ಅಟಲ್ ಸೇತು ಮೇಲೆ ಕಾರು ನಿಲ್ಲಿಸಿ ಸಮುದ್ರಕ್ಕೆ ಹಾರಿದ ಇಂಜಿನಿಯರ್: ಕೃತ್ಯ ಸಿಸಿಟಿವಿಯಲ್ಲಿ ಸೆರೆ

ಸುದ್ದಿಗಳು News

Posted by vidyamaana on 2024-07-25 16:43:22 |

Share: | | | | |


ಅಟಲ್ ಸೇತು ಮೇಲೆ ಕಾರು ನಿಲ್ಲಿಸಿ ಸಮುದ್ರಕ್ಕೆ ಹಾರಿದ ಇಂಜಿನಿಯರ್: ಕೃತ್ಯ ಸಿಸಿಟಿವಿಯಲ್ಲಿ ಸೆರೆ

 ಮುಂಬೈ: ಇಂಜಿನಿಯರ್ ಒಬ್ಬರು ತಮ್ಮ ಕಾರನ್ನು ಅಟಲ್ ಸೇತುವಿನಲ್ಲಿ ನಿಲ್ಲಿಸಿ ಸೇತುವೆಯಿಂದ ಕೆಳಗೆ ಹಾರಿದ್ದಾರೆ. ಈ ದೃಶ್ಯ ಅಲ್ಲಿ ಇದ್ದ ಸಿಸಿ ಕ್ಯಾಮರಾದಲ್ಲಿ ರೆಕಾರ್ಡ್ ಆಗಿದ್ದು, ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ನಿನ್ನೆ ಮಧ್ಯಾಹ್ನ ಈ ಘಟನೆ ನಡೆದಿದೆ.

ಸೇತುವೆಯಿಂದ ಕೆಳಗೆ ಹಾರಿದವರನ್ನು ಡೊಂಬಿವಿಲಿಯ ಪಲ್ಲವ ನಗರದ ನಿವಾಸಿ ಕರ್ತುರಿ ಶ್ರೀನಿವಾಸ್ ಎಂದು ಗುರುತಿಸಲಾಗಿದೆ. ಇವರು ತಮ್ಮ ಪತ್ನಿ ಹಾಗೂ ಮಗಳೊಂದಿಗೆ ವಾಸ ಮಾಡುತ್ತಿದ್ದರು.

ಮಧ್ಯಾಹ್ನ 12.35ರ ಸುಮಾರಿಗೆ ಇವರು ತಮ್ಮ ಕಾರಿನಲ್ಲಿ ಆಟಲ್ ಸೇತು ಬ್ರಿಡ್ಜ್ ಮೇಲೆ ಬಂದಿದ್ದು, ಸೇತುವೆ ಮೇಲೆ ಕಾರು ನಿಲ್ಲಿಸಿ ಸಮುದ್ರಕ್ಕೆ ಹಾರಿದ್ದಾರೆ. ಇದು ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದ್ದು, ಟೋಲ್ ಕಂಟ್ರೋಲ್‌ ರೂಮ್‌ನವರ ಗಮನಕ್ಕೆ ಬಂದಿದೆ. ಕೂಡಲೇ ಅವರು ನವಶೇವ ಪೊಲೀಸರಿಗೆ ವಿಚಾರ ಮುಟ್ಟಿಸಿದ್ದಾರೆ.

ಕೂಡಲೇ ಎಂಟಿಹೆಚ್‌ಎಲ್‌ನಿಂದ ರಕ್ಷಣಾ ತಂಡ ಹಾಗೂ ಕರಾವಳಿ ಭದ್ರತಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಯುವಕನಿಗಾಗಿ ಹುಡುಕಾಟ ನಡೆಸಿದ್ದಾರೆ. ಹಣಕಾಸಿನ ತೊಂದರೆಯಿಂದಲೇ ಶ್ರೀನಿವಾಸ್ ಈ ನಿರ್ಧಾರ ತೆಗೆದುಕೊಂಡಿರಬಹುದು ಎಂದು ಶಂಕಿಸಲಾಗಿದೆ. ಕಾರಿನಲ್ಲಿ ಕೇವಲ ತನ್ನ ಪರ್ಸ್ ಮಾತ್ರ ಬಿಟ್ಟು ಶ್ರೀನಿವಾಸ್ ಸಮುದ್ರಕ್ಕೆ ಹಾರಿದ್ದಾರೆ. ಈ ಪರ್ಸ್‌ನಲ್ಲಿ ಆಧಾರ್ ಕಾರ್ಡ್‌, ತಾನು ಕೆಲಸ ಮಾಡುತ್ತಿದ್ದ ಸಂಸ್ಥೆಯ ಐಡಿ ಕಾರ್ಡ್ ಇತ್ತು. ಡೆತ್‌ನೋಟ್ ಆಗಲಿ, ಫೋನ್ ಆಗಲಿ ಕಾರಿನಲ್ಲಿ ಪತ್ತೆಯಾಗಿಲ್ಲ ಎಂದ ಪೊಲೀಸ್ ಇನ್ಸ್‌ಪೆಕ್ಟರ್ ಅಂಜುಮನ್ ಬಾಗ್ವಾನ್ ಹೇಳಿದ್ದಾರೆ.

ಬಿಟೆಕ್ ಮಾಡಿದ್ದ ಶ್ರೀನಿವಾಸ್ ಮುಂಬೈನ ಲೋಧಾದಲ್ಲಿ 2023ರಲ್ಲಿ ಕೆಲ ಕಾಲ ಕೆಲಸ ಮಾಡಿದ್ದರು. ಇದಕ್ಕೂ ಮೊದಲು ಅರಬ್ ರಾಷ್ಟ್ರ ಕುವೈತ್‌ನಲ್ಲಿ ಕೆಲಸ ಮಾಡಿದ್ದರು. 2023ರಲ್ಲಿ ಮುಂಬೈಗೆ ವಾಪಸಾದ ಅವರು ಲೋಧಾ ಗ್ರೂಪ್‌ಗೆ ಕೆಲಸಕ್ಕೆ ಸೇರಿದ್ದರು. ಇದಾದ ನಂತರ ಇವರು ತಮ್ಮ ಪಾಲುದಾರರ ಜೊತೆಗೂಡಿ ಇಲೆಕ್ಟ್ರಿಕ್ ಕಂಟ್ರಾಕ್ಟ್ ಕೆಲಸ ಶುರು ಮಾಡಿದ್ದರು. ಶ್ರೀನಿವಾಸ್ ಪತ್ನಿಯಿಂದಲೂ ಪೊಲೀಸರು ಹೇಳಿಕೆ ಪಡೆದುಕೊಂಡಿದ್ದು, ಶ್ರೀನಿವಾಸ್ ಈ ಹಿಂದೆಯೂ ಕುವೈತ್‌ನಲ್ಲಿ ಕೆಲಸ ಮಾಡುತ್ತಿದ್ದಾಗ ಜೀವ ಕಳೆದುಕೊಳ್ಳಲು ಮುಂದಾಗಿದ್ದರು. ಈ ವೇಳೆ ಸಮಯಕ್ಕೆ ಸರಿಯಾಗಿ ಯಾರೋ ಪಾರು ಮಾಡಿದ್ದರಿಂದ ಅವರ ಜೀವ ಉಳಿದಿತ್ತು ಎಂದು ಪತ್ನಿ ಹೇಳಿದ್ದಾರೆ.

ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ

ಶ್ರೀನಿವಾಸ್ ಕಡೆಯದಾಗಿ ಸಂಬಂಧಿಕರೊಬ್ಬರ ಜೊತೆ ಮಾತನಾಡಿದ್ದು, ಈ ವೇಳೆ ಅವರು ಸಹಜವಾಗಿ ಮಾತನಾಡಿದ್ದರು ಎಂದು ತಿಳಿದು ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ. ಆದರೆ ಇದುವರೆಗೂ ನೀರಿಗೆ ಹಾರಿದ ಶ್ರೀನಿವಾಸ್ ಅವರನ್ನು ಪತ್ತೆ ಮಾಡಲು ಸಾಧ್ಯವಾಗಿಲ್ಲ. ಇದು ಮೊದಲ ಪ್ರಕರಣ ಅಲ್ಲ ಈ ಹಿಂದೆ ಮಹಿಳಾ ವೈದ್ಯರೊಬ್ಬರು ಅಟಲ್ ಸೇತುವಿನಿಂದ ಕೆಳಗೆ ಹಾರಿ ತಮ್ಮ ಜೀವನವನ್ನು ಅಂತ್ಯಗೊಳಿಸಿದ್ದರು.

 Share: | | | | |


ದ.ಕ.ಜಿಲ್ಲೆಯಲ್ಲಿ ಮುಂದುವರಿದ ಮಳೆ: ಜು..16ರಂದೂ ಅಂಗನವಾಡಿ,ಶಾಲೆ,ಪ.ಪೂ. ಕಾಲೇಜುಗಳಿಗೆ ರಜೆ

Posted by Vidyamaana on 2024-07-15 22:06:20 |

Share: | | | | |


ದ.ಕ.ಜಿಲ್ಲೆಯಲ್ಲಿ ಮುಂದುವರಿದ ಮಳೆ: ಜು..16ರಂದೂ ಅಂಗನವಾಡಿ,ಶಾಲೆ,ಪ.ಪೂ. ಕಾಲೇಜುಗಳಿಗೆ ರಜೆ

ಮಂಗಳೂರು: ದಕ್ಷಿಣ ಕನ್ನಡದಲ್ಲಿ ರಂದು ರೆಡ್ ಅಲರ್ಟ್ ಘೋಷಣೆ ಮತ್ತು ನಿರಂತರ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ನಾಳೆ (ಜು.16)ಎಲ್ಲಾ ಶಾಲೆಗಳು,ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಇಂದು (ಫೆ.29):ಕುಡಿಪಾಡಿ ಸರಕಾರಿ ಉನ್ನತ ಹಿ.ಪ್ರಾ.ಶಾಲೆಯ ಮುಖ್ಯಗುರು ಚಂದ್ರಪ್ರಭಾ ಎಸ್‌ ಸೇವಾ ನಿವೃತ್ತಿ

Posted by Vidyamaana on 2024-02-29 07:36:31 |

Share: | | | | |


ಇಂದು (ಫೆ.29):ಕುಡಿಪಾಡಿ ಸರಕಾರಿ ಉನ್ನತ ಹಿ.ಪ್ರಾ.ಶಾಲೆಯ ಮುಖ್ಯಗುರು ಚಂದ್ರಪ್ರಭಾ ಎಸ್‌ ಸೇವಾ ನಿವೃತ್ತಿ

ಪುತ್ತೂರು: ಕುಡಿಪಾಡಿ ಸರಕಾರಿ ಉನ್ನತ ಹಿ.ಪ್ರಾ.ಶಾಲೆಯ ಮುಖ್ಯಗುರು ಚಂದ್ರಪ್ರಭಾ ಎಸ್.ರವರು ಫೆ.29 ರಂದು ಸೇವಾ ನಿವೃತ್ತಿ ಹೊಂದಲಿದ್ದಾರೆ.

ಯು.ಎಸ್ ಭಾಸ್ಕರ ಆಚಾರ್ಯ ಹಾಗೂ ಎಂ.ಡಿ ಶಕುಂತಳಾ ದಂಪತಿ ಪುತ್ರಿಯಾಗಿ ಫೆಬ್ರವರಿ 22, 1964ರಂದು ಜನಿಸಿದ ಚಂದ್ರಪ್ರಭಾ ಎಸ್.ರವರು ತಮ್ಮ ಟಿಸಿಎಚ್ ಶಿಕ್ಷಣವನ್ನು ಕಿನ್ನಿಕಂಬಳದಲ್ಲಿ ಪೂರೈಸಿ 1994, ಜುಲೈ 28 ರಂದು ಶಿಕ್ಷಕರಾಗಿ ಸೇವೆಯನ್ನು ಆರಂಭಿಸಿರುತ್ತಾರೆ. ಬಳಿಕ ಅವರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗಳಾದ ಸರ್ವೆ ಕಲ್ಪನೆ, ಮುಕ್ವೆ, ಮುರ, ಉಪ್ಪಿನಂಗಡಿ, ಪರ್ಲಡ್ಕ ಇಲ್ಲಿ ಸೇವೆಯನ್ನು ಸಲ್ಲಿಸಿ 2022, ಎಪ್ರಿಲ್ 30ರಂದು ಕುಡಿಪಾಡಿ ಶಾಲೆಯಲ್ಲಿ ಮುಖ್ಯ ಶಿಕ್ಷಕಿಯಾಗಿ ಭಡ್ತಿ ಹೊಂದಿ ಕರ್ತವ್ಯವನ್ನು ಮುಂದುವರೆಸಿದ್ದರು. ಪ್ರಸ್ತುತ ಇವರು ಪತಿ ನಿವೃತ್ತ ಸೈನಿಕ ಸುರೇಶ್, ಪುತ್ರರಾದ ಮನೀಶ್, ಮನ್ವಿತ್‌ರವರೊಂದಿಗೆ ನೆಹರುನಗರದಲ್ಲಿ ವಾಸ್ತವ್ಯ ಹೊಂದಿದ್ದಾರೆ.

ಕರ್ನಾಟಕ ಬ್ಯಾಂಕ್ ಕಾರ್ಯನಿರ್ವಾಹಕ ನಿರ್ದೇಶಕರಿಗೆ ಕಂಬಳ ಆಮಂತ್ರಣ ನೀಡಿದ ಶಾಸಕ ಅಶೋಕ್ ರೈ

Posted by Vidyamaana on 2023-11-04 16:44:06 |

Share: | | | | |


ಕರ್ನಾಟಕ ಬ್ಯಾಂಕ್ ಕಾರ್ಯನಿರ್ವಾಹಕ ನಿರ್ದೇಶಕರಿಗೆ ಕಂಬಳ ಆಮಂತ್ರಣ ನೀಡಿದ ಶಾಸಕ ಅಶೋಕ್ ರೈ

ಬೆಂಗಳೂರು:ಪುತ್ತೂರು ಶಾಸಕರು ಹಾಗೂ ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷರು ಅಶೋಕ್ ಕುಮಾರ್  ರೈವರು ಇಂದು  ಕರ್ನಾಟಕ ಬ್ಯಾಂಕ್ ಕಾರ್ಯನಿರ್ವಾಹಕ ನೀರ್ದೆಶಕರು ಶೇಖರ್ ರಾವ್ ರವರನ್ನು ಭೇಟಿಯಾಗಿ ಬೆಂಗಳೂರು ಕಂಬಳ ನಮ್ಮ ಕಂಬಳ ಕ್ಕೆ ಆಮಂತ್ರಣ  ಪತ್ರ ಕೊಟ್ಟು ಆಹ್ವಾನಿಸಲಾಯಿತು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು  ಮುಳಿಯ ಜ್ಯುವೆಲ್ಸ್ ನ ಮುಖ್ಯ ಆಡಳಿತ ನಿರ್ದೇಶಕ  ಮುಳಿಯ ಕೇಶವ ಪ್ರಸಾದ್ ಮತ್ತು ಸಚಿನ್ ಶೆಟ್ಟಿ  ಉಪಸ್ಥಿತರಿದ್ದರು

ಬಂಟ್ವಾಳ: ಬೈಕ್ ಗೆ ರಿಕ್ಷಾ ಡಿಕ್ಕಿ; ದ್ವಿಚಕ್ರ ವಾಹನದಲ್ಲಿದ್ದ ಸಹ ಸವಾರ ಸಾವು

Posted by Vidyamaana on 2024-04-07 07:58:32 |

Share: | | | | |


ಬಂಟ್ವಾಳ: ಬೈಕ್ ಗೆ ರಿಕ್ಷಾ ಡಿಕ್ಕಿ; ದ್ವಿಚಕ್ರ ವಾಹನದಲ್ಲಿದ್ದ ಸಹ ಸವಾರ ಸಾವು

ಬಂಟ್ವಾಳ: ಬೈಕ್ ಗೆ ರಿಕ್ಷಾ ಡಿಕ್ಕಿಯಾದ ಪರಿಣಾಮ ದ್ವಿಚಕ್ರವಾಹನದಲ್ಲಿದ್ದ ಸಹ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ.ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ (17) ಮೃತಪಟ್ಟ ಬಾಲಕ.


ಮನೆಯಿಂದ ಬಿಸಿರೋಡು ಕಡೆಗೆ ಸ್ಕೂಟರ್ ನಲ್ಲಿ ಸಹಸವಾರನಾಗಿ ಸಂಚಾರ ಮಾಡುತ್ತಿದ್ದ ವೇಳೆ ನರಿಕೊಂಬು ದಿಂಡಿಗೆ ಎಂಬಲ್ಲಿ ರಿಕ್ಷಾ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಬಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ

ಸುಳ್ಯ: ಪಿಕಪ್ ಮತ್ತು ಟಿಟಿ ವಾಹನ ನಡುವೆ ಅಪಘಾತ

Posted by Vidyamaana on 2023-06-25 08:20:50 |

Share: | | | | |


ಸುಳ್ಯ: ಪಿಕಪ್ ಮತ್ತು ಟಿಟಿ ವಾಹನ ನಡುವೆ ಅಪಘಾತ

ಸುಳ್ಯ: ತಾಲೂಕಿನ ಅರಂತೋಡು ಎಂಬಲ್ಲಿ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪಿಕಪ್ ಮತ್ತು ಟಿಟಿ ವಾಹನಗಳ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಓರ್ವ ವ್ಯಕ್ತಿಗೆ ಗಂಭೀರ ಗಾಯಗೊಂಡಿದ್ದಾರೆ. ಟಿಟಿ 

ವಾಹನವು ಮಂಗಳೂರಿನಿಂದ ಮಡಿಕೇರಿಗೆ ಹಾಗೂ ಪಿಕಪ್ ಸುಳ್ಯ ಕಡೆಗೆ ಹೋಗುತ್ತಿದ್ದು, ತೆಕ್ಕಿಲ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ.ಗಾಯಾಳು ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆ ಸಂಬಂಧ ಸುಳ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ

ಮಕ್ಕಳು ಸೇರಿ ಒಂದೇ ಕುಟುಂಬದ ಆರು ಮಂದಿ ನದಿಯಲ್ಲಿ ಮುಳುಗಿ ಸಾವು

Posted by Vidyamaana on 2024-04-22 08:58:47 |

Share: | | | | |


ಮಕ್ಕಳು ಸೇರಿ ಒಂದೇ ಕುಟುಂಬದ ಆರು ಮಂದಿ ನದಿಯಲ್ಲಿ ಮುಳುಗಿ ಸಾವು

ಕಾರವಾರ: ಮಕ್ಕಳು ಸೇರಿ ಒಂದೇ ಕುಟುಂಬದ ಆರು ಪ್ರವಾಸಿಗರು‌‌ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವಂತಹ ಹೃದಯ ವಿದ್ರಾವಕ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಅಕ್ವಾಡ ಗ್ರಾಮದ ಬಳಿ ಕಾಳಿ ನದಿಯಲ್ಲಿ ನಡೆದಿದೆ.

40 ವರ್ಷದ ನಝೀರ್ ಅಹ್ಮದ್, 38 ವರ್ಷದ ರೇಷಾ ಉನ್ನಿಸಾ, 15 ವರ್ಷದ ಇಫ್ರಾ‌ ಅಹ್ಮದ್, 12 ವರ್ಷದ ಅಬೀದ್ ಅಹ್ಮದ್, 10 ವರ್ಷದ ಅಲ್ಛೀಯಾ ಅಹ್ಮದ್ ಮತ್ತು 6 ವರ್ಷದ ಮೋಹಿನ್ ಮೃತರು. ಹುಬ್ಬಳ್ಳಿಯ ಈಶ್ವರ ನಗರದ ನಿವಾಸಿಗಳು.

Recent News


Leave a Comment: