ನಕಲಿ ಚಿನ್ನ ದ ಆಸೆಗೆ ತುಮಕೂರಿನಲ್ಲಿ ಬಲಿಯಾದರೇ ಬೆಳ್ತಂಗಡಿಯ ಮೂವರು?

ಸುದ್ದಿಗಳು News

Posted by vidyamaana on 2024-03-23 10:38:46 |

Share: | | | | |


ನಕಲಿ ಚಿನ್ನ ದ ಆಸೆಗೆ ತುಮಕೂರಿನಲ್ಲಿ ಬಲಿಯಾದರೇ ಬೆಳ್ತಂಗಡಿಯ ಮೂವರು?

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿ ಕೆರೆಗೆ ತಳ್ಳಿದ ಪ್ರಕರಣದಲ್ಲಿ ಮೂವರು ಸಾವನ್ನಪ್ಪಿದ ಸಂಬಂಧಪಟ್ಟಂತೆ ಆರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಪ್ರಕರಣದ‌ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಐದು ಜನರನ್ನು ಕೋರಾ ಪೊಲೀಸರು ಮಾ.22 ರಂದು ರಾತ್ರಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಗುರುತಿಸಿದ್ದಾರೆ.

ಇನ್ನು ಮೂರು ಜನ ಮೃತರೆಲ್ಲಾ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ ಪ್ಲ್ಯಾನ್ ಮಾಡಿ ಕರೆಸಿಕೊಂಡು ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ.

ಪ್ರಕರಣದ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಇತರ ಐದು ಜನ ಸೇರಿ ಒಟ್ಟು ಆರು ಜನರನ್ನು ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. 


ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು. ಇನ್ನು ಮೂವರ ಶವ ಸಂಪೂರ್ಣವಾಗಿ ಸುಟ್ಟಿರುವ ಕಾರಣ ಗುರುತು ಪತ್ತೆಹಚ್ಚಲು ಡಿಎನ್ಎ ಪರೀಕ್ಷೆ ಬಳಿಕ ಮನೆಮಂದಿಗೆ ಶವ ಬಿಟ್ಟು ಕೊಡಲಿದ್ದಾರೆ. ಡಿಎನ್ಎ ವರದಿ ಬರಲು ಸುಮಾರು ಒಂದು ವಾರ ಬೇಕಾಗುತ್ತದೆ ಎಂದು ಪೊಲೀಸರು ಮನೆಯವರಿಗೆ ತಿಳಸಿದ್ದಾರೆ.

 Share: | | | | |


ತುಳುವನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡಿ ಸದನದಲ್ಲಿ ತುಳುವಿನಲ್ಲೇ ವಿಚಾರಮಂಡಿಸಿದ ಶಾಸಕ ಅಶೋಕ್ ರೈ

Posted by Vidyamaana on 2024-07-24 16:44:22 |

Share: | | | | |


ತುಳುವನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡಿ ಸದನದಲ್ಲಿ ತುಳುವಿನಲ್ಲೇ ವಿಚಾರಮಂಡಿಸಿದ ಶಾಸಕ ಅಶೋಕ್ ರೈ

ಪುತ್ತೂರು: ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯನ್ನಾಗಿ ಸೇರಿಸಬೇಕು ಎಂದು ಆಗ್ರಹಿಸಿ ಪುತ್ತೂರು ಶಾಸಕರಾದ ಅಶೋಕ್ ರೈಯವರು ತುಳು ಭಾಷೆಯಲ್ಲೇ ವಿಧಾನಸಭಾ ಅಧಿವೇಶನದಲ್ಲಿ ವಿಚಾರವನ್ನು ಮಂಡಿಸಿದ್ದು , ಶಾಸಕರ ಬೇಡಿಕೆಗೆ ಸರಕಾರದಿಂದ ಗಟ್ಟಿ ಭರವಸೆ ದೊರೆತಿದ್ದು ಮುಂದಿನ ದಿನಗಳಲ್ಲಿ ನಿಮ್ಮ ಬೇಡಿಕೆ ಈಡೇರಲಿದೆ ಎಂದು ಸರಕಾರ ಭರವಸೆಯನ್ನು ನೀಡಿದೆ.

ತುಳುವಿಗೆ ೨೦೦೦ ವರ್ಷದ ಇತಿಹಾಸವಿದೆ

ತುಳುಭಾಷೆಗೆ ಎರಡು ಸಾವಿರ ವರ್ಷದ ಇತಿಹಾಸವಿದೆ. ತುಳು ಮಾತನಾಡುವ ಮಂದಿ ವಿಶ್ವದೆಲ್ಲೆಡೆ ಇದ್ದಾರೆ. ತುಳು ಭಾಷೆಗೆ ಮಾನ್ಯತೆ ಸಿಗಬೇಕು ಎಂದು ಅನೇಕ ವರ್ಷಗಳಿಂದ ಹೋರಾಟಗಳು ನಡೆಯುತ್ತಿದೆ. ಎಟಂನೇ ಪರಿಚ್ಚೇಧಕ್ಕೆ ಸೇರ್ಪಡೆ ಮಾಡಬೇಕು ಎಂಬ ಬೇಡಿಕೆ ಇನ್ನೊಂದು ಕಡೆ ಇದೆ ಇದೆಲ್ಲದರ ನಡುವೆ ತುಳುವನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡಬೇಕು ಎಂಬ ಆಗ್ರಹವನ್ನು ಶಾಸಕನಾಗಿ ಕಳೆದ ಒಂದು ವರ್ಷದಿಂದ ಮಾಡುತ್ತಿದ್ದೇನೆ.

೧೯೯೪ ರಲ್ಲಿ ವೀರಪ್ಪ ಮೊಯಿಲಿಯವರು ಮುಖ್ಯಮಂತ್ರಿಯಾಗಿದ್ದ ವೇಳೆ ತುಳು ಅಕಾಡೆಮಿಯನ್ನು ಸ್ಥಾಪನೆ ಮಾಡಿದ್ದಾರೆ, ೨೦೦೭ ರಲ್ಲಿ ಕೇರಳ ಸರಕಾರ ತುಳು ಅಕಾಡೆಮಿಯನ್ನು ಸ್ಥಾಪನೆ ಮಾಡಿದೆ, ಆಕಾಶವಾಣಿಯಲ್ಲಿ ೧೯೭೬ ರಿಂದ ಆಕಾಶವಾಣಿಯಲ್ಲಿ ತುಳು ಕಾರ್ಯಕ್ರಮ ಪ್ರಸಾರವಾಗುತ್ತಿದೆ, ಅಮೇರಿಕಾದಲ್ಲಿ ಸಿಆರ್ ಎಕ್ಸಾಮ್‌ಗೆ ಅರ್ಜಿ ನಮೂನೆಯಲ್ಲೂ ವಿಶ್ವದ ೧೨೨ ಭಾಷೆಯ ಜೊತೆಗೆ ತುಳುವಿಗೆ ಮಾನ್ಯತೆ ನೀಡಲಾಗಿದೆ, ಗೂಗಲ್ ಸಂಸ್ಥೆಯವರು ತರ್ಜುಮೆ ಮಾಡಬಲ್ಲ ಭಾಷೆಗಳ ಪಟ್ಟಿಯಲ್ಲಿ ತುಳುವನ್ನು ಸೇರ್ಪಡೆ ಮಾಡಿದ್ದಾರೆ. ಇಷ್ಟೆಲ್ಲಾ ಇರುವಾಗ ನಮ್ಮ ರಾಜ್ಯದಲ್ಲಿ ತುಳುವನ್ನು ಅದಿಕೃತ ಭಾಷೆಯನ್ನಾಗಿ ಘೋಷಣೆ ಮಾಡಬೇಕು ಎಂದು ಮನವಿ ಮಾಡಿದರು.

ಮೂರು ರಾಜ್ಯಗಳಿಗೆ ಅಧ್ಯಯನ ತಂಡ ಕಳಿಸಿದ್ದೇನೆ

ಬಿಹಾರ, ಪಶ್ಚಿಮಬಂಗಾಳ ಮತ್ತು ಆಂದ್ರಕ್ಕೆ ವಿಶೇಷ ಪ್ರತಿನಿಧಿಯನ್ನು ತನ್ನ ಸ್ವಂತ ಖರ್ಚಿನಲ್ಲಿ ಕಳಿಸಿದ್ದೇನೆ. ಈ ಮೂರು ರಾಜ್ಯಗಳಲ್ಲಿ ಸ್ಥಳೀಯ ಭಾಷೆಯನ್ನು ಎರಡನೇ ಅಧಿಕೃತ ಭಾಷೆಯನ್ನಾಗಿ ಯಾವ ಆಧಾರದಲ್ಲಿ ಘೋಷಣೆ ಮಾಡಿದ್ದಾರೆ ಎಂಬುದನ್ನು ಅಧ್ಯಯನ ನಡೆಲಲಾಗಿದೆ. ಆಂದ್ರದಿಂದ ವರದಿಯನ್ನು ತರಿಸಿದ್ದೇನೆ.. ಈ ವರದಿಯನ್ನು ಸರಕಾರದ ಮುಂದೆ ಇಡಲಿದ್ದು ಅದರ ಆಧಾರದಲ್ಲಿ ಕರ್ನಾಟಕದಲ್ಲಿ ತುಳುವನ್ನು ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡಲು ಸಹಕಾರಿಯಾಗಲಿದೆ ಎಂಬ ಕಾರಣಕ್ಕೆ ನಾನು ಸ್ವಂತ ಖರ್ಚಿನಲ್ಲೇ ಅಧ್ಯಯನ ತಂಡವನ್ನು ಮೂರು ರಾಜ್ಯಗಳಿಗೆ ಕಳಿಸಿದ್ದೇನೆ ಎಂದು ಶಾಸಕ ಅಶೋಕ್ ರೈ ತಿಳಿಸಿದರು.

ವಿಶ್ವದಲ್ಲೇ ತುಳವರಿದ್ದಾರೆ, ತುಳುವರು ಎಲ್ಲರನ್ನೂ ಪ್ರೀತಿಯಿಂದ ಕಾಣುತ್ತಾರೆ.


ಆ. 15ರಂದು ಮಿನಾಜ್ ನಗರ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಸನ್ಮಾನ

Posted by Vidyamaana on 2023-08-14 15:02:31 |

Share: | | | | |


ಆ. 15ರಂದು ಮಿನಾಜ್ ನಗರ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಸನ್ಮಾನ

ಬೆಂಗಳೂರು: ಇಲ್ಲಿನ ಮಿನಾಜ್’ನಗರ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಆ. 15ರಂದು ಬೆಳಿಗ್ಗೆ 9 ಗಂಟೆಗೆ ಸ್ವಾತಂತ್ರ್ಯ ದಿನಾಚರಣೆ ಹಾಗೂ ಸನ್ಮಾನ ಕಾರ್ಯಕ್ರಮ ನಡೆಯಲಿದೆ.

9 ಗಂಟೆಗೆ ಸರಿಯಾಗಿ ಧ್ವಜಾರೋಹಣ ನಡೆಯಲಿದೆ. ಲೋಕಾಯುಕ್ತ ನಿವೃತ್ತ ಸರ್ಕಾರಿ ಅಭಿಯೋಜಕ ಟಿ.ಆರ್. ಅಲಾವುದ್ದೀನ್ ಎಕ್’ಸಾಂಬಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ಧ್ವಜಾರೋಹಣದ ಬಳಿಕ ರಾಷ್ಟ್ರಗೀತೆ, ನಾಡ ಗೀತೆ, ಕೀರತ್, ಹುಮ್ದ ಮತ್ತು ನಾಟ್ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮ, ಅತಿಥಿಗಳಿಗೆ ಗೌರವಾರ್ಪಣೆ, ಪ್ರಶಸ್ತಿ ವಿತರಣೆ, ಮೆರವಣಿಗೆ ನಡೆಯಲಿದೆ.

ರಾಜ್ಯ ಸರ್ಕಾರದ ಕೆ.ಎಂ.ಡಿ.ಸಿ. ಆಡಳಿತ ನಿರ್ದೇಶಕ ಮೊಹಮ್ಮದ್ ನಜೀರ್ ಮುಖ್ಯ ಅತಿಥಿಯಾಗಿರುವರು.

ಲೋಕಾಯುಕ್ತ ನಿವೃತ್ತ ಸರ್ಕಾರಿ ಅಭಿಯೋಜಕ ಟಿ.ಆರ್. ಅಲಾವುದ್ದೀನ್ ಎಕ್ಸಂಬಿ, ಮಿನ್ಜಾ ವೆಲ್ಫೇರ್ ಅಸೋಸಿಯೇಶನ್ ಉಪಾಧ್ಯಕ್ಷ ಟಿ.ಆರ್. ಅಬ್ದುಲ್ ಗಫೂರ್, ಖಲೀಲ್ ಉರ್ ರೆಹಮಾನ್, ಮಿನ್ಜಾ ವೆಲ್ಫೇರ್ ಅಸೋಸಿಯೇಶನ್ ಕಾರ್ಯದರ್ಶಿ ನಜೀರ್ ಬೇಗ್, ಸಯ್ಯದ್ ಸಾಜಿದ್ ಹುಸೈನ್, ನಯಾಜ್ ಪಾಶಾ, ಇಂಜಿನಿಯರ್ ಹುಲಿವಾನ ಶಿವರಾಮ್, ಎಂಡಬ್ಲ್ಯೂಇಡಿ ಟ್ರಸ್ಟಿನ ಉಪಾಧ್ಯಕ್ಷ ನಯಾಜ್ ಬೇಗ್, ಕನ್ನಡ ಶಿಕ್ಷಕಿ ರಾಧಾ, ಮುಖ್ಯಶಿಕ್ಷಕಿ ಕೌಸರ್ ತಾಜ್ ಅವರನ್ನು ಇದೇ ಸಂದರ್ಭ ಸನ್ಮಾನಿಸಲಾಗುವುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಬೆಂಗಳೂರು ಕಂಬಳ ಕರೆ ವೀಕ್ಷಿಸಿದ ಸಚಿವ ದಿನೇಶ್‌ ಗುಂಡೂರಾವ್

Posted by Vidyamaana on 2023-11-03 17:29:34 |

Share: | | | | |


ಬೆಂಗಳೂರು ಕಂಬಳ ಕರೆ ವೀಕ್ಷಿಸಿದ ಸಚಿವ ದಿನೇಶ್‌ ಗುಂಡೂರಾವ್

ಬೆಂಗಳೂರು : ಅರಮನೆ ಮೈದಾನದಲ್ಲಿ ನ.24,25,26 ರಂದು ನಡೆಯಲಿರುವ ಬೆಂಗಳೂರು ಕಂಬಳದ ಕರೆ ನಿರ್ಮಾಣ ಕಾಮಗಾರಿಯನ್ನು ದ ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ವೀಕ್ಷಣೆ ಮಾಡಿದರು.


ಶುಕ್ರವಾರ ಮಧ್ಯಾಹ್ನ ಅರಮನೆ ಮೈದಾನಕ್ಕೆ ಭೇಟಿ ನೀಡಿದ ಅವರು ಕರೆ ವೀಕ್ಷಣೆ ಮಾಡಿ ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷರು, ಪುತ್ತೂರು ಶಾಸಕರಾದ ಅಶೋಕ್ ರೈ ಜೊತೆ ಚರ್ಚೆ ನಡೆಸಿದರು.


ಕಂಬಳ ವೀಕ್ಷಣೆಗೆ ಲಕ್ಷಾಂತರ ಮಂದಿ ಅಭಿಮಾನಿಗಳು ಆಗಮಿಸುವ ನಿರೀಕ್ಷೆ ಇದ್ದು, ಅಲ್ಲಿ ನಡೆಯುತ್ತಿರುವ ಇತರೆ ಕಾಮಗಾರಿಗಳನ್ನು ಸಚಿವರು ಪರಿಶೀಲನೆ ಮಾಡಿದರು.


ಈ ಸಂದರ್ಭದಲ್ಲಿ ಮಾಜಿ ಕಾರ್ಪೋರೇಟರ್ ಉಮೇಶ್ ಶೆಟ್ಟಿ, ಪ್ರಮುಖರಾದ ಗುಣರಂಜನ್ ಶೆಟ್ಟಿ, ಮುರಳೀಧರ್ ರೈ ಮಠಂತಬೆಟ್ಟು ಸೇರಿದಂತೆ ಕಂಬಳ ಸಮಿತಿ ಪ್ರಮುಖರು ಉಪಸ್ಥಿತರಿದ್ದರು.

ಮಾ. 24 : ವಿಟ್ಲದಲ್ಲಿ ಸೌಹಾರ್ದ ಬೃಹತ್ ಇಫ್ತಾರ್ ಕೂಟ

Posted by Vidyamaana on 2024-03-24 10:56:55 |

Share: | | | | |


ಮಾ. 24 : ವಿಟ್ಲದಲ್ಲಿ ಸೌಹಾರ್ದ ಬೃಹತ್ ಇಫ್ತಾರ್ ಕೂಟ

ವಿಟ್ಲ: ವಿ.ಫೌಂಡೇಶನ್ ವಿಟ್ಲ ವತಿಯಿಂದ ಮಾ. 24ರ ಭಾನುವಾರ ವಿಟ್ಲದ ವಿ.ಎಚ್ ಕಾಂಪ್ಲೆಕ್ಸ್ ನಲ್ಲಿ ಬೃಹತ್ ಇಫ್ತಾರ್ ಕೂಟ ನಡೆಯಲಿದೆ. ಸುಮಾರು ಒಂದು ಸಾವಿರದಷ್ಟು ಮಂದಿಗೆ ಇಫ್ತಾರ್ ಗೆ ವ್ಯವಸ್ಥೆ ಕಲ್ಪಿಸಲಾಗಿದ್ದು, ಸರ್ವಧರ್ಮಿಯರಿಗೆ ಇಫ್ತಾರ್ ನಲ್ಲಿ ಭಾಗವಹಿಸಲು ಆಹ್ವಾನ ನೀಡಲಾಗಿದೆ ಎಂದು ವಿ ಫೌಂಡೇಶನ್ ನ ಸಂಘಟಕರು ತಿಳಿಸಿದ್ದಾರೆ.

ರಾಜ್ಯದಲ್ಲಿ ಆ.3 ರವರೆಗೆ ಭಾರಿ ಮಳೆ : 5 ಜಿಲ್ಲೆಗಳಿಗೆ ರೆಡ್ ಅಲರ್ಟ್‌ ಘೋಷಣೆ

Posted by Vidyamaana on 2024-07-30 19:21:35 |

Share: | | | | |


ರಾಜ್ಯದಲ್ಲಿ ಆ.3 ರವರೆಗೆ ಭಾರಿ ಮಳೆ : 5 ಜಿಲ್ಲೆಗಳಿಗೆ ರೆಡ್ ಅಲರ್ಟ್‌ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಆಗಸ್ಟ್ 3 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ರಾಜ್ಯದಕರಾವಳಿಜಿಲ್ಲೆಗಳಲ್ಲಿಆಗಸ್ಟ್ 3ರವರೆಗೆಭಾರೀ ಮಳೆಯಾಗುವ ಸಾಧ್ಯತೆ ಇದ್ದು, 5 ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ

ಬಂಟ್ವಾಳ – ಸಿಸಿಟಿವಿಯಲ್ಲಿ ಸೆರೆಯಾದ ಹೆಲ್ಮೆಟ್ ಧರಿಸಿದ ಕಳ್ಳನ ಕರಾಮತ್

Posted by Vidyamaana on 2023-12-11 20:58:42 |

Share: | | | | |


ಬಂಟ್ವಾಳ – ಸಿಸಿಟಿವಿಯಲ್ಲಿ ಸೆರೆಯಾದ ಹೆಲ್ಮೆಟ್ ಧರಿಸಿದ ಕಳ್ಳನ ಕರಾಮತ್

ಬಂಟ್ವಾಳ: ಅಂಗಡಿಗಳಿಗೆ ನುಗ್ಗಿ ಸರಣಿ ಕಳವು ಮಾಡಿದ ಘಟನೆ ಬಿಸಿರೋಡಿನ ಕೈಕಂಬ ಎಂಬಲ್ಲಿ ಆದಿತ್ಯವಾರ ರಾತ್ರಿ ವೇಳೆನಡೆದಿದೆ. ಬಿ.ಸಿ.ರೋಡಿನ ಕೈಕಂಬದಲ್ಲಿ ಒಟ್ಟು 12 ಅಂಗಡಿಗಳಿಗೆ ಕಳ್ಳನೋರ್ವ ನುಗ್ಗಿ ಜಾಲಾಡಿ ಬಳಿಕ ಮೂರು ಅಂಗಡಿಗಳಿಗೆ ನುಗ್ಗಿದ್ದಾನೆ. ಇದರಲ್ಲಿ ಮೂರು ಅಂಗಡಿಗಳಿಂದ ಸುಮಾರು 61 ಸಾವಿರ ರೂ ಕಳವು ಮಾಡಿದ್ದಾನೆ‌.ಇಲ್ಲಿನ ಡಿಶ್ ಟಿ.ವಿ .ರಿಚಾರ್ಜ್ ಅಂಗಡಿಯೊಂದರಲ್ಲಿ ಇಡಲಾಗಿದ್ದ ಸುಮಾರು 52 ಸಾವಿರ ನಗದು, ಸಾಯಿ ಲೀಲಾ ಹೋಟೆಲ್ ನ 6 ಸಾವಿರ ಹಾಗೂ ಇನ್ನೊಂದು ಅಂಗಡಿಯಿಂದ 3 ಸಾವಿರ ರೂ ನಗದು ಕಳವು ಮಾಡಿದ ಬಗ್ಗೆ ಪ್ರಕರಣ ದಾಖಲಾಗಿದೆ. ಕಳ್ಳರು ಇಲ್ಲಿನ ಹೊಟೇಲ್, ಸಹಕಾರಿ ಸಂಘಗಳ ಕಚೇರಿ ಸಹಿತ ಮತ್ತಿತರ ಅಂಗಡಿಗಳಿಗೆ ನುಗ್ಗಿ ಜಾಲಾಡಿ ವಾಪಸು ಹೋಗಿದ್ದಾನೆ.ಶನಿವಾರ ರಾತ್ರಿ ವೇಳೆ ಭಾರಿ ಮಳೆ ಇದ್ದು, ಕಳ್ಳ ಇದೇ ಸಮಯವನ್ನು ಬಂಡವಾಳವಾಗಿ ಸಿಕೊಂಡು ಕಳವು ಮಾಡಿರಬೇಕು ಎಂದು ಹೇಳಲಾಗಿದೆ. ಕಳ್ಳ ನೋರ್ವ ಬೈಕಿನಲ್ಲಿ ಬಂದು ಅಬಳಿಕ ಹೆಲ್ಮಟ್ ಧರಿಸಿ ಅಂಗಡಿಗಳಿಗೆ ನುಗ್ಗಿದ ಬಗ್ಗೆ ಇಲ್ಲಿನ ಸಿ.ಸಿ‌.ಟಿವಿಯಲ್ಲಿ ಸೆರೆಯಾಗಿದೆ ಎಂದು ಹೇಳಲಾಗಿದೆ. ಬಂಟ್ವಾಳ ‌ನಗರ ಠಾಣಾ ಪೋಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ,ಕಳ್ಳ ನಿಗಾಗಿ ಬಲೆ ಬೀಸಿದ್ದಾರೆ.

Recent News


Leave a Comment: