ಸಿಎಂ ಸಿದ್ದರಾಮಯ್ಯರನ್ನು‌ ಭೇಟಿಯಾದ ಶಾಸಕ ಆಶೋಕ್ ರೈ

ಸುದ್ದಿಗಳು News

Posted by vidyamaana on 2024-07-03 19:44:44 |

Share: | | | | |


ಸಿಎಂ ಸಿದ್ದರಾಮಯ್ಯರನ್ನು‌ ಭೇಟಿಯಾದ ಶಾಸಕ ಆಶೋಕ್ ರೈ

ಪುತ್ತೂರು: ಪುತ್ತೂರು ಶಾಸಕರಾದ ಅಶೋಕ್ ರೈ ಯವರು ಬುಧವಾರದಂದು ಬೆಂಗಳೂರಿನಲ್ಲಿ ಸಿ ಎಂ‌ನಿವಾಸದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪುತ್ತೂರಿಗೆ‌ಮೆಡಿಕಲ್ ಕಾಲೇಜು ಮತ್ತು ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡುವಂತೆ ಮನವಿ ಮಾಡಿದರು.

   ಸಿದ್ದರಾಮಯ್ಯ ಅವರೊಂದಿಗೆ ಮಾತುಕತೆ ನಡೆಸಿದ ಶಾಸಕರು ಪುತ್ತೂರಿಗೆ ಮೆಡಿಕಲ್ ಕಾಲೇಜು ಬೇಡಿಕೆಯನ್ನು ನೆನಪಿಸಿದರು. ಬಜೆಟ್ ನಲ್ಲಿ ಈ ಬಾರಿ ಅನುಮೋದನೆಯಾಗಬೇಕು ಮತ್ತು ತನ್ನ ಕ್ಷೇತ್ರದ ಜನರ ಬಹುಕಾಲದ ಬೇಡಿಕೆಯಾದ ಮೆಡಿಕಲ್ ಕಾಲೇಜನ್ನು ಮಂಜೂರು ಮಾಡುವಂತೆ ಮನವಿ ಮಾಡಿದರು. ಕಳೆದ ಬಜೆಟ್ ನಲ್ಲಿ ಅನುಮೋದನೆಯಾಗಬಹುದು ಎಂಬ ನಿರೀಕ್ಷೆ ಇತ್ತು ಆದರೆ ಗ್ಯಾರಂಟಿ ಯೋಜನೆಗೆ ಬಜೆಟ್ ನಲ್ಲಿ ಹೆಚ್ಚು ಅನುದಾನ ಇರಿಸಿದ ಕಾರಣ ನಾನು ಹೆಚ್ಚು ಒತ್ತಡ ಹಾಕಿರಲಿಲ್ಲ. ಮೆಡಿಕಲ್ ಕಾಲೇಜು ಆಗಬೇಕು‌ಎಂಬುದು‌ ನನ್ನ ಮತ್ತು ನನ್ನ ಕ್ಷೇತ್ರದ ಜನರ ಕನಸಾಗಿದೆ ಅದನ್ನು ನನಸು‌ಮಾಡಿಕೊಡಬೇಕು ಎಂದು ಸಿ ಎಂ ಅವರಲ್ಲಿ ಶಾಸಕರು ವಿನಂತಿಸಿದರು.

ಕಾಲೇಜು‌ನಿರ್ಮಾಣಕ್ಕೆ ಈಗಾಗಲೇ ಜಾಗ ಗುರುತಿಸಲಾಗಿದೆ ಎಂದೂ ಶಾಸಕರು ಸಿಎಂ ಅವರಲ್ಲಿ ತಿಳಿಸಿದರು.

ಹೆಚ್ಚು‌ಅನುದಾನ ಕೊಡಿ

ನನ್ನ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ದಿ ಕೆಲಸಗಳು ಆಗಬೇಕಿದೆ. ರಸ್ತೆ, ಸರಕಾರಿ ಕಟ್ಟಡಗಳು, ಶಾಲಾ ,ಕಾಲೇಜು ಕಟ್ಟಡಗಳು, ತಡೆಗೋಡೆ ,ಬೃಹತ್ ಅಣೆಕಟ್ಟುಗಳು ಸೇರಿದಂತೆ ಕ್ಷೇತ್ರದ ಜನರಿಂದ ದಿನದಿಂದ ದಿನಕ್ಕೆ ಕಾಮಗಾರಿಯ ಬೇಡಿಕೆಗಳು ಬರುತ್ತಿದ್ದು ಈಗ ಬರುತ್ತಿರುವ ಅನುದಾನವನ್ನು ಹೆಚ್ಚು ಪ್ರಮಾಣದಲ್ಲಿ ಹಂಚಿಕೆ ಮಾಡಲು ಸಾಧ್ಯವಾಗುತ್ತಿಲ್ಲ. ಅನೇಕ ವರ್ಷಗಳಿಂದ ಇರುವ ಕೆಲವೊಂದು ಕಾಮಗಾರಿ ಬೇಡಿಕೆಗಳಿಗೆ ಅನುದಾನವನ್ನು‌ನೀಡಬೇಕಿದೆ ಈ ಕಾರಣಕ್ಕೆ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡುವಂತೆ ಶಾಸಕರು‌ಮನವಿ ಸಲ್ಲಿಸಿದರು.

 Share: | | | | |


ಲೇಖಕಿ ಕೈಹಿಡಿದ ಪತ್ರಕರ್ತ ಗಣೇಶ್ ಕಲ್ಲರ್ಪೆ

Posted by Vidyamaana on 2023-11-01 16:44:34 |

Share: | | | | |


ಲೇಖಕಿ ಕೈಹಿಡಿದ ಪತ್ರಕರ್ತ ಗಣೇಶ್ ಕಲ್ಲರ್ಪೆ

ಪುತ್ತೂರು: ಪತ್ರಕರ್ತ  ಗಣೇಶ್ ಎನ್. ಕಲ್ಲರ್ಪೆಅವರು ಬುಧವಾರ ವೈವಾಹಿಕ ಜೀವನಕ್ಕೆ ಕಾಲಿರಿಸಿದರು.


ಸಕಲೇಶಪುರದ ಲೇಖಖಿ (ಸುಶ್ಮಿತಾ) ಅವರೊಂದಿಗೆ ಸಕಲೇಶಪುರದ ಶ್ರೀ ಉಮಾಶಂಕರ ಸಮುದಾಯ ಭವನದಲ್ಲಿ ನ 01 ಬುಧವಾರ ದಂದು ನೆರವೇರಿತು.ಗಣೇಶ್ ರವರ

 ವೈವಾಹಿಕ ಜೀವನಕ್ಕೆ ವಿದ್ಯಮಾನ ಬಳಗ ಶುಭವನ್ನು ಹಾರೈಸುತ್ತಿದೆ.


ವಿವಾಹ ಸಮಾರಂಭಕ್ಕೆ ಹಲವಾರು ಗಣ್ಯರು ಆಗಮಿಸಿ ಶುಭ ಹಾರೈಸಿದರು.

ISIS ನಂಟಿರುವ ವ್ಯಕ್ತಿಯೊಂದಿಗೆ ವೇದಿಕೆ ಹಂಚಿಕೊಂಡ ಸಿದ್ದರಾಮಯ್ಯ: ಯತ್ನಾಳ್ ಆರೋಪ

Posted by Vidyamaana on 2023-12-07 13:17:38 |

Share: | | | | |


ISIS ನಂಟಿರುವ ವ್ಯಕ್ತಿಯೊಂದಿಗೆ ವೇದಿಕೆ ಹಂಚಿಕೊಂಡ ಸಿದ್ದರಾಮಯ್ಯ: ಯತ್ನಾಳ್ ಆರೋಪ

ಬೆಳಗಾವಿ: ಹುಬ್ಬಳ್ಳಿಯ ಬಾಷಾ ಪೀರ್ ದರ್ಗಾ ಬಳಿ ಇತ್ತೀಚೆಗೆ ನಡೆದ ದಕ್ಷಿಣ ಭಾರತ ಮುಸ್ಲಿಂ ಧಾರ್ಮಿಕ ಮುಖಂಡರ ಸಮಾವೇಶದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐಎಸ್ ಉಗ್ರರೊಂದಿಗೆ ನಂಟು ಹೊಂದಿರುವ ವ್ಯಕ್ತಿಯೊಂದಿಗೆ ವೇದಿಕೆ ಹಂಚಿಕೊಂಡಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬುಧವಾರ ಆರೋಪಿಸಿದ್ದಾರೆ.



ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಐಸಿಸ್ ಉಗ್ರರ ಸಂಪರ್ಕ ಹೊಂದಿರುವ ವ್ಯಕ್ತಿ ಡಿಸೆಂಬರ್ 4 ರಂದು ಹುಬ್ಬಳ್ಳಿ ನಗರದ ಬಾಷಾ ಪೀರ್ ದರ್ಗಾ ಬಳಿ ನಡೆದ ದಕ್ಷಿಣ ಭಾರತ ಮುಸ್ಲಿಂ ಧಾರ್ಮಿಕ ಮುಖಂಡರ ಸಮಾವೇಶದಲ್ಲಿ ಭಾಗವಹಿಸಿದ್ದರು.ಆ ವ್ಯಕ್ತಿ ಸಿಎಂ ಸಿದ್ದರಾಮಯ್ಯ ಅವರ ಪಕ್ಕದಲ್ಲೇ ಕುಳಿತಿದ್ದರು. ಐಸಿಸ್ ಸಂಪರ್ಕ ಹೊಂದಿರುವ ವೇದಿಕೆಯಲ್ಲಿರುವ ವ್ಯಕ್ತಿಯ ಬಗ್ಗೆ ಮುಖ್ಯಮಂತ್ರಿಗಳಿಗೆ ಮಾಹಿತಿ ಇಲ್ಲವೇ? ಎಂದು ಯತ್ನಾಳ್ ಪ್ರಶ್ನಿಸಿದ್ದಾರೆ.


“ನಾನು ಈ ಹೇಳಿಕೆಯನ್ನು ನಾನು ಹಗುರವಾದ ಹೇಳಿಕೆ ನೀಡುತ್ತಿಲ್ಲ. ಸಂಪೂರ್ಣ ಗಂಭೀರವಾಗಿ ಹೇಳುತ್ತಿದ್ದೇನೆ. ನಾನು ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಪಡೆದುಕೊಂಡಿದ್ದೇನೆ. ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿರುವ ವ್ಯಕ್ತಿ ಜತೆ ಸಿಎಂ ವೇದಿಕೆ ಹಂಚಿಕೊಂಡಿರುವುದು ಖಂಡನೀಯ’’ ಎಂದಿದ್ದಾರೆ.


”ಬೇಕಾದರೆ ಮಾಹಿತಿ ಪಡೆಯಲಿ. ಮುಖ್ಯಮಂತ್ರಿಗಳ ಕಾರ್ಯಕ್ರಮದಲ್ಲಿ, ವೇದಿಕೆಯಲ್ಲಿರುವ ಎಲ್ಲ ವ್ಯಕ್ತಿಗಳ ಬಗ್ಗೆ ಮಾಹಿತಿ ಲಭ್ಯವಿರುತ್ತದೆ. ಮುಸ್ಲಿಂ ಸಮಾವೇಶದಲ್ಲಿ ಯಾರು ವೇದಿಕೆಯಲ್ಲಿರುತ್ತಾರೆ ಎಂಬ ಬಗ್ಗೆ ಅವರಿಗೆ ಮಾಹಿತಿ ಇಲ್ಲವೇ? ಒಂದು ವಾರದಲ್ಲಿ ಎಲ್ಲಾ ವಿವರಗಳನ್ನು ಹಂಚಿಕೊಳ್ಳುತ್ತೇನೆ” ಎಂದು ಶಾಸಕ ಯತ್ನಾಳ್ ಹೇಳಿರುವುದು ರಾಜ್ಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ:ಆರೋಪಿ ಪ್ರವೀಣ್‌ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್

Posted by Vidyamaana on 2023-12-01 15:58:50 |

Share: | | | | |


ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ:ಆರೋಪಿ ಪ್ರವೀಣ್‌ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್

ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಪ್ರವೀಣ್ ನನ್ನು ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಮಾಡಲಾಗಿದೆ. ಉಡುಪಿ ಸಬ್ ಜೈಲಿನಿಂದ ಆರೋಪಿ ಪ್ರವೀಣ್‌ ಚೌಗಲೆಯನ್ನು ಬೆಂಗಳೂರಿನ ಪರಪ್ಪನ ಅಗ್ರಹಾರಕ್ಕೆ ಸ್ಥಳಾಂತರಿಸಲಾಗಿದೆ.


ನ್ಯಾಯಾಂಗ ಬಂಧನದಲ್ಲಿರುವ ಪ್ರವೀಣ್ ನನ್ನು ಉಡುಪಿಯ ಸಬ್ ಜೈಲಿಗೆ ರವಾನಿಸಲಾಗಿತ್ತು. ಆದರೆ ಈ ಜೈಲಿನಲ್ಲಿ ಈತನಿಗೆ ಭದ್ರತೆ ನೀಡುವುದು ಸವಾಲಾಗಿದೆ. ಸಹಕೈದಿಗಳೇ ಈತ ಮಾಡಿದ ಹೀನ ಕೆಲಸಕ್ಕೆ ಆತನಿಗೆ ಹಲ್ಲೆ ಮಾಡುವ ಸಾಧ್ಯತೆ ಇದೆ. ಹಾಗಾಗಿ ಸೀಮಿತ ವ್ಯವಸ್ಥೆಯಲ್ಲಿ ಪ್ರತ್ಯೇಕ ಸೆಲ್ ನಲ್ಲಿ ಇರಿಸುವುದು ಕಷ್ಟಸಾಧ್ಯ. ಈ ಹಿನ್ನೆಲೆ ಸದ್ಯ ಆರೋಪಿಯನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರ ಮಾಡಲಾಗಿದೆ. ಡಿಸೆಂಬರ್ 5ರ ತನಕ ಈತನಿಗೆ ನ್ಯಾಯಾಂಗ ಬಂಧನವಿದ್ದು, ವಿಡಿಯೋ ಕಾನ್ನರೆನ್ಸ್ ಮೂಲಕವೇ ವಿಚಾರಣೆಯಲ್ಲಿ ಭಾಗವಹಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಕಬ್ಬಡಿ ಸ್ಪರ್ಧಿಗಳ ನಡುವೆ ಮಾರಾಮಾರಿ: ಬೆಚ್ಚಿಬೀಳಿಸುವ ವಿಡಿಯೋ ವೈರಲ್!

Posted by Vidyamaana on 2023-10-09 12:10:54 |

Share: | | | | |


ಕಬ್ಬಡಿ ಸ್ಪರ್ಧಿಗಳ ನಡುವೆ ಮಾರಾಮಾರಿ: ಬೆಚ್ಚಿಬೀಳಿಸುವ ವಿಡಿಯೋ ವೈರಲ್!

ಲಕ್ನೋ ಅಕ್ಟೋಬರ್ 9: ಕಾನ್ಪುರದಲ್ಲಿ ಕಬ್ಬಡಿ ಆಡುವ ಸ್ಪರ್ಧಿಗಳ ನಡುವೆ ಭಯಾನಕವಾಗಿ ಘರ್ಷಣೆ ನಡೆದಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ನೋಡುಗರನ್ನು ಬೆಚ್ಚಿ ಬೀಳಿಸಿದೆ.ಕಾನ್ಪುರದಲ್ಲಿ ನಡೆದ ಕಬಡ್ಡಿ ಪಂದ್ಯವು ತೀವ್ರ ಹಿಂಸಾಚಾರಕ್ಕೆ ತಿರುಗಿದ್ದು ಕಂಡು ಬಂದಿದೆ.ಅದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅದರಲ್ಲಿ ವಿದ್ಯಾರ್ಥಿಗಳು ಕುರ್ಚಿಗಳನ್ನು ಎಸೆಯುವ ಮೂಲಕ ಪರಸ್ಪರ ಹಲ್ಲೆ ನಡೆಸುತ್ತಿರುವುದು ಕಂಡುಬಂದಿದೆ.


ವಿಡಿಯೋ ನೋಡಲು ಕ್ಲಿಕ್ ಮಾಡಿ

ಬೆಚ್ಚಿಬೀಳಿಸುವ ವಿಡಿಯೋ ವೈರಲ್!


ಈ ವಿಡಿಯೋ ಕಾನ್ಪುರದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಸೆರೆಹಿಡಿಯಲಾಗಿದೆ ಎಂದು ಹೇಳಲಾಗುತ್ತಿದೆ.ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ, ಘರ್ಷಣೆಗೆ ಕಾರಣವೇನು ಎಂಬುದು ಸ್ಪಷ್ಟವಾಗಿಲ್ಲ. ಆದರೆ ಹಿಂಸಾಚಾರದಿಂದಾಗಿ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಹೋರಾಟವನ್ನು ನಿಲ್ಲಿಸಲು ಯಾವುದೇ ಭದ್ರತೆಯಿಲ್ಲದೆ, ಅದು ಅನಿಯಂತ್ರಿತವಾಗಿ ಬೆಳೆದಿದೆ.


ಕೆಂಪು ಆಟದ ಉಡುಪು ಧರಿಸಿದ ಸ್ಪರ್ಧಿಗಳು ಪರಸ್ಪರ ಖುರ್ಚಿಗಳಿಂದ ಬಲವಾಗಿ ದಾಳಿ ಮಾಡಿದ್ದಾರೆ. ಕೆಲ ಸ್ಪರ್ಧಿಗಳು ಆತಂಕದಲ್ಲಿ ಸ್ಥಳದಿಂದ ಓಡಿಹೋಗುತ್ತಿರುವುದು ದೃಶ್ಯದಲ್ಲಿ ಕಂಡು ಬಂದಿದೆ. ಸ್ಥಳಿಯರು ವಿಡಿಯೋವನ್ನು ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.

ಸೌಜನ್ಯ ಮನೆಗೆ ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷರ ಭೇಟಿ

Posted by Vidyamaana on 2023-08-22 04:12:00 |

Share: | | | | |


ಸೌಜನ್ಯ ಮನೆಗೆ ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷರ ಭೇಟಿ

ಬೆಳ್ತಂಗಡಿ: ಕಳೆದ 11 ವರ್ಷಗಳ ಹಿಂದೆ ನಡೆದ ಧರ್ಮಸ್ಥಳದ ಪಾಂಗಳ ನಿವಾಸಿ ಸೌಜನ್ಯಾ ಮತ್ತು ಅತ್ಯಾಚಾರ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣ ಆಯೋಗದ ಅಧ್ಯಕ್ಷ ನಾಗನ ಗೌಡ ಸೋಮವಾರ ಸೌಜನ್ಯಾ ಮನೆಗೆ ಭೇಟಿ ನೀಡಿ ಕುಟುಂಬಸ್ಥ ರೊಂದಿಗೆ ಮಾತುಕತೆ ನಡೆಸಿದರು.



ಮಾಧ್ಯಮದೊಂದಿಗೆ ಮಾತನಾಡಿದ ಅವರು, ಅನ್ಯಾಯಕ್ಕೆ ಈಡಾದ ಕುಟುಂಬದ ಪರವಾಗಿ ನಿಲ್ಲುವೆವು. ಅನ್ಯಾಯಕ್ಕೊಳಗಾದವರ ಪರವಾಗಿ ಆಯೋಗದಿಂಂದ ಯಾವೆಲ್ಲ ರೀತಿ ಕಾನೂನು ರೀತಿ ಮುಂದುವರಿಯಲು ಸಾಧ್ಯವಿದೆಯೋ ಎಂಬುದನ್ನು ಎಲ್ಲ ಆಯಾಮಗಳಡಿ ಪರಿಶೀಲಿಸ ಲಾಗುವುದು. ಬಳಿಕ ಸರಕಾರದ ಹಾಗೂ ಸಿಎಂ ಗಮನಕ್ಕೆ ತಂದು ಮನವರಿಕೆ ಮಾಡಲಿದ್ದೇವೆ ಎಂದರು.


ಸರಕಾರಿ ಹುದ್ದೆಗೆ ಶಿಫಾರಸು

ಸೌಜನ್ಯಾಳ ಸಹೋದರ ಹಾಗೂ ಸಹೋದರಿಯರಲ್ಲಿ ಒಬ್ಬರಿಗೆ ಸರಕಾರಿ ಉದ್ಯೋಗ ನೀಡಲು ಸಾಧ್ಯವಿದೆಯೇ ಎಂಬುದನ್ನು ಪರಿಶೀಲಿಸಿ ಶಿಫಾರಸು ಮಾಡಲಾಗುವುದು ಎಂದರು.


ಬಸ್‌, ಅಂಗನವಾಡಿಗೆ ಯೋಚನೆ

ಕೃತ್ಯ ನಡೆದ ಸ್ಥಳದಲ್ಲಿ ಮಕ್ಕಳು ಶಾಲೆಗೆ ನಡೆದುಕೊಂಡು ಹೋಗುತ್ತಿದ್ದು, ಬಸ್ಸಿನ ವ್ಯವಸ್ಥೆ ಕಲ್ಪಿಸಬೇಕು ಹಾಗೂ ಸ್ಥಳೀಯವಾಗಿ ಅಂಗನವಾಡಿ ಕೇಂದ್ರದ ಬೇಡಿಕೆ ಬಗ್ಗೆ ಸೌಜನ್ಯಳ ಮನೆಮಂದಿಗೆ ತಿಳಿಸಿದ್ದಾರೆ. ಬಸ್‌ ವ್ಯವಸ್ಥೆ ಮಾಡುವಂತೆ ಕೆಎಸ್ಸಾರ್ಟಿಸಿ ಡಿಪೋ ಮ್ಯಾನೇಜರ್‌ಗೆ ಸೂಚಿಸಿದ್ದೇನೆ ಎಂದರು.ಘಟನ ಸ್ಥಳಕ್ಕೆ ಭೇಟಿ

ಇದಕ್ಕೂ ಮುನ್ನ ಸೌಜನ್ಯಾ ಮೃತದೇಹ ದೊರೆತ ಸ್ಥಳಕ್ಕೆ ಭೇಟಿ ನೀಡಿದ ಅವರು ಪೊಲೀಸರಿಂದ ಮಾಹಿತಿ ಪಡೆದುಕೊಂಡರು. ಸೌಜನ್ಯಾ ತಾಯಿ ಕುಸುಮಾವತಿ ಹಾಗೂ ಮಾವ ವಿಟuಲ ಗೌಡರಿಂದ ಮಾಹಿತಿ ಕಲೆ ಹಾಕಿದರು.

ವಿಟ್ಲದಲ್ಲಿ ದೌರ್ಜನ್ಯಕ್ಕೆ ಈಡಾದ ಮಗುವಿಗೆ ನ್ಯಾಯ ಒದಗಿಸಲು ಎಲ್ಲ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದ ಅವರು, ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಸೂಚನೆಗಳನ್ನು ನೀಡಲಾಗಿದೆ ಎಂದು ತಿಳಿಸಿದರು.

ಸಿಡಿಪಿಒ ಪ್ರಿಯಾ ಆ್ಯಗ್ನೆಸ್‌, ವೃತ್ತ ನಿರೀಕ್ಷಕ ನಾಗೇಶ್‌ ಕದ್ರಿ, ಧರ್ಮಸ್ಥಳ, ಬೆಳ್ತಂಗಡಿ ಪೊಲೀಸ್‌ ಠಾಣೆ ಉಪನಿರೀಕ್ಷಕರು ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.


ಪ್ರತೀ ಗ್ರಾಮದಲ್ಲಿ ಪೋಕ್ಸೋ ಜಾಗೃತಿ

ಬೆಳ್ತಂಗಡಿ ಪ್ರವಾಸಿ ಮಂದಿರದಲ್ಲಿ ತಾಲೂಕಿನ ವಿವಿಧ ಇಲಾಖೆ ಅಧಿಕಾರಿಗಳ ಜತೆ ಸಭೆ ನಡೆಸಿದ ನಾಗನ ಗೌಡ ಅವರು, ಪೋಕ್ಸೋ ಎಂಬ ಗಂಭೀರ ಕಾನೂನಿನ ಬಗ್ಗೆ ಗ್ರಾಮೀಣ ಮಟ್ಟದಲ್ಲಿ ಜನರಲ್ಲಿ ಜಾಗೃತಿ ಮೂಡಿಸಬೇಕಾದ ಅಗತ್ಯವಿದೆ. ಮಕ್ಕಳ ಮೇಲೆ ದೌರ್ಜನ್ಯ ಎಸಗಿದರೆ ಅದರ ಶಿಕ್ಷೆಯ ಪ್ರಮಾಣದ ಪ್ರತೀ ಗ್ರಾ.ಪಂ. ವ್ಯಾಪ್ತಿಯಲ್ಲಿ ಮೈಕ್‌ ಮೂಲಕ ಮೈಕ್‌ನಲ್ಲಿ ಪ್ರಚಾರ ಮಾಡುವಂತೆ ತಹಶೀಲ್ದಾರ್‌ ಮತ್ತು ತಾ.ಪಂ. ಇಒ, ಪೊಲೀಸ್‌ ಅಧಿಕಾರಿಗಳಿಗೆ ಸೂಚಿಸಿದರು

ಸಕಲೇಶಪುರ: ಪೊಲೀಸ್​ ಕಾನ್ಸ್​ಟೇಬಲ್​ ಆತ್ಮಹತ್ಯೆ

Posted by Vidyamaana on 2024-01-19 14:39:12 |

Share: | | | | |


ಸಕಲೇಶಪುರ: ಪೊಲೀಸ್​ ಕಾನ್ಸ್​ಟೇಬಲ್​ ಆತ್ಮಹತ್ಯೆ

ಹಾಸನ: ಸಕಲೇಶಪುರದ ಪೊಲೀಸ್​ ಕ್ವಾರ್ಟರ್ಸ್​ ನಲ್ಲಿ ಕಾನ್ಸ್​ ಟೇಬಲ್​ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


ಸೋಮಶೇಖರ್ (39) ಮೃತರು ಎಂದು ತಿಳಿದು ಬಂದಿದೆ.ಸಕಲೇಶಪುರದಲ್ಲಿ 112 ಪೊಲೀಸ್ ವಾಹನದ ಚಾಲಕನಾಗಿ ಸೋಮಶೇಖರ್ ಕರ್ತವ್ಯ ನಿರ್ವಹಿಸುತ್ತಿದ್ದರು. ಪತಿ ಸೋಮಶೇಖರ್ ವಿರುದ್ಧ ಕಿರುಕುಳ ಆರೋಪ ಮಾಡಿ ಪತ್ನಿ DySPಗೆ ದೂರು ನೀಡಿದ್ದರು. ಇದರಿಂದ ಮನನೊಂದು ಸೋಮಶೇಖರ್ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸಕಲೇಶಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ



Leave a Comment: