ಅಟಲ್ ಸೇತು ಮೇಲೆ ಕಾರು ನಿಲ್ಲಿಸಿ ಸಮುದ್ರಕ್ಕೆ ಹಾರಿದ ಇಂಜಿನಿಯರ್: ಕೃತ್ಯ ಸಿಸಿಟಿವಿಯಲ್ಲಿ ಸೆರೆ

ಸುದ್ದಿಗಳು News

Posted by vidyamaana on 2024-07-25 16:43:22 |

Share: | | | | |


ಅಟಲ್ ಸೇತು ಮೇಲೆ ಕಾರು ನಿಲ್ಲಿಸಿ ಸಮುದ್ರಕ್ಕೆ ಹಾರಿದ ಇಂಜಿನಿಯರ್: ಕೃತ್ಯ ಸಿಸಿಟಿವಿಯಲ್ಲಿ ಸೆರೆ

 ಮುಂಬೈ: ಇಂಜಿನಿಯರ್ ಒಬ್ಬರು ತಮ್ಮ ಕಾರನ್ನು ಅಟಲ್ ಸೇತುವಿನಲ್ಲಿ ನಿಲ್ಲಿಸಿ ಸೇತುವೆಯಿಂದ ಕೆಳಗೆ ಹಾರಿದ್ದಾರೆ. ಈ ದೃಶ್ಯ ಅಲ್ಲಿ ಇದ್ದ ಸಿಸಿ ಕ್ಯಾಮರಾದಲ್ಲಿ ರೆಕಾರ್ಡ್ ಆಗಿದ್ದು, ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ನಿನ್ನೆ ಮಧ್ಯಾಹ್ನ ಈ ಘಟನೆ ನಡೆದಿದೆ.

ಸೇತುವೆಯಿಂದ ಕೆಳಗೆ ಹಾರಿದವರನ್ನು ಡೊಂಬಿವಿಲಿಯ ಪಲ್ಲವ ನಗರದ ನಿವಾಸಿ ಕರ್ತುರಿ ಶ್ರೀನಿವಾಸ್ ಎಂದು ಗುರುತಿಸಲಾಗಿದೆ. ಇವರು ತಮ್ಮ ಪತ್ನಿ ಹಾಗೂ ಮಗಳೊಂದಿಗೆ ವಾಸ ಮಾಡುತ್ತಿದ್ದರು.

ಮಧ್ಯಾಹ್ನ 12.35ರ ಸುಮಾರಿಗೆ ಇವರು ತಮ್ಮ ಕಾರಿನಲ್ಲಿ ಆಟಲ್ ಸೇತು ಬ್ರಿಡ್ಜ್ ಮೇಲೆ ಬಂದಿದ್ದು, ಸೇತುವೆ ಮೇಲೆ ಕಾರು ನಿಲ್ಲಿಸಿ ಸಮುದ್ರಕ್ಕೆ ಹಾರಿದ್ದಾರೆ. ಇದು ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದ್ದು, ಟೋಲ್ ಕಂಟ್ರೋಲ್‌ ರೂಮ್‌ನವರ ಗಮನಕ್ಕೆ ಬಂದಿದೆ. ಕೂಡಲೇ ಅವರು ನವಶೇವ ಪೊಲೀಸರಿಗೆ ವಿಚಾರ ಮುಟ್ಟಿಸಿದ್ದಾರೆ.

ಕೂಡಲೇ ಎಂಟಿಹೆಚ್‌ಎಲ್‌ನಿಂದ ರಕ್ಷಣಾ ತಂಡ ಹಾಗೂ ಕರಾವಳಿ ಭದ್ರತಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಯುವಕನಿಗಾಗಿ ಹುಡುಕಾಟ ನಡೆಸಿದ್ದಾರೆ. ಹಣಕಾಸಿನ ತೊಂದರೆಯಿಂದಲೇ ಶ್ರೀನಿವಾಸ್ ಈ ನಿರ್ಧಾರ ತೆಗೆದುಕೊಂಡಿರಬಹುದು ಎಂದು ಶಂಕಿಸಲಾಗಿದೆ. ಕಾರಿನಲ್ಲಿ ಕೇವಲ ತನ್ನ ಪರ್ಸ್ ಮಾತ್ರ ಬಿಟ್ಟು ಶ್ರೀನಿವಾಸ್ ಸಮುದ್ರಕ್ಕೆ ಹಾರಿದ್ದಾರೆ. ಈ ಪರ್ಸ್‌ನಲ್ಲಿ ಆಧಾರ್ ಕಾರ್ಡ್‌, ತಾನು ಕೆಲಸ ಮಾಡುತ್ತಿದ್ದ ಸಂಸ್ಥೆಯ ಐಡಿ ಕಾರ್ಡ್ ಇತ್ತು. ಡೆತ್‌ನೋಟ್ ಆಗಲಿ, ಫೋನ್ ಆಗಲಿ ಕಾರಿನಲ್ಲಿ ಪತ್ತೆಯಾಗಿಲ್ಲ ಎಂದ ಪೊಲೀಸ್ ಇನ್ಸ್‌ಪೆಕ್ಟರ್ ಅಂಜುಮನ್ ಬಾಗ್ವಾನ್ ಹೇಳಿದ್ದಾರೆ.

ಬಿಟೆಕ್ ಮಾಡಿದ್ದ ಶ್ರೀನಿವಾಸ್ ಮುಂಬೈನ ಲೋಧಾದಲ್ಲಿ 2023ರಲ್ಲಿ ಕೆಲ ಕಾಲ ಕೆಲಸ ಮಾಡಿದ್ದರು. ಇದಕ್ಕೂ ಮೊದಲು ಅರಬ್ ರಾಷ್ಟ್ರ ಕುವೈತ್‌ನಲ್ಲಿ ಕೆಲಸ ಮಾಡಿದ್ದರು. 2023ರಲ್ಲಿ ಮುಂಬೈಗೆ ವಾಪಸಾದ ಅವರು ಲೋಧಾ ಗ್ರೂಪ್‌ಗೆ ಕೆಲಸಕ್ಕೆ ಸೇರಿದ್ದರು. ಇದಾದ ನಂತರ ಇವರು ತಮ್ಮ ಪಾಲುದಾರರ ಜೊತೆಗೂಡಿ ಇಲೆಕ್ಟ್ರಿಕ್ ಕಂಟ್ರಾಕ್ಟ್ ಕೆಲಸ ಶುರು ಮಾಡಿದ್ದರು. ಶ್ರೀನಿವಾಸ್ ಪತ್ನಿಯಿಂದಲೂ ಪೊಲೀಸರು ಹೇಳಿಕೆ ಪಡೆದುಕೊಂಡಿದ್ದು, ಶ್ರೀನಿವಾಸ್ ಈ ಹಿಂದೆಯೂ ಕುವೈತ್‌ನಲ್ಲಿ ಕೆಲಸ ಮಾಡುತ್ತಿದ್ದಾಗ ಜೀವ ಕಳೆದುಕೊಳ್ಳಲು ಮುಂದಾಗಿದ್ದರು. ಈ ವೇಳೆ ಸಮಯಕ್ಕೆ ಸರಿಯಾಗಿ ಯಾರೋ ಪಾರು ಮಾಡಿದ್ದರಿಂದ ಅವರ ಜೀವ ಉಳಿದಿತ್ತು ಎಂದು ಪತ್ನಿ ಹೇಳಿದ್ದಾರೆ.

ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ

ಶ್ರೀನಿವಾಸ್ ಕಡೆಯದಾಗಿ ಸಂಬಂಧಿಕರೊಬ್ಬರ ಜೊತೆ ಮಾತನಾಡಿದ್ದು, ಈ ವೇಳೆ ಅವರು ಸಹಜವಾಗಿ ಮಾತನಾಡಿದ್ದರು ಎಂದು ತಿಳಿದು ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ. ಆದರೆ ಇದುವರೆಗೂ ನೀರಿಗೆ ಹಾರಿದ ಶ್ರೀನಿವಾಸ್ ಅವರನ್ನು ಪತ್ತೆ ಮಾಡಲು ಸಾಧ್ಯವಾಗಿಲ್ಲ. ಇದು ಮೊದಲ ಪ್ರಕರಣ ಅಲ್ಲ ಈ ಹಿಂದೆ ಮಹಿಳಾ ವೈದ್ಯರೊಬ್ಬರು ಅಟಲ್ ಸೇತುವಿನಿಂದ ಕೆಳಗೆ ಹಾರಿ ತಮ್ಮ ಜೀವನವನ್ನು ಅಂತ್ಯಗೊಳಿಸಿದ್ದರು.

 Share: | | | | |


ಶಕ್ತಿ ಯೋಜನೆಯ ಲಾಭ ಪಡೆಯಲು ಬುರ್ಖಾ ಧರಿಸಿ ಬಂದು ಸಿಕ್ಕಿ ಬಿದ್ದ ವೀರಭದ್ರಯ್ಯ

Posted by Vidyamaana on 2023-07-07 04:08:07 |

Share: | | | | |


ಶಕ್ತಿ ಯೋಜನೆಯ ಲಾಭ ಪಡೆಯಲು ಬುರ್ಖಾ ಧರಿಸಿ ಬಂದು ಸಿಕ್ಕಿ ಬಿದ್ದ ವೀರಭದ್ರಯ್ಯ

ಹುಬ್ಬಳ್ಳಿ: ರಾಜ್ಯ ಸರ್ಕಾರದ ಶಕ್ತಿ ಯೋಜನೆಯ ಲಾಭ ಪಡೆಯಲು ವ್ಯಕ್ತಿಯೋರ್ವ ಬುರ್ಖಾ ಧರಿಸಿದ ಅನುಮಾನ ವ್ಯಕ್ತವಾಗಿದೆ.


ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಸಂಶಿ ಗ್ರಾಮದ ಬಸ್ ನಿಲ್ದಾಣದಲ್ಲಿ ಬುರ್ಖಾ ಹಾಕಿದ ವ್ಯಕ್ತಿ ಪತ್ತೆಯಾಗಿದ್ದು, ಮೂಲತಃ ವಿಜಯಪುರ ಜಿಲ್ಲೆಯ ನಿವಾಸಿಯಾಗಿರುವ ವೀರಭದ್ರಯ್ಯ ಎಂದು ಗುರುತಿಸಲಾಗಿದೆ.


ವೀರಭದ್ರಯ್ಯ ಬಳಿ ಆಧಾರ್ ಕಾರ್ಡ್ ಪತ್ತೆಯಾಗಿದ್ದು, ಹೀಗಾಗಿ ಶಕ್ತಿ ಯೋಜನೆಯ ಲಾಭ ಪಡೆಯಲು ಮುಂದಾಗಿರುವ ಅನುಮಾನ ವ್ಯಕ್ತವಾಗಿದೆ. ಆದರೆ ಭಿಕ್ಷಾಟನೆ ಮಾಡುವ ಉದ್ದೇಶದಿಂದಾಗಿ ತಾನು ಬುರ್ಖಾ ಧರಿಸಿದ್ದಾಗಿ ವೀರಭದ್ರಯ್ಯ ಹೇಳಿದ್ದಾನೆ.

ಬಸ್ ನಿಲ್ದಾಣದಲ್ಲಿ ಸಾರ್ವಜನಿಕರಿಗೆ ಅನುಮಾನ ಬಂದು ವಿಚಾರಣೆ ಮಾಡಿದಾಗ ಭಿಕ್ಷಾಟನೆಗೆ ಬುರ್ಖಾ ಹಾಕಿರುವುದಾಗಿ ವೀರಭದ್ರಯ್ಯ ಹೇಳಿದ್ದಾನೆ

ಮೋದಿ ಪದಗ್ರಹಣದ ವಿಜಯೋತ್ಸವ ವೇಳೆ ಬಿಜೆಪಿ ಕಾರ್ಯಕರ್ತರಿಗೆ ಚಾಕು ಇರಿತ ಕೇಸ್ : ಪೊಲೀಸ್ ಕಮಿಷನರ್ ಅಗರ್ವಾಲ್ ಹೇಳಿದ್ದೇನು?

Posted by Vidyamaana on 2024-06-11 17:13:19 |

Share: | | | | |


ಮೋದಿ ಪದಗ್ರಹಣದ ವಿಜಯೋತ್ಸವ ವೇಳೆ ಬಿಜೆಪಿ ಕಾರ್ಯಕರ್ತರಿಗೆ ಚಾಕು ಇರಿತ ಕೇಸ್ : ಪೊಲೀಸ್ ಕಮಿಷನರ್ ಅಗರ್ವಾಲ್ ಹೇಳಿದ್ದೇನು?

ಮಂಗಳೂರು : ನರೇಂದ್ರ ಮೋದಿ ಅವರು ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ದಿನದಂದು ಮಂಗಳೂರಿನ ಬೋಳಿಯಾರು ನಲ್ಲಿ ವಿಜಯೋತ್ಸವ ಮಾಡುತ್ತಿದ್ದ ಬಿಜೆಪಿ ಕಾರ್ಯಕರ್ತರಿಗೆ ಚಾಕು ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸ್ ಕಮಿಷನರ್  ಅನುಪಮ ಅಗರ್ವಾಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ 6 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿಸಿದರು.

ಸುದ್ದಿಗಾರರೊಂದಿಗೆ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ ಅಗರ್ವಾಲ್ ಹೇಳಿಕೆ ನೀಡಿದ್ದು, ಘಟನೆಗೆ ಸಂಬಂಧಿಸಿದಂತೆ ಸಿಸಿ ಕ್ಯಾಮೆರಾ ದೃಶ್ಯಗಳನ್ನು ಆಧರಿಸಿ 20 ಜನರನ್ನು ವಶಕ್ಕೆ ಪಡೆದಿದ್ದವು. ಚಾಕು ಇರಿತ ಪ್ರಕರಣ ಸಂಬಂಧ ಒಟ್ಟು ಆರು ಮಂದಿಯನ್ನು ಬಂಧಿಸಿದ್ದೇವೆ. ಇನ್ನುಳಿದವರ ಬಂಧನ ಪ್ರಕ್ರಿಯೆ ನಡೆಯುತ್ತಿದೆ. ಮೂರು ತಂಡಗಳ ಮೂಲಕ ತನಿಖೆ ನಡೆಯುತ್ತಿದೆ ಎಂದರು.

BREAKING : ಪ್ಯಾರಿಸ್ ಒಲಿಂಪಿಕ್ಸ್ ನಿಂದ ವಿನೇಶ್ ಫೋಗಟ್ ಅನರ್ಹ : IOA ನಿಂದ ಅಧಿಕೃತ ಹೇಳಿಕೆ ಬಿಡುಗಡೆ

Posted by Vidyamaana on 2024-08-07 13:07:16 |

Share: | | | | |


BREAKING : ಪ್ಯಾರಿಸ್ ಒಲಿಂಪಿಕ್ಸ್ ನಿಂದ ವಿನೇಶ್ ಫೋಗಟ್ ಅನರ್ಹ : IOA ನಿಂದ ಅಧಿಕೃತ ಹೇಳಿಕೆ ಬಿಡುಗಡೆ

ನವದೆಹಲಿ : ಇಂದು ಚಿನ್ನ ಗೆಲ್ಲುವ ಭಾರತದ ಕನಸು ಭಗ್ನಗೊಂಡಿದೆ. ಪ್ಯಾರಿಸ್: ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಪ್ಯಾರಿಸ್ ಒಲಿಂಪಿಕ್ಸ್ ಫೈನಲ್ನಿಂದ ಅನರ್ಹಗೊಂಡಿದ್ದಾರೆ.50 ಕೆಜಿ ವಿಭಾಗದಲ್ಲಿ ಹೋರಾಡುವ ಕುಸ್ತಿಪಟು 100 ಗ್ರಾಂ ಅಧಿಕ ತೂಕ ಹೊಂದಿರುವುದು ಕಂಡುಬಂದಿದೆ.ಭಾರತೀಯ ಒಲಿಂಪಿಕ್ಸ್ ಅಸೋಸಿಯೇಷನ್ ವಿನೇಶ್ ಅವರ ಅನರ್ಹತೆಯ ಹೇಳಿಕೆಯನ್ನು ಬಿಡುಗಡೆ ಮಾಡಿದೆ.

ಪುತ್ತೂರು- ನಿಂತಿದ್ದ ಗೂಡ್ಸ್ ಲಾರಿಗೆ ಕಾರು ಡಿಕ್ಕಿ-ಪೈವಳಿಕೆ ಮೂಲದ ನಾಲ್ವರಿಗೆ ಗಂಭೀರ ಗಾಯ

Posted by Vidyamaana on 2024-03-10 20:33:46 |

Share: | | | | |


ಪುತ್ತೂರು- ನಿಂತಿದ್ದ ಗೂಡ್ಸ್ ಲಾರಿಗೆ ಕಾರು ಡಿಕ್ಕಿ-ಪೈವಳಿಕೆ ಮೂಲದ ನಾಲ್ವರಿಗೆ ಗಂಭೀರ ಗಾಯ

ಪುತ್ತೂರು ಮಾ 10: ರಸ್ತೆ ಬದಿ ನಿಲ್ಲಿಸಿದ್ದ ಗೂಡ್ಸ್ ಲಾರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಪುತ್ತೂರು ತಾಲೂಕಿನ ಮರೀಲ್ ನ ಕ್ಯಾಂಸ್ಕೋ ಚಾಕೊಲೇಟ್ ಫ್ಯಾಕ್ಟರಿ ಬಳಿ ನಡೆದಿದೆ.


ಗುಲಾಬಿ (55), ಕೃಷ್ಣಪ್ಪ ನಾಯ್ಕ (60) ಇಬ್ಬರಿಗೆ ಗಂಭೀರ ಗಾಯ, ರೋಹಿಣಿ (32), ಗನ್ಯ (2) ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಕಾಸರಗೋಡು ಜಿಲ್ಲೆಯ ಪೈವಳಿಕೆ ಗ್ರಾಮದ ಸುಳ್ಳಿಮಲೆಯ ಒಂದೇ ಕುಟುಂಬದ ನಿವಾಸಿಗಳು ಕಾರಿನಲ್ಲಿ ಬರುತ್ತಿದ್ದ ವೇಳೆ ಎದುರಿಗೆ ವೇಗವಾಗಿ ಬಂದ ಬೈಕ್ ಸೈಡ್ ಕೋಡುವ ಸಂದರ್ಭ ಕಾರು ರಸ್ತೆ ಬದಿ ನಿಲ್ಲಿಸಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.ಗಂಭೀರ ಗಾಯಗೊಂಡ ದಂಪತಿಯನ್ನ ಸರ್ಕಾರಿ ಆಸ್ಪತ್ರೆಗೆ ತಂದು ಬಳಿಕ ಹೆಚ್ಚಿನ ಚಿಕಿತ್ಸೆಗೆ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಾಲಾಗಿದೆ. ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣಾ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಾಗಿದೆ.

ನೆಲಮಂಗಲ ಬಳಿ ಕೆಎಸ್‌ಆರ್‌ಟಿಸಿ ಬಸ್ ಭೀಕರ ಅಪಘಾತ

Posted by Vidyamaana on 2024-05-18 14:55:49 |

Share: | | | | |


ನೆಲಮಂಗಲ ಬಳಿ ಕೆಎಸ್‌ಆರ್‌ಟಿಸಿ ಬಸ್ ಭೀಕರ ಅಪಘಾತ

ಬೆಂಗಳೂರು : ಚಾಲಕನ ನಿಯಂತ್ರಣ ತಪ್ಪಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್‌ಆರ್‌ಟಿಸಿ) ಬಸ್ವೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಮತ್ತು ನಿರ್ವಾಹಕ ಸೇರಿ 6 ಮಂದಿ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಅಡಕಮಾರನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ ಮೇಲ್ಸೇತುವೆಯಲ್ಲಿ ಘಟನೆ ನಡೆದಿದ್ದು, 4 ಅಡಿ ಎತ್ತರದ ರಸ್ತೆ ವಿಭಜಕವನ್ನು ದಾಟಿ ಎದುರು ರಸ್ತೆಗೆ ಡಿವೈಡರ್‌ ಮೇಲೆ ಬಸ್‌ ಬಂದು ನಿಂತಿದೆ.ಬೆಂಗಳೂರು-ಸೋಮವಾರಪೇಟೆ ಬಸ್ ಅಪಘಾತಕ್ಕೀಡಾಗಿದ್ದು ಮುಂಭಾಗದಲ್ಲಿ ಕುಳಿತಿದ್ದವರಿಗೆ ಗಾಯಗಳಾಗಿದೆ ಎಂದು ವರದಿಗಳು ತಿಳಿಸಿವೆ.

ಪುತ್ತೂರು: ಖ್ಯಾತ ಪಾಕತಜ್ಞ ಖಾದರ್ ಕೆರೆಮೂಲೆ ಹೃದಯಾಘಾತದಿಂದ ನಿಧನ

Posted by Vidyamaana on 2023-09-27 20:39:28 |

Share: | | | | |


ಪುತ್ತೂರು: ಖ್ಯಾತ ಪಾಕತಜ್ಞ ಖಾದರ್ ಕೆರೆಮೂಲೆ ಹೃದಯಾಘಾತದಿಂದ ನಿಧನ

ಪುತ್ತೂರು: ಸಾಲ್ಮರ ನಿವಾಸಿ ಅಬ್ದುಲ್ ಖಾದರ್ ಕೆರೆಮೂಲೆ ಯವರು ಹೃದಯಾಘಾತದಿಂದ ಸೆ. 27ರಂದು ನಿಧನರಾದರು. 

ನುರಿತ ಪಾಕತಜ್ಞರಾಗಿದ್ದ ಅವರು, ಉಪ್ಪಿನಂಗಡಿ ಸಮೀಪದ ಕುದ್ರಡ್ಕ ಮಸೀದಿ ಕಾರ್ಯಕ್ರಮವೊಂದರಲ್ಲಿ ಅಡುಗೆ ಕೆಲಸದಲ್ಲಿ ತೊಡಗಿಕೊಂಡಿರುವಾಗಲೇ ಕುಸಿದು ಬಿದ್ದು ನಿಧನರಾದರು.

ಅವರ ಅಂತಿಮ ವಿಧಿವಿಧಾನ ಸೆ. 28ರಂದು ಬೆಳಗ್ಗಿನ ನಮಾಝ್ ನ ನಂತರ ನಡೆಯಲಿದೆ. ಬೆಳಿಗ್ಗೆ 7ಕ್ಕೆ ಮಯ್ಯತ್ ನಮಾಝ್ ಮಾಡಿದ ನಂತರ ಸೈಯ್ಯದ್ ಮಲೆಯಲ್ಲಿ ದಫನ ಕಾರ್ಯ ಮಾಡಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

Recent News


Leave a Comment: