ಚಾಲಕನ ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದ ಪಿಕಪ್ ವಾಹನ

ಸುದ್ದಿಗಳು News

Posted by vidyamaana on 2023-07-14 03:02:36 | Last Updated by Vidyamaana on 2023-09-05 09:08:10

Share: | | | | |


ಚಾಲಕನ ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದ ಪಿಕಪ್ ವಾಹನ

ವಿಟ್ಲ: ಪರಿಯಲ್ಲಡ್ಕ – ಸಾರಡ್ಕ ರಸ್ತೆಯ ಕೂರೇಲು ಎಂಬಲ್ಲಿ ಪಿಕಪ್ ರಸ್ತೆಯಿಂದ ಮನೆಯ ಮೇಲೆ ಬಿದ್ದಿದ್ದು, ಮನೆಯ ಒಳಗೆ ಮಹಿಳೆ ಸಿಲುಕಿ ಹಾಕಿಕೊಂಡಿದ್ದಾರೆ.ಕೂರೇಲು ಮಧ್ಯದ ಅಂಗಡಿಯ ಸಮೀಪದಲ್ಲಿ ರಸ್ತೆಯಿಂದ ಕೆಳಗಿದ್ದ ಮನೆಗೆ ಜು.14 ರ ಬೆಳಗ್ಗಿನ ಜಾವ ಚಾಲಕ ನಿಯಂತ್ರಣ ತಪ್ಪಿದ ಪಿಕಪ್ ಮನೆಯ ಮೇಲೆ ಬಿದ್ದಿದೆಅಪಘಾತದಿಂದ ಹಂಚಿನ ಮನೆ ಸಂಪೂರ್ಣ ಹಾನಿಯಾಗಿದೆ. ಪಿಕಪ್ ಕೋಳಿ ಸಾಗಟ ನಡೆಸುತಿತ್ತು. ಅಪಘಾತದಿಂದ ನೂರಾರು ಕೋಳಿಗಳು ಸತ್ತಿದೆ. ಅಪಘಾತ ನಡೆದಾಗ ಮನೆಯ ಒಳಗೆ ಮಹಿಳೆ ಮಲಗಿದ್ದರು, ಮಹಿಳೆಗೆ ಗಂಭೀರ ಗಾಯವಾದ ಪರಿಸ್ಥಿಯಲಿದ್ದಾರೆ.ಪಿಕಪ್ ವಾಹನವನ್ನು ತೆರವು ಮಾಡಡೆ, ಮಹಿಳೆಯನ್ನು ಹೊರಗೆ ತೆಗೆಯಲು ಸಾಧ್ಯವಿಲ್ಲದ ಸ್ಥಿತಿ ನಿರ್ಮಾಣವಾಗಿದೆ.

ಸ್ಥಳದಲ್ಲಿ ವಿಟ್ಲ ಪೊಲೀಸರು, ತುರ್ತು ಸೇವಾ ವಾಹನ ಬೀಡು ಬಿಟ್ಟಿದ್ದು, ಕ್ರೇನ್ ಬಳಸಿ ವಾಹನ ಮೇಲೆತ್ತುವ ಕಾರ್ಯಾಚರಣೆ ನಡೆಯುತ್ತಿದೆ.

 Share: | | | | |


ರಾಜ್ಯ ಬಿಜೆಪಿಗೆ ವಿಜಯೇಂದ್ರ ಹೊಸ ಟೀಮ್ ಅಸ್ತಿತ್ವಕ್ಕೆ, ಸುನಿಲ್ ಕುಮಾರ್, ಬೃಜೇಶ್ ಚೌಟ ರಾಜ್ಯ ಕಾರ್ಯದರ್ಶಿ ಸ್ಥಾನಕ್ಕೆ

Posted by Vidyamaana on 2023-12-24 06:57:47 |

Share: | | | | |


ರಾಜ್ಯ ಬಿಜೆಪಿಗೆ ವಿಜಯೇಂದ್ರ ಹೊಸ ಟೀಮ್ ಅಸ್ತಿತ್ವಕ್ಕೆ, ಸುನಿಲ್ ಕುಮಾರ್, ಬೃಜೇಶ್ ಚೌಟ ರಾಜ್ಯ ಕಾರ್ಯದರ್ಶಿ ಸ್ಥಾನಕ್ಕೆ

ಬೆಂಗಳೂರು, ಡಿ.24: ರಾಜ್ಯ ಬಿಜೆಪಿಗೆ ಮೇಜರ್ ಸರ್ಜರಿ ಮಾಡಲಾಗಿದ್ದು ರಾಜ್ಯಾಧ್ಯಕ್ಷ ವಿಜಯೇಂದ್ರ ಹೊಸತಾಗಿ ರಾಜ್ಯ ಪದಾಧಿಕಾರಿಗಳನ್ನು ನೇಮಕ ಮಾಡಿದ್ದಾರೆ. ರಾಜ್ಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಕಾರ್ಕಳ ಶಾಸಕ ಸುನಿಲ್ ಕುಮಾರ್, ಪಿ. ರಾಜೀವ್, ಎನ್.ಎಸ್. ನಂದೀಶ ರೆಡ್ಡಿ, ಜಿ. ಪ್ರೀತಂ ಗೌಡ ಅವರನ್ನು ನೇಮಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ಕ್ಯಾ. ಬೃಜೇಶ್ ಚೌಟ ಅವರನ್ನು ರಾಜ್ಯ ಕಾರ್ಯದರ್ಶಿ ಸ್ಥಾನಕ್ಕೆ ನೇಮಕ ಮಾಡಲಾಗಿದೆ. 


ರಾಜ್ಯ ಕಾರ್ಯದರ್ಶಿ ಸ್ಥಾನಕ್ಕೆ ಶೈಲೇಂದ್ರ ಬೆಲ್ದಾಳೆ, ಡಿ.ಎಸ್.‌ಅರುಣ್, ಬಸವರಾಜ್ ಮತ್ತಿಮೋಡ್, ಸಿ. ಮುನಿರಾಜು, ವಿನಯ್ ಬಿದರೆ, ಕ್ಯಾ.ಬೃಜೇಶ್ ಚೌಟ, ಶರಣು ತಳ್ಳಿಕೇರಿ, ಲಲಿತಾ ಅನಾಪುರ, ಡಾ. ಲಕ್ಷ್ಮೀ ಅಶ್ವಿನ್ ಗೌಡ, ಅಂಬಿಕಾ ಹುಲಿನಾಯ್ಕರ್ ಅವರನ್ನು ನೇಮಿಸಲಾಗಿದೆ. ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿ.‌ಮಂಜುಳಾ, ಯುವಮೋರ್ಚಾ ರಾಜ್ಯಾಧ್ಯಕ್ಷರಾಗಿ ಧೀರಜ್ ಮುನಿರಾಜು ನೇಮಕವಾಗಿದೆ. ಎಸ್ಟಿ ಮೋರ್ಚಾಗೆ ಬಂಗಾರು ಹನುಮಂತು, ಎಸ್ಸಿ ಮೋರ್ಚಾಗೆ ಎಸ್. ಮಂಜುನಾಥ್, ಹಿಂ. ವರ್ಗಗಳ ರಾಜ್ಯಾಧ್ಯಕ್ಷರಾಗಿ ರಘು ಕೌಟಿಲ್ಯ, ರೈತ ಮೋರ್ಚಾಗೆ ಎ.ಎಸ್. ಪಾಟೀಲ್ ನಡಹಳ್ಳಿ, ಅಲ್ಪಸಂಖ್ಯಾತ ಮೋರ್ಚಾ ರಾಜ್ಯಾಧ್ಯಕ್ಷರಾಗಿ ಅನಿಲ್ ಥಾಮಸ್ ನೇಮಕ ಮಾಡಲಾಗಿದೆ. 


ಇದಲ್ಲದೆ, ಮುರುಗೇಶ್ ನಿರಾಣಿ, ಬೈರತಿ ಬಸವರಾಜ್ ಸೇರಿದಂತೆ ಹತ್ತು ಮಂದಿಯನ್ನು ರಾಜ್ಯ ಉಪಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಬಹುತೇಕ ಯುವಕರ ಪಡೆಯನ್ನು ವಿಜಯೇಂದ್ರ ಆಯ್ಕೆ ಮಾಡಿದ್ದು ಎರಡು ದಿನಗಳ ಹಿಂದೆ ಹೈಕಮಾಂಡ್ ಮುಂದೆ ತೋರಿಸಿ ಒಪ್ಪಿಗೆ ಪಡೆದು ಬಂದಿದ್ದಾರೆ.

BREAKING: ಚುನಾವಣೋತ್ತರ ಸಮೀಕ್ಷೆ ನಿಷೇಧಿಸಿ ಚುನಾವಣಾ ಆಯೋಗ ಖಡಕ್ ಆದೇಶ

Posted by Vidyamaana on 2024-04-18 17:11:23 |

Share: | | | | |


BREAKING: ಚುನಾವಣೋತ್ತರ ಸಮೀಕ್ಷೆ ನಿಷೇಧಿಸಿ ಚುನಾವಣಾ ಆಯೋಗ ಖಡಕ್ ಆದೇಶ

ಬೆಂಗಳೂರು : ಲೋಕಸಭಾ ಚುನಾವಣೆ ಮತದಾನದ ಬಳಿಕ ಚುನಾವಣೋತ್ತರ ಸಮೀಕ್ಷೆಯನ್ನು ನಿಷೇಧಿಸಿ ಚುನಾವಣಾ ಆಯೋಗವು ಖಡಕ್ ಆದೇಶ ಹೊರಡಿಸಿದೆ.


ಈ ಕುರಿತಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದಂತ ಸೂರಳ್ ಕರ್ ವಿಕಾರ್ ಕಿಶೋರ್ ಅವರು ಎಲ್ಲಾ ಮಾಧ್ಯಮಗಳ ಸಂಪಾದಕರು, ವರದಿಗಾರರು, ಮುದ್ರಣ ಹಾಗೂ ವಿದ್ಯುನ್ಮಾನ ಮಾಧ್ಯಮಗಳಿಗೆ ಪತ್ರ ಬರೆದಿದ್ದಾರೆ.

ಕಾಪು : ಕಾಲೇಜು ವಿದ್ಯಾರ್ಥಿನಿ ಶೈನಾಜ್ ನಾಪತ್ತೆ

Posted by Vidyamaana on 2024-02-28 04:26:48 |

Share: | | | | |


ಕಾಪು : ಕಾಲೇಜು ವಿದ್ಯಾರ್ಥಿನಿ ಶೈನಾಜ್ ನಾಪತ್ತೆ

ಕಾಪು: ರಾತ್ರಿ ಮನೆಯಲ್ಲಿ ಮಲಗಿದ್ದ ಕಾಲೇಜು ವಿದ್ಯಾರ್ಥಿನಿ, ಕಟಪಾಡಿ ಏಣಗುಡ್ಡೆ ಗ್ರಾಮದ ಜೆ. ಎನ್‌. ನಗರ ನಿವಾಸಿ ಶೈನಾಜ್‌ (20) ಫೆ. 26 ರಿಂದ ನಾಪತ್ತೆಯಾಗಿದ್ದಾರೆ.ಉಡುಪಿ ಅಜ್ಜರಕಾಡು ಸರಕಾರಿ ಕಾಲೇಜಿನಲ್ಲಿ 2ನೇ ವರ್ಷದ ಬಿಕಾಂ ವ್ಯಾಸಂಗ ಮಾಡುತ್ತಿರುವ ಶೈನಾಜ್‌ ಫೆ.25 ರಂದು ರಾತ್ರಿ ತನ್ನ ಅಜ್ಜಿಯೊಂದಿಗೆ ಮಲಗಿದ್ದು ಮರುದಿನ ಬೆಳಿಗ್ಗೆ ಎದ್ದು ನೋಡಿದಾಗ ನಾಪತ್ತೆಯಾಗಿದ್ದರು.

ಈ ಬಗ್ಗೆ ಸಂಬಂಧಿಕರಲ್ಲಿ, ಸ್ನೇಹಿತರಲ್ಲಿ ವಿಚಾರಿಸಿ, ಉಡುಪಿ ಬಸ್‌ ನಿಲ್ದಾಣ, ಅಜ್ಜರಕಾಡು ಮಹಿಳಾ ಕಾಲೇಜು ಕಡೆಗಳಲ್ಲಿ ಹುಡುಕಾಡಿದರೂ ಪತ್ತೆಯಾಗಿರುವುದಿಲ್ಲ. ಕಾಣೆಯಾದ ತನ್ನ ಮಗಳನ್ನು ಪತ್ತೆ ಮಾಡಿಕೊಡುವಂತೆ ಆಕೆಯ ತಾಯಿ ನೂರ್‌ ಜಹಾನ್‌ ಕಾಪು ಪೊಲೀಸ್‌ ಠಾಣೆಯಲ್ಲಿ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಕಾಣೆಯಾದ ಶೈನಾಜ್‌ 20 ವರ್ಷ ಪ್ರಾಯದವರಾಗಿದ್ದು 5 ಅಡಿ ಎತ್ತರ, ಗೋಧಿ ಮೈ ಬಣ್ಣ ಹೊಂದಿದ್ದು ಮನೆಯಿಂದ ತೆರಳುವಾಗ ನೇವಿ ಬ್ಲೂ ಬಣ್ಣದ ಬುರ್ಕಾ ಧರಿಸಿದ್ದಳು. ಕನ್ನಡ, ತುಳು, ಹಿಂದಿ, ಉರ್ದು ಭಾಷೆ ಬಲ್ಲವಳಾಗಿದ್ದು ಈಕೆಯನ್ನು ಗುರುತಿಸಿದವರು ಕಾಪು ಪೊಲೀಸ್‌ ಠಾಣೆ 0820-2551033 ಗೆ ಮಾಹಿತಿ ನೀಡುವಂತೆ ಪೊಲೀಸರು ತಿಳಿಸಿದ್ದಾರೆ.

ಪುತ್ತೂರು ತಾಲೂಕು ಭೂನ್ಯಾಯ ಮಂಡಳಿಗೆ ನಾಲ್ವರು ಸದಸ್ಯರ ನಾಮನಿರ್ದೇಶನ

Posted by Vidyamaana on 2024-02-08 21:24:46 |

Share: | | | | |


ಪುತ್ತೂರು ತಾಲೂಕು ಭೂನ್ಯಾಯ ಮಂಡಳಿಗೆ ನಾಲ್ವರು ಸದಸ್ಯರ ನಾಮನಿರ್ದೇಶನ

ಪುತ್ತೂರು:ಪುತ್ತೂರು ತಾಲೂಕು ಭೂನ್ಯಾಯ ಮಂಡಳಿಗೆ ನಾಲ್ವರು ಸದಸ್ಯರನ್ನು ನಾಮನಿರ್ದೇಶನ ಮಾಡಲಾಗಿದೆ. ಭೂನ್ಯಾಯ ಮಂಡಳಿ ಸದಸ್ಯರಾಗಿ ಮಾಜಿ ಕೆಡಿಪಿ ಸದಸ್ಯ ಕೃಷ್ಣಪ್ರಸಾದ್‌ ಆಳ್ವ, ಆಳ್ವರಮನೆ ಚೆಲ್ಯಡ್ಕ, ನಿರಂಜನ್ ರೈ ಮಠಂತಬೆಟ್ಟು, ಅಬ್ದುಲ್ ರಹಿಮಾನ್ ಯು. (ಯುನಿಕ್)ಬೋಳಂತಿಲ ಮತ್ತು ಮಂಜುನಾಥ ನಾಯ್ಕ ಎಂ.ಬೊಳ್ವಾರ್‌ಬೈಲ್ ಉರ್ಲಾಂಡಿ ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸದಸ್ಯರಾಗಿ ನಾಮನಿರ್ದೇಶನಗೊಳಿಸಲಾಗಿದೆ. ಉಪವಿಭಾಗದ ಸಹಾಯಕ ಆಯುಕ್ತರು ಸಮಿತಿಯ ಅಧ್ಯಕ್ಷರಾಗಿರುತ್ತಾರೆ.ತಹಸಿಲ್ದಾರ್ ಅವರು ಸದಸ್ಯ ಕಾರ್ಯದರ್ಶಿಯಾಗಿರುತ್ತಾರೆ.

ಅಡ್ಯನಡ್ಕ ಜೂನಿಯರ್ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಅಂಕಿತ್ ನಾಯಕ್ ನಾಪತ್ತೆ

Posted by Vidyamaana on 2023-06-26 07:58:34 |

Share: | | | | |


ಅಡ್ಯನಡ್ಕ ಜೂನಿಯರ್ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಅಂಕಿತ್ ನಾಯಕ್ ನಾಪತ್ತೆ

ವಿಟ್ಲ : ಪಿಯುಸಿ ವಿದ್ಯಾರ್ಥಿಯೋರ್ವ ನಾಪತ್ತೆಯಾದ ಘಟನೆ ಮಂಜೇಶ್ವರ ಠಾಣಾ ವ್ಯಾಪ್ತಿಯ ಬಳ್ಳೂರಿನಲ್ಲಿ ನಡೆದಿದೆ.


ಮಂಜೇಶ್ವರ ಠಾಣಾ ವ್ಯಾಪ್ತಿಯ ಅನಂತಗಿರಿ ನಿವಾಸಿ, ಅಡ್ಯನಡ್ಕ ಜೂನಿಯರ್ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಅಂಕಿತ್ ನಾಯಕ್ (17) ನಾಪತ್ತೆಯಾದ ಬಾಲಕ.ನಿನ್ನೆ ಸಂಜೆ ತನ್ನ ಮನೆಯಿಂದ ದೊಡ್ಡಪ್ಪ ನ ಮನೆಯಿಂದ ತೋಟಕ್ಕೆ ಮದ್ದು ಬಿಡುವ ಪಂಪು ತರುತ್ತೇನೆ ಎಂದು ಹೇಳಿ  ಸ್ಕೂಟರ್ ತೆಗೆದುಕೊಂಡು ಹೋದವ ಬಳ್ಳೂರು 

ಎಂಬಲ್ಲಿ ಸ್ಕೂಟರ್ ನಿಲ್ಲಿಸಿ ಬಸ್ ಹತ್ತಿ ಕುದ್ದುಪದವುನಲ್ಲಿ ಇಳಿದಿರುತ್ತಾನೆ  ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಮಂಜೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪತ್ತೆಯಾದಲ್ಲಿ ಪೊಲೀಸ್ ಠಾಣೆಗೆ ತಿಳಿಸಬೇಕಾಗಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ನಂತೂರು ಸಿಗ್ನಲ್ ನಲ್ಲಿ ನಿಂತಿದ್ದ ಸ್ಕೂಟರ್ ಗೆ ಲಾರಿ ಡಿಕ್ಕಿ: ಇಬ್ಬರ ದುರ್ಮರಣ..

Posted by Vidyamaana on 2023-03-18 08:18:01 |

Share: | | | | |


ನಂತೂರು ಸಿಗ್ನಲ್ ನಲ್ಲಿ ನಿಂತಿದ್ದ ಸ್ಕೂಟರ್ ಗೆ ಲಾರಿ ಡಿಕ್ಕಿ: ಇಬ್ಬರ ದುರ್ಮರಣ..

ಮಂಗಳೂರು : ಟಿಪ್ಪರ್ ಲಾರಿಯೊಂದು ಸ್ಕೂಟರ್ ಮೇಲೆ ಹರಿದ ಪರಿಣಾಮ ಇಬ್ಬರು ಸಾವನಪ್ಪಿದ ಘಟನೆ ನಂತೂರು ಸರ್ಕಲ್ ನಲ್ಲಿ ನಡೆದಿದೆ.ದ್ವಿಚಕ್ರ ವಾಹನದಲ್ಲಿ ಇಬ್ಬರು ಸಿಗ್ನಲ್ ಕಾಯುತ್ತಿದ್ದ ವೇಳೆ ಏಕಾಏಕಿ ಬಂದ ಟಿಪ್ಪರ್ ಲಾರಿ ದ್ವಿಚಕ್ರ ವಾಹನದ ಮೇಲೆ ಹರಿದಿದ್ದು, ದ್ವಿಚಕ್ರ ವಾಹನದಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರು ತಂದೆ – ಮಗಳು ಎನ್ನಲಾಗಿದೆ.ಟಿಪ್ಪರ್ ವಾಹನದ ಮೇಲೆ ಕಲ್ಲು ತೂರಾಟ ನಡೆಸಿದ್ದು, ಸ್ಥಳದಲ್ಲಿ ಉದ್ರಿಕ್ತ ವಾತಾವರಣ ನಿರ್ಮಾಣವಾಗಿದೆ. ನಂತೂರಿನಲ್ಲಿ ಕರ್ತವ್ಯದಲ್ಲಿದ್ದ ಸಂಚಾರಿ ಪೊಲೀಸರು ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.



Leave a Comment: