ಕಾಲೇಜು ವಿದ್ಯಾರ್ಥಿಯಿಂದ ಸೆಕ್ಯೂರಿಟಿ ಗಾರ್ಡ್ ಬರ್ಬರ ಹತ್ಯೆ

ಸುದ್ದಿಗಳು News

Posted by vidyamaana on 2024-07-03 18:55:10 | Last Updated by Vidyamaana on 2024-07-03 18:55:10

Share: | | | | |


ಕಾಲೇಜು ವಿದ್ಯಾರ್ಥಿಯಿಂದ ಸೆಕ್ಯೂರಿಟಿ ಗಾರ್ಡ್ ಬರ್ಬರ ಹತ್ಯೆ

ಬೆಂಗಳೂರು : ಕಾಲೇಜು ವಿದ್ಯಾರ್ಥಿಯೊಬ್ಬ ಸೆಕ್ಯೂರಿಟಿ ಗಾರ್ಡ್ ಓರ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಅಮೃತಹಳ್ಳಿಯಲ್ಲಿ ನಡೆದಿದೆ.

ಅಮೃತಹಳ್ಳಿಯ ಸಿಂಧಿ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಜೈಕಿಸನ್ ರಾಯ್ ಕೊಲೆಯಾದ ಸೆಕ್ಯೂರಿಟಿ ಗಾರ್ಡ್. ಭಾರ್ಗವ್ ಎಂಬ ವಿದ್ಯಾರ್ಥಿ ಚಾಕುವಿನಿಂದ ಇರಿದು ಸೆಕ್ಯೂರಿಟಿ ಗಾರ್ಡ್ ನನ್ನು ಹತ್ಯೆ ಮಾಡಿದ್ದಾನೆ.

ಸ್ಥಳದಲ್ಲೇ ಸೆಕ್ಯೂರಿಟಿ ಗಾರ್ಡ್ ಮೃತಪಟ್ಟಿದ್ದಾರೆ.

ಕೊಲೆಗೆ ಕಾರಣವೇನು?


ಇಂದು ಸಿಂಧಿ ಕಾಲೇಜಿನಲ್ಲಿ ಕಾರ್ಯಕ್ರಮ ಇತ್ತು. ಈ ವೇಳೆ ಆರೋಪಿ ವಿದ್ಯಾರ್ಥಿ ಭಾರ್ಗವ್, ಕಾಲೇಜಿಗೆ ಕುಡಿದು ಬಂದಿದ್ದಾನೆ. ಈ ಹಿನ್ನಲೆ ಸೆಕ್ಯೂರಿಟಿಗಾರ್ಡ್, ಭಾರ್ಗವ್​​​ನನ್ನು ಕಾಲೇಜಿನ ಒಳಗೆ ಬಿಡಲು ನಿರಾಕರಿಸಿದ್ದಾರೆ. ಇದರಿಂದ ಸೆಕ್ಯೂರಿಟಿ ಗಾರ್ಡ್​ ಹಾಗೂ ವಿದ್ಯಾರ್ಥಿ ಮಧ್ಯೆ ಗಲಾಟೆ ಆಗಿದೆ. ಬಳಿಕ ಅಂಗಡಿಗೆ ಹೋಗಿ ಚಾಕು ಖರೀದಿಸಿದ್ದ ಭಾರ್ಗವ್, ನೇರವಾಗಿ ಬಂದು ಸೆಕ್ಯೂರಿಟಿ ಗಾರ್ಡ್ ಎದೆಗೆ ಐದಾರು ಬಾರಿ ಇರಿದಿದ್ದಾನೆ. ಅದು ಹೃದಯಕ್ಕೆ ಹೊಕ್ಕು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದ.

 Share: | | | | |


ಕಮಲ-ದಳ ಮೈತ್ರಿ ಫಿಕ್ಸ್‌: ಬಿಜೆಪಿ ಶಾಸಕಾಂಗ ಪಕ್ಷಕ್ಕೆ ಎಚ್‌.ಡಿ. ಕುಮಾರಸ್ವಾಮಿ ನಾಯಕ?

Posted by Vidyamaana on 2023-07-16 23:19:51 |

Share: | | | | |


ಕಮಲ-ದಳ ಮೈತ್ರಿ ಫಿಕ್ಸ್‌: ಬಿಜೆಪಿ ಶಾಸಕಾಂಗ ಪಕ್ಷಕ್ಕೆ ಎಚ್‌.ಡಿ. ಕುಮಾರಸ್ವಾಮಿ ನಾಯಕ?

ಬೆಂಗಳೂರು: ಬದಲಾದ ರಾಜಕೀಯ ಸನ್ನಿವೇಶದಲ್ಲಿ ಕರ್ನಾಟಕದ ಮಟ್ಟಿಗೆ ಜೆಡಿಎಸ್‌ ಹಾಗೂ ಬಿಜೆಪಿ ಮೈತ್ರಿಯಾಗುವುದು  ಬಹುತೇಕ ಖಚಿತ ಎನ್ನಲಾಗುತ್ತಿದೆ. ಈಗಾಗಲೆ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿರುವ ಬಿಜೆಪಿ, ಲೋಕಸಭೆಯಲ್ಲೂ ಇದೇ ಫಲಿತಾಂಶ ಹೊರಬಂದರೆ ಎಂಬ ಆತಂಕ ಆರಂಭವಾಗಿದೆ.ಅದಕ್ಕಿಂತಲೂ ಹೆಚ್ಚಾಗಿ ದೇಶದ ವಿವಿಧೆಡೆ ಸಣ್ಣ ಪಕ್ಷಗಳು ಕಾಂಗ್ರೆಸ್‌ ನೇತೃತ್ವದಲ್ಲಿ ಒಗ್ಗೂಡುತ್ತಿವೆ. ಬಿಜೆಪಿಯೂ ಈಶಾನ್ಯ ಭಾರತ ಹಾಗೂ ಉತ್ತರ ಭಾರತದಲ್ಲಿ ಅನೇಕ ಸಣ್ಣಪುಟ್ಟ ಪಕ್ಷಗಳನ್ನು ಎನ್‌ಡಿಎಗೆ ಸೇರಿಸಿಕೊಂಡು ಶಕ್ತಪ್ರದರ್ಶನ ಮಾಡುವ ನಿರ್ಧಾರಕ್ಕೆ ಬಂದಿದೆ. ದಕ್ಷಿಣ ಭಾರತದಲ್ಲಿ ಬಿಜೆಪಿಗೆ ಒಂದಷ್ಟು ಸ್ಥಾನಗಳನ್ನು ಪಡೆಯುವ ನಿರೀಕ್ಷೆ ಇರುವುದು ಕರ್ನಾಟಕದಲ್ಲೆ. ಇಲ್ಲಿ ಜೆಡಿಎಸ್‌ ಜತೆಗೆ ಮೈತ್ರಿ ಮಾಡಿಕೊಂಡರೆ ತಮ್ಮ ಜತೆಗೂ ಒಂದಷ್ಟು ಪಕ್ಷಗಳಿವೆ ಎಂದು ತೋರಿಸಬಹುದು. ಕರ್ನಾಟಕದಲ್ಲಿ ಜೆಡಿಎಸ್‌ ಪಕ್ಷವನ್ನೇ ಬಿಜೆಪಿಗೆ ವಿಲೀನ ಮಾಡಿಕೊಳ್ಳಲೂ ಬಿಜೆಪಿ ನಾಯಕರು ಆಸಕ್ತಿ ತೋರಿದ್ದಾರೆ ಎನ್ನಲಾಗಿದೆ.ನಿರಾಕರಿಸಿದ ಕುಮಾರಸ್ವಾಮಿ

ಜೆಡಿಎಸ್‌ ಪಕ್ಷವನ್ನು ಬಿಜೆಪಿಯಲ್ಲಿ ವಿಲೀನ ಮಾಡುವ ಪ್ರಸ್ತಾವನೆಯನ್ನು ಕುಮಾರಸ್ವಾಮಿ ನಿರಾಕರಿಸಿದ್ದಾರೆ ಎನ್ನಲಾಗಿದೆ. ವಿಲೀನ ಮಾಡಿದರೆ ತಮ್ಮ ಸ್ವತಂತ್ರ ಅಸ್ತಿತ್ವವೇ ಹೋಗಿಬಿಡುತ್ತದೆ ಎಂದಿದ್ದಾರೆ. ಆದರೆ ಈಗ ಅತ್ಯಂತ ಹೀನಾಯವಾಗಿ ಸೋತಿರುವುದರಿಂದ, ಹೆಚ್ಚು ಸಮಯ ಅಧಿಕಾರದಿಂದ ದೂರವಿರುವುದೂ ಕಷ್ಟದ ಕೆಲಸ. ಹಾಗಾಗಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಕೇಂದ್ರದಲ್ಲಿ ಸಚಿವನಾಗುವ ಸಾಧ್ಯತೆಗೆ ಕುಮಾರಸ್ವಾಮಿ ಹೆಚ್ಚು ಒಲವು ತೋರಿದ್ದಾರೆ ಎನ್ನಲಾಗಿದೆ. ಆದರೆ ಇನ್ನೂ ಅಂತಿಮ ನಿರ್ಧಾರ ಆಗಿಲ್ಲ.ಬಿಜೆಪಿಯೊಂದಿಗೆ ಜೆಡಿಎಸ್‌ ವಿಲೀನ ಮಾಡಿದರೆ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಮಾಡುವುದರ ಮೂಲಕ ವಿಧಾನಸಭೆ ಪ್ರತಿಪಕ್ಷ ನಾಯಕ ಸ್ಥಾನವನ್ನೂ ನೀಡುವುದಾಗಿ ಬಿಜೆಪಿ ತಿಳಿಸಿದೆ. ಇದೇ ಕಾರಣಕ್ಕೆ ಇಲ್ಲಿವರೆಗೂ ಬಿಜೆಪಿಗೆ ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡದೆ ಉಳಿಸಿಕೊಂಡಿದ್ದಾರೆ ಎನ್ನಲಾಗಿದೆ. ಜುಲೈ 18 ರಂದು ಎನ್‌ಡಿಎ ಸಭೆ ದೆಹಲಿಯಲ್ಲಿ ನಡೆಯಲಿದ್ದು, ಎಚ್‌.ಡಿ. ದೇವೇಗೌಡರು ಹಾಗೂ ಎಚ್‌.ಡಿ. ಕುಮಾರಸ್ವಾಮಿ ಅವರಿಗೂ ಆಹ್ವಾನ ನೀಡಲಾಗಿದೆ. ಈ ಸಭೆಯಲ್ಲಿ ಜೆಡಿಎಸ್‌ ಕೈಗೊಳ್ಳುವ ನಿರ್ಧಾರದ ಮೇಲೆ ಎಲ್ಲವೂ ಅವಲಂಬನೆಯಾಗಿದೆ ಎಂದು ಮೂಲಗಳು ತಿಳಿಸಿವೆ.ಮೈತ್ರಿ ಸುಳಿವು ನೀಡಿದ ಬೊಮ್ಮಾಯಿ

ರಾಜ್ಯದಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವುದು ನಮ್ಮ ವರಿಷ್ಠರಿಗೆ ಬಿಟ್ಟಿದ್ದು. ನಮ್ಮ ಪಕ್ಷದ ವರಿಷ್ಠರು ಮತ್ತು ದೇವೇಗೌಡರ ನಡುವೆ ಮಾತುಕತೆ ನಡೆದಿದೆ. ಈಗಾಗಲೇ ಕುಮಾರಸ್ವಾಮಿಯವರು ಕೆಲವೊಂದಿಷ್ಟು ಭಾವನೆಗಳನ್ನು ವ್ಯಕ್ತಪಡಿಸಿದ್ದಾರೆ‌. ಮಾತುಕತೆ ಫಲಶೃತಿ ಆಧಾರದ ಮೇಲೆ ಮುಂದಿನ ರಾಜಕೀಯ ಬೆಳವಣಿಗೆ ನಡೆಯುತ್ತದೆ ಎಂದರು. ವಿಪಕ್ಷ ನಾಯಕನ ಸ್ಥಾನ ಜುಲೈ 18ರ ನಂತರ ಘೋಷಣೆ ಆಗಬಹುದು ಎಂಬ ಮಾಹಿತಿ ಇದೆ ಎಂದು ತಿಳಿಸಿದರು.


ಪರಿಷತ್ ಸದಸ್ಯ ಹಾಗೂ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಪ್ರತಿಕ್ರಿಯಿಸಿ, ನನಗೆ ಬಂದ ಮಾಹಿತಿ ಪ್ರಕಾರ ದೇವೇಗೌಡರು, ಕುಮಾರಸ್ವಾಮಿ ಅವರು ದೆಹಲಿಗೆ ಹೋಗಬಹುದು. ಇಬ್ಬರಿಗೂ ನಮ್ಮ ರಾಷ್ಟ್ರೀಯ ಅಧ್ಯಕ್ಷರು ಆಹ್ವಾನ ಕೊಟ್ಟಿರಬಹುದು. ಏನೇ ನಿರ್ಣಯ ಇದ್ದರೂ ನಮ್ಮ ಹೈಕಮಾಂಡ್ ನಾಯಕರು ತೆಗೆದುಕೊಳ್ಳುತ್ತಾರೆ.2047 ಕ್ಕೆ ಭಾರತವನ್ನು ನಂಬರ್ ಒನ್ ಮಾಡುವುದು ಮೋದಿಯವರ ಉದ್ದೇಶ. ನಂಬರ್ ಒನ್ ಪಾರ್ಟಿ ಮಾಡೋದಲ್ಲ. ವೋಟ್ ಬ್ಯಾಂಕ್ ಮಾಡುವುದು ಮೋದಿ ಉದ್ದೇಶವಲ್ಲ. ಅಭಿವೃದ್ಧಿಯ ದೇಶ ಮಾಡುವುದು ಮೋದಿ ಉದ್ದೇಶ. ಇದರಲ್ಲಿ ಯಾವುದೇ ಸ್ವಾರ್ಥವಿಲ್ಲ. ಮೋದಿಯನ್ನು ದೇಶದ ಜನತೆ ಮತ್ತೊಮ್ಮ ಪ್ರಧಾನಿಯನ್ನಾಗಿ ಮಾಡುವುದು ನಿಶ್ಚಿತ ಎಂದರು.


ಆಯನೂರುಗೆ ಕಿರಿಕಿರಿ

ಜೆಡಿಎಸ್‌ ಜತೆಗೆ ಬಿಜೆಪಿ ಮೈತ್ರಿಯಾಗುವುದಕ್ಕೆ ಮಾಜಿ ಸಂಸದ ಆಯನೂರು ಮಂಜುನಾಥ್ ಪ್ರತಿಕ್ರಿಯಿಸಿದ್ದಾರೆ. ಜು.18ರ ನಂತರ ರಾಜಕೀಯ ಸ್ಥಿತ್ಯಂತರ ನಡೆಯುವ ಸಾಧ್ಯತೆ ಇದೆ. ಎಚ್‌. ಡಿ. ಕುಮಾರಸ್ವಾಮಿ ಪ್ರತಿಪಕ್ಷ ನಾಯಕ ಆಗಲೂಬಹುದು. ಬಿಟ್ಟು ಬಂದವರನ್ನೇ ಅಪ್ಪಿಕೊಳ್ಳುವ ಪರಿಸ್ಥಿತಿ ಬರುತ್ತಾ? ನನಗಂತೂ ಕಷ್ಟದ ಕೆಲಸ. ಸಂಪರ್ಕ ಕಳಕೊಂಡವರ ಜೊತೆ ಮತ್ತೆ ಸಂಬಂಧ ಬೆಳೆಸುವ ಸ್ಥಿತಿ ಬಾರದಿರಲಿ. ನಾನಂತೂ ಮತ್ತೆ ಎಂಎಲ್‌ಸಿ ಆಗಬೇಕೆಂದಿದ್ದೇನೆ. ಮಾಜಿ ಶಾಸಕ ಕೆ. ಬಿ.ಪ್ರಸನ್ನಕುಮಾರ್ ಮತ್ತೆ ಶಾಸಕರಾಗಲಿ ಎಂದಿದ್ದಾರೆ

ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಿಯಾ ಕಾರು ; ಚಿಕ್ಕಮಗಳೂರು ಬಟ್ಟೆ ಅಂಗಡಿ ವ್ಯಾಪಾರಿ ದಿನೇಶ್ ಮೃತ್ಯು

Posted by Vidyamaana on 2024-05-23 19:28:47 |

Share: | | | | |


ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಿಯಾ ಕಾರು ; ಚಿಕ್ಕಮಗಳೂರು ಬಟ್ಟೆ ಅಂಗಡಿ ವ್ಯಾಪಾರಿ ದಿನೇಶ್ ಮೃತ್ಯು

ಚಿಕ್ಕಮಗಳೂರು, ಮೇ 23: ಚಾಲಕನ ನಿಯಂತ್ರಣ ತಪ್ಪಿ ಕಿಯಾ ಕಾರು ಕೆರೆಗೆ ಬಿದ್ದ ಘಟನೆ ಅಂಬಳೆ ಕೆರೆಯಲ್ಲಿ ನಡೆದಿದೆ. ದಿನೇಶ್ (33) ಕಾರ್ನೊಳಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಕಾರ್ನಲ್ಲಿದ್ದ ಮತ್ತೊರ್ವ ಸಂತೋಷ್ ಪಾರಾಗಿದ್ದಾರೆ.

ಚಿಕ್ಕಮಗಳೂರಿನಿಂದ ಅಂಬಳೆ ಗ್ರಾಮಕ್ಕೆ ಇಬ್ಬರು ಕಾರಿನಲ್ಲಿ ತೆರಳುತ್ತಿದ್ದರು. ಇಂದು ಬೆಳಗ್ಗಿನ ಜಾವ ಅವರಿದ್ದ ಕಾರು ಏಕಾಏಕಿ ಕೆರೆಗೆ ಬಿದ್ದಿದೆ. ಪರಿಣಾಮ ದಿನೇಶ್ ಅಲ್ಲೇ ಸಾವನ್ನಪ್ಪಿದ್ದಾರೆ.

ಬೆಳಿಯೂರುಕಟ್ಟೆ ಸರಕಾರಿ ಪ ಪೂ ಕಾಲೇಜು ವಾರ್ಷಿಕೋತ್ಸವ

Posted by Vidyamaana on 2023-12-18 12:23:08 |

Share: | | | | |


ಬೆಳಿಯೂರುಕಟ್ಟೆ ಸರಕಾರಿ  ಪ ಪೂ ಕಾಲೇಜು ವಾರ್ಷಿಕೋತ್ಸವ

ಪುತ್ತೂರು: ಮಕ್ಕಳನ್ನು ತಿದ್ದುವ ಮತ್ತು ಅವರಿಗೆ ಉತ್ತಮ ದಾರಿ ತೋರಿಸುವ ಕೆಲಸ ಕೇವಲ ಶಿಕ್ಷಕರು‌ಮಾತ್ರವಲ್ಲ ಪೋಷಕರಿಂದಲೂ ಆಗಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು.

ಅವರು ಬೆಳಿಯೂರು ಕಟ್ಟೆ ಸರಕಾರಿ ಪ ಪೂ ಕಾಲೇಜಿನಲ್ಲಿ ನಡೆದ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸರಕಾರಿ ಶಾಲೆಯಲ್ಲಿ ಶಿಸ್ತು ಕಡಿಮೆ ಎಂದು ಕೆಲವರು ಆಪಾದನೆ ಮಾಡುತ್ತಾರೆ. ಸರಕಾರಿ ಶಾಲೆಯಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲಾಗುತ್ತದೆ. ಶಿಸ್ತು ಪಾಲನೆ ಮಾಡಬೇಕಾದರೆ ಪೋಷಕರ ಸಹಕಾರ ಅತೀ ಅಗತ್ಯವಾಗಿದೆ.

ವಿದ್ಯಾರ್ಥಿಗಳು ಜೀವನದಲ್ಲಿ ಸಾಧನೆ ಮಾಡುವ ಕನಸು ಕಾಣಬೇಕು. ಕನಸೇ ಕಾಣದಿದ್ದರೆ ನನಸು ಮಾಡುವುದಾದರೂ ಏನನ್ನಯ ಎಂಬುದನ್ನು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು. ವಿದ್ಯೆ ಕಲಿತು ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಬೇಕು,ದುಶ್ಚಟಗಳಿಗೆ ಯಾರೂ ಬಲಿಯಾಗಬಾರದು. ತಂದೆ ತಾಯಿಯ ಹೆಸರನ್ನು ಕೆಡಿಸುವ ಕರಲಸವನ್ನು ಎಂದೂ ಮಾಡಬೇಡಿ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.


ಎರಡು ಗ್ರಾಮಕ್ಕೊಂದು ಕೆಪಿಎಸ್ ಸ್ಕೂಲ್


ಎರಡು ಗ್ರಾಮಕ್ಕೊಂದು ಕೆಪಿಎಸ್ ಸ್ಕೂಲ್ ಆರಂಭ ಮಾಡುವ ಉದ್ದೇಶ ಸರಕಾರಕ್ಕಿದ್ದು ,ಮಕ್ಕಳ ಸಂಖ್ಯೆ ಕಡಿಮೆ ಇರುವ ಶಾಲೆಗಳನ್ನು ಮುಖ್ಯ ಶಾಲೆಗೆ ಮರ್ಜಿ ಮಾಡಲಾಗುವುದು ಎಂದು ಹೇಳಿದರು.


15 ತಿಂಗಳಲ್ಲಿ 24 ಗಂಟೆಯೂ ನೀರು

ಮುಂದಿನ 15 ತಿಂಗಳೊಳಗೆ ಪುತ್ತೂರು ವಿಧಾನಸಭಾ ಕ್ಷೇತ್ರದ ಎಲ್ಲಾ ಗ್ರಾಮಗಳಿಗೂ ದಿನದ 24 ಗಂಟೆ ನೀರು ವಿತರಣೆಯಾಗಲಿದೆ ಎಂದು ಶಾಸಕರು ತಿಳಿಸಿದರು.

ಕಡಬ: ರೈಲು ಢಿಕ್ಕಿ ಹೊಡೆದು ವ್ಯಕ್ತಿ ಮೃತ್ಯು

Posted by Vidyamaana on 2024-05-11 20:57:27 |

Share: | | | | |


ಕಡಬ: ರೈಲು ಢಿಕ್ಕಿ ಹೊಡೆದು ವ್ಯಕ್ತಿ ಮೃತ್ಯು

ಕಡಬ, ಮೇ.11. ರೈಲು ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಎಡಮಂಗಲ ರೈಲು ನಿಲ್ದಾಣ ಸಮೀಪ ಶನಿವಾರ ಸಂಜೆ ನಡೆದಿದೆ.

ಬೋಳಿಯಾರ್ ಪ್ರಕರಣ; ತಪ್ಪು ಮಾಡಿದವರನ್ನು ಬೆಂಬಲಿಸುವುದಿಲ್ಲ: ಸ್ಪೀಕರ್ ಯು.ಟಿ. ಖಾದರ್

Posted by Vidyamaana on 2024-06-14 15:13:14 |

Share: | | | | |


ಬೋಳಿಯಾರ್ ಪ್ರಕರಣ; ತಪ್ಪು ಮಾಡಿದವರನ್ನು ಬೆಂಬಲಿಸುವುದಿಲ್ಲ: ಸ್ಪೀಕರ್ ಯು.ಟಿ. ಖಾದರ್

ಮಂಗಳೂರು: ಬೋಳಿಯಾರ್ ಊರಿನ ಜನರು ಪ್ರೀತಿ, ಸೌಹಾರ್ದದಿಂದ ಇದ್ದಾರೆ. ಹೊರಗಿನವರು ಇಲ್ಲಿ ಬಂದು ವಾತಾವರಣ ಕೆಡಿಸಬೇಡಿ ಎಂದು ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕರೂ ಆಗಿರುವ ಸ್ಪೀಕರ್ ಯು.ಟಿ. ಖಾದರ್ ಹೇಳಿದರು.

ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಲ್ಲಿ ವಾಸ್ತವದಲ್ಲಿ ಏನಾಗಿದೆ ಎಂಬುದು ಸ್ಥಳದಲ್ಲಿ ಇದ್ದವರಿಗೆ, ಸ್ಥಳೀಯರಿಗೆ ಮಾತ್ರ ಗೊತ್ತಿದೆ. ಮೂರನೇ ವ್ಯಕ್ತಿಗಳಾಗಿ ನಾವು ನಿರ್ಣಯಕ್ಕೆ ಬರುವುದು ಸರಿಯಲ್ಲ. ಈ ರೀತಿ ಮಾಡಿದರೆ ಚುನಾವಣೆಯಲ್ಲಿ ಮತ ಸಿಗುತ್ತದೆ ಎಂಬ ಭ್ರಮೆ ಬೇಡ. ಈ ರೀತಿ ಮಾಡುವುದರಿಂದ ಒಂದು ವೋಟ್ ಕೂಡ ಸಿಗುವುದಿಲ್ಲ. ವಿಧಾನಸಭೆ ಚುನಾವಣೆಯಲ್ಲಿ ನನ್ನನ್ನು ಸೋಲಿಸಲು ಪ್ರಯತ್ನ ಪಟ್ಟವರು ಈಗ ಸಮಸ್ಯೆ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು

ಪುತ್ತೂರು : ಅನಾರೋಗ್ಯದಿಂದಾಗಿ ಮರೀಲ್ ನಿವಾಸಿ ಯತೀಶ್ ನಿಧನ

Posted by Vidyamaana on 2023-10-01 18:15:15 |

Share: | | | | |


ಪುತ್ತೂರು : ಅನಾರೋಗ್ಯದಿಂದಾಗಿ ಮರೀಲ್ ನಿವಾಸಿ ಯತೀಶ್ ನಿಧನ

ಪುತ್ತೂರು : ಅನಾರೋಗ್ಯದ ಹಿನ್ನೆಲೆ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಪುತ್ತೂರಿನಲ್ಲಿ ನಡೆದಿದೆ.


ಮರೀಲ್ ನಿವಾಸಿ ಯತೀಶ್ (31) ಮೃತ ಯುವಕ.

ಕೆಲ ಸಮಯದಿಂದ ಅನಾರೋಗ್ಯದಿಂದಿದ್ದ ಯತೀಶ್ ರವರು ಇಂದು ಚಿಕಿತ್ಸೆ ಫಲಕಾರಿಯಾಗದೆ ಪುತ್ತೂರಿನ ಸರಕಾರಿ ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು ತಂದೆ-ತಾಯಿ, ಸಹೋದರಿಯನ್ನು ಅಗಲಿದ್ದಾರೆ.



Leave a Comment: