ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಸುದ್ದಿಗಳು News

Posted by vidyamaana on 2024-03-23 15:52:34 | Last Updated by Vidyamaana on 2024-03-23 15:52:34

Share: | | | | |


ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಕಾರಿನೊಳಗಿದ್ದ ಮೂವರು ಸಾವನ್ನಪ್ಪಿದ ಸಂಬಂಧಿಸಿದಂತೆ ಮೂವರು ಸೇರಿ 50 ಲಕ್ಷ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಕುಟುಂಬ ಸದಸ್ಯರು ಕೋರಾ ಪೊಲೀಸರ ವಿಚಾರಣೆ ವೇಳೆ ಮಾಹಿತಿ ನೀಡಿದ್ದಾರೆ.

*💥Whats App Group ಗೆ ಸೇರಲು ಕ್ಲಿಕ್ ಮಾಡಿ

*ಹಣ ತೆಗೆದುಕೊಂಡು ಹೋದ ವಿಚಾರ*:  ಇನ್ನೂ ಕಾರಿನಲ್ಲಿ ಹೋಗುವಾಗ ಮದಡ್ಕದ ಇಸಾಕ್ ಉಜಿರೆಯಲ್ಲಿದ್ದ ಸ್ವಂತ ಮನೆಯನ್ನು ಮಾರಾಟ ಮಾಡಿದ ಹಣ ಮತ್ತು ಮಗಳ ಚಿನ್ನವನ್ನು ಅಡವಿಟ್ಟು ಸುಮಾರು 35 ಲಕ್ಷ ಹಣವನ್ನು ತೆಗೆದುಕೊಂಡು ಹೋಗಿದ್ದರು ಎಂದು ಇಸಾಕ್ ಪತ್ನಿ ಕೋರಾ ಪೊಲೀಸ್ ಠಾಣೆಯಲ್ಲಿ ಮಾ.23 ರಂದು ಪೊಲೀಸ್ ವಿಚಾರಣೆ ವೇಳೆ ಹೇಳಿಕೆಯನ್ನು ನೀಡಿದ್ದಾರೆ. ಇನ್ನೂ ಶಿರ್ಲಾಲು ಸಿದ್ದಿಕ್ ಮತ್ತು ಟಿ.ಬಿ.ಕ್ರಾಸ್ ಸಾಹುಲ್ ಹಮೀದ್ ಕೂಡ ಸ್ನೇಹಿತರ ಮೂಲಕ ಪಡೆದ ಸುಮಾರು 15 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಮನೆಯವರು ಹೇಳಿಕೆ ನೀಡಿದ್ದಾರೆ. ಒಟ್ಟು ಮೂವರ ಬಳಿ 50 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ಇತ್ತು ಎನ್ನಲಾಗಿದೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಹೇಳಲಾಗಿದೆ.

ಮೂವರು ಕೂಡ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ  ಪ್ಲ್ಯಾನ್ ಮಾಡಿ ಕರೆಸಿಕೊಂಡು ಮಾ.21 ರಂದು ರಾತ್ರಿ ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಿ ನಂತರ ಹಣವನ್ನು ದೋಚಿದ್ದಾರೆ ಎನ್ನಲಾಗಿದೆ. ಇನ್ನೂ ಪ್ರಕರಣ ಸಂಬಂಧ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಸೇರಿ ಆರು ಜನರನ್ನು ಮೊಬೈಲ್ ಕಾಲ್ ಡಿಟೈಲ್ಸ್ ಮೂಲಕ  ಕಾರ್ಯಾಚರಣೆ ನಡೆಸಿ ಮಾ.22 ರಂದು ರಾತ್ರಿ ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಬೆಂಕಿಗಾಹುತಿಯಾದ ಕಾರನ್ನು ಕೋರಾ ಪೊಲೀಸ್ ಠಾಣೆಗೆ ತೆಗೆದುಕೊಂಡು ಬಂದಿದ್ದು. ಮೂವರ ಶವ ಸರಕಾರಿ ಆಸ್ಪತ್ರೆಯಲ್ಲಿ ಡಿಎನ್ಎ ಪರೀಕ್ಷೆ ಮಾಡಿದ ಬಳಿಕ ಮುಂದಿನ ಗುರುವಾರ ಅಥವಾ ಶುಕ್ರವಾರ ಮೃತದೇಹವನ್ನು ಗುರುತು ಪತ್ತೆಯಾದ ಬಳಿಕ ಅವರ ಕಟುಂಬ ಸದಸ್ಯರಿಗೆ ನೀಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.


 Share: | | | | |


ಅಜಾಗರೂಕತೆಯಿಂದ ಬಂದ ಮೀನಿನ ಲಾರಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ

Posted by Vidyamaana on 2024-01-07 18:35:01 |

Share: | | | | |


ಅಜಾಗರೂಕತೆಯಿಂದ ಬಂದ ಮೀನಿನ ಲಾರಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ

ಪುತ್ತೂರು: ಅತಿಯಾದ ವೇಗ ಹಾಗೂ ಅಜಾಗರೂಕತೆಯಿಂದ ರಸ್ತೆಯ ನಿಯಮ ಪಾಲಿಸದೆ ಚಲಾಯಿಸಿಕೊಂಡು ಬಂದ ಲಾರಿಯೊಂದು ದ್ವಿಚಕ್ರವಾಹನಕ್ಕೆ ತೆಂಕಿಲ ಬಳಿ ಡಿಕ್ಕಿಯಾಗಿದೆ.


ಸುಳ್ಯ ಕಡೆಗೆ ಮೀನು ಸಾಗಾಟ ಮಾಡುತ್ತಿದ್ದ ಲಾರಿಯೊಂದು ರಸ್ತೆ ಇನ್ನೊಂದು ಭಾಗದಲ್ಲಿ ಚಲಾಯಿಸಿ ಮುಂಭಾಗದಿಂದ ಬಂದ ದ್ವಿಚಕ್ರ ವಾಹನಕ್ಕೆ ಡಿಕ್ಕಿಹೊದ ಪರಿಣಾಮ ವಾಹನ ಸವಾರೆ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಶಿರ ಕವಚ ಇದ್ದ ಕಾರಣದಿಂದ ಸವಾರೆ ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ದ್ವಿಚಕ್ರ ವಾಹನದ ಮುಂಭಾಗ ಸಂಪೂರ್ಣ ಹಾನಿಯಾಗಿದೆ. ಲಾರಿಯೂ ರಸ್ತೆಯಲ್ಲಿ ಮಗುಚಿ ಬಿದ್ದಿದೆ.

ಇಂದು (ಜ 18) ವಿದ್ಯುತ್‌ ನಿಲುಗಡೆ

Posted by Vidyamaana on 2024-01-18 07:13:25 |

Share: | | | | |


ಇಂದು (ಜ 18) ವಿದ್ಯುತ್‌ ನಿಲುಗಡೆ

ಪುತ್ತೂರು: ರಸ್ತೆ ಅಗಲೀಕರಣಕ್ಕಾಗಿ ವಿದ್ಯುತ್ ಮಾರ್ಗ ಸ್ಥಳಾಂತರ ಕಾಮಗಾರಿ ನಿಮಿತ್ತ 110/33/11 ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಕಾಂಚನ, ರಾಮಕುಂಜ, ಉಪ್ಪಿನಂಗಡಿ ಓಲ್ಡ್, ಉಪ್ಪಿನಂಗಡಿ ವಾಟರ್ ಸಪ್ಪೆ ಮತ್ತು ಉಪ್ಪಿನಂಗಡಿ ಎಕ್ಸ್‌ಪ್ರೆಸ್ ಮತ್ತು 110/11 ಕೆವಿ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಉಪ್ಪಿನಂಗಡಿ ಟೌನ್ ಫೀಡರ್‌ನಲ್ಲಿ ಜ.18ರಂದು ಪೂರ್ವಾಹ್ನ ಗಂಟೆ 10 ರಿಂದ ಅಪರಾಹ್ನ 5.30ರವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದುದರಿಂದ 110/33/11 ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಮತ್ತು 110/11ಕೆವಿ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಮೇಲೆ ತಿಳಿಸಿದ ಫೀಡರ್‌ನಿಂದ ವಿದ್ಯುತ್ ಸರಬರಾಜಾಗುವ ಬಜತ್ತೂರು, ಕೊಯಿಲ, ಹಿರೇಬಂಡಾಡಿ, ರಾಮಕುಂಜ, ನೆಕ್ಕಿಲಾಡಿ ಮತ್ತು ಉಪ್ಪಿನಂಗಡಿ ಗ್ರಾಮದ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆ ತಿಳಿಸಿದೆ

ಪ್ರಿಯಾಮಣಿ ಪುತ್ತೂರು ಮೂಲದವರಂತೆ ಮಾರ್ರೆ

Posted by Vidyamaana on 2024-02-23 11:48:54 |

Share: | | | | |


ಪ್ರಿಯಾಮಣಿ ಪುತ್ತೂರು ಮೂಲದವರಂತೆ ಮಾರ್ರೆ

ಪುತ್ತೂರು: ಪುತ್ತೂರು ಮುತ್ತಿನ ನಗರಿ. ಮುತ್ತಿನ ನಗರಿಗೆ ಚಿನ್ನದ ಸ್ಪರ್ಶ ನೀಡಲು ಸುಲ್ತಾನ್ ಆಗಮಿಸಿದೆ. ಇದರ ಉದ್ಘಾಟನೆಗೆ ನಟಿ ಪ್ರಿಯಾಮಣಿ ಅಗಮಿಸಿದ್ದು, ಅವರ ಹೆಸರಿನಲ್ಲೂ ಮಣಿ ಇದೆ ಎಂದು ಕಾರ್ಯಕ್ರಮ ನಿರೂಪಕ ಶಾಹೀಲ್ ಝಹೀರ್ ಹೇಳುತ್ತಿದ್ದರು.

ಅಷ್ಟರಲ್ಲಿ ಪ್ರಿಯಾಮಣಿ ಅವರು ಸ್ವರವೆತ್ತಿ “I am from Puttur” (ನಾನು ಪುತ್ತೂರಿನವಳೇ) ಎಂದು ಬಿಟ್ಟರು. ಸೇರಿದ್ದ ಜನರಿಗೆ ಆಶ್ಚರ್ಯವೋ ಆಶ್ಚರ್ಯ! ಬಹುಭಾಷಾ ತಾರೆ, ರಾಷ್ಟ್ರೀಯ ಪ್ರಶಸ್ತಿ ವಿಜೇತೆ ನಟಿ ಪ್ರಿಯಾಮಣಿ ಪುತ್ತೂರಿನವರೇ?

ಮಾತು ಮುಂದುವರಿಸಿದ ಪ್ರಿಯಾಮಣಿ, ನಾನು ಪುತ್ತೂರಿನವಳೇ. ಆದರೆ ಪಾಲಕ್ಕಾಡ್ ಪುತ್ತೂರು ಎಂದುಬಿಟ್ಟರು.

ಅಲ್ಲಿಗೆ ಪ್ರಿಯಾಮಣಿ ಅವರು ತಾನು ಪುತ್ತೂರಿನವಳು ಎಂದು ಹೇಳುವ ಮೂಲಕ ಪುತ್ತೂರಿಗರ ಹೃದಯದಲ್ಲಿ ಸ್ಥಾನ ಪಡೆದುಕೊಂಡು ಬಿಟ್ಟರು.

ಉದ್ಘಾಟನೆ ಪ್ರಯುಕ್ತ ಕೊಡುಗೆಗಳು 

• ಪ್ರತಿದಿನ ಇಬ್ಬರು ಗ್ರಾಹಕರಿಗೆ ಒಂದು ಗ್ರಾಂ ಚಿನ್ನದ ನಾಣ್ಯ ಗೆಲ್ಲುವ ಅವಕಾಶ.

• ಚಿನ್ನಾಭರಣದ ತಯಾರಿಕಾ ವೆಚ್ಚದಲ್ಲಿ ಶೇ. 50 ಕಡಿತ

• ಡೈಮಂಡ್ ಪ್ರತಿ ಕ್ಯಾರೆಟ್ ಮೇಲೆ ರೂ. 8000/- ರಿಯಾಯಿತಿ.

• ಬೆಳ್ಳಿ ಆಭರಣಗಳ ತಯಾರಿಕಾ ವೆಚ್ಚದ ಮೇಲೆ ಶೇ. 25 ಕಡಿತ.

• ಹಳೆಯ ಚಿನ್ನದ ವಿನಿಮಿಯದಲ್ಲಿ ಪ್ರತೀ ಗ್ರಾಮಿಗೆ ರೂ. 50/- ಹೆಚ್ಚುವರಿಯಾಗಿ ಪಡೆಯಬಹುದು.

ಉದ್ಘಾಟನೆ ಪ್ರಯುಕ್ತ ಕೊಡುಗೆಗಳು 2024ರ ಮಾರ್ಚ್ 10ರ ವರೆಗೆ ಇರಲಿದೆ.


ಪುತ್ತೂರು : ಶಾಲಾ ಪರಿಸರದ ಸೇತುವೆಯ ಕೆಳಗೆ ಕೊಳೆತ ಕುರಿಗಳ ಶವ ಪತ್ತೆ

Posted by Vidyamaana on 2024-05-17 12:15:08 |

Share: | | | | |


ಪುತ್ತೂರು : ಶಾಲಾ ಪರಿಸರದ ಸೇತುವೆಯ ಕೆಳಗೆ ಕೊಳೆತ ಕುರಿಗಳ ಶವ ಪತ್ತೆ

ಪುತ್ತೂರು:ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪುತ್ತೂರು ತೆಂಕಿಲ ವಿವೇಕಾನಂದ ಶಾಲಾ ಪರಿಸರದ ಸಮೀಪದ ಸೇತುವೆಯ ಕೆಳಗೆ ಕೊಳೆತ ಸ್ಥಿತಿಯಲ್ಲಿ ಕುರಿಗಳ ಶವಪತ್ತೆಯಾಗಿದೆ.

ಕೆ ಪಿ ಸಿ ಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ ನಿಧನ : ಪುತ್ತೂರಿನ ನಾಲ್ಕು ಕಡೆ ಆಯೋಜಿಸಿದ್ದ ಪ್ರಜಾಧ್ವನಿ ಯಾತ್ರೆ ಮುಂದೂಡಿಕೆ.

Posted by Vidyamaana on 2023-03-11 06:04:37 |

Share: | | | | |


ಕೆ ಪಿ ಸಿ ಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ ನಿಧನ : ಪುತ್ತೂರಿನ ನಾಲ್ಕು ಕಡೆ ಆಯೋಜಿಸಿದ್ದ ಪ್ರಜಾಧ್ವನಿ ಯಾತ್ರೆ ಮುಂದೂಡಿಕೆ.

ಪುತ್ತೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ ಹೃದಯಾಘಾತದಿಂದ ನಿಧನರಾದ ಹಿನ್ನಲೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ನಾಲ್ಕು ದಿಕ್ಕುಗಳಲ್ಲಿ ಇಂದು ಆಯೋಜಿಸಿದ್ದ ಕರಾವಳಿ ಪ್ರಜಾಧ್ವನಿ ಯಾತ್ರೆ ಮುಂದೂಡಲ್ಪಟ್ಟಿದೆ.ಪುತ್ತೂರು ವಿಧಾನಸಭಾ ಕ್ಷೇತ್ರದ ಉಪ್ಪಿನಂಗಡಿ, ವಿಟ್ಲ ಕುಂಬ್ರ ಹಾಗೂ ಪುತ್ತೂರಿನಲ್ಲಿ ಪ್ರಜಾಧ್ವನಿ ಯಾತ್ರೆ ಕೈಗೊಳ್ಳಲಾಗಿತ್ತು. .ಉಪ್ಪಿನಂಗಡಿಯ ಕಾರ್ಯಕ್ರಮದ ಸ್ಥಳದಲ್ಲಿ ಧ್ರುವ ನಾರಾಯಣರಿಗೆ ಸಂತಾಪ ಸೂಚನೆ ನಡೆಯಲಿದೆ. ಪ್ರಜಾಧ್ವನಿ ಯಾತ್ರೆ ರದ್ದುಗೊಳಿಸುವಂತೆ ಜಿಲ್ಲಾ ಕಾಂಗ್ರೆಸ್ ಸೂಚನೆ ನೀಡಿದೆ ಎಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂಬಿ ವಿಶ್ವನಾಥ ರೈ ಹಾಗೂ ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ ಡಾ.ರಾಜರಾವ್ ಬಿ.ಕೆ ತಿಳಿಸಿದ್ದಾರೆ .

ರಾಜಸ್ಥಾನದಲ್ಲಿ ಭೀಕರ ರಸ್ತೆ ಅಪಘಾತ ; ಟ್ರಕ್ ಗೆ ಕಾರು ಡಿಕ್ಕಿ ಐವರು ಪೊಲೀಸರ ಸಾವು

Posted by Vidyamaana on 2023-11-20 15:27:41 |

Share: | | | | |


ರಾಜಸ್ಥಾನದಲ್ಲಿ ಭೀಕರ ರಸ್ತೆ ಅಪಘಾತ ; ಟ್ರಕ್ ಗೆ ಕಾರು ಡಿಕ್ಕಿ  ಐವರು ಪೊಲೀಸರ ಸಾವು

ಜೈಪುರ: ಭೀಕರ ರಸ್ತೆ ಅಪಘಾತದಲ್ಲಿ ಐವರು ಪೊಲೀಸ್‌ ಅಧಿಕಾರಿಗಳು  ಸಾವನ್ನಪ್ಪಿ ಇಬ್ಬರು ಗಾಯಗೊಂಡಿರುವ ಘಟನೆ ರಾಜಸ್ಥಾನದ ಚುರು ಎಂಬಲ್ಲಿ ಭಾನುವಾರ ನಡೆದಿದೆ.


ಇಂದು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ಆಗಲಿದ್ದ ಕಾರಣ ಪೊಲೀಸರು ಕಾರಿನಲ್ಲಿ ನಗೌರ್‌ನಿಂದ ಜುಂಜುನುಗೆ ಕರ್ತವ್ಯಕ್ಕಾಗಿ ಪ್ರಯಾಣಿಸುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ.




ಪೊಲೀಸರ ವಾಹನ ಅತೀ ವೇಗದಿಂದ ಪ್ರಯಾಣಿಸುತ್ತಿತ್ತು. ಈ ವೇಳೆ ಟ್ರಕ್‌ ವೊಂದು ಓವರ್‌ ಟೇಕ್‌ ಮಾಡಿ ಹೋಗಿದೆ. ಇದೇ ಸಂದರ್ಭದಲ್ಲಿ ಮುಂದೆ ಹೋಗುತ್ತಿದ್ದ ಟ್ರಕ್‌ ಅಚಾನಕ್‌ ಆಗಿ ಬ್ರೇಕ್‌ ಹಾಕಿದೆ. ಪರಿಣಾಮ ಪೊಲೀಸರ ವಾಹನ ಟ್ರಕ್‌ ಗೆ ಹೋಗಿ ಢಿಕ್ಕಿ ಹೊಡೆದಿದೆ. ಇದರಿಂದ ವಾಹನದಲ್ಲಿ ಐವರು ಪೊಲೀಸರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ವರದಿ ತಿಳಿಸಿದೆ. 


ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಮೃತ ಪೊಲೀಸರೆಲ್ಲ ರಾಜಸ್ಥಾನದ ನಾಗೌರ್ ಜಿಲ್ಲೆಯವರೆಂದು ವರದಿ ತಿಳಿಸಿದೆ.

Recent News


Leave a Comment: