ಕಾಲೇಜು ಶುಲ್ಕ ಹಣದಲ್ಲಿ ದಂಡ ಕಟ್ಟಿದ ಯುವಕ.! PSI ಮಾಡಿದ್ದೇನು ಗೊತ್ತಾ..?

ಸುದ್ದಿಗಳು News

Posted by vidyamaana on 2024-07-25 06:35:41 |

Share: | | | | |


ಕಾಲೇಜು ಶುಲ್ಕ ಹಣದಲ್ಲಿ ದಂಡ ಕಟ್ಟಿದ ಯುವಕ.! PSI ಮಾಡಿದ್ದೇನು ಗೊತ್ತಾ..?

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಇಲಕಲ್ ನಗರದ ಕಂಠಿ ಸರ್ಕಲ್ ಬಳಿ ತ್ರಿಬಲ್ ರೈಡ್ ನಲ್ಲಿ ಬಂದ ಯುವಕರಿಗೆ ಪಿಎಸ್ ಐ ಬುದ್ದಿವಾದ ಹೇಳಿದ ಘಟನೆ ನಡೆದಿದೆ. ತ್ರಿಬಲ್ ರೈಡ್ ಮೂಲಕ ಕಾಲೇಜ್ ಅಡ್ಮಿಷನ್ ಗೆ ಹೊರಟಿದ್ದ ವಿದ್ಯಾರ್ಥಿಗಳನ್ನು ಇಳಕಲ್ ನಗರ ಠಾಣಾ ಮಹಿಳಾ ಪಿಎಸ್‌ಐ ಎಸ್.ಆರ್.ನಾಯಕ್ ಎಂಬವರು ಬಾಲಕನಿಗೆ ದಂಡ ಕಟ್ಟುವಂತೆ ಒತ್ತಾಯಿಸಿದ್ದರು.

ಆದ್ರೆ, ಕಣ್ಣೀರಿಟ್ಟ ಬಾಲಕ, ನನ್ನ ಬಳಿ ಹಣವಿಲ್ಲ ಆದರೆ, ಕಾಲೇಜು ಶುಲ್ಕ ಕಟ್ಟಲೆಂದು ಇಟ್ಟುಕೊಂಡಿರುವ ದುಡ್ಡಿದೆ ಅಷ್ಟೇ. ಅದನ್ನೇ ತಗೆದುಕೊಳ್ಳಿ ಎಂದು ಅಳುತ್ತ ದುಡ್ಡು ಕೊಟ್ಟಿದ್ದಾನೆ.

ಬಾಲಕನ ಹೇಳಿಕೆಯನ್ನು ಪರಿಶೀಲಿಸಿದ ಬಳಿಕ ಮಹಿಳಾ ಪಿಎಸ್‌ಐ ಅಪ್ಪಿಕೊಂಡು ಸಾಂತ್ವನ ತಿಳಿಸಿ, ತಮ್ಮ ಬಳಿಯಿದ್ದ ದಂಡದ ಹಣವನ್ನು ವಾಪಸ್ ಕೊಟ್ಟು, ಧೈರ್ಯ ತುಂಬಿದ್ದಾರೆ. ಪೋಷಕರು ಮಕ್ಕಳಿಗೆ ಬೈಕ್, ಸ್ಕೂಟರ್ ಕೊಡುವ ಮುನ್ನ ಹತ್ತು ಬಾರಿ ಎಚ್ಚರ ವಹಿಸಿ ಎಂದು ಮಹಿಳಾ ಪಿಎಸ್‌ಐ ಹೇಳಿದ್ದಾರೆ.

 Share: | | | | |


ಅಪಘಾತದಲ್ಲಿ ಯುವತಿ ಸಾವು:ತಂದೆಯ ಬರುವಿಕೆಗೆ ಕಾದಿದೆ ಕುಟುಂಬ

Posted by Vidyamaana on 2024-08-05 22:17:25 |

Share: | | | | |


ಅಪಘಾತದಲ್ಲಿ ಯುವತಿ ಸಾವು:ತಂದೆಯ ಬರುವಿಕೆಗೆ ಕಾದಿದೆ ಕುಟುಂಬ

ಮೈಸೂರು,ಆ.5: ಸ್ನೇಹಿತರ ಜೊತೆ ಸ್ಕೂಟರ್ ನಲ್ಲಿ ಹೋಗುವಾಗ ಡಿವೈಡರ್ ಗೆ ಡಿಕ್ಕಿ ಹೊಡೆದು ಯುವತಿ ಮೃತಪಟ್ಟಿದ್ದು,ಶವ ಸಂಸ್ಕಾರ‌ ಮಾಡದೆ ಮನೆಬಿಟ್ಟು ಹೋಗಿರುವ ಆಕೆಯ‌ ತಂದೆಗಾಗಿ ಕುಟುಂಬ ಕಾಯುತ್ತಿರುವ ಮನಕರಗುವ ಘಟನೆ ನಗರದಲ್ಲಿ ನಡೆದಿದೆ.ಮೈಸೂರಿನ ಕನಕಗಿರಿ ನಿವಾಸಿ ನಾಗರಾಜ್- ಇಂದಿರಮ್ಮ ದಂಪತಿಯ ಪುತ್ರಿ ಕವನ ಮೃತಪಟ್ಟ ದುರ್ದೈವಿ, ಮೃತ ಯುವತಿಯ ಮೃತದೇಹವನ್ನ ಇಟ್ಟುಕೊಂಡ ಕುಟುಂಬ ಹೆತ್ತ ತಂದೆಯ ಬರುವಿಕೆಗಾಗಿ ಕಾದಿದ್ದು ಅಂತ್ಯಕ್ರಿಯೆಯನ್ನ ಒಂದು ದಿನ ಮುಂದೂಡಿದೆ.

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಬಲಾತ್ಕಾರ ಎಸಗಿದ ಪ್ರಕರಣ : ಆರೋಪಿ ಖುಲಾಸೆ

Posted by Vidyamaana on 2023-08-27 05:32:01 |

Share: | | | | |


ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಬಲಾತ್ಕಾರ ಎಸಗಿದ ಪ್ರಕರಣ : ಆರೋಪಿ ಖುಲಾಸೆ

ಪುತ್ತೂರು : ಆರು ವರ್ಷಗಳ ಹಿಂದಿನ ಈ ಪ್ರಕರಣದ ಆರೋಪಿ ಬೆಳ್ತಂಗಡಿ ತಾಲೂಕು ಮಚ್ಚಿನ ಗ್ರಾಮದ ಕುದ್ರಡ್ಕ ನಿವಾಸಿ ಪ್ರಶಾಂತ್ ಯಾನೆ ನಾರಾಯಣರವರನ್ನು ಜಿಲ್ಲಾ ನ್ಯಾಯಾಲಯವು ನಿರಪರಾಧಿ ಎಂದು ಬಿಡುಗಡೆಗೊಳಿಸಿದೆ.


 ಡಿ 26.2017 ರಂದು ಬೆಳ್ತಂಗಡಿ ತಾಲೂಕು, ಮಚ್ಚಿನ ಗ್ರಾಮದ ಕುದ್ರಡ್ಕ ಎಂಬಲ್ಲಿ ರಾತ್ರಿ ವೇಳೆಯಲ್ಲಿ ಆರೋಪಿಯನ್ನಲಾಗಿದ್ದ ಪ್ರಶಾಂತ್ ಯಾನೆ ನಾರಾಯಣರವರನ್ನು  ರವರು ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಅಕೆಯ ಮನೆಯವರು ತಿಳಿಸಿದಂತೆ ನೊಂದ ಬಾಲಕಿ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರನ್ನು ನೀಡಿದ್ದರು. ಈ ದೂರಿನಂತೆ ಪೊಲೀಸರು ಭಾರತೀಯ ದಂಡ ಸಂಹಿತೆಯ ಕಲಂ 417,376(2)(o),506 ಮತ್ತು ಪೋಕ್ಸೋ  ಕಾಯ್ದೆಯ ಕಲಂ 6 ರ ಅನ್ವಯದಂತೆ ಪ್ರಕರಣ ದಾಖಲಿಸಿದ್ದರು. ತದನಂತರ ತನಿಖೆ ಮುಂದುವರಿಸಿ ಆರೋಪಿ ಎನ್ನಲಾಗಿದ್ದ ಪ್ರಶಾಂತ್ ಯಾನೆ ನಾರಾಯಣರವರನ್ನು ದಸ್ತಗಿರಿ ಮಾಡಿ ತನಿಖೆ ನಡೆಸಿದ್ದರು. ನಂತರ ಪೊಲೀಸರು ಆರೋಪಿಯ ವಿರುದ್ಧ ದೋಷರೋಪಣ ಪಟ್ಟಿಯನ್ನು ಮಾನ್ಯ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಈ ವೇಳೆ ಮಾನ್ಯ ಉಚ್ಚ ನ್ಯಾಯಾಲಯದ  ಆದೇಶದಂತೆ, ಮಂಗಳೂರಿನ ಎರಡನೇ  ಜಿಲ್ಲಾ  ನ್ಯಾಯಾಲಯದಲ್ಲಿದ್ದ ಪ್ರಕರಣವು  ಈ ಪುತ್ತೂರಿನ ಐದನೇ ಹೆಚ್ಚುವರಿ  ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ವರ್ಗಾವಣೆಯಾಗಿರುತ್ತದೆ.

 ಹೀಗಿರುವಲ್ಲಿ,ನ್ಯಾಯಾಲಯವು ಈ ಪ್ರಕರಣವನ್ನು ತನಿಖೆಗೆ   ಕೈಗೆತ್ತಿಕೊಂಡು ಸುಮಾರು 22 ಸಾಕ್ಷಿಗಳ ಪೈಕಿ  16 ಸಾಕ್ಷಿಗಳನ್ನು ತನಿಖೆ ನಡೆಸಿತ್ತು. ದೂರಿನ ಸಲ್ಲಿಕೆಯಲ್ಲಿನ ವಿಳಂಬ, ಬಾಲಕಿಯ ವಯಸ್ಸಿನ ಕುರಿತ ವೈರುದ್ದ್ಯ ಹೇಳಿಕೆ ಆರೋಪಿಯು ಈ ಕೃತ್ಯ ನಡೆಸಿದ್ದಾರೆ ಎಂದು ಮೇಲ್ನೋಟಕ್ಕೆ ಕಂಡು ಬಂದಿರುವುದಿಲ್ಲ,ಸೂಕ್ತ ವೈಜ್ಞಾನಿಕ ಸಾಕ್ಷ್ಯಧಾರ ಮತ್ತು ದಾಖಲೆಗಳ ಕೊರತೆ, ತನಿಖೆಯಲ್ಲಿನ ವಿರೋಧಾಬಾಸಗಳು, ಇವುಗಳ ಹಿನ್ನೆಯಲ್ಲಿ ಪ್ರಾಸಿಕ್ಯೂಷನ್ ಈ ಪ್ರಕರಣವನ್ನು ಸಂಶಯಾತೀತವಾಗಿ ಸಾಬೀತುಪಡಿಸಲು ವಿಫಲಗೊಂಡಿದೆ ಎಂದು ತೀರ್ಮಾನಿಸಿ, ಪುತ್ತೂರಿನ ಮಾನ್ಯ ಜಿಲ್ಲಾ ಮತ್ತು  ಸತ್ರ ನ್ಯಾಯಾಲಯದ ಪ್ರಭಾರ ನ್ಯಾಯಾಧೀಶರಾದ ಮಂಗಳೂರಿನ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀಕಾಂತರಾಜು ಎಸ್. ವಿ ರವರು ಆರೋಪಿಯನ್ನು ನಿರ್ದೋಷಿ ಎಂದು ಆದೇಶಿಸಿರುತ್ತಾರೆ. ಆರೋಪಿ ಪರ ವಕೀಲರಾದ ಪುತ್ತೂರಿನ ಕಜೆ ಲಾ ಚೇಂಬರ್ಸ್ ಮಹೇಶ್ ಕಜೆ ಮತ್ತು ಮಂಗಳೂರಿನ ರಾಜೇಶ್ ರೈಯವರು ವಾದಿಸಿದ್ದರು.

ಊರಿಗೆ ತೆರಳಲು ಹಣ ಇಲ್ಲ ಎಂದು ಕಚೇರಿಗೆ ಬಂದ ಅಂಧ ಯುವಕ

Posted by Vidyamaana on 2023-08-03 03:50:29 |

Share: | | | | |


ಊರಿಗೆ ತೆರಳಲು ಹಣ ಇಲ್ಲ ಎಂದು ಕಚೇರಿಗೆ ಬಂದ ಅಂಧ ಯುವಕ

ಪುತ್ತೂರು: ನಾನು ಬೀದರ್ ಜಿಲ್ಲೆಯ ಬಾಲ್ಕಿ ನಿವಾಸಿ ಕಲ್ಲಪ್ಪ. ಊರು ಸುತ್ತುವ ಅಲೆಮಾರಿ ಯುವಕ, ನನ್ನಲ್ಲಿ ಉಚಿತ ಬಸ್ ಪಾಸ್ ಇತ್ತು ಅದನ್ನು ಕಳೆದುಕೊಂಡಿದ್ದೇನೆ.ನನಗೆ ಊರಿಗೆ ಹೋಗಲು ನನ್ನಲ್ಲಿ ನಯಾ ಪೈಸೆ ಇಲ್ಲ ನನಗೆ ಸಹಾಯ ಮಾಡಿ, ನೀವು ಬಡವರಿಗೆ ಸಹಾಯ ಮಾಡುತ್ತೀರಿ ಎಂದು ಯಾರೋ ನನ್ನನ್ನು ಇಲ್ಲಿಗೆ ತಂದು ಬಿಟ್ಟಿದ್ದಾರೆ. ದಯವಿಟ್ಟು ನನಗೆ ನೆರವು ನೀಡಿ ಎಂದು ಅಂಧ ಯುವಕ ಪುತ್ತೂರು ಶಾಸಕರ ಕಚೇರಿಯಲ್ಲಿ ಬಂದು ಕೇಳಿಕೊಂಡಿದ್ದಾನೆ.

ಯುವಕನ ನೋವನ್ನು ಆಲಿಸಿದ ಶಾಸಕರು ನಿನಗೆ ಎಷ್ಟು ಹಣ ಬೇಕು ನಾನು ಕೊಡುತ್ತೇನೆ, ಸುರಕ್ಷಿತವಾಗಿ ಊರಿಗೆ ಹೋಗಿ ಎಂದು ಅಂಧ ಯುವಕ ಊರಿಗೆ ಹೋಗಲು ಅವನು ಕೇಳಿದಷ್ಟು ಹಣ ನೀಡುವ ಮೂಲಕ ಮಾನವೀಯತೆ ಮೆರೆದರು. ಎಲ್ಲಿಂದಲೋ ಬಂದ ಯುವಕ ಶಾಸಕರ ಬಳಿ ಹಣ ಕೇಳಿದಾಗ ಆತನ ಪೂರ್ವಾ ಪರ ವಿಚಾರಿಸದೆ ಆತ ಬಡವನಾದ ಕಾರಣ ನನ್ನ ಬಳಿ ಬಂದಿದ್ದಲ್ವ ಆತನಿಗೆ ಸಹಾಯ ಮಾಡುವುದು ನನ್ನ ಧರ್ಮ ಎಂದು ಶಾಸಕರು ಈ ವೇಳೆ ಹೇಳಿದರು. ಕಚೇರಿಯಲ್ಲಿ ಸೇರಿದ್ದ ಸಾರ್ವಜನಿಕರು‌ ಶಾಸಕರ ಮಾನವೀಯತೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಮೊಬೈಲ್‌ ಬಳಕೆದಾರರೇ ಗಮನಿಸಿ : ನಿಮ್ಮ ಫೋನ್ ನಲ್ಲಿರುವ ಈ ಸಣ್ಣ ರಂಧ್ರದ ಉಪಯೋಗವೇನು ಗೊತ್ತಾ?

Posted by Vidyamaana on 2024-07-25 13:38:46 |

Share: | | | | |


ಮೊಬೈಲ್‌ ಬಳಕೆದಾರರೇ ಗಮನಿಸಿ : ನಿಮ್ಮ ಫೋನ್ ನಲ್ಲಿರುವ ಈ ಸಣ್ಣ ರಂಧ್ರದ ಉಪಯೋಗವೇನು ಗೊತ್ತಾ?

      ನಾವೆಲ್ಲರೂ ಇತ್ತೀಚಿನ ದಿನಗಳಲ್ಲಿ ಸ್ಮಾರ್ಟ್ಫೋನ್ಗಳನ್ನು ಬಳಸುತ್ತೇವೆ, ಇದು ನಮ್ಮ ಜೀವನದ ಪ್ರಮುಖ ಭಾಗವಾಗಿದೆ, ಆದರೆ ನಿಮ್ಮ ಸ್ಮಾರ್ಟ್ಫೋನ್ ಅಡಿಯಲ್ಲಿ ಸಣ್ಣ ರಂಧ್ರವನ್ನು ನೀವು ಎಂದಾದರೂ ಗಮನಿಸಿದ್ದೀರಾ, ಆದರೆ ಅದು ಏನು ಬಳಸುತ್ತದೆ ಎಂಬುದರ ಬಗ್ಗೆ ನೀವು ಯೋಚಿಸಿದ್ದೀರಾ, ಜನರು ಇದನ್ನು ಮೈಕ್ರೊಫೋನ್ ಎಂದು ಪರಿಗಣಿಸುತ್ತಾರೆ, ಇದನ್ನು ಮೈಕ್ರೊಫೋನ್ ಗ್ರಿಲ್ ಎಂದು ಕರೆಯಲಾಗುತ್ತದೆ, ಇದು ನಿರ್ದಿಷ್ಟವಾಗಿ ಶಬ್ದ ರದ್ದುಗೊಳಿಸುವ ಮೈಕ್ರೊಫೋನ್ ಗಳನ್ನು ಒಳಗೊಂಡಿದೆ.ಶಬ್ದವನ್ನು ಕಡಿಮೆ ಮಾಡುವ ಮೂಲಕ ನಿಮ್ಮ ಫೋನ್ ಕರೆಗಳ ಗುಣಮಟ್ಟವನ್ನು ಹೆಚ್ಚಿಸುವಲ್ಲಿ ಇದು ಪ್ರಮುಖ ಪಾತ್ರ ವಹಿಸುತ್ತದೆ, ಅದರ ಬಗ್ಗೆ ಸಂಪೂರ್ಣ ಮಾಹಿತಿಯ ಬಗ್ಗೆ ತಿಳಿದುಕೊಳ್ಳೋಣ

ಗದಗ: ನಗರ ಸಭಾ ಉಪಾಧ್ಯಕ್ಷೆ ಪುತ್ರ ಸೇರಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ

Posted by Vidyamaana on 2024-04-19 11:36:09 |

Share: | | | | |


ಗದಗ: ನಗರ ಸಭಾ ಉಪಾಧ್ಯಕ್ಷೆ ಪುತ್ರ ಸೇರಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ

ಗದಗ: ಬೆಳ್ಳಂಬೆಳಿಗೆ ಬೆಚ್ಚಿಬೀಳಿಸುವ ಸುದ್ದಿ ಹೊರಬಿದ್ದಿದ್ದು, ನಗರಸಭೆ ಉಪಾಧ್ಯಕ್ಷೆಯ ಪುತ್ರ ಸೇರಿದಂತೆ ಒಂದೇ ಕುಟುಂಬದ ನಾಲ್ವರನ್ನು ಮಲಗಿದಲ್ಲೇ ಭೀಕರವಾಗಿ ಹತ್ಯೆ ಮಾಡಲಾಗಿದೆ. ಈ ಆಘಾತಕಾರಿ ಘಟನೆ ಗದಗದ ನಗರದ ದಾಸರ ಓಣಿಯಲ್ಲಿ ನಡೆದಿದೆ.

ನಗರ ಸಭೆಯ ಉಪಾಧ್ಯಕ್ಷೆ ಸುನಂದಾ ಬಾಕಳೆಯವರ ಪುತ್ರ ಕಾರ್ತಿಕ್ ಬಾಕಳೆ (27), ಪರಶುರಾಮ (55), ಪರಶುರಾಮ ಪತ್ನಿ ಲಕ್ಷ್ಮೀ (45), ಪುತ್ರಿ ಆಕಾಂಕ್ಷಾ (16) ಕೊಲೆಯಾದವರು.

ಗಣಿ ಇಲಾಖೆ ಡೆಪ್ಯುಟಿ ಡೈರೆಕ್ಟರ್ ಮಹಿಳಾ ಅಧಿಕಾರಿಯನ್ನು ಕತ್ತು ಕೊಯ್ದು ಭೀಕರ ಕೊಲೆ ; ಮನೆಗೆ ನುಗ್ಗಿದ ದುಷ್ಕರ್ಮಿಗಳ ಕೃತ್ಯ

Posted by Vidyamaana on 2023-11-05 15:11:03 |

Share: | | | | |


ಗಣಿ ಇಲಾಖೆ ಡೆಪ್ಯುಟಿ ಡೈರೆಕ್ಟರ್ ಮಹಿಳಾ ಅಧಿಕಾರಿಯನ್ನು ಕತ್ತು ಕೊಯ್ದು ಭೀಕರ ಕೊಲೆ ; ಮನೆಗೆ ನುಗ್ಗಿದ ದುಷ್ಕರ್ಮಿಗಳ ಕೃತ್ಯ

ಬೆಂಗಳೂರು, ನ.5: ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಡೆಪ್ಯುಟಿ ಡೈರೆಕ್ಟರ್ ಆಗಿದ್ದ ಮಹಿಳಾ ಅಧಿಕಾರಿಯೊಬ್ಬರನ್ನು ಬೆಂಗಳೂರಿನಲ್ಲಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ಶನಿವಾರ ರಾತ್ರಿ ಪ್ರತಿಮಾ (45) ಎಂಬ ಅಧಿಕಾರಿಯನ್ನು ಅವರ ಮನೆಯಲ್ಲೇ ಕತ್ತು ಕೊಯ್ದು ಹತ್ಯೆ ಮಾಡಲಾಗಿದೆ. 


ಸುಬ್ರಹ್ಮಣ್ಯ ಪುರ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡಕಲ್ಲಸಂದ್ರದ ಗೋಕುಲ್‌ ಅಪಾರ್ಟ್ಮೆಂಟ್‌ ನಲ್ಲಿ ಈ ಘಟನೆ ನಡೆದಿದ್ದು, ಮನೆಯಲ್ಲಿ ಒಂಟಿಯಾಗಿ ನೆಲೆಸಿದ್ದ ಮಹಿಳಾ ಅಧಿಕಾರಿಯನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಪ್ರತಿಮಾ ಅವರು ಬೆಂಗಳೂರಿನ  ಗ್ರಾಮಾಂತರ ಜಿಲ್ಲೆಯ ಗಣಿ ಮತ್ತು ಭೂಗರ್ಭ ಶಾಸ್ತ್ರ ವಿಭಾಗದ ಹಿರಿಯ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. 


ಗಂಡ ಮತ್ತು ಮಗ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನೆಲೆಸಿದ್ದರು. ರಾತ್ರಿ 8 ಗಂಟೆಗೆ ಕಚೇರಿಯಿಂದ ಸರ್ಕಾರಿ ವಾಹನದಲ್ಲಿಯೇ ಮನೆಗೆ ಬಂದಿದ್ದು ಆಬಳಿಕ ಮನೆಗೆ ನುಗ್ಗಿದ ಆಗಂತುಕರು ಕೊಲೆ ಮಾಡಿ ಹೋಗಿದ್ದಾರೆ. ಪರಿಚಿತರೇ ಈ ಕೃತ್ಯ  ಎಸಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಶನಿವಾರ ರಾತ್ರಿ ಪ್ರತಿಮಾ ಅವರಿಗೆ ಅಣ್ಣ ಕರೆ ಮಾಡಿದ್ದು, ಕರೆ ಸ್ವೀಕರಿಸಿರಲಿಲ್ಲ. ಬೆಳಗ್ಗೆ ಮನೆ ಬಳಿ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಮನೆಯಲ್ಲಿ ಯಾವುದೇ ವಸ್ತುಗಳು ಕಾಣೆಯಾಗಿಲ್ಲ. ಹೀಗಾಗಿ ಇದೊಂದು ಯೋಜಿತ ಹತ್ಯೆ ಎಂಬುದು ಸ್ಪಷ್ಟವಾಗಿದೆ. 


18 ವರ್ಷಗಳ ಹಿಂದೆ ಪ್ರತಿಮಾ ಹಾಗೂ ತೀರ್ಥಹಳ್ಳಿಯ ಸತ್ಯನಾರಾಯಣ ವಿವಾಹವಾಗಿದ್ದರು. ಮದುವೆಯಾದ ಸ್ವಲ್ಪ ದಿನಗಳಲ್ಲೇ ಪ್ರತಿಮಾಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ನೌಕರಿ ಸಿಕ್ಕಿತ್ತು. ಈ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಕೆಲಸದ ನಿಮಿತ್ತ ತೆರಳಿದ್ದರು. ಕಳೆದ 8 ವರ್ಷಗಳಿಂದ ಬೆಂಗಳೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಇವರಿಗೆ ಎಸ್ಸೆಸ್ಸೆಲ್ಸಿ ಓದುವ ಮಗನಿದ್ದಾನೆ. ತೀರ್ಥಹಳ್ಳಿಯಲ್ಲಿ ಹೊಸ ಮನೆಯನ್ನು ಕಟ್ಟಿಸಿದ್ದು ಅಲ್ಲಿ ಎರಡು ಎಕರೆ ಅಡಿಕೆ ತೋಟವೂ ಇದ್ದುದರಿಂದ ತಂದೆ, ಮಗ ಅಲ್ಲಿಗೆ ತೆರಳಿದ್ದರು. ಇತ್ತ ಬೆಂಗಳೂರಿನ ಬಾಡಿಗೆ ಮನೆಯಲ್ಲಿ ಪ್ರತಿಮಾ ಒಂಟಿಯಾಗಿಯೇ ನೆಲೆಸಿದ್ದರು.

Recent News


Leave a Comment: