ಪಿಜಿ ಯುವತಿಯ ಬರ್ಬರ ಹತ್ಯೆ ಕೇಸ್‌ಗೆ ಟ್ವಿಸ್ಟ್

ಸುದ್ದಿಗಳು News

Posted by vidyamaana on 2024-07-25 09:34:49 |

Share: | | | | |


ಪಿಜಿ ಯುವತಿಯ ಬರ್ಬರ ಹತ್ಯೆ ಕೇಸ್‌ಗೆ ಟ್ವಿಸ್ಟ್

ಬೆಂಗಳೂರು : ಕೋರಮಂಗಲದ ಲೇಡಿಸ್ ಪಿಜಿ ಒಳಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್‌ ಸಿಕ್ಕಿದ್ದು, ಈ ಬಗ್ಗೆ ಪೊಲೀಸರು ಮಹತ್ವದ ಮಾಹಿತಿ ನೀಡಿದ್ದಾರೆ. ಮೃತ ಯುವತಿಯನ್ನು ಬಿಹಾರದ ಕೃತಿ ಕುಮಾರಿ‌ (24) ಎಂದು ಗುರುತಿಸಲಾಗಿದ್ದು, ಆಕೆಯ ಪ್ರಿಯತಮನೇ ಕೊಲೆಗಾರ ಎಂದು ಪೊಲೀಸರು ತಿಳಿಸಿದ್ದಾರೆ .

ಕೃತಿ ಕುಮಾರಿ ತಾನು ಪ್ರೀತಿಸುತ್ತಿದ್ದ ಯುವಕನಿಂದಲೇ ಕೊಲೆಯಾಗಿದ್ದಾರೆ. ರಾತ್ರಿ 11:30ಕ್ಕೆ ಕೃತಿ ಕುಮಾರಿಯೇ ಯುವಕನನ್ನು ಕರೆದುಕೊಂಡು ಬಂದಿರುವ ಬಗ್ಗೆ ಮೇಲ್ನೋಟಕ್ಕೆ ಮಾಹಿತಿ ಸಿಕ್ಕಿದೆ. ಪಿಜಿಯಿಂದ ಹೊರ ಬಂದ ಕೃತಿ ತನ್ನ ಪ್ರಿಯತಮನ ಜತೆ ರಾತ್ರಿ ಊಟ ಮಾಡಿದ್ದರು. ಊಟ ಮುಗಿಸಿದ ಕೃತಿ ತನ್ನೊಂದಿಗೆ ಯುವಕನ್ನು ಪಿಜಿಗೆ ಕರೆತಂದಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಕೃತಿಯ ರೂಂಗೆ ಆಗಮಿಸಿದ್ದ ವೇಳೆ ಇಬ್ಬರ ಮಧ್ಯೆ ಗಲಾಟೆಯಾಗಿ ಕೊಲೆಯಾಗಿರುವ ಶಂಕೆ ಇದೆ.

ಪಿಜಿಯ ಸಿಸಿಟಿವಿ ಎಲ್ಲವನ್ನು ಕೂಡ ಪರಿಶೀಲನೆ ನಡೆಸಿದ್ದೇವೆ. ಪಿಜಿಯ ನಿರ್ಲಕ್ಷ್ಯತನದ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಆರೋಪಿ ಪತ್ತೆಗಾಗಿ ಪೊಲೀಸರ ವಿಶೇಷ ತಂಡವನ್ನ ರಚನೆ ಮಾಡಲಾಗಿದೆ ಎಂದಿದ್ದಾರೆ

 Share: | | | | |


ಒಡಿಶಾದಲ್ಲಿ ಮತ್ತೊಂದು ದುರಂತ: ಬರ್ಗಢ್ ನಲ್ಲಿ ಹಳಿ ತಪ್ಪಿದ ರೈಲು

Posted by Vidyamaana on 2023-06-05 07:01:02 |

Share: | | | | |


ಒಡಿಶಾದಲ್ಲಿ ಮತ್ತೊಂದು ದುರಂತ: ಬರ್ಗಢ್ ನಲ್ಲಿ ಹಳಿ ತಪ್ಪಿದ ರೈಲು

ಹೊಸದಿಲ್ಲಿ: ಒಡಿಶಾದ ಬಾಲಸೋರ್‌ನಲ್ಲಿ 275 ಜನರ ಸಾವಿಗೆ ಕಾರಣವಾದ ಭೀಕರ ರೈಲು ಅಪಘಾತದ ಮೂರು ದಿನಗಳ ನಂತರ, ಸುಣ್ಣದ ಕಲ್ಲುಗಳನ್ನು ಸಾಗಿಸುತ್ತಿದ್ದ ಮತ್ತೊಂದು ರೈಲು ಬರ್ಗಢ್ ಪ್ರದೇಶದಲ್ಲಿ ಹಳಿ ತಪ್ಪಿದೆ.ಬಾಲಸೋರ್ ಘಟನಾ ಸ್ಥಳದಿಂದ ಸಮಾರು 500 ಕಿ.ಮೀ ದೂರದಲ್ಲಿ ಈ ಘಟನೆ ನಡೆದಿದೆ.

ಡುಂಗ್ರಿ ಸುಣ್ಣದ ಗಣಿಗಳು ಮತ್ತು ಎಸಿಸಿ ಬರ್ಗಢ್‌ ನ ಸಿಮೆಂಟ್ ಸ್ಥಾವರದ ನಡುವೆ ಖಾಸಗಿ ನ್ಯಾರೋ ಗೇಜ್ ರೈಲು ಮಾರ್ಗವಿದೆ. ಲೈನ್, ವ್ಯಾಗನ್‌ಗಳು ಮತ್ತು ಲೊಕೊಮೊಟಿವ್ ಎಲ್ಲವೂ ಖಾಸಗಿಯಾಗಿದ್ದು, ಭಾರತೀಯ ರೈಲ್ವೆ ವ್ಯವಸ್ಥೆಯೊಂದಿಗೆ ಯಾವುದೇ ರೀತಿಯಲ್ಲಿ ಸಂಪರ್ಕ ಹೊಂದಿಲ್ಲ ಎಂದು ಮೂಲಗಳು ತಿಳಿಸಿವೆ.

ಕೆಣಕಿದ ಅಶೋಕ್ ರೈಗೆ ಸವಾಲೆಸೆದ SDPI

Posted by Vidyamaana on 2023-05-01 09:19:13 |

Share: | | | | |


ಕೆಣಕಿದ ಅಶೋಕ್ ರೈಗೆ ಸವಾಲೆಸೆದ SDPI

ಪುತ್ತೂರು: ಚುನಾವಣಾ ಪ್ರಚಾರ ಸಭೆಗಳಲ್ಲಿ ಅಶೋಕ್ ಕುಮಾರ್ ರೈ ಅವರು ಎಸ್.ಡಿ.ಪಿ.ಐ. ಅನ್ನು ಕೆಣಕಿ ಹೇಳಿಕೆ ನೀಡುತ್ತಿದ್ದಾರೆ. ಇದಕ್ಕೆ ಚುನಾವಣೆಯಲ್ಲಿ ಉತ್ತರ ನೀಡಲಾಗುವುದು ಎಂದು ಎಸ್.ಡಿ.ಪಿ.ಐ. ರಾಜ್ಯ ವಕ್ತಾರ ರಿಯಾಜ್ ಕಡಂಬು ಹೇಳಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಲೀಲ್ ಕರೋಪಾಡಿ ಕೊಲೆಗೈದ ವ್ಯಕ್ತಿಗೆ ರಕ್ಷಣೆ ನೀಡಿರುವ, ತನ್ನ ಅಪಾರ್ಟ್ ಮೆಂಟಿನಲ್ಲಿ ಮುಸ್ಲಿಮರಿಗೆ ಅವಕಾಶವಿಲ್ಲ ಎಂದು ಬೋರ್ಡ್ ಹಾಕಿರುವ ವ್ಯಕ್ತಿಗೆ ಕಾಂಗ್ರೆಸ್ ಟಿಕೇಟ್ ನೀಡಿದೆ. ಭಾಷಣಗಳಲ್ಲಿ ಕಾಂಗ್ರೆಸ್ ಸೆಕ್ಯುಲರ್ ಪಕ್ಷ ಎಂದು ಹೇಳಿಕೊಳ್ಳುವ ರಾಷ್ಟ್ರೀಯ ನಾಯಕರು, ಪುತ್ತೂರಿನಲ್ಲಿ ಸಂಘ ಪರಿವಾರದ ವ್ಯಕ್ತಿಗೆ ಟಿಕೇಟ್ ನೀಡಿದೆ ಎಂದು ಲೇವಡಿ ಮಾಡಿದರು.

ಬಿಜೆಪಿ ಅಭ್ಯರ್ಥೀ ಸಂಘ ಪರಿವಾರದವರು, ಕಾಂಗ್ರೆಸಿನ ಅಭ್ಯರ್ಥಿಯೂ ಸಂಘ ಪರಿವಾರದವರು, ಪಕ್ಷೇತರರಾಗಿ ಸ್ಪರ್ಧಿಸಿದವರೂ ಸಂಘ ಪರಿವಾರದವರು. ಆದ್ದರಿಂದ ಪುತ್ತೂರಿನಲ್ಲಿ ನ್ಯಾಯ, ನೀತಿಯ ಪರವಾಗಿರುವ ಎಸ್.ಡಿ.ಪಿ.ಐ. ಸಾಕಷ್ಟು ಜನಪರ ಕೆಲಸಗಳನ್ನು ಮಾಡಿದೆ ಎಂದರು.

ಫ್ಯಾಸಿಸ್ಟ್ ಸರಕಾರದ ಧೊರಣೆಯಿಂದಾಗಿ ಶಾಫಿ ಬೆಳ್ಳಾರೆ ಜೈಲಿಗೆ ಹೋಗುವಂತಾಯಿತು. ಕೋಮುವಾದವನ್ನು ಸೃಷ್ಟಿಸಿ ಆ ಮೂಲಕ ಆಡಳಿತವನ್ನು ನಡೆಸುವ ಪಕ್ಷ ಬಿಜೆಪಿ, ಧರ್ಮಗಳ ನಡುವೆ ಕಂದಕ ಸೃಷ್ಟಿ ಮಾಡುತ್ತಿವೆ. ಇದರಿಂದಾಗಿ ಇಂದು ಬಿಜೆಪಿಯಲ್ಲಿ ಭಿನ್ನಮತ ಸೃಷ್ಟಿಯಾಗಿದೆ ಎಂದು ವಿಶ್ಲೇಷಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು, ಕ್ಷೇತ್ರ ಸಮಿತಿ ಸದಸ್ಯ ಇಬ್ರಾಹಿಂ ಹಾಜಿ ಸಾಗರ್, ಜಿಲ್ಲಾ ಸಮಿತಿ ಸದಸ್ಯ ಅಬೂಬಕ್ಕರ್ ಮರ್ದ, ತಾಲೂಕು ಉಪಾಧ್ಯಕ್ಷ ಅಬ್ದುಲ್ ಹಮೀದ್ ಉಪಸ್ಥಿತರಿದ್ದರು.

ಮೇನಾಲ : ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ..

Posted by Vidyamaana on 2023-04-27 11:52:58 |

Share: | | | | |


ಮೇನಾಲ : ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ..

ಪುತ್ತೂರು: ಪುತ್ತೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರದಲ್ಲಿ ಕಾಂಗ್ರೆಸ್ ನಾಯಕರು ತೊಡಗಿಸಿಕೊಂಡಿದ್ದು ಎಲ್ಲಾ ನಾಯಕರು ವಿವಿಧ ಭಾಗಗಳಲ್ಲಿ ಅದ್ದೂರಿಯ ಪ್ರಚಾರ ಕಾರ್ಯದಲ್ಲಿ ತೊಡಗಿದ್ದು ನಮ್ಮ ಒಗ್ಗಟ್ಟನ್ನು ಕಂಡು ಬಿಜೆಪಿ ಕೊತಕೊತ ಕುದಿಯುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಎಂ ಎಸ್ ಮಹಮ್ಮದ್ ಹೇಳಿದರು.

ನೆಟ್ಟಣಿಗೆ ಮುಡ್ನೂರು ಗ್ರಾಮದ ಮೇನಾಲದಲ್ಲಿ ನಡೆದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಪರ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು.

ಕಾಂಗ್ರೆಸ್‌ನಲ್ಲಿ ೧೪ ಮಂದಿ ಟಕೆಟ್ ಆಕಾಂಕ್ಷಿಗಳು ಇದ್ದರೂ ಹೈಕಮಾಂಡ್ ಆಯ್ಕೆ ಮಾಡಿರುವ ಅಶೋಕ್ ರೈಯವ ರನ್ನು ಎಲ್ಲರೂ ಬೆಂಬಲಿಸಿ ಅವರ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದು ಈ ಬಾರಿಯ ಚುನಾವಣೆಯಲ್ಲಿ ಅಶೋಕ್ ರೈ ಅಭೂತಪೂರ್ವ ಗೆಲುವು ಸಾಧಿಸಲಿದ್ದಾರೆ. ಮುಂದಿನ ಐದು ವರ್ಷದಲ್ಲಿ ಪುತ್ತೂರು ಅಭಿವೃದ್ದಿ ಕಾಣಲಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ನೆಟ್ಟಣಿಗೆ ಮುಡ್ನೂರು ಗ್ರಾಪಂ ಅಧ್ಯಕ್ಷ ರಮೇಶ್ ರೈ ಸಾಂತ್ಯ, ಶ್ರೀರಾಂ ಪಕ್ಕಳ , ಅಭ್ಯರ್ಥಿ ಅಶೋಕ್ ರೈ , ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಮತ್ತಿತರರು ಉಪಸ್ತಿತರಿದ್ದರು.

ಸೆ 10 : ಬೆಂಗಳೂರಲ್ಲಿ ಎಸ್ಸೆಸ್ಸಫ್ ಗೋಲ್ಡನ್ ಫಿಫ್ಟಿ ಸಮಾವೇಶ

Posted by Vidyamaana on 2023-09-09 19:25:42 |

Share: | | | | |


ಸೆ 10 : ಬೆಂಗಳೂರಲ್ಲಿ ಎಸ್ಸೆಸ್ಸಫ್ ಗೋಲ್ಡನ್ ಫಿಫ್ಟಿ ಸಮಾವೇಶ

ಪುತ್ತೂರು : ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ ( ಎಸ್ಸೆಸ್ಸಫ್ ) ಇದರ ಐವತ್ತನೇ ವರ್ಷಾಚರಣೆಯ ಪ್ರಯುಕ್ತ ಗೋಲ್ಡನ್ ಫಿಫ್ಟಿ ಸಮಾವೇಶವು ಬೆಂಗಳೂರಿನ ಅರಮನೆ ಮೈದಾನದಲ್ಲಿ ಜರುಗಲಿದೆ.

ಇಂಡಿಯನ್ ಗ್ರ್ಯಾಂಡ್ ಮುಫ್ತಿ ಎ.ಪಿ ಉಸ್ತಾದ್, ಮುಖ್ಯಮಂತ್ರಿ ಸಿದ್ಧರಾಮಯ್ಯ ಸಹಿತ ಹಲವಾರು ಧಾರ್ಮಿಕ, ಸಾಮಾಜಿಕ, ರಾಜಕೀಯ ನಾಯಕರು, ಚಿಂತಕರು ಭಾಗವಹಿಸಲಿದ್ದಾರೆ.

ಈ ಸಮಾವೇಶದಲ್ಲಿ ಪುತ್ತೂರು ತಾಲ್ಲೂಕಿನಿಂದ ಸಾವಿರಾರು ಸಂಖ್ಯೆಯ ಕಾರ್ಯಕರ್ತರು, ಮುಸ್ಲಿಂ ಜಮಾಅತ್, ಎಸ್‌ವೈಎಸ್ ನಾಯಕರು, ಕಾರ್ಯಕರ್ತರು ಭಾಗವಹಿಸಲಿದ್ದಾರೆ.

ಗೋಲ್ಡನ್ ಫಿಫ್ಟಿ ಸಮಾವೇಶದ ಸಮಾರೋಪ ಸಮಾರಂಭ ನವಂಬರ್ 23,24,25 ರಂದು ಮುಂಬೈಯ ಏಕತಾ ಮೈದಾನದಲ್ಲಿ ನಡೆಯಲಿದೆ ಎಂದು ಎಸ್ಸೆಸ್ಸಫ್ ಪುತ್ತೂರು ಡಿವಿಶನ್ ನಾಯಕರು ತಿಳಿಸಿದ್ದಾರೆ.

ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ ಮರು ತನಿಖೆ ಇಲ್ಲ, ಹೈಕೋರ್ಟಿನಿಂದ ಅರ್ಜಿ ವಜಾ

Posted by Vidyamaana on 2024-08-31 06:05:49 |

Share: | | | | |


ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ ಮರು ತನಿಖೆ ಇಲ್ಲ, ಹೈಕೋರ್ಟಿನಿಂದ ಅರ್ಜಿ ವಜಾ

ಬೆಂಗಳೂರು : ದೇಶದಲ್ಲೇ ಭಾರೀ ಸಂಚಲನ ಮೂಡಿಸಿ ಇನ್ನೂ ನಿಗೂಢವಾಗಿ ಉಳಿದ ಸೌಜನ್ಯ ಪ್ರಕರಣದ ಹೈಕೋರ್ಟ್ ತೀರ್ಪು ಹೊರಬಿದ್ದಿದ್ದು ಈ ಪ್ರಕೃಣದ ಮರು ತನಿಖೆ ಇಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿದ್ದು ಈ ಕುರಿತ ಅರ್ಜಿಗಳನ್ನು ವಜಾಗೊಳಿಸಿದೆ.ಸೌಜನ್ಯ ಕೊಲೆಯಾಗಿ 12 ವರ್ಷ ಆದರೂ ಇಂದು ನ್ಯಾಯ ಸಿಕ್ಕಿಲ್ಲ.

ಮಾರ್ಚ್ 4: ಮೂಡೂರು – ಪಡೂರು ಬಂಟ್ವಾಳ ಕಂಬಳ

Posted by Vidyamaana on 2023-03-03 15:31:01 |

Share: | | | | |


ಮಾರ್ಚ್ 4: ಮೂಡೂರು – ಪಡೂರು ಬಂಟ್ವಾಳ ಕಂಬಳ

ರಮಾನಾಥ ರೈ ಸಾರಥ್ಯದಲ್ಲಿ 12ನೇ ವರ್ಷದ ಬಯಲು ಕಂಬಳ

 ಬಂಟ್ವಾಳ: ಇಲ್ಲಿನ ಮೂಡೂರು – ಪಡೂರು ಜೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ 12ನೇ ವರ್ಷದ ಹೊನಲು ಬೆಳಕಿನ ಮೂಡೂರು – ಪಡೂರು ಜೋಡುಕರೆ ಬಯಲು ಕಂಬಳ ಮಾರ್ಚ್ 4ರಂದು ಬೆಳಿಗ್ಗೆ 8.45ಕ್ಕೆ ನಾವೂರು ಗ್ರಾಮದ ಕೋಡಿಬೈಲಿನಲ್ಲಿ ಉದ್ಘಾಟನೆಗೊಳ್ಳಲಿದೆ.

ಸೋಲೂರು ಕರ್ನಾಟಕ ಆರ್ಯ ಈಡಿಗ ಮಹಾಸಂಸ್ಥಾನದ ಪೀಠಾಧಿಪತಿ ಶ್ರೀ ವಿಖ್ಯಾತಾನಂದ ಸ್ವಾಮೀಜಿ, ಶ್ರೀ ಧಾಮ ಮಾಣಿಲ ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ, ಅಲ್ಲಿಪಾದೆ ಸಂತ ಅಂತೋನಿ ಚರ್ಚ್ ಧರ್ಮಗುರು ವಂ. ಫೆಡ್ರಿಕ್ ಮೊಂತೆರೊ, ಕಾವಳಕಟ್ಟೆ ಹಝ್ರತ್ ಡಾ. ಮುಹಮ್ಮದ್ ಫಾಝಿಲ್ ರಿಝ್ಜಿ ಕಂಬಳವನ್ನು ಉದ್ಘಾಟಿಸಲಿದ್ದಾರೆ. ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಬಿ. ರಮಾನಾಥ ರೈ ಅಧ್ಯಕ್ಷತೆ ವಹಿಸುವರು.

ಸಂಜೆ 7 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದ್ದು, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಮಾಜಿ ಸಚಿವರಾದ ಯು.ಟಿ. ಖಾದರ್, ವಿನಯ್ ಕುಮಾರ್ ಸೊರಕೆ, ಕೆಪಿಸಿಸಿ ಉಪಾಧ್ಯಕ್ಷ ಮಧು ಬಂಗಾರಪ್ಪ ಮೊದಲಾದವರು ಅತಿಥಿಗಳಾಗಿರುವರು ಎಂದು ಪ್ರಕಟಣೆ ತಿಳಿಸಿದೆ.

Recent News


Leave a Comment: