ಮೃತಪಟ್ಟ ಗರ್ಭಿಣಿ ಮನೆಗೆ ಭೇಟಿ ನೀಡಿದ ಪುತ್ತಿಲ

ಸುದ್ದಿಗಳು News

Posted by vidyamaana on 2023-06-29 12:19:28 |

Share: | | | | |


ಮೃತಪಟ್ಟ ಗರ್ಭಿಣಿ ಮನೆಗೆ ಭೇಟಿ ನೀಡಿದ ಪುತ್ತಿಲ

ಪುತ್ತೂರು: ಹೊಸ ಉದ್ಯಮವೊಂದರ ಉದ್ಘಾಟನಾ ಕಾರ್ಯಕ್ರಮ ಮುಗಿಸಿ ಹಿಂದಿರುಗಿ ಬರುವಾಗ ಅರುಣ್ ಕುಮಾರ್ ಪುತ್ತಿಲ ಹೆರಿಗೆಗೆ ದಾಖಲಾಗಿದ್ದ ಗರ್ಭಿಣಿ ಮೃತಪಟ್ಟ ಮನೆಗೆ ತೆರಳಿ ಸಾಂತ್ವನ ಹೇಳಿದರು.


ಕಾರ್ಯಕ್ರಮ ಮುಗಿಸಿ ಬರುವಾಗ ರಸ್ತೆಯಲ್ಲಿ ಜನ ಸೇರಿದ್ದನ್ನು ನೋಡಿ ವಿಚಾರಿಸಿದಾಗ ಮೃತಪಟ್ಟ ಬಗ್ಗೆ ತಿಳಿದುಬಂದಿದ್ದು,  ನಂತರ ಮನೆಗೆ ತೆರಳಿ ಸಾಂತ್ವನ ಹೇಳಿದರು. 

ಶೇಕಮಲೆ ಬೊಳ್ಳಾಡಿ ಇಬ್ರಾಹಿಂ ಎಂಬವರ ಪತ್ನಿ 9 ತಿಂಗಳ ಗರ್ಭಿಣಿ ಹಸೀನಾ (29) ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಾಗಿದ್ದರು.  ಜೂ.28 ರಂದು ಹೆರಿಗೆ ಸಂದರ್ಭ ಹೃದಯಾಘಾತದಿಂದ ನಿಧನರಾದರು. 

ಹೆರಿಗೆಯಲ್ಲಿ ಮಗು ಜೀವಂತವಾಗಿದ್ದು, ಎಜೆ ಆಸ್ಪತ್ರೆಯ ವೈದ್ಯರಿಗೆ ಕರೆ ಮಾಡಿ ಅರುಣ್ ಪುತ್ತಿಲರು ಮಗುವಿನ ಆರೋಗ್ಯ ವಿಚಾರಿಸಿದರು. 

ಈ ಹಿಂದೆಯೂ ಅಪಘಾತ ನಡೆದ ಸಂದರ್ಭ ಧರ್ಮ ನೋಡದೆ ತನ್ನದೇ  ಕಾರಿನಲ್ಲಿ ರಕ್ತದ ಮಡುವಿನಲ್ಲಿದ್ದ  ಗಾಯಳುಗಳನ್ನು ಹಾಕಿಕೊಂಡು ಹೋದ ಉದಾಹರಣೆಯೂ ಇದೆ. ಅವರ ಕಾರಿನಲ್ಲಿ ಅಪಘಾತಗೊಂಡ  ಮುಸ್ಲಿಂ ಮಗುವೊಂದು ಮೃತಪಟ್ಟಿದೆ. 

ಮೊನ್ನೆಯಷ್ಟೇ ಮಂಗಳೂರಿನಿಂದ ಬರುತಿದ್ದಾಗ ರಸ್ತೆ ಬದಿಯ ಚರಂಡಿಗೆ ಬಿದ್ದಿದ್ದ ಕಾರನ್ನು ಮೇಲೆತ್ತಲು ಸಹಾಯ ಮಾಡಿದ್ದರು.

 Share: | | | | |


ಸಿಎಂ ಜನಸ್ಪಂದನ: ಸಮಸ್ಯೆ ಹೇಳಿಕೊಂಡ ವಿಶೇಷ ಚೇತನ ಯುವತಿಗೆ ಸಿದ್ಧರಾಮಯ್ಯ ಸ್ಥಳದಲ್ಲೇ ಪರಿಹಾರ

Posted by Vidyamaana on 2024-02-08 16:26:38 |

Share: | | | | |


ಸಿಎಂ ಜನಸ್ಪಂದನ: ಸಮಸ್ಯೆ ಹೇಳಿಕೊಂಡ ವಿಶೇಷ ಚೇತನ ಯುವತಿಗೆ ಸಿದ್ಧರಾಮಯ್ಯ ಸ್ಥಳದಲ್ಲೇ ಪರಿಹಾರ

ಬೆಂಗಳೂರು : ತನ್ನ ಸಮಸ್ಯೆ ಹೇಳಿಕೊಂಡು ಡಿಗ್ರಿ ಮುಗಿಸಿದ್ದಂತ ವಿಶೇಷ ಚೇತನ ಯುವತಿಯೊಬ್ಬಳು ಇಂದು ಸಿಎಂ ಜನಸ್ಪಂದನ ಕಾರ್ಯಕ್ರಮದಲ್ಲಿ ಭಾಗಿಯಾಗಿ, ಸಿದ್ಧರಾಮಯ್ಯ ಅವರಿಗೆ ಮನವಿ ಮಾಡಿದರು. ಆಕೆಯ ಮನವಿ ಪಡೆದಂತ ಅವರು, ಸ್ಥಳದಲ್ಲೇ ಪರಿಹಾರವನ್ನು ಸೂಚಿಸಿದರು.ಇಂದು ವಿಧಾನಸೌಧದ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ರಾಜ್ಯಮಟ್ಟದ ಜನಸ್ಪಂದನ ಕಾರ್ಯಕ್ರಮ ನಡೆಯುತ್ತಿದೆ.ಈ ಕಾರ್ಯಕ್ರಮದಲ್ಲಿ ರಾಜ್ಯದ ವಿವಿದೆಡೆಗಳಿಂದ ಸಾವಿರಾರು ಜನರು ತಮ್ಮ ಸಮಸ್ಯೆ ಪರಿಹಾರಕ್ಕಾಗಿ ಆಗಮಿಸಿದ್ದಾರೆ.


ಮಧ್ಯಾಹ್ನವಾದರೂ ಜನಸ್ಪಂದನ ಕಾರ್ಯಕ್ರಮದಲ್ಲಿ ಜನರು ಮಾತ್ರ ಕಡಿಮೆಯಾಗುತ್ತಿಲ್ಲ. ಇನ್ನೂ ಹೆಚ್ಚು ಹೆಚ್ಚೇ ಆಗುತ್ತಿದ್ದು, ಉರಿ ಬಿಸಿಲಿನಲ್ಲೂ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜನರ ಬಳಿಗೆ ಸರ್ಕಾರ ಎಂಬ ರೀತಿ, ಸಮಸ್ಯೆಯನ್ನು ಶಾಂತ ಚಿತ್ತದಿಂದ ಕೇಳುತ್ತ, ಅದನ್ನು ಪರಿಹರಿಸೋ ಕಾರ್ಯದಲ್ಲಿ ತೊಡಗಿದ್ದಾರೆ.


ಇಂದಿನ ಜನಸ್ಪಂದನ ಕಾರ್ಯಕ್ರಮದಲ್ಲಿ ಡಬಲ್ ಡಿಗ್ರಿ ಮಗುಸಿದ್ದಂತ ಬೆಂಗಳೂರಿನ ವಿಶೇಷ ಚೇತನ ಯುವತಿ ನವ್ಯಶ್ರೀ ಎಂಬುವರು ತಾಯಿ ರಮಾಮಣಿ ಅವರ ಜೊತೆಗೆ ಬಂದು ಉದ್ಯೋಗಕ್ಕಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಬಳಿ ಮನವಿ ಮಾಡಿದರು.


ವಿಕಲ ಚೇತನ ಯುವತಿಯು ನೀಡಿದಂತ ಮನವಿ ಸ್ವೀಕರಿಸಿದಂತ ಸಿಎಂ ಸಿದ್ಧರಾಮಯ್ಯ ಅವರು, ಉದ್ಯೋಗ ಮೇಳದ ವೇಳೆ ಈ ಅರ್ಜಿಯನ್ನು ಪರಿಗಣಿಸುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿ, ವಿಶೇಷ ಚೇತನ ಯುವತಿಯ ಬದುಕಿಗೆ ಉದ್ಯೋಗದ ಭರವಸೆಯನ್ನು ನೀಡಿದರು. ಈ ಮೂಲಕ ವಿಶೇಷ ಚೇತನ ಯುವತಿಯ ಬದುಕಿಗೆ ಆಸರೆಯಾದರು.

ಪುತ್ತೂರು ಐಎಂಎ ಅಧ್ಯಕ್ಷ ಕಾನಾವು ಸ್ಕಿನ್ ಕ್ಲಿನಿಕ್ ವೈದ್ಯ ಡಾ. ನರಸಿಂಹ ಶರ್ಮಾ ಕಾನಾವು ರವರಿಗೆ ಪಿತೃ ವಿಯೋಗ.

Posted by Vidyamaana on 2023-04-19 04:11:13 |

Share: | | | | |


ಪುತ್ತೂರು ಐಎಂಎ ಅಧ್ಯಕ್ಷ ಕಾನಾವು ಸ್ಕಿನ್ ಕ್ಲಿನಿಕ್ ವೈದ್ಯ ಡಾ. ನರಸಿಂಹ ಶರ್ಮಾ ಕಾನಾವು ರವರಿಗೆ ಪಿತೃ ವಿಯೋಗ.

ಪುತ್ತೂರು: ಪ್ರಗತಿಪರ ಕೃಷಿಕ, ಮುಕ್ಕೂರು ಹಾಲು ಉತ್ಪಾದಕರ ಸಹಕಾರ ಸಂಘದ ಮಾಜಿ ನಿರ್ದೇಶಕರಾದ ಗೋಪಾಲಕೃಷ್ಣ ಭಟ್ ಕಾನಾವು ( 79) ಎ.18 ರಂದು ರಾತ್ರಿ ನಿಧನರಾದರು.ಮೃತರು ಪೆರುವೋಡಿ ಶ್ರೀ ವಿಷ್ಣುಮೂರ್ತಿ ದೇವಾಲಯದ ಮೊಕ್ತೇಸರರಾಗಿ ಸೇರಿದಂತೆ ಕ್ಷೇತ್ರದ ಜೀರ್ಣೋದ್ಧಾರ ಕಾರ್ಯದಲ್ಲಿ ಸೇವೆ ಸಲ್ಲಿಸಿದ್ದರು.

ಮೃತರು ಪತ್ನಿ, ಪುತ್ರಿ, ಪುತ್ರರಾಗಿರುವ ಕಾನಾವು ಕ್ಲಿನಿಕ್ ನ ವೈದ್ಯ ಡಾ.ನರಸಿಂಹ ಶರ್ಮಾ ಕಾನಾವು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಮೃತರ ಪಾರ್ಥಿವ ಶರೀರದ ಸಾರ್ವಜನಿಕ ದರ್ಶನಕ್ಕೆ ಎ.19 ರಂದು ಬೆಳಗ್ಗಿನಿಂದ ಅವಕಾಶ ಕಲ್ಪಿಸಲಾಗಿದೆ ಎಂದು ಮನೆಯವರು ತಿಳಿಸಿದ್ದಾರೆ.

ಕಿಟಕಿ ತೆರೆದಿಟ್ಟುಕೊಂಡೇ ದಂಪತಿಯ ಸರಸ ಸಲ್ಲಾಪ ಪಕ್ಕದ ಮನೆಯವರಿಗೆ ಕಿರಿಕಿರಿ - ದೂರು ದಾಖಲು!

Posted by Vidyamaana on 2024-03-20 12:11:25 |

Share: | | | | |


ಕಿಟಕಿ ತೆರೆದಿಟ್ಟುಕೊಂಡೇ ದಂಪತಿಯ ಸರಸ ಸಲ್ಲಾಪ  ಪಕ್ಕದ ಮನೆಯವರಿಗೆ ಕಿರಿಕಿರಿ - ದೂರು ದಾಖಲು!

ಬೆಂಗಳೂರು, ಮಾರ್ಚ್​ 20: ಬೆಂಗಳೂರಿನ (Bengaluru) ಗಿರಿನಗರ ಪೊಲೀಸ್ (Police)​ ಠಾಣೆಯಲ್ಲಿ ವಿಚಿತ್ರ ದೂರೊಂದು ದಾಖಲಾಗಿದೆ. ಪಕ್ಕದ ಮನೆ ದಂಪತಿ ಸರಸ ಸಲ್ಲಾಪದಿಂದ ಕಿರಿಕಿರಿಯಾಗುತ್ತಿದೆ ಎಂದು 44 ವರ್ಷದ ಮಹಿಳೆಯೊಬ್ಬರು ದೂರು ದಾಖಲಸಿದ್ದಾರೆ. ಆವಲಹಳ್ಳಿ, ಬಿಡಿಎ ಲೇಔಟ್​ ನಲ್ಲಿ ಮಹಿಳೆ ವಾಸವಾಗಿದ್ದಾರೆ. ಮಹಿಳೆಯ ಮನೆಯ ಬಾಗಿಲಿಗೆ ಪಕ್ಕದ ಮನೆಯ ಬೆಡ್​ ರೂಮ್​ ಇದೆ. ಪಕ್ಕದ ಮನೆಯಲ್ಲಿ ವಾಸವಾಗಿರುವ ದಂಪತಿ ಬೆಡ್ ರೂಮ್ ಕಿಟಕಿ ತೆರೆದು ಸರಸ ಸಲ್ಲಾಪದಲ್ಲಿ ತೊಡಗುವ ಮೂಲಕ ಬಹಳ ವಿಕೃತ ಮತ್ತು ಅಸಹ್ಯ ಮನಸ್ಥಿತಿಯಿಂದ ನಡೆದುಕೊಂಡಿದ್ದಾರೆ.ಈ ಬಗ್ಗೆ, ಬಹಳ ಮುಜುಗರಕ್ಕೆ ಒಳಗಾಗಿ ಮಹಿಳೆ, ದಯವಿಟ್ಟು ಬೆಡ್ ರೂಮ್ ಕಿಟಕಿ ಹಾಕಿಕೊಳ್ಳುವಂತೆ ಮನವಿ ಮಾಡಿದ್ದಾರೆ. ಇದಕ್ಕೆ ಪಕ್ಕದ ಮನೆಯ ವ್ಯಕ್ತಿ ಅವಾಚ್ಯ ಶಬ್ದಗಳಿಂದ ಮಹಿಳೆ ಹಾಗೂ ಅವರ ಕುಟುಂಬದ ಸದಸ್ಯರಿಗೆ ನಿಂದಿಸಿದ್ದಾನೆ. ಅಲ್ಲದೆ ಮಹಿಳೆ ಮೇಲೆ ಅತ್ಯಾಚಾರ ಎಸಗುವುದಾಗಿ ಮತ್ತು ಕೊಲೆ, ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಅಲ್ಲದೆ ಪಕ್ಕದ ಮನೆಯ ಮನೆ ಮಾಲೀಕ ಚಿಕ್ಕಣ್ಣ ಮತ್ತು ಅವರ ಮಗ ಮಂಜುನಾಥ್ ಮಹಿಳೆ ಕುಟುಂಬದ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ.ಅಲ್ಲದೆ ಕೆಲವು ಯುವಕರನ್ನು ಕರೆಸಿ, ಎಲ್ಲರೂ ತುಂಬಾ ಅವಾಚ್ಯ ಶಬ್ದಗಳಿಂದ ನಿಂದಿಸಿ ಮಹಿಳೆ ಮತ್ತು ಮಹಿಳೆಯ ಕುಟುಂಬಕ್ಕೆ ಬೆದರಿಕೆ ಹಾಕಿದ್ದಾರೆ. ಇವರಿಂದ ಸೂಕ್ತ ರಕ್ಷಣೆ ನೀಡಿ ಮತ್ತು ಇವರುಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮಹಿಳೆ ದೂರು ದಾಖಲಿಸಿದ್ದಾರೆ.


ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 504, 506, 509, 34ರಡಿ ಪ್ರಕರಣ ದಾಖಲಾಗಿದೆ.

ಏಕಮುಖ ಪ್ರೀತಿಯ ಸಿಟ್ಟಿನಲ್ಲಿ ವರನ ಬೈಕಿಗೆ ಬೆಂಕಿ, ಉಪ್ಪಿನಂಗಡಿಯಲ್ಲಿ ಆರೋಪಿ ಸಂದೀಪ್ ಅರೆಸ್ಟ್

Posted by Vidyamaana on 2024-01-12 22:12:47 |

Share: | | | | |


ಏಕಮುಖ ಪ್ರೀತಿಯ ಸಿಟ್ಟಿನಲ್ಲಿ ವರನ ಬೈಕಿಗೆ ಬೆಂಕಿ, ಉಪ್ಪಿನಂಗಡಿಯಲ್ಲಿ ಆರೋಪಿ ಸಂದೀಪ್ ಅರೆಸ್ಟ್

ಪುತ್ತೂರು, ಜ.12: ತಾನು ಪ್ರೀತಿಸಿದ ಯುವತಿ ಬೇರೆ ಮದುವೆಯಾದ ಸಿಟ್ಟಿನಲ್ಲಿ ವರನಿಗೆ ಸೇರಿದ ಬೈಕನ್ನು ರಾತ್ರಿ ವೇಳೆ ಸುಟ್ಟು ಹಾಕಿದ ಕೃತ್ಯ ಉಪ್ಪಿನಂಗಡಿ ಠಾಣೆ ವ್ಯಾಪ್ತಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. 


ಉಪ್ಪಿನಂಗಡಿ ಠಾಣೆಯಲ್ಲಿ ದಾಖಲಾದ ದ್ವಿಚಕ್ರ ವಾಹನಕ್ಕೆ ಬೆಂಕಿ ಹಚ್ಚಿದ ಪ್ರಕರಣ ಸಂಬಂಧಿಸಿ ಪೊಲೀಸರು ತನಿಖೆ ನಡೆಸಿದಾಗ, ಈ ವಿಚಾರ ಬಯಲಾಗಿದೆ‌. ಉಪ್ಪಿನಂಗಡಿ ಗ್ರಾಮದ ನಿನ್ನಿಕಲ್ಲು ಪಾದಾಳದ ಸಂದೀಪ್ ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ತಾನು ಪ್ರೀತಿಸಿದ ಯುವತಿ ಬೇರೊಬ್ಬನ ಜೊತೆ ಮದುವೆ ಆಗಿದ್ದಕ್ಕೆ ಈ ರೀತಿ ಮಾಡಿದ್ದಾಗಿ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ. 


ಯುವಕ ಅದೇ ಗ್ರಾಮದ ಯುವತಿಯೊಬ್ಬಳನ್ನು ಏಕಮುಖವಾಗಿ ಪ್ರೀತಿಸಿದ್ದ ಎನ್ನಲಾಗಿದೆ. ಯುವತಿಗೆ ಜನವರಿ 3ರಂದು ಬೇರೊಬ್ಬ ಯುವಕನೊಂದಿಗೆ ವಿವಾಹವಾಗಿದ್ದು ಆಕೆಯನ್ನು ಮದುವೆಯಾದ ವ್ಯಕ್ತಿಯ ಮೇಲೆ ಆರೋಪಿಗೆ ಸಿಟ್ಟಿತ್ತು. ಯುವತಿ ಜನವರಿ 6ರಂದು ಗಂಡನ ಜೊತೆ ತವರಿಗೆ ಬಂದಿದ್ದಳು. ರಾತ್ರಿ ವೇಳೆ ಮನೆಯ ಸಮೀಪ ಇರಿಸಿದ್ದ ಬೈಕಿಗೆ ಬೆಂಕಿ ಹಚ್ಚಲಾಗಿತ್ತು. ಬೈಕ್ ಹೊತ್ತಿ ಉರಿಯುತ್ತಿದ್ದುದನ್ನು ಸಂಬಂಧಿಕರು ಗಮನಿಸಿದ್ದರು. ಬೈಕನ್ನು ಮನೆಯಿಂದ 100 ಮೀ ದೂರಕ್ಕೆ ಒಯ್ದು ಬೆಂಕಿ ಹಚ್ಚಲಾಗಿತ್ತು. ಈ ಬಗ್ಗೆ ವರ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದರು. 


ತಾನು ಪ್ರೀತಿಸಿದ ಯುವತಿಯನ್ನು ಮದುವೆಯಾದ ವ್ಯಕ್ತಿಯ ಮೇಲಿನ ದ್ವೇಷದಿಂದ ಬೈಕ್‌ ಸುಟ್ಟುಹಾಕಿದ್ದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಸುರತ್ಕಲ್: ಇನಾಯತ್ ಆಲಿ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರ ಸಭೆ

Posted by Vidyamaana on 2024-04-24 07:21:32 |

Share: | | | | |


ಸುರತ್ಕಲ್: ಇನಾಯತ್ ಆಲಿ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರ ಸಭೆ

ಮಂಗಳೂರು, ಎ.23: ನಾನೂ ಒಬ್ಬ ಹಿಂದು. ಹಿಂದೂ ಧರ್ಮದ ಆಚಾರ - ವಿಚಾರಗಳನ್ನು ಶಿರಸಾ ವಹಿಸಿ ಪಾಲಿಸುತ್ತಿದ್ದೇನೆ‌. ಹಿಂದೂ ಧರ್ಮ ನನಗೆ ಸಾಮರಸ್ಯದ ಬದುಕನ್ನು ಹೇಳಿಕೊಟ್ಟಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು.


ಸುರತ್ಕಲ್ ಹಾಗೂ ಗುರುಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಬೈಕಂಪಾಡಿ ಎಪಿಎಂಸಿ ಮುಂಭಾಗ ಮಂಗಳವಾರ ಸಂಜೆ ಇನಾಯತ್ ಆಲಿ ನೇತೃತ್ವದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

ತುಳುನಾಡಿನ ಸಂಸ್ಕೃತಿ, ಗ್ರಾಮೀಣ ಸೊಗಡಿನ ಆಟಗಳು ಇವುಗಳ ಜೊತೆಗೆ ಈ ತುಳುನಾಡಿನಲ್ಲಿ ಮೆಡಿಕಲ್ ಹಬ್, ಶಿಕ್ಷಣ ಹಬ್ ಮಾಡಲು ಸಾಧ್ಯ. ಪ್ರವಾಸೋದ್ಯಮ ಬೆಳೆಸಲು ವಿಫುಲ ಅವಕಾಶಗಳಿವೆ. ಇದರಿಂದ ಉದ್ಯೋಗ ಸೃಷ್ಟಿ, ಜಿಲ್ಲೆಯ ಅಭಿವೃದ್ಧಿ ಸಾಧ್ಯ. ಯುವಕರು ನಮ್ಮೂರಲ್ಲೇ ಉದ್ಯೋಗ ಪಡೆಯಲು ಸಾಧ್ಯ. ಉದ್ಯೋಗಕ್ಕಾಗಿ ವಿದೇಶಕ್ಕೆ ಹೋಗುವ ಬದಲು ಮಕ್ಕಳ ಜೊತೆಗಿದ್ದು ಪೋಷಕರು ನೆಮ್ಮದಿಯ ನಿಟ್ಟುಸಿರು ಬಿಡಬಹುದು. ಅಭಿವೃದ್ಧಿಯ ಜೊತೆ ಹೆತ್ತವರ ಕನಸೂ ಈಡೇರಲಿದೆ. ಮನೆ ಮನೆಗಳು ಗಟ್ಟಿಯಾದರೆ, ದೇಶ ಸಮೃದ್ಧವಾಗಲಿದೆ ಎಂದರು.


ಕಾಂಗ್ರೆಸ್ ಗೆಲ್ಲುವುದು ನಿಶ್ಚಯವಾಗುತ್ತಿದ್ದಂತೆ ಅಪಪ್ರಚಾರದ ಕೆಲಸ ನಡೆಯುತ್ತಿದೆ. ಇದಕ್ಕೆ ಕಿವಿ ಕೊಡಬೇಡಿ. ನೀವು ತಲೆತಗ್ಗಿಸುವ ಕೆಲಸವನ್ನು ತಾನೆಂದೂ ಮಾಡುವುದಿಲ್ಲ. ನೀವು ಪಟ್ಟ ಶ್ರಮ ವ್ಯರ್ಥವಾಗಬಾರದು. ಆದ್ದರಿಂದ ಮುಂದಿರುವ ಕೆಲವು ಗಂಟೆಗಳಷ್ಟು ಸಮಯ ಎಚ್ಚರಿಕೆಯಿಂದ ಕೆಲಸ ನಿರ್ವಹಿಸಿ. ತುಳುನಾಡಿನ ಸಾಮರಸ್ಯದ ಗತವೈಭವ ಮರುಕಳಿಸಲಿದೆ ಎಂದರು.


ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಬೈಕಂಪಾಡಿಯಲ್ಲಿ ನಡೆದಿರುವ ಪ್ರಚಾರ ಸಭೆ ಕಾಂಗ್ರೆಸ್ ಗೆಲುವಿನ ದಿಕ್ಸೂಚಿ. ರಾಜ್ಯದಲ್ಲಿ ಕಾಂಗ್ರೆಸ್ ಗೆಲ್ಲುವ ಸೂಚನೆ ಸಿಕ್ಕಿದೆ. ದಕ್ಷಿಣ ಕನ್ನಡದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪ್ರಾಮಾಣಿಕ, ಸಮರ್ಥ ಅಭ್ಯರ್ಥಿ. ಯಾವುದೇ ಕಳಂಕ ರಹಿತ ವ್ಯಕ್ತಿತ್ವ ಅವರದ್ದು. ಮತದಾನದ ಕೊನೆಕ್ಷಣದ ವರೆಗೂ ಕೆಲಸ ಮಾಡಿ, ಪದ್ಮರಾಜ್ ಆರ್. ಪೂಜಾರಿ ಅವರನ್ನು ಗೆಲ್ಲಿಸಿ ಎಂದರು

ಕಡಬ : ಬೈಕ್ ಹಾಗೂ ಬಸ್ ನಡುವೆ ಅಪಘಾತ : ದ್ವಿಚಕ್ರ ವಾಹನ ಸವಾರ ಮೃತ್ಯು

Posted by Vidyamaana on 2024-02-19 21:09:04 |

Share: | | | | |


ಕಡಬ : ಬೈಕ್ ಹಾಗೂ ಬಸ್ ನಡುವೆ ಅಪಘಾತ : ದ್ವಿಚಕ್ರ ವಾಹನ ಸವಾರ ಮೃತ್ಯು

ಕಡಬ : ಬೈಕ್ ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಮೃತಪಟ್ಟ ಘಟನೆ ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಿಳಿನೆಲೆ ಎಂಬಲ್ಲಿ ನಡೆದಿದೆ.

ಮೃತ ಬೈಕ್ ಸವಾರನನ್ನು ಕೊಂಬಾರು ಮಣಿಭಾಂಡ ತೇರೆಬೀದಿ ನಿವಾಸಿ ನೆಟ್ಟಣದಲ್ಲಿ ಮೆಕ್ಯಾನಿಕ್ ಆಗಿದ್ದ ವಾಸುದೇವ ಗೌಡ ಎಂದು ಗುರುತಿಸಲಾಗಿದೆ.

ಕೆಎಸ್ಸಾರ್ಟಿಸಿ ಬಸ್ ಓವರ್ ಟೇಕ್ ಮಾಡುವ ಭರದಲ್ಲಿ ಎದುರುನಿಂದ ಬಂದ ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಗಂಭೀರ ಗಾಯಗೊಂಡ ವಾಸುದೇವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಕಡಬ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೃತರು ಪತ್ನಿ, ಇಬ್ಬರು ಪುತ್ರಿಯರು, ಓರ್ವ ಪುತ್ರ ಹಾಗೂ ಸಹೋದರರನ್ನು ಅಗಲಿದ್ದಾರೆ.



Leave a Comment: