಕ್ಷರ ಕಾರ್ಯದರ್ಶಿ ಮಾಹಿತಿ ನೀಡಿದ್ದಾರೆ.ಸೌಲೋಸ್‌ ಮತ್ತಿತರರು ಪ್ರಯಾಣಿಸುತ್ತಿದ್ದ ವಿಮಾನ ನಾಪತ್ತೆಯಾಗಿತ್ತೆಂದು ಈ ಹಿಂದೆ ವರದಿಯಾಗಿತ್ತು.

ಬ್ಯಾನರ್ ಪ್ರಕರಣ: ಕಾಂಗ್ರೆಸ್ ಪತ್ರಿಕಾಗೋಷ್ಠಿ

Posted by Vidyamaana on 2023-05-16 09:37:41 |

Share: | | | | |


ಬ್ಯಾನರ್ ಪ್ರಕರಣ: ಕಾಂಗ್ರೆಸ್ ಪತ್ರಿಕಾಗೋಷ್ಠಿ

ಪುತ್ತೂರು: ಬ್ಯಾನರ್ ಪ್ರಕರಣಕ್ಕೆ ಸಂಬಂಧಿಸಿ ಕೃತ್ಯ ಎಸಗಿದವರು ಯಾರು ಎಂದು ಗೊತ್ತಿದ್ದರೂ, ಬಿಜೆಪಿ ಪ್ರತಿಭಟನಾ ನಾಟಕ ಮಾಡಿದ್ದಾರೆ. ಬಿಜೆಪಿಯಿಂದ ಕಾಂಗ್ರೆಸ್ ಮೇಲೆ ಗೂಬೆ ಕೂರಿಸುವ ಕೆಲಸ ಆಗಿರುವುದು ಕೈಲಾಗದವರು ಮೈ ಪರಚಿಕೊಂಡಂತೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ ಅವರು ಪತ್ರಿಕಾಗೋಷ್ಟಿಯಲ್ಲಿ ಹೇಳಿದ್ದಾರೆ.

ಇವತ್ತು ಪರಿಸ್ಥಿತಿ ಎನಾಗಿದೆ ಎಂದರೆ ಬಿಜೆಪಿ ವಿಲವಿಲ ಒದ್ದಾಡುತ್ತಿದೆ. ಯಾರಿಗೂ ಚಪ್ಪಲಿ ಹಾಕುವ ದುಸ್ತಿತಿ ನಮ್ಮ ಪಕ್ಷಕ್ಕೆ ಬಂದಿಲ್ಲ. ಮುಂದಿನ ದಿನ ಇಂತಹ ಪ್ರತಿಭಟನೆ ಮಾಡಲು ತಯಾರಾಗಬೇಕೆಂಬ ಬಿಜೆಪಿಯ ನಾಯಕರ ಹೇಳಿಕೆ ನಮಗೆ ಪ್ರಯೋಜನವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಮತ್ತು ಪುತ್ತೂರಿನಲ್ಲಿ ಕಾಂಗ್ರೆಸ್ ಶಾಸಕ ಬಂದಿರುವ ಹಿನ್ನಲೆಯಲ್ಲಿ ಬಿಜೆಪಿ ನಾಯಕರು ಹತಾಶ ಮನೋಭಾವದಿಂದ ಎನೆನೋ ಹೇಳಲು ಹೊರಟ್ಟಿದ್ದಾರೆ. ಬ್ಯಾನರ್ ಹಾಕಿದ ವಿಚಾರದಲ್ಲಿ ತಪ್ಪಿತಸ್ಥರು ಯಾರೆ ಆದರೂ ಪೊಲೀಸರು ಅವರನ್ನು ಹಿಡಿಯಬೇಕು. ನಾವಂತು ಪಕ್ಷದ ವತಿಯಿಂದ ಬ್ಯಾನರ್ ವಿಚಾರದಲ್ಲಿ ಕೈ ಹಾಕಲಿಲ್ಲ ಎಂದರು.

ಬಿಜೆಪಿ ನೀರಿನಿಂದ ಹೊರ ಬಂದ ಮೀನಿನಂತೆ ಚಡಪಡಿಸುತ್ತಿದೆ:

ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಮಳ ರಾಮಚಂದ್ರ ಅವರು ಮಾತನಾಡಿ ಸಂಜೀವ ಮಠಂದೂರು ಅವರು ಈಗ ಜೋರಾಗಿದ್ದಾರೆ.ಅವರು ಶಾಸಕರಾಗಿದ್ದಾಗ ಜೋರಾಗಿರುತ್ತಿದ್ದರೆ ಅವರಿಗೆ ಶಾಸಕತ್ವದ ಟಿಕೇಟ್ ಸಿಗುತ್ತಿತ್ತು. ಆದರೆ ಈಗ ಅವರು ಬೀದಿಗೆ ಬಂದಿದ್ದಾರೆ. ಇವತ್ತು ಅಧಿಕಾರ ಬಿಟ್ಟು ನೀರಿನಿಂದ ಹೊರ ಬಂದ ಮೀನಿನಂತೆ ಆಗಿದ್ದಾರೆ. ಯಾಕೆಂದರೆ ಬ್ಯಾನರ್ ಹಾಕಿದ ವಿಚಾರದಲ್ಲಿ ಅವರು ಹಿಂದು ಕಾರ್ಯಕರ್ತರಿಗೆ ಧಿಕ್ಕಾರ ಹಾಕಿದ್ದು ಯಾಕೆ ಎಂದ ಅವರು ಬಿಜೆಪಿಯವರು ರಚನಾತ್ಮಕ ವಿರೋಧ ಪಕ್ಷವಾಗಿ ಕೆಲಸ ಮಾಡಿ, ಟೀಕೆ ಮಾಡುವುದು ಬೇಡ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಮಳ ರಾಮಚಂದ್ರ, ಅಲ್ಪಸಂಖ್ಯಾತ ಘಟಕ ಅಧ್ಯಕ್ಷ ಅಬ್ದುಲ್ ಶುಕೂರ್ ಹಾಜಿ, ನಗರ ಕಾಂಗ್ರೆಸ್ ಅಧ್ಯಕ್ಷ ಹೆಚ್ ಮಹಮ್ಮದ್ ಆಲಿ, ಉಪಾಧ್ಯಕ್ಷ ಮೌರಿಸ್ ಮಸ್ಕರೇನಸ್ ಉಪಸ್ಥಿತರಿದ್ದರು.

ರಾಜ್ಯ ಉನ್ನತ ಶಿಕ್ಷಣ ಅಕಾಡೆಮಿ ನಿರ್ದೇಶಕರಾಗಿ ಪುತ್ತೂರು ಮೂಲದ ಡಾ. ಚಂದ್ರ ಪೂಜಾರಿ ನೇಮಕ

Posted by Vidyamaana on 2023-09-04 00:24:28 |

Share: | | | | |


ರಾಜ್ಯ ಉನ್ನತ ಶಿಕ್ಷಣ ಅಕಾಡೆಮಿ ನಿರ್ದೇಶಕರಾಗಿ ಪುತ್ತೂರು ಮೂಲದ ಡಾ. ಚಂದ್ರ ಪೂಜಾರಿ ನೇಮಕ

ಬೆಂಗಳೂರು :ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಅಕಾಡೆಮಿ ನಿರ್ದೇಶಕರಾಗಿ ನಿವೃತ್ತ ಪ್ರಾಧ್ಯಾಪಕ , ಲೇಖಕ , ಚಿಂತಕ ಡಾ.ಚಂದ್ರ ಪೂಜಾರಿ ಅವರನ್ನು ರಾಜ್ಯ ಸರಕಾರ ನೇಮಕ ಮಾಡಿದೆ.

ಧಾರವಾಡದಲ್ಲಿ ಕೇಂದ್ರ ಸ್ಥಾನವನ್ನು ಹೊಂದಿರುವ ಉನ್ನತ ಶಿಕ್ಷಣ ಅಕಾಡೆಮಿಯು ರಾಜ್ಯದ ಉನ್ನತ ಶಿಕ್ಷಣದ ನೀತಿ ನಿರೂಪಣೆಯನ್ನು ಸಿದ್ಧಗೊಳಿಸುವಲ್ಲಿ ಸರಕಾರಕ್ಕೆ  ಸಲಹೆ , ಮಾರ್ಗಸೂಚಿಗಳನ್ನು ನೀಡುವ ಅತ್ಯುನ್ನತ ಸಂಸ್ಥೆಯಾಗಿದೆ. 

ಡಾ.ಚಂದ್ರ ಪೂಜಾರಿ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯದ ಅಭಿವೃದ್ಧಿ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾಗಿ ಹಾಗೂ ಹಾವೇರಿ ಜಾನಪದ ವಿಶ್ವವಿದ್ಯಾಲಯದ ಅನ್ವಯಿಕ ಜಾನಪದ ವಿಭಾಗದ ಡೀನ್ ಆಗಿ ಸೇವೆ ಸಲ್ಲಿಸಿದ್ದಾರೆ.

ಸಮಾಜ ಸಂಶೋಧನೆಯಲ್ಲಿ ತೊಡಗಿಸಿಕೊಂಡಿರುವ ಡಾ.ಚಂದ್ರ ಪೂಜಾರಿ ಅವರು   ಪ್ರಥಮ ಬಾರಿಗೆ ರಾಜ್ಯದಲ್ಲಿ ದಲಿತ್ ಡೆವೆಲಪ್ಮೆಂಟ್ ಇಂಡೆಕ್ಸ್ ಸಿದ್ಧಗೊಳಿಸಿದ  ತಜ್ಞರಾಗಿದ್ದಾರೆ.‌

 ಪಂಚಾಯತ್ ರಾಜ್ ಕಾಯಿದೆ ತಿದ್ದುಪಡಿ ಕೋರ್ ಕಮಿಟಿ ಸದಸ್ಯರಾಗಿ, ಸ್ಟೇಟ್ ಹ್ಯೂಮನ್ ಡೆವಲಪ್ಮೆಂಟ್ ಇಂಡೆಕ್ಸ್ ಕೋರ್ ಕಮಿಟಿ ಸದಸ್ಯರರಾಗಿ , ರಾಜ್ಯ ಆಡಳಿತ ತರಬೇತಿ ಸಂಸ್ಥೆಯ ಸಂಪನ್ಮೂಲ ವ್ಯಕ್ತಿಯಾಗಿ, ಮೈಸೂರಿನ ಅಬ್ದುಲ್ ನಝೀರ್ ಸಾಬ್ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯನಿರ್ವಹಿಸಿದ್ದರು.

ಒಟ್ಟು 22 ಕೃತಿಗಳನ್ನು ಬರೆದಿರುವ ಡಾ.ಚಂದ್ರ ಪೂಜಾರಿ ಅವರು , ವಿಜಯ ಕರ್ನಾಟಕ , ಕನ್ನಡ ಪ್ರಭ ಪತ್ರಿಕೆಯ ಅಂಕಣಗಾರರಾಗಿ, ಪ್ರಜಾವಾಣಿ ಪತ್ರಿಕೆಯ ಲೇಖಕರಾಗಿ ನಿರಂತರವಾಗಿ ಬರವಣಿಗೆಯಲ್ಲಿ ತೊಡಗಿಸಿಕೊಂಡವರು.‌ ರಾಜ್ಯದ ವಿವಿಧ ಟಿ.ವಿ.ಮಾಧ್ಯಮಗಳಲ್ಲಿ ನಿರಂತರವಾಗಿ  ವಿಚಾರ ಮಂಡನೆ ಮಾಡುತ್ತಿರುವರಾಗಿದ್ದಾರೆ. 

ಮುಲತಾ: ಪುತ್ತೂರು ತಾಲೂಕಿನವರಾದ ಚಂದ್ರ ಪೂಜಾರಿ ಅವರು, ಸೈಂಟ್ ಪಿಲೋಮಿನಾ ಹೈಸ್ಕೂಲ್ , ಹಾಗೂ ಸೈಂಟ್ ಪಿಲೋಮಿನಾ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ್ದರು . ಎಂ.ಕಾಮ್ ಅಧ್ಯಯನವನ್ನು ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ನಡೆಸಿದ್ದರು, ಇದೇ ವಿಶ್ವವಿದ್ಯಾಲಯದಲ್ಲಿ ಬಿಸಿನೆಸ್ ಅಡ್ಮಿನಿಸ್ಟ್ರೇಷನ್ ವಿಷಯದಲ್ಲಿ ಪಿ.ಎಚ್.ಡಿ ಪದವಿ ಪಡೆದಿದ್ದರು.‌

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್

Posted by Vidyamaana on 2023-04-15 14:44:59 |

Share: | | | | |


ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್

ಬಂಟ್ವಾಳ: ಬಂಟ್ವಾಳ ಬಿಜೆಪಿ ಅಭ್ಯರ್ಥಿ, ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಶನಿವಾರ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಪ್ರಾರ್ಥನೆಗೈದು ಸಹಸ್ರಾರು ಕಾರ್ಯಕರ್ತ ರೊಂದಿಗೆ ಕಾಲ್ನಡಿಗೆಯ ಮೂಲಕ ಸಾಗಿ ಬಿ.ಸಿ.ರೋಡಿನ ತಾಲೂಕು ಆಡಳಿತ ಸೌಧದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.

ಹಿಂದೂ ನಾಯಕ ಮಹೇಶ್ ಶೆಟ್ಟಿ ತಿಮರೋಡಿ ನಿವಾಸಕ್ಕೆ ರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಭೇಟಿ

Posted by Vidyamaana on 2023-08-12 06:35:27 |

Share: | | | | |


ಹಿಂದೂ ನಾಯಕ ಮಹೇಶ್ ಶೆಟ್ಟಿ ತಿಮರೋಡಿ ನಿವಾಸಕ್ಕೆ  ರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಭೇಟಿ

ಬೆಳ್ತಂಗಡಿ : ಸೌಜನ್ಯ ಪರ ನ್ಯಾಯದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಹಿಂದೂ ನಾಯಕ ಮಹೇಶ್ ಶೆಟ್ಟಿ ತಿಮರೋಡಿ ನಿವಾಸಕ್ಕೆ ಶ್ರೀ ರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಭೇಟಿ ನೀಡಿದ್ದಾರೆ.


ಮಹೇಶ್ ಶೆಟ್ಟಿ ತಿಮರೋಡಿ ನಿವಾಸಕ್ಕೆ ಭೇಟಿ ನೀಡಿರುವ ಪ್ರಮೋದ್ ಮುತಾಲಿಕ್ ಸೌಜನ್ಯ ಹೋರಾಟದ ಬಗೆಗಿನ ಮಾಹಿತಿಯನ್ನು ಪಡೆದುಕೊಂಡಿದ್ದಾರೆ. ಮಾತ್ರವಲ್ಲ ಮುಂದಿನ ದಿನಗಳಲ್ಲಿ ಯಾವ ರೀತಿಯಲ್ಲಿ ಹೋರಾಟ ಸಾಗಲಿದೆ ಅನ್ನುವ ಬಗೆಗಿನ ಮಾಹಿತಿಯನ್ನು ತಿಮರೋಡಿಯವರಿಂದ ಪಡೆದುಕೊಂಡಿದ್ದಾರೆ. ಅಲ್ಲದೆ ತಿಮರೋಡಿ ಅವರ ಹೋರಾಟಕ್ಕೆ ಬೆಂಬಲ ಸೂಚಿಸುವ ಬಗ್ಗೆಯೂ ಮಾತನಾಡಿದ್ದಾರೆ ಎಂದು ತಿಳಿದು ಬಂದಿದೆ.

Recent News


Leave a Comment: