ಕಟ್ಟಡ ಕಾರ್ಮಿಕರಿಗೆ ಇ ಕಾರ್ಡು ವಿತರಣೆ-ಕಾರ್ಡು ಮಾಡಿಸಿ ಸವಲತ್ತು ಪಡೆದುಕೊಳ್ಳಿ: ಕಟ್ಟಡ ಕಾರ್ಮಿಕರಿಗೆ ಶಾಸಕ ಅಶೋಕ್ ರೈ ಮನವಿ

ಸುದ್ದಿಗಳು News

Posted by vidyamaana on 2024-07-03 19:28:29 |

Share: | | | | |


ಕಟ್ಟಡ ಕಾರ್ಮಿಕರಿಗೆ ಇ ಕಾರ್ಡು ವಿತರಣೆ-ಕಾರ್ಡು ಮಾಡಿಸಿ ಸವಲತ್ತು ಪಡೆದುಕೊಳ್ಳಿ: ಕಟ್ಟಡ ಕಾರ್ಮಿಕರಿಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು:  ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಶಾಸಕ ಅಶೋಕ್ ರೈ ಕಚೇರಿ ಮೂಲಕ ಉಚಿತ ಕಾರ್ಮಿಕ ಇ ಕಾರ್ಡು ಮಾಡಿಸಿಕೊಂಡ ಕಟ್ಟಡ ಕಾರ್ಮಿಕರಿಗೆ ಕಾರ್ಡು ವಿತರಣಾ ಕಾರ್ಯಕ್ರಮ ಶಾಸಕರ ಕಚೇರಿಯಲ್ಲಿ ನಡೆಯಿತು.

ಒಟ್ಟು ೩೪ ಮಂದಿ ಕಾರ್ಮಿಕರಿಗೆ ಕಾರ್ಡು ವಿತರಿಸಲಾಯಿತು. ಕಟ್ಟಡ ಕಾರ್ಮಿಕರು ಶಾಸಕರ ಕಚೇರಿ ಮೂಲಕ ನೋಂದಾವಣೆ ಮಾಡಿಕೊಂಡಿದ್ದರು. ಇ ಕಾರ್ಡು ವಿತರಿಸಿ ಮಾತನಾಡಿದ ಶಾಸಕರು ರಾಜ್ಯ ಸರಕಾರದಿಂದ ಕಾರ್ಮಿಕರಿಗ ವಿವಿಧ ಸೌಲಭ್ಯಗಳನ್ನು ನೀಡಲಾಗುತ್ತದೆ.ಆಕಸ್ಮಿಕಮರಣಾವಾದರೆ ರೂ ೧ ಲಕ್ಷ ಮತ್ತು ಅಪಘಾತದಲ್ಲಿ ಮರಣಹೊಂದಿದರೆ ೫ ಲಕ್ಷ ಸರಕಾರದಿಂದ ಪರಿಹಾರ ಸಿಗುತ್ತದೆ. ಕಾರ್ಮಿಕರು ತನ್ನ ಕಚೇರಿ ಮೂಲಕವೇ ನೋಂದಣಿ ಮಾಡಿಕೊಳ್ಳಬಹುದು. ಒಟ್ಟು ೩೦೦೦ ಮಂದಿಗೆ ಕಾರ್ಡು ವಿತರಣೆ ಮಾಡಲಾಗಿದೆ.

ಕಟ್ಟಡ ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನು ಸರಕಾರ ನೀಡುತ್ತಿದೆ. ಕಳೆದ ಸಾಲಿನಲ್ಲಿ ಉತ್ತಮ ಅಂಕಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟ್ಯಾಪ್ ಕೂಡಾ ವಿತರಣೆ ಮಾಡಲಾಗಿದೆ. ಕಟ್ಟಡ ಕಾರ್ಮಿಕರು ಈ ಸೌಲಭ್ಯವನ್ನು ಪಡೆದುಕೊಳ್ಳುವುದರ ಜೊತೆ ಇದುವರೆಗೂ ಕಾರ್ಡು ಮಾಡಿಸದವರು ಶಾಸಕರ ಕಚೇರಿಗೆ ಬಂದು ಉಚಿತವಾಗಿ ಕಾರ್ಡು ಮಾಡಿಸಿಕೊಳ್ಳಬಹುದಾಗಿದೆ ಎಂದು ಶಾಸಕರು ತಿಳಿಸಿದರು.

ಕಾರ್ಯಕ್ರಮದಲ್ಲಿ ಟ್ರಸ್ಟ್‌ನ ಮಾಧ್ಯಮ ಸಂಚಾಲಕ ಕೃಷ್ಣಪ್ರಸಾದ್ ಭಟ್ ಬೊಳ್ಳಾಯಿ ಉಪಸ್ಥಿತರಿದ್ದರು. ಸಿಬಂದಿ ರಚನಾ ಸ್ವಾಗತಿಸಿ ವಂದಿಸಿದರು.

 Share: | | | | |


ಸಂಕಷ್ಟಕ್ಕೆ ಸಿಲುಕಿದ ಶಬರಿಮಲೆ ಭಕ್ತರಿಗೆ ಆಶ್ರಯ: ಕೋಮು ಸೌಹಾರ್ದತೆಗೆ ಸಾಕ್ಷಿಯಾದ ಕೊಡಗಿನ ಮಸೀದಿ

Posted by Vidyamaana on 2024-01-06 07:29:29 |

Share: | | | | |


ಸಂಕಷ್ಟಕ್ಕೆ ಸಿಲುಕಿದ ಶಬರಿಮಲೆ ಭಕ್ತರಿಗೆ ಆಶ್ರಯ: ಕೋಮು ಸೌಹಾರ್ದತೆಗೆ ಸಾಕ್ಷಿಯಾದ ಕೊಡಗಿನ ಮಸೀದಿ

 ಮಡಿಕೇರಿ: ಪ್ರಸ್ತುತ ರಾಜಕೀಯ ಮತ್ತು ಕೋಮು ಸಂಘರ್ಷದ ಪರಿಸ್ಥಿತಿಯಲ್ಲಿ ಕೊಡಗಿನ ಮಸೀದಿಯೊಂದು ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ.ತಿತಿಮತಿಯಲ್ಲಿರುವ ಜಾಮಾ ಮಸೀದಿಯು ಸಂಕಷ್ಟಕ್ಕೆ ಸಿಲುಕಿದ ಶಬರಿಮಲೆಯ ಭಕ್ತರಿಗೆ ಆಶ್ರಯ ಮತ್ತು ಸೌಲಭ್ಯ ಕಲ್ಪಿಸುವ ಮೂಲಕ ಸಹೋದರತ್ವ ಮತ್ತು ಸಾಮರಸ್ಯದ ಕಥೆಯನ್ನು ಬೆಳಗಾವಿಯಿಂದ ಕೊಡಗು ಮಾರ್ಗವಾಗಿ ಬೈಕ್ನಲ್ಲಿ ಕೇರಳದ ಶಬರಿಮಲೆ ದೇವಸ್ಥಾನಕ್ಕೆ ತೆರಳುತ್ತಿದ್ದ ಐವರು ಭಕ್ತರು ಗುರುವಾರ ರಾತ್ರಿ ಹವಾಮಾನ ವೈಪರೀತ್ಯ ಹಾಗೂ ಬೆಳಕು ಕಡಿಮೆಯಾದ ಕಾರಣ ಪ್ರಯಾಣ ಮುಂದುವರಿಸಲು ಸಾಧ್ಯವಾಗದೆ ತಿತಿಮತಿಯಲ್ಲಿ ಸ್ಥಗಿತಗೊಳಿಸಿದ್ದಾರೆ.


ಕಮಲೇಶ್ ಗೌರಿ, ಭೀಮಪ್ಪ ಸನದಿ, ಶಿವಾನಂದ್ ಎನ್, ಗಂಗಾಧರ್ ಬಿ ಮತ್ತು ಎಸ್ ಸಿದ್ದರೋಡ್ ಜಮ್ಮಾ ಮಸೀದಿ ಬಳಿ ಹೋಗಿ ನೆರವು ಕೇಳಿದ್ದರೂ ಮುಂದೆ ಹೇಗೆ ಹೋಗಬೇಕು ಎಂಬುದು ಗೊತ್ತಾಗಿಲ್ಲ. ನಂತರ ಮಸೀದಿ ಆಡಳಿತ ಮಂಡಳಿಯವರು ಶಬರಿಮಲೆ ಭಕ್ತರ ನೆರವಿಗೆ ಬಂದಿದ್ದು, ರಾತ್ರಿ ಮಸೀದಿಯಲ್ಲಿ ತಂಗಲು ಅನುಮತಿ ನೀಡಿದ್ದಾರೆ. ಅಲ್ಲದೇ ಭಕ್ತರಿಗೆ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ಮಸೀದಿ ಅಧ್ಯಕ್ಷ ಉಸ್ಮಾನ್ ಹಾಗೂ ಕೆ.ಕತೀಬ್ ಒದಗಿಸಿದ್ದಾರೆ.ಶುಕ್ರವಾರ ಬೆಳಗ್ಗೆ 6 ಗಂಟೆಗೆ ಐವರು ಭಕ್ತರು ಆಡಳಿತ ಮಂಡಳಿಗೆ ಕೃತಜ್ಞತೆ ಸಲ್ಲಿಸಿದರು. ಈ ಮಸೀದಿ ಸೌಹಾರ್ದತೆಯ ಸಂಕೇತವಾಗಿದೆ. ಜಾತಿ, ಧರ್ಮದ ಭೇದವಿಲ್ಲದೆ ಭಕ್ತರಿಗೆ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ಒದಗಿಸಲು ನಾವು ಸದಾ ಸಿದ್ಧರಿದ್ದೇವೆ ಎಂದು ಉಸ್ಮಾನ್ ಹೇಳಿದರು.

BIG BREAKING NEWS: 5, 8, 9, 11ನೇ ತರಗತಿ ಬೋರ್ಡ್ ಪರೀಕ್ಷೆಗೆ ಅನುಮತಿ: ಹೈಕೋರ್ಟ್ ಆದೇಶ

Posted by Vidyamaana on 2024-03-07 19:47:33 |

Share: | | | | |


BIG BREAKING NEWS: 5, 8, 9, 11ನೇ ತರಗತಿ ಬೋರ್ಡ್ ಪರೀಕ್ಷೆಗೆ ಅನುಮತಿ: ಹೈಕೋರ್ಟ್ ಆದೇಶ

ಬೆಂಗಳೂರು : 5, 8 , 9, 11ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಲಾಗಿದೆ.ಹೈಕೋರ್ಟ್ ಏಕ ಸದಸ್ಯ ಪೀಠ ಈ ತರಗತಿಗಳ ಬೋರ್ಡ್ ಪರೀಕ್ಷೆಯನ್ನು ರದ್ದುಪಡಿಸಿತ್ತು.ಏಕ ಸದಸ್ಯ ಪೀಠದ ಆದೇಶಕ್ಕೆ ವಿಭಾಗೀಯ ಪೀಠ ತಡೆ ನೀಡಿದೆ.

ವಿಭಾಗೀಯ ಪೀಠಕ್ಕೆ ರಾಜ್ಯ ಸರ್ಕಾರದಿಂದ ಮೇಲ್ಮನವಿ ಸಲ್ಲಿಸಲಾಗಿತ್ತು.

ಮಾ.18: ಉಳ್ಳಾಲದಲ್ಲಿ ಮೆಸೇಜ್-2 ಅಹ್ಲನ್ ರಮಝಾನ್.

Posted by Vidyamaana on 2023-03-16 04:02:52 |

Share: | | | | |


ಮಾ.18: ಉಳ್ಳಾಲದಲ್ಲಿ ಮೆಸೇಜ್-2 ಅಹ್ಲನ್ ರಮಝಾನ್.

ಪುತ್ತೂರು: ನ್ಯಾಷನಲ್ ಮಿಷನ್ ಕರ್ನಾಟಕ ಇದರ ಶೈಕ್ಷಣಿಕ ಅಭಿಯಾನದ ಅಂಗವಾಗಿ ಮಾ.18ರಂದು ಸಂಜೆ ಉಳ್ಳಾಲದ ಹಾಜ್ರತ್ ಮೈದಾನದಲ್ಲಿ ಮೆಸೇಜ್ -2 ಅಹ್ಲನ್ ರಮಝಾನ್ ಕಾರ್ಯಕ್ರಮ ನಡೆಯಲಿದೆ ಎಂದು ನ್ಯಾಷನಲ್ ಮಿಷನ್ ಕರ್ನಾಟಕದ ರಾಜ್ಯ ಉಪಾಧ್ಯಕ್ಷ ಅಬ್ದುಲ್ ರಶೀದ್‌ ಹಾಜಿ ಪರ್ಲಡ್ಕ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.


ಸೈಯದ್‌ ಮುಹಮ್ಮದ್‌ ಜಿಫ್ರಿ ಮುತ್ತುಕೋಯ  ತಂಙಳ್  , ಸೈಯದ್‌ ಸ್ವಾದಿಕಲಿ ಶಿಹಾಬ್ ತಂಙಳ್ ಪಾಣಕ್ಕಾಡ್, ಶೈಖುನಾ ಶೈಖುಲ್ ಜಾಮಿಯಾ, ಅಲಿಕುಟ್ಟಿ ಮುಸ್ಲಿಯಾರ್ ಮತ್ತಿತರರ ಧಾರ್ಮಿಕ, ಸಾಮಾಜಿಕ ಮುಖಂಡರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಪುತ್ತೂರಿನಿಂದ ಒಂದು ಸಾವಿರಕ್ಕೂ ಮಿಕ್ಕಿ ಜನರು ಭಾಗವಹಿಸುವ ನಿರೀಕ್ಷೆಯಿದ್ದು, ಅಂದು ಸಂಜೆ 4 ಗಂಟೆಗೆ ದರ್ಬೆ ಬೈಪಾಸ್  ಪತ್ರಾವು ವೃತ್ತದಿಂದ ವಾಹನ ಹೊರಡಲಿದೆ ಎಂದು ತಿಳಿಸಿದರು.


ಸುದ್ದಿಗೋಷ್ಠಿಯಲ್ಲಿ ಜಂಇಯ್ಯತುಲ್ ಉಲಮಾ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಹಮೀದ್ ದಾರಿಮಿ ಸಂಪ್ಯ, ಪುತ್ತೂರು ರೇಂಜ್‌ನ ಕೋಶಾಧಿಕಾರಿ ಎಲ್.ಟಿ. ಅಬ್ದುರಝಾಕ್ ಹಾಜಿ, ಎಸ್ಕೆಎಸ್ಸೆಸ್ಸೆಫ್‌ ಯುಎಇ ಕಾರ್ಯಾಧ್ಯಕ್ಷ ಸುಲೈಮಾನ್ ಮುಸ್ಲಿಯಾರ್ ಕಲ್ಲೇಗ, ಪುತ್ತೂರು ವಲಯ ಅಧ್ಯಕ್ಷ ಹಾಜಿ ಬಾತೀಶ ಪಾಟ್ರಕೋಡಿ ಉಪಸ್ಥಿತರಿದ್ದರು.

ಇಂದು ಶಾಸಕರಿಂದ ಪಕ್ಷದ ಪ್ರಮುಖರ ಸಭೆ

Posted by Vidyamaana on 2023-05-16 02:57:58 |

Share: | | | | |


ಇಂದು ಶಾಸಕರಿಂದ ಪಕ್ಷದ ಪ್ರಮುಖರ ಸಭೆ

ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈ ಅವರು ಮೇ 16ರಂದು ಬೆಳಿಗ್ಗೆ 11 ಗಂಟೆಗೆ ಪಕ್ಷದ ಪ್ರಮುಖರ ಸಭೆ ಕರೆದಿದ್ದಾರೆ.

ಕಾಂಗ್ರೆಸಿನ ಚುನಾವಣಾ ಕಚೇರಿಯಲ್ಲಿ ನಡೆಯಲಿರುವ ಸಭೆಯಲ್ಲಿ ಪಕ್ಷದ ಪ್ರಮುಖರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಬೆಂಗಳೂರು: ಶಿವಾಜಿನಗರದಲ್ಲಿ ಕುಸಿದುಬಿದ್ದ ನರ್ಸರಿ ಶಾಲೆ ಕಟ್ಟಡ, ತಪ್ಪಿದ ಭಾರೀ ಅನಾಹುತ

Posted by Vidyamaana on 2023-11-27 15:51:25 |

Share: | | | | |


ಬೆಂಗಳೂರು: ಶಿವಾಜಿನಗರದಲ್ಲಿ ಕುಸಿದುಬಿದ್ದ ನರ್ಸರಿ ಶಾಲೆ ಕಟ್ಟಡ, ತಪ್ಪಿದ ಭಾರೀ ಅನಾಹುತ


ಬೆಂಗಳೂರು, (ನವೆಂಬರ್ 27): ಬೆಂಗಳೂರಿನ ಶಿವಾಜಿನಗರದಲ್ಲಿ(Shivajinagar) ನರ್ಸರಿ ಶಾಲೆ ಕಟ್ಟಡವೊಂದು (School building collapsed) ಕುಸಿದುಬಿದ್ದಿದೆ. ಶಿವಾಜಿನಗರದ ಕುಕ್ಸ್ ರೋಡ್ ನ ಬಿ ಕ್ರಾಸ್ ನಲ್ಲಿರುವ ಬಿಬಿಎಂಪಿಯ ನರ್ಸರಿ ಶಾಲೆ ಇಂದು (ನವೆಂಬರ್ 27) ಬೆಳಗಿನ ಜಾವ ನಸುಕಿನ ಜಾವ ಬಿದ್ದಿದೆ. ಪರಿಣಾಮ ಕಟ್ಟಡ ಅವಶೇಷದಡಿ ವಾಹನಗಳು ಸಿಲುಕಿ ಸಂಪೂರ್ಣವಾಗಿ ಜಖಂ ಆಗಿವೆ. ಅದೃಷ್ಟವಶಾತ್ ಶಾಲೆಯಲ್ಲಿ ಮಕ್ಕಳು ಇಲ್ಲದ ವೇಳೆ ಕಟ್ಟಡ ಬಿದ್ದಿದೆ. ಇದರಿಂದ ಅನಾಹುತವೊಂದು ತಪ್ಪಿದಂತಾಗಿದೆ.


ಸ್ಥಳೀಯ ನಿವಾಸಿಗಳು ಹೇಳುವ ಪ್ರಕಾರ, ಈ ನರ್ಸರಿ ಶಾಲೆಯಲ್ಲಿ ಸುಮಾರು 70ರಿಂದ 80 ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದರು. ಅಷ್ಟಕ್ಕೂ ಈ ಕಟ್ಟಡ ಬೀಳುವ ಸ್ಥಿತಿಯಲ್ಲಿದ್ದರೂ ಸಹ ಇಲ್ಲೇ ಶಾಲೆ ಸಮಯದಲ್ಲಿ ಕುಟ್ಟಡ ಕುಸಿದು ಬಿದ್ದು ದೊಡ್ಡ ಅನಾಹುತ ಸಂಭವಿಸಿದ್ದರೆ ಅದಕ್ಕೆ ಯಾರು ಹೊಣೆ ಎಂದು ಸ್ಥಳೀಯರು ಪ್ರಶ್ನಿಸಿದ್ದಾರೆ.


ಇದು ಬಿಬಿಎಂಪಿಗೆ ಸೇರಿದ ಇಂಗ್ಲಿಷ್ ಸ್ಕೂಲ್. ಈ ಸ್ಕೂಲ್ ನಲ್ಲಿ ಒಟ್ಟು 90 ಮಕ್ಕಳು ಪ್ರವೇಶ ಪಡೆದುಕೊಂಡಿದ್ದರು. ಅದರೆ, 90 ಮಕ್ಕಳ ಪೈಕಿ 75 ಮಕ್ಕಳು ಮಾತ್ರ ಪ್ರತಿದಿನ ಶಾಲೆಗೆ ಬರುತ್ತಿದ್ದರು. ದೇವರ ದೇವರ ದಯೆಯಿಂದ ಶಾಲಾ ಸಮಯದಲ್ಲಿ ಕಟ್ಟಡ ಬಿದ್ದಿಲ್ಲ. ಇದೀಗ ಸ್ಥಳಕ್ಕೆ ಜೆಸಿಬಿ ಆಗಮಿಸಿದ್ದು, ಕಟ್ಟಡದ ಅವಶೇಷಗಳನ್ನು ತೆರವು ಕಾರ್ಯ ನಡೆದಿದೆ. ಇನ್ನು ವಾಹನಗಳಿಗೆ ಹಾನಿಯಾಗಿದ್ದರಿಂದ ಮಾಲೀಕರು ಕಂಗಾಲಾಗಿದ್ದಾರೆ.

ತೇಜಾ ರಾಮಕೃಷ್ಣ ಭಟ್ ನಾಪತ್ತೆ

Posted by Vidyamaana on 2024-03-13 16:47:16 |

Share: | | | | |


ತೇಜಾ ರಾಮಕೃಷ್ಣ ಭಟ್ ನಾಪತ್ತೆ

ಯಲ್ಲಾಪುರ :ಯುವತಿಯೊಬ್ಬಳು ಕಾಣೆಯಾದ ಕುರಿತು ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯಲ್ಲಾಪುರ ತಾಲೂಕಿನ ಚಂದ್ಗುಳಿಯ ದೇಸಾಯಿಮನೆ ತೇಜಾ ರಾಮಕೃಷ್ಣ ಭಟ್ಟ (26)ಕಾಣೆಯಾದ ಯುವತಿ.ಹುಬ್ಬಳ್ಳಿಯ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಈಕೆ, ಕಳೆದ ಡಿಸೆಂಬರ್ 20 ರಂದು ಹುಬ್ಬಳ್ಳಿಗೆ ಹೋಗುವುದಾಗಿ ಮನೆಯಿಂದ ಹೊರಟಿದ್ದು, ಅಲ್ಲಿಗೂ ಹೋಗದೇ ಸಂಬಂಧಿಕರ ಮನೆಗೂ ಹೋಗದೇ ಈವರೆಗೂ ಮರಳಿ ಬಂದಿಲ್ಲ. ಈ ಕುರಿತು ತಂದೆ ರಾಮಕೃಷ್ಣ ಎಸ್ ಭಟ್ಟ ದೇಸಾಯಿಮನೆ ಪೋಲಿಸ್ ದೂರು ನೀಡಿದ್ದಾರೆ.

ಸಾಧಾರಣ ಮೈಕಟ್ಟು, ಗೋಧಿ ಬಣ್ಣ, ಕಪ್ಪು ಕೂದಲು ಹೊಂದಿದ್ದು, ಕನ್ನಡ, ಇಂಗ್ಲಿಷ್ ಮಾತನಾಡುತ್ತಾಳೆ. ಈಕೆ ಎಲ್ಲಿಯಾದರೂ ಕಂಡು ಬಂದಲ್ಲಿ ಠಾಣೆಗೆ ಮಾಹಿತಿ ನೀಡುವಂತೆ ಪೊಲೀಸರು ಕೋರಿದ್ದಾರೆ.



Leave a Comment: