ಮೊಬೈಲ್‌ ಬಳಕೆದಾರರೇ ಗಮನಿಸಿ : ನಿಮ್ಮ ಫೋನ್ ನಲ್ಲಿರುವ ಈ ಸಣ್ಣ ರಂಧ್ರದ ಉಪಯೋಗವೇನು ಗೊತ್ತಾ?

ಸುದ್ದಿಗಳು News

Posted by vidyamaana on 2024-07-25 13:38:46 |

Share: | | | | |


ಮೊಬೈಲ್‌ ಬಳಕೆದಾರರೇ ಗಮನಿಸಿ : ನಿಮ್ಮ ಫೋನ್ ನಲ್ಲಿರುವ ಈ ಸಣ್ಣ ರಂಧ್ರದ ಉಪಯೋಗವೇನು ಗೊತ್ತಾ?

      ನಾವೆಲ್ಲರೂ ಇತ್ತೀಚಿನ ದಿನಗಳಲ್ಲಿ ಸ್ಮಾರ್ಟ್ಫೋನ್ಗಳನ್ನು ಬಳಸುತ್ತೇವೆ, ಇದು ನಮ್ಮ ಜೀವನದ ಪ್ರಮುಖ ಭಾಗವಾಗಿದೆ, ಆದರೆ ನಿಮ್ಮ ಸ್ಮಾರ್ಟ್ಫೋನ್ ಅಡಿಯಲ್ಲಿ ಸಣ್ಣ ರಂಧ್ರವನ್ನು ನೀವು ಎಂದಾದರೂ ಗಮನಿಸಿದ್ದೀರಾ, ಆದರೆ ಅದು ಏನು ಬಳಸುತ್ತದೆ ಎಂಬುದರ ಬಗ್ಗೆ ನೀವು ಯೋಚಿಸಿದ್ದೀರಾ, ಜನರು ಇದನ್ನು ಮೈಕ್ರೊಫೋನ್ ಎಂದು ಪರಿಗಣಿಸುತ್ತಾರೆ, ಇದನ್ನು ಮೈಕ್ರೊಫೋನ್ ಗ್ರಿಲ್ ಎಂದು ಕರೆಯಲಾಗುತ್ತದೆ, ಇದು ನಿರ್ದಿಷ್ಟವಾಗಿ ಶಬ್ದ ರದ್ದುಗೊಳಿಸುವ ಮೈಕ್ರೊಫೋನ್ ಗಳನ್ನು ಒಳಗೊಂಡಿದೆ.ಶಬ್ದವನ್ನು ಕಡಿಮೆ ಮಾಡುವ ಮೂಲಕ ನಿಮ್ಮ ಫೋನ್ ಕರೆಗಳ ಗುಣಮಟ್ಟವನ್ನು ಹೆಚ್ಚಿಸುವಲ್ಲಿ ಇದು ಪ್ರಮುಖ ಪಾತ್ರ ವಹಿಸುತ್ತದೆ, ಅದರ ಬಗ್ಗೆ ಸಂಪೂರ್ಣ ಮಾಹಿತಿಯ ಬಗ್ಗೆ ತಿಳಿದುಕೊಳ್ಳೋಣ

ಇದು ಹೇಗೆ ಕಾರ್ಯನಿರ್ವಹಿಸುತ್ತದೆ

ಶಬ್ದ ರದ್ದುಗೊಳಿಸುವ ಮೈಕ್ರೊಫೋನ್ ನಿಮ್ಮ ಫೋನ್ನ ಪ್ರಾಥಮಿಕ ಮೈಕ್ರೊಫೋನ್ನೊಂದಿಗೆ ಕಾರ್ಯನಿರ್ವಹಿಸುತ್ತದೆ, ಇದು ಸಾಮಾನ್ಯವಾಗಿ ಮುಂಭಾಗ ಅಥವಾ ಮೇಲ್ಭಾಗದಲ್ಲಿದೆ. ಕರೆ ಸಮಯದಲ್ಲಿ, ಮುಖ್ಯ ಮೈಕ್ರೊಫೋನ್ ನಿಮ್ಮ ಧ್ವನಿಯನ್ನು ಸೆರೆಹಿಡಿಯುತ್ತದೆ, ಶಬ್ದ ರದ್ದುಗೊಳಿಸುವ ಮೈಕ್ರೊಫೋನ್ ಸುತ್ತಮುತ್ತಲಿನ ಶಬ್ದಗಳನ್ನು ತೆಗೆದುಕೊಳ್ಳುತ್ತದೆ.

ಮೈಕ್ರೊಫೋನ್ ಗ್ರಿಲ್ ನ ಪ್ರಾಮುಖ್ಯತೆ

ಮೈಕ್ರೊಫೋನ್ ಗ್ರಿಲ್ ಶಬ್ದವನ್ನು ತೆಗೆದುಹಾಕುವುದು ಅಥವಾ ತಿರುಚುವುದು ನಿಮ್ಮ ಕರೆಯ ಗುಣಮಟ್ಟದ ಮೇಲೆ ಗಮನಾರ್ಹವಾಗಿ ಪರಿಣಾಮ ಬೀರುತ್ತದೆ. ಈ ಘಟಕವಿಲ್ಲದೆ, ಹಿನ್ನೆಲೆ ಶಬ್ದಗಳು ಹೆಚ್ಚು ಸ್ಪಷ್ಟವಾಗುತ್ತವೆ, ಸಂವಹನವನ್ನು ಕಷ್ಟಕರವಾಗಿಸುತ್ತದೆ.ಎಲ್ಲೆಲ್ಲೂ ಇಲ್ಲ

ಎಲ್ಲಾ ಸ್ಮಾರ್ಟ್ಫೋನ್ಗಳು ಶಬ್ದ-ರದ್ದುಗೊಳಿಸುವ ಮೈಕ್ರೊಫೋನ್ ಅನ್ನು ಹೊಂದಿಲ್ಲ ಎಂಬುದನ್ನು ಗಮನಿಸುವುದು ಮುಖ್ಯ. ನಿಮ್ಮ ಸಾಧನವು ಈ ವೈಶಿಷ್ಟ್ಯವನ್ನು ಹೊಂದಿದೆಯೇ ಎಂದು ನಿಮಗೆ ಖಚಿತವಿಲ್ಲದಿದ್ದರೆ, ನಿಮ್ಮ ಫೋನ್ನ ಕೈಪಿಡಿಯನ್ನು ನೀವು ನೋಡಿಕೊಳ್ಳಬಹುದು.

 Share: | | | | |


ಆಜಾದಿ ಕಾ ಅಮೃತ್ ಮಹೋತ್ಸವ್: ಹುತಾತ್ಮ ಸೈನಿಕರ ಮನೆಯಲ್ಲಿ ಶತ್ ಶತ್ ನಮನ

Posted by Vidyamaana on 2022-12-15 13:42:18 |

Share: | | | | |


ಆಜಾದಿ ಕಾ ಅಮೃತ್ ಮಹೋತ್ಸವ್: ಹುತಾತ್ಮ ಸೈನಿಕರ ಮನೆಯಲ್ಲಿ ಶತ್ ಶತ್ ನಮನ

ಪುತ್ತೂರು: ೧೯ ಕರ್ನಾಟಕ ಬೆಟಾಲಿಯನ್ ಎನ್‌ಸಿಸಿ ಮಡಿಕೇರಿ ಹಾಗೂ ಸಂತ ಫಿಲೋಮಿನಾ ಕಾಲೇಜಿನ ಎನ್‌ಸಿಸಿ ಘಟಕದ ಆಶ್ರಯದಲ್ಲಿ ಶತ್ ಶತ್ ನಮನ ವಿಶೇಷ ಕಾರ್ಯಕ್ರಮ ಹವಾಲ್ದಾರ್ ದಿ. ಪರಮೇಶ್ವರ ಕೆ. ಅವರ ದೋಲ್ಪಾಡಿ ಮನೆಯಲ್ಲಿ ನಡೆಯಿತು.

ಸೈನಿಕರ ಪರಾಕ್ರಮ, ತ್ಯಾಗ, ಬಲಿದಾನಗಳನ್ನು ಸ್ಮರಿಸಿ, ಅವರಿಗೆ ಗೌರವ ಅರ್ಪಿಸಲು ಹಾಗೂ ಅವರ ಕುಟುಂಬಕ್ಕೆ ಪ್ರೋತ್ಸಾಹ ನೀಡುವ ಹಿನ್ನೆಲೆಯಲ್ಲಿ ಶತ್ ಶತ್ ನಮನ ಕಾರ್ಯಕ್ರಮ ಆಯೋಜಿಸಲಾಗುತ್ತದೆ. 

೧೯ ವರ್ಷಗಳ ಹಿಂದೆ ಭೂಸೇನೆಗೆ ಸೇರ್ಪಡೆಗೊಂಡ ಯೋಧ ಪರಮೇಶ್ವರ ಗೌಡ ಅವರು ಬೆಂಗಳೂರಿನಲ್ಲಿ ತರಬೇತಿ ಪಡೆದ ಬಳಿಕ ಲೇಹ್, ಲಡಾಕ್, ಅಸ್ಸಾಂ, ರಾಜಸ್ಥಾನ, ಸೂರತ್ ಮೊದಲಾದೆಡೆ ಸೇವೆ ಸಲ್ಲಿಸಿ, ಅನೇಕ ಪ್ರಶಸ್ತಿಗಳನ್ನು ಪಡೆದುಕೊಂಡರು. ಹುದ್ದೆಯಲ್ಲಿ ಭಡ್ತಿ ಹೊಂದಿ ಜಮ್ಮುವಿನಲ್ಲಿ ಹವಾಲ್ದಾರ್ ಆಗಿನಾಲ್ಕು ವರ್ಷಗಳ ಕಾಲ ಸೇವೆ ಸಲ್ಲಿಸಿದರು. ಕಾರ್ಗಿಲ್ ಕದನದಲ್ಲಿ ಭಾಗವಹಿಸಿದ ಅವರು, ಕಾಶ್ಮೀರದ ಉಧಂಪುರ ಸಮೀಪದ ಕೆಹರಿ ಎಂಬಲ್ಲಿ ೨೦೦೨ರ ಜೂನ್ ೯ರಂದು ಪಾಕ್ ಸೈನಿಕರ ಶೆಲ್ ದಾಳಿಗೆ ಗುರಿಯಾಗಿ ಹುತಾತ್ಮರಾದರು.

ಈ ಪರಾಕ್ರಮವನ್ನು ಸ್ಮರಿಸುವ ಸಲುವಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಭಾರತೀಯ ಸೇನೆಯ ಉನ್ನತ ಅಧಿಕಾರಿಗಳ ಪರವಾಗಿ ಶತಶತನಮನಗಳನ್ನೊಳಗೊಂಡ ವಿಶೇಷ ಸ್ಮರಣಿಕೆಯನ್ನು ದಿ| ಪರಮೇಶ್ವರ ಗೌಡ ಕೆ. ಇವರ ಪತ್ನಿ ಕೆ.ಪಿ. ಪುಷ್ಪಾವತಿ ಹಸ್ತಾಂತರಿಸಲಾಯಿತು. ೧೯ ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ. ಮಡಿಕೇರಿ ಇದರ ಸುಬೇದಾರ್ ಮೇಜರ್ ಮಲ್ಲಿಕಾರ್ಜುನ, ಸುಬೇದಾರ್ ರಾಜುಗುರುಂಗು, ಸಂತ ಫಿಲೋಮಿನಾ ಕಾಲೇಜಿನ ಎನ್. ಸಿ. ಸಿ. ಅಧಿಕಾರಿ ಲೆಫ್ಟಿನೆಂಟ್ ಜೋನ್ಸನ್ ಡೇವಿಡ್ ಸಿಕ್ವೇರಾ ಮತ್ತುಎನ್. ಸಿ. ಸಿ. ಕೆಡೆಟ್‌ಗಳಾದ ಸೀನಿಯರ್ ಅಂಡರ್ ಆಫೀಸರ್ ಸಾತ್ವಿಕ್ ಡಿ.ಎಸ್., ಜೂನಿಯರ್ ಅಂಡರ್ ಆಫೀಸರ್ಸ್ ಸ್ವಸ್ತಿಕ ಕೆ, ಕೃತಿಕೆ ಎನ್., ಕ್ಯಾಡೆಟ್ ರಿಯಾ, ಸಂಜನಾ ಅವರು ಹಸ್ತಾಂತರಿಸಿದರು. ಕಾಲೇಜಿನ ಹಿರಿಯ ವಿದ್ಯಾರ್ಥಿ ಪೊನ್ನಪ್ಪ ಉಪಸ್ಥಿತರಿದ್ದರು.



ಹುತಾತ್ಮ ಸೈನಿಕ ದಿ. ಪರಮೇರ್ಶವರ ಕೆ. ಅವರ ಪತ್ನಿ ಪುಷ್ಪಾವತಿ ಅವರಿಗೆ ಸ್ಮರಣಿಕೆಯನ್ನು ಹಸ್ತಾಂತರಿಸಲಾಯಿತು.

ಮಂಗಳೂರು ಮಾದಕ ವಸ್ತು ಕೊಕೇನ್ ಪತ್ತೆ: ಇಬ್ಬರು ಆರೋಪಿಗಳ ಬಂಧನ

Posted by Vidyamaana on 2024-03-19 08:03:50 |

Share: | | | | |


ಮಂಗಳೂರು ಮಾದಕ ವಸ್ತು ಕೊಕೇನ್ ಪತ್ತೆ: ಇಬ್ಬರು ಆರೋಪಿಗಳ ಬಂಧನ

ಮಂಗಳೂರು, ಮಾ.20: ಗೋವಾದಿಂದ ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ಮಾದಕ ವಸ್ತುವಾದ ಕೊಕೇನ್ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಪತ್ತೆ ಹಚ್ಚಿ 35 ಗ್ರಾಂ ಕೊಕೇನ್ ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಅಂಬ್ಲಮೊಗರು ಕೊಳಂಜಹಿಟ್ಟು ಸದಕತ್.ಯು ಯಾನೆ ಶಾನ್ ನವಾಝ್(31) ಮತ್ತು ಅಂಬ್ಲಮೊಗರು ಸೇನರಬೆಟ್ಟು ಅಶ್ಫಕ್ ಯಾನೆ ಅಶ್ಫಾ (25) ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ಆರೋಪಿಗಳ ವಶದಲ್ಲಿದ್ದ ದ್ವಿಚಕ್ರ ವಾಹನ ಮತ್ತು ಅದರಲ್ಲಿ ಸಾಗಾಟ ಮಾಡುತ್ತಿದ್ದ 2,72,000 ರೂ. ಮೌಲ್ಯದ 35 ಗ್ರಾಂ ನಿಷೇಧಿತ ಮಾದಕ ವಸ್ತು ಕೊಕೇನ್, 3 ಮೊಬೈಲ್ ಫೋನ್ ಗಳು, ಡಿಜಿಟಲ್ ತೂಕ ಮಾಪಕ, ನಗದು ರೂ. 5560 ನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 4,00,000 ಆಗಿರುತ್ತದೆ. ಈ ಬಗ್ಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.ಮಂಗಳೂರು ನಗರಕ್ಕೆ ಗೋವಾದಿಂದ ಮಾದಕ ವಸ್ತುವಾದ ಕೊಕೇನ್ ಅನ್ನು ಖರೀದಿಸಿಕೊಂಡು ಸಾಗಾಟ, ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಇನ್ಸ್‌ಪೆಕ್ಟರ್ ಶ್ಯಾಮ್ ಸುಂದರ್ ಎಚ್ ಎಂ ನೇತೃತ್ವದ ಸಿಸಿಬಿ ಪೊಲೀಸರು ಉಳ್ಳಾಲ ತಾಲೂಕು ಆಂಬ್ಲಮೊಗರು ಗ್ರಾಮದ ಎಲಿಯಾರ್ ಪದವು ಮೈದಾನದ ಬಳಿ ದ್ವಿಚಕ್ರ ವಾಹನದಲ್ಲಿ ಕೊಕೇನ್ ಮಾರಾಟ ಮತ್ತು ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ಪತ್ತೆ ಹಚ್ಚಿದರು.

ಮಾದಕ ವಸ್ತು ಮಾರಾಟ ಮತ್ತು ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿಗಳ ಪೈಕಿ ನವಾಝ್ ವಿರುದ್ಧ ಈ ಹಿಂದೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಸಾಗಾಟದ ಪ್ರಕರಣ ಹಾಗೂ ಹಲ್ಲೆ ಪ್ರಕರಣ ದಾಖಲಾಗಿರುತ್ತದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.ನಿರೀಕ್ಷಕರಾದ ಶ್ಯಾಮ್ ಸುಂದರ್ ಎಚ್ ಎಂ, ಪಿಎಸ್‌ಐ ಗಳಾದ ಶರಣಪ್ಪ ಭಂಡಾರಿ ಮತ್ತು ಸಿಸಿಬಿ ಸಿಬ್ಬಂದಿ ಪಾಲ್ಗೊಂಡಿದ್ದರು.

ರಾಜಧರ್ಮ ಪಾಲಿಸಿದ ಶಾಸಕ ಅಶೋಕ್ ಕುಮಾರ್ ರೈ

Posted by Vidyamaana on 2023-09-30 22:09:16 |

Share: | | | | |


ರಾಜಧರ್ಮ ಪಾಲಿಸಿದ ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು; ಅಧಿಕಾರದಲ್ಲಿರುವವರು ನ್ಯಾಯ ಪಾಲಿಸಬೇಕು, ರಾಜಧರ್ಮ ಪಾಲಿಸಬೇಕಾಗಿರುವುದು ಕರ್ತವ್ಯವೂ ಆಗಿದೆ ಆದರೆ ಕೆಲವರು ಆ ಕರ್ತವ್ಯವನ್ನು ಮರೆತು ಅಧಿಕಾರ ಅನುಭವಿಸಿದವರೂ ಇದ್ದಾರೆ . ಆದರೆ ಪುತ್ತೂರು ಶಾಸಕರು ಈ ವಿಚಾರದಲ್ಲಿ ತಮ್ಮ ಕರ್ತವ್ಯವನ್ನು ಮರೆತಿಲ್ಲ. ತನ್ನ ಸಹೋದರಿ ನಳಿನಿ ಶೆಟ್ಟಿ ಶನಿವಾರದಂದು ಶಾಸಕರನ್ನು ಭೇಟಿಯಾಗಲು ಶಾಸಕರ ಕಚೇರಿಗೆ ಬಂದಿದ್ದರು. ಶಾಸಕರನ್ನು ಭೇಟಿಯಾಗಲು ಬಂದಿರುವ ಸಾರ್ವಜನಿಕರ ಸಂಖ್ಯೆಯೂ ಅಪಾರವಾಗಿತ್ತು. ತನ್ನ ಸಹೋದರಿ ತನಗಾಗಿ ಕಾಯುತ್ತಿದ್ದಾರೆ ಎಂಬ ವಿಚಾರ ಶಾಸಕರಿಗೆ ಗೊತ್ತಿತ್ತು. ಆದರೆ ಶಾಸಕರು ತನ್ನ ಸಹೋದರಿಯನ್ನು ಕರೆಯಲಿಲ್ಲ.‌ಸರತಿ ಸಾಲಿನಲ್ಲೇ ಬಂದ ನಳಿನಿ ಶೆಟ್ಟಿಯವರು ಅರ್ಜಿ ಸಲ್ಲಿಸಿ ಅಲ್ಲಿಂದ ತೆರಳಿದರು.‌ಶಾಸಕರ ಈ ನ್ಯಾಯದ ನಡೆ ಅಲ್ಲಿದ್ದವರಿಗೆ ಶಾಸಕರ ಬಗ್ಗೆ ಗೌರವ ಹೆಚ್ಚಾಗುವಂತೆ ಮಾಡಿತು

ಮಗನ ಸಾವಿನ ನೋವಲ್ಲಿ ತಾಯಿ ಸಹೋದರಿ ಆತ್ಮಹತ್ಯೆ ; ದೀಪಾವಳಿ ಮಧ್ಯೆ ಕುಟುಂಬಕ್ಕೆ ಆಘಾತ

Posted by Vidyamaana on 2023-11-15 05:50:17 |

Share: | | | | |


ಮಗನ ಸಾವಿನ ನೋವಲ್ಲಿ ತಾಯಿ ಸಹೋದರಿ ಆತ್ಮಹತ್ಯೆ ; ದೀಪಾವಳಿ ಮಧ್ಯೆ ಕುಟುಂಬಕ್ಕೆ ಆಘಾತ

ಕಾರವಾರ, ನ.15: ದೀಪಾವಳಿ ಸಂಭ್ರಮದ ನಡುವೆ ಒಂದೇ ಮನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಪುತ್ರನ ಸಾವಿನ ನೋವಿನಲ್ಲಿ ತಾಯಿ ಹಾಗೂ ಸಹೋದರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿರಸಿ ತಾಲೂಕಿನ ತಾರಗೋಡು ಬೆಳಲೆ ಗ್ರಾಮದಲ್ಲಿ ನಡೆದಿದೆ. 


ಅನಾರೋಗ್ಯದ ಹಿನ್ನೆಲೆ ಉದಯ ಬಾಲಚಂದ್ರ ಹೆಗಡೆ (22) ಎಂಬ ಯುವಕ ಮನೆಯಲ್ಲೇ ಮೃತಪಟ್ಟಿದ್ದರು.‌ ಪುತ್ರನ ಮೃತದೇಹದ ಪಕ್ಕದಲ್ಲೇ ಕುಳಿತು ಕಣ್ಣೀರು ಹಾಕುತ್ತಿದ್ದ ಆತನ ತಾಯಿ ಹಾಗೂ ಸಹೋದರಿ ಬಳಿಕ ತಾವು ಕೂಡ ಸಾವಿಗೆ ಶರಣಾಗಿದ್ದಾರೆ.‌‌ ತಾಯಿ ನರ್ಮದಾ ಬಾಲಚಂದ್ರ ಹೆಗಡೆ (50) ಹಾಗೂ ಸಹೋದರಿ ದಿವ್ಯಾ ಬಾಲಚಂದ್ರ ಹೆಗಡೆ (25) ಆತ್ಮಹತ್ಯೆ ಮಾಡಿಕೊಂಡವರು.‌


ಕೊರೊನಾ ಸಂದರ್ಭದಲ್ಲಿ ಆನಾರೋಗ್ಯ ಕಾಡಿದ್ದರಿಂದ ಊರಿಗೆ ಹಿಂತಿರುಗಿದ್ದ ಉದಯ ಬಾಲಚಂದ್ರ ಹೆಗಡೆ ಮನೆಯಲ್ಲಿದ್ದಕೊಂಡೇ ಚಿಕಿತ್ಸೆ ಪಡೆಯುತ್ತಿದ್ದರು. ಬಳಿಕ ಮಗನ ಚಿಕಿತ್ಸೆಗಾಗಿ ಆಸ್ಪತ್ರೆ- ಮನೆ ಅಂತ ಅಲೆದಾಡುತ್ತಿದ್ದರು. ಅನಾರೋಗ್ಯ ತೀವ್ರಗೊಂಡ ಹಿನ್ನೆಲೆ‌ ಮಂಗಳವಾರ ಬೆಳಗ್ಗೆ ಮಗ ಸಾವಿಗೀಡಾಗಿದ್ದ.‌ ಮನೆ ಮಗನ ಸಾವಿನ ನೋವಿನಿಂದ ತಾಯಿ ಹಾಗೂ ಸಹೋದರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. 


ಸ್ಥಳಕ್ಕೆ ಶಿರಸಿ ಗ್ರಾಮೀಣ ಠಾಣಾ ಪೊಲೀಸರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ.

ಕೊರಗಜ್ಜನ ಆದಿಕ್ಷೇತ್ರದಲ್ಲಿ ಗೆಲುವಿಗಾಗಿ ಪ್ರಾರ್ಥನೆ - ಕಾರ್ಯಕರ್ತರೇ ನಮಗೆ ಸ್ಟಾರ್ ಪ್ರಚಾರಕರು

Posted by Vidyamaana on 2024-04-06 17:30:22 |

Share: | | | | |


ಕೊರಗಜ್ಜನ ಆದಿಕ್ಷೇತ್ರದಲ್ಲಿ ಗೆಲುವಿಗಾಗಿ ಪ್ರಾರ್ಥನೆ - ಕಾರ್ಯಕರ್ತರೇ ನಮಗೆ ಸ್ಟಾರ್ ಪ್ರಚಾರಕರು

ಉಳ್ಳಾಲ, ಎ.6: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.ಅವರು ಉಳ್ಳಾಲದಲ್ಲಿ ಮತಯಾಚನೆ ನಡೆಸಿದರು. ಈ ವೇಳೆ ಹಿರಿಯರು, ಮಾಜಿ ಶಾಸಕರಾದ ಶಕುಂತಳಾ ಶೆಟ್ಟಿಯವರು ಪದ್ಮರಾಜ್ ಅವರನ್ನ ಆಶೀರ್ವದಿಸಿ ಸಲಹೆ ನೀಡಿದರು.


ವಿಧಾನಸಭಾ ಸ್ಪೀಕರ್‌ ಯು.ಟಿ.ಖಾದರ್‌ ಅವರು ಪ್ರತಿನಿಧಿಸುವ ಮಂಗಳೂರು (ಉಳ್ಳಾಲ) ಕ್ಷೇತ್ರದ ಕಲ್ಲಾಪು ಗ್ಲೋಬಲ್ ಮಾರ್ಕೆಟ್ ಗೆ ಇಂದು ಬೆಳಗ್ಗೆ ಪದ್ಮರಾಜ್ ಭೇಟಿ ನೀಡಿ ವರ್ತಕರು, ಗ್ರಾಹಕರಲ್ಲಿ ಮತಯಾಚನೆ ನಡೆಸಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಮಾರುಕಟ್ಟೆಯ ವರ್ತಕರು ನನಗೆ ನೀಡಿದ ಪ್ರೀತಿಗೆ ನಾನು ಆಭಾರಿಯಾಗಿದ್ದೇನೆ. ಮಂಗಳೂರು ಸೆಂಟ್ರಲ್ ಮಾರುಕಟ್ಟೆಯ ಸಮಸ್ಯೆಯಿಂದ ವರ್ತಕರು ಯಾವ ರೀತಿಯ ತೊಂದರೆ ಅನುಭವಿಸುತ್ತಿದ್ದಾರೆ ಎನ್ನುವುದನ್ನು ಅರಿತಿದ್ದೇನೆ. ಮಂಗಳೂರು ನಗರ ದೇಶದ ಬಲಿಷ್ಠ ನಗರಗಳಲ್ಲಿ ಒಂದಾಗಬೇಕು ಎನ್ನುವುದು ನನ್ನ ಗುರಿ. ಮಂಗಳೂರಿನಲ್ಲಿ ಸುಸಜ್ಜಿತ ಅಂತಾರಾಷ್ಟ್ರೀಯ ಮಾದರಿಯ ಮಾರುಕಟ್ಟೆ ನಿರ್ಮಾಣಕ್ಕೆ ಶಕ್ತಿಮೀರಿ ಪ್ರಯತ್ನಿಸುತ್ತೇನೆ. ಮಂಗಳೂರಿನಲ್ಲಿ ನಲ್ವತ್ತು ವರುಷಗಳ ಕಾಲ ಕಾಂಗ್ರೆಸ್ ಸಂಸದರಿದ್ದರು. ನಂತರ ಬಿಜೆಪಿಯವರು ಸುಳ್ಳು ಹೇಳಿ ಜಯ ಗಳಿಸಿದರೆ ಹೊರತು ಕ್ಷೇತ್ರದ ಅಭಿವೃದ್ಧಿಯನ್ನು ಮಾಡಿಲ್ಲ. ಈಗಾಗಲೇ ನಾನು ಬಹುತೇಕ ಮತದಾರರನ್ನ ತಲುಪಿದ್ದೇನೆ. ಮುಂದಿನ ಹದಿನೈದು ದಿವಸಗಳಲ್ಲಿ ಎಲ್ಲ ಮತದಾರರನ್ನು ಮುಟ್ಟುವ ಪ್ರಯತ್ನ ನಡೆಸುತ್ತೇನೆ. ಮತದಾರ ಪ್ರಭುಗಳು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೇ ನಮಗೆ ಸ್ಟಾರ್‌‌ಗಳೇ ಹೊರತು ಮಂಗಳೂರಿಗೆ ಸ್ಟಾರ್ ಪ್ರಚಾರಕರ ಅಗತ್ಯ ಇಲ್ಲ ಎಂದರು.

ರಾಜ್ಯದ APL-BPL ಕುಟುಂಬಗಳಿಗೆ ಗುಡ್ ನ್ಯೂಸ್ : ಇನ್ಮುಂದೆ ಆರೋಗ್ಯ ಕಾರ್ಡ್ನಡಿ ದೇಶಾದ್ಯಂತ ಚಿಕಿತ್ಸೆಗೆ ಅವಕಾಶ

Posted by Vidyamaana on 2023-12-07 08:41:00 |

Share: | | | | |


ರಾಜ್ಯದ APL-BPL ಕುಟುಂಬಗಳಿಗೆ ಗುಡ್ ನ್ಯೂಸ್ : ಇನ್ಮುಂದೆ ಆರೋಗ್ಯ ಕಾರ್ಡ್ನಡಿ ದೇಶಾದ್ಯಂತ ಚಿಕಿತ್ಸೆಗೆ ಅವಕಾಶ

ಬೆಳಗಾವಿ : ರಾಜ್ಯ ಸರ್ಕಾರವು ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಆಯುಷ್ಮಾನ್‌ ಭಾರತ್‌ ಪ್ರಧಾನಮಂತ್ರಿ ಜನಾರೋಗ್ಯ-ಮುಖ್ಯಮಂತ್ರಿ ಆರೋಗ್ಯ ಕರ್ನಾಟಕ ಯೋಜನೆಯಡಿ ದೇಶಾದ್ಯಂತ ಚಿಕಿತ್ಸೆ ಪಡೆಯಬಹುದು.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಯುಷ್ಮಾನ್ ಭಾರತ್ - ಆರೋಗ್ಯ ಕರ್ನಾಟಕ ಯೋಜನೆಯ ಪರಿಷ್ಕೃತ ಕಾರ್ಡ್ ವಿತರಣೆಗೆ ಚಾಲನೆ ನೀಡಿದ್ದಾರೆ.ಆಯುಷ್ಮಾನ್ ಭಾರತ್- ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್‌ಗಳಿಗೆ ಹೊಸ ರೂಪ ನೀಡಲಾಗಿದೆ. ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನಾರೋಗ್ಯ – ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಹೆಸರಲ್ಲಿ ಇನ್ಮುಂದೆ ಹೆಲ್ತ್ ಕಾರ್ಡ್‌ಗಳು ರಾಜ್ಯದ ಜನಸಾಮಾನ್ಯರಿಗೆ ತಲುಪಲಿವೆ.‌


ರಾಜ್ಯದ ಬಿಪಿಎಲ್ ಕಾರ್ಡುದಾರರು ₹5 ಲಕ್ಷ ಹಾಗೂ APL ಕಾರ್ಡುದಾರರಿಗೆ ಗರಿಷ್ಠ ₹1.50 ಲಕ್ಷ ಮೌಲ್ಯದ ಚಿಕಿತ್ಸಾ ವೆಚ್ಚವನ್ನ ಸರ್ಕಾರ ಭರಿಸಲಿದೆ. ಯೋಜನೆಗೆ ಕೇಂದ್ರದಿಂದ ಶೇ. 34ರಷ್ಟು ಅನುದಾನ ದೊರೆಯಲಿದ್ದು, ರಾಜ್ಯ ಸರ್ಕಾರ ಶೇ.66ರಷ್ಟು ಅನುದಾನವನ್ನ ಒದಗಿಸಲಿದೆ. ರಾಜ್ಯದ ಆಸ್ಪತ್ರೆಗಳ ಜೊತೆಗೆ ದೇಶದ ಇತರ ರಾಜ್ಯಗಳ ಆಸ್ಪತ್ರೆಗಳಲ್ಲೂ ಹೆಚ್ಚಿನ ಚಿಕಿತ್ಸೆ ಪಡೆಯಲು ಅವಕಾಶ ಕಲ್ಪಿಸಲಾಗಿದೆ.

Recent News


Leave a Comment: